Tag: ಸುನಂದ ಪಾಲನೇತ್ರ

  • ಒಳಸಂಚಿನಿಂದ ಸೋತೆ: ಸುನಂದ ಪಾಲನೇತ್ರ

    ಒಳಸಂಚಿನಿಂದ ಸೋತೆ: ಸುನಂದ ಪಾಲನೇತ್ರ

    ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಯಾವುದೋ ಒಳಸಂಚಿನಿಂದಾಗಿ ಸೋತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಮೈಸೂರಿನಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುನಂದ ಅವರು, ಕೆ.ಆರ್ ಕ್ಷೇತ್ರ ಮತ್ತು ಪಕ್ಷಕ್ಕೆ ಪ್ರಥಮ ಮೇಯರ್ ಆಗುವ ನೀರಿಕ್ಷೆ ಇತ್ತು ಆದರೆ ಅದು ನಿರಾಸೆ ಆಗಿದೆ ಹಾಗಾಗಿ ತುಂಬಾ ಬೇಸರವಾಗಿದೆ ಎಂದು ತಿಳಿಸಿದರು.

    ನಮ್ಮ ವಾರ್ಡ್‍ನಲ್ಲಿ ತುಂಬ ಧೈರ್ಯವಾಗಿ ಕೆಲಸ ನಿರ್ವಹಿಸುತ್ತಿದ್ದೆ. ಆದರೆ ಈ ಸೋಲು ನನ್ನನ್ನು ಮಾನಸಿಕವಾಗಿ ಕುಗ್ಗಿಸಿದೆ. ನಾನು ಮುಖ್ಯಮಂತ್ರಿಗಳಿಂದ ಫಂಡ್ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ವಿನಿಯೋಗಿಸಬೇಕೆಂದು ಅಂದುಕೊಂಡಿದ್ದೆ. ಆದರೆ ಅದು ನಿರಾಸೆ ಆಗಿರುವುದು ತುಂಬ ದುಃಖ ತರಿಸಿದೆ ಎಂದರು.

    ನನಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ನನ್ನ ಸೋಲಿನಿಂದ ಎಲ್ಲರಿಗೂ ನೋವಾಗಿದೆ. ಪತ್ರಿಯೊಬ್ಬರೂ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡುತ್ತಿದ್ದಾರೆ. ನಮ್ಮ ಸಮುದಾಯದವರು ಪರಿಶ್ರಮ ಪಟ್ಟಿದ್ದರೆ ಗೆಲ್ಲುತ್ತಿದ್ದೆ. ಗೆದ್ದಿದ್ದರೆ ಮಹಾನಗರ ಪಾಲಿಕೆಯನ್ನು ಅಭಿವೃದ್ದಿಯತ್ತ ಕೊಂಡೊಯ್ಯಬೇಕೆಂಬ ಆಶಯ ಇತ್ತು. ಆದರೆ ಇದು ಸಾಧ್ಯವಾಗಿಲ್ಲ ಎಂಬ ಕೊರಗು ಇದೆ. ಪಕ್ಷದ ಸೋಲು ನನ್ನಿಂದ ಅಗಿಲ್ಲ ಆರೀತಿ ಆರೋಪ ಕೇಳಿಬಂದರೆ ಅದು ಪಿತೂರಿಯಿಂದಾಗಿದೆ. ಹಾಗಾಗಿ ಮುಖ್ಯಮಂತ್ರಿಗಳ ಬಳಿ ಕ್ಷಮೆ ಕೇಳುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿಯಿಂದಾಗಿ ನಿನ್ನೆ ನಡೆದ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಮಹಾನಗರ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

  • ಮೈಸೂರು ಮೇಯರ್ ಚುನಾವಣೆಯಲ್ಲಿ ಸೋಲು – ಪಾಲಿಕೆ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ರಾಜೀನಾಮೆ

    ಮೈಸೂರು ಮೇಯರ್ ಚುನಾವಣೆಯಲ್ಲಿ ಸೋಲು – ಪಾಲಿಕೆ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ರಾಜೀನಾಮೆ

    ಮೈಸೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿಯಿಂದಾಗಿ ನಿನ್ನೆ ನಡೆದ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಸುನಂದ ಪಾಲನೇತ್ರ ಮಹಾನಗರ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

    ಸುನಂದ ಪಾಲನೇತ್ರ ಈ ಬಾರಿ ಪಾಲಿಕೆಯ ಪ್ರಬಲ ಮೇಯರ್ ಆಕಾಂಕ್ಷಿಯಾಗಿದ್ದರು. ಸುನಂದ ಪಾಲನೇತ್ರರನ್ನು ಮೇಯರ್ ಮಾಡಲು ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಅಖಾಡಕ್ಕಿಳಿದಿದ್ದರು. ಆದರೆ ಕೊನೆಕ್ಷಣದಲ್ಲಿ ನಡೆದ ರಾಜಕೀಯ ಹೈಡ್ರಾಮಾದಿಂದಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸುನಂದ ಅವರಿಗೆ ಮೇಯರ್ ಸ್ಥಾನ ಕೈತಪ್ಪುವಂವತಾಗಿತ್ತು. ಹಾಗಾಗಿ ಸುನಂದ ಕ್ಷೇತ್ರದಲ್ಲಿನ ರಾಜಕಾರಣಕ್ಕೆ ಮನನೊಂದು ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಪತ್ರ ಬರೆಯುವ ಮೂಲಕ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ತಿಳಿಸಿದ್ದಾರೆ.

    ಚುನಾವಣೆಯಲ್ಲಿ ಸೋತ ನನಗೆ ಬೇಸರ ಉಂಟಾಗಿದೆ. ಚುನಾವಣೆಯಲ್ಲಿ ಸೋತ ನಂತರವು ನನಗೆ ಪಾಲಿಕೆ ಸದಸ್ಯೆಯಾಗಿ ಕರ್ತವ್ಯ ನಿರ್ವಹಿಸಲು ಮಾನಸಿಕ ಹಿಂಸೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನನಗೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಸುನಂದ ಪಾಲನೇತ್ರ ಸಿಎಂಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

    ವಾರ್ಡ್ ನಂ 59ರಿಂದ ಪಾಲಿಕೆ ಸದಸ್ಯೆಯಾಗಿ ಆಯ್ಕೆಯಾಗಿದ್ದ ಸುನಂದ ಪಾಲನೇತ್ರ ಈ ಬಾರಿಯ ಮೇಯರ್ ಎಂದೇ ಬಿಂಬಿತವಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡರಿಗೆ ಬೆಂಬಲ ಸೂಚಿಸಿ ಮೇಯರ್ ಪಟ್ಟಕ್ಕೇರಿಸಿ, ಉಪಮೇಯರ್ ಆಗಿ ಕಾಂಗ್ರೆಸ್‍ನ ಅನ್ವರ್ ಬೇಗ್ ಅವರನ್ನು ಆಯ್ಕೆ ಮಾಡಿತ್ತು. ಇದರಿಂದ ನೊಂದ ಸುನಂದ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ.