ನಟ ಕಮ್ ನಿರ್ದೇಶಕ ಸುಜಯ್ ಶಾಸ್ತ್ರಿ ನಿರ್ದೇಶನದ ‘8’ ಸಿನಿಮಾದಲ್ಲಿ ಅನುರಾಗ್ ಕಶ್ಯಪ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಮೂಲಕ ಅವರು ಸ್ಯಾಂಡಲ್‌ವುಡ್‌ಗೂ (Sandalwood) ಪಾದಾರ್ಪಣೆ ಮಾಡ್ತಿದ್ದಾರೆ. ಈ ಚಿತ್ರವು ಕ್ರಿಡೆಗೆ ಸಂಬಂಧಿಸಿದ ಸ್ಟೋರಿಯಾಗಿದ್ದು, ಅವರ ಪಾತ್ರ ಹೇಗಿರಲಿದೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ.
ಅಂದಹಾಗೆ, ಇತ್ತೀಚೆಗೆ ಅನುರಾಗ್ ಕಶ್ಯಪ್ ನಟಿಸುತ್ತಿರುವ ತಮಿಳು ಸಿನಿಮಾವೊಂದು ಅನೌನ್ಸ್ ಆಗಿತ್ತು. ಅಡವಿ ಶೇಷ್ ಮತ್ತು ಮೃಣಾಲ್ ಠಾಕೂರ್ ನಟನೆಯ ‘ಡಕೋಯ್ಟ್’ ಸಿನಿಮಾದಲ್ಲಿ ಖಡಕ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ಸ್ವಾಮಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಾಲೆ ಧರಿಸಿ ಕಪ್ಪು ಬಣ್ಣದ ಉಡುಗೆ ತೊಟ್ಟಿರುವ ಪೋಸ್ಟರ್ ರಿಲೀಸ್ ಮಾಡಲಾಗಿತ್ತು.
ಕಳೆದ ವರ್ಷ ತಮಿಳಿನಲ್ಲಿ ತೆರೆಕಂಡ ‘ಮಹಾರಾಜ’ ಸಿನಿಮಾದಲ್ಲಿ ವಿಜಯ್ ಸೇತುಪತಿ ಮುಂದೆ ಅನುರಾಗ್ ಕಶ್ಯಪ್ ವಿಲನ್ ಆಗಿ ಅಬ್ಬರಿಸಿದ್ದರು. ಈ ಸಿನಿಮಾದ ನಂತರ ಅವರಿಗೆ ಆಫರ್ ಹೆಚ್ಚಾಗಿದೆ.
ಉಷಾ ಗೋವಿಂದರಾಜು ನಿರ್ಮಾಣದ, ಸುಜಯ್ ಶಾಸ್ತ್ರಿ (Sujay Shastri) ನಿರ್ದೇಶನದಲ್ಲಿ ಚಂದನ್ ಶೆಟ್ಟಿ (Chandan) ನಾಯಕರಾಗಿ ನಟಿಸುತ್ತಿರುವ ‘ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರದ ಪ್ರಮೋಷನ್ ಸಾಂಗ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. ಈ ಹಾಡಿನಲ್ಲಿ ಚಂದನ್ ಶೆಟ್ಟಿ ಅವರ ಜೊತೆ ರಾಗಿಣಿ ದ್ವಿವೇದಿ (Ragini,) ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರೆ ಈ ಹಾಡನ್ನು ಬರೆದಿದ್ದು, ಮಂಗ್ಲಿ ಹಾಗೂ ಚಂದನ್ ಶೆಟ್ಟಿ ಹಾಡಿದ್ದಾರೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡಿಗೆ ಮಾತ್ರ ಚಂದನ್ ಶೆಟ್ಟಿ ಅವರೆ ಸಂಗೀತ ನೀಡಿದ್ದಾರೆ. ಪ್ರವೀಣ್ – ಪ್ರದೀಪ್ ಈ ಚಿತ್ರದ ಸಂಗೀತ ನಿರ್ದೇಶಕರು.
ನಾನು ಕೆಂಪೇಗೌಡ ಚಿತ್ರದಿಂದಲೂ ರಾಗಿಣಿ ಅವರ ಅಭಿಮಾನಿ. ಈಗ ಅವರ ಜೊತೆ ಹಾಡೊಂದರಲ್ಲಿ ನಟಿಸಿರುವುದು ಸಂತೋಷವಾಗಿದೆ. ಹಾಡು ಹಾಗೂ ಚಿತ್ರ ಎಲ್ಲರ ಮನ ಗೆಲಲ್ಲಿದೆ. ಇದು ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಚಂದನ್ ಶೆಟ್ಟಿ. ಇದನ್ನೂ ಓದಿ: ಕ್ರಿಕೆಟರ್ ಆಗುವ ಕನಸು ಕಂಡ ಬಡ ಹುಡುಗಿಗೆ ನಟ ಅರ್ಜುನ್ ಕಪೂರ್ ಸಾಥ್
ಈ ಹಾಡು ಚೆನ್ನಾಗಿದೆ. ಚಂದನ್ ಶೆಟ್ಟಿ ಪ್ರತಿಭಾವಂತ. ಅವರು ಸಂಗೀತ ನೀಡಿ, ಹಾಡುವ ಹಾಡುಗಳು ನನಗೆ ಇಷ್ಟ. ಬಹಳ ದಿನಗಳಿಂದ ಅವರ ಜೊತೆ ನಟಿಸುವ ಕುರಿತು ಮಾತುಕತೆ ನಡೆಯುತ್ತಿತ್ತು. ಈಗ ಈ ಚಿತ್ರದ ಪ್ರಮೋಷನ್ ಸಾಂಗ್ ನಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ ಎಂದು ತಿಳಿಸಿದ ನಟಿ ರಾಗಿಣಿ ದ್ವಿವೇದಿ ಚಿತ್ರಕ್ಕೆ ಶುಭ ಕೋರಿದರು.
ಇದು 80/90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಈ ಕಥೆಯನ್ನು ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದ ಗೋವಿಂದರಾಜು ಅವರಿಗೆ ಹಾಗೂ ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ನನ್ನ ಧನ್ಯವಾದ. ಸದ್ಯದಲ್ಲೇ ನಿಮ್ಮ ಮುಂದೆ ಬರುತ್ತೇವೆ ಎಂದು ನಿರ್ದೇಶಕ ಸುಜಯ್ ಶಾಸ್ತ್ರಿ ತಿಳಿಸಿದರು.
ನಿರ್ದೇಶಕರು ಹೇಳಿದ ಕಥೆ ಕೇಳಿ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಈ ಹಾಡು ಹಾಗೂ ಚಿತ್ರ ನೋಡಿ ಸಂತೋಷವಾಗಿದೆ. ನಾವು ಅಂದಕೊಂಡದಿಕ್ಕಿಂತ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಿರ್ಮಾಪಕ ಗೋವಿಂದರಾಜು.
ನಾಯಕಿ ಅರ್ಚನಾ ಕೊಟ್ಟಿಗೆ ಚಿತ್ರದಲ್ಲಿ ನಟಿಸಿರುವ ರಜನಿಕಾಂತ್, ರಾಕೇಶ್ ಪೂಜಾರಿ, ಕಥೆ ಬರೆದಿರುವ ರಾಜ್ ಗುರು, ಛಾಯಾಗ್ರಹಕ ವಿಶ್ವಜಿತ್ ರಾವ್ ಚಿತ್ರದ ಕುರಿತು ಮಾತನಾಡಿದರು. ಸಮಾರಂಭಕ್ಕೆ ಆಗಮಿಸಿದ್ದ ಚಿತ್ರರಂಗದ ಗಣ್ಯರು ಚಿತ್ರಕ್ಕೆ ಶುಭ ಕೋರಿದರು.
ಚಂದನ್ ಶೆಟ್ಟಿ ಇದೇ ಮೊದಲು ನಾಯಕನಾಗಿ ನಟಿಸುತ್ತಿರುವ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಪತ್ರಿಕಾಗೋಷ್ಠಿ ಶುಕ್ರವಾರ ಬನಶಂಕರಿಯಲ್ಲಿರುವ ಸಂಕ್ರಾಂತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ ಮತ್ತು ನಟ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್ ವಿಜೇತ ಮಂಜು ಪಾವಗಡ ಮುಂತಾದವರು ಹಾಜರಿದ್ದರು.
ನಮ್ಮ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದೆ. ಸದ್ಯದಲ್ಲೇ ಮೊದಲ ಪ್ರತಿ ಬರಲಿದೆ. ಇಂದಿನಿಂದ ಪ್ರಚಾರ ಕಾರ್ಯ ಶುರುವಾಗಲಿದೆ. ಇಂದು ನಮ್ಮ ಚಿತ್ರದ ಮೊದಲ ಹಾಡು (ಗೋಲ್ಡ್ ಫ್ಯಾಕ್ಟರಿ) ಬಿಡುಗಡೆಯಾಗಿದೆ. ಅದೊಂದು ಮದುವೆಯ ಆರತಕ್ಷತೆಯ ಹಾಡು. ಇದೇ ಕಲ್ಯಾಣ ಮಂಟಪದಲ್ಲಿ ಆ ಹಾಡಿನ ಚಿತ್ರೀಕರಣ ನಡೆದಿದ್ದರಿಂದ, ಅದರ ನೆನಪಿನಲ್ಲಿ ಇಲ್ಲೇ ಪತ್ರಿಕಾಗೋಷ್ಠಿ ಮಾಡುತ್ತಿದ್ದೇವೆ. ರಾಜಗುರು ಹೊಸಕೋಟೆ ಬರೆದಿರುವ ಈ ಹಾಡನ್ನು ಗುರುರಾಜ ಹೊಸಕೋಟೆ, ಪ್ರವೀಣ್ – ಪ್ರದೀಪ್ ಹಾಡಿದ್ದಾರೆ. ಇಂದಿನಿಂದ ಐದು ಅಥವಾ 10 ದಿನಗಳಿಗೊಮ್ಮೆ ಚಿತ್ರದ ಹಾಡು ಅಥವಾ ಕಂಟೆಂಟ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರವನ್ನು ಮುಂದುವರೆಸುತ್ತೇವೆ ಎಂದರು ನಿರ್ದೇಶಕ ಸುಜಯ್ ಶಾಸ್ತ್ರಿ.
ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ. ಇಲ್ಲಿ ಚಂದನ್ ಮತ್ತು ಅರ್ಚನಾ ಅವರ ಕೆಮಿಸ್ಟ್ರಿ ಚೆನ್ನಾಗಿ ವರ್ಕೌಟ್ ಆಗಿದೆ. ಅವರು ನಟಿಸಬಾರದು. ಸಹಜವಾಗಿ ವರ್ತಿಸಬೇಕು ಎಂಬುದು ನನ್ನ ಆಸೆ ಆಗಿತ್ತು. ಹಾಗಾಗಿ, ವರ್ಕ್ ಶಾಪ್ ಮಾಡಿದೆ. ಇಬ್ಬರೂ ಬಹಳ ಸಹಜವಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಚಿತ್ರ ವಿಭಿನ್ನವಾಗಿ ಮತ್ತು ನಾವು ಅಂದುಕೊಂಡಿದ್ದಕ್ಕಿಂತ ಚೆನ್ನಾಗಿ ಮೂಡಿಬಂದಿದೆ. ನಿರ್ಮಾಪಕರು ಮತ್ತು ಚಿತ್ರತಂಡದವರ ಸಹಕಾರವಿಲ್ಲದಿದ್ದರೆ, ಈ ಸಿನಿಮಾ ಸಾಧ್ಯವಾಗುತ್ತಿರಲಿಲ್ಲ. ಪ್ರತಿಯೊಬ್ಬರಿಗೂ ನಾನು ಚಿರ ಋಣಿ ಎಂದರು ನಿರ್ದೇಶಕ ಸುಜಯ್ ಶಾಸ್ತ್ರಿ.
ಇಂದು ನಮ್ಮ ಚಿತ್ರದ ಗೋಲ್ಡ್ ಫ್ಯಾಕ್ಟರಿ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿ ಬಂದಿದೆ. ಇದೊಂದು ವಿಭಿನ್ನವಾದ ಚಿತ್ರ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ. ಅವರು ನನ್ನನ್ನು ಚೆನ್ನಾಗಿ ಮೌಲ್ಡ್ ಮಾಡಿದ್ದಾರೆ ಎಂದರು ನಾಯಕ ಚಂದನ್ ಶೆಟ್ಟಿ. ಇದನ್ನೂ ಓದಿ:ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ
ನಟಿಯಾಗಿ ಒಂದು ಕಾಮಿಡಿ ಚಿತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದು ಬಹಳ ಆಸೆ ಇತ್ತು. ಆ ಆಸೆ ಈ ಚಿತ್ರದ ಮೂಲಕ ಈಡೇರಿದೆ. ಚಿತ್ರದಲ್ಲಿ ಅದ್ಭುತವಾದ ತಾರಾಗಣವಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಅಭಿನಯಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಿದ್ಧಸೂತ್ರಗಳ ಚಿತ್ರಗಳು ಸಾಲುಗಟ್ಟಿ ನಿಂತಿರುವಾಗಲೇ ಒಂದು ಮೊಟ್ಟೆಯ ಕಥೆ ಎಂಬ ಚಿತ್ರವನ್ನು ನಿರ್ದೇಶನ ಮಾಡಿ ಮುಖ್ಯ ಪಾತ್ರದಲ್ಲಿ ನಟಿಸಿದ್ದವರು ರಾಜ್ ಬಿ ಶೆಟ್ಟಿ. ಯಾವ ಸ್ಟಾರ್‍ಗಳೂ ಇಲ್ಲದ ಈ ಚಿತ್ರದ ಮೂಲಕವೇ ವಿಭಿನ್ನ ನೋಡದ ನಿರ್ದೇಶಕರಾಗಿ, ನಟರಾಗಿ ಅಚ್ಚರಿ ಹುಟ್ಟಿಸಿದವರು ರಾಜ್ ಶೆಟ್ಟಿ. ಅವರು ತಮ್ಮ ಮೊದಲ ಚಿತ್ರದ ಬಳಿಕ ಈಗ ನಟನಾಗಿಯೇ ಬ್ಯುಸಿಯಾಗಿದ್ದಾರೆ. ಅವರು ನಟಿಸಿರೋ ಬಹುನಿರೀಕ್ಷಿತ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಇದೇ ವರಮಹಾಲಕ್ಷ್ಮಿ ಹಬ್ಬದಂದು ಬಿಡುಗಡೆಯಾಗುತ್ತಿರೋದಾಗಿ ಚಿತ್ರತಂಡ ಘೋಷಿಸಿದೆ.
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಚಿತ್ರದಲ್ಲಿ ಪ್ರತಿಭಾವಂತರ ಮಹಾ ಸಂಗಮವೇ ಸಂಭವಿಸಿದೆ. ರಂಗಭೂಮಿಯಿಂದಲೇ ನಟನಾಗಿ ರೂಪುಗೊಂಡು, ಕಿರುತೆರೆ, ಸಿನಿಮಾಗಳಲ್ಲಿ ನಟಿಸುತ್ತಾ ಪ್ರಸಿದ್ಧರಾಗಿರೋ ಸುಜಯ್ ಶಾಸ್ತ್ರಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರೋ ಸುಜಯ್ ನಿರ್ದೇಶನ ಮಾಡಿರೋ ಮೊದಲ ಚಿತ್ರವಿದು. ದಶಕಗಳ ಕಾಲ ನಟನಾಗಿದ್ದುಕೊಂಡು ಪ್ರೇಕ್ಷಕರ ನಾಡಿ ಮಿಡಿತ ಅರಿತುಕೊಂಡಿರೋ ಸುಜಯ್ ಶಾಸ್ತ್ರಿ ಕಂಪ್ಲೀಟ್ ಕಾಮಿಡಿ ಜಾನರಿನಲ್ಲಿ, ಭಿನ್ನವಾದ ಕಥೆಯೊಂದಿಗೆ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಚಿತ್ರೀಕರಣ ಶುರುವಾದ ಕ್ಷಣದಿಂದಲೇ ಪ್ರೇಕ್ಷಕರ ಗಮನವನ್ನು ತನ್ನತ್ತ ಸೆಳೆದುಕೊಂಡಿತ್ತು. ಆ ನಂತರ ಹೊರ ಬಂದ ಥರ ಥರದ ಪೋಸ್ಟರುಗಳಂತೂ ನಿರೀಕ್ಷೆಗೂ ಮೀರಿ ಕಮಾಲ್ ಸೃಷ್ಟಿಸಿದ್ದವು. ಇತ್ತೀಚೆಗೆ ಹೊರ ಬಂದಿರೋ ಎರಡು ಹಾಡುಗಳಂತೂ ಮಣಿಕಾಂತ್ ಕದ್ರಿಯವರ ಮಾಂತ್ರಿಕ ಸಂಗೀತದೊಂದಿಗೆ ವೈರಲ್ ಆಗಿ ಬಿಟ್ಟಿವೆ. ಹೀಗೆ ಆರಂಭದ ಹಾದಿಯಲ್ಲಿಯೇ ಭರ್ಜರಿ ಪಾಸಿಟಿವ್ ಟಾಕ್ ಕ್ರಿಯೇಟ್ ಆಗಿರೋದರ ಬಗ್ಗೆ ಚಿತ್ರ ತಂಡ ಸಂತಸಗೊಂಡಿದೆ.
ಈಗಾಗಲೇ ಹೊರ ಬಿದ್ದಿರೋ ಮಾಹಿತಿಗಳ ಪ್ರಕಾರ ಹೇಳೋದಾದರೆ ಇದು ಮಜವಾದ ಕಥೆ ಹೊಂದಿರೋ ಸಂಪೂರ್ಣ ಕಾಮಿಡಿ ಚಿತ್ರ. ರಾಜ್ ಬಿ ಶೆಟ್ಟಿ ಒಂದು ಮೊಟ್ಟೆಯ ಕಥೆಗಿಂತಲೂ ಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಂಥಾದ್ದೊಂದು ಹೊಸತನದ ಕಥೆಯನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿರುವವರು ಕ್ರಿಸ್ಟಲ್ ಪಾರ್ಕ್ ಟಿ. ಆರ್ ಚಂದ್ರಶೇಖರ್. ಈಗಾಗಲೇ ಚಮಕ್, ಅಯೋಗ್ಯ, ಬೀರ್‍ಬಲ್ ಮುಂತಾದ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರೋ ಚಂದ್ರಶೇಖರ್ ಅವರು ಗುಬ್ಬಿ ಮೇಲೆ ಬ್ರಹ್ಮಾಸ್ತ್ರವನ್ನು ಮತ್ತಷ್ಟು ರಿಚ್ ಆಗಿ ನಿರ್ಮಾಣ ಮಾಡಿದ್ದಾರೆ. ಇದೇ ವರಮಹಾಲಕ್ಷ್ಮಿ ಹಬ್ಬದಂದು ಈ ಚಿತ್ರ ಬಿಡುಗಡೆಯಾಗಲಿದೆ.