Tag: ಸೀಮಾ ಹೈದರ್

  • ನಾನು ಭಾರತದ ಸೊಸೆ, ಇಲ್ಲೇ ಇರುತ್ತೇನೆ: ಸೀಮಾ ಹೈದರ್

    ನಾನು ಭಾರತದ ಸೊಸೆ, ಇಲ್ಲೇ ಇರುತ್ತೇನೆ: ಸೀಮಾ ಹೈದರ್

    ಲಕ್ನೋ: ನಾನು ಪಾಕಿಸ್ತಾನದ ಮಗಳಾಗಿದ್ದೆ. ಆದರೆ ಈಗ ನಾನು ಭಾರತದ ಸೊಸೆಯಾಗಿದ್ದೇನೆ ಎಂದು ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಸೀಮಾ ಹೈದರ್ (Seema Haider) ಹೇಳಿದ್ದಾರೆ.

    ಪಹಲ್ಗಾಮ್ ದಾಳಿ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವಾರು ಮಹತ್ವದ ನಿರ್ಧಾರ ಕೈಗೊಂಡಿದೆ. ಅಲ್ಲದೇ 48 ಗಂಟೆಗಳಲ್ಲಿ ಪಾಕ್ ಪ್ರಜೆಗಳು (Pakistan Citizens) ಭಾರತ ಬಿಟ್ಟು ತೊಲಗುವಂತೆ ಸೂಚನೆ ನೀಡಿದೆ. ಈ ಬೆನ್ನಲ್ಲೇ ಪ್ರಿಯಕರನಿಗೋಸ್ಕರ 4 ಮಕ್ಕಳೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಸೀಮಾ ಹೈದರ್ ಮಾತನಾಡಿರುವ ವೀಡಿಯೋವೊಂದು ವೈರಲ್ ಆಗಿದೆ. ಇದನ್ನೂ ಓದಿ: ಲಂಡನ್‌ನಲ್ಲಿ ಭಾರತೀಯರ ಪ್ರತಿಭಟನೆ ವೇಳೆ ಕತ್ತು ಕೊಯ್ಯುವ ಸನ್ನೆ ಮಾಡಿದ ಪಾಕ್ ಅಧಿಕಾರಿ

    ನಾನು ಪಾಕಿಸ್ತಾನಕ್ಕೆ ಹೋಗಲು ಬಯಸುವುದಿಲ್ಲ. ನಾನು ಭಾರತದಲ್ಲಿ ಉಳಿಯಲು ಅವಕಾಶ ನೀಡುವಂತೆ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡುತ್ತೇನೆ. ಸಚಿನ್ ಮೀನಾ ಅವರನ್ನು ಮದುವೆಯಾದ ಬಳಿಕ ನಾನು ಹಿಂದೂ ಧರ್ಮವನ್ನು ಅಳವಡಿಸಿಕೊಂಡಿದ್ದೇನೆ. ನನಗೆ ಭಾರತದಲ್ಲಿಯೇ ಇರಲು ಬಿಡಿ ಎಂದು ಸೀಮಾ ವೀಡಿಯೋದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಇರಾನ್‌ನ ಪೋರ್ಟ್ ಸಿಟಿಯಲ್ಲಿ ಬಾಂಬ್ ಸ್ಫೋಟ – ನಾಲ್ವರು ಸಾವು, 500ಕ್ಕೂ ಹೆಚ್ಚು ಜನರಿಗೆ ಗಾಯ

    ಸೀಮಾ ಇನ್ನು ಮುಂದೆ ಪಾಕಿಸ್ತಾನಿ ಪ್ರಜೆಯಲ್ಲ. ಅವರು ಗ್ರೇಟರ್ ನೋಯ್ಡಾ ನಿವಾಸಿ ಸಚಿನ್ ಮೀನಾ ಅವರನ್ನು ವಿವಾಹವಾಗಿದ್ದಾರೆ. ಅಲ್ಲದೇ ಇತ್ತೀಚಿಗೆ ಮಗುವಿಗೆ ಜನ್ಮ ನೀಡಿದರು. ಅವರ ಪೌರತ್ವ ಈಗ ಅವರ ಭಾರತೀಯ ಪತಿಯೊಂದಿಗೆ ಸಂಪರ್ಕ ಹೊಂದಿದೆ. ಆದ್ದರಿಂದ ಕೇಂದ್ರದ ನಿರ್ದೇಶನವು ಅವರಿಗೆ ಅನ್ವಯಿಸಬಾರದು ಎಂದು ವಕೀಲ ಎಪಿ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್‌ಗೆ ಶೋಕಸಾಗರದ ವಿದಾಯ

    ಸೀಮಾ ಹೈದರ್ ಯಾರು?
    ಪಾಕಿಸ್ತಾನದ ಸಿಂಧ್‌ನ 27 ವರ್ಷದ ಮಹಿಳೆ ಸೀಮಾ ಹೈದರ್ ತನ್ನ ಪ್ರೇಮಕಥೆಯಿಂದಾಗಿ ಸುದ್ದಿಯಾಗಿದ್ದರು. ಕೋವಿಡ್-19 ಸಮಯದಲ್ಲಿ, ಆನ್‌ಲೈನ್ ಗೇಮ್ ಪಬ್‌ಜಿ ಮೂಲಕ ಭಾರತದ 22 ವರ್ಷದ ಸಚಿನ್ ಮೀನಾ ಅವರೊಂದಿಗೆ ಸಂಪರ್ಕ ಬೆಳೆಸಿದ್ದರು. ಅವರ ಸ್ನೇಹ ಬಳಿಕ ಪ್ರೀತಿಗೆ ಮಾರ್ಪಟ್ಟಿತು. ಸೀಮಾ ಮೇ 2023ರಲ್ಲಿ ದುಬೈ ಮತ್ತು ನೇಪಾಳದ ಮೂಲಕ 4 ಮಕ್ಕಳೊಂದಿಗೆ ಭಾರತವನ್ನು ಅಕ್ರಮವಾಗಿ ಪ್ರವೇಶಿಸಿದ್ದರು. ಬಳಿಕ ಪ್ರಿಯಕರ ಸಚಿನ್‌ನನ್ನು ಮದುವೆಯಾಗಿ ಅವರೊಂದಿಗೆ ಗ್ರೇಟರ್ ನೋಯ್ಡಾದಲ್ಲಿ ನೆಲೆಸಿದ್ದಾರೆ. ಇತ್ತೀಚಿಗಷ್ಟೇ ಸಚಿನ್ ಹಾಗೂ ಸೀಮಾ ದಂಪತಿಗೆ ಹೆಣ್ಣು ಮಗು ಜನಿಸಿದೆ. ಇದನ್ನೂ ಓದಿ: ಐಶ್ವರ್ಯ ಗೌಡ ಮನೆ ಮೇಲೆ ಇಡಿ ದಾಳಿ – 2.25 ಕೋಟಿ ನಗದು ಪತ್ತೆ

  • ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾ ಹೈದರ್‌ಗೆ ಹೆಣ್ಣು ಮಗು ಜನನ!

    ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾ ಹೈದರ್‌ಗೆ ಹೆಣ್ಣು ಮಗು ಜನನ!

    ನೋಯ್ಡಾ: ಗೇಮಿಂಗ್ ಆ್ಯಪ್ ಮೂಲಕ ಪರಿಚಯವಾಗಿ, ಸ್ನೇಹ ಪ್ರೀತಿಗೆ ತಿರುಗಿ, ಪ್ರಿಯಕರನಿಗಾಗಿ ಗಂಡನನ್ನು ಬಿಟ್ಟು 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಹೈದರ್ (Seema Haider) ಹೆಣ್ಣು ಮಗುವಿಗೆ (Girl Baby) ಜನ್ಮ ನೀಡಿದ್ದಾರೆ.

    ಗ್ರೇಟರ್ ನೋಯ್ಡಾದಲ್ಲಿರುವ (Greater Noida) ಆಸ್ಪತ್ರೆಯೊಂದರಲ್ಲಿ ಸೀಮಾ ಹೈದರ್ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ದಂಪತಿಯ ವಕೀಲ ಎ.ಪಿ.ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ| ಪೊಲೀಸರ ಕಾರ್ಯಾಚರಣೆ – ಅಕ್ರಮ ಕಬ್ಬಿಣ ಸಾಗಣೆ ದಂಧೆಯಲ್ಲಿ ತೊಡಗಿದ್ದ 6 ಮಂದಿಯ ಬಂಧನ

    ಸೀಮಾ ಹೈದರ್ ಆನ್‌ಲೈನ್ ಗೇಮಿಂಗ್ ಮೂಲಕ ಸಚಿನ್ ಎಂಬುವವರನ್ನು ಭೇಟಿಯಾಗಿದ್ದರು. ಬಳಿಕ ಅವರ ಸ್ನೇಹ ಪ್ರೀತಿಗೆ ಚಿಗುರಿತ್ತು. ಇದನ್ನೂ ಓದಿ: ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ರಾ ಪ್ರಭಾವಿ ಸಚಿವ?- ಸಿಡಿ ರಾಜಕಾರಣಕ್ಕೆ ಕಾಂಗ್ರೆಸ್ ನಾಯಕರ ಆಕ್ರೋಶ

    ಸೀಮಾಗೆ ಆಗಲೇ ಮದುವೆಯಾಗಿ ನಾಲ್ಕು ಮಕ್ಕಳಿದ್ದರು. ಪ್ರೀತಿಸಿದವನಿಗಾಗಿ ಸೀಮಾ ಗಂಡನನ್ನು ಬಿಟ್ಟು ಮಕ್ಕಳನ್ನು ಕರೆದುಕೊಂಡು ಭಾರತಕ್ಕೆ ಬಂದು ಸಚಿನ್ ಮೀನಾರನ್ನು ಮದುವೆಯಾಗಿದ್ದರು. ಕಳೆದ ವರ್ಷ ತಾನು ಗರ್ಭಿಣಿಯಾಗಿರುವ ಬಗ್ಗೆ ಸೀಮಾ ವಿಡಿಯೋ ಮೂಲಕ ಹೇಳಿಕೊಂಡಿದ್ದರು. ಇದನ್ನೂ ಓದಿ: ತುಮಕೂರು| ಜಯಮಂಗಲಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

  • 4 ಮಕ್ಕಳೊಂದಿಗೆ ಪಾಕ್‌ನಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಗರ್ಭಿಣಿ

    4 ಮಕ್ಕಳೊಂದಿಗೆ ಪಾಕ್‌ನಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಗರ್ಭಿಣಿ

    ನೊಯ್ಡಾ: ಪಬ್‌ಜೀ ಗೇಮ್‌ನಲ್ಲಿ ಪರಿಚಯವಾದ ಸ್ನೇಹಿತನನ್ನು ವರಿಸಲು ಪತಿಯನ್ನು ತೊರೆದು ಕಳೆದ ವರ್ಷ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದು, ಗ್ರೇಟರ್ ನೋಯ್ಡಾದಲ್ಲಿ ತನ್ನ ಪ್ರಿಯಕರನೊಂದಿಗೆ ನೆಲೆಸಿರುವ ಪಾಕಿಸ್ತಾನದ ಪ್ರಜೆ ಸೀಮಾ ಹೈದರ್ ಇದೀಗ ಗರ್ಭಿಣಿಯಾಗಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುವ ಸೀಮಾ ಹೈದರ್ ಮತ್ತು ಸಚಿನ್ ಮೀನಾ ಜೋಡಿ ಆಗಾಗ ತಮ್ಮ ವೈಯಕ್ತಿಕ ಜೀವನಕ್ಕೆ ಸಂಬAಧಿಸಿದ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಗರ್ಭಿಣಿಯಾಗಿರುವ ಖುಷಿಯ ವಿಚಾರವನ್ನು ವಿಡಿಯೋ ಮೂಲಕ ತಿಳಿಸಿದ್ದಾರೆ. ಈ ವಿಡಿಯೋದಲ್ಲಿ ಸೀಮಾ ಗರ್ಭಧಾರಣೆಯ ಪರೀಕ್ಷಾ ಕಿಟ್‌ನೊಂದಿಗೆ ಕಾಣಿಸಿಕೊಂಡಿದ್ದು, ಗರ್ಭಿಣಿಯಾಗಿರುವ ಬಗ್ಗೆ ಪತಿ ಸಚಿನ್‌ಗೆ ತಿಳಿಸಿದ್ದಾರೆ. ಇದನ್ನೂ ಓದಿ: INDIA ಕೂಟದ ನಾಯಕತ್ವ ತ್ಯಜಿಸಲು ಕಾಂಗ್ರೆಸ್‌ ಸಜ್ಜಾಗಿರಬೇಕು: ಮಣಿಶಂಕರ್‌ ಅಯ್ಯರ್‌

    ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಕೋಬಾಬಾದ್ ಮೂಲದ ಸೀಮಾ ಹೈದರ್ ಸಂದರ್ಶನವೊಂದರಲ್ಲಿ ‘ತಾನು ಹಿಂದು ಧರ್ಮವನ್ನು ಸ್ವೀಕರಿಸಿದ್ದೇನೆ. ತಾಯ್ನಾಡಿಗೆ (ಪಾಕಿಸ್ತಾನ) ಮರಳಲು ಇಷ್ಟವಿಲ್ಲ. ತನ್ನ ನಾಲ್ಕು ಮಕ್ಕಳು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ’ ಎಂದು ಹೇಳಿದ್ದರು. ಭಾರತೀಯ ಪೌರತ್ವವನ್ನು ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಹಿಂದೆ ಪತ್ರ ಬರೆದಿದ್ದರು. ಇದನ್ನೂ ಓದಿ: ಶಿರಾಡಿಯಲ್ಲಿ ಸುರಂಗ ಮಾರ್ಗ – ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ

    ಭಾರತೀಯ ಪ್ರಜೆ ಸಚಿನ್ ಮೀನಾ ಹಾಗೂ ಸೀಮಾ ಹೈದರ್ 2019ರಲ್ಲಿ ಪಬ್‌ಜಿ ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್ ಮೂಲಕ ಪರಿಚಯವಾಗಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೀತಿ ಬೆಳೆದಿದೆ. ಕೊನೆಗೆ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಹೀಗಾಗಿ ಸೀಮಾ ಹೈದರ್ ಗಂಡ ಗುಲಾಮ್ ಹೈದರ್‌ನನ್ನು ತೊರೆದು ತನ್ನ ನಾಲ್ಕು ಮಕ್ಕಳೊಂದಿಗೆ ಮೇ 2023ರಲ್ಲಿ ಪಾಕಿಸ್ತಾನದ ತಮ್ಮ ಕರಾಚಿ ನಿವಾಸದಿಂದ ನೇಪಾಳಕ್ಕೆ ತೆರಳಿ, ಅಲ್ಲಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದರು. ಇದನ್ನೂ ಓದಿ: ನಾನು ಹೆದರೋದು ಇಲ್ಲ, ಹೆಬ್ಬಾಳ್ಕರ್ ಕ್ಷಮೆಯ ಅಗತ್ಯವೂ ಇಲ್ಲ: ಸಿ.ಟಿ. ರವಿ

    ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ಸೀಮಾ ಹೈದರ್ ಹಾಗೂ ಸಚಿನ್ ಮೀನಾ ನೇಪಾಳದ ಪಶುಪತಿನಾಥ ದೇವಾಲಯದಲ್ಲಿ ಮದುವೆಯಾಗಿದ್ದರು. ಮತಾಂತರದ ಬಳಿಕ ಎಂಟು ವರ್ಷದ ಮಗ ಫರ್ಹಾನ್ ಅಲಿಯನ್ನು ರಾಜ್ ಎಂದು ಮರುನಾಮಕರಣ ಮಾಡಿದ್ದರು. ಮೂವರು ಪುತ್ರಿಯರಾದ ಫರ್ವಾ, ಫರಿಹಾ ಬಟೂಲ್, ಹಾಗೂ ಫರ್ಹಾ ಅವರಿಗೆ ಕ್ರಮವಾಗಿ ಪ್ರಿಯಾಂಕಾ, ಮುನ್ನಿ ಹಾಗೂ ಪರಿ ಎಂದು ಹೆಸರು ಬದಲಾಯಿಸಿದ್ದರು. ಇದನ್ನೂ ಓದಿ: ಅಕ್ರಮ ಮದ್ಯ ಮಾರಾಟವನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ – ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು

  • CAA ಸ್ವಾಗತಿಸಿ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಸೀಮಾ ಹೈದರ್‌

    ನೋಯ್ಡಾ: ಕಳೆದ ವರ್ಷ ತನ್ನ ನಾಲ್ವರು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿ ಈಗ ಗ್ರೇಟರ್ ನೋಯ್ಡಾದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆ ಸೀಮಾ ಹೈದರ್ ಪೌರತ್ವ ತಿದ್ದುಪಡಿ ಕಾಯ್ದೆ (CAA)ಯನ್ನು ಸ್ವಾಗತಿಸಿದ್ದಾರೆ.

    ಹಿಂದೂ ಧರ್ಮವನ್ನು ಅಳವಡಿಸಿಕೊಂಡಿದ್ದೇನೆ ಮತ್ತು ಗ್ರೇಟರ್ ನೋಯ್ಡಾ ನಿವಾಸಿ ಸಚಿನ್ ಮೀನಾ (Sachin Meena) ಅವರನ್ನು ವಿವಾಹವಾದರು ಎಂದು ಹೇಳಿಕೊಳ್ಳುವ ಹೈದರ್, ಈ ನಿರ್ಧಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಶ್ಲಾಘಿಸಿದರು. ಭಾರತೀಯ ಪೌರತ್ವವನ್ನು ಪಡೆಯಲು ಸಿಎಎ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

    ಭಾರತ ಸರ್ಕಾರವು ಇಂದು ನಮ್ಮ ದೇಶದಲ್ಲಿ ಸಿಎಎಯನ್ನು ಜಾರಿಗೆ ತಂದಿದೆ. ಈ ಕುರಿತು ನಮಗೆ ತುಂಬಾ ಸಂತೋಷವಾಗಿದೆ. ಈ ಹಿನ್ನೆಲೆಯಲ್ಲಿ ನಾನು ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಯನ್ನು ಈಡೇರಿಸಿದ್ದಾರೆ. ಹೀಗಾಗಿ ನನ್ನ ಜೀವನದುದ್ದಕ್ಕೂ ಅವರಿಗೆ ಋಣಿಯಾಗಿರುತ್ತೇನೆ ಎಂದ ಸೀಮಾ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

    2014 ರ ಡಿಸೆಂಬರ್‌ 31 ರ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆಹಚ್ಚಲು ಜಾರಿಗೆ ತಂದಿರುವ CAA ಯ ನೇರ ಫಲಾನುಭವಿ  ಸೀಮಾ  ಹೈದರ್ (Seema  Haider) ಆಗುವುದಿಲ್ಲ .

  • ಸಚಿನ್‌ ಜೊತೆ ಮೊದಲ ಮಗುವಿನ ನಿರೀಕ್ಷೆಯಲ್ಲಿ 4 ಮಕ್ಕಳ ತಾಯಿ ಸೀಮಾ ಹೈದರ್

    ಸಚಿನ್‌ ಜೊತೆ ಮೊದಲ ಮಗುವಿನ ನಿರೀಕ್ಷೆಯಲ್ಲಿ 4 ಮಕ್ಕಳ ತಾಯಿ ಸೀಮಾ ಹೈದರ್

    ನೋಯ್ಡಾ: ಭಾರತದ ಪ್ರಿಯತಮ ಸಚಿನ್‌ ಮೀನಾಗೋಸ್ಕರ (Sachin Meena), ಪಾಕಿಸ್ತಾನದಿಂದ (Pakistan) ಅಕ್ರಮವಾಗಿ ಬಂದಿರುವ ನಾಲ್ಕು ಮಕ್ಕಳ ತಾಯಿ ಸೀಮಾ ಹೈದರ್ (Seema Haider) ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾಳೆ.

    ಸಚಿನ್‌ ಹಾಗೂ ಸೀಮಾ ದಂಪತಿ ಸದ್ಯ ಗ್ರೇಟರ್‌ ನೊಯ್ಡಾದಲ್ಲಿ ವಾಸವಾಗಿದ್ದಾರೆ. ಇದೀಗ ಇವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂಬಂಧ ಸ್ವತಃ ಸೀಮಾ ಹೈದರ್‌ ಬಹಿರಂಗಪಡಿಸಿದ್ದಾಳೆ. ಶೀಘ್ರವೇ ನಾನು ತಾಯಿಯಾಗಲಿದ್ದೇನೆ. ಈ ಮೂಲಕ 2024 ರಲ್ಲಿ ಹೊಸ ಸುದ್ದಿಯನ್ನು ಕೊಡಲಿರುವುದಾಗಿ ತಿಳಿಸಿದ್ದಾಳೆ. ಇನ್ನು ಸಚಿನ್ ತಂದೆ ನನ್ನ ಕೈ ನೋಡಿದ್ದು, ಗಂಡು ಮಗುವಿಗೆ ಜನ್ಮ ನೀಡುವುದಾಗಿ ಭವಿಷ್ಯ ನುಡಿದಿದ್ದಾರೆ ಅಂತಾನೂ ಹೇಳಿದ್ದಾಳೆ.

    ಸಚಿನ್‌ ಹುಟ್ಟುಹಬ್ಬ ಕೂಡ ಹತ್ತಿರವಾಗುತ್ತಿದ್ದು, ಕುಟುಂಬಕ್ಕೆ ಹೊಸ ಸದಸ್ಯರು ಬಂದರೆ ಸಂತಸ ಇಮ್ಮಡಿಗೊಳ್ಳುತ್ತದೆ ಎಂದಿದ್ದಾಳೆ. ಇದೇ ವೇಳೆ ಮಾಧ್ಯಮದವರು ಡೆಲಿವರಿ ಯಾವಾಗ ಎಂದು ಕೇಳಿದಾಗ, ಇನ್ನೂ ಸ್ವಲ್ಪ ದಿನ ಕಾಯಬೇಕಾಗುತ್ತದೆ ಎಂದು ಸೀಮಾ ಹೇಳಿದ್ದಾಳೆ. ಇದನ್ನೂ ಓದಿ: ಇಂಡಿಯಾ- ಪಾಕ್ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು- ಉತ್ತರ ಪತ್ರಿಕೆ ಫುಲ್ ವೈರಲ್

    2019ರಲ್ಲಿ ಆನ್‌ಲೈನ್‌ ಗೇಮ್‌ PUBG ಮೂಲಕ ಸೀಮಾ ಹೈದರ್‌ ಹಾಗೂ ಸಚಿನ್‌ ನಡುವೆ ಸ್ನೇಹ ಬೆಳೆದಿದೆ. ಈ ಸ್ನೇಹ ಪ್ರೀತಿಗೆ ತಿರುಗಿದ್ದು, 2023ರ ಮೇ ತಿಂಗಳಲ್ಲಿ ಸೀಮಾ ತನ್ನ ಪ್ರಿಯತಮ ಸಚಿನ್‌ ನನ್ನು ಹುಡುಕಿಕೊಂಡು ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದಾಳೆ. ಭಾರತಕ್ಕೂ ಬರುವ ಮುನ್ನ ಸೀಮಾ ಹಾಗೂ ಸಚಿನ್‌ ನೇಪಾಳದಲ್ಲಿ ಪರಸ್ಪರ ಭೇಟಿಯಾಗಿದ್ದಾರೆ.

    ಸೀಮಾ ಮತ್ತು ಸಚಿನ್ ಅವರನ್ನು ಪಾಕಿಸ್ತಾನಿ ಗೂಢಚಾರಿಕೆ ಎಂದು ಶಂಕಿಸಿ ಉತ್ತರ ಪ್ರದೇಶ ಪೊಲೀಸರು ಕಳೆದ ವರ್ಷ ಜುಲೈನಲ್ಲಿ ಬಂಧಿಸಿದ್ದರು. ಬಳಿಕ ಕೆಲವೊಂದಷ್ಟು ಷರತ್ತಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಯಿತು. ಇದಾದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕ್ಷಮಾದಾನ ಮನವಿಯನ್ನು ಸಲ್ಲಿಸಿದ್ದಳು. ಅದರಲ್ಲಿ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ತನ್ನ ಮಕ್ಕಳೊಂದಿಗೆ ವಾಸಿಸಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಳು.

    ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ನಿವಾಸಿ ಸೀಮಾ, ಪಾಕ್‌ ಪ್ರಜೆ ಗುಲಾಮ್ ಹೈದರ್ ನನ್ನು ವಿವಾಹವಾಗಿದ್ದಳು. 2019 ರವರೆಗೆ ಕರಾಚಿಯಲ್ಲಿ ವಾಸವಾಗಿದ್ದ ದಂಪತಿ ಬಳಿಕ ಪತಿ ಗುಲಾಮ್ ಕೆಲಸದ ನಿಮಿತ್ತ ಸೌದಿ ಅರೇಬಿಯಾಕ್ಕೆ ತೆರಳಿದ್ದಾನೆ. ಈ ದಂಪತಿಗೆ ನಾಲ್ಕು ಜನ ಮಕ್ಕಳಿದ್ದು, ಮೊದಲ ಮಗುವಿನ ವಯಸ್ಸು 8 ವರ್ಷವಾಗಿದೆ. ಇದೀಗ ಸೀಮಾ ಮತ್ತೆ ತನ್ನ ಪ್ರಿಯಕರ ಸಚಿನ್‌ ಜೊತೆ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾಳೆ.

  • ಇಂಡಿಯಾ- ಪಾಕ್ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು-  ಉತ್ತರ ಪತ್ರಿಕೆ ಫುಲ್ ವೈರಲ್

    ಇಂಡಿಯಾ- ಪಾಕ್ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು- ಉತ್ತರ ಪತ್ರಿಕೆ ಫುಲ್ ವೈರಲ್

    ಜೈಪುರ: ಕೆಲ ತಿಂಗಳ ಹಿಂದೆ ಸೀಮಾ ಹೈದರ್ (Seema Haider) ಎನ್ನುವ ಹೆಸರು ಭಾರೀ ಸುದ್ದಿಯಲ್ಲಿತ್ತು. ತನ್ನ ಪ್ರೇಮಿ ಸಚಿನ್‍ಗಾಗಿ ಪಾಕಿಸ್ತಾನದಿಂದ (Pakistan) ಭಾರತಕ್ಕೆ ಬಂದಿರುವ ಸೀಮಾ ಹೈದರ್ ಸಾಕಷ್ಟು ಗಮನ ಸೆಳೆದಿದ್ದಳು. ಆದರೆ ಈ ಬಾರಿ ಅವರಿಬ್ಬರ ಪ್ರಕರಣ ಅಲ್ಲ ಬದಲಾಗಿ ಸೆಕೆಂಡ್ ಪಿಯುಸಿಯ ಪ್ರಶ್ನೆ ಪತ್ರಿಕೆಯಿಂದಾಗಿ ಸುದ್ದಿಯಾಗಿದ್ದಾಳೆ.

    ಹೌದು. 12ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಉತ್ತರ ಪತ್ರಿಕೆಯಲ್ಲಿ ಬರೆದಿರುವ ಕುತೂಹಲಕಾರಿ ವಿಚಾರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್ ವೈರಲ್ ಆಗುತ್ತಿದೆ. ರಾಜಸ್ಥಾನದ (Rajasthan) ಧೋಲ್ಪುರ್ ಜಿಲ್ಲೆಯ ಬಸೇರಿಯಲ್ಲಿರುವ ಬಗ್ತಾರ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಉತ್ತರ ಪತ್ರಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದೇನೆ ಭಾರತದಲ್ಲೇ ಇರಲು ಅವಕಾಶ ಕೊಡಿ – ರಾಷ್ಟ್ರಪತಿಗೆ ಸೀಮಾ ಹೈದರ್‌ ಪತ್ರ

    ಪ್ರಶ್ನೆ- ಉತ್ತರ ಏನು..?: ರಾಜ್ಯಶಾಸ್ತ್ರ ಪ್ರಶ್ನೆ ಪತ್ರಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಗಡಿ ಮತ್ತು ಅದರ ಉದ್ದದ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ವಿದ್ಯಾರ್ಥಿ ನೀಡಿರುವ ಉತ್ತರ ಎಲ್ಲರ ಗಮನಸೆಳೆದಿದೆ. ಅಲ್ಲದೆ ವಿದ್ಯಾರ್ಥಿಯ ಉತ್ತರ ಪತ್ರಿಕೆಯನ್ನು ನೋಡಿದ ಶಿಕ್ಷಕರೇ ಒಂದು ಬಾರಿ ದಂಗಾಗಿ ಹೋಗಿದ್ದಾರಂತೆ. ಭಾರತ ಮತ್ತು ಪಾಕಿಸ್ತಾನದ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು ಎಂದು ವಿದ್ಯಾರ್ಥಿ ಉತ್ತರ ಪತ್ರಿಕೆಯಲ್ಲಿ ಬರೆದಿದ್ದಾನೆ. ಸದ್ಯ ಈ ಉತ್ತರ ಪತ್ರಿಕೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟ್ರೆಂಡಿಂಗ್ ಆಗಿದೆ.

    ಪಾಕಿಸ್ತಾನಿ ಪ್ರಜೆಯಾಗಿರುವ ಸೀಮಾ ಹೈದರ್ ಕಳೆದ ತಿಂಗಳಷ್ಟೇ ಭಾರತೀಯ ಪತಿ ಸಚಿನ್ ಜೊತೆ ತನ್ನ ಮೊದಲ ‘ಕರ್ವಾ ಚೌತ್’ ಅನ್ನು ಆಚರಿಸಿ ಸುದ್ದಿಯಲ್ಲಿದ್ದಳು. ಈ ಹಿಂದೆ ಸೀಮಾ ಅವರು ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಭಾರತದ ಧ್ವಜಾರೋಹಣ ಮಾಡಿ ಸುದ್ದಿ ಮಾಡಿದ್ದಳು.

    ಪಾಕಿಸ್ತಾನದ ಸಿಂಧ್ ಪ್ರ್ಯಾಂತದ ನಿವಾಸಿಯಾಗಿರುವ ಸೀಮಾ ಹೈದರ್ ನೇಪಾಳದ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿ ತಾನು ತನ್ನ ಧರ್ಮವನ್ನು ಪರಿವರ್ತಿಸಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸದ್ಯ ಈಕೆ ಸನಾತನ ಧರ್ಮವನ್ನು ಅನುಸರಿಸುತ್ತಿದ್ದಾಳೆ. ಅಲ್ಲದೇ ಈಕೆ ತನ್ನ ಮಕ್ಕಳ ಹೆಸರನ್ನೂ ಬದಲಾಯಿಸಿದ್ದಾಳೆ. ಪಾಕಿಸ್ತಾನಿ ಪ್ರಜೆ ತನ್ನ ಗೆಳೆಯ ಸಚಿನ್ ಮೀನಾ ಜೊತೆ ಗ್ರೇಟರ್ ನೋಯ್ಡಾದಲ್ಲಿ ಇರಲು ಮೇ ತಿಂಗಳಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದ ನಂತರ ಸುದ್ದಿ ಮಾಡಿದಳು.

  • ಗಂಡನಿಗೆ ದೀರ್ಘಾಯುಷ್ಯ ಸಿಗಲೆಂದು ಪ್ರಾರ್ಥಿಸುವ ಹಬ್ಬಕ್ಕೆ ಮನೆಗೆ ಬಾರದ ಪತ್ನಿ – ಪತಿ ನೇಣಿಗೆ ಶರಣು

    ಗಂಡನಿಗೆ ದೀರ್ಘಾಯುಷ್ಯ ಸಿಗಲೆಂದು ಪ್ರಾರ್ಥಿಸುವ ಹಬ್ಬಕ್ಕೆ ಮನೆಗೆ ಬಾರದ ಪತ್ನಿ – ಪತಿ ನೇಣಿಗೆ ಶರಣು

    ಲಕ್ನೋ: ತವರಿಗೆ ಹೋಗಿದ್ದ ಪತ್ನಿ ಕರ್ವಾ ಚೌತ್‌ (Karwa Chauth) ಉಪವಾಸದ ಹಬ್ಬಕ್ಕೆ ಮನೆಗೆ ಬಾರದೇ ಇದ್ದುದ್ದಕ್ಕೆ ಅಸಮಾಧಾನಗೊಂಡ 24 ವರ್ಷದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಉತ್ತರ ಪ್ರದೇಶದ ಭೂತಾ ಪೊಲೀಸ್ ಠಾಣಾ (Bhuta Police Station) ವ್ಯಾಪ್ತಿಯ ಗುಗಾ ಗ್ರಾಮದ ನಿವಾಸಿ ಪ್ರಮೋದ್ ಕುಮಾರ್ (24) ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಮಿ ಬೆಂಕಿ ಬೌಲಿಂಗ್‌ಗೆ ನೀಲಿ ತಾರೆ ಫಿದಾ – ಕೇಂದ್ರ ಲಸ್ಟ್‌ ರಿಯಾಕ್ಷನ್‌ ಸಿಕ್ಕಾಪಟ್ಟೆ ವೈರಲ್‌

    ಪ್ರಮೋದ್‌ ಪತ್ನಿ ಪ್ರೀತಿ (Love) ಎರಡು ತಿಂಗಳ ಹಿಂದೆ ತನ್ನ ತಾಯಿಯ ಮನೆಗೆ ಹೋಗಿದ್ದಳು. ಆದ್ರೆ ಕರ್ವಾ ಚೌತ್‌ ಪ್ರಮುಖ ಉಪವಾಸದ ಹಬ್ಬ. ಅಂದು ಮಹಿಳೆಯರು ಉಪವಾಸದ ವ್ರತ ಮಾಡಿ ಗಂಡನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾರೆ. ಆದ್ರೆ ಹಬ್ಬದಂದು ಪತ್ನಿ ಮನೆಗೆ ಬಂದಿಲ್ಲ ಎಂದು ಪ್ರಮೋದ್‌ ಅಸಮಾಧಾನಗೊಂಡಿದ್ದ ಎಂದು ಅಜ್ಜ ಬಾಬುರಾಮ್ ತಿಳಿಸಿದ್ದಾರೆ. ಇದನ್ನೂ ಓದಿ: World Cup 2023: ಮತ್ತೆ ಶತಕ ಮಿಸ್‌ – ಕ್ಯಾಬಿನ್‌ನಲ್ಲಿ ಕುಳಿತು ಕಣ್ಣೀರಿಟ್ಟ ಕೊಹ್ಲಿ

    ಬುಧವಾರವೂ ಹೆಂಡತಿಯನ್ನು ಮನೆಗೆ ಕಳುಹಿಸಿಕೊಡುವಂತೆ ಅತ್ತೆಯೊಂದಿಗೆ ಫೋನ್‌ನಲ್ಲಿ ಜಗಳವಾಡಿದ್ದ. ಗುರುವಾರ ಬೆಳಗ್ಗೆ ನೋಡುವಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮರುದಿನ ಬೆಳಗ್ಗೆ ತುಂಬಾ ಹೊತ್ತಾದರೂ ಪ್ರಮೋದ್‌ ತನ್ನ ರೂಮ್‌ನಿಂದ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಕುಟುಂಬಸ್ಥರು ರೂಮ್‌ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: World Cup 2023: ಲಂಕಾಗೆ ಬೆಂಕಿ ಹಚ್ಚಿ ನಂ.1 ಪಟ್ಟಕ್ಕೇರಿದ ಶಮಿ

    ಬುಧವಾರ ದೇಶದ ವಿವಿಧ ರಾಜ್ಯಗಳಲ್ಲಿ ಆಚರಿಸಿದ ಕರ್ವಾ ಚೌತ್‌ ಹಬ್ಬದಲ್ಲಿ ಗಂಡನ ಸುರಕ್ಷತೆ ಮತ್ತು ದೀರ್ಘಾಯುಷ್ಯಕ್ಕಾಗಿ ಸೂರ್ಯೋದಯದಿಂದ ಚಂದ್ರೋದಯದವರೆಗೆ ಮಹಿಳೆಯರು ಉಪವಾಸ ಆಚರಿಸಿದ್ದರು. ಭಾರತದ ಪಬ್ಜಿ ಪ್ರೇಮಿಗಾಗಿ ದೇಶಕ್ಕೆ ಅಕ್ರಮ ಪ್ರವೇಶ ಮಾಡಿರುವ ಸೀಮಾ ಹೈದರ್‌ ಕೂಡ ಈ ಹಬ್ಬವನ್ನು ಸಂಪ್ರದಾಯದಂತೆ ಆಚರಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ರಾ’ ಏಜೆಂಟ್ ಆಗಿ ಬಾಲಿವುಡ್ ಪ್ರವೇಶ ಮಾಡಲಿದ್ದಾರೆ ‘ಪಾಕ್ ಪ್ರೇಮಿ’ ಸೀಮಾ

    ‘ರಾ’ ಏಜೆಂಟ್ ಆಗಿ ಬಾಲಿವುಡ್ ಪ್ರವೇಶ ಮಾಡಲಿದ್ದಾರೆ ‘ಪಾಕ್ ಪ್ರೇಮಿ’ ಸೀಮಾ

    ಭಾರತದಲ್ಲಿರುವ ಪ್ರಿಯತಮನಿಗಾಗಿ ನಾಲ್ಕು ಮಕ್ಕಳೊಂದಿಗೆ ಪಾಕ್ ನಿಂದ ಬಂದಿರುವ ಸೀಮಾ ಹೈದರ್ (Seema Haider) ಇದೀಗ ಬಾಲಿವುಡ್ ಪ್ರವೇಶ ಮಾಡಲು ಮುಂದಾಗಿದ್ದಾರೆ. ಕಷ್ಟದಲ್ಲಿರುವ ಸೀಮಾ ದಂಪತಿಗೆ ನೆರವಾಗಲು ಜಾನಿ ಫೈರ್ ಫಾಕ್ಸ್ ನಿರ್ಮಾಣ ಸಂಸ್ಥೆಯು ಸೀಮಾಗೆ ಪಾತ್ರ ನೀಡಲು ಮುಂದಾಗಿದೆ. ಆ ಸಿನಿಮಾದಲ್ಲಿ ಸೀಮಾಗೆ ರಾ ಏಜೆಂಟ್ ಪಾತ್ರವನ್ನು ನೀಡಲಾಗುತ್ತಿದೆ.

    ಜಾನಿ ಫೈರ್ ಫಾಕ್ಸ್ ನಿರ್ಮಾಣ ಸಂಸ್ಥೆಯಿಂದ ತಯಾರಾಗುತ್ತಿರುವ ‘ಎ ಟೈಲರ್ ಮರ್ಡರ್ ಸ್ಟೋರಿ’ ಚಿತ್ರದಲ್ಲಿ ರಾ ಏಜೆಂಟ್ (Raw Agent) ಪಾತ್ರವಿದ್ದು, ಅದನ್ನು ಸೀಮಾ ಹೈದರ್ ಮಾಡಲಿದ್ದಾರೆ ಎಂದು ನಿರ್ಮಾಪಕ ಅಮಿತ್ ಜಾನಿ ಹೇಳಿಕೊಂಡಿದ್ದಾರೆ. ಈಗಾಗಲೇ ಪ್ರೇಮಿಗಳಾದ ಸಚಿನ್ ಮೀನಾ (Sachin Meena) ಮತ್ತು ಸೀಮಾ ಹೈದರ್ ಅವರನ್ನು ಸಂಪರ್ಕಿಸಿದ್ದಾರೆ. ಇದನ್ನೂ ಓದಿ:ಮಗಳು ಐಶ್ವರ್ಯಾ ಚಿತ್ರಕ್ಕೆ ಅರ್ಜುನ್ ಸರ್ಜಾ ಆ್ಯಕ್ಷನ್ ಕಟ್

    ಸಚಿನ್ ಮತ್ತು ಸೀಮಾ ಅವರನ್ನು ಸಂಪರ್ಕಿಸಲಾಗಿದೆ. ಪಾತ್ರದ ಬಗ್ಗೆಯೂ ವಿವರಿಸಿದ್ದೇವೆ. ಅದೊಂದು ಔಪಚಾರಿಕೆ ಭೇಟಿಯಾಗಿತ್ತು. ಪಾತ್ರದ ಕುರಿತಾಗಿ ಆಡಿಷನ್ ಮಾಡುವಂತೆಯೂ ಹೇಳಲಾಗಿದೆ. ಸೆಪ್ಟೆಂಬರ್ ನಲ್ಲಿ ಚಿತ್ರೀಕರಣ ನಡೆಯಲಿದೆ. ಈ ಸಿನಿಮಾದ ಶೂಟಿಂಗ್ ಬಹುತೇಕ ಉತ್ತರ ಪ್ರದೇಶದಲ್ಲಿ ನಡೆಯಲಿದೆ ಎಂದಿದ್ದಾರೆ ನಿರ್ಮಾಪಕರು.

     

    ಸೀಮಾ ಭಾರತಕ್ಕೆ ಬಂದಾಗ ಆಕೆಯನ್ನು ಪಾಕಿಸ್ತಾನದ ಐ.ಎಸ್.ಐ ಏಜೆಂಟ್ ಇರಬಹುದು ಎಂದು ಶಂಕಿಸಲಾಗಿತ್ತು. ಈಗಲೂ ಆ ಕುರಿತು ತನಿಖೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬಾಲಿವುಡ್ (Bollywood) ಆಕೆಗೆ ನಟಿಸಲು ಅವಕಾಶ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಬಂದ ಮಹಿಳೆ ಸೀಮಾಗೆ ಬಾಲಿವುಡ್ ನಿಂದ ಆಫರ್

    ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಬಂದ ಮಹಿಳೆ ಸೀಮಾಗೆ ಬಾಲಿವುಡ್ ನಿಂದ ಆಫರ್

    ಪಬ್‌ಜಿ (PUBG) ಪ್ರಿಯಕರನಿಗಾಗಿ ಅಕ್ರಮವಾಗಿ ಭಾರತವನ್ನು ಪ್ರವೇಶಿಸಿರುವ ಪಾಕಿಸ್ತಾನಿ (Pakistan) ಮಹಿಳೆ ಸೀಮಾ ಹೈದರ್‌ (Seema Haider) ಮತ್ತು ಪ್ರಿಯಕರ ಸಚಿನ್ ಮೀನಾ (Sachin Meena) ಹಲವು ದಿನಗಳಿಂದ ಆರ್ಥಿಕ ಸಂಕಷ್ಟದಲ್ಲಿ ಬಳಲುತ್ತಿದ್ದಾರೆ. ತಮಗೆ ಜೀವನ ಮಾಡುವುದಕ್ಕೆ ಆಗುತ್ತಿಲ್ಲವೆಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದನ್ನು ಕೇಳಿಸಿಕೊಂಡಿರುವ ಬಾಲಿವುಡ್ (Bollywood) ನಿರ್ಮಾಪಕ ಅಮಿತ್ ಜಾನಿ ಸಿನಿಮಾ ಮಾಡಲು ಮುಂದಾಗಿದ್ದಾರೆ. ಮತ್ತೋರ್ವ ನಟರು ವಾರ್ಷಿಕ 6 ಲಕ್ಷ ರೂಪಾಯಿ ನೀಡಿ ಕೆಲಸ ಕೊಡುವುದಾಗಿ ಹೇಳಿದ್ದಾರೆ.

    ಸೀಮಾ ಹೈದರ್ ಅಕ್ರಮವಾಗಿ ಪ್ರವೇಶ ಮಾಡಿರುವ ವಿಚಾರ ಭಾರೀ ಸುದ್ದಿ ಮಾಡಿದೆ. ಅವರ ಹಿನ್ನೆಲೆಯನ್ನು ಎಲ್ಲಾ ಮೂಲದಿಂದಲೇ ಪತ್ತೆ ಮಾಡಲಾಗುತ್ತಿದೆ. ಜೊತೆಗೆ ಅವರ ಕಾಂಟ್ಯಾಕ್ಟ್ ನಲ್ಲಿ ಇರುವವರನ್ನೂ ವಿಚಾರಣೆ ಮಾಡಲಾಗುತ್ತಿದೆ. ಈ ಮಧ್ಯೆ ಸೀಮಾ ತಾವು ಭಾರತದಲ್ಲೇ ಉಳಿಯಲು ಅವಕಾಶ ನೀಡುವಂತೆ ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾರೆ.

    ತಾನು ಎಂದೂ ಕಾಣದ ಪ್ರೀತಿಯನ್ನು ನನ್ನ ಪತಿ ಸಚಿನ್‌ ಮೀನಾ ಹಾಗೂ ಅವರ ತಂದೆ-ತಾಯಿಯಿಂದ ಕಂಡಿದ್ದೇನೆ. ತನ್ನ ನಾಲ್ವರು ಮಕ್ಕಳೊಂದಿಗೆ ಭಾರತದಲ್ಲೇ ಉಳಿಯಲು ಅವಕಾಶ ನೀಡಬೇಕು ಎಂದು ರಾಷ್ಟ್ರಪತಿ ಅವರಿಂದ ಮೌಖಿಕ ವಿಚಾರಣೆಗೆ ಒತ್ತಾಯಿಸಿದ್ದಾರೆ. ಸೀಮಾ ಹೈದರ್‌ ಪರ ವಕೀಲ ಎ.ಪಿ ಸಿಂಗ್‌ ಸಲ್ಲಿಸಿದ 38 ಪುಟಗಳ ಅರ್ಜಿಯಲ್ಲಿ ಅನೇಕ ಬಾಲಿವುಡ್‌ ನಟ-ನಟಿಯರನ್ನ ಉದಾಹರಣೆಯಾಗಿ ನೀಡಿದ್ದಾರೆ. ಇದನ್ನೂ ಓದಿ:ಈ ನಟಿಯರಿಂದ ರಶ್ಮಿಕಾ, ಪೂಜಾ ಹೆಗ್ಡೆ, ಕೃತಿ ಶೆಟ್ಟಿ ಆಫರ್‌ಗೆ ಬಿತ್ತು ಕತ್ತರಿ

    ಭಾರತದ ಸಂಸ್ಕೃತಿಯ ಉದ್ದೇಶ ವಸುದೈವ ಕುಟುಂಬಕಂ (ಜಗತ್ತು ಒಂದೇ ಕುಟುಂಬ) ಎಂಬಂತೆ ತನ್ನನ್ನು ಗಂಡನ ಮನೆಯಲ್ಲೇ ಉಳಿಯಲು ಅವಕಾಶ ಮಾಡಿಕೊಡಬೇಕು. ಸೀಮಾ ಮದುವೆಯಾಗುವುದಕ್ಕೂ ಮುನ್ನವೇ ಸ್ವಇಚ್ಛೆಯಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಅರ್ಜಿದಾರರಿಗೆ ಭಾರತಕ್ಕೆ ಬರಲು ವೀಸಾ ಸಿಕ್ಕಿಲ್ಲದಿದ್ದರಿಂದ ನೇಪಾಳ ವೀಸಾ ತೆಗೆದುಕೊಂಡು ಭಾರತಕ್ಕೆ ಬಂದಿದ್ದಾರೆ. ಇಸ್ಲಾಂ ಧರ್ಮವನ್ನ ತೊರೆದಿದ್ದಾರೆ. ಕಠ್ಮಂಡುವಿನ ಪವಿತ್ರ ದೇವಾಲಯ ಭಗವಾನ್ ಪಶುಪತಿ ನಾಥ ಮಂದಿರದಲ್ಲಿ ಹಿಂದೂ ವಿಧಿ ವಿಧಾನಗಳ ಪ್ರಕಾರ ಸಚಿನ್ ಮೀನಾ ಅವರನ್ನ ವಿವಾಹವಾಗಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

     

    ಪ್ರಸಿದ್ಧ ಗಾಯಕ ಅದ್ನಾನ್‌ ಸಾಮಿ (Adnan Sami) ದೇಶದಲ್ಲಿ ದೀರ್ಘಕಾಲ ನೆಲೆಸಿರುವ ಅವರಿಗೆ ಭಾರತದ ಪೌರತ್ವ ನೀಡಲಾಗಿದೆ. ಬಾಲಿವುಡ್‌ ನಟಿ ಆಲಿಯಾ ಭಟ್‌ (Alia Bhatt) ಭಾರತವು ವಿಶ್ವದ ಇತರ ದೇಶಗಳಂತೆ ದ್ವಿಪೌರತ್ವವನ್ನ ನೀಡದ ಕಾರಣ ಭಾರತದಲ್ಲಿ ಮತ ಚಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಬಾಲಿವುಡ್‌ ಸೂಪರ್‌ ಸ್ಟಾರ್‌ ಅಕ್ಷಯ್‌ ಕುಮಾರ್‌ (Akshay Kumar) ಕೆನಡಾ ಪೌರತ್ವವನ್ನ ಪಡೆದು ಭಾರತಲ್ಲಿ ನೆಲೆಸಿದ್ದಾರೆ. ಆದ್ದರಿಂದ ತಮ್ಮನ್ನೂ ಭಾರತಲ್ಲೇ ಉಳಿಯಲು ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋದಿ ಜೀ, ಯೋಗಿ ಜೀ ನನ್ನನ್ನ ಪಾಕಿಸ್ತಾನಕ್ಕೆ ವಾಪಸ್‌ ಕಳುಹಿಸಬೇಡಿ – ಸೀಮಾ ಹೈದರ್‌ ಮನವಿ

    ಮೋದಿ ಜೀ, ಯೋಗಿ ಜೀ ನನ್ನನ್ನ ಪಾಕಿಸ್ತಾನಕ್ಕೆ ವಾಪಸ್‌ ಕಳುಹಿಸಬೇಡಿ – ಸೀಮಾ ಹೈದರ್‌ ಮನವಿ

    – ನಾನು ಗೂಢಚಾರಿಯಲ್ಲ ಎಂದ ಪಾಕ್‌ ಮಹಿಳೆ

    ಲಕ್ನೋ: ಪಬ್‌ಜೀ ಪ್ರೇಮಿಗಾಗಿ (PUBG Lover) ತನ್ನ 4 ಮಕ್ಕಳೊಂದಿಗೆ ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ್ದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್‌ ಪ್ರಕರಣದಲ್ಲಿ ದಿನಕ್ಕೊಂದು ರಹಸ್ಯ ಬಯಲಾಗುತ್ತಿದೆ.

    ಪಾಕಿಸ್ತಾನದ ಸೇನೆ ಮತ್ತು ಅಲ್ಲಿನ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್‌ನೊಂದಿಗೆ (ISI) ಆಕೆ ಸಂಬಂಧ ಹೊಂದಿರುವ ಶಂಕೆ ಹಿನ್ನೆಲೆ ATS ಹಾಗೂ ಇಂಟೆಲಿಜೆನ್ಸ್ ಬ್ಯೂರೋ (IB) ವಿಚಾರಣೆ ನಡೆಸಿದ ನಂತರ ನಾನು ಗೂಢಚಾರಿಯಲ್ಲ, ನನ್ನನ್ನು ಪಾಕಿಸ್ತಾನಕ್ಕೆ ವಾಪಸ್‌ ಕಳುಹಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಅವರಿಗೆ ಮನವಿ ಮಾಡಿಕೊಂಡಿದ್ದಾಳೆ.

    ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸೀಮಾ (Seema Haider), ನಾನು ಭಾರತಕ್ಕೆ ಹೋಗುತ್ತಿದ್ದೇನೆ ಅನ್ನೋದು ಪಾಕಿಸ್ತಾನದಲ್ಲಿ ಯಾರಿಗಾದರೂ ತಿಳಿದಿದ್ದರೆ ಅಲ್ಲಿಯೇ ನನ್ನನ್ನ ಕೊಂದುಬಿಡುತ್ತಿದ್ದರು. ನಾನು ಗೂಢಚಾರಿಯಲ್ಲ. ಶೀಘ್ರವೇ ಸತ್ಯವೇನೆಂಬುದು ಹೊರಬರಲಿದೆ. ನನ್ನನ್ನ ವಾಪಸ್‌ ಕಳುಹಿಸದಂತೆ ನಾನು ಮೋದಿ ಜೀ, ಯೋಗಿ ಜೀ ಅವರಲ್ಲಿ ವಿನಂತಿಸುತ್ತೇನೆ ಎಂದು ಹೇಳಿದ್ದಾಳೆ. ಇದನ್ನೂ ಓದಿ: ಸೀಮಾ ಹೈದರ್‌ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ – ಪಾಕ್‌ ಮಹಿಳೆಯಿಂದ ಭಾರತೀಯ ಯೋಧರಿಗೆ ಫ್ರೆಂಡ್‌ ರಿಕ್ವೆಸ್ಟ್‌

    6 ಗಂಟೆಗಳ ಕಾಲ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದಿಂದ ವಿಚಾರಣೆಗೆ ಒಳಗಾಗಿದ್ದ ಸೀಮಾ, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ನನಗೆ ಬೇರೆ ಆಯ್ಕೆಗಳು ಇರಲಿಲ್ಲ. ಆದ್ದರಿಂದ ಭಾರತಕ್ಕೆ ಅಕ್ರಮವಾಗಿಯೇ ಪ್ರವೇಶಿಸಬೇಕಾಯ್ತು. ನನಗೆ ಪಾಕಿಸ್ತಾನದಲ್ಲಿ ವಾಸಿಸಲು ಇಷ್ಟವಿರಲಿಲ್ಲ. ನಾನು ಹಿಂದಿನ ನನ್ನ ಯಾವುದೇ ಮಾಹಿತಿಯನ್ನೂ ಮರೆಮಾಚಿಲ್ಲ ಎಂದು ಸೀಮಾ ವಿಚಾರಣೆಯಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ISI ನಂಟಿನ ಶಂಕೆ – ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್ ತೀವ್ರ ವಿಚಾರಣೆ

    30 ವರ್ಷದ ಸೀಮಾಗೆ ಆನ್‌ಲೈನ್ ಗೇಮ್ ಪಬ್ಜಿ ಮೂಲಕ ಭಾರತದ ನಿವಾಸಿ ಸಚಿನ್ ಪರಿಚಯವಾಗಿತ್ತು. ಬಳಿಕ ಪರಿಚಯ ಪ್ರೀತಿಗೆ ತಿರುಗಿದ್ದು, ಆತನೊಂದಿಗೆ ಜೀವಿಸುವ ಸಲುವಾಗಿ ತನ್ನ 4 ಮಕ್ಕಳೊಂದಿಗೆ ಮೇ ತಿಂಗಳಿನಲ್ಲಿ ನೇಪಾಳದ ಮೂಲಕ ಬಸ್‌ನಲ್ಲಿ ಭಾರತ ಪ್ರವೇಶಿಸಿದ್ದಳು. ಕಳೆದ 2 ತಿಂಗಳಿನಿಂದ ಆಕೆ ತನ್ನ ಗೆಳೆಯ ಸಚಿನ್ ಮೀನ ಜೊತೆಗೆ ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಜಿಲ್ಲೆಯ ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಇದನ್ನೂ ಓದಿ: ವ್ಯಕ್ತಿಯ ತಲೆ ಕತ್ತರಿಸಿ ಬಿದಿರಿನ ಬೇಲಿಗೆ ನೇತುಹಾಕಿದ್ದ ದುಷ್ಕರ್ಮಿಗಳು – ಮಣಿಪುರದ ಮತ್ತೊಂದು ವೀಡಿಯೋ ವೈರಲ್‌

    ಪಾಕಿಸ್ತಾನದ ಸೇನೆ ಮತ್ತು ಅಲ್ಲಿನ ಗುಪ್ತಚರ ಸಂಸ್ಥೆ ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್‌ನೊಂದಿಗೆ ಆಕೆಗೆ ಸಂಬಂಧದ ಶಂಕೆಯ ಹಿನ್ನೆಲೆ ಎಟಿಎಸ್ ಹಾಗೂ ಇಂಟೆಲಿಜೆನ್ಸ್ ಬ್ಯೂರೋ ವಿಚಾರಣೆಗೆ ಒಳಪಡಿಸಿತ್ತು. ಅಲ್ಲದೇ ಸೀಮಾ ಹೈದರ್‌ನ ಈ ಹಿಂದೆ ಡಿಲೀಟ್ ಆಗಿರುವ ಮೊಬೈಲ್ ಡೇಟಾವನ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆಕೆಯ ಸೋಷಿಯಲ್‌ ಮೀಡಿಯಾ ಖಾತೆಗಳನ್ನು ಸಹ ತನಿಖೆಗೆ ಒಳಪಡಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]