Tag: ಸುದೀಪ್ತೋ ಸೇನ್

  • ಅಂದು ‘ದಿ ಕೇರಳ ಸ್ಟೋರಿ’, ಇಂದು ‘ಬಸ್ತರ್’: ವಿವಾದದ ಸುಳಿಯಲ್ಲಿ ಅದಾ ಸಿನಿಮಾ

    ಅಂದು ‘ದಿ ಕೇರಳ ಸ್ಟೋರಿ’, ಇಂದು ‘ಬಸ್ತರ್’: ವಿವಾದದ ಸುಳಿಯಲ್ಲಿ ಅದಾ ಸಿನಿಮಾ

    ದಿ ಕೇರಳ ಸ್ಟೋರಿ ಮೂಲಕ ಸಂಚಲನ ಸೃಷ್ಟಿ ಮಾಡಿದ್ದ ಸುದೀಪ್ತೋ ಸೇನ್ (Sudipto Sen) ಮತ್ತು ಅದಾ ಶರ್ಮಾ (Adah Sharma) ಕಾಂಬಿನೇಷನ್ ಇದೀಗ ಮತ್ತೊಂದು ಸಿನಿಮಾ ಮಾಡಿ ಅದನ್ನು ರಿಲೀಸ್ ಕೂಡ ಮಾಡಿದೆ. ಬಸ್ತರ್ ಹೆಸರಿನ ಸಿನಿಮಾ ಈ ವಾರ ದೇಶದಾದ್ಯಂತ ಬಿಡುಗಡೆ ಆಗಿದ್ದು, ಈ ಸಿನಿಮಾ ಕೂಡ ವಿವಾದಕ್ಕೆ (Controversy) ಕಾರಣವಾಗಿದೆ. ಅಂದು ದಿ ಕೇರಳ ಸ್ಟೋರಿ ಕೂಡ ವಿವಾದ ಸಿಲುಕಿಕೊಂಡಿತ್ತು.

    ಬಸ್ತರ್ (Bastar) ನಕ್ಸಲೈಟ್ ಕುರಿತಾದ ಸಿನಿಮಾವಾಗಿದ್ದು,  ಸುಳ್ಳಿನ ಹಿಂದಿರುವ ಸತ್ಯವನ್ನು ಈ ಸಿನಿಮಾ ಮೂಲಕ ಹೇಳುವುದಾಗಿ ಚಿತ್ರತಂಡ ತಿಳಿಸಿತ್ತು. ಆ ಸತ್ಯವನ್ನೂ ಸಿನಿಮಾದಲ್ಲಿ ಹೇಳಲಾಗಿದೆ. ನಕ್ಸಲ್ ಹಿಂಸಾಚಾರದ ಕುರಿತಾಗಿ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ಇದೇ ವಿವಾದಕ್ಕೆ ಕಾರಣವಾಗಿದೆ.

    ಭಾರತೀಯ ಸೈನಿಕರನ್ನು ನಕ್ಸಲ್ ರು ಹೇಗೆ ಹತ್ಯೆ ಮಾಡಿದರು ಎನ್ನುವುದನ್ನು ಸಿನಿಮಾದಲ್ಲಿ ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ. ಇದೇ ಆಕ್ರೋಶಕ್ಕೆ ಕಾರಣವಾಗಿದೆ. ಅನಗತ್ಯ ವಿಷಯಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ ಎಂದು ಹಲವರು ಆಕ್ರೋಶ ಹೊರ ಹಾಕಿದ್ದಾರೆ. ಕೆಲವು ಕಡೆ ಸಿನಿಮಾ ಪ್ರದರ್ಶನವನ್ನೂ ನಿಲ್ಲಿಸಿದ್ದಾರೆ.

    ಕಡಿಮೆ ಬಜೆಟ್ ನಲ್ಲಿ ತಯಾರಾದ ದಿ ಕೇರಳ ಸ್ಟೋರಿ ಸಿನಿಮಾ ಕಡಿಮೆ ಅವಧಿಯಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿತು. ವಿವಾದ, ಬೈಕಾಟ್, ಬ್ಯಾನ್ ನಡುವೆಯೂ ಹಲವು ರಾಜ್ಯಗಳಲ್ಲಿ ಇದು ತುಂಬಿದ ಪ್ರದರ್ಶನ ಕಂಡಿತು. ಕೆಲ ರಾಜ್ಯಗಳು ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದರಿಂದ ಹೆಚ್ಚಿನ ಮೊತ್ತ ನಿರ್ಮಾಪಕರಿಗೆ ಹರಿದು ಬಂದಿತ್ತು. ಬಸ್ತರ್ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದೆ.

  • ‘ದಿ ಕೇರಳ ಸ್ಟೋರಿ’ ಸಕ್ಸಸ್‌ ಬಳಿಕ ಮುಂದಿನ ಚಿತ್ರದ ಬಗ್ಗೆ ಅಪ್‌ಡೇಟ್‌ ಕೊಟ್ಟ ನಿರ್ದೇಶಕ ಸುದೀಪ್ತೋ ಸೇನ್

    ‘ದಿ ಕೇರಳ ಸ್ಟೋರಿ’ ಸಕ್ಸಸ್‌ ಬಳಿಕ ಮುಂದಿನ ಚಿತ್ರದ ಬಗ್ಗೆ ಅಪ್‌ಡೇಟ್‌ ಕೊಟ್ಟ ನಿರ್ದೇಶಕ ಸುದೀಪ್ತೋ ಸೇನ್

    ಈ ವರ್ಷ ಬಾಲಿವುಡ್ (Bollywood) ಅಂಗಳದಲ್ಲಿ ಶೇಕ್ ಮಾಡಿದ ಸಿನಿಮಾ ಅಂದರೆ ಅದು ‘ದಿ ಕೇರಳ ಸ್ಟೋರಿ’ ಸಿನಿಮಾ. ಲವ್ ಜಿಹಾದ್ ಕುರಿತ ಈ ಚಿತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಅದರಲ್ಲೂ ಅದಾ ಶರ್ಮಾ ನಟನೆಗೆ ಫ್ಯಾನ್ಸ್ ಬೋಲ್ಡ್ ಆಗಿದ್ರು. ಡೈರೆಕ್ಟರ್ ಸುದೀಪ್ತೋ ಸೇನ್ ಕಥೆ, ನಿರ್ದೇಶನಕ್ಕೆ ಫ್ಯಾನ್ಸ್ ವಾವ್ ಎಂದಿದ್ದರು. ಇದೀಗ ಈ ಚಿತ್ರದ ಸಕ್ಸಸ್ ನಂತರ ಸುದೀಪ್ತೋ ಸೇನ್ ಹೊಸ ಚಿತ್ರಕ್ಕೆ ಕೈ ಜೋಡಿಸಿದ್ದಾರೆ.

    ನಿರ್ದೇಶಕ ಸುದೀಪ್ತೋ ಸೇನ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಇತ್ತೀಚಿನ ‘ದಿ ಕೇರಳ ಸ್ಟೋರಿ’ ಚಿತ್ರ ನಿರ್ದೇಶಕನ ಕೆರಿಯರ್‌ಗೆ ಬಿಗ್ ಟರ್ನಿಂಗ್ ಪಾಯಿಂಟ್ ಕೊಡ್ತು. ಭಾರತದ ಬಾಕ್ಸ್ ಆಫೀಸ್‌ನಲ್ಲಿ ಈ ಚಿತ್ರ 237 ಕೋಟಿ ರೂಪಾಯಿ ಗಳಿಸಿತ್ತು. ಈಗ ಸುದೀಪ್ತೋ ಸೇನ್ ಅವರು ಮಾಡಲಿರುವ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ವಿಶೇಷ ಏನೆಂದರೆ, ಸಾವರ್ಕರ್ ಜೀವನಾಧಾರಿತ ಸಿನಿಮಾಗೆ ಬಂಡವಾಳ ಹೂಡುತ್ತಿರುವ ನಿರ್ಮಾಪಕ ಸಂದೀಪ್ ಸಿಂಗ್ ಜೊತೆ ಸುದೀಪ್ತೋ ಸೇನ್ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ಸಂದೀಪ್ ಸಿಂಗ್ (Sandeep Singh) ಅವರು ಈಗ ‘ಸ್ವಾತಂತ್ರವೀರ್ ಸಾವರ್ಕರ್’ ಮತ್ತು ‘ಮೈ ಅಟಲ್ ಹೂ’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಸುದೀಪ್ತೋ ಸೇನ್ ನಿರ್ದೇಶನ ಮಾಡಲಿರುವ ಹೊಸ ಸಿನಿಮಾಗೆ ಬಂಡವಾಳ ಹೂಡಲು ಸಂದೀಪ್ ಸಿಂಗ್ ಮುಂದಾಗಿದ್ದಾರೆ. ಮತ್ತೆ ಅವರು ನೈಜ ಘಟನೆ ಆಧಾರಿತ ಸಿನಿಮಾವನ್ನು ನಿರ್ಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಈ ಪ್ರಾಜೆಕ್ಟ್ ಕುರಿತು ವಿವರ ಲಭ್ಯವಾಗಲಿ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

    ‘ದಿ ಕೇರಳ ಸ್ಟೋರಿ’ ಸಿನಿಮಾ ಸಕ್ಸಸ್ ನಂತರ ನಿರ್ದೇಶಕ ಸುದೀಪ್ತೋ ಸೇನ್‌ಗೆ ಡಿಮ್ಯಾಂಡ್ ಜಾಸ್ತಿ ಆಗಿದೆ. ಕಥೆ ಹೆಣೆಯೋದ್ರಲ್ಲಿ, ಹೊಸ ಚಿತ್ರದ ನಿರ್ದೇಶನದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ.

  • ದಿ ಕೇರಳ ಸ್ಟೋರಿ ಕೆಟ್ಟ ಯಶಸ್ಸಿನ ಟ್ರೆಂಡ್: ನಟ ನಾಸಿರುದ್ದೀನ್ ಶಾ

    ದಿ ಕೇರಳ ಸ್ಟೋರಿ ಕೆಟ್ಟ ಯಶಸ್ಸಿನ ಟ್ರೆಂಡ್: ನಟ ನಾಸಿರುದ್ದೀನ್ ಶಾ

    ಬಾಲಿವುಡ್ ನ ಖ್ಯಾತ ನಟ ನಾಸಿರುದ್ದೀನ್ ಶಾ (Naseeruddin Shah) ‘ದಿ ಕೇರಳ ಸ್ಟೋರಿ’ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಈ ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿರುವ ಅವರು,  ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದಾರೆ. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು  ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ಈ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಈ ಹಿಂದೆ ಕಮಲ್ ಹಾಸನ್ (Kamal Haasan) ಕೂಡ ಮಾತನಾಡಿದ್ದರು. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದರು. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದರು. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್‌ಗೆ ಸ್ಟಾರ್ ನಟ ಕಮಲ್ ಹಾಸನ್ ವಿಲನ್

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್,  ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದರು.

    ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ಹಲವರು ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದೆ.

     

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಕೆಲ ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.

  • ಕಮಲ್ ಹಾಸನ್ ರನ್ನು ಮೂರ್ಖರ ಪಟ್ಟಿಗೆ ಸೇರಿಸಿದ ‘ದಿ ಕೇರಳ ಸ್ಟೋರಿ’ ಡೈರೆಕ್ಟರ್

    ಕಮಲ್ ಹಾಸನ್ ರನ್ನು ಮೂರ್ಖರ ಪಟ್ಟಿಗೆ ಸೇರಿಸಿದ ‘ದಿ ಕೇರಳ ಸ್ಟೋರಿ’ ಡೈರೆಕ್ಟರ್

    ಕೆಲ ದಿನಗಳ ಹಿಂದೆಯಷ್ಟೇ ನಟ ಕಮಲ್ ಹಾಸನ್ (Kamal Hanas) ದಿ ಕೇರಳ ಸ್ಟೋರಿ ಸಿನಿಮಾ ಬಗ್ಗೆ ಮಾತನಾಡಿದ್ದರು. ಅದೊಂದು ಪ್ರೊಪೊಗಾಂಡ ಸಿನಿಮಾ. ಅಸತ್ಯವನ್ನು ಹೇಳುವಂಥದ್ದು ಎಂದು ಪ್ರತಿಕ್ರಿಯಿಸಿದ್ದರು. ಕಮಲ್ ಮಾತಿಗೆ ದಿ ಕೇರಳ ಸ್ಟೋರಿ (The Kerala Story) ನಿರ್ದೇಶಕ ಸುದೀಪ್ತೋ ಸೇನ್ ರಿಯ್ಯಾಕ್ಟ್ ಮಾಡಿದ್ದಾರೆ. ಕಮಲ್ ಹಾಸನ್ ಅವರನ್ನು ಮೂರ್ಖರ ಪಟ್ಟಿಗೆ ಸೇರಿಸಿದ್ದಾರೆ.

    ಮಾಧ್ಯಮವೊಂದರಲ್ಲಿ ಮಾತನಾಡಿದ ಸುದೀಪ್ತೋ ಸೇನ್ (Sudipto Sen), ‘ದಿ ಕೇರಳ ಸ್ಟೋರಿ ಸಿನಿಮಾ ಬಗ್ಗೆ ಮಾತನಾಡಿದಾಗ ಈವರೆಗೂ ನಾನು ವಿವರಣೆ ಕೊಡುವುದಕ್ಕೆ ಹೋಗುತ್ತಿದ್ದೆ. ಇತ್ತೀಚೆಗೆ ಅದನ್ನು ಬಿಟ್ಟುಬಿಟ್ಟಿದ್ದೇನೆ. ಕೆಲವರು ಮೂರ್ಖರು ಇರುತ್ತಾರೆ. ಅವರಿಗೆ ಇದೇ ಕೆಲಸ. ಯಾರೆಲ್ಲ ಸಿನಿಮಾವನ್ನು ಪ್ರೊಪೊಗಾಂಡ (Propoganda) ಎಂದು ಕರೆಯುತ್ತಾರೋ ಅವರು ಸಿನಿಮಾ ನೋಡಿಯೇ ಇಲ್ಲ. ಸಿನಿಮಾ ನೋಡಿದವರು ಹಾಗೆ ಹೇಳಿಲ್ಲ’ ಎಂದು ಅವರು ಮಾತನಾಡಿದ್ದಾರೆ.  ಇದನ್ನೂ ಓದಿ:ಅಂಬರೀಶ್ ಜನ್ಮದಿನಕ್ಕೆ ಸುಮಲತಾ ಅಂಬರೀಶ್ ಭಾವುಕ ಪತ್ರ

    ಸಿನಿಮಾದಲ್ಲಿ ಸುಳ್ಳು ಹೇಳಿದ್ದರೆ, ಜನರು ನೋಡುತ್ತಲೇ ಇರಲಿಲ್ಲ. ಹೆಚ್ಚು ಸಂಖ್ಯೆಯಲ್ಲಿ ಜನರು ತಮ್ಮ ಚಿತ್ರವನ್ನು ನೋಡಿದ್ದಾರೆ. ನೋಡದೇ ಇರುವವರು ಮಾತನಾಡುತ್ತಾರೆ. ತಮಿಳು ನಾಡಿನಲ್ಲಿ ಸಿನಿಮಾ ರಿಲೀಸ್ ಆಗಿಲ್ಲ. ಹಾಗಾಗಿ ಕಮಲ್ ಹಾಸನ್ ಸಿನಿಮಾ ನೋಡಿಲ್ಲ. ನೋಡದೇ ಆ ರೀತಿ ಮಾತನಾಡುವುದು ತಪ್ಪು ಎಂದಿದ್ದಾರೆ ಸೇನ್.

    ಅಬುಧಾಬಿಯಲ್ಲಿ ನಡೆಯುತ್ತಿರುವ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ್ದ ಕಮಲ್ ಹಾಸನ್, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದರು.

  • ದಿ ಕೇರಳ ಸ್ಟೋರಿ ವಿರೋಧಿಸಿ ಮಾತನಾಡಿದ ಕಮಲ್ ಹಾಸನ್

    ದಿ ಕೇರಳ ಸ್ಟೋರಿ ವಿರೋಧಿಸಿ ಮಾತನಾಡಿದ ಕಮಲ್ ಹಾಸನ್

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಕಮಲ್ ಹಾಸನ್ (Kamal Haasan) ಮಾತನಾಡಿದ್ದಾರೆ. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದಾರೆ. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದಾರೆ.

    ಸದ್ಯ ಕಮಲ್ ಹಾಸನ್ ಅಬುಧಾಬಿಯಲ್ಲಿ ನಡೆಯುತ್ತಿರುವ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅವರು, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದಾರೆ.

    ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ಹಲವರು ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿತು. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಎರಡು ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.

    ಸಂತ್ರಸ್ತೆ (Victim) ಯುವತಿಯೊಬ್ಬಳು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ , ‘ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಅದಾ ಶರ್ಮಾ (Adah Sharma) ಮಾಡಿದ ಪಾತ್ರಕ್ಕೂ ನನ್ನ ಜೀವನಕ್ಕೂ ಅಷ್ಟೇನೂ ವ್ಯತ್ಯಾಸವಿಲ್ಲ. ಅದಾ ಶರ್ಮಾ ಮಾಡಿದ ಪಾತ್ರ ನೂರಕ್ಕೂ ನೂರು ನನ್ನನ್ನೇ ಹೋಲುತ್ತದೆ. ಮನೆಯಲ್ಲಿ ಕೆಳಗೆ ಪೂಜೆ ನಡೆಯುತ್ತಿದ್ದರೆ, ಟೆರೇಸ್ ಮೇಲೆ ನಾನು ನಮಾಜ್ ಮಾಡುತ್ತಿದ್ದೆ. ಅಷ್ಟರ ಮಟ್ಟಿಗೆ ಪರಿವರ್ತನೆ ಮಾಡಿದ್ದರುಎಂದು ಹೇಳಿಕೊಂಡರು.

  • ದಿ ಕೇರಳ ಸ್ಟೋರಿ ಸುಳ್ಳಲ್ಲ: ಸಂತ್ರಸ್ತರನ್ನು ಮಾಧ್ಯಮದ ಮುಂದೆ ತಂದ ಟೀಮ್

    ದಿ ಕೇರಳ ಸ್ಟೋರಿ ಸುಳ್ಳಲ್ಲ: ಸಂತ್ರಸ್ತರನ್ನು ಮಾಧ್ಯಮದ ಮುಂದೆ ತಂದ ಟೀಮ್

    ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ವಾದ ಮಾಡಿದ್ದರು. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿತು.

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಎರಡು ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್. ಇದನ್ನೂ ಓದಿ:ಮಳೆ ಆರ್ಭಟಕ್ಕೆ ಮನೆಗೆ ನೀರು ನುಗ್ಗಿ ಜಗ್ಗೇಶ್ ಕಾರು ಮುಳುಗಡೆ

    ಸಂತ್ರಸ್ತೆ (Victim) ಯುವತಿಯೊಬ್ಬಳು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ , ‘ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಅದಾ ಶರ್ಮಾ (Adah Sharma) ಮಾಡಿದ ಪಾತ್ರಕ್ಕೂ ನನ್ನ ಜೀವನಕ್ಕೂ ಅಷ್ಟೇನೂ ವ್ಯತ್ಯಾಸವಿಲ್ಲ. ಅದಾ ಶರ್ಮಾ ಮಾಡಿದ ಪಾತ್ರ ನೂರಕ್ಕೂ ನೂರು ನನ್ನನ್ನೇ ಹೋಲುತ್ತದೆ. ಮನೆಯಲ್ಲಿ ಕೆಳಗೆ ಪೂಜೆ ನಡೆಯುತ್ತಿದ್ದರೆ, ಟೆರೇಸ್ ಮೇಲೆ ನಾನು ನಮಾಜ್ ಮಾಡುತ್ತಿದ್ದೆ. ಅಷ್ಟರ ಮಟ್ಟಿಗೆ ಪರಿವರ್ತನೆ ಮಾಡಿದ್ದರು’ ಎಂದು ಹೇಳಿಕೊಂಡರ.

    ದಿ ಕೇರಳ ಸ್ಟೋರಿ ಸಾಕಷ್ಟು ಸದ್ದು ಮಾಡುತ್ತಿದೆ. ವಿವಾದ, ನಿಷೇಧದ ನಡುವೆಯೂ ಇಂದು ಅದು 200 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಶನಿವಾರಕ್ಕೆ 183 ಕೋಟಿ ರೂಪಾಯಿಗೂ ಅಧಿಕ ಬಾಕ್ಸ್ ಆಫೀಸ್ ಬಾಚಿದೆ. ಇನ್ನೂ ಸಾಕಷ್ಟು ಕಡೆ ತುಂಬಿದ ಪ್ರದರ್ಶನವನ್ನು ಚಿತ್ರ ಕಾಣುತ್ತಿದೆ.

  • ದಿ ಕೇರಳ ಸ್ಟೋರಿ 2 ನಿರ್ದೇಶನಕ್ಕೆ ತೆರೆಮರೆಯಲ್ಲಿ ತಯಾರಿ : ಸ್ಟೋರಿ ಏನು?

    ದಿ ಕೇರಳ ಸ್ಟೋರಿ 2 ನಿರ್ದೇಶನಕ್ಕೆ ತೆರೆಮರೆಯಲ್ಲಿ ತಯಾರಿ : ಸ್ಟೋರಿ ಏನು?

    ಗಾಗಲೇ ನೂರಾರು ಕೋಟಿ ಗಳಿಕೆ ಮಾಡಿ, ಹಲವು ಕಡೆ ಇನ್ನೂ ತುಂಬಿದ ಪ್ರದರ್ಶನ ಕಾಣುತ್ತಿರುವ ‘ದಿ ಕೇರಳ ಸ್ಟೋರಿ’ ಸಿನಿಮಾ ಎರಡನೇ ಭಾಗವಾಗಿ ಮೂಡಿ ಬರಲಿದೆಯಾ? ಇಂಥದ್ದೊಂದು ಸುದ್ದಿ ಸಿನಿಮಾ ರಂಗದಲ್ಲಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ಎನ್ನುವಂತೆ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ (Sudeepto Sen) ಕೂಡ ಈ ಬಗ್ಗೆ ಮಾತನಾಡಿದ್ದಾರೆ. ದಿ ಕೇರಳ ಸ್ಟೋರಿ 2 (The Kerala Story 2) ಮಾಡುವಂತೆ ಆಫರ್ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.

    ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಹಿಂದೂ ಹುಡುಗಿಯರನ್ನು ಟಾರ್ಗೆಟ್ ಮಾಡಿ, ಅವರನ್ನು ಮತಾಂತರಿಸಿ ಉಗ್ರರನ್ನಾಗಿಸುವ ಕಥೆಯನ್ನು ಹೊಂದಿತ್ತು. ಎರಡನೇ ಭಾಗದಲ್ಲಿ ಮುಸ್ಲಿಂ ಮುಗ್ಧ ಹುಡುಗರ ತಲೆಕೆಡಿಸಿ ಉಗ್ರರನ್ನಾಗಿ ಹೇಗೆ ಮಾಡಲಾಗುತ್ತಿದೆ ಎನ್ನುವ ಕಥೆಯನ್ನು ಹೊಂದಿರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತಾಗಿ ನಿರ್ದೇಶಕರು ಕೆಲ ಸುಳಿವುಗಳನ್ನೂ ನೀಡಿದ್ದಾರೆ. ಆದರೆ, ಅಧಿಕೃತವಾಗಿ ಯಾವಾಗ ಘೋಷಣೆಯಾಗಲಿದೆ ಎನ್ನುವ ಕುರಿತು ಅವರು ತಿಳಿಸಿಲ್ಲ. ಇದನ್ನೂ ಓದಿ:ಪವಿತ್ರಾ ಲೋಕೇಶ್ ಗೆ ಪ್ರೀತಿಯಿಂದ ‘ಅಮ್ಮು’ ಎಂದು ಕರೆಯುತ್ತೇನೆ : ನಟ ನರೇಶ್

    ಈಗಾಗಲೇ ಸಿನಿಮಾ ಭಾರತದಲ್ಲೇ ನೂರೈವತ್ತು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ವಿದೇಶದಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆಸ್ಟ್ರೇಲಿಯಾ (Australia), ಅಮೆರಿಕ (America) ಸೇರಿದಂತೆ ಹಲವು ದೇಶಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಆಸ್ಟ್ರೇಲಿಯಾದಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ರಿಲೀಸ್ ಆಗಿ ಎರಡನೇ ದಿನಕ್ಕೆ 46 ಲಕ್ಷ ರೂಪಾಯಿ ಕಮಾಯಿ ಮಾಡಿದೆ ಎಂದು ವರದಿಯಾಗಿದೆ. ಅಲ್ಲದೇ, ಅಮೆರಿಕಾದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಎರಡು ರಾಜ್ಯಗಳಲ್ಲಿ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಈ ಪ್ರಮಾಣದಲ್ಲಿ  ಕಲೆಕ್ಷನ್ ಆಗೋಕೆ ಸಾಧ್ಯ ಎಂದು ಹಲವರು ಪ್ರಶ್ನಿಸಿದ್ದಾರೆ. ಈ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಮಾಡಿದ್ದಾರೆ. ಆದರೆ, ಬಾಲಿವುಡ್ ಸಿನಿ ಪಂಡಿತರ ಲೆಕ್ಕಾಚಾರವೇ ಬೇರೆ ಇದೆ. ಮೂರು ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ಘೋಷಣೆ ಮಾಡಿರುವುದರಿಂದ ಇನ್ನೂ ಭಾರಿ ಪ್ರಮಾಣದಲ್ಲಿ ಹಣ ಹರಿದು ಬರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

  • ದಿ ಕೇರಳ ಸ್ಟೋರಿ ಟ್ರೈಲರ್ : ಬೆಚ್ಚಿಬೀಳಿಸುವ ಕರಾಳ ಸತ್ಯ

    ದಿ ಕೇರಳ ಸ್ಟೋರಿ ಟ್ರೈಲರ್ : ಬೆಚ್ಚಿಬೀಳಿಸುವ ಕರಾಳ ಸತ್ಯ

    ಕೇರಳ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ‘ ದಿ ಕೇರಳ ಸ್ಟೋರಿ’ (The Kerala Story) ಟ್ರೈಲರ್ (Trailer) ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೇರಳದ ಸುಮಾರ 36 ಸಾವಿರ ಹುಡುಗಿಯರ ನಾಪತ್ತೆಯ ಹಿಂದಿರುವ ಕರಾಳ ಮುಖವನ್ನು ಈ ಸಿನಿಮಾದಲ್ಲಿ ತೋರಿಸಲು ಹೊರಟಿದ್ದು, ವಿದೇಶದಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ಮತಾಂತರ ಹಾಗೂ ಐಸಿಸ್ ಉಗ್ರಗಾಮಿಗಳನ್ನು ಆಗಿಸುವ ಭಯಾನಕ ಸತ್ಯವನ್ನು ಈ ಸಿನಿಮಾ ತೆರೆದಿಡಲಿದೆಯಂತೆ.

    ಧಾರ್ಮಿಕ ವಿಚಾರಗಳನ್ನು ಪ್ರಧಾನವಾಗಿಟ್ಟುಕೊಂಡು ಮಾಡಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ನೂರಾರು ಕೋಟಿ ಬಾಚುತ್ತಿದ್ದಂತೆಯೇ ಫೈಲ್ಸ್ ಹೆಸರಿನಲ್ಲಿ ಕೆಲ ಸಿನಿಮಾಗಳು ಸೆಟ್ಟೇರಿದ್ದವು. ಅವುಗಳಲ್ಲಿ ಮಲಯಾಳಂ ಸಿನಿಮಾ ರಂಗದ ‘ದಿ ಕೇರಳ ಸ್ಟೋರಿ’ ಕೂಡ ಒಂದು. ಈ ಸಿನಿಮಾದ ಟೀಸರ್ ಈ ಹಿಂದಿ ರಿಲೀಸ್ ಆಗಿತ್ತು. ಆ ಹೊತ್ತಿನಲ್ಲಿ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ಕೇರಳದ ಮುಖ್ಯಮಂತ್ರಿಗಳಿಗೆ ಕೆಲವರು ಮನವಿ ಮಾಡಿದ್ದರು.

    ಕೇರಳದಿಂದ ವಿದೇಶಕ್ಕೆ ಉದ್ಯೋಗ ಅರಸಿಕೊಂಡು ಹೋದ ಮಹಿಳೆಯ ಕಥೆಯನ್ನು ಒಳಗೊಂಡಿರುವ ಈ ಸಿನಿಮಾದಲ್ಲಿ ವಿವಾದಿತ (Controversy) ಅಂಶಗಳು ಇವೆ ಎಂದು ವಿರೋಧ ವ್ಯಕ್ತವಾಗಿತ್ತು. ಬುರ್ಖಾ ಧರಿಸಿದ ಪ್ರಧಾನ ಪಾತ್ರಧಾರಿ ‘ನಾನು ಶಾಲಿನಿ, ನರ್ಸ್ ಆಗಿ ಜನಸೇವೆ ಮಾಡಬೇಕು ಅಂತಿದ್ದೆ. ಆದರೆ, ನಾನು ಫಾತಿಮಾ ಆಗಿ ಐಸಿಎಸ್ ಉಗ್ರಸಂಘಟನೆಗೆ ಸೇರಿಕೊಂಡು ಭಯೋತ್ಪಾದಕಿ ಆಗಿದ್ದೇನೆ’ ಈ ರೀತಿಯ ಸಂಭಾಷಣೆ ಇತ್ತು. ಇಂತಹ ಮಾತು ಮತ್ತು ಕಥೆ ವಿವಾದಕ್ಕೀಡಾಗಿತ್ತು. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಇದರ ಜೊತೆಗೆ ಕೇರಳದಲ್ಲಿ ಮಹಿಳೆಯನ್ನು ವಿದೇಶಕ್ಕೆ ಕರೆದುಕೊಂಡು ಹೋಗಿ ಭಯೋತ್ಪಾದನೆ ಚಟುವಟಿಕೆಗೆ ಹಚ್ಚುವ ಸಂಘಟನೆಗಳು ಇವೆ ಎಂದು ಸಿನಿಮಾದಲ್ಲಿ ಹೇಳಲಾಗಿದೆ. ಇದರಿಂದಾಗಿ ಕೇರಳಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನವನ್ನು ಸಿನಿಮಾದಲ್ಲಿ ಮಾಡಲಾಗಿದೆ. ಇಂತಹ ಚಿತ್ರಗಳು ಬಿಡುಗಡೆಯಾದರೆ, ದೇಶಕ್ಕೆ ಮತ್ತು ರಾಜ್ಯಕ್ಕೆ ಎಂತಹ ಕೆಟ್ಟ ಹೆಸರು ಬರಬಹುದು ಯೋಚಿಸಿ ಎಂದು ಹಲವು ರಾಜಕೀಯ ಮುಖಂಡರು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

    ಈ ಸಿನಿಮಾವನ್ನು ಬ್ಯಾನ್ ಮಾಡುವ ಕುರಿತಾಗಿ ಮಾತನಾಡಿರುವ ಸಿನಿಮಾದ ನಿರ್ಮಾಪಕ ವಿಫುಲ್ ಶಾ, ‘ನಾವು ಸಿನಿಮಾದಲ್ಲಿ ಯಾವುದನ್ನೂ ಸುಳ್ಳು ಹೇಳಿಲ್ಲ. ಎಲ್ಲದಕ್ಕೂ ನಮ್ಮ ಹತ್ತಿರ ಸಾಕ್ಷಿ ಇವೆ. ಯಾರೇ ಪ್ರಶ್ನೆ ಮಾಡಿದರೂ ನಾವು ಉತ್ತರಿಸುತ್ತೇವೆ. ನಿಮಗೆ ಬೇಕಾಗಿರುವ ಸಾಕ್ಷಿ ಏನು ಅಂತ ವಿವರಿಸಿ’ ಎಂದಿದ್ದರು. ಇದು ಸತ್ಯದ ದರ್ಶನವಾಗಿದ್ದರಿಂದ ಸರಕಾರ ಬ್ಯಾನ್ ಮಾಡುವಂತಹ ಯೋಚನೆ ಮಾಡಲಾರದು ಎಂದು ವಿಶ್ವಾಸವನ್ನು ವ್ಯಕ್ತ ಪಡಿಸಿದ್ದರು.