ಕನ್ನಡದ ಬಿಗ್‌ಬಾಸ್ ಸೀಸನ್ 12ರ (BBK 12) ಪ್ರಸಾರದ ದಿನಾಂಕ ಫಿಕ್ಸ್ ಆಗಿರುವುದರಿಂದ ಮನೆಯೊಳಗೆ ಹೋಗುವ ಸ್ಪರ್ಧಿಗಳ ಕುರಿತು ನಿರೀಕ್ಷೆ ಜೋರಾಗಿದೆ.
ಕಾರ್ಯಕ್ರಮ ಪ್ರಸಾರವಾಗೋದಕ್ಕೂ ಮುನ್ನವೇ ಕೆಲವು ಸ್ಪರ್ಧಿಗಳ ಹೆಸರು ಬಹಿರಂಗವಾಗುವುದು ಸಾಮಾನ್ಯ. ಅದರಂತೆ ಈ ಬಾರಿಯೂ ದೊಡ್ಮನೆಗೆ ಹೋಗುವ ಸ್ಪರ್ಧಿಗಳ ಸಂಭವನೀಯ ಪಟ್ಟಿ ಮುನ್ನಲೆಗೆ ಬಂದಿದ್ದು ಅದರಲ್ಲಿ ಹಿರಿಯ ನಟಿ ಸುಧಾರಾಣಿ (Actress Sudharani) ಹೆಸರು ಚಾಲ್ತಿಯಲ್ಲಿದೆ.
ಖ್ಯಾತ ನಟಿ ಸುಧಾರಾಣಿ, ಸುದೀಪ್ (Sudeep) ಜೊತೆಯೂ ನಟಿಸಿದ್ದ ನಟಿ, ಇವರು ಬಿಗ್‌ಬಾಸ್‌ಗೆ ಹೋಗ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಸದ್ಯ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಹೆಚ್ಚು ಸಕ್ರಿಯವಾಗಿರುವ ನಟಿ ಸುಧಾರಾಣಿ ಸೋಶಿಯಲ್ ಮೀಡಿಯಾದಲ್ಲೂ ಆಕ್ಟೀವ್ ಆಗಿದ್ದು, ಹೆಚ್ಚು ಫಾಲವೋರ್ಸ್ ಹೊಂದಿರುವ ಹಿರಿಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಇವರು ಬಿಗ್‌ಬಾಸ್ ಸೀಸನ್ 12ರ ಹೈಲೈಟ್ ಕಂಟೆಸ್ಟಂಟ್ ಎನ್ನಲಾಗುತ್ತಿದೆ.
ಸಾಮಾನ್ಯವಾಗಿ ಬಿಗ್‌ಬಾಸ್ ಸ್ಪರ್ಧೆಯಲ್ಲಿ ಸ್ಪರ್ಧಿಗಳನ್ನ ಆಯ್ಕೆ ಮಾಡಿಕೊಳ್ಳುವಾಗ ಎಲ್ಲಾ ವಯೋಮಾನ ಹಾಗೂ ಸಿನಿಮಾ, ಸೀರಿಯಲ್, ಸೋಷಿಯಲ್ ಮೀಡಿಯಾ ಎಲ್ಲದರ ಖ್ಯಾತಿಯನ್ನ ಗಣನೆಗೆ ತೆಗೆದುಕೊಳ್ಳಲಾಗುತ್ತೆ. ಅದರಂತೆ ಸುಧಾರಾಣಿ ಅವರಿಗೆ ಆಹ್ವಾನ ಹೋಗಿದೆ ಎನ್ನಲಾಗುತ್ತಿದೆ.
ಈ ವಿಚಾರವಾಗಿ ಸುಧಾರಾಣಿ ತಮ್ಮ ಇನ್‌ಸ್ಟಾಪೇಜ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. `ಯಾರ್ ಹೇಳಿದ್ದು’ ಎಂದು ಕೇಳಿ ಸಾಕ್ಷಿ ಕೇಳಿದ್ದಾರೆ. ಹೀಗಾಗಿ ಸುಧಾರಾಣಿ ಈ ಮಾತು ಸದ್ಯಕ್ಕೆ ಗೊಂದಲ ಸೃಷ್ಟಿಸಿದ್ದರೂ ಬಿಗ್‌ಬಾಸ್ ಮನೆಯಲ್ಲಿ ಸುಧಾರಾಣಿ ನೋಡುವ ಕುತೂಹಲವಂತೂ ಪ್ರೇಕ್ಷಕರಲ್ಲಿದೆ.
ಕರ್ನಾಟಕ ಹಾಗೂ ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಅದನ್ನು ಒಪ್ಪಲ್ಲ ಎಂದು ನಟಿ ಸುಧಾರಾಣಿ (Sudha Rani) ಹೇಳಿದ್ದಾರೆ.
ನಟ ಕಮಲ್ ಹಾಸನ್ (Kamal Haasan) ಅವರ `ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎಂಬ ಹೇಳಿಕೆ ರಾಜ್ಯದಲ್ಲಿ ತ್ರೀವ ಆಕ್ರೋಶ ಹುಟ್ಟುಹಾಕಿದೆ. ಈ ಹೇಳಿಕೆ ಸಂಬಂಧ ಮಾತನಾಡಿದ ಅವರು, ನಮ್ಮ ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಹೇಳಿದರೂ ಅದನ್ನು ಒಪ್ಪಿಕೊಳ್ಳಲು ಆಗುವುದಿಲ್ಲ. ಆ ಸಮಯದಲ್ಲಿ ಖಂಡಿತವಾಗಿ ನಾವು ಎಲ್ಲರೂ ಒಟ್ಟಿಗೆ ನಿಂತೇ ನಿಲ್ಲುತ್ತೇವೆ. ನಮ್ಮ ಕನ್ನಡ ಭಾಷೆಯ ಬಗ್ಗೆ ದಾಖಲೆ ಇದೆ. ಅದನ್ನು ತೋರಿಸಿ ಅಂತಹವರಿಗೆ ತಿಳಿಹೇಳಬೇಕು. ಆದರೆ ಅವತ್ತು ಅಲ್ಲಿ ಏನು ನಡೆಯಿತು ಎಂದು ನಿಜಕ್ಕೂ ನನಗೆ ಗೊತ್ತಿಲ್ಲ. ದಯವಿಟ್ಟು ಆ ಬಗ್ಗೆ ಕೇಳಬೇಡಿ, ನಾನು ಮಾತನಾಡುವುದಿಲ್ಲ ಎಂದಿದ್ದಾರೆ.ಇದನ್ನೂ ಓದಿ: ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್ ನಮ್ದೇʼ ಎಂದ ಡಿಂಪಲ್ ಕ್ವೀನ್
ನಮ್ಮ ನಾಡು, ನುಡಿ ಬಗ್ಗೆ ಈ ರೀತಿ ಮಾತನಾಡಿದರೆ ಅದು ತಪ್ಪು. ಕಮಲ್ ಹಾಸನ್ ಅವರು ಕ್ಷಮೆ ಕೇಳಬಹುದು ನೋಡೋಣ ಎಂದು ಹೇಳಿದ್ದಾರೆ.
ಏನಿದು ವಿವಾದ?
ಮೇ 27ರಂದು `ಥಗ್ ಲೈಫ್’ (Thug Life) ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ (Bengaluru) ಆಗಮಿಸಿತ್ತು. ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದರು. ಈ ಕುರಿತು ಇತ್ತೀಚಿಗೆ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ಅವರು, ನಾನು ಹೇಳಿದ್ದು ನನ್ನ ಪ್ರಕಾರ ಸರಿ, ನಾನು ಕ್ಷಮೆ ಕೇಳಲ್ಲ ಎಂದು ಹೇಳಿದ್ದರು.
ಅದಾದ ಬಳಿಕ ಮತ್ತೆ ಮಾತನಾಡಿದ್ದ ಕಮಲ್ ಹಾಸನ್, ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು.ಇದನ್ನೂ ಓದಿ: ಚಿತ್ರ ಬಿಡುಗಡೆಯಾದರಷ್ಟೇ ಪ್ರದರ್ಶನ: ವಿಕ್ಟರಿ ಥಿಯೇಟರ್ ಯೂ ಟರ್ನ್
ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾ ತಾರಾಬಳಗದ ಮೂಲಕ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ನಟಿ ಹಾಗೂ ನಿರ್ದೇಶಕಿಯಾಗಿರುವ ಶೀತಲ್ ಶೆಟ್ಟಿ, ಹಿರಿಯ ಕಲಾವಿದ ಮೂಗು ಸುರೇಶ್ ಅವರನ್ನು ಚಿತ್ರತಂಡ ಪರಿಚಯಿಸಿತ್ತು. ಫೈರ್ ಫ್ಲೈ ಸಿನಿಮಾ ಬಳಗಕ್ಕೀಗ ಹಿರಿಯ ನಟಿ ಸುಧಾರಾಣಿ ಸೇರಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಅದ್ಭುತ ಕಲಾವಿದೆಯಾಗಿರುವ ಸುಧಾರಾಣಿ ಈಗ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾದ ಭಾಗವಾಗಿದ್ದಾರೆ. ಅವರು ಪದ್ಮಾ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕನ ತಾಯಿಯಾಗಿ ಸುಧಾರಾಣಿ ಒಂದೊಳ್ಳೆ ಪಾತ್ರವನ್ನು ನಿಭಾಯಿಸಿರುವ ಖುಷಿ ಅವರಲ್ಲಿದೆ. ಈಗಾಗಲೇ ಸುಧಾರಾಣಿ ತಮ್ಮ ಭಾಗದ ಚಿತ್ರೀಕರಣ ಮುಗಿಸಿ ಡಬ್ಬಿಂಗ್ ಕೂಡ ಕಂಪ್ಲೀಟ್ ಮಾಡಿದ್ದಾರೆ.
ತಮ್ಮ ಪಾತ್ರದ ಬಗ್ಗೆ ಮಾತಾಡಿರುವ ಸುಧಾರಾಣಿ, ‘ಅಪ್ಪಾಜಿಯವರ ಮನೆಯಿಂದ ಯಾರು ಏನೇ ಮಾಡಿದರೂ ಅದು ನನ್ನ ತವರು ಮನೆ. ಹಾಗಾಗಿ ಇವತ್ತಿಗೂ ಅವರಲ್ಲಿ ಯಾರಾದ್ರೂ ಬಂದು ಹಿಂದೆ ಬಂದು ನಿಂತು ಹೋಗು ಅಂದ್ರೆ ನಾನು ತಯಾರಿದ್ದೇನೆ. ಏಕೆಂದರೆ ಇದು ನನ್ನ ಮನೆ. ನಿವಿ ನನ್ನ ಕಣ್ಣ ಮುಂದೆ ಹುಟ್ಟಿ ಬೆಳೆದಂತ ಮಗು, ಇವತ್ತು ಅವಳು ಒಂದು ನಿರ್ಮಾಣ ಸಂಸ್ಥೆ ಶುರು ಮಾಡುತ್ತಿದ್ದಾಳೆ, ಅವಳು ನಿರ್ಮಾಪಕಿಯಾಗಿದ್ದಾಳೆ. ನನಗೆ ತುಂಬಾ ಖುಷಿ ಇದೆ. ಕಥೆಯಿಂದ ಹಿಡಿದು ಪ್ರೊಡಕ್ಷನ್ ವರೆಗೂ ಸಿನೆಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ನಮ್ಮ ಕನ್ನಡದ ಕಲಾಭಿಮಾನಿಗಳು ಈ ಚಿತ್ರಕ್ಕೆ ಬೆಂಬಲ ನೀಡಬೇಕು. ನಿರ್ದೇಶಕರಿಗೆ ಸ್ವಲ್ಪ ಮುಜುಗರ ಇತ್ತು. ನನ್ನ ಇಷ್ಟು ಚಿಕ್ಕ ಪಾತ್ರ ಕೇಳಬೇಕು ಅಂತಾ ಆದ್ರೆ ಚೊಚ್ಚಲ ನಿರ್ದೇಶಕರಾಗಿ ಅವರಲ್ಲಿದ್ದ ಹುಮ್ಮಸ್ಸು. ಆಸಕ್ತಿ ನನಗೆ ಇಷ್ಟ ಆಯಿತು. ನಿರ್ದೇಶಕರಾಗಿ ನಟನೆಯೂ ಮಾಡುತ್ತಿರುವುದರಿಂದ ಎಲ್ಲರಿಗೂ ಅವರ ಮೊದಲ ಸಿನಿಮಾ ದೊಡ್ಡ ಬಜೆಟ್, ಮಲ್ಟಿಸ್ಟಾರ್ಸ್, ಆಕ್ಷನ್ ಸಿನಿಮಾ ಆಗಿರಬೇಕು ಅಂತಾ ಬಹುತೇಕರು ಯೋಚನೆ ಮಾಡುತ್ತಾರೆ. ಆದರೆ ಈ ವಿಚಾರದಲ್ಲಿ ಅವರು ವಿಭಿನ್ನ. ಸಂಬಂಧಗಳ ಬಗ್ಗೆ ಅವರು ಫೋಕಸ್ ಮಾಡಿದ್ದಾರೆ. ಇಡೀ ಕುಟುಂಬ ಕುಳಿತುಕೊಂಡು, ನೋಡಿ ಇಷ್ಟವಾಗುವಂತ ಚಿತ್ರವನ್ನು ಮಾಡಿದ್ದಾರೆ’ ಎಂದಿದ್ದಾರೆ.
‘ಫೈರ್ ಫ್ಲೈ’ ಚಿತ್ರದಲ್ಲಿ ವಂಶಿ ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಈಗ ನಿವೇದಿತಾ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಶುರು ಮಾಡಿದ್ದಾರೆ.
ಶಿವರಾಜಕುಮಾರ್ ಅವರು ಯಾವಾಗಲೂ ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರ ರೀತಿಯೇ ನಿವೇದಿತಾ ಶಿವರಾಜಕುಮಾರ್ ಕೂಡ ಹೊಸಬರಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಹಾಗೂ ಹೊಸ ಆಲೋಚನೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಈ ಸಂಸ್ಥೆ ಕಾರ್ಯಪ್ರವೃತ್ತವಾಗಿದೆ. ‘ಫೈರ್ ಫ್ಲೈ’ ಚಿತ್ರಕ್ಕೆ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ರಘು ನಿಡುವಳ್ಳಿ ಅವರು ಸಂಭಾಷಣೆಯ ಬರೆಯುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಒಂದು ಹಾಡಿನ ಶೂಟಿಂಗ್ ಬಾಕಿ ಉಳಿಸಿಕೊಂಡಿದೆ
ಲೀಲಾವತಿ (Leelavathi) ಅವರ ನಿಧನಕ್ಕೆ ಸ್ಯಾಂಡಲ್‌ವುಡ್ ನಟ, ನಟಿಯರು ಕಂಬನಿ ಮಿಡಿದಿದ್ದಾರೆ. ನಟಿ ತಾರಾ (Tara), ಸುಧಾರಾಣಿ, ಶ್ರುತಿ (Shruthi), ಮಾಳವಿಕಾ, ಭವ್ಯ (Bhavya) ಅವರು ಲೀಲಾವತಿ ಅಂತಿಮ ದರ್ಶನ ಪಡೆದಿದ್ದಾರೆ. ಲೀಲಾವತಿ ಜೊತೆಗಿನ ಬಾಂಧವ್ಯದ ಬಗ್ಗೆ ನಟಿಯರು ಮಾತನಾಡಿದ್ದಾರೆ. ಇದನ್ನೂ ಓದಿ:ಬೆಂಗಳೂರಿನಿಂದ ಹೊರಟ ಲೀಲಾವತಿ ಪಾರ್ಥೀವ ಶರೀರ
ಲೀಲಾವತಿಯವರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಜೊತೆಗೆ ನಾನು ಹೆಚ್ಚು ಒಡನಾಟ ಇಲ್ಲ. ಅವರ ಜೊತೆ ಹೆಚ್ಚು ಆಕ್ಟ್ ಮಾಡೋದಕ್ಕೆ ನನಗೆ ಸನ್ನಿವೇಶ ಇರಲಿಲ್ಲ. ಆದರೆ ವಿನೋದ್ ರಾಜ್ ಜೊತೆ ನಾನು ಆಕ್ಟ್ ಮಾಡಿದ್ದೇನೆ ಎಂದು ತಾರಾ ಮಾತನಾಡಿದ್ದಾರೆ. ವಿನೋದ್ ರಾಜ್ ಮಾತ್ರ ತಾಯಿ ಬಿಟ್ಟು ಬಂದಿರೋದನ್ನು ಎಲ್ಲೂ ನೋಡಿಲ್ಲ. ಹೀಗಾಗಿ ಅವರ ಬಗ್ಗೆ ನನಗೆ ನೋವು ಆಗುತ್ತಿದೆ. ಲೀಲಾವತಿ ಅವರು ಆದರ್ಶ ಜೀವನ ನಡೆಸಿದ್ದಾರೆ. ಅವರ ಕುಟುಂಬಕ್ಕೆ ಮುಖ್ಯವಾಗಿ ವಿನೋದ್ ರಾಜ್‌ಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಾರಾ (Tara) ಮಾತನಾಡಿದ್ದಾರೆ.
ನಾನು ನಟಿಸಿದ ಮೊದಲ ಚಿತ್ರದಲ್ಲೇ ಲೀಲಾವತಿ ಅವರ ಜೊತೆ ನಟಿಸುವ ಚಾನ್ಸ್ ಸಿಕ್ಕಿತ್ತು. ಕಳೆದ ಒಂದೂವರೆ ತಿಂಗಳ ಹಿಂದೆ ಅವರನ್ನ ಭೇಟಿಯಾಗಿದ್ದೆ, ಇದೀಗ ನಾನು ನಟಿಸುತ್ತಿರೋ ಧಾರಾವಾಹಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ನನಗೆ ವೈಯಕ್ತಿಕವಾಗಿ ಲೀಲಾವತಿ ಅವರು ರೋಲ್ ಮಾಡೆಲ್ ಆಗಿದ್ದರು. ನಟಿ, ತಾಯಿಯಾಗಿ ಮಾತ್ರವಲ್ಲ ಪರಿಸರ ಪ್ರೇಮಿಯಾಗಿ, ಸಮಾಜಮುಖಿ ಕಾರ್ಯಗಳ ಮೂಲಕ ಲೀಲಾವತಿ ಆದರ್ಶ ವ್ಯಕ್ತಿಯಾಗಿದ್ದರು. ಲೀಲಾವತಿ ನಿಧನದಿಂದ ಚಿತ್ರರಂಗಕ್ಕೆ ದೊಡ್ಡ ಮಟ್ಟದಲ್ಲಿ ನಷ್ಟ ಆಗಿದೆ ಎಂದು ಸುಧಾರಾಣಿ (Sudharani) ಮಾತನಾಡಿದ್ದಾರೆ.
ಅಭಿನಯ, ಹಲವು ದಶಕಗಳ ಪಯಣ ಎಲ್ಲವೂ ನಮಗೆ ಪ್ರೇರಣೆ. ಕಲಾವಿದೆಯಾಗಿ ಅವರಿಗೆ ಅವರೇ ಸಾಟಿ ಎಂದು ಲೀಲಾವತಿ ಅವರನ್ನ ಬಣ್ಣಿಸಿದ್ದಾರೆ ನಟಿ ಮಾಳವಿಕಾ. ಹಿರಿಯ ಕಲಾವಿದೆಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಸಾರ್ಥಕ ಬದುಕನ್ನು ಲೀಲಾವತಿ ಅಮ್ಮ ಕಟ್ಟಿಕೊಂಡಿದ್ದಾರೆ. ಎಲ್ಲರಿಗೂ ಕಷ್ಟ ಬರುತ್ತೆ, ಆದರೆ ತುಂಬಾ ಧೈರ್ಯದಿಂದ ದಿಟ್ಟ ಮಹಿಳೆಯಾಗಿ ನಿಭಾಯಿಸಿದ್ದಾರೆ. ಅಮ್ಮ ಸಿಂಗಲ್ ಪೇರೆಂಟ್ ಆಗಿ ಒಳ್ಳೆಯ ವ್ಯಕ್ತಿಯನ್ನಾಗಿ ಮಗನನ್ನು ಬೆಳೆಸಿದ್ದರು. ಭಗವಂತ ಕೊಟ್ಟ ಆಯಸ್ಸಿನಲ್ಲಿ ಆದರ್ಶವಾಗಿ ಬೆಳೆದಿದ್ದರು. ನಮ್ಮಂತಹ ಅನೇಕ ಕಲಾವಿದರಿಗೆ ಆದರ್ಶರಾಗಿದ್ದಾರೆ. ಅಮ್ಮ, ಮಗ ಬೆಳೆದ ರೀತಿ ಆಶ್ಚರ್ಯ ಆಗುತ್ತಿದೆ. ತಾಯಿಯನ್ನು ಕಳೆದುಕೊಂಡು ವಿನೋದ್ ರಾಜ್ ಹೇಗಿರ್ತಾರೋ ಅನಿಸುತ್ತಿದೆ. ಎಲ್ಲರ ಆಶೀರ್ವಾದದಿಂದ ವಿನೋದ್ ರಾಜ್ ಚೆನ್ನಾಗಿರಲಿ ಎಂದು ನಟಿ ಶ್ರುತಿ (Shruthi) ಮಾತನಾಡಿದ್ದಾರೆ.
ಚಿತ್ರರಂಗದಲ್ಲಿ ಲೀಲಾವತಿ ಅಮ್ಮನ ಸಾಧನೆ ಅಪಾರವಾದದ್ದು, ಪ್ರೀತಿಯ ಅಮ್ಮ ನಮ್ಮನ್ನೆಲ್ಲ ಅಗಲಿದ್ದಾರೆ. ಲೀಲಾವತಿ ಅವರ ತಾಳ್ಮೆಯ ಮೂರ್ತಿಯಾಗಿದ್ದರು. ನಿಸರ್ಗಕ್ಕೆ ಹತ್ತಿರವಾಗಿ ಜೀವನ ಮಾಡುತ್ತಿದ್ದರು. ವಿನೋದ್, ಲೀಲಾವತಿ ಬಾಂಧವ್ಯ ಅಪರೂಪದ್ದು ಎಂದು ಹಿರಿಯ ನಟಿ ಭವ್ಯ ಹೇಳಿದ್ದಾರೆ. ‘ಹೊಸಬಾಳು’ ಸಿನಿಮಾದಲ್ಲಿ ಲೀಲಾವತಿ ಜೊತೆ ತೆರೆಹಂಚಿಕೊಂಡಿದ್ದರ ಬಗ್ಗೆ ಭವ್ಯ ಸ್ಮರಿಸಿದ್ದಾರೆ.
ದಶಕಗಳ ಕಾಲ ಕನ್ನಡ ಸಿನಿಮಾದಲ್ಲಿ ನಟಿಸಿ ಕೋಟಿ ಕೋಟಿ ಅಭಿಮಾನಿಗಳಲ್ಲಿ ಚಿರಸ್ಥಾಯಿಯಾಗಿ ನಿಂತಿದ್ದಾರೆ. ಲೀಲಕ್ಕ ಮಾತೃ ಸ್ಥಾನದಲ್ಲಿದ್ದಾರೆ. ಕನ್ನಡ ಚಿತ್ರರಂಗ ಪ್ರಖ್ಯಾತಿ ಹೊಂದಲು ಅವರ ಕೊಡುಗೆ ಅಪಾರ. ನಮ್ಮ ಕುಟುಂಬದಲ್ಲಿ ಹಿರಿಯರನ್ನ ಕಳೆದುಕೊಳ್ಳುತ್ತಲೇ ಇದ್ದೇವೆ. ಅದಕ್ಕಿಂತಲೂ ಹೆಚ್ಚಾಗಿ ತಾಯಿಗೆ ಮಗ – ಮಗನಿಗೆ ತಾಯಿ ಹೀಗೆ ಅವರಿಬ್ಬರ ಬಾಂಧವ್ಯ ಬಹಳ ವಿಶೇಷ. ಕಷ್ಟಕೋಟಲೆಗಳ ಮಧ್ಯೆ ದೃತಿಗೆಡದೆ ಎದ್ದು ನಿಂತ ಮಹಿಳೆ. ಬಡವರಿಗೆ ಸಹಾಯ ಮಾಡುತ್ತಿದ್ದರು. ಕೃಷಿಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಹೀಗೆ ಸಾರ್ಥಕ ಜೀವನ ನಡೆಸಿದ್ದಾರೆ. ಅವರ ಮಗನಿಗೆ ದುಃಖ ಬರಿಸುವ ಶಕ್ತಿಯನ್ನು ದೇವರು ಕೊಡಲಿ ಎಂದು ಹಿರಿಯ ನಟ ರಮೇಶ್ ಭಟ್ ಕಂಬನಿ ಮಿಡಿದಿದ್ದಾರೆ.
ಅವರ ಜೊತೆಗೆ ಕಾಲ ಕಳೆಯುವ ಅದ್ಭುತ ಅವಕಾಶ ಸಿಕ್ಕಿತು. ಅವರು ಕೊಟ್ಟ ಊಟ ಮಾಡಿದ್ದೆ. ನಾನು ಸಹ ನಿರ್ದೇಶಕನಿದ್ದಾಗಿನಿಂದಲೂ ಲೀಲಾವತಿ ಅವರೊಂದಿಗೆ ಒಡನಾಟ ಇಟ್ಟುಕೊಂಡಿದ್ದೇನೆ. ಅವರ ಸಂಸ್ಥೆಯ 2 ಚಿತ್ರಗಳಿಗೆ ಕೆಲಸ ಮಾಡಿದ್ದೇನೆ. ವಿನೋದ್ ರಾಜ್ ಅವರ 4 ಚಿತ್ರಗಳಿಗೆ ನಿರ್ದೇಶನ ಮಾಡಿದ್ದೇನೆ. ನಮ್ಮ ಒಡನಾಟ ಹೇಳಿಕೊಳ್ಳಲಾಗದು. ಬಹಳ ಕಷ್ಟಕಾಲದಲ್ಲಿ ಸಹಾಯ ಮಾಡಿದ್ದಾರೆ. ನನ್ನ ತಾಯಿ ಕಳೆದುಕೊಂಡಷ್ಟೇ ದುಃಖವಾಗುತ್ತಿದೆ. ಇನ್ನೂ ವಿಶೇಷವಾಗಿ ನಮಗೆ ಕಾಣುವುದು ತಾಯಿ-ಮಗನ ಬಾಂಧವ್ಯ. ಮಗನನ್ನು ಬೆಳೆಸಿದ ರೀತಿ, ಕಲಿಸಿದ ಸಂಸ್ಕೃತಿಯಲ್ಲಿ ತಾಯಿ ಮಾರ್ಗದರ್ಶಕರಾದರೆ, ಕೆಲವೊಂದು ಸಂದರ್ಭದಲ್ಲಿ ಮಗನೇ ತಾಯಿಗೇ ಗುರುವಾಗಿದ್ದರು. ವಿನೋದ್ ರಾಜ್ ಅವರಂತಹ ಮಗನಿಗೆ ಜನ್ಮ ಕೊಡದೇ ಇದ್ದಿದ್ದರೆ 30 ವರ್ಷಗಳ ಮುಂಚೆಯೇ ನಮ್ಮನ್ನು ಬಿಟ್ಟು ಹೋಗಿಬಿಡುತ್ತಿದ್ದರು. ಏಕೆಂದರೆ ವಿನೋದ್ ತಾಯಿಗೆ ಆಕ್ಸಿಜನ್ ಆಗಿದ್ದರು. ಒಬ್ಬರಿಗೊಬ್ಬರು ಗುರುವಾಗಿ ಬದುಕಿದ್ದಾರೆ. ಈಗ ತಾಯಿ ಇಲ್ಲದ ಪ್ರಪಂಚವನ್ನು ವಿನೋದ್ ರಾಜ್ ಹೇಗೆ ನೋಡುತ್ತಾರೆ ಅನ್ನೋದು ಚಿಂತೆಯಾಗಿದೆ ಎಂದು ಎಸ್. ನಾರಾಯಣ್ ಭಾವುಕ ನುಡಿಗಳನ್ನಾಡಿದ್ದಾರೆ.
ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ (ಡಿ.8) ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಡಿಸೆಂಬರ್ 8ರಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ಇಹಲೋಕ ತ್ಯಜಿಸಿದ್ದರು.
ಚಿತ್ರರಂಗದ ಎವರ್‌ಗ್ರೀನ್ ಬ್ಯೂಟಿ ಸುಧಾರಾಣಿ (Sudharani) ಅವರು ತಮಿಳಿನತ್ತ (Kollywood) ಮುಖ ಮಾಡಿದ್ದಾರೆ. ಕಾಲಿವುಡ್ ಪ್ರತಿಭೆ ಚೇತನ್ ಚೀನು ನಟನೆಯ ಹೊಸ ಸಿನಿಮಾದಲ್ಲಿ ಸುಧಾರಾಣಿ ಪ್ರಮುಖ ಪಾತ್ರವೊಂದನ್ನ ಪ್ಲೈ ಮಾಡ್ತಿದ್ದಾರೆ. ತಮಿಳಿನ ‘ಜಂಟಲ್‌ಮ್ಯಾನ್ 2’ ನಟಿಸಲು ಸುಧಾರಾಣಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
‘ಜಂಟಲ್‌ಮ್ಯಾನ್’ ಅಂದಾಕ್ಷಣ ನೆನಪಾಗೋದು ಅರ್ಜುನ್ ಸರ್ಜಾ ಅವರ ಸಿನಿಮಾ. ಕಾಲಿವುಡ್‌ನಲ್ಲಿ ಜಂಟಲ್‌ಮ್ಯಾನ್ ಸಿನಿಮಾ ಹೊಸ ಅಲೆ ಎಬ್ಬಿಸಿತ್ತು. ಆದರೆ ಈಗ ಇದೇ ಟೈಟಲ್‌ನಲ್ಲಿ 2ನೇ ಪಾರ್ಟ್ ಮಾಡುವ ಬಗ್ಗೆ ಚಿತ್ರತಂಡ ಅನೌನ್ಸ್ ಮಾಡಿದೆ. ಹೊಸ ಕಥೆ, ಹೊಸ ಚಿತ್ರತಂಡದ ಜೊತೆ ಜಂಟಲ್‌ಮ್ಯಾನ್ ಪಾರ್ಟ್ 2 ಬರುತ್ತಿದೆ. ಇದನ್ನೂ ಓದಿ:ನ್ಯೂಯಾರ್ಕ್‌ನ 41ನೇ ಇಂಡಿಯಾ ಡೇ ಪರೇಡ್‌ನಲ್ಲಿ ಭಾಗಿಯಾದ ಸಮಂತಾ
ಚೇತನ್ ಚೀನು ನಾಯಕನಾಗಿ ನಟಿಸಲಿರುವ ಚಿತ್ರಕ್ಕೆ ನಯನತಾರಾ ಚಕ್ರವರ್ತಿ, ಪ್ರಿಯಾ ಲಾಲ್ ಹೀರೋಯಿನ್ ಆಗಿದ್ದಾರೆ. ಕನ್ನಡದ ನಟಿ ಸುಧಾರಾಣಿ (Sudharani) ಈ ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನ ನಿರ್ವಹಿಸಿದ್ದಾರೆ. ನಟಿ ಸಿತಾರಾ (Sitara), ಸುಮನ್ ಹಾಗೂ ಸತ್ಯಪ್ರಿಯಾ ಅವರೂ ಅಭಿನಯಿಸಿದ್ದಾರೆ. ಮೊನ್ನೆ ಚೆನ್ನೈನಲ್ಲಿ ಚಿತ್ರದ ಮುಹೂರ್ತ ಆಗಿದೆ. ನಿರ್ಮಾಪಕ ಕೆ.ಟಿ.ಕುಂಜುಮೋನ್ ಈ ಚಿತ್ರವನ್ನ ದೊಡ್ಡಮಟ್ಟದಲ್ಲಿಯೇ ತಯಾರಿಸುತ್ತಿದ್ದಾರೆ.
ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜಂಟಲ್‌ಮ್ಯಾನ್-2 (Gentlemen 2) ಚಿತ್ರ ಬರಲಿದೆ. ಬಹು ಭಾಷೆಯಲ್ಲಿ ಬರುತ್ತಿರುವ ಈ ಚಿತ್ರವನ್ನ ಗೋಕುಲ್ ಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ. ಎಂ.ಎಂ.ಕೀರವಾಣಿ ಅವರ ಸಂಗೀತದಲ್ಲಿ ಸಿನಿಮಾ ಮೂಡಿ ಬರಲಿದೆ. ಅಜಯನ್ ವಿನ್ಸೆಂಟ್ ಕ್ಯಾಮೆರಾ ವರ್ಕ್ ಮಾಡುತ್ತಿದ್ದಾರೆ. ತೋಟ ತಾರಿಣಿ ಅವರ ಕಲಾ ನಿರ್ದೇಶನ ಮಾಡುತ್ತಿದ್ದಾರೆ.
ನಟ ವಿಜಯ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ (Spandana) ಅಂತಿಮ ದರ್ಶನದಲ್ಲಿ ಸುಧಾರಾಣಿ (Sudhrani) ಭಾಗಿಯಾಗಿದ್ದಾರೆ. ಸ್ಪಂದನಾ ಸಾವು ನಿಜಕ್ಕೂ ಬೇಸರ ಸಂಗತಿ. ರಾಘು ಮತ್ತು ಸ್ಪಂದನಾ ಒಳ್ಳೆಯ ಸಂಸ್ಕೃತಿ ಇದ್ದ ದಂಪತಿಯಾಗಿದ್ದರು ಎಂದು ನಟಿ ಸುಧಾರಾಣಿ ಭಾವುಕರಾದರು.
ಸ್ಪಂದನಾ (Spandana) ಅಂತಿಮ ದರ್ಶನ ಪಡೆದ ನಟಿ ಸುಧಾರಾಣಿ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದರು. ರಾಘು- ಸ್ಪಂದನಾ ಒಳ್ಳೆಯ ಸಂಸ್ಕೃತಿ ಇದ್ದ ದಂಪತಿಗಳಾಗಿದ್ದರು. ಈ ಜೋಡಿಯ ಮೇಲೆ ಯಾರ ಕೆಟ್ಟ ದೃಷ್ಟಿ ಬಿತ್ತೋ ಗೊತ್ತಿಲ್ಲ. ಸ್ಪಂದನಾ ಮೃದು ಸ್ವಭಾವದ ಹುಡುಗಿಯಾದರು. ನಾವು ಎಲ್ಲೇ ಮೀಟ್ ಮಾಡಿದ್ರೂ ನಗು ನಗುತಾ ಮಾತಾಡ್ತಿದ್ದರು. ಇತ್ತೀಚೆಗೆ ಸಿಕ್ಕಿದ್ದರು. ಹೆಚ್ಚಿಗೆ ಮಾತಾಡೋಕೆ ಆಗಲಿಲ್ಲ. ಸ್ಪಂದನಾ ತುಂಬಾ ಒಳ್ಳೆಯ ಹುಡುಗಿ. ಏನು ಹೇಳಬೇಕೋ ಗೊತ್ತಾಗ್ತಿಲ್ಲ. ಮಗ ಶೌರ್ಯ ಇನ್ನೂ ಚಿಕ್ಕವನು. ಸ್ಪಂದನಾ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸೋ ಶಕ್ತಿ ಕೊಡಲಿ ಎಂದು ನಟಿ ಮಾತನಾಡಿದರು. ಇದನ್ನೂ ಓದಿ:ಹೃದಯಾಘಾತದಿಂದ ಹೆಸರಾಂತ ನಿರ್ದೇಶಕ ಸಿದ್ದಿಕಿ ನಿಧನ
ಬ್ಯಾಂಕಾಕ್‌ಗೆ ತೆರಳಿದ್ದಾಗ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ. ಮಂಗಳವಾರ ರಾತ್ರಿ ಬ್ಯಾಂಕಾಕ್‌ನಿಂದ ಕಾರ್ಗೋ ವಿಮಾನದಲ್ಲಿ ತಂದ ಮೃತದೇಹವನ್ನ ಸುಮಾರು 30 ನಿಮಿಷಗಳ ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಸದ್ಯ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹಾಗೂ ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದು, ವಿಜಯ ರಾಘವೇಂದ್ರ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ.
ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಹರಿಶ್ಚಂದ್ರ ಘಾಟ್ ನಲ್ಲಿ ಮಧ್ಯಾಹ್ನ 2 ಗಂಟೆಗೆ ಬರ್ನಿಂಗ್‌ಗೆ ಸ್ಲಾಟ್ ಬುಕ್ಕಿಂಗ್ ಮಾಡಲಾಗಿದೆ. ಈಡಿಗ ಸಮುದಾಯದ ಸಂಪ್ರದಾಯದಂತೆ ಪೂಜೆ ಪುನಸ್ಕಾರ ನಡೆಸಿ ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಅಂತ್ಯಕ್ರಿಯೆಗೆ ಪೂಜೆ ಪುನಸ್ಕಾರ ಹಿನ್ನೆಲೆ ಬಿಬಿಎಂಪಿಯಿಂದ ಕೂಡ ಸ್ವಚ್ಛತಾ ಕಾರ್ಯ ಮಾಡಲಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಸುಧಾರಾಣಿ (Sudharani) ಇತ್ತೀಚೆಗೆ ತಮ್ಮ ಏರಿಯಾದ ಶ್ವಾನ ಕಳೆದು ಹೋಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡಿದ್ದರು. ಜೊತೆಗೆ ಬಿಬಿಎಂಪಿ (Bbmp) ವಿರುದ್ಧ ನಟಿ ಕಿಡಿಕಾರಿದ್ದರು. ಈಗ ಮುದ್ದಿನ ಶ್ವಾನ ಗಂಗು, ಸುಧಾರಾಣಿ ಅವರಿಗೆ ಸಿಕ್ಕಿದೆ. ಈ ಬಗ್ಗೆ ನಟಿ ಸೋಷಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಂಗಳೂರು ಬೆಡಗಿಗೆ ಒಲಿಯುತ್ತಾ ಭುವನ ಸುಂದರಿ ಕಿರೀಟ?
ನಟಿ ಸುಧಾರಾಣಿ ಮನೆಯಲ್ಲಿ ಸಂಕ್ರಾಂತಿ ಸಂಭ್ರಮ (Sankrathi Festival) ಹೆಚ್ಚಾಗಿದೆ. ಈ ವೇಳೆ ನಟಿಯ ಕುಟುಂಬಕ್ಕೆ ಗುಡ್ ನ್ಯೂಸ್ ಕೂಡ ಸಿಕ್ಕಿದೆ. ಕಳೆದುಹೋಗಿದ್ದ ಶ್ವಾನ ಗಂಗು ವಾಪಾಸ್ ಆದ ಸಂತಸದಲ್ಲಿದ್ದಾರೆ. ಸುಧಾರಾಣಿ ಅವರ ಮನೆಯ ಪ್ರೀತಿಯ ನಾಯಿ ಗಂಗು ಕಳೆದುಹೋಗಿತ್ತು. ಕಳೆದ 15 ದಿನಗಳಿಂದ ನಾಯಿ ಕಾಣಿಸುತ್ತಿಲ್ಲ ಹುಡುಕಿ ಕೊಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ಭಾವುಕ ಪೋಸ್ಟ್ ಶೇರ್ ಮಾಡಿದ್ದರು. ಅಲ್ಲದೇ ಬಿಬಿಎಂಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಇದೀಗ ಗಂಗು ಸಿಕ್ಕಿದೆ ಎನ್ನುವ ಸಂತಸದ ವಿಚಾರವನ್ನು ಶೇರ್ ಮಾಡಿದ್ದಾರೆ.
ಪ್ರೀತಿಯ ಗಂಗು ಜೊತೆ ವಿಡಿಯೋ ಶೇರ್ ಮಾಡಿರುವ ಸುಧಾರಾಣಿ ಅವರು ಹುಡುಕಿ ಕೊಟ್ಟವರಿಗೆ ಧನ್ಯವಾದ ತಿಳಿಸಿದ್ದಾರೆ. `ನಮಸ್ಕಾರ ನನಗೆ ತುಂಬಾ ಖುಷಿಯಾಗಿದೆ. ನನ್ನ ಗಂಗು ಸಿಕ್ಕಿದ್ದಾಳೆ. ಗಂಗುಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು. ಶಬೀರ್ ಪಾಷ, ಅಮನ್ ದೀಪ್ ಸಿಂಗ್, ಪೂಜಾ ಎಲ್ಲರಿಗೂ ಧನ್ಯವಾದಗಳು.
ಗಂಗು ಹತ್ತಿರನೇ ಕಾದು ಕುಳಿತು ಎಲ್ಲಿಗೂ ಹೋಗದಂತೆ ನೋಡಿಕೊಂಡು ಅದನ್ನು ರಕ್ಷಿಸಿ ತಂದು ಕೊಟ್ಟ ಶಬೀರ್ ಮತ್ತು ಅಮನ್ ದೀಪ್ ಅವರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ. ಸುಧಾರಾಣಿ ಜೊತೆ ಕುಳಿತಿರುವ ಗಂಗು ಕೂಡ ಕಾಣಿಸಿಕೊಂಡಿದೆ.
Live Tv
[brid partner=56869869 player=32851 video=960834 autoplay=true]
ಕನ್ನಡ ಚಿತ್ರರಂಗದ (Kannada Film Industry) ಪ್ರತಿಭಾನ್ವಿತ ನಟಿ ಸುಧಾರಾಣಿ ಸಿನಿಮಾ ಬಿಟ್ಟು ಶ್ವಾನದ ವಿಚಾರವಾಗಿ ಇದೀಗ ಸುದ್ದಿಯಲ್ಲಿದ್ದಾರೆ. ತಮ್ಮ ಏರಿಯಾದ ಶ್ವಾನ ಗಂಗಮ್ಮ ಕಾಣಿಸುತ್ತಿಲ್ಲ ಎಂದು ಬೇಸರ ಹೊರಹಾಕೋದರ ಜೊತೆಗೆ ಬಿಬಿಎಂಪಿ (BBMP) ವಿರುದ್ಧ ನಟಿ ಸುಧಾರಾಣಿ (Actress Sudharani) ಗರಂ ಆಗಿದ್ದಾರೆ.
`ಆನಂದ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಿತರಾದ ನಟಿ ಸುಧಾರಾಣಿ ಬಳಿಕ ಸಾಕಷ್ಟು ಚಿತ್ರಗಳ ಮೂಲಕ ಗಮನ ಸೆಳೆದರು. ಪ್ರಸ್ತುತ ಕಿರುತೆರೆಯಲ್ಲಿ ʻಶ್ರೀರಸ್ತು ಶುಭಮಸ್ತುʼ ಸೀರಿಯಲ್‌ನಲ್ಲಿ ಪ್ರಮುಖ ಪಾತ್ರದ ಮೂಲಕ ನಟಿ ಸದ್ದು ಮಾಡ್ತಿದ್ದಾರೆ. ಇದರ ನಡುವೆ ತಮ್ಮ ಶ್ವಾನದ ಬಗ್ಗೆ ನಟಿ ಬೇಸರಹೊರಹಾಕಿದ್ದಾರೆ. ನಮ್ಮ ಏರಿಯಾದ ಶ್ವಾನ ಗಂಗಮ್ಮ (Pet Gangamma) ಸಿಕ್ಕರೆ ಮಾಹಿತಿ ನೀಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ಅಳಲು ತೋಡಿಕೊಂಡಿದ್ದಾರೆ.
ಇನ್ನೂ ಬೆಂಗಳೂರಿನ ಮಲ್ಲೇಶ್ವರಂನಲ್ಲಿ (Malleshwaram) ವಾಸಿಸುತ್ತಿರುವ ನಟಿ ಸುಧಾರಾಣಿ ತಮ್ಮ ಮನೆಯಲ್ಲಿ ಎರಡು ಗೋಲ್ಡನ್ ರೆಟ್ರೀವರ್ ಶ್ವಾನಗಳನ್ನು ಸಾಕಿದ್ದಾರೆ. ಜೊತೆಗೆ ತಮ್ಮ ಏರಿಯಾದ ಶ್ವಾನ ಗಂಗಮ್ಮ ಮೇಲೂ ವಿಶೇಷ ಪ್ರೀತಿತಯಿದ್ದು, ಶ್ವಾನ 15 ದಿನಗಳಿಂದ ಕಾಣೆಯಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಬಿಬಿಎಂಪಿಗೆ ದೂರು ಕೊಟ್ಟರೂ ಕೂಡ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮಕ್ಕಾಗಿ ಮತ್ತೆ ಜೊತೆಯಾದ ಬಿಗ್ ಬಾಸ್ ಸ್ಪರ್ಧಿಗಳು
ನಮಸ್ಕಾರ ನಿಮ್ಮೆಲ್ಲರಿಗೂ, ನಾನು ಹಲವಾರು ಬಾರಿ ಪೋಸ್ಟ್ ಹಾಕಿರುವೆ. ಸುಮಾರು 15 ದಿನಗಳಿಂದ ನಮ್ಮ ಶ್ವಾನ ಗಂಗಮ್ಮ ಕಾಣಿಸುತ್ತಿಲ್ಲ ಅಪ್ಪಿತಪ್ಪಿ ನಿಮ್ಮ ಏರಿಯಾದಲ್ಲಿ ಕಾಣಿಸಿಕೊಂಡರೆ ನನ್ನನ್ನು ಟ್ಯಾಗ್ ಮಾಡಿ ಒಂದು ಪೋಸ್ಟ್ ಹಾಕಿ. ದಯವಿಟ್ಟು ಇದು ನನ್ನ ಪರ್ಸನಲ್ ರಿಕ್ವೆಸ್ಟ್ ಏಕೆಂದರೆ ನಾವೆಲ್ಲರೂ ಆಕೆಯನ್ನು ಮಿಸ್ ಮಾಡಿಕೊಳ್ಳುತ್ತಿದ್ದೀವಿ. ಗಂಗಮ್ಮ ಇಂಡೀ ಜಾತಿ (ಬೀದಿ) ನಾಯಿ ಆಗಿದ್ದು ಕಪ್ಪು- ಬಿಳಿ ಬಣ್ಣದಲ್ಲಿದೆ. ಆಕೆ ಮರುಳಿ ಮನೆಗೆ ಬರಬೇಕು. ಬಿಬಿಎಂಪಿಗೆ ನಾವು ಮನವಿ ಮಾಡಿಕೊಳ್ಳುತ್ತೀವಿ ಆಕೆಯನ್ನು ಹುಡುಕಿ ನಮಗೆ ಮಾಹಿತಿ ನೀಡಿ. ಗಂಗಮ್ಮನ ನಾವು ವಾಪಸ್ ಕಡೆದುಕೊಂಡು ಬರಬೇಕು’ ಎಂದು ಸುಧಾರಾಣಿ ಮನವಿ ಮಾಡಿದ್ದಾರೆ.
ಮನೆಯಲ್ಲಿ ಸಾಕುತ್ತಿರುವ ಎರಡು ಶ್ವಾನಗಳಿಗೆ ಮಿಕ್ಕಿ ಅಂಡ್ ಮಿನಿ ಎಂದು ಹೆಸರಿಟ್ಟಿದ್ದಾರೆ. ಮನೆಯಲ್ಲಿ ಮಗಳ ಜೊತೆ ಸೇರಿಕೊಂಡು ಮಿಕ್ಕಿ-ಮಿನಿ ಮಾಡುವ ತುಂಟಾಟಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಾರೆ.
Live Tv
[brid partner=56869869 player=32851 video=960834 autoplay=true]
`ಆನಂದ್’ ಚಿತ್ರದ ಮೂಲಕ ಶಿವರಾಜ್‌ಕುಮಾರ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದ ನಟಿ ಸುಧಾರಾಣಿ ಈಗ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಅದ್ಬುತ ನಟನೆಯಿಂದ ಇವರು ದಶಕಗಳಿಂದ ಪ್ರೇಕ್ಷಕರ ಪ್ರೀತಿಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈಗ ಕಿರುತೆರೆಯಲ್ಲೂ ಮನಗೆಲ್ಲಲು ರೆಡಿಯಾಗಿದ್ದಾರೆ.
ಡಾ.ಸುಧಾರಾಣಿ ಅವರು ಖಾಸಗಿ ವಾಹಿನಿಯ ಧಾರಾವಾಹಿವೊಂದರಲ್ಲಿ ಮುಖ್ಯ ಪೋಷಕ ನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಹೊರಗಿನ ಪ್ರಪಂಚವನ್ನು ಮರೆತು ತನ್ನ ಕುಟುಂಬವೇ ಒಂದು ಪ್ರಪಂಚ ಎಂದು ಬದುಕುತ್ತಿರುವ ಒಂದು ಹೆಣ್ಣು ತಾಯಿಯಾಗಿ, ಸೊಸೆಯಾಗಿ ಮನೆ ಹೀಗೆ ನಿಭಾಯಿಸಿಕೊಂಡು ಹೋಗುತ್ತಾಳೆ ಎಂಬ ಕಥೆಯಲ್ಲಿ ಮುಖ್ಯ ಪಾತ್ರಧಾರಿಯಾಗಿ ನಟಿಸಿದ್ದಾರೆ. ಈ ಮೂಲಕ ಕಿರುತೆರೆಯತ್ತ ಬಂದಿರುವ ಸುಧಾರಾಣಿ ಈಗ ಬೋಲ್ಡ್ ಆಗಿ ಫೋಟೋಶೂಟ್ ಕೂಡ ಮಾಡಿಸಿದ್ದಾರೆ. ಇದನ್ನೂ ಓದಿ: ದುಬಾರಿ ಕಾರು ಖರೀದಿಸಿದ ನಟ ರಿಷಬ್ ಶೆಟ್ಟಿ
ಪಿಂಕ್ ಮತ್ತು ಆರೆಂಜ್ ಕಲರ್ ಡ್ರೆಸ್‌ನಲ್ಲಿ ಸುಧಾರಾಣಿ ಮತ್ತಷ್ಟು ಗ್ಲ್ಯಾಮರಸ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ಮಾಡಿದ್ದಾರೆ. ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿರುವ ಸುಧಾರಾಣಿಯ ಅವತಾರಕ್ಕೆ ಫ್ಯಾನ್ಸ್ ಕೂಡ ಫಿದಾ ಆಗಿದ್ದಾರೆ. ಸದ್ಯ ಈ ವಿಡಿಯೋ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.