Tag: ಸುಪ್ರೀಂ ಕೋಟ್

  • ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ

    ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ

    ಮಂಡ್ಯ: ಸುಪ್ರೀಂ ಕೋರ್ಟ್ (Supreme Court) ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು, KRS ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ.

    ನಿನ್ನೆ ತಮಿಳುನಾಡಿಗೆ (TamilNadu) 2,673 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು, ಇಂದು 3,000 ಕ್ಯೂಸೆಕ್‌ಗೆ ಏರಿಕೆಯಾಗಿದೆ. ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಹರಿಸಲಾಗಿದೆ. ಇದನ್ನೂ ಓದಿ: ಇಂದು ಮಂಡ್ಯ, ಮದ್ದೂರ್ ಬಂದ್- ಪೊಲೀಸ್ ಬಿಗಿ ಭದ್ರತೆ

    ಮತ್ತೊಂಡೆದೆ ಕೆಆರ್‌ಎಸ್ ಜಲಾಶಯದ (KRS Reservoir) ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದರೂ ಒಳಹರಿವಿನ ಪ್ರಮಾಣ ಮಾತ್ರ ಕಡಿಮೆಯಾಗಿದೆ. ನಿನ್ನೆ 5,845 ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಇಂದು 5,147 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಇದರಿಂದ 124.80 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದ ಮಟ್ಟ 96.90 ಅಡಿಗೆ ಕುಸಿದಿದೆ. ಇದನ್ನೂ ಓದಿ: ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

    ಕೆಆರ್‌ಎಸ್ ಇಂದಿನ ನೀರಿನ ಮಟ್ಟ
    ಗರಿಷ್ಟ ಮಟ್ಟ: 124.80 ಅಡಿಗಳು
    ಇಂದಿನ ಮಟ್ಟ: 96.90 ಅಡಿಗಳು
    ಗರಿಷ್ಠ ಸಂಗ್ರಹ: 49.452 ಟಿಎಂಸಿ
    ಇಂದಿನ ಸಂಗ್ರಹ: 20.477 ಟಿಎಂಸಿ
    ಒಳಹರಿವು: 5,147 ಕ್ಯೂಸೆಕ್
    ಹೊರಹರಿವು: 6,034 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

    ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

    ಮಂಡ್ಯ: ತಮಿಳುನಾಡಿಗೆ (Tamil Nadu) ನೀರು ಹರಿಸಬೇಕೆಂಬ ಸುಪ್ರೀಂ ಕೋರ್ಟ್ (Supreme Court) ಆದೇಶದ ಬೆನ್ನಲ್ಲೇ ಮಂಡ್ಯ (Mandya) ಜಿಲ್ಲೆಯಲ್ಲಿ ಅನ್ನದಾತರ ಆಕ್ರೋಶ ಭುಗಿಲೆದ್ದಿದೆ. ಈ ನಡುವೆಯೂ ತಮಿಳುನಾಡಿಗೆ ಕಾವೇರಿ ಹರಿದಿದ್ದು, ಶುಕ್ರವಾರವೂ 5 ಸಾವಿರ ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ.

    ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ (KRS Reservoir) 3 ಸಾವಿರ ಕ್ಯೂಸೆಕ್ ನೀರುಬಿಡುಗಡೆ ಮಾಡಲಾಗಿದೆ. ಸೀಪೇಜ್ ಹಾಗೂ ನಾಲೆಗೆ ಹರಿಸಿರುವ ನೀರಿಲ್ಲೇ 3 ಸಾವಿರ ತಮಿಳುನಾಡಿಗೆ ಹರಿಸಲಾಗಿದ್ದು, ಉಳಿದ 2 ಸಾವಿರ ಕ್ಯೂಸೆಕ್ ನೀರನ್ನ ನೀರು ಕಬಿನಿಯಿಂದ (Kabini Reservoir) ಹರಿಸಲಾಗಿದೆ. ಒಟ್ಟಾರೆಯಾಗಿ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಮತ್ತು ನಾಲೆಗಳಿಗೆ ಸೇರಿ 5,734 ಕ್ಯೂಸೆಕ್ ನೀರು ಬಿಡಲಾಗಿದೆ.

    ಕೆಆರ್‌ಎಸ್ ಜಲಾಶಯದ ಒಳ ಹರಿವು 5,845 ಕ್ಯೂಸೆಕ್ ಇದ್ದು, ಡ್ಯಾಂನ ಇಂದಿನ ನೀರಿನ ಮಟ್ಟ 97.02 ಅಡಿಗೆ ಕುಸಿದಿದೆ. ಡ್ಯಾಂನ ಇಂದಿನ ಸಾಂದ್ರತೆ 20.563 ಟಿಎಂಸಿ ಇದೆ. ಇದನ್ನೂ ಓದಿ: ಕಾವೇರಿ ಹೋರಾಟಕ್ಕೆ ನೇರವಾಗಿ ಇಳಿದ ನಟ ಅಭಿಷೇಕ್ ಅಂಬರೀಶ್

    ಇನ್ನೂ ಮಂಡ್ಯದಲ್ಲಿ ಅನ್ನದಾತರ ಆಕ್ರೋಶ ಭುಗಿಲೆದ್ದಿದ್ದು, ಶುಕ್ರವಾರವೂ (ಇಂದು) ಜಿಲ್ಲೆಯ ಹಲವೆಡೆ ಸುಪ್ರೀಂ ತೀರ್ಪಿನ ವಿರುದ್ಧ ಪ್ರತಿಭಟನೆ ಕೈಗೊಳ್ಳಲಾಗಿದೆ. ರೈತರ ಹೋರಾಟಕ್ಕೆ ಇಂದು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದು, ಹೋರಾಟದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಶಿವಶಕ್ತಿ ಬಿಂದುವಿನಲ್ಲಿ ಲ್ಯಾಂಡರ್, ರೋವರ್ – ವಿಕ್ರಮ್, ಪ್ರಗ್ಯಾನ್‌ಗೆ ಸಿಗುತ್ತಾ ಮರುಜೀವ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಸಿಕೆಗೆ ಬಡವರು ಎಲ್ಲಿಂದ ಹಣ ತರಬೇಕು- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

    ಲಸಿಕೆಗೆ ಬಡವರು ಎಲ್ಲಿಂದ ಹಣ ತರಬೇಕು- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

    ನವದೆಹಲಿ: ಕೇಂದ್ರ ಸರ್ಕಾರದ ಲಸಿಕೆ ನೀತಿಯನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದ್ದು, ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಕೊರೊನಾ ಲಸಿಕೆಗೆ ಹಣ ನೀಡಲು ಬಡವರಲ್ಲಿ ಶಕ್ತಿ ಇಲ್ಲ ಎಂದು ಹೇಳಿದೆ.

    ಶುಕ್ರವಾರ ದೇಶದಲ್ಲಿನ ಕೊರೊನಾ ಸ್ಥಿತಿಗತಿ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಕೊರೊನಾ ಲಸಿಕೆಯ ದರ ಸಮಸ್ಯೆ ತುಂಬಾ ಗಂಭೀರವಾಗಿದೆ ಎಂದಿದ್ದಾರೆ. ಶೇ.50ರಷ್ಟು ವ್ಯಾಕ್ಸಿನ್‍ನನ್ನು ಕೇಂದ್ರ ಸರ್ಕಾರ ಖರೀದಿಸಿ ಫ್ರಂಟ್‍ಲೈನ್ ವರ್ಕರ್ಸ್ ಗೆ ಹಾಗೂ 45 ವರ್ಷ ಮೇಲ್ಪಟ್ಟವರಿಗೆ ನೀಡಿಲಾಗುತ್ತಿದೆ. ಉಳಿದ ಶೇ.50ರಷ್ಟು ಲಸಿಕೆಯನ್ನು ರಾಜ್ಯ ಸರ್ಕಾರಗಳು ಖರೀದಿಸುತ್ತಿವೆ. ಆದರೆ ಸುಮಾರು 59.46 ಕೋಟಿ ಭಾರತೀಯರು 45 ವರ್ಷದ ಒಳಗಿನವರಿದ್ದಾರೆ, ಇದರಲ್ಲಿ ಬಹುತೇಕರು ಬಡವರಾಗಿದ್ದಾರೆ. ಲಸಿಕೆ ಖರೀದಿಸಲು ಅವರು ಎಲ್ಲಿಂದ ಹಣ ತರಬೇಕು ಎಂದು ಪ್ರಶ್ನಿಸಿದ್ದಾರೆ.

    ಖಾಸಗೀಕರಣದ ಮಾದರಿಯನ್ನು ನಾವು ಅನುಸರಿಸುವುದಿಲ್ಲ. ಪರಿಸ್ಥಿತಿ ತುಂಬಾ ಗಂಭೀರವಾಗಿದೆ, ನಾವು 18-44 ವರ್ಷದವರಿಗೆ ಲಸಿಕೆಯನ್ನು ಆದಷ್ಟು ಬೇಗ ನೀಡಬೇಕಿದೆ ಎಂದು ಹೇಳಿದ್ದಾರೆ.

    ಎಷ್ಟು ಪ್ರಮಾಣದಲ್ಲಿ ಲಸಿಕೆಯನ್ನು ಉತ್ಪಾದಿಸಲಾಗುತ್ತಿದೆ ಎಂಬುದು ಕೇಂದ್ರ ಸರ್ಕಾರಕ್ಕೆ ತಿಳಿದಿದೆ, ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಬೇಕಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹೆಚ್ಚುವರಿ ಉತ್ಪಾದನಾ ಕೇಂದ್ರಗಳಿಗೆ ಶಕ್ತಿ ತುಂಬಬೇಕಿದೆ. ರಾಜ್ಯಗಳು ಹಾಗೂ ಕೇಂದ್ರ ಸರ್ಕಾರದ ಬಗ್ಗೆ ವಿಮರ್ಶಿಸುವುದು ಇದರ ಉದ್ದೇಶವಲ್ಲ. 70-100 ವರ್ಷಗಳಿಂದ ಆರೋಗ್ಯ ಮೂಲಸೌಕರ್ಯವನ್ನು ಪಡೆದಿದ್ದೇವೆ. ನಮ್ಮ ರಾಷ್ಟ್ರದ ಆರೋಗ್ಯ ಮೂಲಸೌಕರ್ಯಗಳ ಬಗ್ಗೆ ನಮಗೆ ಕಾಳಜಿ ಇದೆ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ತಿಳಿಸಿದರು.

    ವ್ಯಾಕ್ಸಿನ್‍ನ ಖಾಸಗಿ ಉತ್ಪಾದಕರು ಸಹ ಯಾವ ರಾಜ್ಯಕ್ಕೆ ಎಷ್ಟು ನೀಡಬೇಕೆಂದು ನಿರ್ಧರಿಸುವಂತಿಲ್ಲ ಎಂದು ತಿಳಿಸಿದೆ. ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 10ಕ್ಕೆ ಮುಂದೂಡಿದೆ. ಕೊರೊನಾ ವ್ಯಾಕ್ಸಿನ್, ಆಕ್ಸಿಜನ್ ಟ್ರಾನ್ಸ್‍ಪೋರ್ಟ್, ವ್ಯಾಕ್ಸಿನ್ ದರ ಹಾಗೂ ಔಷಧಿ ಮತ್ತು ಲಸಿಕೆಗೆ ಕಡ್ಡಾಯವಾಗಿ ಲೈಸೆನ್ಸ್ ನೀಡುವುದು ಸೇರಿದಂತೆ ವಿವಿಧ ವಿಚಾರಗಳ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೆ ಈ ಬಗ್ಗೆ ವಿವರವಾದ ಆದೇಶ ಹೊರಡಿಸುವಂತೆ ಸೂಚಿಸಿದೆ.

  • ಹಿಂದೂ-ಮುಸ್ಲಿಮರು ಅಣ್ಣ ತಮ್ಮಂದಿರಂತೆ, 5 ಶತಮಾನದ ಹೋರಾಟ ಅಂತ್ಯ – ಕರಂದ್ಲಾಜೆ

    ಹಿಂದೂ-ಮುಸ್ಲಿಮರು ಅಣ್ಣ ತಮ್ಮಂದಿರಂತೆ, 5 ಶತಮಾನದ ಹೋರಾಟ ಅಂತ್ಯ – ಕರಂದ್ಲಾಜೆ

    ಬೆಂಗಳೂರು: ಐದು ಶತಮಾನದ ಹೋರಾಟ ಇಂದು ಅಂತ್ಯವಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.

    ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಶ್ರೀರಾಮ ಹುಟ್ಟಿದ ಜಾಗದಲ್ಲಿ ಮಂದಿರ ಆಗಬೇಕು ಎನ್ನವ ಹೋರಾಟ ಇತ್ತು. ಐದು ಶತಮಾನದ ಹೋರಾಟ ಇದು. ಶ್ರೀರಾಮ ಹುಟ್ಟಿದ ಜಾಗದಲ್ಲಿ ಮಂದಿರ ಆಗಬೇಕು ಎಂಬ ಹೋರಾಟ ಇತ್ತು. ಜನ ಚಾತಕ ಪಕ್ಷಿಯಂತೆ ಈ ದಿನಕ್ಕಾಗಿ ಕಾಯುತ್ತಿದ್ದರು. ಇದೊಂದು ಐತಿಹಾಸಿಕ ತೀರ್ಪು. ಹಿಂದೂಗಳಿಗೆ ಜಾಗ ಬಿಟ್ಟುಕೊಡುವ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ ಎಂದರು.

    ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ. ರಾಜ್ಯದ ಜನ ಶಾಂತಿಯಿಂದ ವರ್ತನೆ ಮಾಡಬೇಕು. ಎರಡು ಕೋಮಿನ ಜನ ಒಟ್ಟಾಗಿ ಬದುಕಬೇಕು. ಮಸೀದಿಗೂ ಜಾಗ ನೀಡಿ ಎಂದು ಕೋರ್ಟ್ ಹೇಳಿದೆ. ಹೀಗಾಗಿ ಒಟ್ಟಾಗಿ ನಾವು ಶಾಂತಿ ಸೌಹಾರ್ದತೆಯಿಂದ ನಡೆದುಕೊಳ್ಳಬೇಕು ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

    ಲಕ್ಷಾಂತರ ಜನ ರಾಮನ ಮಂದಿರ ಹೋರಾಟಕ್ಕಾಗಿ ಪ್ರಾಣ ತೆತ್ತಿದ್ದರು. ರಾಮ ಮಂದಿರಕ್ಕೆ ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ದೇಶದಲ್ಲಿ ನ್ಯಾಯ ಇದೆ ಎನ್ನುವುದು ತೀರ್ಪಿನಿಂದ ಸಾಬೀತಾಗಿದೆ. ಜಾಗ ಹಿಂದೂಗಳಿಗೆ ಬಿಟ್ಟು ಕೊಡುವ ಐತಿಹಾಸಿಕ ತೀರ್ಪು ಕೋರ್ಟ್ ನೀಡಿದೆ. ಹಿಂದೂ-ಮುಸ್ಲಿಮರು ಅಣ್ಣ ತಮ್ಮಂದಿರು ಇದ್ದ ಹಾಗೆ. ಹಿಂದೂ-ಮುಸ್ಲಿಮರು ಒಟ್ಟಾಗಿ ಪ್ರೀತಿ ವಿಶ್ವಾಸದಿಂದ ಬದುಕೋಣ ಎಂದು ಕರೆ ನೀಡಿದರು.

    ಮೂರು ತಿಂಗಳಲ್ಲಿ ಮಸೀದಿಗೆ ಜಾಗ ಕೊಡಬೇಕು ಎಂದು ಕೋರ್ಟ್ ಹೇಳಿದೆ. ಇದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ದೇಶದ, ರಾಜ್ಯದ ಜನ ಶಾಂತಿ, ಸೌಹಾರ್ದಯುತವಾಗಿ ಇರಬೇಕು ಎಂದರು.

  • ವಕೀಲ ರೋಹಟಗಿಗೆ ಸಿಜೆಐ ಗೊಗೋಯ್ ಚಾಟಿ

    ವಕೀಲ ರೋಹಟಗಿಗೆ ಸಿಜೆಐ ಗೊಗೋಯ್ ಚಾಟಿ

    ನವದೆಹಲಿ: ಸುಪ್ರೀಂ ಕೋರ್ಟ್ ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯಲು ಸಮ್ಮತಿ ಸೂಚಿಸಿದೆ. ಆದರೆ ಇದೇ ಸಂದರ್ಭದಲ್ಲಿ ಶಾಸಕರ ಪರ ವಕೀಲರಾದ ಮುಕುಲ್ ರೋಹಟಗಿ ಅವರಿಗೆ ಚಾಟಿ ಬೀಸಿದೆ.

    ವಕೀಲ ಮುಕುಲ್ ರೋಹಟಗಿ ಕಲಾಪಕ್ಕೆ ಗೈರಾಗಿದ್ದರು. ಅವರ ಪರವಾಗಿ ನಿನ್ನೆ ಹಾಗೂ ಇಂದು ಜ್ಯೂನಿಯರ್ ವಕೀಲರು ವಿಚಾರಣೆಗೆ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳು ಗರಂ ಆಗಿದ್ದು, ನಿಮಗೆ ಬೇಕಾದಾಗ ಮಧ್ಯರಾತ್ರಿ ವಿಚಾರಣೆ ನಡೆಸಬೇಕು, ಅಗತ್ಯ ಇದ್ದರೆ ಮಧ್ಯರಾತ್ರಿ ಆದೇಶ ನೀಡಬೇಕು. ಆದರೆ ನಾವು ಕರೆದಾಗ ನೀವು ವಿಚಾರಣೆಗೆ ಬರುವುದಿಲ್ಲ ಯಾಕೆ ಎಂದು ಪ್ರಶ್ನಿಸಿ ಮುಖ್ಯ ನ್ಯಾ. ರಂಜನ್ ಗೊಗೋಯ್ ಅವರು ಚಾಟಿ ಬೀಸಿದ್ದಾರೆ.

    ಬುಧವಾರ ವಿಚಾರಣೆ ಸಂದರ್ಭದಲ್ಲಿ ವಕೀಲರ ಗೈರಿನ ಬಗ್ಗೆ ಪ್ರಶ್ನೆ ಮಾಡಿದ್ದರೂ ಕೂಡ ಇಂದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಮೂರ್ತಿಗಳು ಗರಂ ಆಗಿದ್ದಾರೆ.

    ಪಕ್ಷೇತರ ಶಾಸಕರಾದ ನಾಗೇಶ್ ಮತ್ತು ಶಂಕರ್ ಅವರು ವಿಶ್ವಾತ ಮತಯಾಚನೆ ಮಾಡಲು ಆದೇಶ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನಿನ್ನೆಯೂ ಕೂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ರಂಜನ್ ಗೊಗೋಯ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತ್ತು. ಈ ವೇಳೆ ಸಿಜೆಐ ಶಾಸಕರ ಪರ ವಕೀಲರು ಎಲ್ಲಿ ಪ್ರಶ್ನೆ ಮಾಡಿ ಅರ್ಜಿಯ ವಿಚಾರಣೆಯನ್ನು ಮುಂದೂಡಿತ್ತು.

    ಈ ವೇಳೆ ಪಕ್ಷೇತರ ಶಾಸಕರ ಪರವಾಗಿ ಹಾಜರಾಗಿದ್ದ ಜ್ಯೂನಿಯರ್ ಲಾಯರ್ ದೀಕ್ಷಾ ರೈ ವಿಶ್ವಾಸ ಮತಯಾಚನೆ ಸಾಬೀತಾದ ಹಿನ್ನೆಲೆಯಲ್ಲಿ ಅರ್ಜಿಯನ್ನು ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ಅಂತಿಮ ತೀರ್ಪು ನೀಡುವ ಮುನ್ನ ವಕೀಲರು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿದ್ದರು.

    ಇಂದು ಮತ್ತೆ ಅರ್ಜಿಯ ವಿಚಾರಣೆಗೆ ತೆಗೆದುಕೊಂಡ ಪೀಠ ವಕೀಲರು ಹಾಜರಾಗದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ರೊಹಟಗಿ ವಿಚಾರಣೆ ಆಗಮಿಸಿಬೇಕಿದ್ದು ಅವರಿಗೆ ನಾವು ಕೆಲವು ಪ್ರಶ್ನೆಗಳನ್ನು ಕೇಳಬೇಕಿದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

    ಹಿರಿಯ ವಕೀಲರಾದ ರೋಹಟಗಿ ಅವರು ಇಬ್ಬರು ಪಕ್ಷೇತರ ಶಾಸಕರ ಪರ ವಾದ ಮಂಡಿಸಿದ್ದರೆ, ಸಿಂಘ್ವಿ ಅವರು ಸ್ಪೀಕರ್ ಪರ ವಾದ ಮಂಡಿಸಿದ್ದರು. ಮಂಗಳವಾರ ವಿಶ್ವಾಸ ಮತಯಾಚನೆ ನಡೆದಿದ್ದರಿಂದ ಪಕ್ಷೇತರ ಶಾಸಕರು ತಮ್ಮ ಅರ್ಜಿಯನ್ನು ವಾಪಸ್ ಪಡೆಯಲು ಇಚ್ಛೆ ಪಟ್ಟಿದ್ದರು.

  • ರಾಮಮಂದಿರ ಅಯೋಧ್ಯೆಯಲ್ಲಿ ಇದ್ದದ್ದು ದೇವರಿದ್ದಷ್ಟೇ ನಿಶ್ಚಿತ: ಪೇಜಾವರ ಶ್ರೀ

    ರಾಮಮಂದಿರ ಅಯೋಧ್ಯೆಯಲ್ಲಿ ಇದ್ದದ್ದು ದೇವರಿದ್ದಷ್ಟೇ ನಿಶ್ಚಿತ: ಪೇಜಾವರ ಶ್ರೀ

    ಉಡುಪಿ: ರಾಮಮಂದಿರ ವಿಚಾರದಲ್ಲಿ ಸಂಧಾನಕ್ಕೆ ಸೂಚಿಸಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಪೇಜಾವರ ಸ್ವಾಮೀಜಿ ಸ್ವಾಗತಿಸಿದ್ದಾರೆ. ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಧಾನ ವಿಚಾರದಲ್ಲಿ ನನಗೆ ನನಗೆ ಎರಡು ಅಭಿಪ್ರಾಯಗಳಿದ್ದು, ದೇವರು ಇದ್ದಾನೋ ಇಲ್ಲವೋ ಎಂಬ ಬಗ್ಗೆ ಸಂಧಾನ ಬೇಕಾಗಿಲ್ಲ ಎಂಬುವುದು ನನ್ನ ಅಭಿಪ್ರಾಯ. ರಾಮಮಂದಿರ ಅಯೋಧ್ಯೆಯಲ್ಲಿ ಇದ್ದದ್ದು ದೇವರಿದ್ದಷ್ಟೇ ನಿಶ್ಚಿತ. ಈ ನಿಶ್ಚಿತವಾಗಿರುವುದರ ಬಗ್ಗೆ ಮತ್ತೆ ಸಂಧಾನ ಏತಕ್ಕೆ? ಆದರೂ ಸುಪ್ರೀಂ ಕೋರ್ಟ್ ಸಂಧಾನಕ್ಕೆ ಸೂಚಿಸಿದೆ. ಸಂಧಾನ ಸಂಘರ್ಷವಿಲ್ಲದೆ ಯಶಸ್ವಿಯಾಗಲಿ. ಮುಸಲ್ಮಾನರು ಮತ್ತು ಹಿಂದುಗಳಿಗೆ ಅಸಮಾಧಾನ ಆಗದಂತೆ ಸಂಧಾನವಾಗಲಿ ಎಂದರು.

    ಒಂದೊಮ್ಮೆ ಸಂಧಾನದಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಕೋರ್ಟ್ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು. ಸಂಧಾನ ಎರಡೂ ಸಮುದಾಯಕ್ಕೆ ಸಮ್ಮತವಾಗಿರಬೇಕು. ಆದರೆ ಇಬ್ಬರಿಗೂ ಸಮ್ಮತವಾಗುವ ಸಂಧಾನ ಆಗುವ ಬಗ್ಗೆ ನನಗೆ ಸಂಶಯವಿದೆ. ಸಂಧಾನ ಆಗದಿದ್ದರೆ ನ್ಯಾಯದ ರೀತಿಯಲ್ಲಿ ಮಂದಿರ ನಿರ್ಮಾಣ ಆಗಲಿ ಎಂದರು.

    ಸಂಧಾನ ಸಮಿತಿಯಲ್ಲಿರುವ ರವಿಶಂಕರ್ ಗುರೂಜಿ ಪ್ರಯತ್ನಕ್ಕೆ ಸಂಪೂರ್ಣ ಬೆಂಬಲವಿದೆ. ರವಿಶಂಕರ್ ಗುರೂಜಿಗೆ ಈಗ ಹೆಚ್ಚು ಬೆಲೆ ಬಂದಿದೆ. ರಾಮಮಂದಿರ ನಿರ್ಮಾಣ ವಿಳಂಬವಾಗಬಾರದು. ಈ ಹಿಂದೆ ವೈಯಕ್ತಿಕವಾಗಿ ರವಿಶಂಕರ್ ಗುರೂಜಿ ಅವರು ಪ್ರಯತ್ನ ನಡೆಸಿದ್ದರು. ಆದರೆ ಇದು ಅಧಿಕೃತವಾಗಿದೆ. ನ್ಯಾಯಾಲಯದ ಮೂಲಕ ಬಂದಿರುವುದರಿಂದ ಅವರಿಗೆ ಹೆಚ್ಚು ಬಲ ಬಂದಿದೆ. ಆದರೆ ಇದು ವಿಳಂಬ ಮಾಡುವುದು ಬೇಡ ಎಂದು ಕಿವಿ ಮಾತು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv