Tag: ಸುಪ್ರೀಂಕೋರ್ಟ್

  • ಕರೂರು ಕಾಲ್ತುಳಿತ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ ಸುಪ್ರೀಂ ಕೋರ್ಟ್ ಸಮಿತಿ

    ಕರೂರು ಕಾಲ್ತುಳಿತ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ ಸುಪ್ರೀಂ ಕೋರ್ಟ್ ಸಮಿತಿ

    ನವದೆಹಲಿ/ಚೆನ್ನೈ: ಕರೂರು ಕಾಲ್ತುಳಿತ (Karur Stampede) ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ (Supreme Court) ನೇಮಿಸಿದ ಸಮಿತಿಯು ಅಗತ್ಯವಿದ್ದರೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.

    ತಮಿಳುನಾಡಿನ (Tamilnadu) ಕರೂರಿನಲ್ಲಿ ಟಿವಿಕೆ ನಾಯಕ (TVK Vijay) ವಿಜಯ್ ಅವರ ರ‍್ಯಾಲಿ ಸಂದರ್ಭದಲ್ಲಿ 41 ಜನರು ಸಾವನ್ನಪ್ಪಿದ್ದರು. ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಸ್ವತಂತ್ರ ತನಿಖೆಗೆ ಕೋರಿ ಅರ್ಜಿ ಸಲ್ಲಿಸಿತ್ತು. ಎಸ್‌ಐಟಿಯಲ್ಲಿ ತಮಿಳುನಾಡಿನ ಪೊಲೀಸರೇ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೇಳಿತ್ತು. ಅರ್ಜಿ ವಿಚಾರಣೆ ಬಳಿಕ ಕರೂರು ಕಾಲ್ತುಳಿತ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಅಲ್ಲದೇ ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚಿಸಿತ್ತು.ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತದ ತನಿಖೆ ಆರಂಭಿಸಿದ ಸಿಬಿಐ

    ಸದ್ಯ ಸುಪ್ರೀಂಕೋರ್ಟ್ ರಚಿಸಿದ ಸಮಿತಿಯು ಸಿಬಿಐ ನಿರ್ದೇಶಕರ ಬಳಿ ಕೆಲವು ದಾಖಲೆಗಳನ್ನು ಕೋರಿದ್ದು, ತನಿಖೆಯ ಭಾಗವಾಗಿ ಘಟನಾ ಸ್ಥಳಕ್ಕೆ ಸುಪ್ರೀಂಕೋರ್ಟ್ ನೇಮಿಸಿದ ಸಮಿತಿಯು ಭೇಟಿ ನೀಡಲಿದೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ರಚಿಸಿರುವ ಈ ಸಮಿತಿಯಲ್ಲಿ ತಮಿಳುನಾಡು ಕೇಡರ್‌ನ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಸುಮಿತ್ ಸರನ್ ಮತ್ತು ಸೋನಲ್ ವಿ ಮಿಶ್ರಾ ಕೂಡ ಇದ್ದಾರೆ.

    ಸೆಪ್ಟೆಂಬರ್ 27ರಂದು ನಟ, ಟಿವಿಕೆ ಮುಖ್ಯಸ್ಥ ವಿಜಯ್ ತಮಿಳುನಾಡಿನ ಕರೂರಿನಲ್ಲಿ ರ‍್ಯಾಲಿ ಹಮ್ಮಿಕೊಂಡಿದ್ದರು. ಈ ವೇಳೆ ವಿಜಯ್ ಅನ್ನು ನೋಡಲು ಲಕ್ಷಾಂತರ ಜನರು ಆಗಮಿಸಿದ್ದರು. ಜೊತೆಗೆ ಆ ದಿನ ವಿಜಯ್ ಕರೂರಿಗೆ 7 ಗಂಟೆ ತಡವಾಗಿ ಆಗಮಿಸಿದ್ದರು. ಇದರಿಂದ ಜನಸಂದಣಿ ಹೆಚ್ಚಾಗಿ, ಕಾಲ್ತುಳಿತ ಸಂಭವಿಸಿತ್ತು. ಪರಿಣಾಮ 41 ಜನರು ಸಾವನ್ನಪ್ಪಿದ್ದರು.ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತ – ಸಿಬಿಐ ತನಿಖೆಗೆ ಸುಪ್ರೀಂ ಆದೇಶ

  • 2020ರ ದೆಹಲಿ ಗಲಭೆ ಕೇಸ್ – ಉಮರ್ ಖಾಲಿದ್ ಸೇರಿ ಇತರೆ ಆರೋಪಿಗಳ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

    2020ರ ದೆಹಲಿ ಗಲಭೆ ಕೇಸ್ – ಉಮರ್ ಖಾಲಿದ್ ಸೇರಿ ಇತರೆ ಆರೋಪಿಗಳ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

    ನವದೆಹಲಿ: 2020ರ ದೆಹಲಿ ಗಲಭೆ ಪಿತೂರಿ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಇತರರಿಗೆ ಜಾಮೀನು ನೀಡಲು ದೆಹಲಿ ಪೊಲೀಸರು (Delhi Police) ವಿರೋಧಿಸಿದ್ದಾರೆ.

    ಆರೋಪಿಗಳು ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಹಿನ್ನೆಲೆ ದೆಹಲಿ ಪೊಲೀಸರು ಜಾಮೀನು ವಿರೋಧಿಸಿ ಅಫಿಡವಿಟ್ ಸಿದ್ಧಪಡಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಗಲಭೆ ಸ್ವಯಂಪ್ರೇರಿತವಾಗಿ ಆಗಿಲ್ಲ. ದೇಶದಲ್ಲಿ ಶಾಂತಿ ಕದಡಲು ಮತ್ತು ಜಾಗತಿಕವಾಗಿ ಭಾರತದ ವರ್ಚಸ್ಸಿಗೆ ಹಾನಿ ಮಾಡಲು ಎಚ್ಚರಿಕೆಯಿಂದ ಯೋಜಿಸಲಾದ ಪ್ರಯತ್ನ ಇದಾಗಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.ಇದನ್ನೂ ಓದಿ: 2020ರ ದೆಹಲಿ ಗಲಭೆ ಕೇಸ್ ಆರೋಪಿಗಳ ಜಾಮೀನು ಅರ್ಜಿ – ಪ್ರತಿಕ್ರಿಯೆ ಸಲ್ಲಿಸದ ದೆಹಲಿ ಪೊಲೀಸರಿಗೆ ಸುಪ್ರೀಂ ತರಾಟೆ

    ಆರೋಪಿಗಳು ಮಾಡಿರುವ ಪಿತೂರಿಗೆ ಸಂಬಂಧಿಸಿದಂತೆ ಸಾಕ್ಷಿಗಳ ಹೇಳಿಕೆಗಳು, ದಾಖಲೆಗಳು ಮತ್ತು ತಾಂತ್ರಿಕ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರುದ್ಧದ ಭಿನ್ನಾಭಿಪ್ರಾಯವನ್ನು ಅಸ್ತ್ರವಾಗಿ ಬಳಸಿಕೊಂಡು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಹೊಡೆತ ತರುವ ಉದ್ದೇಶದಿಂದ ಈ ಗಲಭೆಯನ್ನು ಸೃಷ್ಟಿಸಿದ್ದಾರೆ ಎಂದು ಪೊಲೀಸರು ವಾದಿಸಲಿದ್ದಾರೆ.

    ಅಂತಾರಾಷ್ಟ್ರೀಯ ಗಮನ ಸೆಳೆಯಲು ಮತ್ತು ದೇಶವನ್ನು ನಕಾರಾತ್ಮಕವಾಗಿ ಬಿಂಬಿಸುವ ಉದ್ದೇಶದಿಂದ ಹಾಗೂ ಈ ಗಲಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡುವ ಸಂದರ್ಭಕ್ಕೆ ಹೊಂದಿಕೆಯಾಗುವಂತೆ ಯೋಜಿಸಿದ್ದಾರೆ. ಹೀಗಾಗಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್ ಮತ್ತು ಗುಲ್ಫಿಶಾ ಫಾತಿಮಾ ಸೇರಿದಂತೆ ಅರ್ಜಿದಾರರಿಗೆ ಜಾಮೀನು ನೀಡಬಾರದು. ಅವರನ್ನು ಜೈಲಿನಲ್ಲಿಡಬೇಕು ಎಂದು ತಯಾರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿಗೆ 2,296 ಕೋಟಿ ಅನುದಾನಕ್ಕೆ ಸಂಪುಟ ಅಸ್ತು!

  • ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ಗಂಭೀರವಾಗಿರಬೇಕು – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

    ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ಗಂಭೀರವಾಗಿರಬೇಕು – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

    ನವದೆಹಲಿ/ವಿಜಯಪುರ: ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ನೀವು ಗಂಭೀರವಾಗಿರಬೇಕು ಎಂದು ಕನ್ನೇರಿ (Kanneri Shri) ಕಾಡುಸಿದ್ದೇಶ್ವರ ಶ್ರೀಗಳಿಗೆ ಸುಪ್ರೀಂಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ.

    ವಿಜಯಪುರ (Vijayapura) ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕನ್ನೇರಿ ಕಾಡುಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ವಿಚಾರಣೆ ವೇಳೆ ನ್ಯಾಯಪೀಠ ಸ್ವಾಮೀಜಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.ಇದನ್ನೂ ಓದಿ: ಕನ್ನೇರಿ ಶ್ರೀಗಳು ಆಡಿರುವ ಶಬ್ದಗಳು ಖಂಡನೀಯ, ಕ್ಷಮೆ ಕೇಳಬೇಕು – ಎಂ.ಬಿ ಪಾಟೀಲ್ ಆಗ್ರಹ

    ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಪೀಠ ವಿಚಾರಣೆ ನಡೆಸಿತು. ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ, ನೀವು ಸ್ವಾಮೀಜಿಯಾಗಿ ಗಂಭೀರವಾಗಿರಬೇಕು. ನೀವು ಒಳ್ಳೆಯ ಪ್ರಜೆಯಲ್ಲ, ಅವಹೇಳನಕಾರಿ ಭಾಷೆ ಬಳಸಿದ್ದೀರಿ, ಇದು ವಾಕ್ ಸ್ವಾತಂತ್ರ‍್ಯ ವ್ಯಾಪ್ತಿಯಲ್ಲಿಲ್ಲ ಎಂದು ಆಕ್ರೋಶ ಹೊರಹಾಕಿದೆ.

    ಮುಂದುವರಿದು, ಹೈಕೋರ್ಟ್ ಹೇಳಿರುವುದರಲ್ಲಿ ತಪ್ಪೇನಿಲ್ಲ, ಮೊದಲು ನೀವು ಮಾತನಾಡುವುದು ನಿಲ್ಲಿಸಿ, ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ, ಸದ್ಯಕ್ಕೆ ಒಂದೆರಡು ತಿಂಗಳುಗಳ ಕಾಲ ನೀವು ವಿಜಯಪುರಕ್ಕೆ ಭೇಟಿ ನೀಡುವ ಅಗತ್ಯ ಇಲ್ಲ ಎಂದು ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

    ಗುಪ್ತಚರ ಇಲಾಖೆ ಮಾಹಿತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಕನ್ನೇರಿ ಕಾಡುಸಿದ್ದೇಶ್ವರ ಸ್ವಾಮೀಜಿಯನ್ನು ವಿಜಯಪುರ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಧಿಕಾರಿಗಳು ನಿರ್ಬಂಧಿಸಿದ್ದರು. ಇದನ್ನು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಪ್ರಶ್ನಿಸಲಾಗಿತ್ತು. ಆದರೆ ಹೈಕೋರ್ಟ್ ಸ್ವಾಮೀಜಿ ಹೇಳಿಕೆಗೆ ತೀವ್ರ ಕಳವಳ ವ್ಯಕ್ತಪಡಿಸಿ, ನಿರ್ಬಂಧ ನಿರ್ಧಾರ ಸರಿಯಾಗಿದೆ ಎಂದು ಹೇಳಿತು. ಹೈಕೋರ್ಟ್ ಕೂಡ ಅನುಮತಿ ನಿರಾಕರಿಸಿದ ಹಿನ್ನೆಲೆ ಶ್ರೀಗಳು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.ಇದನ್ನೂ ಓದಿ: ವಿಜಯಪುರ | ಪ್ರಚೋದನಕಾರಿ ಭಾಷಣ – ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿದ ಡಿಸಿ

     

  • ಯೋಗೀಶ್‌ಗೌಡ ಕೊಲೆ ಸಾಕ್ಷ್ಯನಾಶ ಕೇಸ್- ಸುಪ್ರೀಂನಲ್ಲಿ ವಿನಯ್ ಕುಲಕರ್ಣಿಗೆ ಹಿನ್ನಡೆ

    ಯೋಗೀಶ್‌ಗೌಡ ಕೊಲೆ ಸಾಕ್ಷ್ಯನಾಶ ಕೇಸ್- ಸುಪ್ರೀಂನಲ್ಲಿ ವಿನಯ್ ಕುಲಕರ್ಣಿಗೆ ಹಿನ್ನಡೆ

    ಧಾರವಾಡ: ಯೋಗೀಶ್‌ಗೌಡ ಕೊಲೆ ಕೇಸ್‌ನಲ್ಲಿ ಶಾಸಕ ವಿನಯ್ ಕುಲಕರ್ಣಿಗೆ (Vinay Kulkarni) ಮತ್ತೆ ಸಂಕಷ್ಟ ಎದುರಾಗಿದೆ. ಸಾಕ್ಷ್ಯನಾಶ ಕೇಸ್‌ನಲ್ಲಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ಪುರಸ್ಕರಿಸಿದೆ.

    2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯ ಸಾಕ್ಷ್ಯನಾಶ ಮಾಡಲು ಪ್ರಯತ್ನ ಮಾಡಿದ್ದರು ಎಂದು ಧಾರವಾಡ ಶಾಸಕ ವಿನಯ್ ಕುಲಕರ್ಣಿ ಮೇಲೆ ಸಿಬಿಐ ಅಧಿಕಾರಿಗಳು ಸಾಕ್ಷಿ ನಾಶದ ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ಪಲ್ಲಂಗದಾಟಕ್ಕೆ ಅಡ್ಡಿಯಾಗುತ್ತಿದ್ದಾಳೆಂದು ಮಗಳ ಹತ್ಯೆ – ಮಲತಂದೆ ಅರೆಸ್ಟ್


    ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ತಿಂಗಳ ಹಿಂದೆ ಹೈಕೋರ್ಟ್ ಸಾಕ್ಷ್ಯನಾಶದ ಅರ್ಜಿ ವಜಾ ಮಾಡಿತ್ತು. ಅರ್ಜಿ ವಜಾ ಪ್ರಶ್ನಿಸಿ, ಸಿಬಿಐ ಅಧಿಕಾರಿಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಸದ್ಯ ಸುಪ್ರೀಂಕೋರ್ಟ್ ಸಿಬಿಐ ಅರ್ಜಿ ಪುರಸ್ಕರಿಸಿದ್ದು, ಶಾಸಕ ವಿನಯ್ ಕುಲಕರ್ಣಿಗೆ ಸಾಕ್ಷ್ಯನಾಶದ ಪ್ರಕರಣದಲ್ಲಿ ಹಿನ್ನಡೆಯಾಗಿದೆ.

    ಯೋಗೀಶ್‌ಗೌಡ ಕೊಲೆಯಾದ ನಂತರ ರಾಜ್ಯದಲ್ಲಿ 2019ರಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಇದನ್ನ ಸಿಬಿಐಗೆ ನೀಡಿತ್ತು. ಸದ್ಯ ಇದೇ ಪ್ರಕರಣದಲ್ಲಿ ವಿನಯ ಕುಲಕರ್ಣಿ ಜೈಲು ಸೇರಿದ್ದಾರೆ.

  • ನ.23ಕ್ಕೆ ಬಿ.ಆರ್ ಗವಾಯಿ ನಿವೃತ್ತಿ – ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ

    ನ.23ಕ್ಕೆ ಬಿ.ಆರ್ ಗವಾಯಿ ನಿವೃತ್ತಿ – ಮುಂದಿನ ಸಿಜೆಐ ನೇಮಕ ಪ್ರಕ್ರಿಯೆಗೆ ಚಾಲನೆ

    ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ (BR Gavai) ಅವರು ನ.23ರಂದು ನಿವೃತ್ತಿಯಾಗಲಿದ್ದು, ಈ ಹಿನ್ನೆಲೆ ಮುಂದಿನ ಮುಖ್ಯ ನ್ಯಾಯಮೂರ್ತಿ ಆಯ್ಕೆ ಪ್ರಕ್ರಿಯೆಗೆ ಇದೀಗ ಚಾಲನೆ ಸಿಕ್ಕಿದೆ.

    ಸಿಜೆಐ ಬಿಆರ್ ಗವಾಯಿ ಅವರಿಗೆ ಪತ್ರ ಬರೆದಿರೋ ಕೇಂದ್ರ ಸರ್ಕಾರ, ತಮ್ಮ ಉತ್ತರಾಧಿಕಾರಿಯ ನೇಮಕಕ್ಕೆ ಶಿಫಾರಸು ಕೋರಿದೆ. ಈ ಪ್ರಕ್ರಿಯೆಯು ಮುಂದಿನ ಸಿಜೆಐ ನೇಮಕಾತಿ ಕಾರ್ಯವಿಧಾನಕ್ಕೆ ಚಾಲನೆ ಕೊಟ್ಟಿದೆ. ಇದು ಸಾಂಪ್ರದಾಯಿಕವಾಗಿ ಹಾಲಿ ಸಿಜೆಐ ಹುದ್ದೆಯಿಂದ ನಿವೃತ್ತಿಯಾಗುವ ಸುಮಾರು ಒಂದು ತಿಂಗಳ ಮೊದಲು ತೆಗೆದುಕೊಳ್ಳಲಾಗುವ ಹೆಜ್ಜೆಯಾಗಿದೆ.ಇದನ್ನೂ ಓದಿ:ಉತ್ತರಾಧಿಕಾರ ಪ್ರಶ್ನೆ ಎತ್ತಿದ ಯತೀಂದ್ರಗೆ ಫಜೀತಿ – ಹೈಕಮಾಂಡ್‌ಗೆ ಕೆಪಿಸಿಸಿ ವರದಿ ರವಾನೆ

    ಹಿರಿತನದ ಪ್ರಕಾರ, ನ್ಯಾಯಮೂರ್ತಿ ಸೂರ್ಯಕಾಂತ್ ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಲು ಮುಂದಿನ ಸ್ಥಾನದಲ್ಲಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರ ನಿವೃತ್ತಿಯ ನಂತರ ಅವರು ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ. ಪ್ರಸ್ತುತ ಭೂತಾನ್‌ಗೆ ನಾಲ್ಕು ದಿನಗಳ ಅಧಿಕೃತ ಭೇಟಿಯಲ್ಲಿರುವ ಸಿಜೆಐ ಗವಾಯಿ, ನವದೆಹಲಿಗೆ ಹಿಂದಿರುಗಿದ ನಂತರ ಕೇಂದ್ರ ಸರ್ಕಾರಕ್ಕೆ ತಮ್ಮ ಶಿಫಾರಸನ್ನು ಕಳುಹಿಸುವ ನಿರೀಕ್ಷೆಯಿದೆ.

    1962 ಫೆಬ್ರವರಿ 10ರಂದು ಹರಿಯಾಣದ ಹಿಸಾರ್‌ನಲ್ಲಿ ಜನಿಸಿದ ನ್ಯಾಯಮೂರ್ತಿ ಸೂರ್ಯಕಾಂತ್, 1984ರಲ್ಲಿ ಹಿಸಾರ್ ಜಿಲ್ಲಾ ನ್ಯಾಯಾಲಯದಲ್ಲಿ ತಮ್ಮ ವಕೀಲಿ ವೃತ್ತಿಯನ್ನು ಪ್ರಾರಂಭಿಸಿದರು. ಸಾಂವಿಧಾನಿಕ, ಸೇವಾ ಮತ್ತು ನಾಗರಿಕ ಕಾನೂನಿನಲ್ಲಿ ಪರಿಣತಿ ಹೊಂದಿರುವ ಅವರು ಹಲವಾರು ವಿಶ್ವವಿದ್ಯಾಲಯಗಳು, ಮಂಡಳಿಗಳು ಮತ್ತು ನಿಗಮಗಳನ್ನು ಪ್ರತಿನಿಧಿಸಿದ್ದರು. 2000ರಲ್ಲಿ ಹರಿಯಾಣದ ಅತ್ಯಂತ ಕಿರಿಯ ಅಡ್ವೊಕೇಟ್ ಜನರಲ್ ಆಗಿಯೂ ಸೇವೆ ಸಲ್ಲಿಸಿದರು.

    2004 ಜನವರಿ 9ರಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅಕ್ಟೋಬರ್ 5, 2018ರಿಂದ ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು, ನಂತರ ಮೇ 24, 2019ರಂದು ಸುಪ್ರೀಂ ಕೋರ್ಟ್‌ ಬಡ್ತಿ ಪಡೆದರು. ನ್ಯಾಯಮೂರ್ತಿ ಸೂರ್ಯಕಾಂತ್ ಅವರು 2027ರ ಫೆಬ್ರವರಿ 9ರಂದು ನಿವೃತ್ತರಾಗಲಿದ್ದಾರೆ. ಈ ಮೂಲಕ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಸುಮಾರು 15 ತಿಂಗಳ ಅಧಿಕಾರಾ ವಹಿಸಿಕೊಳ್ಳಲಿದ್ದಾರೆ.ಇದನ್ನೂ ಓದಿ: Karnool Bus Fire | ಮೃತರ ಕುಟುಂಬಸ್ಥರಿಗೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಘೋಷಣೆ

  • ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

    ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ (Green Crackers) ಸಿಡಿಸಲು ಸುಪ್ರೀಂ ಕೋರ್ಟ್ (Supreme Court) ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಪಟಾಕಿ ಸಿಡಿಸುವ ಬಗ್ಗೆ ಸಮತೋಲನದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದ ನಗರಗಳಲ್ಲಿ ಪಟಾಕಿ ಸಿಡಿತದಿಂದ ವಾಯು ಮಾಲಿನ್ಯ ಮಿತಿ ಮೀರುತ್ತದೆ. ಮೂರು ನಾಲ್ಕು ದಿನಗಳವರೆಗೂ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗುತ್ತದೆ. ಮನೆಯಿಂದ ಹೊರ ಬಂದರೆ, ಕಣ್ಣು ಉರಿ, ಕಣ್ಣೀರು ಬರುತ್ತದೆ. ಅಷ್ಟರ ಮಟ್ಟಿಗೆ ದೆಹಲಿಯಲ್ಲಿ ಪಟಾಕಿಗಳಿಂದ ವಾಯು ಮಾಲಿನ್ಯವಾಗುತ್ತದೆ. ಹೀಗಾಗಿ ಕೆಲವೊಮ್ಮೆ ಪಟಾಕಿ ಸಿಡಿಸಲು ನಿರ್ಬಂಧ ವಿಧಿಸಲಾಗುತ್ತದೆ. ಆದರೆ ಸುಪ್ರೀಂಕೋರ್ಟ್ ಈಗ ಹಸಿರು ಪಟಾಕಿಗೆ ಮಾತ್ರ ದೆಹಲಿಯಲ್ಲಿ ಅವಕಾಶ ನೀಡಿದೆ. ಇದನ್ನೂ ಓದಿ: ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    QR ಕೋಡ್‌ಗಳನ್ನು ಹೊಂದಿರುವ ಅನುಮೋದಿತ ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಗಸ್ತು ತಂಡಗಳನ್ನು ರಚಿಸುವಂತೆ ನ್ಯಾಯಾಲಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತು.

    ದೆಹಲಿ-ಎನ್‌ಸಿಆರ್ ಪ್ರದೇಶದ ಹೊರಗಿನಿಂದ ಬರುವ ಯಾವುದೇ ಪಟಾಕಿಗಳನ್ನು ಆ ಪ್ರದೇಶದಲ್ಲಿ ಅನುಮತಿಸಲಾಗುವುದಿಲ್ಲ. ನಕಲಿ ಅಥವಾ ಅನಧಿಕೃತ ಪಟಾಕಿಗಳ ಮಾರಾಟಗಾರರು ಕಂಡುಬಂದರೆ ಅವರ ಪರವಾನಗಿಗಳನ್ನು ಅಮಾನತುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತು.  ದೀಪಾವಳಿ ಸಮಯದಲ್ಲಿ ಬೆಳಗ್ಗೆ 6ರಿಂದ 7ಗಂಟೆಯವರೆಗೆ ಹಾಗೂ ಸಂಜೆ 6ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಸುಪ್ರೀಂ ಅನುಮತಿ ಕೊಟ್ಟಿದೆ.  ಇದನ್ನೂ ಓದಿ: ಹೃದಯಸ್ತಂಭನ – ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

    ಈ ಮೊದಲು ಹಸಿರು ಪಟಾಕಿ ಉತ್ಪಾದನೆಗೆ ಅವಕಾಶ ನೀಡಿ ಮಾರಾಟಕ್ಕೆ ನಿಷೇಧ ಹೇರಿತ್ತು. ಆದೇಶ ಮರು ಪರಿಶೀಲನೆ, ಹಸಿರು ಪಟಾಕಿ ಸಿಡಿಸಲು ಅನುಮತಿ ಕೋರಿ ದೆಹಲಿ ಎನ್‌ಸಿಆರ್ ರಾಜ್ಯಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದವು. ವಿಚಾರಣೆ ಬಳಿಕ ಹಸಿರು ಪಟಾಕಿ ಸಿಡಿಸಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಇದನ್ನೂ ಓದಿ: ಸಭೆಗೆ ಬರೋಕಷ್ಟೇ ಪ್ರೆಗ್ನೆಂಟ್ ಇರ್ತಾರೆ, ಗಿಂಬಳ ತಗೊಳ್ಳುವಾಗ ಇರಲ್ವಾ – ಮಹಿಳಾ ಅಧಿಕಾರಿ ವಿರುದ್ಧ `ಕೈ’ ಶಾಸಕ ನಿಂದನೆ

  • Karur Stampede | ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ ಟಿವಿಕೆ ಅರ್ಜಿ – ಅ.10ಕ್ಕೆ ವಿಚಾರಣೆ

    Karur Stampede | ಸ್ವತಂತ್ರ ತನಿಖೆಗೆ ಕೋರಿ ಸುಪ್ರೀಂಗೆ ಟಿವಿಕೆ ಅರ್ಜಿ – ಅ.10ಕ್ಕೆ ವಿಚಾರಣೆ

    ಚೆನ್ನೈ: ಕರೂರು ಕಾಲ್ತುಳಿತ (Karur Stampede) ಪ್ರಕರಣದ ತನಿಖೆ ನಡೆಸಲು ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದೆ.

    ವಕೀಲರಾದ ದೀಕ್ಷಿತಾ ಗೋಹಿಲ್, ಪ್ರಾಂಜಲ್ ಅಗರ್ವಾಲ್ ಮತ್ತು ಯಶ್ ಎಸ್ ವಿಜಯ್ ಅವರು ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ನೇತೃತ್ವದ ಎಸ್‌ಐಟಿ ತನಿಖೆಯ ಬದಲು ಉನ್ನತ ನ್ಯಾಯಲಯದ ನಿವೃತ ನ್ಯಾಯಮೂರ್ತಿ ನೇತೃತ್ವದಲ್ಲಿ ಘಟನೆಯ ಸ್ವತಂತ್ರ ತನಿಖೆ ನಡೆಸಲು ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆಗೆ ಸಮ್ಮತಿ ಸೂಚಿಸಿದ್ದು, ಅ.10ರಂದು ವಿಚಾರಣೆ ನಡೆಸುವುದಾಗಿ ದಿನಾಂಕ ನಿಗದಿಪಡಿಸಿದೆ.ಇದನ್ನೂ ಓದಿ: ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ: ಬೋಸರಾಜು

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಿ.ಎಸ್.ಮಣಿ ಅವರು ಸುಪ್ರೀಂಕೋರ್ಟ್‌ನಲ್ಲಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದು, ಈ ಪ್ರಕರಣದ ಬಗ್ಗೆ ಕೇಂದ್ರ ತನಿಖಾ ದಳ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಈ ಪೈಕಿ ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಸುಪ್ರೀಂಕೋರ್ಟ್ನಲ್ಲಿ ಮೂರು ಅರ್ಜಿಗಳು ದಾಖಲಾಗಿವೆ.

    ಈ ನಡುವೆ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಸ್ಥರ ಭೇಟಿಯಾಗಿ ಸಾಂತ್ವನ ಹೇಳಲು ಹಾಗೂ ಕರೂರಿಗೆ ಭೇಟಿ ನೀಡಲು ನಟ ವಿಜಯ್ ಅನುಮತಿ ಕೇಳಿದ್ದಾರೆ. ತಮಿಳುನಾಡು ಪೊಲೀಸ್ ಮಹಾ ನಿರ್ದೇಶಕರಿಗೆ ಇಮೇಲ್ ಮೂಲಕ ಅನುಮತಿ ಕೇಳಿದ್ದು, ಮಂಗಳವಾರ (ಅ.7) ವಿಡಿಯೋ ಕಾಲ್ ಮೂಲಕ ಮೃತರ ಕುಟುಂಬಸ್ಥರಿಗೆ ವಿಜಯ್ ಸಾಂತ್ವಾನ ಹೇಳಿದ್ದರು.ಇದನ್ನೂ ಓದಿ: ರಾಜ್ಯದ 15 ಜಿಲ್ಲೆಗಳ 252 ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ; ನಟ ವಸಿಷ್ಠ ಸಿಂಹ ರಾಯಭಾರಿ

  • ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್

    ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳ ಸಾವು ಪ್ರಕರಣ – ಸುಪ್ರೀಂಕೋರ್ಟ್‌ಗೆ ಪಿಐಎಲ್

    ನವದೆಹಲಿ: ಮಧ್ಯಪ್ರದೇಶದಲ್ಲಿ (Madhya Pradesh) ಕೆಮ್ಮಿನ ಸಿರಪ್‌ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

    ಪಿಐಎಲ್‌ನಲ್ಲಿ, ಕಲುಷಿತ ಕೆಮ್ಮಿನ ಸಿರಪ್ (Cough Syrup) ತಯಾರಿಕೆ, ಪರೀಕ್ಷೆ ಮತ್ತು ವಿತರಣೆಯ ಬಗ್ಗೆ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ: 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ – ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

    ಈಗಾಗಲೇ ಕೆಮ್ಮಿನ ಸಿರಪ್ ಸೇವಿಸಿ 16 ಮಕ್ಕಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಡಾ. ಪ್ರವೀಣ್ ಸೋನಿ ಅವರನ್ನು ಬಂಧಿಸಿ ಅಮಾನತುಗೊಳಿಸಲಾಗಿದೆ. ಕೆಮ್ಮಿನ ಸಿರಪ್ ತಯಾರಿಸಿದ ಕಂಪನಿಯ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಕೂಡ ಈ ವಿಷಯದಲ್ಲಿ ಕಠಿಣ ಕ್ರಮ ಕೈಗೊಂಡಿದ್ದಾರೆ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ ಮತ್ತು ಔಷಧ ನಿಯಂತ್ರಕರನ್ನು ವರ್ಗಾಯಿಸಿದ್ದಾರೆ. ತನಿಖೆಗಾಗಿ ಪೊಲೀಸರು 12 ಸದಸ್ಯರ ವಿಶೇಷ ತನಿಖಾ ತಂಡವನ್ನು ಸಹ ರಚಿಸಿದೆ.

    ಔಷಧ ನಿರೀಕ್ಷಕ ಚಿಂದ್ವಾರ ಗೌರವ್ ಶರ್ಮಾ, ಔಷಧ ನಿರೀಕ್ಷಕ ಜಬಲ್ಪುರ ಶರದ್ ಕುಮಾರ್ ಜೈನ್ ಮತ್ತು ರಾಜ್ಯದ ಆಹಾರ ಮತ್ತು ಔಷಧ ಆಡಳಿತದ ಉಪನಿರ್ದೇಶಕ ಶೋಭಿತ್ ಕೋಸ್ಟಾ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಐಎಎಸ್ ಅಧಿಕಾರಿ ಔಷಧ ನಿಯಂತ್ರಕ ದಿನೇಶ್ ಮೌರ್ಯ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ.ಇದನ್ನೂ ಓದಿ: ಪತ್ನಿಗೆ ಮೆಸೇಜ್‌ ಮಾಡಿದ್ದಕ್ಕೆ ಸ್ನೇಹಿತನ ಬರ್ಬರ ಹತ್ಯೆ – ಜಾರ್ಖಂಡ್‌ಗೆ ಹೊರಟಿದ್ದ ಆರೋಪಿ ಅರೆಸ್ಟ್‌

  • ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ – ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ

    ನವದೆಹಲಿ: ದೀಪಾವಳಿ (Deepavali) ಸನಿಹವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಮತ್ತೆ ವಾಯು ಮಾಲಿನ್ಯದ (Pollution) ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ ಪಟಾಕಿಗಳ (Firecrackers) ಮಾರಾಟವನ್ನು ನಿಷೇಧಿಸಿದೆ.

    ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಪೀಠವು, ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಪಟಾಕಿಗಳ ಮಾರಾಟ ಮತ್ತು ತಯಾರಿಕೆಯ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಹೇಳಿತು. ಇದನ್ನೂ ಓದಿ: Andhra Pradesh | ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

    ಸುಪ್ರೀಂಕೋರ್ಟ್ (Supreme Court) ದೆಹಲಿಯಲ್ಲಿ ಪಟಾಕಿ ತಯಾರಕರಿಗೆ ಹಸಿರು ಪಟಾಕಿಗಳನ್ನು ತಯಾರಿಸಲು ಅನುಮತಿ ನೀಡಿತು. ಆದಾಗ್ಯೂ, ಮುಂದಿನ ಆದೇಶದವರೆಗೆ ಈ ಪಟಾಕಿಗಳನ್ನು ದೆಹಲಿ-ಎನ್‌ಸಿಆರ್‌ನಲ್ಲಿ ಮಾರಾಟ ಮಾಡಬಾರದು ಎಂದು ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ. ಹಸಿರು ಪಟಾಕಿ ಪ್ರಮಾಣಪತ್ರ ಹೊಂದಿರುವ ತಯಾರಕರು ಮಾತ್ರ ಪಟಾಕಿಗಳನ್ನು ತಯಾರಿಸಬೇಕು ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿದೆ. ಈ ಪ್ರಮಾಣಪತ್ರವನ್ನು NEERI ಮತ್ತು PESOನಂತಹ ಅಧಿಕೃತ ಏಜೆನ್ಸಿಗಳು ನೀಡಬೇಕು ಎಂದು ಹೇಳಿದೆ. ಇದನ್ನೂ ಓದಿ: ಲಡಾಖ್‌ ಹಿಂಸಾಚಾರಕ್ಕೆ ಪ್ರಚೋದನೆ – ಪರಿಸರ ಕಾರ್ಯಕರ್ತ ಸೋನಮ್‌ ವಾಂಗ್‌ಚುಕ್‌ ಅರೆಸ್ಟ್‌

    ದೆಹಲಿ-ಎನ್‌ಸಿಆರ್‌ನಲ್ಲಿ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದಿಲ್ಲ ಎಂದು ಪಟಾಕಿ ತಯಾರಕರು ಲಿಖಿತ ಭರವಸೆ ನೀಡಬೇಕಾಗುತ್ತದೆ. ದೀಪಾವಳಿಯ ಸಮಯದಲ್ಲಿ ಈ ಪ್ರದೇಶದಲ್ಲಿ ಮಾಲಿನ್ಯದ ಮಟ್ಟವು ಗಮನಾರ್ಹವಾಗಿ ಹೆಚ್ಚಾಗುವುದರಿಂದ ನ್ಯಾಯಲಯ ಈ ಷರತ್ತು ವಿಧಿಸಿದೆ. ಈ ವಿಷಯದ ಕುರಿತು ಮುಂದಿನ ವಿಚಾರಣೆಯಲ್ಲಿ, ಮಾರಾಟವನ್ನು ತಡೆಯಲು ಮುಂದಿನ ಹಂತದಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಸುಪ್ರೀಂಕೋರ್ಟ್ ನಿರ್ಧರಿಸಲಿದೆ.  ಇದನ್ನೂ ಓದಿ: ಮಿಗ್ -21 ತ್ರಿವರ್ಣ ಧ್ವಜದ ಗೌರವ ಹೆಚ್ಚಿಸಿದೆ: ರಾಜನಾಥ್ ಸಿಂಗ್

  • ಅಕ್ರಮ ಆಸ್ತಿ ಗಳಿಕೆ ಪ್ರಕರಣ | ಡಿಕೆಶಿ ವಿರುದ್ಧ ಸಿಬಿಐ ಕೇಸ್ ವಾಪಸ್; ವಿಚಾರಣೆ ಮುಂದೂಡಿಕೆ

    ಅಕ್ರಮ ಆಸ್ತಿ ಗಳಿಕೆ ಪ್ರಕರಣ | ಡಿಕೆಶಿ ವಿರುದ್ಧ ಸಿಬಿಐ ಕೇಸ್ ವಾಪಸ್; ವಿಚಾರಣೆ ಮುಂದೂಡಿಕೆ

    ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಮುಂದೂಡಿದೆ.

    ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ, ಪ್ರಕರಣವನ್ನ ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠಕ್ಕೆ ವರ್ಗಾಯಿಸಿತು. ಇದನ್ನೂ ಓದಿ: ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?

    ಈ ಹಿಂದೆ ಈ ಪ್ರಕರಣ ನ್ಯಾ. ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅಲ್ಲದೇ ಡಿ.ಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಆದಾಯ ತೆರಿಗೆ ಪ್ರಕರಣವೂ ಬಾಕಿ ಇರುವ ಹಿನ್ನಲೆ ಎಲ್ಲ ಪ್ರಕರಣಗಳ ವಿಚಾರಣೆಯಾಗಲಿದೆ ಎಂದು ಸಿಜೆಐ ಬಿ.ಆರ್ ಗವಾಯಿ ಹೇಳಿದರು.

    ನಾನು ಅಮಿತ್ ಶಾರನ್ನು ಭೇಟಿಯಾಗಿಲ್ಲ
    ದೆಹಲಿಯಲ್ಲಿ ತಮ್ಮ ವಿರುದ್ಧದ ಪ್ರಕರಣದ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಮ್ಮ ಪ್ರಕರಣದ ವಿಚಾರಣೆ ಮುಂದೂಡಿಕೆಯಾಗಿದೆ. ಮತ್ತೆ ಬರಬೇಕು ಎಂದರು. ಮೇಕೆದಾಟು ಪ್ರಕರಣ ಮಂಗಳವಾರ ವಿಚಾರಣೆ ನಡೆಯಬೇಕಿದೆ. ಆದರೆ ಬೇರೊಂದು ಪ್ರಕರಣದಲ್ಲಿ ಸಾಂವಿಧಾನಿಕ ಪೀಠ ವಿಚಾರಣೆ ನಡೆಸುತ್ತಿರುವ ಹಿನ್ನಲೆ ಅದೂ ಮುಂದೂಡಿಕೆಯಾಗಿದೆ ಎಂದು ತಿಳಿಸಿದರು.

    ಬಳಿಕ ಅಮಿತ್ ಶಾ ಭೇಟಿ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕೆಲವರಿಗೆ ನನ್ನ ನೆನಪಿಸಿಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ. ಅಮಿತ್ ಶಾ ಅವರನ್ನು ಭೇಟಿಯಾಗಲು ನನಗೆ ತಲೆ ಕೆಟ್ಟಿದ್ಯಾ ಎಂದು ಪ್ರಶ್ನಿಸಿದರು.

    ಆಲಮಟ್ಟಿ ಎತ್ತರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಕೇಂದ್ರ ಸಚಿವರು, ಬಿಜೆಪಿ ಸಂಸದರು ಉತ್ತರ ಕೊಡಬೇಕು.ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಈ ಬಗ್ಗೆ ಮಾತನಾಡಬೇಕು. ಅವರು ಇದಕ್ಕೆಲ್ಲ ಉತ್ತರ ಕೊಡಬೇಕು ಎಂದರು.