Tag: ಸುಬುಧೇಂದ್ರ ತೀರ್ಥ ಸ್ವಾಮೀಜಿ

  • KRS ಡ್ಯಾಂ ಮೈಸೂರು ರಾಜಮನೆತನದ ತ್ಯಾಗದಿಂದ ನಿರ್ಮಾಣವಾಗಿದೆ – ಮಂತ್ರಾಲಯ ಶ್ರೀ

    KRS ಡ್ಯಾಂ ಮೈಸೂರು ರಾಜಮನೆತನದ ತ್ಯಾಗದಿಂದ ನಿರ್ಮಾಣವಾಗಿದೆ – ಮಂತ್ರಾಲಯ ಶ್ರೀ

    ರಾಯಚೂರು: ಕಾವೇರಿ ಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಮಾಡಬೇಕು ಎನ್ನುವ ಉದ್ದೇಶದಿಂದ ಮೈಸೂರು (Mysuru) ಸಂಸ್ಥಾನದ ಆಗಿನ ರಾಜಮಾತೆ ತಮ್ಮ ಆಭರಣಗಳನ್ನ ಮಾರಾಟ ಮಾಡಿ ಕೆಆರ್‌ಎಸ್ ಜಲಾಶಯವನ್ನು (KRS Dam) ಕಟ್ಟಿಸಿದ್ದಾರೆ ಎಂದು ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ (Shri Subhudendra Theertha) ತಿಳಿಸಿದ್ದಾರೆ.

    ಮಂತ್ರಾಲಯದಲ್ಲಿ ಮಾತನಾಡಿದ ಶ್ರೀಗಳು ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ಎನ್ನುವ ಸಚಿವ ಮಹಾದೇವಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ರಾಜಮನೆತನದ ತ್ಯಾಗದ ಫಲವಾಗಿ ಕೆಆರ್‌ಎಸ್ ಡ್ಯಾಂ ನಿರ್ಮಾಣವಾಗಿದೆ. ಇನ್ನೂ ಬೇರೆ ಬೇರೆ ವಿಚಾರ ಬಂದರೆ, ಬೇರೆಯವರ ಹೆಸರುಗಳು ಬಂದರೆ ಅದರ ಬಗ್ಗೆ ಇತಿಹಾಸ ತಜ್ಞರೇ ಹೇಳಬೇಕು ಹೊರತು ನಾವು ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.ಇದನ್ನೂ ಓದಿ: ಬಿಬಿಎಂಪಿ ಚುನಾವಣೆ; ನವೆಂಬರ್ 3ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

    ಇದೇ ವೇಳೆ ಧರ್ಮಸ್ಥಳದ ಪ್ರಸ್ತುತ ವಿಚಾರಗಳ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಧಾರ್ಮಿಕ ಸ್ಥಳ, ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಾದರೆ ಕ್ಷೇತ್ರದ ಪಾವಿತ್ರ್ಯತೆ ಹಾಗೂ ಕ್ಷೇತ್ರದ ಮಹತ್ವಕ್ಕೆ ಜೋಡಣೆ ಮಾಡಬಾರದು. ಅಲ್ಲಿನ ವ್ಯವಸ್ಥೆ, ಕಾನೂನು ವ್ಯವಸ್ಥೆ ಬಗ್ಗೆ ಮಾತನಾಡಬೇಕು. ಕ್ಷೇತ್ರ ಅತ್ಯಂತ ಪವಿತ್ರವಾದದ್ದು, ನಮ್ಮೆಲ್ಲರಿಗೂ ಅತ್ಯಂತ ಭಕ್ತಿ, ಶ್ರದ್ಧೆಯ ಕೇಂದ್ರವಾಗಿದೆ. ಅಲ್ಲಿ ಯಾವುದೇ ಪ್ರಕರಣ,ವಿಚಾರಗಳು ಇದ್ದರೂ ಕೂಡ ಕಾನೂನು ವಿಚಾರಣೆ ನಡೆಸುತ್ತದೆ ಎಂದು ಹೇಳಿದ್ದಾರೆ.

    ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮಂತ್ರಾಲಯ ಭಕ್ತರಿಗೆ ತೊಂದರೆ ವಿಚಾರ ಕುರಿತು ಮಾತನಾಡಿ, ಸಾರಿಗೆ ಇಲಾಖೆಯವರು ತಮ್ಮ ಬೇಡಿಕೆ ಈಡೇರಿಕೆಗಾಗಿ ಹಲವಾರು ಬಾರಿ ಅಹವಾಲು ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಅವರ ಅಹವಾಲನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರಿಗೆ ನೌಕರರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸುತ್ತದೆ ಎನ್ನುವ ಅನ್ನೋ ಧೃಡ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa) ಅವರು ಕನ್ನಂಬಾಡಿ ಕಟ್ಟೋದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದರು. ಆದರೆ, ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. ಕೆಆರ್‌ಎಸ್ ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು. ಚರಿತ್ರೆ ಗೊತ್ತಿಲ್ಲದವರು ಚರಿತ್ರೆ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಟಿಪ್ಪು ಮಸೀದಿ ಇದೆ, ಪಕ್ಕದಲ್ಲಿ ದೇವಸ್ಥಾನ ಇದೆ. ಈ ಕಡೆ ಅಲ್ಲಾವೋ ಅಕ್ಬರ್ ಅಂತಾರೆ, ಆ ಕಡೆ ಗಂಟೆ ಟಣ್, ಟಣ್ ಅನ್ನುತ್ತೆ. ಎರಡನ್ನು ಕೇಳ್ತಿದ್ರು ಅವರು. ಸಮಚಿತ್ತರಾಗಿದ್ದವರು ಟಿಪ್ಪು ಎಂದು ಬಣ್ಣಿಸಿದ್ದರು.ಇದನ್ನೂ ಓದಿ: ಆ.5ರಂದು ಸಾರಿಗೆ ನೌಕರರ ಮುಷ್ಕರ; 40% ಖಾಸಗಿ ಬಸ್ ರಸ್ತೆಗಿಳಿಸಲು ಸರ್ಕಾರ ನಿರ್ಧಾರ

  • ರಾಜಕೀಯಕ್ಕೆ ಯಾರು ಬೇಕಾದರೂ ಬರಬಹುದು: ಮಂತ್ರಾಲಯ ಶ್ರೀಗಳು

    ರಾಜಕೀಯಕ್ಕೆ ಯಾರು ಬೇಕಾದರೂ ಬರಬಹುದು: ಮಂತ್ರಾಲಯ ಶ್ರೀಗಳು

    ರಾಯಚೂರು: ರಾಜಕೀಯಕ್ಕೆ ಇಂಥವರೆ ಬರಬೇಕು, ಬರಬಾರದರು ಅಂತೇನಿಲ್ಲ, ರಾಜಕೀಯಕ್ಕೆ ಬಂದಂತಹ ವ್ಯಕ್ತಿಗಳು ರಾಜ್ಯದ ಜನತೆ ಬಗ್ಗೆ ಕಾಳಜಿ ಉಳ್ಳವರಾಗಿರಬೇಕು ಎಂದು ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

    ಉತ್ತರ ಪ್ರದೇಶದಂತೆ ರಾಜ್ಯದಲ್ಲೂ ಬಿಜೆಪಿಯಿಂದ (BJP) ಸಂತರಿಗೆ ಸಿಎಂ ಸ್ಥಾನಮಾನದ ಆಲೋಚನೆ ವಿಚಾರಕ್ಕೆ ಮಂತ್ರಾಲಯದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಂತ್ರಾಲಯ (Mantralayam) ಶ್ರೀಗಳು ಮುಖ್ಯವಾಗಿ ನಾನು ಮೊದಲಿನಿಂದಲೂ ಹೇಳೋದು, ಇಂಥ ವ್ಯಕ್ತಿ ಬರಬೇಕು, ಇಂಥವರೇ ಬರಬಾರದು ಎನ್ನುವುದಿಲ್ಲ. ರಾಜಕೀಯಕ್ಕೆ ಬಂದಂತ ವ್ಯಕ್ತಿಗಳು ರಾಜ್ಯದ ಜನತೆ ಬಗ್ಗೆ ಕಾಳಜಿ ಉಳ್ಳವರಾಗಿರಬೇಕು. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುವಂತ ವ್ಯಕ್ತಿ ಆಗಬೇಕು ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಒಬ್ಬ ಸುಳ್ಳುಗಾರ, ಅವರಿಗೆ ಕಿವಿ ಕೇಳಿಸಲ್ಲ, ಕಣ್ಣು‌ ಕಾಣಲ್ಲ : ಪ್ರಭು ಚವ್ಹಾಣ್ ಟಾಂಗ್

    ಧರ್ಮದಲ್ಲಿ ರಾಜಕೀಯ ಬರಬಾರದು, ರಾಜಕೀಯದಲ್ಲಿ ಧರ್ಮ ಇರಬೇಕು. ಧರ್ಮವಿದ್ದರೆ ಅದು ಉತ್ತಮವಾದ ಗುಣಮಟ್ಟದ ಆಡಳಿತ, ವ್ಯವಸ್ಥೆಯಾಗಿ ಕಾಣುತ್ತದೆ ಅಂತ ಭಾವಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸ್ಕೂಟರ್‌ಗೆ ಡಿಕ್ಕಿ ಹೊಡೆದು 6ರ ಬಾಲಕನನ್ನು 2 ಕಿ.ಮೀ ಎಳೆದೊಯ್ದ ಟ್ರಕ್

  • ನವಾಬರು ಕೊಡುವುದಕ್ಕಿಂತ ಮೊದಲೇ ಮಂತ್ರಾಲಯ ಮಠಕ್ಕೆ ಸೇರಿದ್ದು: ಮಂತ್ರಾಲಯ ಶ್ರೀ

    ನವಾಬರು ಕೊಡುವುದಕ್ಕಿಂತ ಮೊದಲೇ ಮಂತ್ರಾಲಯ ಮಠಕ್ಕೆ ಸೇರಿದ್ದು: ಮಂತ್ರಾಲಯ ಶ್ರೀ

    ರಾಯಚೂರು: ಮಂತ್ರಾಲಯ ಮಠಕ್ಕೆ ಸಾಬ್ರು ಜಾಗ ಕೊಟ್ಟಿದ್ದು, ಬೇಡ ಅಂದ್ರೆ ಆ ಜಾಗ ಕೊಟ್ಟು ಹೋಗಿ ಅನ್ನೋ ಸಿಎಂ ಇಬ್ರಾಹಿಂ ಹೇಳಿಕೆಗೆ ಮಂತ್ರಾಲಯ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.

    ಮಂತ್ರಾಲಯ ನಮ್ಮ ಮಠಕ್ಕೆ ತುಂಬಾ ಪೂರ್ವದಲ್ಲೇ ಬಂದಿರುವ ಜಾಗ. ನವಾಬ ಸಿದ್ದಿ ಮಸೂದ್ ಖಾನ್ ಪುನಃ ಮಠಕ್ಕೆ ಮಂತ್ರಾಲಯವನ್ನು ನೀಡಿದ್ದಾರೆ ಎಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಇದನ್ನೂ ಓದಿ: ಇವಿಎಂ ತಿರುಚಬಹುದು ಅನ್ಸುತ್ತೆ: ವಿಧಾನಸಭೆಯಲ್ಲಿ ಅನುಮಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ

    ರಾಯಚೂರಿನಲ್ಲಿ ಮಾತನಾಡಿದ ಶ್ರೀಗಳು ರಾಯರಿಗಿಂತಲೂ ಪೂರ್ವದಿಂದಲೇ ಮಂತ್ರಾಲಯ ನಮ್ಮ ಮಠಕ್ಕೆ ಸೇರಿದ್ದಾಗಿದೆ. ಈ ವಿಚಾರದಲ್ಲಿ ಯಾರೂ ಶಾಂತಿ ಸೌಹಾರ್ದತೆ ಕದಡುವ ಕೆಲಸ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಮ್ಮಪ್ಪನ ಬಿಟ್ಟು ಯಾರಿಗೂ ನಾನು ಅಪ್ಪಾಜಿ ಎಂದಿಲ್ಲ: ಯತ್ನಾಳ್

    ಭಾರತೀಯರೆಲ್ಲರೂ ಸೌಹಾರ್ದಯುತವಾಗಿ ಬಾಳಬೇಕು. ಇಲ್ಲಸಲ್ಲದ ಗಲಭೆ ಮಾಡಿ ಶಾಂತಿಯನ್ನು ಕೆಡಿಸಬಾರದು ಎನ್ನುವ ನಿಟ್ಟಿನಲ್ಲಿ ಸಿಎಂ ಇಬ್ರಾಹಿಂ ಆ ಮಾತನ್ನು ಆಡಿದ್ದಾರೆ. ಸಿಎಂ ಇಬ್ರಾಹಿಂ ರಾಯರ ಪರಮ ಭಕ್ತರು. ರಾಯರ ಬಗ್ಗೆ ಗೌರವ ಭಕ್ತಿ ಎಲ್ಲವೂ ಅವರಿಗೆ ಇದೆ. ಅವರ ಹೇಳಿಕೆಯನ್ನು ಬೇರೆ ರೀತಿ ಅರ್ಥೈಸಬಾರದು. ಹಿಂದೂ, ಮುಸ್ಲಿಂ ಶಾಂತಿ ಸೌಹಾರ್ದತೆಯನ್ನು ಯಾರೂ ಕದಡಬಾರದು ಎಂದು ಮಂತ್ರಾಲಯ ಶ್ರೀಗಳು ಹೇಳಿದ್ದಾರೆ.

  • ಜನರ ಭಾವನೆ ಕೆರಳಿಸಿ ಮತೀಯ ಗಲಭೆಗೆ ಅವಕಾಶ ಕೊಡಬಾರದು: ಮಂತ್ರಾಲಯ ಶ್ರೀ

    ಜನರ ಭಾವನೆ ಕೆರಳಿಸಿ ಮತೀಯ ಗಲಭೆಗೆ ಅವಕಾಶ ಕೊಡಬಾರದು: ಮಂತ್ರಾಲಯ ಶ್ರೀ

    ರಾಯಚೂರು: ಅಣ್ಣತಮ್ಮಂದಿರಂತೆ ಇರುವ ಜನರಲ್ಲಿ ಈ ತರದ ಭಾವನೆ ತಂದು ಕೆರಳಿಸಿ, ಮತೀಯ ಗಲಭೆಗೆ ಅವಕಾಶ ಕೊಡಬಾರದು ಎಂದು ಹಿಜಬ್ ಕುರಿತಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.

    SIDDARAMAIAH

    ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ. ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕುತ್ತಾರೆ ಎಂದು ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಬಗ್ಗೆ ಮಂತ್ರಾಲಯದಲ್ಲಿ ಮಾತನಾಡಿದ ಮಂತ್ರಾಲಯದ ಶ್ರೀಗಳು, ಎಲ್ಲಿ ಏನೇ ನಡೆದರು ಧಾರ್ಮಿಕ ಸಂಘ ಸಂಸ್ಥೆಗಳು, ಸ್ವಾಮೀಜಿಗಳ ಮೇಲೆ ಮಾತನಾಡುವುದು ಫ್ಯಾಶನ್ ಆಗಿದೆ. ಮಠಾಧಿಪತಿಗಳು ಶಾಲೆಗೆ ಹೋಗಿ ಓದುವಂತ ವಿದ್ಯಾರ್ಥಿಗಳು ಅಲ್ಲ. ಶಾಲಾ ಸಮವಸ್ತ್ರ ನೀತಿಯಲ್ಲಿ ಮಠಾಧಿಪತಿಗಳು ಬರುವುದಿಲ್ಲ. ಸುಮ್ಮನೆ ಮಠಾಧಿಪತಿಗಳನ್ನು ಈ ವಿಷಯಕ್ಕೆ ಎಳೆದು ತರುವುದನ್ನು ಖಂಡಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ ಸ್ಪಷ್ಟನೆ

    ನ್ಯಾಯಾಲಯ ಸುಧೀರ್ಘವಾಗಿ ಪರಿಶೀಲಿಸಿ ತೀರ್ಪನ್ನು ನೀಡಿದೆ, ಈ ತೀರ್ಪನ್ನು ಎಲ್ಲರೂ ಗೌರವಿಸಬೇಕು. ತಲೆಮೇಲೆ ಬಟ್ಟೆ ಹಾಕುವುದು ಇಲ್ಲಿ ವಿಷಯವಲ್ಲ, ಅಧ್ಯಯನ ವೇಳೆ ಸಮವಸ್ತ್ರ ಧರಿಸಬೇಕು ಅನ್ನೋದು ತೀರ್ಪು ಎಂದಿದ್ದಾರೆ. ಇದನ್ನೂ ಓದಿ: ನಮ್ಮ-ನಿಮ್ಮೆಲ್ಲರ ರಕ್ತ ಒಂದೇ ಬಣ್ಣದ್ದು, ಮೂರು ದಿನಗಳ ಬಾಳಲ್ಲಿ ಏಕೆ ಕಿತ್ತಾಟ?: ಹ್ಯಾರೀಸ್

    ಅಪ್ರಸ್ತುತ ವಿಷಯವನ್ನಿಟ್ಟುಕೊಂಡು ಯಾರೇ ವಿವಾದಕ್ಕೆ ಎಳೆದರೂ ಖಂಡಿಸುತ್ತೇವೆ. ವಿವಾದವನ್ನು ವಿಸ್ತರಿಸಿ ದೇಶದಲ್ಲಿ ಗಲಭೆ, ಅಶಾಂತಿ ಉಂಟು ಮಾಡುವುದು ಸರಿಯಲ್ಲ. ಹತ್ಯೆಗೆ ಒಳಗಾದ ವ್ಯಕ್ತಿ ಕುಟುಂಬಕ್ಕೆ ಪರಿಹಾರ ಧನ ನೀಡುವಾಗ ಒಂದು ಧರ್ಮಕ್ಕೆ ಹೆಚ್ಚು, ಇನ್ನೊಂದಕ್ಕೆ ಕಡಿಮೆ ಎನ್ನುವ ಪರಿಕಲ್ಪನೆ ಸರ್ಕಾರದಲ್ಲಿ ಇಲ್ಲ ಎಂದು ಮಂತ್ರಾಲಯ ಶ್ರೀಗಳು ಸಿದ್ದರಾಮಯ್ಯ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಸಿದ್ದರಾಮಯ್ಯ ಹೇಳಿದ್ದೇನು..?
    ಮೈಸೂರು ಜಿಲ್ಲೆಯ ತಮ್ಮ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮೂರು ದಿನಗಳಕಾಲ ನಡೆಯುತ್ತಿರುವ ಶ್ರೀ ಸಿದ್ದರಾಮೇಶ್ವರ ಚಿಕ್ಕಮ್ಮತಾಯಿ ಜಾತ್ರಾಮಹೋತ್ಸವಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಹಿಜಬ್ ವಿವಾದಕ್ಕೆ ಬಿಜೆಪಿಯೇ ಕಾರಣ. ಹಿಂದೂ ಹೆಣ್ಣು ಮಕ್ಕಳು ತಲೆಯ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಹಾಗೆಯೇ ಮುಸ್ಲಿಂ ಹೆಣ್ಣು ಮಕ್ಕಳೂ ಒಂದು ದುಪ್ಪಟ್ಟ ಹಾಕಿಕೊಳ್ಳುತ್ತೇನೆ ಅಂದರೆ ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದರು.

    ಸ್ವಾಮೀಜಿಗಳು ಕೂಡ ತಲೆಯ ಮೇಲೆ ಬಟ್ಟೆ ಹಾಕುತ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ? ಇಂತಹ ವಿವಾದಗಳನ್ನು ಸೃಷ್ಟಿಸಿ ಅದನ್ನು ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದುಕೊಂಡಿದೆ. ಆದರೆ ಜನ ಬುದ್ದಿವಂತರು, ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ ಎಂದು ಹೇಳಿದ್ದರು.

  • ಮಂತ್ರಾಲಯ ಶ್ರೀಗಳಿಂದ ಹೊಸ ಸಂಪ್ರದಾಯಕ್ಕೆ ನಾಂದಿ – ಸ್ವಾಮೀಜಿಗಳ ರಕ್ಷಣೆಗೆ ಬೌನ್ಸರ್​​​ಗಳ ನೇಮಕ

    ಮಂತ್ರಾಲಯ ಶ್ರೀಗಳಿಂದ ಹೊಸ ಸಂಪ್ರದಾಯಕ್ಕೆ ನಾಂದಿ – ಸ್ವಾಮೀಜಿಗಳ ರಕ್ಷಣೆಗೆ ಬೌನ್ಸರ್​​​ಗಳ ನೇಮಕ

    ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಜೀವ ಭಯ ಕಾಡುತ್ತಿದೆಯಾ ಅನ್ನೋ ಅನುಮಾನಗಳು ಭಕ್ತರಲ್ಲಿ ಕಾಡುತ್ತಿದೆ. ಸ್ವಾಮೀಜಿಗಳ ರಕ್ಷಣೆಗೆ ಬೌನ್ಸರ್ ಗಳ ನೇಮಕ ಮಾಡಿರುವುದರಿಂದ ಭಕ್ತರಲ್ಲಿ ಅನುಮಾನ ಶುರುವಾಗಿದೆ.

    ತಮ್ಮ ರಕ್ಷಣೆಗೆ ಬೌನ್ಸರ್ ಗಳನ್ನ ನೇಮಕ ಮಾಡಿಕೊಳ್ಳುವ ಮೂಲಕ ಮಂತ್ರಾಲಯ ಶ್ರೀಗಳು ಮಠದಲ್ಲಿ ಹೊಸ ಸಂಪ್ರದಾಯಯಕ್ಕೆ ನಾಂದಿ ಹಾಡಿದ್ದಾರೆ. ಮಠದಲ್ಲಿ ನೂರಾರು ಜನ ಸಿಬ್ಬಂದಿಗಳಿದ್ದರೂ ರಾಯರ ಆರಾಧನೆ ಹಿನ್ನೆಲೆ ಬೌನ್ಸರ್ ಗಳ ನೇಮಕ ಮಾಡಲಾಗಿದೆ. ಶ್ರೀಗಳ ಸುತ್ತ ರಕ್ಷಣೆಗೆ 6 ಜನ ಬಾಡಿಗಾರ್ಡ್ ಗಳು ನಿಂತಿದ್ದಾರೆ.

    ಕಲಬುರಗಿ ಮೂಲದ 6 ಜನ ಬಾಡಿಗಾರ್ಡ್ ಗಳನ್ನ ಕರೆಸಲಾಗಿದೆ. ಮಡಿಯಲ್ಲಿರುವ ಶ್ರೀಗಳ ಹತ್ತಿರ ಭಕ್ತರು ಸುಳಿಯದಂತೆ ಬೌನ್ಸರ್ ಗಳು ತಡೆಯುತ್ತಿದ್ದಾರೆ. ಈ ಮೊದಲು ಮಡಿಯಲ್ಲಿರುವ ಸಿಬ್ಬಂದಿಗೆ ಮಾತ್ರ ಹತ್ತಿರ ಬಿಟ್ಟುಕೊಳ್ಳುತ್ತಿದ್ದ ಶ್ರೀಗಳು ಈಗ ಬಾಡಿಗಾರ್ಡ್ ಗಳ ರಕ್ಷಣೆಯಲ್ಲಿದ್ದಾರೆ.

    ಮಠದಲ್ಲಿ ರಾಯರ ಪೂರ್ವಾರಾಧನೆಯ ದಿನವಾದ ಇಂದು ಭಕ್ತರಿಗೆ ಮುದ್ರಾಧಾರಣೆ, ಮಂತ್ರಾಕ್ಷತೆಯನ್ನ ಶ್ರೀಗಳು ನೀಡಿದರು. ಈ ವೇಳೆ ಶ್ರೀಗಳ ಸುತ್ತ ಬಾಡಿಗಾರ್ಡ್‍ಗಳು ಇರುವುದನ್ನ ಕಂಡು ರಾಯರ ಭಕ್ತರು ಗೊಂದಲಕ್ಕೀಡಾಗಿದ್ದಾರೆ.

    ರಾಯರು 700 ವರ್ಷಕಾಲ ವೃಂದಾವನದಲ್ಲಿರುತ್ತಾರೆ ಅನ್ನೋ ಪ್ರತೀತಿಯಿದೆ. ಅರ್ಧ ಅವಧಿ ಈ ವರ್ಷ ಪೂರ್ಣಗೊಳ್ಳುವ ಹಿನ್ನೆಲೆ ರಾಯರ 350 ನೇ ಆರಾಧನೆ ವಿಶೇಷವಾಗಿದೆ. ಪೂರ್ವಾರಾಧನೆ ಹಿನ್ನೆಲೆ ವಿಶೇಷ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಗುರುರಾಯರ ಆರಾಧನಾ ಸಂಭ್ರಮ

    ರಾಯರು ಸಶರೀರರಾಗಿ ವೃಂದಾವನಸ್ಥರಾದ ದಿನದ ಮುನ್ನಾ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಆಚರಿಸಲಾಗುತ್ತಿದೆ. ಬೆಳಿಗ್ಗೆಯಿಂದಲೇ ಮಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದು, ನಿರ್ಮಾಲ್ಯ ವಿಸರ್ಜನೆ, ಉತ್ಸವರಾಯರ ಪಾದಪೂಜೆ, ಪಂಚಾಮೃತ ಅಭಿಷೇಕ, ರಜತ ಸಿಂಹವಾಹನೋತ್ಸವ ನಡೆಯುತ್ತಿವೆ. ರಾಜ್ಯದ ವಿವಿಧೆಡೆಯಿಂದ ಭಕ್ತರು ಮಂತ್ರಾಲಯಕ್ಕೆ ಆಗಮಿಸಿದ್ದಾರೆ. ಮಠದಲ್ಲಿ ಏಳುದಿನ ಕಾಲ ಸಪ್ತರಾತ್ರೋತ್ಸವ ನಡೆಯುತ್ತಿದೆ.  ಇದನ್ನೂ ಓದಿ: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ವಿಶೇಷ ಪಂಚರಥೋತ್ಸವ