Tag: ಸುಧೀರ್ ಅತ್ತಾವರ

  • ಕನ್ನಡಕ್ಕೆ ಬಂದ ದಕ್ಷಿಣದ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್

    ಕನ್ನಡಕ್ಕೆ ಬಂದ ದಕ್ಷಿಣದ ಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್

    ಲವಾರು ಬಾರಿ ಮರು ಚಿತ್ರೀಕರಣ, ಮತ್ತೆ ಮತ್ತೆ ತಿದ್ದುಪಡಿಗಳು, ಹಲವಾರು ಬದಲಾವಣೆಗಳೊಂದಿಗೆ ಕ್ರೇಜ್ ಹುಟ್ಟುಹಾಕುತ್ತಿರುವ ಸುಧೀರ್ ಅತ್ತಾವರ (Sudhir Attavar) ನಿರ್ದೇಶನದ ಕೊರಗಜ್ಜ (Koragajja) ಸಿನಿಮಾದ ಸಂಗೀತವನ್ನೇ ಸಂಪೂರ್ಣವಾಗಿ ಬದಲಾಯಿಸಿ, ದಕ್ಷಿಣ ಭಾರತದ ಪ್ರಖ್ಯಾತ ಸಂಗೀತ ನಿರ್ದೇಶಕ ಗೋಪಿ ಸುಂದರ್ (Gopi Sundar) ಈಗ ಸಿನಿಮಾಗೆ ಬ್ಯಾಗ್ರೌಂಡ್ ಸ್ಕೋರ್ ಜೊತೆ ಎಲ್ಲಾ ಹಾಡುಗಳನ್ನು ಮತ್ತೆ ಹೊಸದಾಗಿ ಕಂಪೋಜ್ ಮಾಡುತ್ತಿದ್ದಾರೆ.

    ಬಹುಕೋಟಿ ವೆಚ್ಚದಲ್ಲಿ ತ್ರಿವಿಕ್ರಮ ಸಪಲ್ಯ ರವರು ತ್ರಿವಿಕ್ರಮ ಸಿನೆಮಾಸ್  ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ನ ಅಡಿ ನಿರ್ಮಿಸುತ್ತಿರುವ ಪ್ಯಾನ್ ಇಂಡಿಯಾ ಚಿತ್ರ ಕೊರಗಜ್ಜ ಚಿತ್ರಕ್ಕೆ  RRR, ಪುಷ್ಪ ಮೊದಲಾದ ಹಿಟ್ ಸಿನಿಮಾಗಳ ತಂತ್ರಜ್ಞರ ದಂಡು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ.

    ಸುಮಾರು ಎಂಟು ನೂರು ವರ್ಷಗಳ ಹಿಂದಿನ ಕಥೆಯುಳ್ಳ ಈ ಸಿನಿಮಾದಲ್ಲಿ ಹಾಲಿವುಡ್- ಬಾಲಿವುಡ್ ಕಲಾವಿದರಾದ ಕಬೀರ್ ಬೇಡಿ, ಸಂದೀಪ್ ಸೋಪರ್ಕರ್, ಗಣೇಶ್ ಆಚಾರ್ಯ ಜೊತೆ ಶ್ರುತಿ, ಭವ್ಯ ಮೊದಲಾದವರು ಅಭಿನಯಿಸುತ್ತಿದ್ದಾರೆ. ಋತಿಕ ಎನ್ನುವ ಹೊಸ ಮುಖ ಕೊರಗಜ್ಜನ ತಾಯಿ ಕೊರೊಪೊಳು ಪಾತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಪರಿಚಯ ವಾಗುತ್ತಿದ್ದಾರೆ.

     

    ಉಳಿದಂತೆ  ಜೀತ್ ಜೊಸ್ಸಿ ಮತ್ತು ವಿದ್ಯಾಧರ್ ಶೆಟ್ಟಿ ಸಂಕಲನ, ಮನೋಜ್ ಪಿಳ್ಳೈ ಮತ್ತು ಪವನ್ ವಿ ಛಾಯಾಗ್ರಹಣ, ಸುಧೀರ್ ಅತ್ತಾವರ್ ಕಲಾ ನಿರ್ದೇಶನ, ಬಿಬಿನ್ ದೇವ್ ಸೌಂಡ್ ಡಿಸೈನಿಂಗ್  ಚಿತ್ರಕ್ಕಿದೆ. ಮಾರ್ಚ್ ಕೊನೆಗೆ ಸಿನಿಮಾ ಬಿಡುಗಡೆಗಾಗಿ ತಯಾರಿ ನಡೆದಿದೆ.

  • ಗುಳಿಗ ದೈವಕ್ಕೆ ಕ್ಷೇತ್ರ ನಿರ್ಮಾಣ, ಅದ್ದೂರಿ ಕೋಲ ಸೇವೆ ಮಾಡಿಸಿದ ಡೈರೆಕ್ಟರ್

    ಗುಳಿಗ ದೈವಕ್ಕೆ ಕ್ಷೇತ್ರ ನಿರ್ಮಾಣ, ಅದ್ದೂರಿ ಕೋಲ ಸೇವೆ ಮಾಡಿಸಿದ ಡೈರೆಕ್ಟರ್

    ‘ಕರಿ ಹೈದ ಕೊರಗಜ್ಜ’ (Kari Haida Koragajja) ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯವನ್ನು  ಕಲಾವಿದರಾದ ಕಬೀರ್ ಬೇಡಿ (Kabir Bedi), ಶ್ರುತಿ, ಭವ್ಯ ಹಾಗೂ ಚಿತ್ರ ತಂಡದ ಸದಸ್ಯರು ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು.  ಆದರೆ ಮತ್ತೊಂದು ಕುತೂಹಲ ದ ವಿಚಾರವು ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು  ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್ ವಿರ್ಮಾಣದ ವೇಳೆ. ಸೆಟ್ ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗತೊಡಗಿದರು. ಸ್ಥಳಿಯರು ಅರಶಿನ ನೀರನ್ನು ಪ್ರೋಕ್ಷಿಸಿ , ಕೆಲವರನ್ನು ಅಲ್ಲಿನ ಆಸ್ಪತ್ರೆಗೂ ಸೇರಿಸಲಾಯಿತು. ನಂತರ ಆ ಪ್ರದೇಶದಲ್ಲಿ ಯಾರೂ ಸೆಟ್ ಕೆಲಸ ಮಾಡಲು ಮುಂದೆ ಬರಲಿಲ್ಲ. ಸೆಟ್ ಹಾಕಲಿದ್ದ ಆ ಜಾಗವು ಕರಾವಳಿಯ ಉಗ್ರ ರೂಪದ ದೈವ ಗುಳಿಗನ ಸ್ಥಳ ವೆಂದು ಸ್ಥಳಿಯರು ತಿಳಿಸಿದರು. ದೈವದ ಮೇಲಿನ ಗೌರವ-ಭಕ್ತಿಯಿಂದ  ಪುತ್ತೂರಿನಿಂದ ಬೆಳ್ತಂಗಡಿಯ ಅರಣ್ಯ ಪ್ರದೇಶದಲ್ಲಿ ಸೆಟ್ ಕೆಲಸವನ್ನು  ಸ್ಥಳಾಂತರ ಗೊಳಿಸಲಾಯಿತು.

    ಚಿತ್ರದಲ್ಲಿ ಗುಳಿಗ ದೈವದ ಪಾತ್ರವನ್ನು ಹಾಲಿವುಡ್- ಫ಼್ರೆಂಚ್- ಬಾಲಿವುಡ್ ನಟ ಹಾಗೂ ಕೊರಿಯೋಗ್ರಾಫರ್ ಸಂದೀಪ್ ಸೋಪರ್ಕರ್ ಅಭಿನಯಿಸಿದ್ದು, ಮಂಗಳೂರಿನ ಸೋಮೆಶ್ವರ ಸಮುದ್ರ ಕಿನಾರೆಯಲ್ಲಿ ಗುಳಿಗ ದೈವದ ಚಿತ್ರೀಕರಣವನ್ನು ನಡೆಸುತ್ತಿದ್ದಾಗಲೂ, ತಂಡಕ್ಕೆ ಹಲವಾರು ರೀತಿಯ ಅಡೆತಡೆಗಳು ಎದುರಾಯಿತು.  ಈ ಬಗ್ಗೆ ತಿಳಿದವರಲ್ಲಿ ಚಿಂತನ -ಮಂಥನ ನಡೆಸಿದಾಗ ನಿರ್ದೇಶಕ ಸುಧೀರ್ ಅತ್ತಾವರ್ ರವರ ಹಿರಿಯರಿದ್ದ ಮನೆಯಲ್ಲಿ ಗುಳಿಗ ದೈವದ ಸಾನಿಧ್ಯವಿದ್ದು, ಹಲವಾರು ವರ್ಷಗಳಿಂದ ಆ ಮನೆಯಲ್ಲಿ  ಯಾರೂ ವಾಸವಿರದೆ, ಪಾಳು ಬಿದ್ದಕಾರಣ  ದೈವಕ್ಕೆ  ಪೂಜೆ ಪುರಸ್ಕಾರಗಳು ನಡೆಯದಿರುವ ವಿಚಾರ ಗೋಚರಿಸಿತು. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಕೂಡಲೇ ನಿರ್ದೇಶಕರು ದೈವಕ್ಕೆ ಗುಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿ, ಚಿತ್ರದ ಎಡಿಟಿಂಗ್ ಕೆಲಸ ಮುಗಿದ ಕೂಡಲೇ, ದೈವಸ್ಥಾನದ ಕಾರ್ಯ ಮುಗಿಸಿ, ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ಅದ್ದೂರಿಯ ಕೋಲ ಸೇವೆಯನ್ನು  ನಡೆಸಿದರು. ಈ ಸಮಯದಲ್ಲಿ ಹಿರಿಯ ನಟಿ ಭವ್ಯ, ನಿರ್ಮಾಪಕರಾದ ತ್ರಿವಿಕ್ರಮ ಸಾಫಲ್ಯ, ಕಾರ್ಯಕಾರಿ ನಿರ್ಮಾಪಕ  ವಿದ್ಯಾಧರ್ ಶೆಟ್ಟಿ, ಕಲಾವಿದರಾದ ಭರತ್ ಸೂರ್ಯ, ರಿತಿಕ ಹಾಗೂ ಹಲವು ತಂತ್ರಜ್ಞರು ಅಹೋರಾತ್ರಿ ವಿಜೃಂಭಣೆಯಿಂದ ನಡೆದ ಕೋಲಸೇವೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಚಿತ್ರತಂಡವು ಚಿತ್ರೀಕರಣ ಮುಗಿದ ಕೂಡಲೇ ಕೊರಗಜ್ಜನಿಗೂ ಕೋಲಸೇವೆಯನ್ನು ಅದ್ದೂರಿಯಾಗಿ ನೆರವೇರಿಸಿತ್ತು.

    ಕೊರಗಜ್ಜನ ಕುರಿತಾದ ಸಿನಿಮಾ ಮಾಡಬೇಕೆಂದು ಹಲವಾರು ನಿರ್ಮಾಪಕರು ಕಳೆದ ಕೆಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಆದರೆ ನಿರ್ಮಾಪಕ ತ್ರಿವಿಕ್ರಮ ರವರು ಬಿಗ್ ಬಜೆಟ್ ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.