Tag: ಸುಂದರ್ ಸಿ

  • ಕಾಲಿವುಡ್‌ನತ್ತ ನಟ ದುನಿಯಾ ವಿಜಯ್ – ನಯನತಾರಾಗೆ ವಿಲನ್!

    ಕಾಲಿವುಡ್‌ನತ್ತ ನಟ ದುನಿಯಾ ವಿಜಯ್ – ನಯನತಾರಾಗೆ ವಿಲನ್!

    ಟ, ನಿರ್ದೇಶಕ ದುನಿಯಾ ವಿಜಯ್ (Duniya Vijay) ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ತೆಲುಗಿನಲ್ಲಿ ಘರ್ಜಿಸಿದ್ದಾಯ್ತು, ಈಗ ತಮಿಳಿನತ್ತ ಮುಖ ಮಾಡಿದ್ದಾರೆ. ನಯನತಾರಾಗೆ (Nayanthara) ವಿಲನ್ ಆಗಿ ವಿಜಯ್ ಅಬ್ಬರಿಸಲಿದ್ದಾರೆ. ಸ್ಟಾರ್ ನಟಿಯ ಸಿನಿಮಾದಲ್ಲಿ ಭಾಗವಾಗ್ತಿರುವ ಬಗ್ಗೆ ಸ್ವತಃ ವಿಜಯ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರಮ್ಯಾ ಫ್ಯಾನ್ಸ್‌ಗೆ ಸಿಹಿಸುದ್ದಿ- ಕಮ್‌ ಬ್ಯಾಕ್‌ ಬಗ್ಗೆ ಸುಳಿವು ಕೊಟ್ರು ನಟಿ

    ನಂದಮೂರಿ ಬಾಲಕೃಷ್ಣಗೆ ವಿಲನ್ ಆಗಿ ದುನಿಯಾ ವಿಜಯ್ ನಟಿಸಿದ ಬಳಿಕ ಮತ್ತೊಂದು ಬಂಪರ್ ಆಫರ್ ಸಿಕ್ಕಿದೆ. ಸುಂದರ್ ಸಿ. ನಿರ್ದೇಶನದ ಹಾಗೂ ನಯನತಾರಾ ನಟನೆಯ ‘ಮೂಕುತ್ತಿ ಅಮ್ಮನ್ 2’ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ಇದನ್ನು ವಿಜಯ್ ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ತಿಳಿಸಿದ್ದಾರೆ. ತಮಿಳು ಪ್ರೇಕ್ಷಕರಿಗೆ ಪರಿಚಯಿಸುತ್ತಿರೋದಕ್ಕೆ ನಿರ್ದೇಶಕ ಸುಂದರ್ ಸಿ.ಗೆ ಥ್ಯಾಂಕ್ಯೂ ಎಂದಿದ್ದಾರೆ.

     

    View this post on Instagram

     

    A post shared by Duniya Vijay (@duniyavijayofficial)

    ಅಂದಹಾಗೆ, ವಿಜಯ್ ಅವರು ಸಲಗ, ಭೀಮ ಸಕ್ಸಸ್ ನಂತರ ಕನ್ನಡದ ‘ಲ್ಯಾಂಡ್‌ಲಾರ್ಡ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮಗಳು ಮೋನಿಷಾ ಮತ್ತು ವಿನಯ್ ರಾಜ್‌ಕುಮಾರ್ ನಟನೆಯ ‘ಸಿಟಿಲೈಟ್ಸ್’ ಚಿತ್ರಕ್ಕೆ ದುನಿಯಾ ವಿಜಯ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

  • 95 ನಿಮಿಷಗಳ ಥ್ರಿಲ್ಲರ್ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ!

    95 ನಿಮಿಷಗಳ ಥ್ರಿಲ್ಲರ್ ‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರ ಈ ವಾರ ತೆರೆಗೆ!

    ಶೀರ್ಷಿಕೆಯ ಕಾರಣದಿಂದ ಆರಂಭಿಕವಾಗಿ ಗಮನ ಸೆಳೆದಿದ್ದ ಚಿತ್ರ ‘ಪ್ರಕರಣ ತನಿಖಾ ಹಂತದಲ್ಲಿದೆ’. ಸುಂದರ್ ಎಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಟ್ರೈಲರ್ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಈ ಮೂಲಕವೇ ಭಿನ್ನ ಕಥೆಯ ಸುಳಿವು ಬಿಟ್ಟು ಕೊಟ್ಟಿದ್ದ ‘ಪ್ರಕರಣ ತನಿಖಾ ಹಂತದಲ್ಲಿದೆ’ ಸಿನಿಮಾ ಈ ವಾರ ಅಂದರೆ, ಅಕ್ಟೋಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಶೀರ್ಷಿಕೆ ಕೇಳಿದಾಕ್ಷಣವೇ ಒಟ್ಟಾರೆ ಕಥೆಯ ಬಗ್ಗೆ ಒಂದು ಕಲ್ಪನೆ ಮೂಡಿಸಿಕೊಂಡಿದ್ದ ಪ್ರೇಕ್ಷಕರನ್ನೆಲ್ಲ ಟ್ರೈಲರ್ ಅಚ್ಚರಿಗೀಡುಮಾಡಿತ್ತು. ಹಾಗೆ ಮೂಡಿಕೊಂಡಿದ್ದ ನಿರೀಕ್ಷೆಗಳ ನಡುವೆ ಈ 95 ನಿಮಿಷಗಳ ವಿಶಿಷ್ಟ ಥ್ರಿಲ್ಲರ್ ಸಿನಿಮಾ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಇದನ್ನೂ ಓದಿ:ಕಾಶಿನಾಥ್ ಪುತ್ರನ ಚಿತ್ರದ ಟ್ರೈಲರ್ ಬಿಡುಗಡೆಗೊಳಿಸಿದರು ಸುದೀಪ್!

    ವಿಶೇಷವೆಂದರೆ, ರಂಗಭೂಮಿಯಲ್ಲಿ ಹತ್ತಾರು ವರ್ಷಗಳಿಂದ ಪಳಗಿಕೊಂಡಿದ್ದವರೆಲ್ಲ ಸೇರಿ ಈ ಚಿತ್ರವನ್ನು ರೂಪಿಸಿದ್ದಾರೆ. ರಂಗಭೂಮಿಯ ವಾತಾವರಣದಲ್ಲಿಯೇ ಜೀವ ಪಡೆದಿದ್ದ ಈ ಚಿತ್ರವನ್ನು ಚಿಂತನ್ ಕಂಬಣ್ಣ ನಿರ್ಮಾಣ ಮಾಡಿದ್ದಾರೆ. ಹೊಸತೇನನ್ನೋ ಸೃಷ್ಟಿಸಬೇಕೆಂಬ ತುಡಿತದೊಂದಿಗೆ ತಯಾರಾಗಿರುವ ಈ ಚಿತ್ರ ಈಗಾಗಲೇ ಟೈಟಲ್ ಟ್ರ‍್ಯಾಕ್, ಪೋಸ್ಟರ್, ಟ್ರೈಲರ್ ಮುಂತಾದವುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಶೀರ್ಷಿಕೆಯೇ ಇದೊಂದು ಕ್ರೈಂ ಜಾನರಿನ ಚಿತ್ರವೆಂಬಂತೆ ಸೂಚಿಸುವುದು ಸತ್ಯ. ಆದರೆ, ಅದೆಲ್ಲದರಾಚೆಗಿನ ಬೆರಗುಗಳನ್ನು 95 ನಿಮಿಷಗಳ ಈ ಥ್ರಿಲ್ಲರ್ ಸಿನಿಮಾ ಬಚ್ಚಿಟ್ಟುಕೊಂಡಿದೆ ಎಂಬ ಭರವಸೆ ಚಿತ್ರ ತಂಡದಲ್ಲಿದೆ.

    ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಮಹೀನ್ ಕುಬೇರ್ (Maheen Kuber) ಮುಖ್ಯ ಪಾತ್ರವನ್ನು ನಿರ್ವಹಿಸಿದ್ದಾರೆ. ಇನ್ನುಳಿದಂತೆ, ಮುತ್ತುರಾಜ್.ಟಿ, ರಾಜ್ ಗಗನ್, ಚಿಂತನ್ ಕಂಬಣ್ಣ ಮುಂತಾದವರ ತಾರಾಗಣವಿದೆ. ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್.ಜೆ ಛಾಯಾಗ್ರಹಣ, ಶಿವೋಂ ಸಂಗೀತ ನಿರ್ದೇಶನ ಮತ್ತು ನಾನಿಕೃಷ್ಣ ಸಂಕಲನ ಈ ಚಿತ್ರಕ್ಕಿದೆ. ವಿ ಎಫ್ ಎಕ್ಸ್ ಜವಾಬ್ದಾರಿಯನ್ನು ಲಕ್ಷ್ಮೀಪತಿ ಎಂ.ಕೆ ನಿಭಾಯಿಸಿದ್ದಾರೆ. ಬೆಂಗಳೂರು, ಕನಕಪುರ ಮುಂತಾದೆಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ‘ಪ್ರಕರಣ ತನಿಖಾ ಹಂತದಲ್ಲಿದೆ’ (Prakarana Tanika Hantadallide) ಈ ವಾರವೇ ಪ್ರೇಕ್ಷಕರೆದುರು ತೆರೆದುಕೊಳ್ಳಲಿದೆ.

  • ಖುಷ್ಬೂ ಮತಾಂತರ ಆಗಿದ್ದಾರಾ?: ನಟಿ ಕೊಟ್ಟ ಉತ್ತರವೇನು?

    ಖುಷ್ಬೂ ಮತಾಂತರ ಆಗಿದ್ದಾರಾ?: ನಟಿ ಕೊಟ್ಟ ಉತ್ತರವೇನು?

    ಟಿ ಹಾಗೂ ಸಕ್ರಿಯ ರಾಜಕಾರಣಿಯೂ ಆಗಿರುವ ಖುಷ್ಬೂ (Khushboo) ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಒಂದಿಲ್ಲೊಂದು ಚರ್ಚೆ ಹುಟ್ಟು ಹಾಕುತ್ತಲೇ ಇರುತ್ತಾರೆ. ಅದಕ್ಕೆ ಬಂದ ಉತ್ತರಗಳಿಗೆ ಮತ್ತು ಹುಟ್ಟಿದ ಪ್ರಶ್ನೆಗಳಿಗೆ ಸಮಾಧಾನವಾಗಿಯೇ ಉತ್ತರ ನೀಡುತ್ತಾರೆ. ಈ ಬಾರಿ ಅವರ ಮದುವೆ ಮತ್ತು ಮತಾಂತರ (Conversion) ಕುರಿತಾಗಿ ಪ್ರಶ್ನೆಯೊಂದು ತೇಲಿ ಬಂದಿದ್ದು, ಅದಕ್ಕೂ ಖುಷ್ಬೂ ಉತ್ತರಿಸಿದ್ದಾರೆ.

    ಖುಷ್ಬೂ ಮುಂಬೈನ ಮುಸ್ಲಿಂ ಕುಟುಂಬದಲ್ಲಿ ಹುಟ್ಟಿದವರು. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ನಂತರ ಅವರು ದಕ್ಷಿಣ ಭಾರತದಲ್ಲಿ ನೆಲೆಯೂರಿದರು. ಹೆಚ್ಚೆಚ್ಚು ಸಿನಿಮಾಗಳು ಸಿಕ್ಕಾಗಿ ಚೆನ್ನೈನಲ್ಲೇ ಮನೆ ಮಾಡಿಕೊಂಡರು. ಅಲ್ಲದೇ, ನಿರ್ದೇಶಕ ಸುಂದರ್. ಸಿ  (Sundar C)ಅವರನ್ನು ವಿವಾಹವೂ ಆದರು. ಈ ವಿವಾಹದ ಕುರಿತಾಗಿಯೇ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ. ನೀವು ಹಿಂದೂ ವ್ಯಕ್ತಿಯನ್ನು ಮದುವೆ ಆಗಿದ್ದೀರಿ. ಹಾಗಾಗಿ ಮತಾಂತರ ಆಗಿದ್ದೀರಾ? ಎನ್ನುವ ಪ್ರಶ್ನೆಯನ್ನು ನಟಿಯ ಮುಂದಿಟ್ಟಿದ್ದಾರೆ. ಇದನ್ನೂ ಓದಿ:ಶಿವಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಮಣಿದು, ಹೇಳಿದ ಮಾತು ಹಿಂಪಡೆದ ಸಂಬರ್ಗಿ

    ದಿ ಕೇರಳ ಸ್ಟೋರಿ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಪ್ರಶ್ನೆ ಅವರಿಗೆ ಎದುರಾಗಿದೆ. ಕೇಳಿದ ಪ್ರಶ್ನೆಗೆ ಸಮಚಿತ್ತದಿಂದಲೇ ಉತ್ತರಿಸಿರುವ ಖುಷ್ಭೂ. ನಾನು ಮತಾಂತರ ಆಗಿಲ್ಲ. ವಿಶೇಷ ವಿವಾಹ ಕಾಯ್ದೆ ಅಡಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದೆ. ಈ ಕಾಯ್ದೆ ಬಗ್ಗೆ ತಿಳಿದುಕೊಳ್ಳಿ ಎಂದು ಅವರು ಹೇಳಿದ್ದಾರೆ. ಈ ಮೂಲಕ ತಾವು ಯಾವುದೇ ಧರ್ಮಕ್ಕೆ ಮತಾಂತರ ಆಗಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

    ಖುಷ್ಬೂ ದಕ್ಷಿಣ ಭಾರತದ ಅಷ್ಟೂ ಭಾಷೆಯ ಸಿನಿಮಾಗಳಲ್ಲಿ ನಟಿಸಿರುವ ಹೆಸರಾಂತ ನಟ. ಕನ್ನಡದಲ್ಲೂ ಅವರು ರವಿಚಂದ್ರನ್ ಜೊತೆ ಸಿನಿಮಾ ಮಾಡಿದ್ದಾರೆ. ಮತ್ತೆ ಕನ್ನಡ ಸಿನಿಮಾ ರಂಗಕ್ಕೆ ವಾಪಸ್ಸಾಗುವ ಮಾತುಗಳನ್ನೂ ಆಡಿದ್ದಾರೆ. ಇದರ ಜೊತೆ ಜೊತೆಗೆ ರಾಜಕಾರಣದಲ್ಲೂ ಅವರು ಹಂತ ಹಂತವಾಗಿ ಬೆಳೆಯುತ್ತಿದ್ದಾರೆ.