Tag: ಸುಪ್ರೀಂಕೋರ್ಟ್ ಪ್ರಾಣಿ

  • ‘ಗೋವನ್ನು’ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ – ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

    ‘ಗೋವನ್ನು’ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಮನವಿ – ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

    ನವದೆಹಲಿ: ಗೋವನ್ನು (Cow) ರಾಷ್ಟ್ರೀಯ ಪ್ರಾಣಿ (National Animal) ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ (Supreme Court) ನಿರಾಕರಿಸಿದೆ.

    ಇದು ನ್ಯಾಯಲಯದ ಕೆಲಸವಲ್ಲ ಎಂದು ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ನ್ಯಾ. ಅಭಯ್ ಎಸ್.ಓಕಾ ಪೀಠ ಖಾರವಾಗಿ ಪ್ರತಿಕ್ರಿಯಿಸಿದೆ. ಗೋವಂಶ್ ಸೇವಾ ಸದನ್ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ಪೀಠ, ಇದು ನ್ಯಾಯಾಲಯದ ಕೆಲಸವೇ? ನೀವು ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ? ಇಂತಹ ವಿಷಯಗಳನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಮತ್ತು ಅರ್ಜಿದಾರರ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಹೇಳಿ ಎಂದು ಅರ್ಜಿದಾರರಿಗೆ ಕೇಳಿತು. ಇದನ್ನೂ ಓದಿ: ಮಗಳ ಹೆರಿಗೆಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ

    ಇದಕ್ಕೆ ಉತ್ತರಿಸಿದ ಅರ್ಜಿದಾರರ ಪರ ವಕೀಲರು, ಗೋಸಂರಕ್ಷಣೆ ಬಹಳ ಮುಖ್ಯವಾದ ವಿಷಯ. ಸರ್ಕಾರವು ಇದನ್ನು ಪರಿಗಣಿಸಲಿ. ನಾನು ಒತ್ತಾಯಿಸುವುದಿಲ್ಲ, ನಾವು ಗೋವುಗಳಿಂದ ಎಲ್ಲವನ್ನೂ ಪಡೆಯುತ್ತೇವೆ ಎಂದು ಹೇಳಿದರು. ಆದಾಗ್ಯೂ, ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಕರಿಸಿತು. ಈ ಹಿನ್ನೆಲೆ ಅರ್ಜಿದಾರರು ಅದನ್ನು ಹಿಂಪಡೆಯಲು ನಿರ್ಧರಿಸಿದರು. ಇದನ್ನೂ ಓದಿ:  ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ – ಪೊಲೀಸ್ ಮಹಾಸಂಘ ಸೇರಿ ಎಲ್ಲ ಅರ್ಜಿಗಳು ವಜಾ

    Live Tv
    [brid partner=56869869 player=32851 video=960834 autoplay=true]