Tag: ಸುನೀಲ್ ಕುಮಾರ್

  • ದೇಶಭಕ್ತರ ಪಠ್ಯ ತೆಗೆದು ಕುಕ್ಕರ್ ಬ್ಲಾಸ್ಟ್ ಆರೋಪಿ ಪಾಠ ಸೇರಿಸ್ತೀರಾ?- ಕಾಂಗ್ರೆಸ್ ವಿರುದ್ಧ ಸುನೀಲ್ ಕುಮಾರ್ ಕಿಡಿ

    ದೇಶಭಕ್ತರ ಪಠ್ಯ ತೆಗೆದು ಕುಕ್ಕರ್ ಬ್ಲಾಸ್ಟ್ ಆರೋಪಿ ಪಾಠ ಸೇರಿಸ್ತೀರಾ?- ಕಾಂಗ್ರೆಸ್ ವಿರುದ್ಧ ಸುನೀಲ್ ಕುಮಾರ್ ಕಿಡಿ

    ಬೆಂಗಳೂರು: ರಾಷ್ಟ್ರಭಕ್ತರಾದ ವೀರ ಸಾರ್ವರ್ಕರ್ ಮತ್ತು ಹೆಡ್ಗೇವಾರ್ ಅವರುಗಳ ಪಾಠಗಳನ್ನು ಪಠ್ಯ ಪುಸ್ತಕದಿಂದ ಕೈ ಬಿಟ್ಟಿರುವ ಕಾಂಗ್ರೆಸ್ (Congress) ಸರ್ಕಾರ ಲೋಕಸಭಾ ಸ್ಥಾನದಿಂದ ಅನರ್ಹಗೊಂಡಿರುವ ವಿಫಲ ನಾಯಕನ ಹೆಸರಿನಲ್ಲಿ ಮಕ್ಕಳಿಗೆ ಪಠ್ಯ ರೂಪಿಸುತ್ತದೆಯೇ ಎಂದು ಬಿಜೆಪಿ (BJP) ಶಾಸಕ ಸುನೀಲ್ ಕುಮಾರ್ (Sunil Kumar) ಪ್ರಶ್ನಿಸಿದ್ದಾರೆ.

    ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಪ್ರಣಾಳಿಕೆಯ ಭರವಸೆ ಜಾರಿಗೆ ದಿನಾಂಕ ಗ್ಯಾರಂಟಿಯಾಗದ ಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಫ್‌ಸಿಐ ನೀತಿ ಬದಲಾವಣೆ ಹಿನ್ನೆಲೆ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಒದಗಿಸಲು ಸಾಧ್ಯವಿಲ್ಲ: ಅಶೋಕ್ ಕುಮಾರ್ ಮೀನಾ ಸ್ಪಷ್ಟನೆ

    ದೇಶಭಕ್ತ ಸ್ವಾತಂತ್ರ‍್ಯ ಹೋರಾಟಗಾರರ ಪಠ್ಯ ತೆಗೆಯಿರಿ ಎಂದು ನಕಲಿ ಗಾಂಧಿ ಪಾರಿವಾರ ನೀಡಿದ ಆದೇಶವನ್ನು ಪಾಲನೆ ಮಾಡುತ್ತಿದ್ದೀರಾ? ಮತಾಂಧ ಟಿಪ್ಪು, ದೇಶದ್ರೋಹಿ ಔರಂಗಜೇಬ್, ಅಧಿನಾಯಕಿ ಇಟಲಿ ಮೇಡಂ ಪಠ್ಯವನ್ನು ಸೇರಿಸಿ ಹೊಸ ಇತಿಹಾಸ ಬರೆಯುತ್ತೀರಾ ಎಂದು ಪ್ರಶ್ನಿಸಿ ಸಂಪುಟದಲ್ಲಿ ತೆಗೆದುಕೊಂಡ ಎರಡು ನಿರ್ಣಯದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯಿದೆ ಹಿಂಪಡೆದರೆ ಹೋರಾಟ: ವೇದವ್ಯಾಸ ಕಾಮತ್ ಎಚ್ಚರಿಕೆ

    ಕನ್ನಡಿಗರು ಸುಮ್ಮನೆ ಕುಳಿತರೆ ಬೆಂಗಳೂರಿನಲ್ಲಿ (Bengaluru) ‘ಲೂಲು ಮಾಲ್’ ಕಟ್ಟಿದವರ ಇತಿಹಾಸವನ್ನೂ ಮುಂದಿನ ಪೀಳಿಗೆಯ ಜನಕ್ಕೆ ಕಾಂಗ್ರೆಸ್ಸಿಗರು ಹೇಳಿಕೊಡಬಹುದು. ಮಂಗಳೂರು (Mangaluru) ಕುಕ್ಕರ್ ಸ್ಫೋಟದ ಆರೋಪಿಗೂ ದೇಶಭಕ್ತರ ಪಠ್ಯದ ಸಾಲಿನಲ್ಲಿ ಅವಕಾಶ ನೀಡಬಹುದು. ವಿದ್ಯಾರ್ಥಿಗಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರದ ಈ ನೀತಿಯ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ವಾಪಸ್ – ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

    ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂಧರ ನಿಷೇಧ ಕಾಯ್ದೆ (Anti Conversion Law) ವಾಪಸ್ ತೆಗದುಕೊಳ್ಳುತ್ತದೆ ಎಂದು ನಾವು ಮೊದಲೇ ಎಚ್ಚರಿಸಿದ್ದೆವು. ಈಗ ಅದನ್ನು ನಿಜ ಮಾಡುತ್ತಿದೆ. ಸಮವಸ್ತ್ರ ಸಂಹಿತೆಯನ್ನು ಬದಿಗಿಟ್ಟಿದೆ. ಇಡೀ ರಾಜ್ಯಕ್ಕೆ ಹಿಜಬ್ ತೊಡಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಮೋದಿ, ಬಿಜೆಪಿ ನಾಯಕರು ಬಡವರಿಗೆ ಆಹಾರ ಧಾನ್ಯ ನಿರಾಕರಿಸುವಷ್ಟು ಕುರುಡರಾಗಬಹುದೇ?: ಸುರ್ಜೆವಾಲ ವಾಗ್ದಾಳಿ

  • ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ – ಸುನೀಲ್‌ ಕುಮಾರ್‌ ಲೇವಡಿ

    ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ – ಸುನೀಲ್‌ ಕುಮಾರ್‌ ಲೇವಡಿ

    – ಕಾಂಗ್ರೆಸ್ ವಿರುದ್ಧ ಮಾಜಿ ಇಂಧನ ಸಚಿವ ಟೀಕೆ

    ಬೆಂಗಳೂರು: ಉಚಿತ ಯೋಜನೆಗಳನ್ನು (Government Free Scheme) ಜಾರಿಗೆ ತರುವ ಭರಾಟೆಯಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ ಎಂದು ಮಾಜಿ ಇಂಧನ ಸಚಿವ ಸುನೀಲ್‌ ಕುಮಾರ್‌ (Sunil Kumar) ಟೀಕಿಸಿದ್ದಾರೆ

    ಕಾಂಗ್ರೆಸ್‌ ಉಚಿತ ಗ್ಯಾರಂಟಿಗಳ (Congress Guarantee)ಕುರಿತು ಸರಣೀ ಟ್ವೀಟ್‌ ಮೂಲಕ ಆಕ್ರೋಶ ಹೊರಹಾಕಿದ್ದು, ಜನರಿಗೆ ಕತ್ತಲೆ ಭಾಗ್ಯ ನೀಡೋದು ಗ್ಯಾರಂಟಿ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಾಳೆಯಿಂದ ಆರಂಭ: ಲಕ್ಷ್ಮಿ ಹೆಬ್ಬಾಳ್ಕರ್

    ಟ್ವೀಟ್‌ನಲ್ಲಿ ಏನಿದೆ..?
    ಸಿದ್ದರಾಮಯ್ಯನವರೇ (Siddaramaiah) ವ್ಯವಸ್ಥೆಯನ್ನು ಎತ್ತ ಕೊಂಡೊಯ್ಯುತ್ತಿದ್ದೀರಿ? ನಿಮ್ಮ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಜಾಹೀರಾತು ಕೊಟ್ಟ ಮಾತ್ರಕ್ಕೆ ಕತ್ತಲೆ ಕಳೆಯಲು ಸಾಧ್ಯವೇ? ನೀವು ಘೋಷಣೆ ಇಲ್ಲದೇ‌ ಮಾಡುತ್ತಿರುವ ಲೋಡ್ ಶೆಡ್ಡಿಂಗ್ ನಿಂದ ಕೃಷಿ, ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿ ಕುಂಠಿತಗೊಳ್ಳುವುದರಲ್ಲಿ ಅನುಮಾನ ಇಲ್ಲ.

    ರೈತರ ಐಪಿ ಸೆಟ್ ಗಳಿಗೆ ನಿರಂತರ ಏಳು ಗಂಟೆಗಳ ಕಾಲ ಪೂರೈಕೆ ಮಾಡುತ್ತಿದ್ದ ವಿದ್ಯುತ್ ಕಡಿತಗೊಳಿಸಲಾಗಿದೆ.ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅನಿಯಮಿತ ಹಾಗೂ ಅಘೋಷಿತ ಲೋಡ್ ಶೆಡ್ಡಿಂಗ್ (Load Shedding) ಪ್ರಾರಂಭವಾಗಿದೆ. ನಿರ್ವಹಣೆ ಹೆಸರಿನಲ್ಲಿ ಪವರ್ ಕಟ್ ಕಣ್ಣಾಮುಚ್ಚಾಲೆ ನಡೆಸುತ್ತಿರುವುದು ಸುಳ್ಳೇ? ಇದನ್ನೂ ಓದಿ: ಜೂನ್ 18ರಿಂದ 22ರವರೆಗೂ ಬೆಂಗಳೂರು, ಹಳೆ ಮೈಸೂರು ಭಾಗದಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

    ಉಚಿತ ಯೋಜನೆಗಳ ಜಾರಿಯ ಭರಾಟೆಯಲ್ಲಿ ಮುಳುಗಿರುವ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ. ಉಚಿತ.. ಉಚಿತ.. ಎಂಬ ನಿಮ್ಮ ಭಾಷಣದ ಭರಾಟೆಗೆ ಮರುಳಾದ ಜನರಿಗೆ ಈಗ ಕತ್ತಲೆ ಖಚಿತ, ಸಾಲ ನಿಶ್ಚಿತ, ಬೆಲೆ ಏರಿಕೆ ಖಂಡಿತ ಎಂಬುದು ತಿಂಗಳು ಕಳೆಯುವಷ್ಟರಲ್ಲೇ ಅರಿವಾಗಿದೆ ಎಂದು ಕುಟುಕಿದ್ದಾರೆ.

  • ಕನ್ನಡದಲ್ಲಿ ಮತ್ತೊಂದು ಹಾರರ್ ಚಿತ್ರಕ್ಕೆ ಚಾಲನೆ

    ಕನ್ನಡದಲ್ಲಿ ಮತ್ತೊಂದು ಹಾರರ್ ಚಿತ್ರಕ್ಕೆ ಚಾಲನೆ

    ನ್ನಡದಲ್ಲಿ ಈಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳು ಹೆಚ್ಚಾಗಿ ಗೆಲ್ಲುತ್ತಿದೆ. ಅಂತಹ ವಿಭಿನ್ನ ಹಾಗೂ ನೈಜಘಟನೆ ಆಧಾರಿತ  ‘ಸೆಕ್ಟರ್ 7’ (Sector 7) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಉಲ್ಲಾಳದ ಶ್ರೀಮುನೇಶ್ವರ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕೃಷ್ಣರಾಜೇ ಅರಸ್ ಆರಂಭ ಫಲಕ ತೋರಿದರು. ಶ್ರೀಕಾಂತ್ ರಾಜೇ ಅರಸ್ ಕ್ಯಾಮೆರಾ ಚಾಲನೆ ಮಾಡಿದರು. ಬೆಂಗಳೂರು ಹಾಗೂ ಊಟಿಯಲ್ಲಿ ಚಿತ್ರೀಕರಣ ನಡೆಯಲಿದೆ.

    ನೈಜಘಟನೆ ಆಧಾರಿತ ಹಾಗೂ ಹಾರಾರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಸಂಜೀವ್ ಗವಂಡಿ ನಿರ್ದೇಶಿಸುತ್ತಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಸಂಜೀವ್ ಗವಂಡಿ (Sanjeev Gavandi) ಅವರೆ ಬರೆದಿದ್ದಾರೆ. ಮಂಗಾಟ ಚಿತ್ರದ ಮೂಲಕ ನಿರ್ದೇಶನ ಆರಂಭಿಸಿದ್ದ ಸಂಜೀವ್ ಅವರಿಗೆ ಸೆಕ್ಟರ್ 7 ಐದನೇ ನಿರ್ದೇಶನದ ಚಿತ್ರ.  ಎಂ.ಎಸ್ ಮೂವೀಸ್ ಲಾಂಛನದಲ್ಲಿ ಮಂಜುಳ ಅರಸ್ ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ. ಇದನ್ನೂ ಓದಿ:ಸಮಂತಾ ಮುಖ ಕಿತ್ತು ಹೋಗಿದೆ, ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ ಎಂದು ಕುಟುಕಿದ ನಿರ್ಮಾಪಕ

    ಎರಡು ಹಾಡುಗಳಿರುವ ಈ ಚಿತ್ರಕ್ಕೆ ವಿನು ಮನಸ್ಸು ಸಂಗೀತ ನೀಡುತ್ತಿದ್ದಾರೆ. ವೀರೇಶ್ ಛಾಯಾಗ್ರಹಣ, ಆದಿ ಆದರ್ಶ ಸಂಕಲನ ಹಾಗೂ ವಿ.ನಾಗೇಶ್ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ.  ನೂತನ ಪ್ರತಿಭೆ ಸುನೀಲ್ ಕುಮಾರ್ (Sunil Kumar) ಈ ಚಿತ್ರದ ನಾಯಕ. ಐಶ್ವರ್ಯ (Aishwarya) ನಾಯಕಿ. ನಿರ್ಮಾಪಕಿ ಮಂಜುಳ ಅರಸ್ ಅವರು ಸಹ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಸ್ನೇಹ, ನಾಗರಾಜು, ಹನುಮಂತೇ ಗೌಡ, ಗಿರೀಶ್ ಜತ್ತಿ, ಹೇಮಾ, ವಿನೋದ್ ಗೊಬ್ಬರಗಾಲ, ಚೇತನ್, ಮೈಕೋ ಶಿವಕುಮಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಮುಷ್ಕರಕ್ಕೂ ಮೊದಲೇ ಜಯ – KPTCL, ESCOM ನೌಕರರ ವೇತನ ಹೆಚ್ಚಳ

    ಮುಷ್ಕರಕ್ಕೂ ಮೊದಲೇ ಜಯ – KPTCL, ESCOM ನೌಕರರ ವೇತನ ಹೆಚ್ಚಳ

    ಬೆಂಗಳೂರು: ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಮಮಿತ (KPTCL) ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಹೆಚ್ಚಳ ಮಾಡಿ ಇಂಧನ ಸಚಿವ ಸುನೀಲ್ ಕುಮಾರ್ (Sunil Kumar) ಆದೇಶ ಪ್ರಕಟಿಸಿದ್ದಾರೆ.

    ವೇತನ  (Salary)  ಪರಿಷ್ಕರಣೆಗೆ ಪಟ್ಟು ಹಿಡಿದು, ಗುರುವಾರದಿಂದ ಎಸ್ಕಾಂ ಸಿಬ್ಬಂದಿ ಅನಿರ್ದಿಷ್ಟ ಅವಧಿಗೆ ಹೋರಾಟಕ್ಕೆ ಸಿದ್ಧರಾಗಿದ್ದ ಬೆನ್ನಲ್ಲೇ ಕೆಪಿಟಿಸಿಎಲ್ ಎಂಡಿಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗೆ 2022ರಿಂದ ಪೂರ್ವಾನ್ವಯವಾಗುವಂತೆ ಶೇ.20ರಷ್ಟು ವೇತನ ಹೆಚ್ಚಳ ಮಾಡಲು ಆದೇಶಿಸಿದ್ದಾರೆ. ಇದೀಗ ಸಚಿವರ ಭರವಸೆಯಿಂದ ಎಸ್ಕಾಂ ಸಿಬ್ಬಂದಿ ಹೋರಾಟಕ್ಕೂ ಮುನ್ನವೇ ಜಯ ಸಿಕ್ಕಿದೆ.

    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರು ಗುರುವಾರ ಇಡೀ ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ಸ್ಥಗಿತ ಮಾಡಿ ಮುಷ್ಕರ ನಡೆಸಲು ನಿರ್ಧರಿಸಿದ್ದರು. ಲೈನ್‍ಮ್ಯಾನ್‍ಗಳಿಂದ ಹಿಡಿದು ಎಂಜಿನಿಯರ್‍ಗಳವರೆಗೆ ಸುಮಾರು 60 ಸಾವಿರ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದರು. ಶೇ. 40% ವೇತನ ಹೆಚ್ಚಳ ಆಗಬೇಕು. 2022ರ ಏಪ್ರಿಲ್ 1 ರಿಂದ ಬಾಕಿ ವೇತನ ಬಿಡುಗಡೆ ಮಾಡಬೇಕು. ತಕ್ಷಣವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯುತ್ ಕಂಪನಿಗಳ ಖಾಸಗೀಕರಣ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: 10 ಕ್ಷೇತ್ರಗಳಿಂದ ನನಗೆ ಆಹ್ವಾನ, ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಡಿ.ಕೆ.ಸುರೇಶ್

    ಒಂದು ದಿನ ಕೆಪಿಟಿಸಿಎಲ್ ನೌಕರರು ಕೆಲಸ ನಿಲ್ಲಿಸಿದರೆ 1 ಸಾವಿರ ಕೋಟಿ ರೂ. ನಷ್ಟ ಸಂಭವಿಸುವ ಸಾಧ್ಯತೆಯಿದೆ. ಒಂದು ದಿನ ವಿದ್ಯುತ್ ಉತ್ಪಾದನೆ ನಿಂತರೆ ಒಂದು ವಾರ ರಾಜ್ಯಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತದೆ. ಈ ಅವ್ಯವಸ್ಥೆ ಸರಿಪಡಿಸಲು 10 ರಿಂದ 15 ದಿನಗಳು ಬೇಕಾಗುತ್ತದೆ. ಇದನ್ನೂ ಓದಿ: ಆಣೆ-ಪ್ರಮಾಣದ ಪಾಲಿಟಿಕ್ಸ್ ; ಕರ್ಪೂರ ಹಚ್ಚಿ ಪ್ರಮಾಣ ಮಾಡಿದ ಮಾಗಡಿ ಶಾಸಕರ ಪತ್ನಿ

  • ಕಾರ್ಕಳದಿಂದಲೇ ಸ್ಪರ್ಧೆ- ಸುನೀಲ್‌ ಕುಮಾರ್‌ಗೆ ಸೆಡ್ಡು

    ಕಾರ್ಕಳದಿಂದಲೇ ಸ್ಪರ್ಧೆ- ಸುನೀಲ್‌ ಕುಮಾರ್‌ಗೆ ಸೆಡ್ಡು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್

    ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್

    ಬೆಳಗಾವಿ: ಕೆಪಿಟಿಸಿಎಲ್ (KPTCL) ಸಹಾಯಕ ಎಂಜನಿಯರ್ (AE), ಕಿರಿಯ ಎಂಜನಿಯರ್ ಹಾಗೂ ಕಿರಿಯ ಸಹಾಯಕ ಎಂಜಿನಿಯರ್ (JE) ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲೇ ಪ್ರಕಟಿಸಲಾಗುವುದು. ಜೊತೆಗೆ ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಸಚಿವ ವಿ. ಸುನೀಲ್‌ಕುಮಾರ್ (V Sunil Kumar) ಅವರು ತಿಳಿಸಿದರು.

    ವಿಧಾನಸಭೆಯಲ್ಲಿಂದು ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ್ (SureshKumar) ಅವರ ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದೆ. ಆದರೆ ಫಲಿತಾಂಶ ಪ್ರಕಟಿಸಿಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ. ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ, ಜನವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

    ಶಾಸಕ ಸುರೇಶಕುಮಾರ್ ಅವರು, ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಚಾತಕ ಪಕ್ಷಿಯಂತೆ ಕಾಯುತ್ತಿದ್ದು, ಕೂಡಲೇ ಕ್ರಮವಹಿಸುವಂತೆ ಸಚಿವರಲ್ಲಿ ಕೋರಿದ್ದರು. ಇದನ್ನೂ ಓದಿ: ಆ ಒಂದು ಮಾತಿನಿಂದ ಮುರಿದು ಬಿತ್ತು ರೂಪೇಶ್ ಶೆಟ್ಟಿ- ರಾಜಣ್ಣ ಫ್ರೆಂಡ್‌ಶಿಪ್

    Live Tv
    [brid partner=56869869 player=32851 video=960834 autoplay=true]

  • ಆಟೋ ಚಾಲಕನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ: ಸುನೀಲ್ ಕುಮಾರ್

    ಆಟೋ ಚಾಲಕನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ: ಸುನೀಲ್ ಕುಮಾರ್

    ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಲಾಗುವುದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ (Sunil Kumar) ಹೇಳಿದರು.

    ನಾಗುರಿ ಬಳಿಯ ಬಾಂಬ್ ಸ್ಫೋಟದ ಜಾಗಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ಸ್ಫೋಟದ ಘಟನೆಯನ್ನ ಉಗ್ರವಾಗಿ ಖಂಡಿಸುತ್ತೇವೆ. ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರ ಮಾಡಲಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯಲಿದೆ. ಪಿಎಫ್‍ಐ ನಿಷೇಧದ ಬಳಿಕ ಇಂಥ ಘಟನೆಗೆ ಸರ್ಕಾರ ಕಡಿವಾಣ ಹಾಕಿದೆ ಎಂದರು. ಇದನ್ನೂ ಓದಿ: ಝಾಕೀರ್‌ ನಾಯ್ಕ್‌ The Real Inspiration – ಐಸಿಸ್‌ ಉಗ್ರರಂತೆ ಪೋಸ್‌ ನೀಡಿ ಪ್ರತೀಕಾರದ ಪ್ರತಿಜ್ಞೆ

    ಸಂಚುಗಳನ್ನ ವಿಫಲಗೊಳಿಸೋ ಕೆಲಸ ಸರ್ಕಾರ ಮಾಡುತ್ತಿದೆ. ಪಿಎಫ್ ಐ (Popular Front Of India) ನಿಷೇಧ ಇದರ ಒಂದು ಭಾಗ, ಸರ್ಕಾರ ಮೃಧು ಧೋರಣೆ ತಳೆದಿಲ್ಲ. ಈ ಘಟನೆಯನ್ನ ಇಡೀ ಸಮಾಜ ನಿಂತು ಎದುರಿಸಬೇಕಿದೆ. ಕದ್ರಿ ದೇವಸ್ಥಾನ (Kadri Temple), ಕೆಲವು ಕಚೇರಿ ಹಾಗೂ ಸಾರ್ವಜನಿಕ ಜಾಗಗಳು ಅವರ ಗುರಿಯಾಗಿತ್ತು. ಹಿಂದೂ ಸಮಾಜ ಟಾರ್ಗೆಟ್ ಮಾಡುವ ಅವರ ಕೆಲಸ ವಿಫಲವಾಗಿದೆ. ಸ್ಥಳೀಯ ಮತ್ತು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕೈವಾಡ ಇದೆ. ಇಂಥಹ ಮಾನಸಿಕತೆ ದೂರ ಆಗಬೇಕಿದೆ, ನಾವು ಇಂಥದ್ದನ್ನ ಆಗಲು ಬಿಡಲ್ಲ ಎಂದು ಹೇಳಿದರು.

    ತನಿಖೆ ದೃಷ್ಟಿಯಿಂದ ಗೃಹ ಸಚಿವರು ಮೊದಲು ಭೇಟಿ ನೀಡಿದ್ದಾರೆ. ಎನ್.ಐ.ಎ ಘಟಕ ಇಲ್ಲಿ ಇವತ್ತಲ್ಲ ನಾಳೆ ಇಲ್ಲಿ ಆಗುತ್ತೆ. ಕೇಂದ್ರ ಸರ್ಕಾರ ಅದನ್ನ ಪಾಸಿಟಿವ್ ಆಗಿ ಪರಿಶೀಲಿಸ್ತಾ ಇದೆ. ದೇಶದ ಯಾವುದೇ ಭಾಗದಲ್ಲಿ ಇಂಥಹ ವಾತಾವರಣ ಸೃಷ್ಟಿಯಾಗಬಾರದು. ಈ ಘಟನೆಯನ್ನ ಎಲ್ಲರೂ ಖಂಡಿಸಿ ಸಹಕಾರ ಕೊಡೋರ ಬಗ್ಗೆ ಎಚ್ಚರ ವಹಿಸಬೇಕು. ನೆಟ್ಟಾರು ಘಟನೆ, ಎಸ್ ಡಿಪಿಐ ಉಪಟಳ ಎಲ್ಲವನ್ನೂ ಜನ ವಿರೋಧಿಸಿದ್ದಾರೆ. ಅಟೋ ಚಾಲಕನ ಕುಟುಂಬಕ್ಕೆ ಸರ್ಕಾರದ ಕಡೆಯಿಂದ ಸೂಕ್ತ ಪರಿಹಾರ ಕೊಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಶಾರೀಕ್‍ಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ- 8 ಮಂದಿ ವೈದ್ಯರಿಂದ ನಿಗಾ

    ಸದ್ಯ ಸ್ಫೋಟವಾದ ಆಟೋ ರಿಕ್ಷಾವನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಆಗಮಿಸಿ ಕಂಕನಾಡಿ ಪೊಲೀಸರಿಂದ ಮಾಹಿತಿ ಪಡೆದ ಸುನೀಲ್ ಕುಮಾರ್‍ಗೆ ದ.ಕ ಜಿಲ್ಲಾಧಿಕಾರಿ ರವಿಕುಮಾರ್, ಮೇಯರ್ ಜಯಾನಂದ ಅಂಚನ್ ಸಾಥ್ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ರಾಜವರ್ಧನ್ ನಟನೆಯ ‘ಗಜರಾಮ’ನಿಗೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

    ರಾಜವರ್ಧನ್ ನಟನೆಯ ‘ಗಜರಾಮ’ನಿಗೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

    ಟ ರಾಜವರ್ಧನ್ (Rajavardhan) ನಟಿಸುತ್ತಿರುವ ಬಹು ನಿರೀಕ್ಷಿತ ‘ಗಜರಾಮ’ (Gajarama) ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಿನಿಮಾ ಸೆಟ್ಟೇರಿದ ದಿನದಿಂದಲೇ ಚಿತ್ರೀಕರಣ ಆರಂಭಿಸಿದ ಚಿತ್ರತಂಡ 16 ದಿನಗಳ ಮೊದಲ ಹಂತದ ಚಿತ್ರೀಕರಣವನ್ನು  ಯಶಸ್ವಿಯಾಗಿ ಪೂರ್ಣಗೊಳಿಸಿದೆ.

    ಹದಿನಾರು ದಿನಗಳ ಕಾಲ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಮೊದಲ ಶೆಡ್ಯೂಲ್ ಮುಗಿದ್ದಿದ್ದು ಎರಡನೆ ಶೆಡ್ಯೂಲ್ ಗಾಗಿ ಲೊಕೇಶನ್ ಹುಡುಕಾಟದಲ್ಲಿದ್ದೇವೆ. ಇನ್ನು ನಲವತ್ತು ದಿನಗಳ ಶೂಟಿಂಗ್ ಬಾಕಿ ಇದೆ. ನಾನು ಏನು ಅಂದುಕೊಂಡಿದ್ದೆನೋ ಹಾಗೆಯೇ ಚಿತ್ರೀಕರಣ ನಡೆಯುತ್ತಿದೆ, ಸಿನಿಮಾವೂ ಮೂಡಿ ಬರ್ತಿದೆ. ಮೊದಲ ಸಿನಿಮಾ ಎಂದು ನೋಡದೇ ಹಿರಿಯ ಹಾಗೂ ಅನುಭವಿ ಛಾಯಾಗ್ರಾಹಕ ಕೆ.ಎಸ್ ಚಂದ್ರಶೇಖರ್ ನನಗೆ ಸಹಕಾರ ನೀಡುತ್ತಾ ನನ್ನ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ನಿರ್ದೇಶಕ ಸುನೀಲ್ ಕುಮಾರ್. ವಿ. ಎ (Sunil Kumar) ತಿಳಿಸಿದ್ದಾರೆ. ಇದನ್ನೂ ಓದಿ:`ಮಿಸ್ ಯೂ ಸಾನ್ಯ’ ಎಂದು ಬಿಕ್ಕಿ ಬಿಕ್ಕಿ ಅತ್ತ ರೂಪೇಶ್ ಶೆಟ್ಟಿ

    ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಹಾಯಕ ನಿರ್ದೇಶಕರಾಗಿ ದುಡಿದಿರುವ ಸುನೀಲ್ ಕುಮಾರ್. ವಿ. ಎ ನಿರ್ದೇಶನದ ಮೊದಲ ಸಿನಿಮಾವಿದು. ಲವ್ ಸ್ಟೋರಿ ಹಾಗೂ ಮಾಸ್ ಆಕ್ಷನ್ ಕಥಾಹಂದರ ಒಳಗೊಂಡ ಚಿತ್ರದಲ್ಲಿ ರಾಜವರ್ಧನ್ ಜೋಡಿಯಾಗಿ ಹರಿಕಥೆ ಅಲ್ಲ ಗಿರಿಕಥೆ ಖ್ಯಾತಿಯ ತಪಸ್ವಿನಿ ಪೂಣಚ್ಚ ನಟಿಸುತ್ತಿದ್ದಾರೆ. ಶಿಷ್ಯ ದೀಪಕ್ ಚಿತ್ರದ ಪ್ರಮುಖ ಪಾತ್ರದಲ್ಲಿ ಮಿಂಚುತ್ತಿದ್ದು, ಖಳನಟನಾಗಿ ಪೈಲ್ವಾನ್ ಖ್ಯಾತಿಯ ಕಬೀರ್ ದುಹಾನ್ ಸಿಂಗ್ (Kabir Duhan Singh) ನಟಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತು, ಗೋವಿಂದೇ ಗೌಡ ಒಳಗೊಂಡ ತಾರಾಬಳಗ ಸಿನಿಮಾದಲ್ಲಿದೆ.

    ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್ ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝೇವಿಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಮನೋಮೂರ್ತಿ ಸಂಗೀತ ನಿರ್ದೇಶನ, ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್ ಸಾಹಿತ್ಯದಲ್ಲಿ ಹಾಡುಗಳು ಮೂಡಿ ಬರಲಿದೆ.

     

    Live Tv
    [brid partner=56869869 player=32851 video=960834 autoplay=true]

  • ವೀರಗಾಸೆಗೆ ಈಗಾಗಲೇ ಮಾಸಾಶನ ಕೊಡಲಾಗುತ್ತಿದೆ: ಸಚಿವ ಸುನೀಲ್ ಕುಮಾರ್

    ವೀರಗಾಸೆಗೆ ಈಗಾಗಲೇ ಮಾಸಾಶನ ಕೊಡಲಾಗುತ್ತಿದೆ: ಸಚಿವ ಸುನೀಲ್ ಕುಮಾರ್

    ದೈವ ನರ್ತಕರಿಗೆ ಮಾಸಾಶನ ಘೋಷಿಸಿದ ಬೆನ್ನಲ್ಲೇ, ವೀರಗಾಸೆ ಸೇರಿದಂತೆ ಇತರ ಕಲಾವಿದರಿಗೂ ಮಾಸಾಶನ ನೀಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಧನಂಜಯ್ (Dhananjay) ನಟನೆಯ ಹೆಡ್ ಬುಸ್ (Head Bush) ಸಿನಿಮಾದಲ್ಲಿ ವೀರಗಾಸೆ ಕಲಾವಿದರಿಗೆ ಅವಮಾನ ಮಾಡಿದ್ದಾರೆ ಎನ್ನುವುದು ವಿವಾದಕ್ಕೆ ಕಾರಣವಾಗಿತ್ತು. ಅದಕ್ಕೆ ಸಚಿವ ಸುನೀಲ್ ಕುಮಾರ್ ಕೂಡ ಪ್ರತಿಕ್ರಿಯಿಸಿದ್ದರು. ಹಾಗಾಗಿ ವೀರಗಾಸೆ ಕಲಾವಿದರಿಗೆ ಮಾಸಾಶನ ಕೊಟ್ಟು ಅವರ ಮೇಲೆ ಪ್ರೀತಿ ತೋರಿಸಿ ಎಂದು ಟ್ರೆಂಡ್ ಮಾಡಲಾಗಿತ್ತು.

    ಈ ಕುರಿತಂತೆ ಮಾತನಾಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ (Sunil Kumar), ‘ಈಗಾಗಲೇ ವೀರಗಾಸೆ, ಕಂಸಾಳೆಯವರಿಗೆ ಮಾಸಾಶನ ಕೊಡಲಾಗ್ತಿದೆ. ಇದರಲ್ಲಿ ಯಾವುದೇ  ಗೊಂದಲ ಬೇಡ.  ದೈವ ನರ್ತಕರನ್ನ ಸೇರಿಸಿರಲಿಲ್ಲ ಈಗ ಸೇರಿಸಿದ್ದೇವೆ.’ ಎಂದಿದ್ದಾರೆ. ಈ ಮೂಲಕ ವೀರಗಾಸೆ, ಕಂಸಾಳೆ ಅವರಿಗೆ ಮಾಸಾಶನ ಕೊಡುತ್ತಿರುವ ಕುರಿತಾದ ವಿವಾದಕ್ಕೆ ತೆರೆ ಎಳೆದಿದ್ದಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಹೆಡ್ ಬುಶ್ ಸಿನಿಮಾದ ಬಗ್ಗೆಯೂ ಮಾತನಾಡಿರುವ ಸಚಿವರು, ‘ನಾನು ನೋಡಿಲ್ಲ. ವಿವಾದದ ಬಗ್ಗೆ ಕೇಳಿ ತಿಳಿದುಕೊಂಡಿದ್ದೇನೆ. ಮನರಂಜನೆಗಾಗಿ ಸಾಂಸ್ಕೃತಿಕ ಚಟುವಟಿಕೆಗೆ ಅವಮಾನ ಮಾಡೋದು ಬೇಡ. ಸಿನಿಮಾ ಮಾತ್ರ ಅಲ್ಲ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗೆ ಯಾವುದೇ ಅಪಮಾನ ಮಾಡೋದು ಬೇಡ . ಚಿತ್ರ ನಿರ್ದೇಶಕರೇ ಇದನ್ನ ಗಮನಿಸಬೇಕು. ಪುರುಸೋತ್ತು ಸಿಕ್ಕರೆ ಸಿನಿಮಾ ನೋಡ್ತೀನಿ’ ಎಂದಿದ್ದಾರೆ ಸುನಿಲ್ ಕುಮಾರ್.

    ವೀರಗಾಸೆಗೆ (Veeragase) ಅವಮಾನ ಆಗಿದ್ದರೆ, ಅದನ್ನು ಚಿತ್ರತಂಡ ಸರಿಪಡಿಸಿ ಎಂದು ಸಚಿವರು ಟ್ವಿಟ್ ಮಾಡಿ, ತಮ್ಮ ಕಾಳಜಿ ತೋರುತ್ತಿದ್ದಂತೆಯೇ ಬರೀ ನಿಮ್ಮ ಭಾಗದ ಕಲಾವಿದರಿಗೆ ಮಾತ್ರ ಮಾಸಾಶನ ನೀಡಿ ತಾರತಮ್ಯ ತೋರುತ್ತಿದ್ದೀರಿ. ನಿಮಗೆ ವೀರಗಾಸೆಯ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ಕೂಡಲೇ ಅವರಿಗೂ ಮಾಸಾಶನ ನೀಡಬೇಕು ಎಂದು ಹಲವರು ಆಗ್ರಹಿಸಿದ್ದರು. ಸಾವಿರಾರು ಜನರು ಸಚಿವರಿಗೆ ಟ್ವಿಟ್ ಮಾಡಿದ್ದರು. ಅದಕ್ಕೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೆಡ್ ಬುಷ್ ವಿವಾದ : ಸರಕಾರಕ್ಕೆ ತಂದಿಟ್ಟ ಸಂಕಷ್ಟ

    ಹೆಡ್ ಬುಷ್ ವಿವಾದ : ಸರಕಾರಕ್ಕೆ ತಂದಿಟ್ಟ ಸಂಕಷ್ಟ

    ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ (Head Bush) ಸಿನಿಮಾದ ವಿವಾದ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಅದರಲ್ಲೂ ಪ್ರಾಂತ್ಯ, ಭಾಷೆಯ ವಿಚಾರವನ್ನು ಇಲ್ಲಿಗೆ ಎಳೆತರಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ (Sunil Kumar) ವೀರಗಾಸೆ ಕುರಿತಾಗಿ ಟ್ವಿಟ್ ಮಾಡುತ್ತಿದ್ದಂತೆಯೇ ಅನೇಕರು ಅವರ ಮೇಲೆ ಮುಗಿ ಬಿದ್ದಿದ್ದಾರೆ. ಕೇವಲ ಒಂದು ಸಮುದಾಯಕ್ಕೆ ಮಾತ್ರ ಮಾಸಾಶನ ಕೊಟ್ಟಿದ್ದೀರಿ. ವೀರಗಾಸೆ, ಕಂಸಾಳೆ ಹೀಗೆ ಎಲ್ಲ ಜಾನಪದ ಪ್ರಕಾರದ ಕಲಾವಿದರಿಗೂ ಕೊಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡಿದ್ದಾರೆ.

    ವೀರಗಾಸೆಗೆ (Veeragase) ಅವಮಾನ ಆಗಿದ್ದರೆ, ಅದನ್ನು ಚಿತ್ರತಂಡ ಸರಿಪಡಿಸಿ ಎಂದು ಸಚಿವರು ಟ್ವಿಟ್ ಮಾಡಿ, ತಮ್ಮ ಕಾಳಜಿ ತೋರುತ್ತಿದ್ದಂತೆಯೇ ಬರೀ ನಿಮ್ಮ ಭಾಗದ ಕಲಾವಿದರಿಗೆ ಮಾತ್ರ ಮಾಸಾಶನ ನೀಡಿ ತಾರತಮ್ಯ ತೋರುತ್ತಿದ್ದೀರಿ. ನಿಮಗೆ ವೀರಗಾಸೆಯ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ಕೂಡಲೇ ಅವರಿಗೂ ಮಾಸಾಶನ ನೀಡಬೇಕು ಎಂದು ಹಲವರು ಆಗ್ರಹಿಸಿದ್ದಾರೆ. ಇದರಿಂದಾಗಿ ಸಚಿವರು ಇರಸುಮುರಸು ಎದುರಿಸುವಂತಾಗಿದೆ. ಇದನ್ನೂ ಓದಿʻಹೆಡ್‌ ಬುಷ್‌ʼ ವಿವಾದ – ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಯ್ತು #WeStandWithDhananjaya ಹ್ಯಾಷ್‌ ಟ್ಯಾಗ್‌

    ಸಾವಿರಾರು ಜನರು ಸಚಿವರಿಗೆ ಟ್ವಿಟ್ ಮಾಡಿ, ಟ್ಯಾಗ್ ಮಾಡಿದ್ದಾರೆ. ಆದರೆ, ಈ ಕುರಿತು ಸುನೀಲ್ ಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೇ, ಭರವಸೆಯನ್ನೂ ಕೊಟ್ಟಿಲ್ಲ. ಸಚಿವರ ಈ ನಡೆ ಭಾರೀ ವಿರೋಧಕ್ಕೂ ಕಾರಣವಾಗಿದೆ. ಡಾಲಿ ಧನಂಜಯ್ (Dhananjay) ಕೂಡ ಪತ್ರಿಕಾಗೋಷ್ಠಿಯಲ್ಲಿ ಮಾಸಾಶನದ ಬಗ್ಗೆ ಮಾತನಾಡಿದ್ದಾರೆ. ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಸರಕಾರ ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡತ್ತೋ ಕಾದು ನೋಡಬೇಕು.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ರಿಷಬ್ ಶೆಟ್ಟಿ (Rishabh Shetty) ದೈವ ಕಟ್ಟುವವರಿಗೆ ಮಾಸಾಶನ ನೀಡಿದಂತೆ ರಾಜ್ಯದ ಇತರ ಕಲಾವಿದರಿಗೂ ಅದನ್ನು ವಿಸ್ತರಿಸಬೇಕು. ಎಲ್ಲ ಕಲಾವಿದರೂ ನನಗೆ ಒಂದೇ. ಈ ಮೂಲಕನ ನಾನೂ ಕೂಡ ಸರಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

    Live Tv
    [brid partner=56869869 player=32851 video=960834 autoplay=true]