Tag: ಸುಧಾಕರ್ ಕೆ.

  • 5 ವರ್ಷದೊಳಗಿನ ಮಕ್ಕಳಿಗೆ ಒಂದು ತಿಂಗಳು ರಜೆ: ಸುಧಾಕರ್

    5 ವರ್ಷದೊಳಗಿನ ಮಕ್ಕಳಿಗೆ ಒಂದು ತಿಂಗಳು ರಜೆ: ಸುಧಾಕರ್

    ಬೆಂಗಳೂರು: ಕೊರೊನಾ ವೈರಸ್ ಆತಂಕ ಹೆಚ್ಚಾದ ಹಿನ್ನೆಲೆಯಲ್ಲಿ 5 ವರ್ಷದ ಕೆಳಗಿನ ಶಾಲೆಗೆ ಹೋಗುವ ಮಕ್ಕಳಿಗೆ ಒಂದು ತಿಂಗಳು ರಜೆ ಕೊಡಲಾಗುವುದು ಎಂದು ವೈದ್ಯಕೀಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

    ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಚಿಕ್ಕ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರಲಿದೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವೈದ್ಯಕಿಯ ಇಲಾಖೆ ಸಮಕ್ಷಮದಲ್ಲಿ ರಜೆ ಘೋಷಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ನಾವು ಈಗಾಗಲೇ ಮುನ್ನೆಚ್ಚರಿಕೆ ಮತ್ತು ಮಾರ್ಗಸೂಚಿಯನ್ನು ನೀಡಿದ್ದೇವೆ ಎಂದು ತಿಳಿಸಿದರು.

    5 ವರ್ಷದೊಳಗಿನ ಮಕ್ಕಳಿಗೆ ಮಾರ್ಚ್ 31ರವರೆಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಬೇಸಿಗೆ ರಜೆ ಮುಗಿದ ನಂತರವೇ 5 ವರ್ಷದೊಳಗಿನ ಮಕ್ಕಳಿಗೆ ಶಾಲೆ ಆರಂಭವಾಗಲಿವೆ. ಪ್ರಿನರ್ಸರಿ, ಎಲ್‍ಕೆಜಿ ಮತ್ತು ಯುಕೆಜಿ ಕಲಿಯುತ್ತಿರುವ ರಾಜ್ಯದ ಎಲ್ಲ ಮಕ್ಕಳಿಗೆ ರಜೆ ಸಿಗಲಿದೆ.

    ಈ ಕುರಿತು ಟ್ವೀಟ್ ಮಾಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ಯುಕೆಜಿ, ಎಲ್‍ಕೆಜಿ ಶಾಲೆಗಳಿಗೆ ಇಂದಿನಿಂದ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದರು.

  • ಕಾಂಗ್ರೆಸ್ ಮುಳುಗುವಂತಹ ಹಡುಗು, ಅದಕ್ಕೆ ಬಿಟ್ಟೆ: ಸುಧಾಕರ್

    ಕಾಂಗ್ರೆಸ್ ಮುಳುಗುವಂತಹ ಹಡುಗು, ಅದಕ್ಕೆ ಬಿಟ್ಟೆ: ಸುಧಾಕರ್

    ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷ ಮುಳುಗಿ ಹೋಗುವಂತಹ ಹಡುಗು, ಹೀಗಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದೇನೆ ಅಂತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಕೆ ಸುಧಾಕರ್ ಹೇಳಿದರು.

    ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಶಾಸಕ ಸುಧಾಕರ್, ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿ ಭವಿಷ್ಯವಿಲ್ಲ. ದೇಶವನ್ನ ಕಟ್ಟುವ ಸಾಮಥ್ರ್ಯ ಇರೋದು ಕೇವಲ ಬಿಜೆಪಿ ಪಕ್ಷಕ್ಕೆ ಮಾತ್ರ. ದೇಶದ ಮೇಲೆ ವಿಶೇಷ ಪ್ರೀತಿ ಹಾಗೂ ಗೌರವ ಇರುವ ಪಕ್ಷ ಅದು ಬಿಜೆಪಿ. ಹೀಗಾಗಿ ಮುಂದಿನ 25-30 ವರ್ಷಗಳ ದೇಶದ ಅಭಿವೃದ್ಧಿ ಹಾಗೂ ರಾಜಕೀಯ ದೂರದೃಷ್ಟಿ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಎಂದು ತಿಳಿಸಿದರು.

    ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಶಾಸಕ ಸುಧಾಕರ್, ಕೆಲವೇ ದಿನಗಳಲ್ಲಿ ಸುಧಾಕರ್ ಮಂತ್ರಿಯಾಗುತ್ತಾರೆ ಎಂದು ಮಾನ್ಯ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದು. ಹೀಗಾಗಿ ಬಿಎಸ್‍ವೈ ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಅದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದಿದ್ದರು.