‘ಸೀತಾರಾಮ’ ಸೀರಿಯಲ್‌ನಲ್ಲಿ ನಾಯಕಿ ಸೀತಾ ಪಾತ್ರಧಾರಿಯ ಸ್ನೇಹಿತೆಯಾಗಿ ಗಮನ ಸೆಳೆದಿರುವ ಮೇಘನಾ ಶಂಕರಪ್ಪ (Meghana Shankarappa) ಹಸೆಮಣೆ (Wedding) ಏರಲು ಸಜ್ಜಾಗಿದ್ದಾರೆ. ಮದುವೆ ಸಂಭ್ರಮದಲ್ಲಿರುವ ನಟಿ ಸದ್ಯ ಭಾವಿ ಪತಿ ಜೊತೆಗಿನ ಸುಂದರ ಪ್ರಿ ವೆಡ್ಡಿಂಗ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ನಿರ್ದೇಶನದತ್ತ ರಂಜನಿ ರಾಘವನ್- ಕನ್ನಡತಿಯ ಚಿತ್ರಕ್ಕೆ ಇಳಯರಾಜ ಸಾಥ್
ಹೊಸ ವರ್ಷದಂದು ಭಾವಿ ಪತಿ ಜೊತೆಗಿನ ರೊಮ್ಯಾಂಟಿಕ್ ವಿಡಿಯೋ ಹಂಚಿಕೊಂಡಿದ್ದಾರೆ. ದೇವಸ್ಥಾನವೊಂದರಲ್ಲಿ ವಿಡಿಯೋ ಶೂಟ್ ಮಾಡಿಸಿದ್ದು, ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಬಾದಮಿ ಬಣ್ಣದ ಉಡುಗೆಯಲ್ಲಿ ಇಬ್ಬರೂ ಮಿಂಚಿದ್ದಾರೆ. ಹೊಸ ಜೋಡಿಗೆ ಫ್ಯಾನ್ಸ್ ಶುಭಕೋರಿದ್ದಾರೆ.
ಸಾಫ್ಟ್‌ವೇರ್ ಇಂಜಿನಿಯರ್ ಜಯಂತ್ ಜೊತೆ ನಟಿಯ ಮದುವೆ ಫೆಬ್ರವರಿಯಲ್ಲಿ ಫಿಕ್ಸ್ ಆಗಿದೆ. ಇಬ್ಬರೂ ಸ್ನೇಹಿತರಾಗಿದ್ದರು. ಆ ಸ್ನೇಹ ಪ್ರೀತಿಗೆ ತಿರುಗಿ ಇದೀಗ ಗುರುಹಿರಿಯರ ಸಮ್ಮತಿಯ ಮೇರೆಗೆ ಮದುವೆಗೆ ಸಜ್ಜಾಗಿದ್ದಾರೆ.
ಇತ್ತೀಚೆಗೆ ನಟಿ ಎಂಗೇಜ್ ಆಗಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದರು. ಭಾವಿ ಪತಿ ಜೊತೆಗಿನ ಫೋಟೋ ಶೇರ್ ಮಾಡಿ ಸಂಬಂಧದ ಬಗ್ಗೆ ಅಧಿಕೃತಪಡಿಸಿದ್ದರು.
‘ಸೀತಾರಾಮಂ’ (Seetha Ramam) ಸಿನಿಮಾ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಜೋಡಿ ದುಲ್ಕರ್ ಸಲ್ಮಾನ್ (Dulquer Salmaan) ಮತ್ತು ಮೃಣಾಲ್ ಠಾಕೂರ್ ಈಗ ಗುಡ್ ನ್ಯೂಸ್ ಕೊಟ್ಟಿದ್ದಾರೆ. 2 ವರ್ಷಗಳ ನಂತರ ಮತ್ತೆ ಒಂದೇ ಸಿನಿಮಾದಲ್ಲಿ ಸೀತಾ ಮತ್ತು ರಾಮ್ ಕಾಣಿಸಿಕೊಳ್ಳಲಿದ್ದಾರೆ.
2022ರಲ್ಲಿ ಸೀತಾರಾಮಂ ಸಿನಿಮಾ ರಿಲೀಸ್ ಆಗಿ ಸೂಪರ್ ಡೂಪರ್ ಹಿಟ್ ಆಗಿತ್ತು. ಸೀತಾ ಮತ್ತು ರಾಮ್ ಲವ್ ಸ್ಟೋರಿ ನೋಡಿ ಪ್ರೇಕ್ಷಕರ ಕಣ್ಣಂಚಿನಲ್ಲಿ ನೀರು ಬಂದಿತ್ತು. ಈ ಜೋಡಿ ಮತ್ತೆ ಒಂದಾದ್ರೆ ಚೆನ್ನಾಗಿರುತ್ತೆ ಎಂದು ಅನೇಕರು ಆಸೆಪಟ್ಟಿದ್ದರು. ಇದೀಗ ಅದೇ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದಲ್ಲಿ ಮೃಣಾಲ್ (Mrunal Thakur) ನಟಿಸುವ ಬಗ್ಗೆ ಈ ಹಿಂದೆಯೇ ವರದಿಯಾಗಿತ್ತು. ಆದರೆ ಈಗ ದುಲ್ಕರ್ ಸಲ್ಮಾನ್ ಕೂಡ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇಬ್ಬರೂ ಅತಿಥಿ ಪಾತ್ರವಾಗಿದ್ರೂ ಚಿತ್ರದಲ್ಲಿ ತಿರುವು ಕೊಡಲಿರುವ ಪಾತ್ರಕ್ಕೆ ಜೀವತುಂಬಲಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಬ್ರೇಕ್ ಬಳಿಕ ಮತ್ತೆ ಸಿನಿಮಾಗಳಲ್ಲಿ ಶ್ರೀಲೀಲಾ ಬ್ಯುಸಿ
ಪ್ರಭಾಸ್ (Prabhas) ಸಿನಿಮಾದಲ್ಲಿ ಜೊತೆಯಾಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಯಾವದಕ್ಕೂ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ಎದುರು ನೋಡ್ತಿದ್ದಾರೆ.
ಅಂದಹಾಗೆ, ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಇದೇ ಜೂನ್ 27ಕ್ಕೆ ಬಹುಭಾಷೆಗಳಲ್ಲಿ ರಿಲೀಸ್ ಆಗ್ತಿದೆ. ಬೆಂಗಳೂರಿನ ಬೆಡಗಿ ದೀಪಿಕಾ ಪಡುಕೋಣೆ (Deepika Padukone) ಮೊದಲ ಬಾರಿಗೆ ಮಾತೃಭಾಷೆ ಕನ್ನಡದಲ್ಲಿ ಡಬ್ ಮಾಡಿರೋದು ವಿಶೇಷ.
ಸೀತಾರಾಮಂ (Seetharamam), ಫ್ಯಾಮಿಲಿ ಸ್ಟಾರ್ ಸಿನಿಮಾಗಳ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದ ನಟಿ ಮೃಣಾಲ್ ಠಾಕೂರ್ (Mrunal Thakur) ಇದೀಗ ಡೇಟಿಂಗ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಬಾಲಿವುಡ್ ಹೀರೋ ಸಿದ್ಧಾಂತ್ ಚತುರ್ವೇದಿ (Siddhant Chaturvedi) ಜೊತೆ ಮೃಣಾಲ್ ಲವ್ವಿ ಡವ್ವಿ ಶುರುವಾಗಿದೆ ಎಂದು ಗುಸು ಗುಸು ಶುರುವಾಗಿದೆ. ಇದನ್ನೂ ಓದಿ:ಅವಕಾಶ ಸಿಕ್ಕರೆ ಕನ್ನಡದಲ್ಲಿ ನಟಿಸ್ತೇನೆ : ನಟಿ ಚಾಂದನಿ
ಬಿಟೌನ್ ಅಂಗಳದ ನಯಾ ಜೋಡಿ ಅಂದರೆ ಸಿದ್ಧಾಂತ್ ಮತ್ತು ಮೃಣಾಲ್. ಇತ್ತೀಚೆಗೆ ರೆಸ್ಟೋರೆಂಟ್‌ವೊಂದರಲ್ಲಿ ಡಿನ್ನರ್ ಡೇಟ್ ಮುಗಿಸಿ ಜೊತೆಯಾಗಿ ಕೈ ಕೈ ಹಿಡಿದು ಇಬ್ಬರೂ ಕಾಣಿಸಿಕೊಂಡಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದೀಗ ಇಬ್ಬರೂ ಎಂಗೇಜ್ ಆಗಿದ್ದಾರೆ ಎಂದು ಚರ್ಚೆ ಶುರುವಾಗಿದೆ. ಈ ಸುದ್ದಿ ನಿಜನಾ? ಎಂಬುದನ್ನು ಈ ಜೋಡಿ ಖಚಿತಪಡಿಸಬೇಕಿದೆ.
ಬಾಲಿವುಡ್ ಮತ್ತು ಟಾಲಿವುಡ್‌ನಲ್ಲಿ ಮೃಣಾಲ್‌ಗೆ ಭಾರೀ ಬೇಡಿಕೆ ಇದೆ. ಹಿಂದಿ ಸಿನಿಮಾಗಳಿಗಿಂತ ತೆಲುಗಿನಲ್ಲಿ ನಟಿ ಸಕ್ಸಸ್ ಕಂಡಿದ್ದಾರೆ. ಅದರಲ್ಲೂ ‘ಸೀತಾರಾಮಂ’ ಸಿನಿಮಾದಲ್ಲಿ ಸೀತಾ ಆಗಿ ಎಲ್ಲರ ಗಮನ ಸೆಳೆದಿದ್ದರು.
ಸದ್ಯ ಸಂಜಯ್ ಲೀಲಾ ಬನ್ಸಾಲಿ (Sanjay Leela Bansali) ಅವರ ಹೊಸ ಸಿನಿಮಾದಲ್ಲಿ ಮೃಣಾಲ್ ನಾಯಕಿಯಾಗಿದ್ದಾರೆ. ತೆಲುಗಿನಲ್ಲಿ ಕೆಲವು ಸಿನಿಮಾಗಳ ಮಾತುಕತೆ ನಡೆಯುತ್ತಿವೆ.
ಬಿಗ್ ಬಾಸ್ (Bigg Boss Kannada) ಖ್ಯಾತಿಯ ವೈಷ್ಣವಿ ಗೌಡ (Vaishnavi Gowda) ಇದೀಗ ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ (Bili Chukki Halli Hakki) ಕಥೆ ಹೇಳೋದಕ್ಕೆ ಸಜ್ಜಾಗಿದ್ದಾರೆ. ಸದ್ಯ ಸೀತಾರಾಮ ಸೀರಿಯಲ್ ಮೂಲಕ ಮೋಡಿ ಮಾಡಿರೋ ಡಿಂಪಲ್ ಚೆಲುವೆ ವೈಷ್ಣವಿ ನಟನೆಯ ಹೊಸ ಸಿನಿಮಾ ಸೆಟ್ಟೇರಿದೆ. ‘ಮಹಿರ’ (Mahira) ಖ್ಯಾತಿಯ ನಿರ್ದೇಶಕ ಮಹೇಶ್ ಗೌಡ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಇದನ್ನೂ ಓದಿ:ಹಾಸ್ಯ ಅರ್ಥವಾಗದ ಹಾಸ್ಯಾಸ್ಪದರೇ… : ಪ್ರಕಾಶ್ ರಾಜ್ ಮತ್ತೊಂದು ಟ್ವೀಟ್
‘ಮಹಿರ’ ಸಿನಿಮಾ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗಮನ ಸೆಳೆದವರು ಮಹೇಶ್ ಗೌಡ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾ ಮಾಡಿ ಪ್ರೇಕ್ಷಕರನ್ನ ರಂಜಿಸಿದ್ದ ಮಹೇಶ್ ಈ ಬಾರಿ ವಿಭಿನ್ನ ಬಗೆಯ ಕಥಾಹಂದರದೊಂದಿಗೆ ಪ್ರತ್ಯಕ್ಷರಾಗಿದ್ದಾರೆ. ತೊನ್ನು (ವಿಟಿಲಿಗೋ) ಸಮಸ್ಯೆಯನ್ನು ಪ್ರಧಾನವಾಗಿಟ್ಟುಕೊಂಡು ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಎಂಬ ಚಿತ್ರ ನಿರ್ದೇಶಿಸಿ, ನಟಿಸುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನ ಸಿದ್ದಿ ವಿನಾಯಕ ದೇಗುಲದಲ್ಲಿ ನೆರವೇರಿದೆ. ಇದನ್ನೂ ಓದಿ:ಹಾಸ್ಯ ಅರ್ಥವಾಗದ ಹಾಸ್ಯಾಸ್ಪದರೇ… : ಪ್ರಕಾಶ್ ರಾಜ್ ಮತ್ತೊಂದು ಟ್ವೀಟ್
ನಿರ್ದೇಶಕ ಮಹೇಶ್ ಗೌಡ (Mahesh Gowda) ತಮ್ಮಲ್ಲಿರುವ ವಿಟಿಲಿಗೋ ಸಮಸ್ಯೆಗೆ ಕಾಮಿಡಿ ಹಾಗೂ ರೊಮ್ಯಾಂಟಿಕ್ ಟಚ್ ಕೊಟ್ಟು ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಕಥೆ ರೂಪಿಸಿದ್ದಾರೆ. ಹೊನ್ನುಡಿ ಪ್ರೊಡಕ್ಷನ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡ್ತಿದ್ದಾರೆ. ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಶಿವ ಎಂಬ ಪಾತ್ರಕ್ಕೆ ಮಹೇಶ್ ಗೌಡ ನಾಯಕನಾಗಿ ಜೀವ ತುಂಬಿದ್ದಾರೆ. ಮಹೇಶ್‌ಗೆ ಜೋಡಿಯಾಗಿ ನಟಿ ವೈಷ್ಣವಿ, ಹಳ್ಳಿ ಹುಡುಗಿಯಾಗಿ ಕವಿತಾ ಪಾತ್ರದಲ್ಲಿ ನಟಿಸಿದ್ದಾರೆ.
ಶಿವನ ಸಮಸ್ಯೆ ಗೊತ್ತಿದ್ರು ಬಾಳ ಸಂಗಾತಿಯಾಗಿ ಕವಿತಾ ಬರುತ್ತಾಳೆ. ಸಮಸ್ಯೆ ಗೊತ್ತಿದ್ರು ಕವಿತಾ ತನ್ನನ್ನ ಯಾಕೆ ಮದುವೆ ಆಗಿದ್ದಾಳೆ ಅನ್ನೋ ಗೊಂದಲದಲ್ಲಿರೋ ನಾಯಕನ ಕಥೆ. ಈ ಗೊಂದಲದ ಮಧ್ಯೆಯೇ ಸಾಗುವ ಒಂದು ಮುದ್ದಾದ ಲವ್ ಸ್ಟೋರಿ ಬಿಳಿ ಚುಕ್ಕಿ ಹಳ್ಳಿ ಹಕ್ಕಿ. ವರಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನಿಂದ ಚಿತ್ರತಂಡ ಶೂಟಿಂಗ್ ಶುರು ಮಾಡಿದೆ. ಕಿರಣ್ ಸಿಎಚ್‌ಎಂ ಕ್ಯಾಮೆರಾ, ರಿಯೋ ಆಂಟೋನಿ ಸಂಗೀತ ಸಿನಿಮಾಕ್ಕಿದೆ. ಕೊಪ್ಪ, ಶೃಂಗೇರಿ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.
ಸ್ಯಾಂಡಲ್‌ವುಡ್‌ನ (Sandalwood) ಗೋಲ್ಡನ್ ಬ್ಯೂಟಿ ಅಮೂಲ್ಯ (Amulya) ಅವರು ವೆಕೇಷನ್ ಫೋಟೋವನ್ನ ಹಂಚಿಕೊಂಡಿದ್ದಾರೆ. ಮಲೆನಾಡು ಚಿಕ್ಕಮಗಳೂರಿನಲ್ಲಿ ಅಮೂಲ್ಯ ಕುಟುಂಬ ತೆರಳಿದ್ದು, ಪತಿ ಮತ್ತು ಮಕ್ಕಳ ಜೊತೆಗಿನ ಸುಂದರ ಫೋಟೋವನ್ನ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಎಲ್ಲವೂ ಗಾಸಿಪ್ : ಐಶ್ವರ್ಯ 2ನೇ ಮದುವೆ, ಅಪ್ಪನೊಂದಿಗೆ ಮುನಿಸು
‘ಚೆಲುವಿನ ಚಿತ್ತಾರ’ (Chevina Chittara) ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ಅಮೂಲ್ಯ ಅವರು ಮಳೆ, ಗಜಕೇಸರಿ, ರಾಮ್ ಲೀಲಾ, ಕೃಷ್ಣ ರುಕ್ಕು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಅಮೂಲ್ಯಗೆ ಡಿಮ್ಯಾಂಡ್ ಇರುವಾಗಲೇ ಜಗದೀಶ್ ಅವರನ್ನು ನಟಿ ಮದುವೆಯಾದರು. ಈಗ ಇಬ್ಬರು ಅವಳಿ ಮಕ್ಕಳ ಆರೈಕೆಯಲ್ಲಿ ನಟಿ ಬ್ಯುಸಿಯಿದ್ದಾರೆ.
ಇತ್ತೀಚಿಗೆ ನಟಿ ಅಮೂಲ್ಯ ಫ್ಯಾಮಿಲಿ ಮತ್ತು ತನ್ನ ಬೆಸ್ಟ್ ಫ್ರೆಂಡ್ ಜೊತೆ ಚಿಕ್ಕಮಗಳೂರಿಗೆ ಹೋಗಿ ಬಂದಿದ್ದಾರೆ. ಸುಂದರ ತಾಣಗಳಿಗೆ ಭೇಟಿ ಕೊಟ್ಟಿದ್ದಾರೆ. ಚಿಕ್ಕಮಗಳೂರಿನ ಬ್ಯೂಟಿಫುಲ್ ಜಾಗವೊಂದರಲ್ಲಿ ಅಮ್ಮು ಫ್ಯಾಮಿಲಿ ಚೆಂದದ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಪತಿ ಜಗದೀಶ್ ಮತ್ತು ಮಕ್ಕಳು ಜೊತೆಗಿದ್ದು, ‘ಸೀತಾರಾಮ’ (Seetharama) ನಟಿ ವೈಷ್ಣವಿ ಗೌಡ (Vaishnavi Gowda) ಕೂಡ ಅಮೂಲ್ಯ ಜೊತೆ ಫೋಟೋ ಪೋಸ್ ಕೊಟ್ಟಿದ್ದಾರೆ.
ಅಮೂಲ್ಯ ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ್ರೆ, ವೈಷ್ಣವಿ ಲೈಟ್ ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ವೈಷ್ಣವಿ ಗೌಡ ಅವರು ‘ಸೀತಾರಾಮ’ ಸೀರಿಯಲ್ ಮೂಲಕ ಮೋಡಿ ಮಾಡ್ತಿದ್ದಾರೆ. ಅಮೂಲ್ಯ ಕಮ್‌ಬ್ಯಾಕ್ ಅಭಿಮಾನಿಗಳು ಎದುರು ನೋಡ್ತಿದ್ದಾರೆ.
ಕನ್ನಡದ ‘ಭರಾಟೆ’ (Bharate) ಬ್ಯೂಟಿ ಶ್ರೀಲೀಲಾ ಅವರು ಟಾಲಿವುಡ್ ರಂಗದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna), ಕೃತಿ ಶೆಟ್ಟಿ (Kriti Shetty), ಪೂಜಾ ಹೆಗ್ಡೆಗೆ (Pooja Hegde) ಟಕ್ಕರ್ ಕೊಟ್ಟಿದ್ದ ನಟಿಗೆ ಈಗ ಸೀತಾರಾಮಂ ನಟಿ ಮೃಣಾಲ್ ಪೈಪೋಟಿ ನೀಡ್ತಿದ್ದಾರೆ. ಯಾವ ವಿಚಾರ? ಏನ್ ಕಥೆ ಇಲ್ಲಿದೆ ಡಿಟೈಲ್ಸ್
ಕಿಸ್, ಭರಾಟೆ, ಬೈಟು ಲವ್ ಸಿನಿಮಾದ ನಂತರ ‘ಪೆಳ್ಳಿ ಸಂದಡಿ’ ಸಿನಿಮಾದ ಮೂಲಕ ತೆಲುಗಿಗೆ ಕಾಲಿಟ್ಟ ನಟಿ ಶ್ರೀಲೀಲಾ ಈಗ ಅಲ್ಲೇ ಗಟ್ಟಿ ನೆಲೆ ಗಿಟ್ಟಿಸಿಕೊಂಡಿದ್ದಾರೆ. 10ಕ್ಕೂ ಹೆಚ್ಚು ಸಿನಿಮಾಗಳಿಗೆ ಶ್ರೀಲೀಲಾ ನಾಯಕಿಯಾಗಿದ್ದಾರೆ. ಸ್ಟಾರ್ ಸಿನಿಮಾಗೆ ಈಗ ಕಿಸ್ ನಾಯಕಿನೇ ಬೇಕು ಎಂಬಷ್ಟರ ಮಟ್ಟಿಗೆ ಬೆಂಗಳೂರಿನ ಬ್ಯೂಟಿ ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಜುಲೈ 21ರಂದು ಬೆಚ್ಚಿ ಬೀಳಿಸಲು ರೆಡಿಯಾಯ್ತು ‘ಅಂಬುಜ’ ಟೀಂ
ರಶ್ಮಿಕಾ ಮಂದಣ್ಣ, ಕೃತಿ, ಪೂಜಾ ಹೆಗ್ಡೆಗೆ ಟಕ್ಕರ್ ಕೊಟ್ಟು ಹತ್ತಕೂ ಹೆಚ್ಚು ಚಿತ್ರಗಳಿಗೆ ಶ್ರೀಲೀಲಾ ನಾಯಕಿಯಾಗಿದ್ರೆ ಈಗ ಕನ್ನಡತಿಗೆ ಮರಾಠಿ ಸುಂದರಿ ಸೆಡ್ಡು ಹೊಡೆದಿದ್ದಾರೆ. ಹೌದು.. ‘ಸೀತಾರಾಮಂ’ ಸಿನಿಮಾ ರಿಲೀಸ್ ಆದ್ಮೇಲೆ ಮೃಣಾಲ್ ಠಾಕೂರ್‌ಗೆ (Mrunal Thakur) ಬಂಪರ್ ಅವಕಾಶಗಳು ಅರಸಿ ಬರುತ್ತಿದೆ. ಬಾಲಿವುಡ್- ಟಾಲಿವುಡ್ (Tollywood) ಎರಡಲ್ಲೂ ಅವಕಾಶ ಗಿಟ್ಟಿಸಿಕೊಳ್ತಿದ್ದಾರೆ. ಒಂದು ಸಿನಿಮಾದಿಂದ ಮತ್ತೊಂದು ಸಿನಿಮಾಗೆ ಸಂಭಾವನೆ ಕೂಡ ಏರಿಸಿಕೊಳ್ತಿದ್ದಾರೆ.
ಇದೀಗ ಶ್ರೀಲೀಲಾ- ಮೃಣಾಲ್ ಸಂಭಾವನೆ ವಿಚಾರ ಅನೇಕರ ಚರ್ಚೆಗೆ ಗ್ರಾಸವಾಗಿದೆ. ಶಿವ ಕಾರ್ತಿಕೇಯನ್ ಅವರ ಪ್ಯಾನ್ ಇಂಡಿಯಾ ಚಿತ್ರಕ್ಕೆ ಮೃಣಾಲ್ ನಾಯಕಿಯಾಗಿದ್ದಾರೆ. ನಾನಿ 30ನೇ ಚಿತ್ರ, ವಿಜಯ್ ದೇವರಕೊಂಡ ಹೊಸ ಸಿನಿಮಾಗೆ ಮೃಣಾಲ್ ಅವರೇ ಜೋಡಿ. ಹೀಗಿರುವಾಗ ಒಂದು ಚಿತ್ರಕ್ಕೆ 4ರಿಂದ 4.5 ಕೋಟಿ ಚಾರ್ಜ್ ಮಾಡ್ತಿದ್ದಾರೆ.
ಸದ್ಯದ ತೆಲುಗಿನ ಕ್ರೇಜಿ ಗರ್ಲ್ ಶ್ರೀಲೀಲಾ ಅವರು ಒಂದು ಚಿತ್ರಕ್ಕೆ 2 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಭರಾಟೆ ನಟಿಗಿಂತ ಮೃಣಾಲ್ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ. ಈ ಮೂಲಕ ಕನ್ನಡತಿಗೆ ಮರಾಠಿ ಸುಂದರಿ ಮೃಣಾಲ್ ಸೆಡ್ಡು ಹೊಡೆದಿದ್ದಾರೆ. ಸದ್ಯದ ಮಟ್ಟಿಗೆ ಶ್ರೀಲೀಲಾಗೆ ಟಕ್ಕರ್ ಕೊಡೋರು ಮೃಣಾಲ್ ಮಾತ್ರ ಅಂತಾ ಸಿನಿ ಪಂಡಿತರು ಚರ್ಚೆ ಮಾಡ್ತಿದ್ದಾರೆ.
`ಅಗ್ನಿಸಾಕ್ಷಿ’ (Agnisakshi) ಮತ್ತು `ಬಿಗ್ ಬಾಸ್’ (Bigg Boss) ಬೆಡಗಿ ವೈಷ್ಣವಿ ಗೌಡ (Vaishnavi Gowda) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮತ್ತೆ ಸನ್ನಿಧಿ ಅಲಿಯಾಸ್ ವೈಷ್ಣವಿ ಗೌಡ ಕಿರುತೆರೆಯತ್ತ ಮುಖ ಮಾಡಿದ್ದಾರೆ. ಹೊಚ್ಚ ಹೊಸ ಪಾತ್ರದ ಮೂಲಕ ಟಿವಿ ಪರದೆಯಲ್ಲಿ ಮಿಂಚಲು ರೆಡಿಯಾಗಿದ್ದಾರೆ.
ಕಿರುತೆರೆಯ ಟಾಪ್ ಒನ್ ಸೀರಿಯಲ್ ಅಗ್ನಿಸಾಕ್ಷಿ ನಾಯಕಿಯಾಗಿ ಮೋಡಿ ಮಾಡಿದ್ದರು. ಬಳಿಕ ಬಿಗ್ ಬಾಸ್ ಮನೆಗೆ ಲಗ್ಗೆ ಕನ್ನಡಿಗರ ಮನ ಗೆದ್ದಿದ್ದರು. ನಟಿಯ ಅದ್ಭುತ ವ್ಯಕ್ತಿತ್ವವನ್ನ ಕರ್ನಾಟಕದ ಜನತೆ ಮೆಚ್ಚಿಕೊಂಡಿತ್ತು. ಇದೀಗ ಲಾಂಗ್ ಗ್ಯಾಪ್ ನಂತರ `ಸೀತಾರಾಮ’ (Seetharam) ಧಾರಾವಾಹಿ ಮೂಲಕ ನಟಿ ಕಂಬ್ಯಾಕ್ ಮಾಡ್ತಿದ್ದಾರೆ.
ಸ್ವಪ್ನ ಕೃಷ್ಣ ನಿರ್ದೇಶನದ ಸೀತಾರಾಮ ಧಾರಾವಾಹಿಯಲ್ಲಿ ನಾಯಕಿಯಾಗಿ ವೈಷ್ಣವಿ ಎಂಟ್ರಿ ಕೊಡ್ತಿದ್ದಾರೆ. ʻಮಂಗಳಗೌರಿ ಮದುವೆʼ(Mangala Gowri Maduve) ಖ್ಯಾತಿಯ ಗಗನ್‌ಗೆ ಜೋಡಿಯಾಗಿ ನಟಿ ಬರುತ್ತಿದ್ದಾರೆ. ಸಿನಿಮಾ ಮತ್ತು ಸೀರಿಯಲ್ ಎರಡನ್ನ ನಟಿ ಬ್ಯಾಲೆನ್ಸ್ ಮಾಡ್ತಿದ್ದಾರೆ. ಇದು ನಿಜಕ್ಕೂ ವೈಷ್ಣವಿ ಫ್ಯಾನ್ಸ್‌ಗೆ ಡಬಲ್ ನ್ಯೂಸ್ ಎಂದೇ ಹೇಳಬಹುದು. ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಅನಿರುದ್ಧ್-ಅನು ಜೋಡಿ
ಸದ್ಯದಲ್ಲೇ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಲಿದ್ದು, `ಅಗ್ನಿಸಾಕ್ಷಿ’ ನೋಡಿ ಮೆಚ್ಚಿಕೊಂಡಿದ್ದ ಫ್ಯಾನ್ಸ್‌ಗೆ ಸೀತಾರಾಮ ಸೀರಿಯಲ್ ಮೂಲಕ ಕೂಡ ನಟಿ ಅದೆಷ್ಟರ ಮಟ್ಟಿಗೆ ಮೋಡಿ ಮಾಡ್ತಾರೆ ಎಂಬುದನ್ನ ಕಾದುನೋಡಬೇಕಿದೆ.
Live Tv
[brid partner=56869869 player=32851 video=960834 autoplay=true]