Tag: ಸೀಮಂತ ಕಾರ್ಯಕ್ರಮ

  • ಹೆಂಡತಿ ಸೀಮಂತ ಕಾರ್ಯಕ್ರಮಕ್ಕೆ ಊರಿಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಮರಣ

    ಹೆಂಡತಿ ಸೀಮಂತ ಕಾರ್ಯಕ್ರಮಕ್ಕೆ ಊರಿಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಮರಣ

    ಬೆಳಗಾವಿ: ಪತ್ನಿಯ ಸೀಮಂತ ಕಾರ್ಯಕ್ಕೆ ರಜೆಯ ಮೇಲೆ ಬಂದಿದ್ದ ಯೋಧರೊಬ್ಬರು ನಿನ್ನೆ ತಡರಾತ್ರಿ ಬೈಕ್ ಮೇಲೆ ಮರಳುವಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಲಗಾ ಬಳಿಯ ರೈಸ್ ಮಿಲ್ ಹತ್ತಿರ ನಡೆದಿದೆ.

    ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದ ಭಾರತೀಯ ಸೇನೆಯ ಯೋಧ ಪ್ರಕಾಶ್ ಮಡಿವಾಳಪ್ಪ ಸಂಗೊಳ್ಳಿ (28) ಮೃತ ಯೋಧ. ಮಡಿವಾಳಪ್ಪ ಅವರು ಕಳೆದ 9 ವರ್ಷಗಳಿಂದ ಬೆಳಗಾವಿಯ ಮರಾಠಾ ಲೈಟ್ ಇನ್‍ಫೇಂಟರಿ 9ನೇ ರೆಜಿಮೆಂಟ್‍ನಲ್ಲಿ ಸೈನಿಕನಾಗಿ ಬೆಳಗಾವಿಯಲ್ಲಿ ಸೇವೆಯಲ್ಲಿದ್ದರು. ಇದನ್ನೂ ಓದಿ: ಆಂಧ್ರಪ್ರದೇಶದ ಕಾರ್ಖಾನೆಯಲ್ಲಿ ಅನಿಲ ಸೋರಿಕೆ – 200 ಮಹಿಳಾ ಕಾರ್ಮಿಕರು ಅಸ್ವಸ್ಥ

    ಕಳೆದ ಎರಡು ವರ್ಷಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅವರು ಮಗುವಿನ ನಿರೀಕ್ಷೆಯಲ್ಲಿದ್ದರು. ಪತ್ನಿಯ ಸೀಮಂತ ಕಾರ್ಯವನ್ನು ಜೂ. 12ರಂದು ಅದ್ಧೂರಿಯಾಗಿ ಜರುಗಿಸಲು ರಜೆ ಪಡೆದು ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ನಿನ್ನೆ ತಡರಾತ್ರಿ ಬೆಳಗಾವಿಯಿಂದ ಬೈಕ್‍ನಲ್ಲಿ ಬರುತ್ತಿದ್ದ ವೇಳೆ ಹಲಗಾ ಬಳಿಯ ರೈಸ್ ಮಿಲ್ ಹತ್ತಿರ ಅಪರಿಚಿತ ವಾಹನೊಂದು ಡಿಕ್ಕಿ ಹೊಡೆದು ಯೋಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮದ್ವೆಯಾಗಿ 6 ವರ್ಷ ಕಳೆದ್ರೂ ಫಸ್ಟ್ ನೈಟ್ ಆಗಿಲ್ಲ – ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್

    ಸೀಮಂತ ಕಾರ್ಯಕ್ರಮದ ಸಂತೋಷದಲ್ಲಿ ಇರಬೇಕಿದ್ದ ಯೋಧನ ಕುಟುಂಬವಿಗಾ ಕಣ್ಣೀರಿಡುವಂತಾಗಿದೆ. ಇತ್ತ ಯೋಧನ ಪಾರ್ಥಿವ ಶರೀರ ಬೈಲಹೊಂಗಲ ಪಟ್ಟಣದಿಂದ ಗ್ರಾಮಕ್ಕೆ ತೆರಳುವಾಗ ಯೋಧನ ಗೆಳೆಯರು, ಗ್ರಾಮದ ಯುವಕರು ನೂರಾರು ಸಂಖ್ಯೆಯಲ್ಲಿ ಸೇರಿ ಬೈಕ್ ರ್ಯಾಲಿ ಮಾಡುವ ಮೂಲಕ ಗ್ರಾಮಕ್ಕೆ ಕೊಂಡೊಯ್ದರು. ಪ್ರಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ, ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತು.

    ಯೋಧನ ಪತ್ನಿಯ ಆಕ್ರಂದನ ಕಂಡು ಅಂತ್ಯಕ್ರಿಯೆಯಲ್ಲಿ ಸೇರಿದ್ದ ಜನರು ಕೂಡ ಕಣ್ಣೀರು ಹಾಕಿದರು. ಬಳಿಕ ಯೋಧನ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಯೋಧನ ಮನೆ ಮುಂಭಾಗದಲ್ಲಿ ಇರಿಸಿ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

  • ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಗಮನ ಸೆಳೆದ ಸೀಮಂತ ಕಾರ್ಯ

    ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದಲ್ಲಿ ಗಮನ ಸೆಳೆದ ಸೀಮಂತ ಕಾರ್ಯ

    ನೆಲಮಂಗಲ: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಹಳ್ಳಿ ಜನರಲ್ಲಿ ಮತ್ತಷ್ಟು ಆಶಾ ಭಾವನೆ ತುಂಬಿದ್ದು, ಗ್ರಾಮದ ಹಳ್ಳಿಯ ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಮಾಡುವ ಮೂಲಕ ನೆಲಮಂಗಲ ತಹಶಿಲ್ದಾರ್ ಮಂಜುನಾಥ್ ಎಲ್ಲರ ಗಮನ ಸೆಳೆದಿದ್ದಾರೆ. ಇವರ ಜೊತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂದಾಯ ಇಲಾಖೆಯಿಂದ ಪೆÇೀಷಣ್ ಅಭಿಯಾನ ಸಹ ಕೈ ಜೋಡಿಸಿದ್ದು, ಸೀಮಂತ ಕಾರ್ಯಕ್ರಮವನ್ನು ಆರತಿ ಬೆಳಗಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗಿದೆ. ಇದನ್ನೂ ಓದಿ:  ಪಾವಗಡ ಬಳಿಕ ಬೀದರ್‌ನಲ್ಲೂ ಖಾಸಗಿ ಬಸ್ ಪಲ್ಟಿ

    ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಮೆರಗು ಬಂದಿದ್ದು, ತಹಶಿಲ್ದಾರ್ ಮಂಜುನಾಥ್ ಅವರ ಕಾರ್ಯ ಜನರ ಮೆಚ್ಚುಗೆಗೆ ಪಾತ್ರವಾಗಿ ಹಳ್ಳಿಯ ಜನರ ಅಹವಾಲು, ಕುಂದುಕೊರತೆಗಳನ್ನು ಹಾಗೂ ಸಮಸ್ಯೆಯನ್ನು ಬಗೆಯರಿಸುವಲ್ಲಿ ಮುಂದಾಗಿದ್ದಾರೆ.

  • ಗೌಡ್ರ ಕುಟುಂಬದಲ್ಲಿ ಹಬ್ಬದ ಸಂಭ್ರಮ – ನಿಖಿಲ್ ಪತ್ನಿಗೆ ಸೀಮಂತ

    ಗೌಡ್ರ ಕುಟುಂಬದಲ್ಲಿ ಹಬ್ಬದ ಸಂಭ್ರಮ – ನಿಖಿಲ್ ಪತ್ನಿಗೆ ಸೀಮಂತ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತ ಕಾರ್ಯಕ್ರಮ ಇಂದು ನಡೆಯುತ್ತಿದೆ.

    ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಇದೀಗ ಎಂಟು ತಿಂಗಳು ತುಂಬಿದ್ದು, ನಗರದ ಹೆಚ್‍ಎಸ್‍ಆರ್ ಲೇಔಟ್‍ನ ಮಾನ್ವಿ ಕನ್ವೆನ್ಷನ್ ಹಾಲ್‍ನಲ್ಲಿ ಸೀಮಂತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಅಲ್ಲದೇ ಕೊರೊನಾ ಕಾರಣದಿಂದಾಗಿ ಈ ಕಾರ್ಯಕ್ರಮಕ್ಕೆ ಕೇವಲ ಆಪ್ತರು, ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

    nikil

    ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಿಖಿಲ್ ಆಗಾಗ ಪತ್ನಿ ಜೊತೆಗಿರುವ ಕೆಲವೊಂದು ಮುದ್ದಾದ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಸದ್ಯ ಕಳೆದ ವಾರವಷ್ಟೇ ಗಣೇಶ ಹಬ್ಬದಂದು ಪತ್ನಿ ಜೊತೆ ಹಬ್ಬ ಆಚರಿಸಿದ ನಿಖಿಲ್ ಸಂಪ್ರದಾಯಿಕ ಉಡುಗೆಯಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಂಡಿದ್ದರು. ಇದನ್ನೂ ಓದಿ: ನಿಖಿಲ್‍ಗೆ ಗಂಡು ಮಗುವಾಗಲಿದೆ: ವಿನಯ್ ಗುರೂಜಿ

    2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಸೀಮಂತವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇದನ್ನೂ ಓದಿ: ಎಂದಿಗೂ ಮರೆಯಲಾಗದ ದಿನದ ಫೋಟೋ ಹಂಚಿಕೊಂಡ ನಿಖಿಲ್

  • ಎರಡನೇ ಮಗುವನ್ನು ಸ್ವಾಗತಿಸುವ ಸಂಭ್ರಮದಲ್ಲಿ ಬಿ-ಟೌನ್ ಕ್ಯೂಟ್ ಕಪಲ್ಸ್

    ಎರಡನೇ ಮಗುವನ್ನು ಸ್ವಾಗತಿಸುವ ಸಂಭ್ರಮದಲ್ಲಿ ಬಿ-ಟೌನ್ ಕ್ಯೂಟ್ ಕಪಲ್ಸ್

    ಮುಂಬೈ: ಬಿ-ಟೌನ್‍ನ ಕ್ಯೂಟ್ ಜೋಡಿಗಳಾದ ಶಾಹಿದ್ ಕಪೂರ್ ಮತ್ತು ಮೀರಾ ರಜಪೂತ್ ದಂಪತಿ ತಮ್ಮ ಎರಡನೇ ಮಗುವಿನ ಆಗಮನವನ್ನು ಸ್ವಾಗತಿಸುವ ಸಂತಸದಲ್ಲಿದ್ದಾರೆ.

    ಭಾನುವಾರದಂದು ಮೀರಾ ಅವರ ಎರಡನೇ ಸೀಮಂತ ಕಾರ್ಯಕ್ರಮ ನಡೆಯಿತು. ಶಾಹಿದ್ ಕಪೂರ್ ಮುದ್ದಿನ ಪತ್ನಿಯ ಸೀಮಂತ ಕಾರ್ಯಕ್ರಮವನ್ನು ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಿಯ ಗೆಳೆಯರು ಹಾಗೂ ಕುಟುಂಬದವರೊಂದಿಗೆ ಸಂಭ್ರಮಿಸಿದರು. ಪಂಕಜ್ ಕಪೂರ್, ಜಾನ್ವಿ ಕಪೂರ್ ಹಾಗೂ ಇಶಾನ್ ಖಟ್ಟರ್ ಸೇರಿದಂತೆ ಹಲವರು ಸಂಭ್ರಮದಲ್ಲಿ ಭಾಗಿಯಾಗಿದ್ದರು

    ಕಾರ್ಯಕ್ರಮದಲ್ಲಿ ಮೀರಾ ಆಫ್ ಶೋಲ್ಡರ್ ಪೋಲ್ಕಾ ಡಾಟ್ ಡ್ರೆಸ್ ಹಾಗೂ ಶಾಹಿದ್ ಕಪೂರ್ ಫ್ಲಾರಲ್ ಶರ್ಟ್ ಧರಿಸಿ ಕೂಲ್ ಆಗಿ ತಮ್ಮ ಖುಷಿಯನ್ನು ಸಂಭ್ರಮಿಸಿದರು.

    ಶಾಹಿದ್ ಹಾಗೂ ಮೀರಾ ಅವರ ಪುತ್ರಿ ಮಿಶಾ ಕೈಯಲ್ಲಿ `ಹಿರಿಯ ಸಹೋದರಿ’ ಎಂದು ಬರೆದಿದ್ದ ಬಲೂನ್‍ನನ್ನು ಹಿಡಿದು ಪೋಸ್ ಕೊಟ್ಟಿರುವ ಫೋಟೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ದಂಪತಿ ಶೇರ್ ಮಾಡಿದ್ದಾರೆ. ಈ ಮೂಲಕ ದಂಪತಿಯು ತಮ್ಮ ಎರಡನೇ ಮಗುವಿನ ಆಗಮನದ ವಿಷಯವನ್ನು ಅಭಿಮಾನಿಗಳಿಗೆ ಹೊಸ ಬಗೆಯಲ್ಲಿ ತಿಳಿಸಿದ್ದಾರೆ.

    ಶಾಹಿದ್ ಹಾಗೂ ಮೀರಾ 2015ರ ಜುಲೈ 7 ರಂದು ದೆಹಲಿಯಲ್ಲಿ ವಿವಾಹವಾಗಿದ್ದರು. 2016ರ ಆಗಸ್ಟ್ 26 ರಂದು ಅವರ ಮೊದಲ ಮಗವನ್ನು ದಂಪತಿ ಸ್ವಾಗತಿಸಿದ್ದರು. ಹಾಗೆಯೇ ಶಾಹಿದ್ ಹಾಗೂ ಮೀರಾ ಇಬ್ಬರ ಹೆಸರಿನ ಮೊದಲ ಅಕ್ಷರವನ್ನು ಜೋಡಿಸಿ ಅವರ ಮಗಳಿಗೆ ‘ಮಿಶಾ’ ಎಂದು ನಾಮಕರಣ ಮಾಡಿದ್ದರು.

    https://www.instagram.com/p/BlR9pTeFZpS/?taken-by=shahidkapoor

    https://www.instagram.com/p/BlQq31DleoD/?taken-by=bollywood