Tag: ಸಿ.ಪಿ.ಯೋಗೇಶ್ವರ್

  • ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಜಮೀರ್‌? – ಪ್ರಚಾರದ ವೇಳೆ ಮಹಿಳೆಗೆ 500 ರೂ. ಹಣಕೊಟ್ಟ ಸಚಿವ

    ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಜಮೀರ್‌? – ಪ್ರಚಾರದ ವೇಳೆ ಮಹಿಳೆಗೆ 500 ರೂ. ಹಣಕೊಟ್ಟ ಸಚಿವ

    – ಗನ್‌ಮ್ಯಾನ್‌ ಜೇಬಿನಿಂದ ಹಣ ತೆಗೆದು ಮಹಿಳೆಗೆ ಕೊಟ್ಟ ಜಮೀರ್‌

    ರಾಮನಗರ: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರದಲ್ಲಿ ಸಚಿವ ಜಮೀರ್‌ ಅಹ್ಮದ್‌ (Zameer Ahmed) ಅವರು ನೀತಿ ಸಂಹಿತೆ ಉಲ್ಲಂಘಿಸಿದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ. ಪ್ರಚಾರದ ವೇಳೆ ಮಹಿಳೆಯೊಬ್ಬರಿಗೆ ಸಚಿವರು 500 ರೂ. ದುಡ್ಡು ಕೊಟ್ಟಿರುವ ವೀಡಿಯೋ ವೈರಲ್‌ ಆಗಿದೆ.

    ನಿನ್ನೆ ರಾತ್ರಿ ನಗರದ ಯಾರಬ್ ನಗರದಲ್ಲಿ ಸಿ.ಪಿ.ಯೋಗೇಶ್ವರ್‌ ಪರ ಜಮೀರ್‌ ಪ್ರಚಾರ ನಡೆಸಿದ್ದರು. ಪ್ರಚಾರದ ವೇಳೆ ಮಹಿಳೆಗೆ 500 ಮುಖಬೆಲೆಯ ನೋಟನ್ನು ಜಮೀರ್ ಕೊಟ್ಟಿದ್ದಾರೆ. ಗನ್ ಮ್ಯಾನ್ ಬಳಿಯಿಂದ ಹಣ ಪಡೆದು ಪ್ರಚಾರ ವಾಹನದ ಮೇಲಿಂದಲೇ ಮಹಿಳೆಗೆ ಹಣ ನೀಡಿದ್ದಾರೆ. ಈ ದೃಶ್ಯದ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಇದನ್ನೂ ಓದಿ: ಮುಡಾದಲ್ಲಿ ಸಿಎಂ ಪ್ರಭಾವಕ್ಕೆ ಮತ್ತೊಂದು ಸಾಕ್ಷಿ – ಸಿಎಂ ಪತ್ನಿ ಕ್ರಯಪತ್ರದ ಮುದ್ರಾಂಕ ಶುಲ್ಕ ತಹಶೀಲ್ದಾರ್‌ರಿಂದಲೇ ಪಾವತಿ

    ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಪರ ಸಚಿವ ಜಮೀರ್, ರಹೀಂ ಖಾನ್, ಡಿ.ಕೆ.ಸುರೇಶ್ ಪ್ರಚಾರ ನಡೆಸಿದ್ದರು.

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾಂಗ್ರೆಸ್‌ ಸಚಿವರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಈ ಉಪಚುನಾವಣೆ ಬಿಜೆಪಿ ಬಸವರಾಜ ಬೊಮ್ಮಾಯಿ ವರ್ಸಸ್ ಕಾಂಗ್ರೆಸ್ ಸರ್ಕಾರ: ಬೊಮ್ಮಾಯಿ

  • ಡಿಕೆಶಿಗೆ ಸಿಎಂ ಆಗುವ ಅವಕಾಶ ಇದೆ, ಯೋಗೇಶ್ಬರ್ ಗೆಲ್ಲಿಸಿದ್ರೆ ಶಕ್ತಿ ಬರುತ್ತೆ: ಎಂಎಲ್‌ಸಿ ಪುಟ್ಟಣ್ಣ

    ಡಿಕೆಶಿಗೆ ಸಿಎಂ ಆಗುವ ಅವಕಾಶ ಇದೆ, ಯೋಗೇಶ್ಬರ್ ಗೆಲ್ಲಿಸಿದ್ರೆ ಶಕ್ತಿ ಬರುತ್ತೆ: ಎಂಎಲ್‌ಸಿ ಪುಟ್ಟಣ್ಣ

    ರಾಮನರಗ: ಸಿದ್ದರಾಮಯ್ಯ ಅವರ ಬಳಿಕ ಡಿ.ಕೆ ಶಿವಕುಮಾರ್‌ (DK Shivakumar) ಅವರಿಗೆ ಸಿಎಂ ಆಗುವ ಎಲ್ಲಾ ಅವಕಾಶ ಇದೆ. ಸಿ.ಪಿ ಯೋಗೇಶ್ವರ್‌ ಅವರನ್ನ ಗೆಲ್ಲಿಸಿದ್ರೆ ಡಿ.ಕೆ ಶಿವಕುಮಾರ್‌ಗೆ ಶಕ್ತಿ ಬರುತ್ತೆ ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ (MLC Puttanna) ಹೇಳಿದ್ದಾರೆ.

    ಚನ್ನಪಟ್ಟಣ ಉಪಚುನಾವಣೆ (Channapatna By Election) ಹಿನ್ನೆಲೆಯಲ್ಲಿ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮನ್ವಯ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಲಾಂಛನ ನಾಗರಹಾವು ಅಂದಿದ್ದು ಯಡಿಯೂರಪ್ಪ: ಬಾಲಕೃಷ್ಣ

    ಸಿದ್ದರಾಮಯ್ಯ (Siddaramaiah) ಬಳಿಕ ಸಿಎಂ ಆಗುವ ಎಲ್ಲಾ ಅವಕಾಶ ಡಿಕೆಶಿಗೆ ಇದೆ. ಯೋಗೇಶ್ವರ್ ಗೆಲ್ಲಿಸಿದ್ರೆ ಶಿವಕುಮಾರ್‌ಗೆ ಶಕ್ತಿ ಬರುತ್ತೆ. ಡಿ.ಕೆ ಸುರೇಶ್ ಸೋಲಿಸಲು ಕುಮಾರಸ್ವಾಮಿ ಬಾವನನ್ನ ತಂದು ನಿಲ್ಲಿಸಿದ್ರು. ಈಗ ಈ ಕ್ಷೇತ್ರವನ್ನ ಯೋಗೇಶ್ವರ್‌ಗೆ ಬಿಟ್ಟುಕೊಡಬಹುದಿತ್ತು. ಆದರೆ ಅವರ ಮನೆಯವರಿಗೆ ಬಿಟ್ಟು ಬೇರೆ ಯಾರಿಗೂ ಕುಮಾರಸ್ವಾಮಿ ಟಿಕೆಟ್ ಕೊಡಲ್ಲ. ಕುಮಾರಸ್ವಾಮಿ ಟೂರಿಂಗ್ ಟಾಕೀಸ್, ಎಲ್ಲೂ ನಿಲ್ಲಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಕ್ಷೇತ್ರದ 5,000ಕ್ಕೂ ಅಧಿಕ ಹೆಣ್ಣುಮಕ್ಕಳಿಗೆ ಕೆಲಸ ಕೊಟ್ಟಿದ್ದೇವೆ, ಇದು ಪರ್ಮನೆಂಟ್ ಗ್ಯಾರಂಟಿ: ಭರತ್ ಬೊಮ್ಮಾಯಿ

    ಡಿ.ಕೆ ಸುರೇಶ್ ಅವರ ಸೋಲನ್ನು ಮರೆಯೋಕೆ ಸಿಪಿವೈ ಗೆಲ್ಲಿಸಬೇಕು. ಅದಕ್ಕಾಗಿ ಎಲ್ಲರನ್ನೂ ಮನವೊಲಿಸಿ ಯೋಗೇಶ್ವರ್ ಪರ ಕೆಲಸ ಮಾಡಬೇಕು. ಯೋಗೇಶ್ವರ್ ಕ್ಷೇತ್ರಕ್ಕೆ ನೀರಿನ ಸೌಲಭ್ಯ ಕಲ್ಪಿಸಿಕೊಟ್ಟಿದ್ದಾರೆ. ಡಿಕೆಶಿ ಕ್ಷೇತ್ರದ ಜನರಿಗೆ ಟ್ರಾನ್ಸ್ಫಾರ್ಮರ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಎರಡು ಬಾರಿ ಗೆದ್ದು ಏನು ಕೊಟ್ಟಿದ್ದಾರೆ? ಕಾಂಗ್ರೆಸ್‌ ಸರ್ಕಾರ ಇನ್ನೂ 3 ವರ್ಷ ಇರುತ್ತೆ. ಸಿಪಿವೈ ಗೆದ್ದರೆ ಹೆಚ್ಚಿನ ಅನುದಾನ ತಂದು ಕ್ಷೇತ್ರ ಅಭಿವೃದ್ಧಿ ಮಾಡ್ತಾರೆ. ಸ್ವಾಭಿಮಾನ ಉಳಿಸಿಕೊಳ್ಳಬೇಕು ಅಂದ್ರೆ ಯೋಗೇಶ್ವರ್ ಗೆಲ್ಲಿಸಬೇಕು ಎಂದು ಕರೆ ಕೊಟ್ಟಿದ್ದಾರೆ.

    ಬಳಿಕ ಶಾಸಕ ಹೆಚ್.ಸಿ ಬಾಲಕೃಷ್ಣ ಮಾತನಾಡಿ, ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಅವರ ಲಾಂಛನ ನಾಗರಹಾವು. ಇದನ್ನ ಹೇಳಿದ್ದು ಇದೇ ಯಡಿಯೂರಪ್ಪನವರು. ಈಗ ಕಚ್ಚಿಸಿಕೊಳ್ಳೋಕೆ ಜೊತೆಗೆ ಕರೆದುಕೊಂಡಿದ್ದಾರೆ. ಕುಮಾರಸ್ವಾಮಿ ಯಾರನ್ನೂ ಬೆಳೆಸುವ ಕೆಲಸ ಮಾಡಿಲ್ಲ. ಎಲ್ಲಾ ಕಡೆ ಅವರ ಕುಟುಂಬದರನ್ನ ಪ್ರತಿಷ್ಠಾಪನೆ ಮಾಡ್ತಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ ಸಾಗಿಸಲು ಅನುಮತಿ

    ಕುಮಾರಸ್ವಾಮಿಗೆ ನಾವ್ಯಾರೂ ಒಕ್ಕಲಿಗರ ರೀತಿ ಕಾಣುವುದಿಲ್ವಾ? ನಾವು ಅಣ್ಣ-ತಮ್ಮಂದಿರು, ಈ ಜಿಲ್ಲೆಯ ಮಕ್ಕಳು ನಾವು. ಜಗಳ ಆಡಿದ್ದೀವಿ, ಆದ್ರೆ ದ್ವೇಷ ಮಾಡಿಲ್ಲ. ಸಿಪಿವೈಗೆ ಅನ್ಯಾಯ ಆಗೋದು ಗೊತ್ತಾದಾಗ ಅವರನ್ನು ಕರೆತಂದು ಟಿಕೆಟ್ ಕೊಟ್ಟಿದ್ದೀವಿ. ಅವರು ಟೂರಿಂಗ್ ಟಾಕೀಸ್. ಮಂಡ್ಯಕ್ಕೆ ಹೋದ್ರು, ರಾಮನಗರಕ್ಕೂ ಹೋದ್ರು ಈಗ ಇಲ್ಲಿಗೆ ಬಂದವ್ರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: 2025ರ ಐಪಿಎಲ್‌ನಲ್ಲೂ ಮಹಿ ಆಡೋದು ಫಿಕ್ಸ್‌ – ಅ.31ಕ್ಕೆ ರಿಟೇನ್‌ ಆಟಗಾರರ ಭವಿಷ್ಯ!

    ಚನ್ನಪಟ್ಟಣದವರಿಗೆ ಸ್ವಾಭಿಮಾನ ಇದ್ದರೆ ಯೋಗೇಶ್ವರ್‌ ಗೆಲ್ಲಿಸಿ:
    ರಾಮನಗರದಲ್ಲಿ ಸಾಮಾನ್ಯ ಕಾರ್ಯಕರ್ತನನ್ನ ತಂದು ಶಾಸಕನನ್ನಾಗಿ ಸುರೇಶ್ ಮಾಡಿದ್ರು. ಚನ್ನಪಟ್ಟಣದವರಿಗೆ ಸ್ವಾಭಿಮಾನ ಇಲ್ವಾ? ತಾಲೂಕಿಗೆ ನೀರುಕೊಟ್ಟ ಯೋಗೇಶ್ವರ್‌ನ ಸೋಲಿಸಿದ್ರಿ. ನೀರು ಕೊಟ್ಟ ಯೋಗೇಶ್ವರ್‌ಗೆ ವಿಷ ಹಾಕಿದ್ರಿ. ನಿಮಗೆ ದೇವರು ಒಳ್ಳೆಯದು ಮಾಡಲ್ಲ. ಈಗ ಸ್ವಾಭಿಮಾನ ಬೆಳೆಸಿಕೊಳ್ಳಿ ಯೋಗೇಶ್ವರ್ ಗೆಲ್ಲಿಸಿ ಎಂದು ಶಾಸಕ ಮಾರ್ಮಿಕವಾಗಿ ನುಡಿದಿದ್ದರೆ.

  • ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಲಾಂಛನ ನಾಗರಹಾವು ಅಂದಿದ್ದು ಯಡಿಯೂರಪ್ಪ: ಬಾಲಕೃಷ್ಣ

    ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಲಾಂಛನ ನಾಗರಹಾವು ಅಂದಿದ್ದು ಯಡಿಯೂರಪ್ಪ: ಬಾಲಕೃಷ್ಣ

    – ಚನ್ನಪಟ್ಟಣ ಜನಕ್ಕೆ ಸ್ವಾಭಿಮಾನ ಇದ್ದರೆ ಯೋಗೇಶ್ವರ್‌ ಗೆಲ್ಲಿಸಿ ಎಂದ ಶಾಸಕ

    ರಾಮನಗರ: ಕುಮಾರಸ್ವಾಮಿ (HD Kumaraswamy) ಮನೆದೇವ್ರು ದುರ್ಯೋಧನ, ಅವರ ಲಾಂಛನ ನಾಗರಹಾವು. ಇದನ್ನ ಹೇಳಿದ್ದು ಇದೇ ಯಡಿಯೂರಪ್ಪನವರು. ಈಗ ಕಚ್ಚಿಸಿಕೊಳ್ಳೋಕೆ ಜೊತೆಗೆ ಕರೆದುಕೊಂಡಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಹೆಚ್.ಸಿ ಬಾಲಕೃಷ್ಣ (HC Balakrishna) ಲೇವಡಿ ಮಾಡಿದ್ದಾರೆ.

    ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ (CP Yogeshwar) ಪರ ಮಾಜಿ ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಸಮನ್ವಯ ಸಭೆ ನಡೆಸಿದರು. ತಾಲೂಕಿನ ಕೋಡಂಬಳ್ಳಿ ಜಿ.ಪಂ ವ್ಯಾಪ್ತಿಯ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಅಭ್ಯರ್ಥಿ ಯೋಗೇಶ್ವರ್‌, ಶಾಸಕ ಹೆಚ್.ಸಿ ಬಾಲಕೃಷ್ಣ, ಎಂಎಲ್‌ಸಿಗಳಾದ ಎಸ್.ರವಿ, ಪುಟ್ಟಣ್ಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್ ಉಪಸ್ಥಿತರಿದ್ದರು. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಲ್ಲ – ಮಹಾ ವಿಕಾಸ್‌ ಅಘಾಡಿ ಒಕ್ಕೂಟಕ್ಕೆ ಬೆಂಬಲ

    ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, ಕುಮಾರಸ್ವಾಮಿ ಮನೆದೇವ್ರು ದುರ್ಯೋಧನ, ಅವರ ಲಾಂಛನ ನಾಗರಹಾವು. ಇದನ್ನ ಹೇಳಿದ್ದು ಇದೇ ಯಡಿಯೂರಪ್ಪನವರು. ಈಗ ಕಚ್ಚಿಸಿಕೊಳ್ಳೋಕೆ ಜೊತೆಗೆ ಕರೆದುಕೊಂಡಿದ್ದಾರೆ. ಕುಮಾರಸ್ವಾಮಿ ಯಾರನ್ನೂ ಬೆಳೆಸುವ ಕೆಲಸ ಮಾಡಿಲ್ಲ. ಎಲ್ಲಾ ಕಡೆ ಅವರ ಕುಟುಂಬದರನ್ನ ಪ್ರತಿಷ್ಠಾಪನೆ ಮಾಡ್ತಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ವಿಜಯಪುರದ ಸೈಬರ್ ಕ್ರೈಂ ವಂಚನೆ ಪ್ರಕರಣ ಉಲ್ಲೇಖಿಸಿ ಮನ್ ಕಿ ಬಾತ್‌ನಲ್ಲಿ ಮೋದಿ ಜಾಗೃತಿ

    ಕುಮಾರಸ್ವಾಮಿಗೆ ನಾವ್ಯಾರೂ ಒಕ್ಕಲಿಗರ ರೀತಿ ಕಾಣುವುದಿಲ್ವಾ? ನಾವು ಅಣ್ಣ-ತಮ್ಮಂದಿರು, ಈ ಜಿಲ್ಲೆಯ ಮಕ್ಕಳು ನಾವು. ಜಗಳ ಆಡಿದ್ದೀವಿ, ಆದ್ರೆ ದ್ವೇಷ ಮಾಡಿಲ್ಲ. ಸಿಪಿವೈಗೆ ಅನ್ಯಾಯ ಆಗೋದು ಗೊತ್ತಾದಾಗ ಅವರನ್ನು ಕರೆತಂದು ಟಿಕೆಟ್ ಕೊಟ್ಟಿದ್ದೀವಿ. ಅವರು ಟೂರಿಂಗ್ ಟಾಕೀಸ್. ಮಂಡ್ಯಕ್ಕೆ ಹೋದ್ರು, ರಾಮನಗರಕ್ಕೂ ಹೋದ್ರು ಈಗ ಇಲ್ಲಿಗೆ ಬಂದವ್ರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳ ಕ್ಯಾಬಿನ್ ಬ್ಯಾಗ್‌ನಲ್ಲಿ `ಇರುಮುಡಿ’ ಸಾಗಿಸಲು ಅನುಮತಿ

    ಚನ್ನಪಟ್ಟಣದವರಿಗೆ ಸ್ವಾಭಿಮಾನ ಇದ್ದರೆ ಯೋಗೇಶ್ವರ್‌ ಗೆಲ್ಲಿಸಿ:
    ರಾಮನಗರದಲ್ಲಿ ಸಾಮಾನ್ಯ ಕಾರ್ಯಕರ್ತನನ್ನ ತಂದು ಶಾಸಕನನ್ನಾಗಿ ಸುರೇಶ್ ಮಾಡಿದ್ರು. ಚನ್ನಪಟ್ಟಣದವರಿಗೆ ಸ್ವಾಭಿಮಾನ ಇಲ್ವಾ? ತಾಲೂಕಿಗೆ ನೀರುಕೊಟ್ಟ ಯೋಗೇಶ್ವರ್‌ನ ಸೋಲಿಸಿದ್ರಿ. ನೀರು ಕೊಟ್ಟ ಯೋಗೇಶ್ವರ್‌ಗೆ ವಿಷ ಹಾಕಿದ್ರಿ. ನಿಮಗೆ ದೇವರು ಒಳ್ಳೆಯದು ಮಾಡಲ್ಲ. ಈಗ ಸ್ವಾಭಿಮಾನ ಬೆಳೆಸಿಕೊಳ್ಳಿ ಯೋಗೇಶ್ವರ್ ಗೆಲ್ಲಿಸಿ ಎಂದು ಶಾಸಕ ಮಾರ್ಮಿಕವಾಗಿ ನುಡಿದಿದ್ದರೆ.

  • ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ 70 ಕೋಟಿ ಆಸ್ತಿ ಒಡೆಯ

    ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ 70 ಕೋಟಿ ಆಸ್ತಿ ಒಡೆಯ

    – ಸಿಪಿವೈ ಮೇಲೆ 10 ಕ್ರಿಮಿನಲ್‌ ಕೇಸ್‌

    ರಾಮನಗರ: ಚನ್ನಪಟ್ಟಣ ಉಪಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಸಿಪಿವೈ ಬರೋಬ್ಬರಿ 70 ಕೋಟಿ ಮೌಲ್ಯದ ಆಸ್ತಿ ಒಡೆಯ.

    ಹೆಸರಿನಲ್ಲಿ ಒಟ್ಟು 27,94,06,412 ಮೌಲ್ಯದ ಸ್ಥಿರಾಸ್ತಿ ಹಾಗೂ 7,25,20,470 ಮೌಲ್ಯದ ಚರಾಸ್ತಿಯನ್ನು ಸಿಪಿವೈ ಹೊಂದಿದ್ದಾರೆ. ಪತ್ನಿ ಶೀಲಾ ಹೆಸರಲ್ಲಿ 25,35,37,740 ಮೌಲ್ಯದ ಸ್ಥಿರಾಸ್ತಿ, 7,10,80,556 ರೂ. ಮೌಲ್ಯದ ಚರಾಸ್ತಿ ಇದೆ.

    ಯೋಗೇಶ್ವರ್ ಹೆಸರಲ್ಲಿ 22,02,47,157 ರೂ. ಮೌಲ್ಯದ ಮತ್ತು ಪತ್ನಿ ಶೀಲಾ ಹೆಸರಿನಲ್ಲಿ 2,14,52,740 ರೂ. ಮೌಲ್ಯದ ಕೃಷಿ ಭೂಮಿ ಇದೆ. ಪತ್ನಿ ಹೆಸರಿನಲ್ಲಿ 6.65 ಕೋಟಿ ಮೌಲ್ಯದ ಕೃಷಿಯೇತರ ಭೂಮಿ ಇದೆ. ಸಿ.ಪಿ.ಯೋಗೇಶ್ವರ್ ಹೆಸರಿನಲ್ಲಿ 2,37,62,000 ಕೋಟಿ ಮೌಲ್ಯದ ಮತ್ತು ಶೀಲಾ ಹೆಸರಿನಲ್ಲಿ 15.45 ಕೋಟಿ ಮೌಲ್ಯದ ಮನೆಗಳಿವೆ.

    ‘ಸೈನಿಕ’ 25,86,31,284 ಸಾಲ ಮಾಡಿದ್ದಾರೆ. ಪತ್ನಿ ಹೆಸರಲ್ಲಿ 3,41,42,184 ರೂ. ಸಾಲವಿದೆ. 250 ಗ್ರಾಂ ಚಿನ್ನಾಭರಣವನ್ನು ಯೋಗೇಶ್ವರ್​ ಹೊಂದಿದ್ದಾರೆ. ಅವರ ಪತ್ನಿ ಬಳಿ 1 ಕೆಜಿ 500 ಗ್ರಾಂ ಚಿನ್ನಾಭರಣ, 20 ಕೆಜಿ ಬೆಳ್ಳಿ ಇದೆ.

    ಸಾರ್ವಜನಿಕರಿಂದ 1 ಕೆಜಿ ಚಿನ್ನ, 50 ಕೆಜಿ ಬೆಳ್ಳಿಯನ್ನ ಶೀಲಾ ಅವರು ಉಡುಗೊರೆಯಾಗಿ ಸ್ವೀಕರಿಸಿದ್ದಾರೆ. ಯೋಗೇಶ್ವರ್ ಮೇಲೆ 10 ಕ್ರಿಮಿನಲ್‌ ಕೇಸ್ ಇದೆ. ಯೋಗೇಶ್ವರ್ ಹೆಸರಲ್ಲಿ ಒಂದು ಮರ್ಸಿಡಿಸ್ ಬೆಂಜ್ ಹಾಗೂ ಬಿಎಂಡಬ್ಲೂ ಕಾರು ಇದೆ.

  • ಚನ್ನಪಟ್ಟಣಕ್ಕೆ ಯೋಗೇಶ್ವರ್‌, ಸಂಡೂರಿಗೆ ಅನ್ನಪೂರ್ಣ – ಉಪಚುನಾವಣೆಗೆ ‘ಕೈ’ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

    ಚನ್ನಪಟ್ಟಣಕ್ಕೆ ಯೋಗೇಶ್ವರ್‌, ಸಂಡೂರಿಗೆ ಅನ್ನಪೂರ್ಣ – ಉಪಚುನಾವಣೆಗೆ ‘ಕೈ’ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

    – ಶಿಗ್ಗಾಂವಿ ಕ್ಷೇತ್ರ ಬಾಕಿ ಉಳಿಸಿಕೊಂಡ ಕಾಂಗ್ರೆಸ್‌ ಹೈಕಮಾಂಡ್‌

    ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ (Congress) ಅಭ್ಯರ್ಥಿಗಳನ್ನು ಘೋಷಿಸಿದೆ.

    ಚನ್ನಪಟ್ಟಣಕ್ಕೆ (Channapatna Bypoll) ಸಿ.ಪಿ.ಯೋಗೇಶ್ವರ್‌ (C.P.Yogeshwar) ಹಾಗೂ ಸಂಡೂರಿಗೆ ಈ.ಅನ್ನಪೂರ್ಣ ಅವರನ್ನು ಹುರಿಯಾಳುಗಳಾಗಿ ಕಾಂಗ್ರೆಸ್‌ ಅಖೈರುಗೊಳಿಸಿದೆ. ಆದರೆ, ಹೈಕಮಾಂಡ್‌ ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದೇ ಬಾಕಿ ಉಳಿಸಿಕೊಂಡಿದೆ. ಇದನ್ನೂ ಓದಿ: ಯೋಗೇಶ್ವರ್‌ರನ್ನ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದೌರ್ಬಲ್ಯ ಒಪ್ಪಿಕೊಂಡ ಡಿಕೆಶಿ: ಸಿ.ಟಿ ರವಿ ಟಾಂಗ್

    ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದ ಸಿ.ಪಿ.ಯೋಗೇಶ್ವರ್‌ಗೆ ನಿರಾಸೆಯಾಯಿತು. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ ಅವರು ಕಾಂಗ್ರೆಸ್‌ ಸೇರ್ಪಡೆಯಾದರು.

    ಕಾಂಗ್ರೆಸ್‌ ಸೇರ್ಪಡೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಿಪಿವೈ ಆಶೀರ್ವಾದ ಪಡೆದುಕೊಂಡರು. ಬಳಿಕ ಕಾಂಗ್ರೆಸ್‌ ಕಚೇರಿಯಲ್ಲಿ ಪಕ್ಷ ಸೇರಿದರು. ಸಿಪಿವೈಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ ಬರಮಾಡಿಕೊಂಡರು. ಇದನ್ನೂ ಓದಿ: ಡಿಕೆಶಿ ನೇತೃತ್ವದಲ್ಲಿ ರಾಜಕೀಯ ಜೀವನ ಆರಂಭಿಸಿದ್ದೆ, ಮರಳಿ ಮನೆಗೆ ಬಂದಿದ್ದೇನೆ: ಸಿಪಿ ಯೋಗೇಶ್ವರ್‌

  • ಚುನಾವಣೆಗೆ ಮುಂಚೆಯೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ: ಆರಗ ಜ್ಞಾನೇಂದ್ರ

    ಚುನಾವಣೆಗೆ ಮುಂಚೆಯೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ: ಆರಗ ಜ್ಞಾನೇಂದ್ರ

    ಶಿವಮೊಗ್ಗ: ಚುನಾವಣೆಗೆ ಮುಂಚಿತವಾಗಿಯೇ ಕಾಂಗ್ರೆಸ್ (Congress) ಸೋಲನ್ನು ಒಪ್ಪಿಕೊಂಡಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ.

    ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಸಿ.ಪಿ.ಯೋಗೇಶ್ವರ್ (C.P Yogeshwar) ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ, ಒಂದೂಕಾಲ್ ಶತಮಾನ ಇರುವ ಪಕ್ಷಕ್ಕೆ ಚನ್ನಪಟ್ಟಣದಲ್ಲಿ ನಿಲ್ಲಿಸಲು ಒಬ್ಬ ಅಭ್ಯರ್ಥಿ ಇಲ್ಲ. ಬೇರೆ ಪಕ್ಷದಿಂದ ಅಭ್ಯರ್ಥಿ ತಂದು ನಿಲ್ಲಿಸುವ ದುರ್ಗತಿ ಕಾಂಗ್ರೆಸ್‍ಗೆ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್ ಪಕ್ಷಕ್ಕೆ ಈ ಸ್ಥಿತಿ ಬಂದಿರೋದು ಶೋಚನೀಯ ವಿಚಾರವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಇದೊಂದು ಅವಮಾನ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್ ಕಳೆದುಕೊಂಡಿದೆ. ಮೂರು ಕ್ಷೇತ್ರದಲ್ಲಿ ಎನ್‍ಡಿಎ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಮತ್ತು ಡಿ.ಕೆ ಸುರೇಶ್ ಅವರ ಸಮ್ಮುಖದಲ್ಲಿ ಇಂದು (ಬುಧವಾರ) ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ವಿಚಾರವಾಗಿ ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

  • ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ: ಆರ್.ಅಶೋಕ್

    ಯೋಗೇಶ್ವರ್ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ: ಆರ್.ಅಶೋಕ್

    -ಸಿಪಿವೈಯನ್ನು ತುಳಿಯಲು ಡಿಕೆಶಿ ಪ್ಲ್ಯಾನ್‌ ಮಾಡಿದ್ದಾರೆ ಎಂದ ವಿಪಕ್ಷ ನಾಯಕ

    ಬೆಂಗಳೂರು: ಸಿ.ಪಿ.ಯೋಗೇಶ್ವರ್ (CP Yogeshwar) ಕಾಂಗ್ರೆಸ್ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್ ದೊರೆಯುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ (JDS) ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ.ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್ ಸಿಗಲು ಎಲ್ಲ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಈಗ ಬಿಜೆಪಿ-ಜೆಡಿಎಸ್ ಮೈತ್ರಿ ಇದೆ. ಕೋಲಾರದಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಈ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಅವಕಾಶ ನೀಡಲಾಗಿದೆ. ಮಂಡ್ಯದಲ್ಲಿ ಈ ಹಿಂದೆ ಸುಮಲತಾ ಸ್ಪರ್ಧಿಸಿದ್ದರು. ಬಳಿಕ ಅಲ್ಲಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಗೆದ್ದರು. ಇಲ್ಲಿ ಬಿಜೆಪಿ (BJP), ಜೆಡಿಎಸ್ ಎಂಬುದಕ್ಕಿಂತ ಹೆಚ್ಚಾಗಿ ಎನ್‌ಡಿಎ ಗೆಲ್ಲಬೇಕು ಎಂಬ ಉದ್ದೇಶವಿತ್ತು ಎಂದು ತಿಳಿಸಿದರು.ಇದನ್ನೂ ಓದಿ: ಪ್ರೀತಿಸಿ ಮದುವೆಯಾಗೋಕೆ ನನಗೆ ಸಮಯವಿಲ್ಲ: ಸುನೈನಾ

    ಈಗ ಇವರೆಲ್ಲ ಮೈತ್ರಿ, ಒಗ್ಗಟ್ಟನ್ನು ಬದಿಗೆ ಸರಿಸಿ ಕಾಂಗ್ರೆಸ್‌ಗೆ (Congress) ಸೇರಿರುವುದರಿಂದ ಅವರ ರಾಜಕೀಯ ಭವಿಷ್ಯ ಹಾಳಾಗಿದೆ. ಎನ್‌ಡಿಎದಲ್ಲಿ ಯೋಗೇಶ್ವರ್ ಅವರಿಗೆ ಹಿರಿತನವಿತ್ತು. ಈಗ ಕಾಂಗ್ರೆಸ್‌ಗೆ ಸೇರಿ ಕೊನೆಯ ಸಾಲಿನಲ್ಲಿ ನಿಂತಿದ್ದಾರೆ. ಅವರು ಕಾಂಗ್ರೆಸ್‌ಗೆ ಹೋದ ಕೂಡಲೇ ಮಣೆ ಹಾಕಿ ಕೂರಿಸುವುದಿಲ್ಲ. ಡಿ.ಕೆ ಶಿವಕುಮಾರ್ (DK Shivakumar) ಅವರು ಯೋಗೇಶ್ವರ್‌ರನ್ನು ಕರೆಸಿಕೊಂಡು ಕೆಡಿಸಿದ್ದಾರೆ. ಇನ್ನು ಹೇಗೆ ತುಳಿಯಬೇಕೆಂದು ಡಿ.ಕೆ.ಶಿವಕುಮಾರ್ ಅವರೇ ಯೋಜನೆ ರೂಪಿಸಿರುತ್ತಾರೆ. ಇವರು ಮುಂದೆ ಬರಲು ಕಾಂಗ್ರೆಸ್‌ನಲ್ಲಿ ಯಾರೂ ಬಿಡುವುದಿಲ್ಲ ಎಂದರು.

    ಇದರಲ್ಲಿ ಯಾವುದೇ ತಂತ್ರಗಾರಿಕೆ ಇಲ್ಲ. ಇದು ಜೆಡಿಎಸ್‌ಗೆ ಸೇರಿದ್ದ ಸೀಟು. ಅಂತಿಮ ತೀರ್ಮಾನ ತೆಗೆದುಕೊಳ್ಳುವುದು ಜೆಡಿಎಸ್‌ಗೆ ಬಿಟ್ಟಿದ್ದು ಎಂದು ಬಿಜೆಪಿಯ ಹಿರಿಯ ನಾಯಕರು ಸೂಚನೆ ನೀಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು ನನ್ನೊಡನೆ ಈ ಬಗ್ಗೆ ಮಾತಾಡಿದ್ದಾರೆ. ನಿನ್ನೆಯೇ ಈ ಬಗ್ಗೆ ನಮಗೆ ಸುಳಿವು ಸಿಕ್ಕಿತ್ತು. ಅವರನ್ನು ಇಲ್ಲಿಯೇ ಉಳಿಸಿಕೊಳ್ಳಬೇಕೆಂದು ಎಲ್ಲ ಪ್ರಯತ್ನ ಮಾಡಲಾಗಿತ್ತು. ಆದರೆ ಅವರೇ ಭವಿಷ್ಯಕ್ಕೆ ಕಲ್ಲು ಹಾಕಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದರೆ ಅವರಿಗೆ ಗೆಲ್ಲಲು ಸಾಧ್ಯವೇ ಇಲ್ಲ ಎಂದು ಹೇಳಿದರು.ಇದನ್ನೂ ಓದಿ: ಪ್ರೀತಿಸಿ ಮದುವೆಯಾಗೋಕೆ ನನಗೆ ಸಮಯವಿಲ್ಲ: ಸುನೈನಾ

  • ಯೋಗೇಶ್ವರ್ ನಮ್ಮನ್ನು ಬಿಡುವುದಿಲ್ಲ ಎನ್ನುವ ವಿಶ್ವಾಸವಿತ್ತು: ಕೋಟ ಶ್ರೀನಿವಾಸ ಪೂಜಾರಿ ಬೇಸರ

    ಯೋಗೇಶ್ವರ್ ನಮ್ಮನ್ನು ಬಿಡುವುದಿಲ್ಲ ಎನ್ನುವ ವಿಶ್ವಾಸವಿತ್ತು: ಕೋಟ ಶ್ರೀನಿವಾಸ ಪೂಜಾರಿ ಬೇಸರ

    ಉಡುಪಿ: ಸಿ.ಪಿ.ಯೋಗೇಶ್ವರ್ (C.P.Yogeshwar) ನಮ್ಮನ್ನು ಬಿಡುವುದಿಲ್ಲ ಎನ್ನುವ ವಿಶ್ವಾಸವಿತ್ತು ಎಂದು ಸಿಪಿವೈ ಕಾಂಗ್ರೆಸ್ ಸೇರಿದ್ದಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಬೇಸರ ವ್ಯಕ್ತಪಡಿಸಿದರು.

    ಉಡುಪಿಯಲ್ಲಿ (Udupi) ಮಾತನಾಡಿದ ಅವರು, ಯೋಗೀಶ್ವರ್ ನಮ್ಮನ್ನು ಬಿಡುವುದಿಲ್ಲ ಎನ್ನುವ ವಿಶ್ವಾಸವಿತ್ತು. ಕ್ಷೇತ್ರದಲ್ಲಿ ಎನ್‌ಡಿಎ ಗೆಲ್ಲಬೇಕು ಅನ್ನೋದು ನಮ್ಮ ವಿಚಾರ. ಚನ್ನಪಟ್ಟಣದಲ್ಲಿ ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರ್ನಾಟಕ ಫ್ರಾಡ್‌ಗಳ ಸಂತೆಯಾಗಲು ಸಿದ್ದರಾಮಯ್ಯ ಕಾರಣ – ಹೆಚ್‌. ವಿಶ್ವನಾಥ್‌ ಲೇವಡಿ

    ರಾಜಕಾರಣದಲ್ಲಿ ಈ ರೀತಿಯ ತರ್ಕಗಳು, ಚರ್ಚೆಗಳು ಬೆಳವಣಿಗೆಗಳು ಆಗುವುದು ಸಹಜ. ಒಟ್ಟು ಚುನಾವಣೆ ಸುಖಾಂತ್ಯವಾಗುತ್ತದೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

    ಎನ್‌ಡಿಎ ಇಂದ ಯಾರನ್ನು ನಿಲ್ಲಿಸಬೇಕು ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ. ನಮಗಿಂತ ದೊಡ್ಡವರು ಎಲ್ಲಾ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯವೇನಿಲ್ಲ – ನಿಖಿಲ್ ಕುಮಾರಸ್ವಾಮಿ

  • ಕರ್ನಾಟಕ ಫ್ರಾಡ್‌ಗಳ ಸಂತೆಯಾಗಲು ಸಿದ್ದರಾಮಯ್ಯ ಕಾರಣ – ಹೆಚ್‌. ವಿಶ್ವನಾಥ್‌ ಲೇವಡಿ

    ಕರ್ನಾಟಕ ಫ್ರಾಡ್‌ಗಳ ಸಂತೆಯಾಗಲು ಸಿದ್ದರಾಮಯ್ಯ ಕಾರಣ – ಹೆಚ್‌. ವಿಶ್ವನಾಥ್‌ ಲೇವಡಿ

    – ಬೈರತಿ ಸುರೇಶ್‌ನನ್ನ ಒದ್ದು ಒಳಗೆ ಹಾಕಿ, ಮುಡಾ ಹಗರಣ ಬಯಲಾಗುತ್ತೆ
    – ʻಸೈನಿಕʼ ಕುಲಕ್ಕೆ ಯೋಗೇಶ್ವರ್ ಅಪಮಾನ ಎಂದ ಎಂಎಲ್‌ಸಿ

    ಮೈಸೂರು: ಮುಡಾ ಹಾಗೂ ವಾಲ್ಮೀಕಿ ಹಗರಣ (MUDA And Valmiki Scam) ಪ್ರಕರಣದಲ್ಲಿ ಕಾಂಗ್ರೆಸ್‌ ಮುಳುಗಿದೆ. ಇದರ ಜೊತೆಗೆ ಯೋಗೇಶ್ವರ್ ಎಂಬ ಮತ್ತೊಬ್ಬ ಫ್ರಾಡ್‌ ಕಾಂಗ್ರೆಸ್‌ಗೆ ಜೊತೆಯಾಗಿದ್ದಾನೆ. ಕರ್ನಾಟಕ ಫ್ರಾಡ್‌ಗಳ ಸಂತೆಯಾಗಿದೆ, ಇದಕ್ಕೆ ಕಾರಣರು ಸಿಎಂ ಸಿದ್ದರಾಮಯ್ಯ (Siddaramaiah) ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ (H Vishwanath) ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಸೈನಿಕʼ ಕುಲಕ್ಕೆ ಯೋಗೇಶ್ವರ್ (CP Yogeshwara) ಅಪಮಾನ. ಅವನನ್ನ ಸೈನಿಕ ಅಂತ ಕರೆಯಬೇಡಿ. ಹುಣಸೂರು ಉಪ ಚುನಾವಣೆ ವೇಳೆ ಪಾರ್ಟಿ ಕೊಟ್ಟ ಹಣ ತೆಗೆದು ಕೊಂಡು ಓಡಿ ಹೋದ. ಕಾಂಗ್ರೆಸ್‌ಗೆ ಒಬ್ಬ ಫ್ರಾಡ್‌ ಯೋಗೇಶ್ವರ್‌ ಅನಿವಾರ್ಯ ಆಗಿಬಿಟ್ನಾ? ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

    ಮುಡಾ ಹಾಗೂ ವಾಲ್ಮೀಕಿ ವಂಚನೆ ಪ್ರಕರಣದಲ್ಲಿ ಕಾಂಗ್ರೆಸ್‌ ಮುಳುಗಿದೆ. ಇದರ ಜೊತೆಗೆ ಯೋಗೇಶ್ವರ್ ಎಂಬ ಮತ್ತೊಬ್ಬ ಫ್ರಾಡ್‌ ಕಾಂಗ್ರೆಸ್‌ಗೆ ಜೊತೆಯಾಗಿದ್ದಾನೆ. ಕರ್ನಾಟಕ ಫ್ರಾಡ್‌ಗಳ ಸಂತೆಯಾಗಿದೆ, ಇದಕ್ಕೆ ಕಾರಣರು ಸಿಎಂ ಸಿದ್ದರಾಮಯ್ಯ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ – ಸಿಪಿವೈ ಪಕ್ಷ ಸೇರುವ ಮುನ್ಸೂಚನೆ ಕೊಟ್ಟ ಸಿಎಂ

    ಇದೇ ವೇಳೆ ʻನಾನು ಪ್ರಾಮಾಣಿಕ ಎಂಬ ಸಿದ್ದರಾಮಯ್ಯ ಭಾಷಣಕ್ಕೆ ತಿರುಗೇಟು ನೀಡಿದ ವಿಶ್ವನಾಥ್‌, ಈ ಉಪಚುನಾವಣೆಯಿಂದ ಸರಕಾರಕ್ಕೆ ಏನೂ ಆಗಲ್ಲ. ಅದಕ್ಕೆ ಯಾಕೆ ಇಷ್ಟು ತಲೆ ಕೆಡಿಸಿ ಕೊಂಡಿದ್ದಾರೆ? ಸಿದ್ದರಾಮಯ್ಯ ಕಾಂಗ್ರೆಸ್‌ ಅನ್ನು ಹಾಳು ಮಾಡಿಬಿಟ್ಟರು. ಸಿದ್ದರಾಮಯ್ಯನವರೇ ರಾಜ್ಯದ ಜನ ಮಂಗರಲ್ಲ. ನಿಮ್ಮ ಸುಳ್ಳು ಜನರಿಗೆ ಅರ್ಥವಾಗುತ್ತಿದೆ. ಸಿದ್ದರಾಮಯ್ಯ ಒಬ್ಬ ಭ್ರಷ್ಟ ಎಂಬುದು ಜನರಿಗೆ ಗೊತ್ತಾಗಿದೆ. ಅಹಿಂದ ವರ್ಗಕ್ಕೆ ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮುಡಾದಲ್ಲಿ ಬರೋಬ್ಬರಿ 5,000 ಕೋಟಿ ಅವ್ಯವಹಾರ ಆಗಿದೆ – ಶಾಸಕ ಎ ಮಂಜು ಹೊಸ ಬಾಂಬ್‌

    ಸಿದ್ದರಾಮಯ್ಯ ಅವರೇ ನಿಮ್ಮ ಸೊಸೆ ಹೆಸರಿನಲ್ಲಿ ಪಬ್ ಇಲ್ವಾ? ಅದಕ್ಕೆ ಕೋಟ್ಯಂತರ ಬಾಡಿಗೆ ಬರೋದಿಲ್ವಾ? ಬೈರತಿ ಸುರೇಶ್‌ನನ್ನ ಒದ್ದು ಒಳಗೆ ಹಾಕಿ. ಮುಡಾದ ಎಲ್ಲಾ ಹಗರಣ ಬಯಲಾಗುತ್ತದೆ. ಒಳ್ಳೆ ಕೆಲಸಕ್ಕೆ ಕುರುಬರನ್ನು ಕರೆಯಿರಿ ಅಂತಿದ್ದರು. ಈಗ ಅದಕ್ಕೂ ಸಿದ್ದರಾಮಯ್ಯ, ಬೈರತಿ ಸುರೇಶ್ ಅಂತವರು ಮಸಿ ಬಳಿದು ಬಿಟ್ಟರು. ಸಿದ್ದರಾಮಯ್ಯಗೆ ಅಂಟಿರುವ ಕೊಳಕು ತೊಳೆದುಕೊಳ್ಳಲು ಆಗಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ, ಮುಡಾದಲ್ಲಿ 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದಿದ್ದೇ ಕಾಂಗ್ರೆಸ್‌ನವರು: ಅಶೋಕ್

    ಸಿದ್ದರಾಮಯ್ಯ 16ನೇ ಲೂಯಿ ದೊರೆ ಇದ್ದಂಗೆ. ಲೂಯಿ ತನ್ನ ನಂತರ ಜಲಪ್ರಳಯ ಆಗಲಿ ಅಂದಿದ್ದ. ಅದೇ ರೀತಿ ಸಿದ್ದರಾಮಯ್ಯ ತನ್ನ ನಂತರ ಯಾರು ಇರಬಾರದು ಎಂಬ ಮನಃಸ್ಥಿತಿ ಹೊಂದಿದ್ದಾರೆ. ಒಕ್ಕಲಿಗರು, ಲಿಂಗಾಯತರು ಸಿದ್ದರಾಮಯ್ಯಗೆ ಮತ ಹಾಕಿಲ್ವಾ? ಯಾಕೆ ಈಗ ಹಿಂದುಳಿದ ಕಾರ್ಡ್ ಅನ್ನು ಸಿಎಂ ಪ್ಲೇ ಮಾಡುತ್ತಿದ್ದಾರೆ? ಹಿಂದುಳಿದವರ ಮೂಗಿಗೆ ಸಿದ್ದರಾಮಯ್ಯ ಬೆಣ್ಣೆ ಸವರಿದ್ದಾರೆ. ಪ್ರದೇಶ ಕುರುಬರ ಸಂಘ ಒಡೆದಿದ್ದು ಯಾರು? ನಾನು ಕಟ್ಟಿದ ಕುರುಬರ ಮಠ ಒಡೆದಿದ್ದು ಯಾರು? ಇದೇ ಸಿದ್ದರಾಮಯ್ಯ ತಾನೇ ಎಂದು ಆರೋಪ ಮಾಡಿದ್ದಾರೆ.

  • ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯವೇನಿಲ್ಲ – ನಿಖಿಲ್ ಕುಮಾರಸ್ವಾಮಿ

    ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯವೇನಿಲ್ಲ – ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಯೋಗೇಶ್ವರ್ (C P Yogeshwar) ಕಾಂಗ್ರೆಸ್ ಸೇರ್ಪಡೆ ಆಗಿರೋದು ಆಶ್ಚರ್ಯ ಏನು ಇಲ್ಲ. ಇದು ನಿರೀಕ್ಷಿತವೇ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ.

    ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಬೆಂಗಳೂರಿನಲ್ಲಿ (Bengaluru) ಪ್ರತಿಕ್ರಿಯೆ ನೀಡಿದ ಅವರು, ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯ ಪಡುವಂತಹದ್ದು ಏನು ಇಲ್ಲ. ಗಾಳಿಯಲ್ಲಿ ಗುಂಡು ಹೊಡೆಯೋ ಆರೋಪ ಅಲ್ಲ. ಅವರು ಯಾವಾಗ ಬಿಜೆಪಿ ಪರಿಷತ್ ಸ್ಥಾನಕ್ಕೆ ತರಾತುರಿಯಲ್ಲಿ ರಾಜೀನಾಮೆ ಕೊಟ್ರೋ ಆಗಲೇ ರಾಜಕೀಯ ವಿದ್ಯಮಾನಗಳ ಬೆಳವಣಿಗೆ ಬಗ್ಗೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುತ್ತಾರೆ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಆಶ್ಚರ್ಯವಿಲ್ಲ ಎಂದರು. ಇದನ್ನೂ ಓದಿ: ಲಕ್ಷಾಂತರ ರೂ. ಬೆಲೆ ಬಾಳುವ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಇಬ್ಬರು ಅಂದರ್

    ಚನ್ನಪಟ್ಟಣಕ್ಕೆ (Channapatna) ನನ್ನ ಹೆಸರು 2 ತಿಂಗಳಿಂದ ಚಾಲ್ತಿಯಲ್ಲಿದೆ. ಪಕ್ಷದ ಕಾರ್ಯಕರ್ತರು ನಿಖಿಲ್‌ಗೆ ಟಿಕೆಟ್ ಸಿಕ್ಕರೆ ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು. ನಾನು ಸ್ಪರ್ಧೆ ಮಾಡೋದಕ್ಕೆ ಧೈರ್ಯದ ಪ್ರಶ್ನೆ ಅಲ್ಲ. ಯಾವುದೇ ಸ್ಪರ್ಧೆ ಅಂತಿಮವಾಗಬೇಕಾದರೆ ಎನ್‌ಡಿಎ ಕಡೆಯಿಂದ ಘೋಷಣೆ ಆಗಬೇಕಿದೆ. ಕುಮಾರಸ್ವಾಮಿ ಅವರು ನಿನ್ನೆ ಹೇಳಿದ್ದಾರೆ ತಾಳಿದವನು ಬಾಳಿಯಾನು ಎಂದು ಪಕ್ಷದ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇಷ್ಟು ದಿನ ಅತ್ಯಂತ ತಾಳ್ಮೆಯಿಂದ ನಾವು ಕಾದಿದ್ದೇವೆ. ಈಗಲೂ ಕೂಡಾ ಬಿಜೆಪಿ (BJP) ರಾಜ್ಯದ ನಾಯಕರು ನಮ್ಮ ಪಕ್ಷದ ನಾಯಕರು ಕೂಡಿ ಚರ್ಚೆ ಮಾಡಿ ಯಾರು ಎನ್‌ಡಿಎ ಅಭ್ಯರ್ಥಿ ಆಗಬೇಕು ಎಂದು ತೀರ್ಮಾನ ಮಾಡುತ್ತೇವೆ. ಅಭ್ಯರ್ಥಿ ಯಾರು ಅಂತ ಎನ್‌ಡಿಎ ಘೋಷಣೆ ಮಾಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರು ಕಟ್ಟಡ ಕುಸಿತ- ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಮಾಲೀಕ ಅರೆಸ್ಟ್

    ನಿಖಿಲ್ ನಿಲ್ಲಬೇಕು ಅಂತ ಕಾರ್ಯಕರ್ತರು ಹೇಳಿದರೆ ಅಯ್ಯೋ ರಾಮ ದೇವೇಗೌಡರ ಕುಟುಂಬ ಬಿಟ್ಟರೆ ಇನ್ಯಾರು ಸ್ಪರ್ಧೆ ಮಾಡೋಕೆ ಆಗುವುದಿಲ್ಲವಾ ಎಂದು ಪ್ರಶ್ನೆ ಕೇಳುತ್ತಾರೆ. ಮತ್ತೊಂದು ಕಡೆ ಧೈರ್ಯದ ಪ್ರಶ್ನೆಯೂ ಕೇಳುತ್ತಾರೆ. ಇದಕ್ಕೆ ನಾನು ಏನು ಉತ್ತರ ಕೊಡಲಿ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಉತ್ತರ ಪ್ರದೇಶ | ಅಕ್ರಮ ಸಂಬಂಧದ ಶಂಕೆ – ಕತ್ತು ಸೀಳಿ ಪತ್ನಿಯ ಕೊಲೆಗೈದ ಪತಿ

    ರಾಮನಗರ ಜೆಡಿಎಸ್ (JDS) ಮುಕ್ತ ಮಾಡಲು ಈ ಆಪರೇಷನ್ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶ ಹಳೆ ಮೈಸೂರು ಭಾಗದಲ್ಲಿ ನೋಡಿದ್ದೇವೆ. 14 ಕ್ಷೇತ್ರಗಳ ಪೈಕಿ 12 ಸ್ಥಾನ ಜನರು ಕೊಟ್ಟರು. 12 ಸೀಟು ಬರಲು ಜೆಡಿಎಸ್ ಮತ್ತು ಕುಮಾರಸ್ವಾಮಿ ಕಾರಣ. ಇದು ಬಿಜೆಪಿ ರಾಷ್ಟ್ರೀಯ ನಾಯಕರ ಗಮನದಲ್ಲೂ ಇದೆ. ಕಾಂಗ್ರೆಸ್‌ನವರಿಗೆ ರಾಜ್ಯದಲ್ಲಿ ಟಾರ್ಗೆಟ್ ಇರೋದು ಕುಮಾರಸ್ವಾಮಿ ಅವರು. ಕಳೆದ ಚುನಾವಣೆ ಫಲಿತಾಂಶ ಬಳಿಕ ಆಗಿರೋ ಕೆಲ ಘಟನೆಗಳು ಎಲ್ಲರಿಗೂ ಗೊತ್ತು. ಕುಮಾರಸ್ವಾಮಿ ಟಾರ್ಗೆಟ್ ಆಗಿದ್ದಾರೆ. ಆದರೆ ಇವೆಲ್ಲವನ್ನು ಮೆಟ್ಟಿ ನಿಲ್ಲುವ ಶಕ್ತಿ ಚನ್ನಪಟ್ಟಣ ಜನತೆ ನಮಗೆ ಕೊಡುತ್ತಾರೆ ಅನ್ನೋ ವಿಶ್ವಾಸ ಇದೆ ಎಂದರು.  ಇದನ್ನೂ ಓದಿ: ಜೈಲು ನಿಯಮ ಉಲ್ಲಂಘನೆ – ದರ್ಶನ್ ಒಳಿತಿಗೆ ಪತ್ನಿ ಕಟ್ಟಿದ್ದ ದಾರ ತೆಗೆಸುವ ಸಾಧ್ಯತೆ

    ಡಾ.ಮಂಜುನಾಥ್ ಪತ್ನಿ ಅನಸೂಯ ಅಭ್ಯರ್ಥಿ ಆಗೋ ಬಗ್ಗೆ ಕಾದು ನೋಡಿ ಎಂದು ಕುತೂಹಲವಿಟ್ಟರು. ಕುಮಾರಸ್ವಾಮಿ ಬಿಜೆಪಿಯಲ್ಲಿ (BJP) ಒಕ್ಕಲಿಗ ನಾಯಕರನ್ನ ಬೆಳೆಯಲು ಬಿಡುತ್ತಿಲ್ಲ ಎಂಬ ಯೋಗೇಶ್ವರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯೋಗೇಶ್ವರ್ ಅವರು ಪತ್ರಿಕೆಗೆ ಸಂದರ್ಶನ ಕೊಟ್ಟಿದ್ದರು. ಅದರಲ್ಲಿ ಬಿಜೆಪಿಯ ಒಕ್ಕಲಿಗ ನಾಯಕರನ್ನ ಕುಮಾರಸ್ವಾಮಿ ತುಳಿಯುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಈಗ ಯೋಗೇಶ್ವರ್ ಇಂತಹ ಹೇಳಿಕೆ ಕೊಡಲು, ಕುಮ್ಮಕ್ಕು ಕೊಡಲು ಯಾರು ಅನ್ನೋದು ನಮಗೆ ಮೊದಲೇ ಅರ್ಥ ಆಗಿತ್ತು. ಈಗ ರಾಜ್ಯದ ಜನರಿಗೆ ಅರ್ಥ ಆಗಿದೆ ಎಂದು ಕಾಂಗ್ರೆಸ್ ಮತ್ತು ಯೋಗೇಶ್ವರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ – ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ