Tag: ಸೀರುಂಡೆ ರಘು

  • ಕಾಮಿಡಿಯಿಂದ ‘ಥ್ರಿಲ್ಲರ್’ನತ್ತ ಸೀರುಂಡೆ ರಘು

    ಕಾಮಿಡಿಯಿಂದ ‘ಥ್ರಿಲ್ಲರ್’ನತ್ತ ಸೀರುಂಡೆ ರಘು

    ಈ‌ ಹಿಂದೆ ಮರೆಯದೆ ಕ್ಷಮಿಸು ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ರಾಘವ ಅವರ ನಿರ್ದೇಶನದ ಮತ್ತೊಂದು ಚಿತ್ರ ರಣಾಕ್ಷ (Ranaksha). ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ (First Look) ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಚಲನಚಿತ್ರ  ವಾಣಿಜ್ಯಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಮೊದಲನೋಟಕ್ಕೆ ಚಾಲನೆ ನೀಡಿದರು. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ಕಿರುತೆರೆಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು (Seerunde Raghu), ರಕ್ಷಾ ಹನುಮಂತು ಹಾಗೂ ರೋಹಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೆವಿಆರ್. ಪಿಕ್ಚರ್ಸ್ ಮೂಲಕ ಹೆಚ್.ಎಸ್.ರಾಮು ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಶೋಭಾ ಶಿವಾಜಿರಾವ್ ಸಹ ನಿರ್ಮಾಪಕರಾಗಿದ್ದಾರೆ.

    ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ರಾಘವ ಚಿತ್ರದ ಕುರಿತಂತೆ ಮಾತನಾಡುತ್ತ ರಣಾಕ್ಷ ಎಂದರೆ ಹದ್ದಿನಂತೆ ಕಣ್ಣಿಟ್ಟು ಕಾಯುವವನು ಎಂದರ್ಥ, ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಜೊತೆಗೆ ಮಾಸ್ ಎಂಟರ್ಟೈನರ್ ಚಿತ್ರ. ಮೊದಲ ಬಾರಿಗೆ ರಘು ಕಾಮಿಡಿ ಬಿಟ್ಟು, ಕ್ಲಾಸ್, ಮಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ರಕ್ಷಾ ಪಾತ್ರ ವಿಶೇಷವಾಗಿದೆ. ಇಡೀ ಕಥೆ ಒಬ್ಬ ಹುಡುಗಿ ಮೇಲೆ ನಿಂತಿರುತ್ತೆ. ಸಕಲೇಶಪುರ, ಹೊನ್ನಾವರ, ಮೂಡಬಿದ್ರೆ, ಕಾರ್ಕಳ ಸುತ್ತಮುತ್ತ ಶೂಟಿಂಗ್ ನಡೆಸಿದ್ದೇವೆ. ಚಿತ್ರದಲ್ಲಿ 3 ಹಾಡು, 3 ಸಾಹಸ ದೃಶ್ಯಗಳಿವೆ. ವಿಶಾಲ್ ಆಲಾಪ್ ಮ್ಯೂಸಿಕ್, ದೀಪಕ್ ಕುಮಾರ್ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಚಿತ್ರವೀಗ ರಿರೆಕಾರ್ಡಿಂಗ್ ಹಂತದಲ್ಲಿದ್ದು, ಫೆಬ್ರವರಿಗೆ ರಿಲೀಸ್ ಮಾಡೋ ಪ್ಲಾನಿದೆ. ಸದ್ಯದಲ್ಲೇ ಆಡಿಯೋ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

    ನಿರ್ಮಾಪಕ ರಾಮು ಮಾತನಾಡುತ್ತ ನಿರ್ದೇಶಕರು ಕಥೆ ಹೇಳಿದ ಶೈಲಿ, ಕಾನ್ಸೆಪ್ಟ್ ನನಗೆ ತುಂಬಾ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ನನಗೆ ತಂದೆ ಸ್ಥಾನದಲ್ಲಿ ನಿಂತು ಹನುಮಂತರಾಯಪ್ಪ ಅವರು ಸಪೋರ್ಟ್ ಮಾಡಿದರು. ತುಂಬಾ ಪ್ರೀತಿಯಿಂದ ಈ ಸಿನಿಮಾ ಮಾಡಿದ್ದೇವೆ. ಜನತೆ ನಮ್ಮನ್ನು ಗೆಲ್ಲಿಸಿದರೆ ಮತ್ತಷ್ಟು ಹೊಸತನದ ಸಿನಿಮಾಗಳನ್ನು ಮಾಡಲು ಸಹಾಯವಾಗುತ್ತದೆ ಎಂದರು. ನಾಯಕ ಸೀರುಂಡೆ ರಘು ಮಾತನಾಡುತ್ತ ಸುಮಾರು 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸೈಡ್ ರೋಲ್ ಮಾಡಿದ್ದೆ. ಮೊದಲಬಾರಿಗೆ ಲೀಡ್ ರೋಲ್ ಮಾಡ್ತಿರುವೆ. 4 ಜನ ಸ್ನೇಹಿತರ ಜೊತೆ ಸಾಗುವ ಪಾತ್ರ ಎಂದರು.

     

    ನಾಯಕಿ ರಕ್ಷಾ ಮಾತನಾಡಿ ನನ್ನದು ಮುಗ್ಧ ಹಳ್ಳಿ ಹುಡುಗಿಯ ಪಾತ್ರೆ ಎಂದರೆ, ಮತ್ತೊಬ್ಬ ನಟಿ ರೋಹಿ ಮಾತನಾಡಿ ಮೊದಲಬಾರಿಗೆ  ಕ್ಯಾಮೆರಾ ಎದುರಿಸಿರುವುದಾಗಿ ಹೇಳಿದರು. ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಮಾತನಾಡಿ ನಿರ್ದೇಶಕರು ಚಿತ್ರಕ್ಕೆ ತುಂಬಾ ಎಫರ್ಟ್ ಹಾಕಿರುವುದು ತೆರೆಮೇಲೆ ಕಾಣಿಸುತ್ತೆ. ಕಲಾವಿದರೂ ಅದಕ್ಕೆ ತಕ್ಕಂತೆ ಅಭಿನಯಿಸಿದ್ದಾರೆ ಎಂದರು. ಛಾಯಾಗ್ರಾಹಕ ದೀಪಕ್, ಉಮೇಶ್ ಬಣಕಾರ್, ಹನುಮಂತರಾಯಪ್ಪ, ವೆಂಕಟೇಶ್ ಚಿತ್ರದ ಕುರಿತಂತೆ ಮಾತನಾಡಿದರು.

  • ‘ಆನ್ ಲೈನ್ ಮದುವೆ ಆಫ್ ಲೈನ್ ಶೋಭನ’ಕ್ಕೆ ಸಜ್ಜಾದ ಜಗ್ಗಪ್ಪ

    ‘ಆನ್ ಲೈನ್ ಮದುವೆ ಆಫ್ ಲೈನ್ ಶೋಭನ’ಕ್ಕೆ ಸಜ್ಜಾದ ಜಗ್ಗಪ್ಪ

    ಪ್ಸರ ಮೂವೀಸ್ ಲಾಂಛನದಲ್ಲಿ ವೇಂಪಲ್ಲಿ ಬಾವಾಜಿ (Bavaji) ಅವರ ನಿರ್ದೇಶನದಲ್ಲಿ ‘ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ (Online Maduve, Offline Shobhana) ಎಂಬ ಹಾಸ್ಯ ಪ್ರಧಾನ ಕಥಾಹಂದರ ಹೊಂದಿದ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ‌. ಈ ಹಿಂದೆ ಗರ್ಭದಗುಡಿ, 141, ಅಕ್ಕ ಬಾವ ಬಾಮೈದ, ನೀನೇನಾ ಎಂಬ ಚಿತ್ರಗಳನ್ನು ನಿರ್ದೇಶಿಸಿದ್ದ ಬಾವಾಜಿ ಈಗ ಮತ್ತೊಂದು ಅಪ್ಪಟ ಕಾಮಿಡಿ ಚಿತ್ರವನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಗಳನ್ನು ನಿರ್ದೇಶಕ ಬಾವಾಜಿ ಅವರೇ ಬರೆದಿದ್ದಾರೆ.

    ಈಗಿನ ಟ್ರೆಂಡ್ ಗೆ ತಕ್ಕಂತೆ ಕಾಮಿಡಿ, ಫ್ಯಾಮಿಲಿ ಎಂಟರ್ ಟೈನರ್, ಕಥಾಹಂದರ ಹೊಂದಿರುವ  ಚಿತ್ರ ಇದಾಗಿದ್ದು,  ಕುಟುಂಬ ಸಮೇತ ಕುಳಿತು ವೀಕ್ಷಿಸುವಂಥ ಅನ್ ಲಿಮಿಟೆಡ್ ಕಾಮಿಡಿ ಜೊತೆಗೆ ಡಿಫರೆಂಟ್ ಕಾನ್ಸೆಪ್ಟ್ ಇದರಲ್ಲಿದೆ. ಇದನ್ನೂ ಓದಿ:ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ಈ ಚಿತ್ರದ ಮಾತಿನ ಭಾಗವನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರದ ಅತ್ತಿಬೆಲೆ ಸುತ್ತಮುತ್ತ  ಅಲ್ಲದೇ ಹಾಡುಗಳನ್ನು ಆನೇಕಲ್ ನ ಸುಗ್ಗಿ ರೆಸಾರ್ಟ್ ಹಾಗೂ ಕೋರಮಂಗಲದ ಪಬ್ ವೊಂದರಲ್ಲಿ  ಚಿತ್ರೀಕರಣ ನಡೆಸಲಾಗಿದೆ. ಈಗಾಗಲೇ ಚಿತ್ರದ ಶೂಟಿಂಗ್ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

     

    ಜಗ್ಗಪ್ಪ(Jaggappa) , ಸುಶ್ಮಿತಾ, (Sushmita)  ಸೀರುಂಡೆ ರಘು, ಗಜೇಂದ್ರ, ರಾಘವಿ ಸೇರಿದಂತೆ  ಗಿಚ್ಚಿ ಗಿಲಿ ಗಿಲಿ, ಮಜಾಭಾರತ, ಕಾಮಿಡಿ ಕಿಲಾಡಿಗಳು, ಕಾರ್ಯಕ್ರಮದ ಅನೇಕ ಕಲಾವಿದರು ಅಲ್ಲದೆ  ಯಶಸ್ವಿನಿ, ಚಂದನ, ಶರಣ್ಯ ರೆಡ್ಡಿ ಮುಂತಾದವರು  ಆನ್ ಲೈನ್ ಮದುವೆ, ಆಫ್ ಲೈನ್ ಶೋಭನ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.  ಬಾಲು ಅವರ ಕ್ಯಾಮೆರಾ ವರ್ಕ್, ಅಲೆಕ್ಸ್ ಕಲಾವಿದರ ಸಂಗೀತ, ಅರುಣ ಪ್ರಸಾದ್, ವೇಂಪಲ್ಲಿ ಬಾಲಾಜಿ ಅವರ ಸಾಹಿತ್ಯ, ಗಣೇಶ್, ಸದಾಶಿವ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಸತ್ಯ’ ಸೀರಿಯಲ್ ನಟ ಸೀರುಂಡೆ ರಘು

    ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಸತ್ಯ’ ಸೀರಿಯಲ್ ನಟ ಸೀರುಂಡೆ ರಘು

    `ಸತ್ಯ’ (Sathya Serial) ಧಾರಾವಾಹಿ ಮೂಲಕ ಮನೆ ಮಾತಾಗಿರುವ ಸೀರುಂಡೆ ರಘು (Seerunde Raghu) ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಸರಳವಾಗಿ ರಂಜಿತಾ (Ranjitha)  ಎಂಬುವವರ ಜೊತೆ ಹೊಸ ಬಾಳಿಗೆ ನಟ ರಘು ಕಾಲಿಟ್ಟಿದ್ದಾರೆ.

    `ಕಾಮಿಡಿ ಕಿಲಾಡಿಗಳು ಸೀಸನ್ 2′ ಮತ್ತು `ಸತ್ಯ’ ಸೀರಿಯಲ್ ಹೀರೋ ಕಾರ್ತಿಕ್ ಮೈದುನನ ಪಾತ್ರದಲ್ಲಿ ರಘು ಪರಿಚಿತರಾಗಿದ್ದಾರೆ. ಕಿರುತೆರೆಯಲ್ಲಿ ಪ್ರೇಕ್ಷಕರಿಗೆ ನಕ್ಕು ನಗಿಸುವ ಮೂಲಕ ಸೀರುಂಡೆ ರಘು ಗಮನ ಸೆಳೆದಿದ್ದರು. ಇದನ್ನೂ ಓದಿ: Exclusive:ಮತ್ತೊಂದು ಮಲ್ಟಿಸ್ಟಾರ್‌ ಸಿನಿಮಾದಲ್ಲಿ ಹ್ಯಾಟ್ರಿಕ್‌ ಹೀರೋ

    ರಂಜಿತಾ ಎಂಬುವವರ ಜೊತೆ ನಟ ರಘು ಅವರು ಸರಳವಾಗಿ ಮದುವೆಯಾಗಿದ್ದಾರೆ. ಗುರುಹಿರಿಯರು, ಆಪ್ತರ ಸಮ್ಮುಖದಲ್ಲಿ ಬೆಂಗಳೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಮದುವೆಯಾಗಿದ್ದಾರೆ. ಕಾಮಿಡಿ ಕಿಲಾಡಿಗಳು ಶೋ ಸ್ಪರ್ಧಿಗಳು, ಕಿರುತೆರೆ ನಟ-ನಟಿಯರು ಸೇರಿದಂತೆ ಹಲವರು ಮದುವೆ ಸಂಭ್ರಮದಲ್ಲಿ ಭಾಗಿಯಾಗಿ ನವಜೋಡಿಗೆ ಶುಭಹಾರೈಸಿದ್ದಾರೆ. ಅಭಿಮಾನಿಗಳ ಕೂಡ ರಘು ದಂಪತಿಗೆ ಶುಭಕೋರಿದ್ದಾರೆ.