ಅಲ್ಲು ಅರ್ಜುನ್ (Allu Arjun) ಅವರ ಹುಟ್ಟು ಹಬ್ಬ (Birthday)ದ ದಿನದಂದು ಬಿಡುಗಡೆ ಆಗಿರುವ ಪುಷ್ಪ 2 ಸಿನಿಮಾದ ಟೀಸರ್ (Teaser) ತೆಲುಗು ಚಿತ್ರೋದ್ಯಮದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದೆ. ಟೀಸರ್ ಬಗ್ಗೆ ಪ್ರತಿಯೊಬ್ಬರೂ ಕೊಂಡಾಡುತ್ತಿದ್ದಾರೆ. ಸೊಂಟಕ್ಕೆ ಸೆರೆಗು ಸಿಕ್ಕಿಸಿಕೊಂಡು ಖಳರನ್ನು ಪುಷ್ಪರಾಜ್ ಅಟ್ಟಾಡಿಸಿಕೊಂಡು ಹೊಡೆಯುವ ದೃಶ್ಯವಿದೆ. ಜೊತೆಗೆ ಜಾತ್ರೆಯ ಸಂದರ್ಭದಲ್ಲಿ ಗಂಗಮ್ಮ ವೇಷಧಾರೆಯಾಗಿ ಅಲ್ಲು ಎಂಟ್ರಿ ಕೊಡುವ ಸಖತ್ ದೃಶ್ಯವೂ ಅದಾಗಿದೆ. ಸಾಹಸ ಸನ್ನಿವೇಶವನ್ನು ರೋಚಕವಾಗಿ ಕಟ್ಟಿಕೊಡಲಾಗಿದೆ. ಹಾಗಾಗಿ ಕೋಟ್ಯಂತರ ಜನರು ಟೀಸರ್ ವೀಕ್ಷಿಸಿ ಜೈ ಅಂದಿದ್ದಾರೆ.
ನಿಂಬೆ ಹಣ್ಣಿನ ಮಾಲೆ, ಕೊರಳಲ್ಲಿ ಹಾರ, ಚಿನ್ನದ ಸರ, ಕಾಲಲ್ಲಿ ಗೆಜ್ಜೆ ಹೀಗೆ ನಾನಾ ಅವತಾರದಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಅದ್ದೂರಿಯಾಗಿಯೇ ಜಾತ್ರೆ ಸೆಟ್ ಹಾಕಿ ಚಿತ್ರೀಕರಿಸಿದ್ದಾರೆ ಸುಕುಮಾರ್. ಟೀಸರ್ ನಲ್ಲಿ ಕಂಡ ಅಷ್ಟೂ ದೃಶ್ಯವನ್ನು ಜಾತ್ರೆಯ ಸಂದರ್ಭದಲ್ಲೇ ಸೆರೆ ಹಿಡಿಯಲಾಗಿದೆ.
ಈ ಹಿಂದೆ ಪುಷ್ಪ 2 (Pushpa 2) ಸಿನಿಮಾದ ಮತ್ತೊಂದು ಪೋಸ್ಟರ್ (Poster) ರಿಲೀಸ್ ಆಗಿತ್ತು. ತ್ರಿಶೂಲ್ ಅನ್ನು ಪ್ರಮುಖವಾಗಿಟ್ಟುಕೊಂಡು ಪೋಸ್ಟರ್ ಡಿಸೈನ್ ಮಾಡಲಾಗಿತ್ತು. ಅದರಲ್ಲಿ ಹಲವಾರು ರಹಸ್ಯಗಳನ್ನು ಅಡಗಿಸಿಟ್ಟಿದ್ದರು ನಿರ್ದೇಶಕರು. ಕುಂಕುಮ ಹಾಕಿರೋ ತ್ರಿಶೂಲ. ಅದರ ಹಿಂದೆ ಉರಿಯುವ ಕಣ್ಣುಗಳು, ಶಂಖ ಊದುತ್ತಿರುವ ಗೆಸ್ಚರ್ ಒಂದು ರೀತಿಯಲ್ಲಿ ದೈವಾತಾರ ತಾಳಿರೋ ನಾಯಕನ ಪೋಸ್ಟರ್ ಅದಾಗಿತ್ತು.
ಸುಕುಮಾರ್ ನಿರ್ದೇಶನದ ‘ಪುಷ್ಪ 2’ನಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ (Rashmika Mandanna), ಫಹಾದ್ ಫಾಸಿಲ್, ಕನ್ನಡದ ನಟ ಡಾಲಿ (Daali Dhananjay) ಸೇರಿದಂತೆ ಅನೇಕರು ನಟಿಸಿದ್ದಾರೆ. ಸಿನಿಮಾ ಇದೇ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಬಹುಭಾಷೆಗಳಲ್ಲಿ ತೆರೆ ಕಾಣಲಿದೆ.
ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾ ಕುರಿತಂತೆ ಅಚ್ಚರಿಯ ಸಂಗತಿಗಳು ಹೊರ ಬೀಳುತ್ತಲೇ ಇವೆ. ಪ್ರತಿ ಬಾರಿಯೂ ಅವುಗಳೆಲ್ಲ ಕಟ್ಟುಕಥೆಗಳೇ ಇರುತ್ತಿದ್ದವು. ಇದೀಗ ಸ್ವತಃ ಸಿನಿಮಾದ ನಿರ್ದೇಶಕ ಸುಕುಮಾರನ್ (Sukumaran) ಮಾತನಾಡಿದ್ದಾರೆ. ಸಿನಿಮಾ ಕುರಿತಂತೆ ಹಲವಾರು ವಿಷಯಗಳನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಚಿತ್ರ ಬಜೆಟ್ ಬಗ್ಗೆ ಮಾತನಾಡಿದ್ದಾರೆ.
ಪುಷ್ಪ ಸಿನಿಮಾಗಿಂತ ಪುಷ್ಪ 2 ಸಿನಿಮಾದ ಬಜೆಟ್ ಡಬಲ್ ಆಗಿದೆಯಂತೆ. ಜೊತೆಗೆ ಅಷ್ಟೇ ಶ್ರೀಮಂತಿಕೆಯಿಂದ ಕೂಡಿದೆಯಂತೆ. ಫಹಾದ್ ಫಾಸಿಲ್ (Fahadh Faasil) ಮತ್ತು ಅಲ್ಲು ಅರ್ಜುನ್ ನಡುವಿನ ದೃಶ್ಯ ಮತ್ತೊಂದು ಲೆವಲ್ ನಲ್ಲಿ ಇದೆ ಎಂದಿದ್ದಾರೆ ನಿರ್ದೇಶಕ ಸುಕುಮಾರನ್. ಇಡೀ ಕಥೆಯನ್ನು ಈ ಇಬ್ಬರೂ ನಟರು ಹೇಗೆ ತೂಗಿಸಿಕೊಂಡು ಹೋಗಿದ್ದಾರೆ ಎನ್ನುವುದನ್ನು ವಿವರಿಸಿದ್ದಾರೆ.
ಒಂದು ಕಡೆ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ಇನ್ನೊಂದು ಕಡೆ ‘ಪುಷ್ಪ 2’ (Pushpa 2) ಸಿನಿಮಾದ ಆಡಿಯೋ (Audio) ಹಕ್ಕು (Right) ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆಯಂತೆ. ಈವರೆಗೂ ದಾಖಲಾಗಿದ್ದ ಎಲ್ಲ ಮೊತ್ತವನ್ನೂ ಅದು ಹಿಂದಿಕ್ಕಿದ್ದು ಟಿ ಸೀರಿಸ್ ಕಂಪೆನಿಯು 65 ಕೋಟಿ ರೂಪಾಯಿ ಹಣ ನೀಡಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ ಎಂದು ವರದಿಯಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ರಿಲೀಸ್ ಆಗುವ ಅಷ್ಟು ಭಾಷೆಗಳಿಗೆ ಈ ಹಕ್ಕು ಅನ್ವಯಿಸಲಿದೆ.
ಈ ಹಿಂದೆ ರಿಲೀಸ್ ಆಗಿರುವ ಬಾಹುಬಲಿ ಚಿತ್ರದ ಆಡಿಯೋ ಹಕ್ಕು ಹತ್ತು ಕೋಟಿ ಸೇಲ್ ಆಗಿತ್ತು. ಆರ್.ಆರ್.ಆರ್ ಆಡಿಯೋ ಹಕ್ಕು 25 ಕೋಟಿಗೆ ಬಿಕರಿ ಆಗಿತ್ತು. ಸಾಹೋ ಸಿನಿಮಾದ ಆಡಿಯೋ ಹಕ್ಕು ಕೂಡ 22 ಕೋಟಿಗೆ ಸೇಲ್ ಆಗಿತ್ತು. ಈ ಎಲ್ಲ ದಾಖಲೆಗಳನ್ನೂ ಪುಷ್ಪ 2 ಸಿನಿಮಾ ಮುರಿದಿದೆ. ಅಲ್ಲದೇ, ಓಟಿಟಿಗೂ ಭಾರೀ ಮೊತ್ತಕ್ಕೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ.
ಖ್ಯಾತ ನಟ ಅಲ್ಲು ಅರ್ಜುನ್ ಹಾಗೂ ಡ್ಯಾಷಿಂಗ್ ಡೈರೆಕ್ಟರ್ ಸುಕುಮಾರ್ (Sukumaran) ಮತ್ತೊಮ್ಮೆ ಬಾಕ್ಸಾಫೀಸ್ ಉಡೀಸ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಡಬಲ್ ಸಂಭ್ರಮದಲ್ಲಿ ತೇಲಾಡ್ತಿದೆ. 2 ರಾಷ್ಟ್ರಪ್ರಶಸ್ತಿಗಳು ಪುಷ್ಪ-ದಿ ರೈಸ್ ಸಿನಿಮಾಗೆ ಒಲಿದು ಬಂದಿವೆ. ಸೂರ್ಯ, ಧನುಷ್ ನಂತಹ ಸ್ಟಾರ್ಸ್ ಹಿಂದಿಕ್ಕೆ ಮಿಸ್ಟರ್ ಅಲ್ಲು ಅತ್ಯುತ್ತಮ ನಟ ಗರಿ ತಮ್ಮದಾಗಿಸಿಕೊಂಡ್ರೆ, ಅತ್ಯುತ್ತಮ ಸಂಗೀತ ನಿರ್ದೇಶಕನ ಪ್ರಶಸ್ತಿ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಪಾಲಾಗಿದೆ. ಈ ಖುಷಿ ಕ್ಷಣವನ್ನು ಪುಷ್ಪ ಟೀಂ ಸಂಭ್ರಮಿಸಿ ಕ್ಯಾಕಿ ಹಾಕ್ತಿದೆ.
ರಾಷ್ಟ್ರಪ್ರಶಸ್ತಿ ತಮ್ಮ ಮಡಿಲು ಸೇರುವ ಆನಂದದಲ್ಲಿರುವ ಅಲ್ಲು ಅರ್ಜುನ್ ಫ್ಯಾನ್ಸ್ ಗೆ ಸರ್ ಪ್ರೈಸ್ ಗಿಫ್ಟ್ ಗಿಫ್ಟ್ ಕೊಟ್ಟಿದ್ದಾರೆ. ಸೀಕ್ವೆಲ್ ಶೂಟಿಂಗ್ ಎಲ್ಲಿಗೆ ಬಂತು ಗುರು? ಅಪ್ ಡೇಟ್ ಬೇಕು ಅಪ್ ಡೇಟ್ ಅನ್ನುತ್ತಿದ್ದವರಿಗೆ ಸ್ಟೈಲಿಶ್ ಡೈರೆಕ್ಟ್ ಆಗಿ ಪುಷ್ಪ-2 ಕೋಟೆ ಒಳಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲುಗಾರು ಹುಟ್ಟುಹಬ್ಬಕ್ಕೆ ಅನಾವರಣ ಪುಷ್ಪ-2 ಸಣ್ಣ ಟೀಸರ್ ಹಂಗಾಮ ಕ್ರಿಯೇಟ್ ಮಾಡಿತ್ತು. ಕಾಣೆಯಾಗಿದ್ದ ಪುಷ್ಪ ಹೊಸ ಅವತಾರದಲ್ಲಿ ಪ್ರತ್ಯಕ್ಷನಾಗುವ ಮೂಲಕ ಇನ್ಮುಂದೆ ನನ್ನಂದೇ ರೂಲ್ ಎಂಬ ಸಂದೇಶ ರವಾನಿಸಿದ್ದಾನೆ. ಪುಷ್ಪ ಸೀಕ್ವೆಲ್ ಎಂಟ್ರಿ ತುಣುಕು ಬಾಲಿವುಡ್ ಮಂದಿಯನ್ನು ಕಂಗೆಡಿಸಿತ್ತು. ಈಗ ರಿವೀಲ್ ಆಗಿರುವ ಪುಷ್ಪ-2 ಮೇಕಿಂಗ್ ಫ್ಯಾನ್ಸ್ ಎಕ್ಸೈಟ್ ಆಗುವಂತೆ ಮಾಡಿದೆ.
ಅಲ್ಲು ಅರ್ಜುನ್ (Allu Arjun) ಪುಷ್ಪ-2 ಮೇಕಿಂಗ್ ಝಲಕ್ ಮಾತ್ರ ಹಂಚಿಕೊಂಡಿಲ್ಲ. ತಮ್ಮ ದೈನಂದಿನ ದಿನ ದಿನಚರಿ ಹೇಗಿ ಇರುತ್ತೇ ಅನ್ನೋದನ್ನು 2 ನಿಮಿಷ 20 ಸೆಕೆಂಡ್ ವಿಡಿಯೋ ತುಣುಕಿನಲ್ಲಿ ರಿವೀಲ್ ಮಾಡಿದ್ದಾರೆ. ಒಬ್ಬ ಸೆಲೆಬ್ರಿಟಿ ಲೈಫ್ ಸ್ಟೈಲ್ ಹೇಗಿರುತ್ತದೆ? ಅವ್ರ ಮನೆ ಕಾರು, ಗಾರ್ಡನ್, ಕ್ಯಾರವಾನ್ ಬಗ್ಗೆ ತಿಳಿದುಕೊಳ್ಳುವ ಕ್ಯೂರಿಯಾಸಿಟಿಯಂತೂ ಪ್ರತಿಯೊಬ್ಬ ಕಲಾಭಿಮಾನಿಗೂ ಇದ್ದೇ ಇರುತ್ತದೆ. ಆ ಕ್ಯೂರಿಯಾಸಿಟಿಯನ್ನ ತಣಿಸುವ ಕೆಲಸ ಮಾಡಿದ್ದಾರೆ ಮಿಸ್ಟರ್ ಬನ್ನಿಗಾರು. ಈ ಸ್ಪೆಷಲ್ ವಿಡಿಯೋ ಇನ್ ಸ್ಟಾಗ್ರಾಂ ಸಾಥ್ ಕೊಟ್ಟಿದೆ. ಇನ್ ಸ್ಟಾಗ್ರಾಂ ತಂಡ ಅಲ್ಲು ಅರ್ಜುನ್ ಮನೆಗೆ ಭೇಟಿ ಕೊಟ್ಟು ಅವ್ರ ದಿನ ನಿತ್ಯದ ಅಪ್ ಡೇಟ್ ಗಳನ್ನು ಶೂಟ್ ಮಾಡಿ ಫ್ಯಾನ್ಸ್ ಎದುರು ತಂದಿದೆ. ಸ್ವತಃ ಇನ್ ಸ್ಟಾಗ್ರಾಂ ತಂಡವೇ ಅಲ್ಲು ಅರ್ಜುನ್ ಮನೆಗೆ ಭೇಟಿ ಕೊಟ್ಟು ವಿಡಿಯೋ ಮಾಡಿದೆ. ಈ ವಿಶೇಷ ಗೌರವಕ್ಕೆ ಪಾತ್ರವಾಗಿರುವ ದಕ್ಷಿಣ ಭಾರತದ ಮೊದಲ ನಟ ಎಂಬ ಹೆಗ್ಗಳಿಕೆ ಕೂಡ ಅಲ್ಲು ಮಡಿಲು ಸೇರಿದೆ.
ಪುಷ್ಪರಾಜ ಬೆಳಗ್ಗೆ ಎದ್ದ ತಕ್ಷಣ ತಮ್ಮ ಮನೆಯ ಅಲ್ಲು ಗಾರ್ಡನ್ ನಲ್ಲಿ ಧಾನ್ಯ ಮಾಡಿ ಚಿಲ್ ಆಗ್ತಾರೆ. ಗಾರ್ಡನ್ ಒಂದು ರೌಂಡ್ ಆಗಿ ಕಾಫಿ ಕುಡಿದು ತಮ್ಮ ಕಾಸ್ಟ್ಲೀ ಕಾರ್ ಹತ್ತಿಕೊಂಡು ತಮ್ಮ ಮುದ್ದಿನ ಮಕ್ಕಳಿಗೆ ವಿಡಿಯೋ ಕಾಲ್ ಮಾಡ್ತಾರೆ. ಎಲ್ಲಿ ಇರಲಿ ಎಷ್ಟೇ ಬ್ಯುಸಿ ಇರಲಿ ಅಲ್ಲು ಮಿಸ್ ಮಾಡದೇ ಮಧ್ಯಾಹ್ನ 1 ಗಂಟೆ ಮಕ್ಕಳಿಗೆ ವಿಡಿಯೋ ಕಾಲ್ ಮಾಡೋದನ್ನ ಮಾತ್ರ ಮರೆಯೋದಿಲ್ಲ. ವಿಡಿಯೋ ಕಾಲ್ ಮಾಡ್ತಾ ಹೈದ್ರಾಬಾದ್ ರಾಮೋಜಿಸಿಟಿ ಫಿಲ್ಮ ಸಿಟಿ ತಲುಪ್ತಾರೆ. ಅಲ್ಲಿ ನೆರೆದಿದ್ದ ಫ್ಯಾನ್ಸ್ ಭೇಟಿ ಮಾಡಿ ಶೂಟಿಂಗ್ ಸೆಟ್ ಗೆ ಹಾಜರಾಗ್ತಾರೆ.
ಶೂಟಿಂಗ್ ಸೆಟ್ ಗೆ ಎಂಟ್ರಿ ಕೊಡ್ತಿದ್ದಂತೆ ಸಿನಿಮಾಗೆ ಸಂಬಂಧಿಸಿದ ಕಾಸ್ಟ್ಯೂಮ್, ಪ್ರಾಪರ್ಟಿಸ್ ಆಯ್ಕೆ ಮಾಡಿಕೊಂಡ ನಂತ್ರ ಪುಷ್ಪರಾಜ್ ತಮ್ಮ ಕ್ಯಾರವಾನ್ ಗೆ ಪ್ರವೇಶಿಸ್ತಾರೆ. ಅಲ್ಲು ಕ್ಯಾರವಾನ್ ತಲುಪ್ತಿದ್ದಂತೆ ನಿರ್ದೇಶಕ ಸುಕುಮಾರ್ ನೆಚ್ಚಿನ ಡಾರ್ಲಿಂಗ್ ಮೀಟ್ ಮಾಡಿ ಹಗ್ ಮಾಡಿ ಆ ದಿನ ಸೀನ್ಸ್ ಬಗ್ಗೆ ಎಕ್ಸ್ ಪ್ಲೈನ್ ಮಾಡ್ತಾರೆ. ನಂತ್ರ ಮೇಕಪ್ ಹಚ್ಚಿಕೊಂಡು ಕ್ಯಾಮೆರಾ ಎದುರು ಪ್ರತ್ಯಕ್ಷರಾಗ್ತಾರೆ.
ಅಲ್ಲು ಅರ್ಜುನ್ ಹಾಗೂ ಸುಕುಮಾರ್ ನಡುವೆ ಅದ್ಭುತವಾದ ಬಾಂಡಿಂಗ್ ಇದೆ. ಸುಕುಮಾರ್ ಸಿನಿಮಾ ಜರ್ನಿ ಶುರುವಾಗಿದ್ದು ಅಲ್ಲು ಜೊತೆನೇ. ಆರ್ಯ ಸಿನಿಮಾದ ಮೂಲಕ ಹಿಟ್ ಜೋಡಿಯಾದ ಸ್ಟೈಲಿಶ್ ಸ್ಟಾರ್ ಸುಕುಮಾರ್ ಆರ್ಯ-2 ನಂತ್ರ ಪುಷ್ಪ-1 ಈಗ ಪುಷ್ಪ-2 ನಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲು ಅರ್ಜುನ್ ನನ್ನ ಮೊದಲ ಹೀರೋ ಎಂದಿರುವ ಸುಕುಮಾರ್, ನನ್ನ ಗೆಳೆಯ ಅಂತಾನೂ ಹೇಳಿಕೊಂಡಿದ್ದಾರೆ.
ಪುಷ್ಪ 2 ದಿ ರೂಲ್ಸ್ ಶೂಟಿಂಗ್ ಹೈದ್ರಾಬಾದ್ (Hyderabad) ನ ರಾಮೋಜಿ ಫಿಲ್ಮಂ ಸಿಟಿಯಲ್ಲಿ ಭರದಿಂದ ಸಾಗ್ತಿದೆ. ಈ ನಡುವೆಯೇ ಸೀಕ್ವೆಲ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್ ಆಗಿರುವ ಸುದ್ದಿ ಹೊರಬಿದ್ದಿದೆ. ಹಿಂದಿ ಬೆಲ್ಟ್ ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಹಕ್ಕು ಮಾರಾಟವಾಗಿದೆಯಂತೆ. ಪುಷ್ಪ ಮೊದಲ ಭಾಗ ಬಾಲಿವುಡ್ ಅಂಗಳದಲ್ಲಿ ಬಡಾ ಹಿಟ್ ಕಂಡಿತ್ತು. ಅಲ್ಲು ಆಕ್ಟಿಂಗ್, ಸುಕುಮಾರ್ ಟೇಕಿಂಗ್ ಗೆ ಹಿಂದಿ ಮಂದಿ ಫಿದಾ ಆಗಿದ್ದರು. ಬಾಲಿವುಡ್ ಚಿತ್ರಗಳಿಗೆ ಟಕ್ಕರ್ ಕೊಟ್ಟಿದ್ದ ಪುಷ್ಪ 2 ಗಾಗಿ ಬಂಗಾರದ ಬೇಡಿಕೆ ಬಂದಿದೆ. 200 ಕೋಟಿ ಮೊತ್ತಕ್ಕೆ ಹಿಂದಿ ರೈಟ್ಸ್ ಮಾರಾಟವಾಗಿದ್ದು, 75 ಕೋಟಿಗೆ ಆಡಿಯೋ ರೈಟ್ಸ್ ಸೇಲ್ ಆಗಿರುವ ಬಗ್ಗೆ ಸಿನಿ ಜಜಾರ್ ನಲ್ಲಿ ಹೊಸ ಬಜ್ ಓಡಾಡ್ತಿದೆ. ಹಾಗಿದ್ರೆ ಪುಷ್ಪ-2 ವರ್ಷ ತೆರೆಗೆ ಬರೋದಂತು ಡೌಟ್. ಮುಂದಿನ ವರ್ಷ ಮಾರ್ಚ್ 22ಕ್ಕೆ ಪುಷ್ಪರಾಜನ ಫೈಯರ್ ತೆರೆಯಲ್ಲಿ ಶುರುವಾಗಲಿದೆ ಎನ್ನಲಾಗ್ತಿದೆ.
ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾದ ಶೂಟಿಂಗ್ ಕುಂಟುತ್ತಾ ಸಾಗಿದೆ. ಸದ್ಯ ಚಿತ್ರದ ಕ್ಲೈಮ್ಯಾಕ್ಸ್ (Climax) ದೃಶ್ಯದ ಚಿತ್ರೀಕರಣವನ್ನು ಮಾಡಲು ನಿರ್ದೇಶಕ ಸುಕುಮಾರನ್ (Sukumaran) ಪ್ಲ್ಯಾನ್ ಮಾಡಿದ್ದು, ಅದೊಂದು ರೋಮಾಂಚನಕಾರಿ ನೀಡುವಂತಹ ಸನ್ನಿವೇಶವಾಗಿದೆ ಎಂದು ಹೇಳಲಾಗುತ್ತಿದೆ. ಈ ದೃಶ್ಯವನ್ನು ತಿರುಪತಿ ಜಿಲ್ಲೆಯ ಪೂರ್ವ ಘಟ್ಟದಲ್ಲಿರುವ ಸ್ವರ್ಣಮುಖಿ (Swarnamukhi) ನದಿಯ ತೀರದಲ್ಲಿ ಶೂಟ್ ಮಾಡಲು ಚಿತ್ರತಂಡ ನಿರ್ಧರಿಸಿದೆ.
ಕ್ಲೈಮ್ಯಾಕ್ಸ್ ಸನ್ನಿವೇಶದಲ್ಲಿ ಅಲ್ಲು ಅರ್ಜುನ್ ಜೊತೆ ಫಾಸಿಲ್ ಕೂಡ ಭಾಗಿಯಾಗಲಿದ್ದಾರಂತೆ. ಈ ದೃಶ್ಯಕ್ಕೆ ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ರಕ್ತ ಚಂದನವನ್ನು ಕಳ್ಳ ಮಾರ್ಗದಲ್ಲಿ ಸಾಗಿಸುವ ಪುಷ್ಪರಾಜನ ವಿರುದ್ಧ ಭನ್ವಿರ್ ಸಿಂಗ್ ಮಾಡುವ ದಾಳಿಯೇ ಕ್ಲೈಮ್ಯಾಕ್ಸ್ ದೃಶ್ಯ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಗುಂಟೂರು ಖಾರ ಸವಿಯಲು ಬರುತ್ತಿದ್ದಾರೆ ರಮ್ಯಾ ಕೃಷ್ಣ
ಈ ನಡುವೆ ‘ಪುಷ್ಪ 2’ (Pushpa 2) ಸಿನಿಮಾದ ಆಡಿಯೋ (Audio) ಹಕ್ಕು (Right) ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆ. ಈವರೆಗೂ ದಾಖಲಾಗಿದ್ದ ಎಲ್ಲ ಮೊತ್ತವನ್ನೂ ಅದು ಹಿಂದಿಕ್ಕಿದ್ದು ಟಿ ಸೀರಿಸ್ ಕಂಪೆನಿಯು 65 ಕೋಟಿ ರೂಪಾಯಿ ಹಣ ನೀಡಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ ಎಂದು ವರದಿಯಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ರಿಲೀಸ್ ಆಗುವ ಅಷ್ಟು ಭಾಷೆಗಳಿಗೆ ಈ ಹಕ್ಕು ಅನ್ವಯಿಸಲಿದೆ.
ಈ ಹಿಂದೆ ರಿಲೀಸ್ ಆಗಿರುವ ಬಾಹುಬಲಿ ಚಿತ್ರದ ಆಡಿಯೋ ಹಕ್ಕು ಹತ್ತು ಕೋಟಿ ಸೇಲ್ ಆಗಿತ್ತು. ಆರ್.ಆರ್.ಆರ್ ಆಡಿಯೋ ಹಕ್ಕು 25 ಕೋಟಿಗೆ ಬಿಕರಿ ಆಗಿತ್ತು. ಸಾಹೋ ಸಿನಿಮಾದ ಆಡಿಯೋ ಹಕ್ಕು ಕೂಡ 22 ಕೋಟಿಗೆ ಸೇಲ್ ಆಗಿತ್ತು. ಈ ಎಲ್ಲ ದಾಖಲೆಗಳನ್ನೂ ಪುಷ್ಪ 2 ಸಿನಿಮಾ ಮುರಿದಿದೆ. ಅಲ್ಲದೇ, ಓಟಿಟಿಗೂ ಭಾರೀ ಮೊತ್ತಕ್ಕೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ.
ಅಲ್ಲು ಅರ್ಜುನ್ (Allu Arjun) ನಾಯಕನಾಗಿ ನಟಿಸುತ್ತಿರುವ ಪುಷ್ಪ 2 (Pushpa 2) ಸಿನಿಮಾದ ಶೂಟಿಂಗ್ (Shooting) ನಿಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಈ ಸಿನಿಮಾದ ನಿರ್ಮಾಪಕರು ಹಾಗೂ ನಿರ್ದೇಶಕರ ಮನೆ ಹಾಗೂ ಕಚೇರಿಯ ಮೇಲೆ ಇಡಿ ಹಾಗೂ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಶೂಟಿಂಗ್ ಸ್ಥಗಿತ ಮಾಡಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ (Mythri Movie Makers)ಈ ಸಿನಿಮಾವನ್ನು ನಿರ್ಮಾಣ ಮಾಡಿತ್ತು. ನವೀನ್ ಯೆರ್ನೇನಿ ಹಾಗೂ ಯಲಮಂಚಿಲಿ ರವಿಶಂಕರ್ ಈ ಸಂಸ್ಥೆಯ ನಿರ್ಮಾಪಕರು. ಮೊನ್ನೆ ಬೆಳಗಿನ ಜಾವ ಇವರ ಮನೆ ಹಾಗೂ ಕಚೇರಿಯಲ್ಲಿ ಇಡಿ (ED) ಅಧಿಕಾರಿಗಳು ದಾಳಿ ಮಾಡಿದ್ದು. ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ
ವಾಲ್ತೇರು ವೀರಯ್ಯ, ವೀರಸಿಂಹ ರೆಡ್ಡಿ ಅಂತ ಬಹುಕೋಟಿ ವೆಚ್ಚದ ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಾಣ ಮಾಡಿದ್ದು ವಿದೇಶಗಳಲ್ಲಿ ದೊಡ್ಡಬಜೆಟ್ ನ ಚಿತ್ರಗಳನ್ನು ವಿತರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಲಾ ಮಾರ್ಗದಲ್ಲಿ ಹಣದ ಸಂಗ್ರಹಣೆ ಮೂಲಕ ಪ್ರಮೋಟರ್ಸ್ ಮನಿ ಲ್ಯಾಂಡರಿಂಗ್ ಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.
ಇಷ್ಟೇ ಅಲ್ಲದೇ ಆದಾಯ ತೆರಿಗೆ (IT) ಪಾವತಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಇಡಿ ಅಧಿಕಾರಿಗಳ ಜೊತೆ ಐಟಿ ಅಧಿಕಾರಿಗಳು ಕೂಡ ಜೊತೆಯಾಗಿ ಶೋಧ ಕಾರ್ಯ ನಡೆಸಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಿನಿಮಾ ನಿರ್ಮಾಣ ಸಂಸ್ಥೆಯ ಜೊತೆಗೆ ಪುಷ್ಪ ಚಿತ್ರದ ಸುಕುಮಾರನ್ ಮನೆಯಲ್ಲೂ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ (Pushpa) ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಭಾರೀ ಸದ್ದು ಮಾಡಿತ್ತು. ಸಾವಿರಾರು ಕೋಟಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿತ್ತು. ಈ ಗೆಲುವಿನ ಖುಷಿಯಲ್ಲೇ ನಿರ್ದೇಶಕ ಸುಕುಮಾರನ್ (Sukumaran) ‘ಪುಷ್ಪ 2’ ಸಿನಿಮಾವನ್ನು ಶುರು ಮಾಡಿದ್ದರು. ಈಗಾಗಲೇ ಹಲವು ಹಂತದ ಚಿತ್ರೀಕರಣ ಕೂಡ ಮುಗಿದಿದೆ. ಈ ಸಮಯದಲ್ಲಿ ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ನಿರ್ಮಾಪಕರ ಮತ್ತು ನಿರ್ದೇಶಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ (Mythri Movie Makers)ಈ ಸಿನಿಮಾವನ್ನು ನಿರ್ಮಾಣ ಮಾಡಿತ್ತು. ನವೀನ್ ಯೆರ್ನೇನಿ ಹಾಗೂ ಯಲಮಂಚಿಲಿ ರವಿಶಂಕರ್ ಈ ಸಂಸ್ಥೆಯ ನಿರ್ಮಾಪಕರು. ಬೆಳಗಿನ ಜಾವ ಇವರ ಮನೆ ಹಾಗೂ ಕಚೇರಿಯಲ್ಲಿ ಇಡಿ (ED) ಅಧಿಕಾರಿಗಳು ಶೋಧ ಕಾರ್ಯ ಶುರು ಮಾಡಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂದು ವರದಿ ಆಗಿದೆ. ಇದನ್ನೂ ಓದಿ:‘ಎಂದೆಂದಿಗೂ ಆರ್‌ಸಿಬಿ’ ಎಂದ ನಟಿ ದಿವ್ಯಾ ಉರುಡುಗ
ವಾಲ್ತೇರು ವೀರಯ್ಯ, ವೀರಸಿಂಹ ರೆಡ್ಡಿ ಅಂತ ಬಹುಕೋಟಿ ವೆಚ್ಚದ ಸಿನಿಮಾಗಳನ್ನು ಈ ಸಂಸ್ಥೆ ನಿರ್ಮಾಣ ಮಾಡಿದ್ದು ವಿದೇಶಗಳಲ್ಲಿ ದೊಡ್ಡಬಜೆಟ್ ನ ಚಿತ್ರಗಳನ್ನು ವಿತರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಲಾ ಮಾರ್ಗದಲ್ಲಿ ಹಣದ ಸಂಗ್ರಹಣೆ ಮೂಲಕ ಪ್ರಮೋಟರ್ಸ್ ಮನಿ ಲ್ಯಾಂಡರಿಂಗ್ ಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.
ಇಷ್ಟೇ ಅಲ್ಲದೇ ಆದಾಯ ತೆರಿಗೆ (IT) ಪಾವತಿಯಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಇಡಿ ಅಧಿಕಾರಿಗಳ ಜೊತೆ ಐಟಿ ಅಧಿಕಾರಿಗಳು ಕೂಡ ಜೊತೆಯಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಸಿನಿಮಾ ನಿರ್ಮಾಣ ಸಂಸ್ಥೆಯ ಜೊತೆಗೆ ಪುಷ್ಪ ಚಿತ್ರದ ಸುಕುಮಾರನ್ ಮನೆಯಲ್ಲೂ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರಂತೆ.