Tag: ಸುಪ್ರೀಂಕೋಟ್

  • ಹಿಜಬ್‍ಗೂ ಪರೀಕ್ಷೆಗೂ ಸಂಬಂಧವಿಲ್ಲ, ತುರ್ತು ವಿಚಾರಣೆ ನಡೆಸಲ್ಲ: ಸುಪ್ರೀಂ

    ಹಿಜಬ್‍ಗೂ ಪರೀಕ್ಷೆಗೂ ಸಂಬಂಧವಿಲ್ಲ, ತುರ್ತು ವಿಚಾರಣೆ ನಡೆಸಲ್ಲ: ಸುಪ್ರೀಂ

    ನವದೆಹಲಿ: ತರಗತಿಗಳಲ್ಲಿ ಹಿಜಬ್ ನಿಷೇಧ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಪ್ರೀಂಕೋರ್ಟ್ 2ನೇ ಬಾರಿಯೂ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ.

    ಇಂದು ಬೆಳಗ್ಗೆ 10:30ಕ್ಕೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದ್ಯಾರ್ಥಿನಿ ಆಯಿಷಾ ಪರ ವಕೀಲ ದೇವದತ್ ಕಾಮತ್ ತುರ್ತು ಅರ್ಜಿ ವಿಚಾರಣೆ ನಡಸಬೇಕು ಎಂದು ಮುಖ್ಯ ನ್ಯಾಯಾಧೀಶ ರಮಣ ಪೀಠದಲ್ಲಿ ಮನವಿ ಮಾಡಿದರು.

    ಇದೇ 28 ರಿಂದ ಪರೀಕ್ಷೆ ಆರಂಭವಾಗಲಿದೆ. ಶಾಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದರೆ 1 ವರ್ಷ ಹಾಳಾಗುತ್ತದೆ. ಹಾಗಾಗಿ ಶೀಘ್ರ ವಿಚಾರಣೆ ನಡೆಸಬೇಕು ಎಂದು ಅವರು ವಾದಿಸಿದರು. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಸೆಮಿಸ್ಟರ್ ಪರೀಕ್ಷೆಗೆ ಗೈರು

    ಇದಕ್ಕೆ ಅಸಮಧಾನಗೊಂಡ ಸಿಜೆಐ, ಪ್ರಕರಣಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಸ್ಯೆಯನ್ನು ಸೂಕ್ಷ್ಮಗೊಳಿಸಬೇಡಿ ಎಂದು ಹೇಳಿ ಮನವಿಯನ್ನು ತಿರಸ್ಕರಿಸಿ ಮತ್ತೊಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡರು.

    ಈ ಹಿಂದೆಯೇ ತುರ್ತು ವಿಚಾರಣೆ ಕೈಗೊಳ್ಳುವಂತೆಯೂ ಮನವಿ ಮಾಡಿದಾಗ ಹೋಳಿ ಹಬ್ಬದ ರಜೆಯ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಇದನ್ನೂ ಓದಿ: ಹೈಕೋರ್ಟ್ ಜಡ್ಜ್‌ಗೆ ಬೆದರಿಕೆ – ತನಿಖೆ ಚುರುಕುಗೊಳಿಸಿದ ಪೊಲೀಸರು

    ಶಾಲೆಯಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಪಾಲಿಸಬೇಕೆಂಬ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಅಷ್ಟೇ ಅಲ್ಲದೇ ಹಿಜಬ್ ಮುಸ್ಲಿಂ ಧರ್ಮದ ಕಡ್ಡಾಯ ಆಚರಣೆ ಭಾಗವಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಕೆಯಾಗಿದೆ.

  • ಅನರ್ಹರಿಗೆ ಢವ ಢವ- ನಾಳೆ ಬಿಎಸ್‌ವೈ ಆಡಿಯೋ ಸುಪ್ರೀಂನಲ್ಲಿ ವಿಚಾರಣೆ

    ಅನರ್ಹರಿಗೆ ಢವ ಢವ- ನಾಳೆ ಬಿಎಸ್‌ವೈ ಆಡಿಯೋ ಸುಪ್ರೀಂನಲ್ಲಿ ವಿಚಾರಣೆ

    ನವದೆಹಲಿ: ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಸಾಕ್ಷ್ಯವನ್ನು ಸುಪ್ರೀಂಕೋರ್ಟ್ ಪರಿಗಣಿಸಿದೆ. ಈ ಕುರಿತು ನಾಳೆ(ಮಂಗಳವಾರ) ಆಡಿಯೋ ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿದೆ

    ಇಂದು ನ್ಯಾಯಾಧೀಶ ಎನ್.ವಿ.ರಮಣ ಅವರ ಮುಂದೆ ಆಡಿಯೋ ಬಗ್ಗೆ ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಲ್ ಪ್ರಸ್ತಾಪ ಮಾಡಿದರು. ಈಗಾಗಲೇ ವಿಚಾರಣೆ ಮುಗಿದಿದ್ದು, ಈಗ ಏನು ಹೇಳಬೇಕು ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದರು. ವಿಚಾರಣೆ ಮುಗಿದ ಬಳಿಕ ಮಹತ್ವದ ಬೆಳವಣಿಗೆ ನಡೆದಿದ್ದು, ಆಡಿಯೋ ಕ್ಲಿಪ್ ಲೀಕ್ ಆಗಿದೆ. ಹಾಗಾಗಿ ನ್ಯಾಯಾಲಯದ ಗಮನಕ್ಕೆ ತರಬೇಕಿದೆ. ಲೀಕ್ ಆಗಿರುವ ಆಡಿಯೋವನ್ನು ಭಾಷಾಂತರ ಮಾಡಲಾಗಿದ್ದು, ನ್ಯಾಯಾಲಯ ಪರಿಗಣಿಸಬೇಕೆಂದು ಕಪಿಲ್ ಸಿಬಲ್ ಮನವಿ ಮಾಡಿಕೊಂಡರು.

    ಮನವಿ ಆಲಿಸಿದ ನ್ಯಾಯಾಧೀಶರು, ನಿಮ್ಮದು ಸೇರಿ ಕೆಲವು ಪ್ರಕರಣ ಇತ್ಯರ್ಥ ಪಡಿಸಬೇಕು. ಹಾಗಾಗಿ ನಾಳೆ ಕೆಲ ಸಮಯ ಹಳೆಯ ಪೀಠವನ್ನು ಮುಂದುವರಿಸೋಣ. ನಿಮ್ಮ ಮನವಿ ಏನಿದೆ ಸಲ್ಲಿಸಿ, ನಾಳೆ ಪರಿಶೀಲಿಸೋಣ ಎಂದು ನ್ಯಾಯಾಧೀಶರು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದ್ದಾರೆ.

  • ದೇಶಾದ್ಯಂತ ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ

    ದೇಶಾದ್ಯಂತ ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ: ಸುಪ್ರೀಂ

    ನವದೆಹಲಿ: ದೇಶಾದ್ಯಂತ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

    ಸುರಕ್ಷಿತ ಹಾಗೂ ಗ್ರೀನ್ ಪಟಾಕಿಗಳ ಉತ್ಪಾದನೆ ಹಾಗೂ ಮಾರಾಟ ಮುಂದುವರಿಸುವಂತೆ ನ್ಯಾ. ಎ. ಕೆ ಸಿಕ್ರಿ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ. ತೀರ್ಪಿನಲ್ಲಿ ಬೆಳಗ್ಗೆ 8 ರಿಂದ 10 ವರೆಗೂ ಪಟಾಕಿ ಹೊಡೆಯಬಹುದು. ಹೊಸ ವರ್ಷ ಮತ್ತು ಕ್ರಿಸ್ಮಸ್ ಸಂದರ್ಭದಲ್ಲಿ ರಾತ್ರಿ 12:30 ವರೆಗೂ ಪಟಾಕಿ ಹೊಡೆಯಲು ಅವಕಾಶ ಕಲ್ಪಿಸಲಾಗಿದೆ.

    ಇನ್ಮುಂದೆ ಕೇವಲ ಲೈಸನ್ಸ್ ಹೊಂದಿರುವ ಮಾರಾಟಗಾರರಷ್ಟೇ ಪಟಾಕಿ ಮಾರಾಟ ಮಾಡಬೇಕು ಎಂದಿರುವ ಸುಪ್ರೀಂ, ಆನ್ ಲೈನಲ್ಲಿ ಪಟಾಕಿ ಮಾರಾಟವನ್ನು ಸಂಪೂರ್ಣ ನಿಷೇಧಿಸಿದೆ. ಈ ತೀರ್ಪಿನ ಬಳಿಕವೂ ಪಟಾಕಿಗಳನ್ನು ಆನ್‍ಲೈನಲ್ಲಿ ಮಾರಾಟ ನಡೆಸಿದರೆ ಅವರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

    ಏನಿದು ಪ್ರಕರಣ?
    ಕಳೆದ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ನಿಷೇಧಿಸಿ ಸುಪ್ರೀಂಕೋರ್ಟ್ ಆದೇಶಿಸಿತ್ತು. ಅದರ ಬೆನ್ನಲ್ಲೇ ಇಡೀ ದೇಶಾದ್ಯಂತ ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ನಿಷೇಧ ಹೇರಬೇಕೆಂದು ಅರ್ಜಿ ಸಲ್ಲಿಕೆಯಾಗಿತ್ತು.

    ವಿಚಾರಣೆ ವೇಳೆ ದೇಶಾದ್ಯಂತ ಸಂಪೂರ್ಣ ಪಟಾಕಿ ನಿಷೇಧಕ್ಕೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿ, ಪಟಾಕಿ ಉತ್ಪಾದನೆ ಮತ್ತು ಮಾರಾಟದ ಮೇಲೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಅವಕಾಶ ನೀಡಬೇಕೆಂದು ಸಲಹೆ ನೀಡಿತ್ತು. ಈ ಉದ್ಯಮವನ್ನೇ ನಂಬಿಕೊಂಡಿರುವ ಅದೆಷ್ಟೋ ಕುಟುಂಬಗಳು ಬೀದಿಗೆ ಬರಲಿವೆ ಎಂದು ಪಟಾಕಿ ಉತ್ಪಾದಕರು ವಾದಿಸಿದ್ದರು.

     

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv