Tag: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ

  • ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧವೇ ಲೈಂಗಿಕ ಕಿರುಕುಳದ ಆರೋಪ!

    ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧವೇ ಲೈಂಗಿಕ ಕಿರುಕುಳದ ಆರೋಪ!

    ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗೊಯ್ ವಿರುದ್ಧ ಸುಪ್ರೀಂ ಕೋರ್ಟಿನ ಮಾಜಿ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿ, 22 ನ್ಯಾಯಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ.

    ಅಕ್ಟೋಬರ್ 11, 2018 ರಂದು ರಂಜನ್ ಗೊಗೊಯ್ ಅವರು ನನ್ನನ್ನು ಬಲವಂತವಾಗಿ ಅಪ್ಪಿಕೊಂಡು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ಬರೆದ ಪತ್ರವನ್ನು ಸ್ಕ್ರೋಲ್, ದಿ ವೈರ್, ಕ್ಯಾರವನ್ ವೆಬ್‍ಸೈಟ್‍ಗಳು ಪ್ರಕಟಿಸಿವೆ.

    ಈ ಅಫಿಡವಿಟ್ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿರುವ ತುರ್ತು ವಿಚಾರಣೆ ವೇಳೆ, ತನ್ನ ವಿರುದ್ಧ ಸಂಪೂರ್ಣ ಸುಳ್ಳು ಆರೋಪ ಮಾಡಲಾಗಿದೆ. ಇದು ಸುಳ್ಳು ಹಾಗೂ ಅಶ್ಲೀಲವಾಗಿದೆ. ನನ್ನ ಬ್ಯಾಂಕ್ ಖಾತೆಯಲ್ಲಿ 6.8 ಲಕ್ಷ ರೂ. ಇದ್ದು, 20 ವರ್ಷಗಳ ಕಾಲ ಸೇವೆ ಸಲ್ಲಿಸಿದ ನನಗೆ ಸಿಕ್ಕಿದ ಪ್ರಶಸ್ತಿ ಇದು ಎಂದು ಹೇಳಿ ತನ್ನ ವಿರುದ್ಧ ಕೇಳಿ ಬಂದ ಆರೋಪವನ್ನು ರಂಜನ್ ಗೊಗೋಯ್ ಅವರು ತಳ್ಳಿ ಹಾಕಿದ್ದಾರೆ.

    ಮಹಿಳೆ ಮಾತ್ರ ಮುಖ್ಯ ನ್ಯಾಯಧೀಶರು ತಮಗೆ ಕಿರುಕುಳ ನೀಡಿದ್ದು ಸತ್ಯ. ಅಷ್ಟೇ ಅಲ್ಲದೆ ನನ್ನನ್ನು ಕೆಲಸದಿಂದ ವಜಾಗೊಳಿಸಿದ ಬಳಿಕವೂ ಮುಖ್ಯ ನ್ಯಾಯಧೀಶರು ನನಗೆ ಕಿರುಕುಳ ನೀಡಿದ್ದಾರೆ. ನನ್ನ ಕುಟುಂಬವನ್ನು ಟಾರ್ಗೆಟ್ ಮಾಡಿ, ತಮ್ಮ ಅಧಿಕಾರ ಬಳಸಿಕೊಂಡು ನನ್ನ ಪತಿ ಹಾಗೂ ಪತಿಯ ಸಹೋದರರನ್ನು ದೆಹಲಿ ಪೊಲೀಸ್ ಕೆಲಸದಿಂದ ವಜಾಗೊಳಿಸಿದ್ದಾರೆ. ಅಲ್ಲದೆ ಸುಪ್ರೀಂ ಕೋರ್ಟ್ ನಲ್ಲಿ ಜೂನಿಯರ್ ಕೋರ್ಟ್ ಅಟೆಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನನ್ನ ಸಹೋದರನನ್ನು ಕೂಡ ಕೆಲಸದಿಂದ ಕಿತ್ತು ಹಾಕಿದ್ದಾರೆ ಎಂದು ದೌರ್ಜನ್ಯಕ್ಕೊಳಗಾದ ಮಹಿಳೆ ಅಫಿಡವಿಟ್‍ನಲ್ಲಿ ಉಲ್ಲೆಖಿಸಿದ್ದಾರೆ.

  • ಬೆಳಗಾವಿಯನ್ನು ಹಾಡಿ ಹೊಗಳಿದ ರಾಷ್ಟ್ರಪತಿ ಕೋವಿಂದ್

    ಬೆಳಗಾವಿಯನ್ನು ಹಾಡಿ ಹೊಗಳಿದ ರಾಷ್ಟ್ರಪತಿ ಕೋವಿಂದ್

    ಬೆಳಗಾವಿ: 1892ರಲ್ಲಿ ಸ್ವಾಮಿ ವಿವೇಕಾನಂದರು ಬೆಳಗಾವಿಗೆ ಭೇಟಿ ನೀಡಿದ್ದರು. ಅವರ ಪ್ರಭಾವ ಈ ನೆಲದಲ್ಲಿ ಇಂದಿಗೂ ಇದೆ. ಲೋಕಮಾನ್ಯ ಬಾಲಗಂಗಾಧರ್ ತಿಲಕ್ ಪ್ರಾರಂಭಿಸಿದ್ದ ಗಣೇಶ ಹಬ್ಬದ ಸಂಸ್ಕೃತಿ ಹಾಗೂ ಪಾವಿತ್ರತೆಯನ್ನ ಜಿಲ್ಲೆಯ ಜನತೆ ಕಾಪಾಡಿಕೊಂಡು ಬಂದಿದ್ದಾರೆ ಎಂದು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಹೇಳಿದ್ದಾರೆ.

    ನಗರದಲ್ಲಿ ನಡೆದ ಕರ್ನಾಟಕ ಲಾ ಸೂಸೈಟಿಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಗಾವಿಗೆ ಇದು ನನ್ನ ಮೊದಲ ಭೇಟಿ. ಜಿಲ್ಲೆಯು ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ಸಾಕಷ್ಟು ಹೆಸರು ಮಾಡಿದ್ದು, ದೇಶದಲ್ಲಿ ತನ್ನದೇ ಛಾಪು ಮೂಡಿಸಿದೆ. ಬೆಳಗಾವಿಯು ಲೋಹ ಹಾಗೂ ಲಸಿಕೆ ತಯಾರಿಕೆಯಲ್ಲಿ ಇತಿಹಾಸ ಬರೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ವಕೀಲಿಕೆ ಕೇವಲ ವೃತ್ತಿಯಾಗದೇ ಪ್ಯಾಷನ್ ಆಗಬೇಕು. ಈ ನಿಟ್ಟಿನಲ್ಲಿ ರಾಜಾ ಲಖಮಗೌಡ ಕಾಲೇಜ್ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ರಾಜಾ ಲಖಮಗೌಡ ಅವರ ತ್ಯಾಗವು ಇಂದು ದೊಡ್ಡ ಕಾನೂನು ಸೊಸೈಟಿಯಾಗಿ ಬೆಳೆಯುವಂತೆ ಮಾಡಿತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮಹಾತ್ಮಾ ಗಾಂಧಿ, ಡಾ. ಬಿ.ಆರ್.ಅಂಬೇಡ್ಕರ್ ವಕೀಲರಾಗಿ ಸೇವೆ ಸಲ್ಲಿಸಿದ್ದರು ಎಂದರು.

    ದೇಶದಲ್ಲಿ ಯುವ ಕ್ರಾಂತಿ ಆಗುತ್ತಿದ್ದು, ಅದರ ಲಾಭ ದೇಶಕ್ಕೆ ಸದ್ಯಕ್ಕೆ ಆಗದಿದ್ದರೂ ಮುಂದಿನ ದಿನದಲ್ಲಿ ಫಲ ಸಿಗಲಿದೆ. ದೇಶದ ಜನತೆ ಸರಿಯಾದ ದಾರಿಯಲ್ಲಿ ನಡೆಯಬೇಕಾದರೆ ನ್ಯಾಯಮೂರ್ತಿಗಳ ಪಾತ್ರ ಮಹತ್ವದ್ದಾಗಿದೆ. ಕೆಲವೇ ದಿನಗಳಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ನಿವೃತ್ತಿ ಹೊಂದಲಿದ್ದಾರೆ ಎಂದ ಅವರು, ದೀಪಕ್ ಮಿಶ್ರಾ ಅವರಿಗೆ ಅಭಿನಂದನೆ ಸಲ್ಲಿಸಿದರು.

    ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ನನಗೂ ಮತ್ತು ಬೆಳಗಾವಿಗೂ ಅವಿನಾಭಾವ ಸಂಬಂಧವಿದೆ. ಜಿಲ್ಲೆಗೆ ಸುವರ್ಣ ಸೌಧ ಕೊಟ್ಟಿರುವುದು ನಮ್ಮ ಸರ್ಕಾರ. ಅಷ್ಟೇ ಅಲ್ಲದೇ ಬೆಳಗಾವಿ ಜಿಲ್ಲೆಯ ಗ್ರಾಮದಿಂದ ನಾನು ಗ್ರಾಮ ವಾಸ್ತವ್ಯವನ್ನು ಆರಂಭ ಮಾಡಿದ್ದೆ ಎಂದು ತಿಳಿಸಿದರು. ಬೆಳಗಾವಿಯು ದೇಶ ಮತ್ತು ರಾಜ್ಯಕ್ಕೆ ಮಹಾನ್ ವ್ಯಕ್ತಿಗಳನ್ನು ಕೊಡುಗೆ ನೀಡಿದೆ. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಈ ನಾಡಿನ ಮಹಾನ್ ವ್ಯಕ್ತಿಗಳು ಎಂದರು.

    ಹಳೇ ತಲೆಮಾರಿನವರು ಯುವಕರನ್ನು ಕಡೆಗಣನೆ ಮಾಡಬಾರದು. ಪ್ರತಿದಿನ 10 ಯುವಕರ ಜತೆ ಮಾತನಾಡಿದರೆ ಬೌದ್ಧಿಕ ಹಾಗೂ ಶಾರೀರಿಕವಾಗಿ ಬಲಗೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv