Tag: ಸುನಂದಾ ಶೆಟ್ಟಿ

  • ಕುಟುಂಬ ಸಮೇತ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ

    ಕುಟುಂಬ ಸಮೇತ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಭೇಟಿ

    ಬಾಲಿವುಡ್ (Bollywood) ಖ್ಯಾತ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ತುಳುನಾಡಿನ ಕಟೀಲು ದುರ್ಗಾಪರಮೇಶ್ವರಿ (Kateel Durgaparameshwari Temple) ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಶಿಲ್ಪಾ ಶೆಟ್ಟಿ ಅವರು ಮೂಲತಃ ಮಂಗಳೂರಿನವರು, ಮುಂಬೈನಲ್ಲಿ ಸೆಟಲ್ ಆಗಿದ್ದರು ಕೂಡ ಇಂದಿಗೂ ದೈವ ಕೋಲ, ಇನ್ನಿತರ ಪೂಜೆ ಕಾರ್ಯಕ್ರಮಗಳಿಗೆ ಆಗಾಗ ಕುಟುಂಬ ಸಮೇತ ಮಂಗಳೂರಿಗೆ ಭೇಟಿ ನೀಡುತ್ತಾರೆ. ಅದರಂತೆಯೇ ಇದೀಗ ಶಿಲ್ಪಾ ಶೆಟ್ಟಿ ಕುಟುಂಬ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಜೊತೆ ಪತಿ ರಾಜ್‌ ಕುಂದ್ರಾ, ಶಮಿತಾ ಶೆಟ್ಟಿ, ಸುನಂದಾ ಶೆಟ್ಟಿ ಭಾಗಿಯಾಗಿದ್ದರು.  ದೇವಳದ ವತಿಯಿಂದ ಶಿಲ್ಪಾ ಶೆಟ್ಟಿಗೆ ದೇವರ ವಸ್ತ್ರ ಪ್ರಸಾದ ನೀಡಿ ಅಶೀರ್ವಾದ ಮಾಡಲಾಯಿತು. ಇದನ್ನೂ ಓದಿ:ಹಾರ್ದಿಕ್ ಪಾಂಡ್ಯ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಯಶ್ ವೀಡಿಯೋ ವೈರಲ್

    ಕನ್ನಡದ ‘ಕೆಡಿ’ ಸಿನಿಮಾ ಮೂಲಕ 17 ವರ್ಷಗಳ ನಂತರ ಮತ್ತೆ ನಟಿ ಶಿಲ್ಪಾ ಶೆಟ್ಟಿ ಸ್ಯಾಂಡಲ್‌ವುಡ್ ಕಂಬ್ಯಾಕ್ ಆಗಿದ್ದಾರೆ. ಡೈರೆಕ್ಟರ್ ನಿರ್ದೇಶನದ ಈ ಸಿನಿಮಾದಲ್ಲಿ ಧ್ರುವ ಸರ್ಜಾ ಜೊತೆ ಪ್ರಮುಖ ಪಾತ್ರದಲ್ಲಿ ಶಿಲ್ಪಾ ಶೆಟ್ಟಿ ನಟಿಸಿದ್ದಾರೆ.

  • 21 ಲಕ್ಷ ಸಾಲ ಮರುಪಾವತಿ ಕೇಸ್- ಶಿಲ್ಪಾ ಶೆಟ್ಟಿ ತಾಯಿಗೆ ವಾರೆಂಟ್ ಜಾರಿ

    21 ಲಕ್ಷ ಸಾಲ ಮರುಪಾವತಿ ಕೇಸ್- ಶಿಲ್ಪಾ ಶೆಟ್ಟಿ ತಾಯಿಗೆ ವಾರೆಂಟ್ ಜಾರಿ

    ಮುಂಬೈ: 21 ಲಕ್ಷ ರೂ. ಸಾಲ ಮರುಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ತಾಯಿ ಸುನಂದಾ ಶೆಟ್ಟಿ (Sunanda Shetty) ಯವರಿಗೆ ಕೋರ್ಟ್ ವಾರೆಂಟ್ ಜಾರಿ ಮಾಡಿದೆ.

    ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (Metropolitan Magistrate) ಸುನಂದಾ ಶೆಟ್ಟಿ ಹಾಗೂ ಮಗಳು ಶಮಿತಾ ಶೆಟ್ಟಿ (ShamithaShetty) ಗೆ ಜಾಮೀನು ಪಡೆಯಬಹುದಾದಂತಹ ವಾರೆಂಟ್ ಜಾರಿ ಮಾಡಿದೆ. ಶಿಲ್ಪಾ ಶೆಟ್ಟಿ ಕುಟುಂಬವು ತನ್ನಿಂದ ಪಡೆದಿದ್ದ 21 ಲಕ್ಷ ರೂ. ಸಾಲವನ್ನು ಮರುಪಾವತಿ ಮಾಡಿಲ್ಲ ಎಂದು ಉದ್ಯಮಿಯೊಬ್ಬರು ದೂರು ದಾಖಲಿಸಿದ್ದರು. ಹೀಗಾಗಿ ಶಿಲ್ಪಾ ಶೆಟ್ಟಿ, ಅವರ ಸಹೋದರಿ ಶಮಿತಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿ ವಿರುದ್ಧ ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಂಚನೆ ಪ್ರಕರಣದ ತನಿಖೆಗೆ ಆದೇಶಿಸಿತ್ತು.

    ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಟಿ ಕುಟುಂಬ ದಿಂಡೋಶಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿತ್ತು. ಸೋಮವಾರ ಸೆಷನ್ಸ್ ಜಡ್ಜ್ ಎ ಝಡ್ ಖಾನ್ ಅವರು ಶಿಲ್ಪಾ ಹಾಗೂ ಶಮಿತಾ ವಿರುದ್ಧ ಮ್ಯಾಜಿಸ್ಟ್ರೆಟ್ ಆದೇಶ ತಡೆಹಿಡಿದಿದ್ದು, ಸುನಂದಾ ಅವರಿಗೆ ಯಾವುದೇ ರಿಲೀಫ್ ನೀಡಲಿಲ್ಲ. ಅಲ್ಲದೆ ತಂದೆ ದಿ. ಸುರೇಂದ್ರ ಶೆಟ್ಟಿ (Surendra Shetty) ಮತ್ತು ಸುನಂದಾ ಅವರ ಸಂಸ್ಥೆಯಲ್ಲಿ ಪಾಲುದಾರರು. ಆದರೆ ಇಬ್ಬರು ಹೆಣ್ಣು ಮಕ್ಕಳು ಕೂಡ ಇಲ್ಲಿ ಪಾಲುದಾರರಾಗಿದ್ದಾರೆ. ಈ ಬಗ್ಗೆ ಯಾವುದೇ ದಾಖಲೆಗಳನ್ನು ಸಲ್ಲಿಸಲಾಗಿಲ್ಲ ಎಂದು ಹೇಳಿದೆ. ಅಲ್ಲದೆ ಪ್ರಕರಣ ಸಬಂಧ ಜಾಮೀನು ನೀಡಬಹುದಾದ ವಾರೆಂಟ್ ಅನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿದೆ.

    ಏನಿದು ಪ್ರಕರಣ..?
    ಉದ್ಯಮಿಯೊಬ್ಬರು ಶಿಲ್ಪಾ ಸೇರಿ ಕುಟುಂಬದ ಮೂವರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಈ ದೂರಿನ ಅನ್ವಯ ಶಿಲ್ಪಾ ಅವರ ತಂದೆ ದಿವಂಗತ ಸುರೇಂದ್ರ ಶೆಟ್ಟಿ 21 ಲಕ್ಷ ರೂ ಸಾಲವನ್ನು ಪಡೆದಿದ್ದರು. ಈ ಸಾಲವನ್ನು 2017ರ ಜನವರಿಯಲ್ಲಿ ಬಡ್ಡಿಯೊಂದಿಗೆ ಪಾವತಿಸಬೇಕಾಗಿತ್ತು. ಆದರೆ ಸಾಲವನ್ನು ಮರುಪಾವತಿಸಲು ಶಿಲ್ಪಾ, ಶಮಿತಾ ಮತ್ತು ಸುನಂದಾ ವಿಫಲರಾಗಿದ್ದಾರೆ ಎನ್ನಲಾಗಿದೆ.

    ಸುರೇಂದ್ರ ಕಂಪನಿ ಪರವಾಗಿ ಚೆಕ್ ಬರೆದಿದ್ದು, ಸಾಲದ ವಿಚಾರ ಅವರ ಪುತ್ರಿಯರು ಮತ್ತು ಪತ್ನಿಗೆ ತಿಳಿದಿತ್ತು. ಆದರೆ ಸಾಲ ಮರುಪಾವತಿ ಮಾಡುವ ಮುನ್ನವೇ ಸುರೇಂದ್ರ ತೀರಿಕೊಂಡಿದ್ದರಿಂದ ಅದನ್ನು ಮರುಪಾವತಿಸುವ ಜವಾಬ್ದಾರಿ ಕುಟುಂಬದ್ದಾಗಿತ್ತು. ಆದರೆ ಕುಟುಂಬ ತಾವು ಹಣವೇ ಪಡೆದಿಲ್ಲ ಎಂದು ಹೇಳುತ್ತಿದೆ.