Tag: ಸುನೀಲ್ ವಲ್ಯಾಪುರೆ

  • ಭೋವಿ ನಿಗಮದಲ್ಲಿ ಅಕ್ರಮ – ಬಿಜೆಪಿ ಎಂಎಲ್‌ಸಿ ಸುನೀಲ್ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ

    ಭೋವಿ ನಿಗಮದಲ್ಲಿ ಅಕ್ರಮ – ಬಿಜೆಪಿ ಎಂಎಲ್‌ಸಿ ಸುನೀಲ್ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ

    – ನಿಗಮದಲ್ಲಿ ಅಕ್ರಮ ನಡೆದಿದೆ ಎಂದು ದೂರು ಕೊಟ್ಟಿದ್ದೇ ನಾನು
    – ತನಿಖೆ ಆಗ್ರಹಿಸಿದವರ ಮೇಲೆಯೇ ದಾಳಿ ನಡೆದಿದೆ: ವಲ್ಯಾಪುರೆ ಕಿಡಿ

    ಕಲಬುರಗಿ: ವಿಧಾನ ಪರಿಷತ್‌ (Vidhan Parishad) ಬಿಜೆಪಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಆಪ್ತ ಸುನಿಲ್ ವಲ್ಯಾಪುರೆ (Sunil Vallyapure) ಮನೆ ಮೇಲೆ ಸಿಐಡಿ (CID) ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.

    2022ರಲ್ಲಿ ಸುನೀಲ್ ವಲ್ಯಾಪುರೆ ಪುತ್ರ ವಿನಯ್ ವಲ್ಯಾಪುರೆಯಿಂದ ಭೋವಿ ನಿಗಮದಲ್ಲಿ ಅಕ್ರಮದ (Bhovi Development Corporation) ಕುರಿತು ದೂರು ದಾಖಲಾಗಿತ್ತು. ಒಟ್ಟು ನಿಗಮದ 12 ಕೋಟಿ ರೂ. ಹಣ ದುರ್ಬಳಕೆ ಆರೋಪದ ಮಾತು ಕೇಳಿ ಬಂದಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ಸರ್ಚ್ ವಾರೆಂಟ್ ಪಡೆದ ಸಿಐಡಿ, ನಗರದ ಸಂತೋಷ್ ಕಾಲೊನಿಯಲ್ಲಿನ ಮನೆ ಮೇಲೆ ಸಿಐಡಿ ಡಿಎಸ್‌ಪಿ ಅಸ್ಲಂ ಬಾಷಾ ಹಾಗೂ 4 ಜನ ಸಿಬ್ಬಂದಿ ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ.

    2022 ರಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿತ್ತು. ನಿಗಮದ ನಾನಾ ಯೋಜನೆಗಳಿಗೆ ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ನಿಗಮದ ಹಣವನ್ನು ವಿನಯ್ ವಲ್ಯಾಪುರೆ ತಮ್ಮ ಓಡೆತನದ ಸೋಮನಾಥೇಶ್ವರ ಎಂಟರ್ಪ್ರೈಸಸ್ ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂದು ದೂರು ದಾಖಲಾಗಿತ್ತು.

    6 ಗಂಟೆ ಶೋಧ
    ಸಿಐಡಿ ಡಿಎಸ್‌ಪಿ ಹಾಗೂ ನಾಲ್ವರು ಸಿಬ್ಬಂದಿ ಮಧ್ಯಾಹ್ನ 12 ರಿಂದ ಸಂಜೆ 6 ಗಂಟೆವರೆಗೆ ಶೋಧ ನಡೆಸಿದ್ದಾರೆ. ಈ ವೇಳೆ ಮನೆಯ ಇಂಚಿಂಚು ಜಾಲಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಲವು ದಾಖಲೆಗಳು ಹಾಗೂ ಮನೆಯಲ್ಲಿ ಕಂಪ್ಯೂಟರ್ ಸೇರಿ ಡಿಜಿಟಲ್ ದಾಖಲೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಕೆಲವು ದಾಖಲೆ ಕೊಂಡೊಯ್ದಿದ್ದಾರೆ ಎಂಬ ಮಾಹಿತಿ ಇದೆ.

    ತನಿಖೆಗೆ ಎಲ್ಲ ರೀತಿಯ ಸಹಕಾರ: ವಲ್ಲಾಪುರೆ
    ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಹಿಂದೆ ನಮ್ಮ ಸರ್ಕಾರಕ್ಕೆ ನಾನೇ ಮನವಿ ಮಾಡಿದ್ದೆ. ಇದೀಗ ತನಿಖೆ ಮಾಡುವ ಎಂದವರ ಮೇಲೆ ತನಿಖೆ ನಡೆಸುತ್ತಿದ್ದಾರೆ ಎಂದು ಸುನೀಲ್ ವಲ್ಲಾಪುರೆ ಹೇಳಿದರು. ಇದನ್ನೂ ಓದಿ: ಬೆಂಗ್ಳೂರಲ್ಲಿ  1 ಕೆಜಿ ಚಿನ್ನ ಕದ್ದು ತೀರ್ಥಹಳ್ಳಿಯಲ್ಲಿ ಹೂತಿಟ್ಟಿದ್ದ ಖತರ್ನಾಕ್ ಕಳ್ಳ!

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮಾಡಿ ಎಂದವರ ಮನೆಗೆ ಸರ್ಚ್ ವಾರಂಟ್ ಪಡೆದು ಬಂದಿದ್ದಾರೆ. ಪರಿಸ್ಥಿತಿ ಎಲ್ಲಿಗೆ ಬಂದಿದೆ ನೋಡಿ? ಈಗಾಗಲೇ ಪ್ರಕರಣದಲ್ಲಿ ಕೆಲವು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ನಮ್ಮ ಕುಟುಂಬದ ಯಾರೂ ಭೋಮಿ ನಿಗಮದ ಅಕ್ರಮದಲ್ಲಿ ಭಾಗಿಯಾಗಿಲ್ಲ. ಸಿಐಡಿಯಲ್ಲಿದ್ದ ಪ್ರಕರಣವನ್ನ ಎಸ್‌ಐಟಿಗೆ ವರ್ಗಾವಣೆ ಆಗಿದೆ. ಈ ಕುರಿತು ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

     

  • ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೆಲವೊಮ್ಮೆ ಅನಿವಾರ್ಯ: ಚಿಂಚೋಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ

    ರಾಜಕೀಯದಲ್ಲಿ ಕುಟುಂಬ ರಾಜಕಾರಣ ಕೆಲವೊಮ್ಮೆ ಅನಿವಾರ್ಯ: ಚಿಂಚೋಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ

    ಕಲಬುರಗಿ: ರಾಜಕೀಯದಲ್ಲಿ ಕುಟುಂಬ ರಾಜಕಾರಣಕ್ಕೆ ನನ್ನ ವಿರೋಧವಿದೆ. ಅದರೆ ರಾಜಕಾರಣದಲ್ಲಿ ಕೆಲವೊಮ್ಮೆ ಅದು ಅನಿವಾರ್ಯವಾಗುತ್ತದೆ ಎಂದು ಮಾಜಿ ಸಚಿವ, ಚಿಂಚೋಳಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಸುನೀಲ್ ವಲ್ಯಾಪುರೆ ಹೇಳಿದ್ದಾರೆ.

    ನಾನು ಬಿಜೆಪಿಯಲ್ಲಿ 25 ವರ್ಷದಿಂದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಚಿಂಚೋಳಿ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇನೆ. ವಲ್ಯಾಪುರೆ ನಡೆಯೇ ನಮ್ಮ ನಡೆ ಎಂದು ಕಾರ್ಯಕರ್ತರು ಹೇಳಿದ್ದಾರೆ. ಆದರೆ ರಾಜ್ಯ ಬಿಜೆಪಿ ನಾಯಕರ ಮಾತಿಗೆ ಬೆಲೆ ಕೊಟ್ಟು ನಾನು ಕ್ಷೇತ್ರವನ್ನು ಬಿಟ್ಟು ಕೊಟ್ಟಿದ್ದೇನೆ ಎಂದು ಹೇಳಿದರು.

    ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೊತೆ ಕೆಜೆಪಿಗೆ ಹೋದೆ, ಆಮೇಲೆ ಬಿಜೆಪಿಗೂ ಬಂದೆ. ಕೆಲ ದಿನಗಳ ನಂತರ ನಮ್ಮದೆ ಸರ್ಕಾರ ಆಗುತ್ತೆ, ಅದಕ್ಕೆ ಉಮೇಶ್ ಜಾಧವ್‍ರನ್ನ ಪಕ್ಷಕ್ಕೆ ಕರೆತಂದಿದ್ದೇವೆ ಎಂದು ಬಿಎಸ್‍ವೈ ಹೇಳಿದ್ದರು. ಅದಕ್ಕಾಗಿ ನೀನು ಬೈ ಎಲೆಕ್ಷನ್‍ನಲ್ಲಿ ತ್ಯಾಗ ಮಾಡಬೇಕು ಎಂದು ಬಿಎಸ್‍ವೈ ಕೇಳಿಕೊಂಡಿದ್ದರು. ಪಕ್ಷದ ಹಿತದೃಷ್ಟಿಯಿಂದ ನಾನು ಬಿಜೆಪಿ ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಬೈ ಎಲೆಕ್ಷನ್‍ನಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಡಾ. ಅವಿನಾಶ್ ಜಾಧವ್ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

    2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಚಿಂಚೋಳಿಯಲ್ಲಿ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮೇ 19ರಂದು ಚುನಾವಣೆ ನಡೆಯಲಿದೆ.