Tag: ಸುಧೀರ್ ಬಾಬು

  • ತೆಲುಗಿನತ್ತ ರವೀನಾ ಟಂಡನ್- ವಿಲನ್ ಆದ ‘ಕೆಜಿಎಫ್ 2’ ನಟಿ

    ತೆಲುಗಿನತ್ತ ರವೀನಾ ಟಂಡನ್- ವಿಲನ್ ಆದ ‘ಕೆಜಿಎಫ್ 2’ ನಟಿ

    ‘ಕೆಜಿಎಫ್ 2′ ನಟಿ ರವೀನಾ ಟಂಡನ್‌ಗೆ (Raveena Tandon) ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಮತ್ತೊಂದು ದಕ್ಷಿಣದ ಸಿನಿಮಾವನ್ನು ನಟಿ ಒಪ್ಪಿಕೊಂಡಿದ್ದಾರೆ. ನಟ ಸುಧೀರ್ ಬಾಬು (Sudheer Babu) ನಟನೆಯ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ತೆಲುಗು ನಟ ಸುಧೀರ್ ಬಾಬು ನಟನೆಯ ‘ಜಟಾಧರ’ (Jatadhara) ಸಿನಿಮಾದಲ್ಲಿ ರವೀನಾ ಟಂಡನ್ ವಿಲನ್ ಆಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವ ಈ ಚಿತ್ರದಲ್ಲಿ ನಟಿಗೆ ಉತ್ತಮ ಪಾತ್ರವಿದೆಯಂತೆ. ಸುಧೀರ್‌ಗೆ ಠಕ್ಕರ್ ಕೊಡುವ ಪಾತ್ರದಲ್ಲಿ ರವೀನಾ ಕಾಣಿಸಿಕೊಳ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಸಮಂತಾ ಮನೆಯಲ್ಲಿ ಮದುವೆ ಸಡಗರ- ಹೂಗುಚ್ಛ ಹಿಡಿದು ನಿಂತ ನಟಿ

     

    View this post on Instagram

     

    A post shared by Sudheer Babu (@isudheerbabu)

    ಇತ್ತೀಚೆಗೆ ‘ಜಟಾಧರ’ ಸಿನಿಮಾ ಪೋಸ್ಟರ್ ಲುಕ್ ಮೂಲಕ ಗಮನ ಸೆಳೆದಿದ್ದ ಸುಧೀರ್ ಬಾಬು ಈ ಸಿನಿಮಾ ಹಾರರ್ ಚಿತ್ರವಾಗಿದೆ. ಶಿವಿನ್ ನಾರಂಗ್ ನಿರ್ದೇಶನ ಮಾಡಲಿದ್ದಾರೆ. ಸದ್ಯಕ್ಕೆ ರವೀನಾ ನಟಿಸಲಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದ್ದು, ನಟಿಯ ಎಂಟ್ರಿಯ ಕುರಿತು ಚಿತ್ರತಂಡ ಅಧಿಕೃತವಾಗಿ ತಿಳಿಸಬೇಕಿದೆ.

    ಸದ್ಯ ನಟಿ ‘ವೆಲ್ ಕಂ ಟು ದ ಜಂಗಲ್’ ಎಂಬ ಸಿನಿಮಾದಲ್ಲಿ ರವೀನಾ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲೂ ಅವರಿಗೆ ನಟನೆಗೆ ಸ್ಕೋಪ್ ಇರುವ ಪಾತ್ರವೇ ಸಿಕ್ಕಿದೆ.

  • ‘ಹರೋಮ್ ಹರ’ ಸಿನಿಮಾದ ಟೀಸರ್ ರಿಲೀಸ್ ಮಾಡಲಿದ್ದಾರೆ ಕಿಚ್ಚ

    ‘ಹರೋಮ್ ಹರ’ ಸಿನಿಮಾದ ಟೀಸರ್ ರಿಲೀಸ್ ಮಾಡಲಿದ್ದಾರೆ ಕಿಚ್ಚ

    ತೆಲುಗಿನ ಯುವ ನಟ ಸುಧೀರ್ ಬಾಬು (Sudhir Babu) ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಹರೋಮ್ ಹರ (Harom Hara). ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟೀಸರ್ (Teaser) ಇಂದು ಪಂಚ ಭಾಷೆಯಲ್ಲಿ ಅನಾವರಣಗೊಳ್ತಿದೆ.

    ತೆಲುಗು, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಹರೋಮ್ ಹರ ಟೀಸರ್ ಬಿಡುಗಡೆಗೆಯಾಗ್ತಿದ್ದು, ಈ ಐದು ಭಾಷೆಯ ಸೂಪರ್ ಸ್ಟಾರ್ಸ್ ಟೀಸರ್ ರಿಲೀಸ್ ಮಾಡಲಿದ್ದಾರೆ. ತೆಲುಗಿನಲ್ಲಿ ಪ್ರಭಾಸ್, ಕನ್ನಡದಲ್ಲಿ ಕಿಚ್ಚ ಸುದೀಪ್ (Sudeep), ಮಲಯಾಳಂನಲ್ಲಿ ಮಮ್ಮುಟ್ಟಿ, ತಮಿಳಿನಲ್ಲಿ ವಿಜಯ್ ಸೇತುಪತಿ ಹಾಗೂ ಹಿಂದಿ ಭಾಷೆಯಲ್ಲಿ ಟೈಗರ್ ಶ್ರಾಫ್ ಸುಧೀರ್ ಬಾಬು ಸಿನಿಮಾದ ಝಲಕ್ ರಿವೀಲ್ ಮಾಡಲಿದ್ದಾರೆ.

    ಸುಧೀರ್ ಬಾಬು ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ಜೋಡಿಯಾಗಿ ಮಾಳವಿಕ ಶರ್ಮಾ ಸಾಥ್ ಕೊಟ್ಟಿದ್ದಾರೆ. ಪ್ರಮುಖ ಪಾತ್ರದಲ್ಲಿ ಸುನಿಲ್, ವಿಲನ್ ಆಗಿ‌ ಕನ್ನಡದ ನಟ ಅರ್ಜುನ್ ಗೌಡ ತೊಡೆತಟ್ಟಿದ್ದಾರೆ.

    ಹರೋಮ್ ಹರ, ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕೊನೆ ಹಂತದ ಶೂಟಿಂಗ್ ನಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. 1989ರಲ್ಲಿ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ನಡೆದ ಘಟನೆಯ ಸುತ್ತ ಕಥೆ ಸಾಗುತ್ತದೆ.

    ಜ್ಞಾನಸಾಗರ ದ್ವಾರಕಾ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಬಹಳ ಅದ್ಧೂರಿಯಾಗಿ ಸುಮಂತ್ ಜಿ ನಾಯ್ಡು ನಿರ್ಮಾಣ ಮಾಡುತ್ತಿದ್ದಾರೆ.  ಚಿತ್ರಕ್ಕೆ ಚೈತಮ್ ಭಾರದ್ವಾಜ್ ಅವರ ಸಂಗೀತವಿದೆ ಮತ್ತು ಅರವಿಂದ್ ವಿಶ್ವನಾಥನ್ ಅವರ ಛಾಯಾಗ್ರಹಣವಿದೆ. ಶ್ರೀ ಸುಬ್ರಹ್ಮಣ್ಯೇಶ್ವರ ಸಿಮಿಮಾಸ್ ಬ್ಯಾನರ್ ನಡಿ ಹರೋಮ್ ಹರಾ ಸಿನಿಮಾ ತಯಾರಾಗುತ್ತಿದೆ.