Tag: ಸುಬ್ರಹ್ಮಣ್ಯ ದೇವಸ್ಥಾನ

  • ಪತ್ನಿಯೊಂದಿಗೆ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದ ಟೀಂ ಇಂಡಿಯಾ ಸ್ಟಾರ್‌ ಕೆ.ಎಲ್‌ ರಾಹುಲ್

    ಪತ್ನಿಯೊಂದಿಗೆ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದ ಟೀಂ ಇಂಡಿಯಾ ಸ್ಟಾರ್‌ ಕೆ.ಎಲ್‌ ರಾಹುಲ್

    ಚಿಕ್ಕಬಳ್ಳಾಪುರ: ಟೀಂ ಇಂಡಿಯಾ (Team India) ಸ್ಟಾರ್‌ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್ ರಾಹುಲ್ (KL Rahul) ಶನಿವಾರ ಪತ್ನಿಯೊಂದಿಗೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

    ಮಧ್ಯಾಹ್ನ 12:45ರ ಸುಮಾರಿಗೆ ಪತ್ನಿ ಅತಿಯಾಶೆಟ್ಟಿ ಜೊತೆ ಆಗಮಿಸಿದ ರಾಹುಲ್ ದೇವರ ದರ್ಶನ ಪಡೆದು ವಾಪಸಾಗಿದ್ದಾರೆ. ಇನ್ನೂ ಕೆ.ಎಲ್ ರಾಹುಲ್ ಸುಬ್ರಮಣ್ಯ ಸ್ವಾಮಿಯ ಭಕ್ತರು. ಈ ಹಿಂದೆಯೂ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ (Ghati Subramanya Temple) ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಇದನ್ನೂ ಓದಿ: ಏಷ್ಯಾಕಪ್‍ನಲ್ಲಿಂದು ಟೀಂ ಇಂಡಿಯಾ, ಪಾಕ್ ಹಣಾಹಣಿ- ಹೈವೋಲ್ಟೇಜ್ ಪಂದ್ಯಕ್ಕೆ ಅಭಿಮಾನಿಗಳ ಕಾತರ

    ಸದ್ಯ ಏಷ್ಯಾಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಬೇಕಿರುವ ರಾಹುಲ್‌ ಮೊದಲ ಎರಡು ಪಂದ್ಯಗಳಿಂದ ದೂರ ಉಳಿದಿದ್ದರೆ, ಭಾರತ ಮತ್ತು ಪಾಕಿಸ್ತಾನ ಹಾಗೂ ಭಾರತ ಮತ್ತು ನೇಪಾಳ ನಡುವಿನ ಪಂದ್ಯಗಳಿಗೆ ಗೈರಾಗಲಿದ್ದು, ನಂತರ ಟೀಂ ಇಂಡಿಯಾ ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ: ಕಿಂಗ್‌ ಕೊಹ್ಲಿ ಕಟ್ಟಿಹಾಕಲು ಬಾಬರ್‌ ಬಳಿ ಇದೆಯಾ ಮಾಸ್ಟರ್‌ ಪ್ಲ್ಯಾನ್‌? – ಇಬ್ಬರಲ್ಲಿ ಯಾರು ಬೆಸ್ಟ್‌?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರಿನಲ್ಲಿ ಧರ್ಮ ದಂಗಲ್ – ಹಿಂದೂ ಸಂಘಟನೆಯ 25ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ

    ಬೆಂಗಳೂರಿನಲ್ಲಿ ಧರ್ಮ ದಂಗಲ್ – ಹಿಂದೂ ಸಂಘಟನೆಯ 25ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ

    ಬೆಂಗಳೂರು: ಸುಬ್ರಹ್ಮಣ್ಯ ದೇವಸ್ಥಾನದ (Subramanya Swamy Temple) ಬ್ರಹ್ಮ ರಥೋತ್ಸವದಲ್ಲಿ ಹಿಂದೂಯೇತರ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆ (Hindu organization) ಮುಂದಾಗಿದ್ದ ಬೆನ್ನಲ್ಲೇ ಇದೀಗ ಪೊಲೀಸರು (Police) 25ಕ್ಕೂ ಹೆಚ್ಚು ಹಿಂದೂ ಸಂಘಟನೆಯ ಮುಖಂಡರನ್ನು ರಾತ್ರೋರಾತ್ರಿ ವಶಕ್ಕೆ ಪಡೆದಿದ್ದಾರೆ.

    ಇಂದು ಷಷ್ಠಿ ಸಂಭ್ರಮದ ನಡುವೆ ಬೆಂಗಳೂರಿನ ಸುಬ್ರಹ್ಮಣ್ಯ ದೇವಾಸ್ಥಾನದಲ್ಲಿ ವ್ಯಾಪಾರ ಕರಿನೆರಳು ಆವರಿಸಿದೆ. ಮುಸ್ಲಿಂ ವ್ಯಾಪಾರಿಗಳಿಗೆ ಜಾತ್ರೆಯಲ್ಲಿ ಅವಕಾಶ ನೀಡಬಾರದೆಂಬ ವಿಚಾರವಾಗಿ ಸಿಡಿದೆದ್ದಿದ್ದ ಹಿಂದೂ ಮುಖಂಡರನ್ನೇ ವಶಕ್ಕೆ ಪಡೆಯಲಾಗಿದೆ. ಹಿಂದೂ ದೇವಾಲಯದ ಆವರಣದಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂಬ ಹಿಂದೂ ಸಂಘಟನೆಗಳ ಒತ್ತಾಯಕ್ಕೆ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳದ ಹಿನ್ನೆಲೆ ಹಿಂದೂ ಕಾರ್ಯಕರ್ತರೇ ಅಖಾಡಕ್ಕಿಳಿಯಲು ತಯಾರಿ ನಡೆಸಿದ್ದರು. ಖುದ್ದು ತಾವೇ ಜಾತ್ರೆ ವೇಳೆ ವ್ಯಾಪಾರಿಗಳ ಬಳಿ ನಿಂತು ಹಿಂದೂ ವ್ಯಾಪಾರಿಗಳ ಬಳಿಯೇ ವ್ಯಾಪಾರ ಮಾಡುವಂತೆ ಎಚ್ಚರಿಸುವ ಪ್ಲ್ಯಾನ್ ಮಾಡಿದ್ದರು. ಇದನ್ನು ಮನಗಂಡು ದೇವಸ್ಥಾನದ ಬಳಿ ಕ್ಯಾಂಪೇನ್‍ಗೆ ಮುಂದಾಗಿದ್ದ ಹಿಂದೂ ಸಂಘಟನೆಗಳಿಗೆ ಮಧ್ಯರಾತ್ರಿ ಪೋಲಿಸರು ಶಾಕ್ ನೀಡಿದ್ದಾರೆ. ತಡ ರಾತ್ರಿ 1 ಗಂಟೆಗೆ ಹಿಂದೂ ಸಂಘಟನೆಯ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಉತ್ತರ ಭಾರತದಾದ್ಯಂತ 20 ಕಡೆ NIA ದಾಳಿ

    ಹಿಂದೂಗಳಿಗೆ ಮಾತ್ರ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ಅವಕಾಶ ನೀಡಬೇಕೆಂದು ಭಜರಂಗದಳದ ಮುಖಂಡ ತೇಜಸ್ ಗೌಡ ದಕ್ಷಿಣ ವಿಭಾಗದ ಡಿಸಿಪಿಯವರಿಗೆ ಮನವಿ ಮಾಡಿದ್ದರು. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ತೇಜಸ್ ಗೌಡನನ್ನು ಕನಕಪುರ ವ್ಯಾಪ್ತಿಯಲ್ಲಿ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಪುನೀತ್ ಕೆರೆಹಳ್ಳಿ ಸೇರಿದಂತೆ 25ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಗಲಭೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಹನಿಟ್ರ್ಯಾಪ್ ಚಕ್ರವ್ಯೂಹ- ಸಂಸಾರ, ಕೆಲಸ, ಎಲ್ಲವೂ ಕಳೆದುಕೊಂಡ ಟೆಕ್ಕಿ!

    ಈಗಾಗಲೇ ಹನುಮಂತನಗರ, ಬಸವನಗುಡಿ, ಕನಕಪುರ ಪೊಲೀಸರು ಕೆಲ ಹಿಂದೂ ಮುಖಂಡರನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ಹಿಂದೂ ಸಂಘಟನೆ ಮುಗಿಬಿದ್ದಿದ್ದು, ಸ್ಥಳೀಯ ಶಾಸಕರ ಮತ್ತು ಬಿಜೆಪಿ ಸರ್ಕಾರ ತಡರಾತ್ರಿ ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆಯಲು ಪೊಲೀಸರಿಗೆ ತಿಳಿಸುವಷ್ಟು ನೀಚ ಕೆಲಸಕ್ಕೆ ಕೈ ಹಾಕಬಾರದಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದಲಿತ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರ ಹಾಕಿದ ಅರ್ಚಕ ವೃಂದ

    ದಲಿತ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರ ಹಾಕಿದ ಅರ್ಚಕ ವೃಂದ

    ಮಂಗಳೂರು: ದಲಿತ ಮಹಿಳೆ ಎನ್ನುವ ಕಾರಣಕ್ಕೆ ಕರ್ತವ್ಯನಿರತ ದಲಿತ ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರಕ್ಕೆ ಕಳುಹಿಸಿದ ಅಮಾನವೀಯ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ.

    ಮಂಗಳೂರಿನ ಮೂಡಬಿದ್ರೆ ತಾಲೂಕಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿನ ಅರ್ಚಕರು ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರಗೆ ಕಳುಹಿಸಿದ್ದಾರೆ.

    ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಈ ದೇವಸ್ಥಾನದಲ್ಲಿ ಕಳೆದ ಸೋಮವಾರ ಷಷ್ಠಿ ಮಹೋತ್ಸವ ನಡೆದಿದ್ದು, ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿದ್ದರು. ಸುಮಾರು 25 ಸಾವಿರ ಭಕ್ತರು ಈ ಷಷ್ಠಿ ಮಹೋತ್ಸವದಲ್ಲಿ ಭಾಗಿಯಾಗಿದ್ದರಿಂದ ಸ್ಥಳೀಯ ಮೂಡಬಿದ್ರೆ ಪೊಲೀಸರು ಸಂಪೂರ್ಣ ಭದ್ರತೆ ನೀಡಿದ್ದು, ಶಾಂತಿ ಸುವ್ಯವಸ್ಥೆಗೆ ಸಕಲ ಬಂದೋಬಸ್ತ್ ನಡೆಸಿದ್ದರು.

    ದೇವಸ್ಥಾನದ ಒಳಾಂಗಣದಲ್ಲಿ ಭಕ್ತರ ಜನ ಸಂದಣಿಯನ್ನು ನಿಯಂತ್ರಿಸುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ದಲಿತ ಸಮುದಾಯದವರು ಎಂದು ಗೊತ್ತಾಗಿದ್ದೇ ತಡ, ಅಲ್ಲಿನ ಅರ್ಚಕ ವೃಂದದವರು ತಕ್ಷಣ ಆ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರಕ್ಕೆ ಕಳಿಸಿದ್ದಾರೆ. ಪಾರ್ಕಿಂಗ್ ಸ್ಥಳದಲ್ಲಿ ಬಂದೋ ಬಸ್ತ್ ಮಾಡಿ, ದೇವಸ್ಥಾನದ ಒಳಗೆ ನಿಮ್ಮನ್ನು ಬಿಟ್ಟದ್ದು ಯಾರು? ಕ್ಷೇತ್ರಕ್ಕೆ ನಿಮ್ಮಿಂದ ಮೈಲಿಗೆಯಾಗಿದೆ ಎಂದು ಸಾವಿರಾರು ಭಕ್ತರ ಮುಂದೆಯೇ ಅವಮಾನಿಸಿ ಹೊರಗಡೆ ಕಳುಹಿಸಿದ್ದಾರೆ.

    ಇದನ್ನು ಕೆಲವರು ವಿರೋಧಿಸಿದರೂ ಅರ್ಚಕ ವೃಂದ ಕ್ಯಾರೇ ಎನ್ನದೆ ದಲಿತ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ದೇವಸ್ಥಾನದಿಂದ ಹೊರಕ್ಕೆ ಕಳುಹಿಸಿದ್ದಾರೆ. ಮಾತ್ರವಲ್ಲದೆ ಭೋಜನ ವ್ಯವಸ್ಥೆಯಲ್ಲೂ ತಾರತಮ್ಯ ನಡೆಸಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ದೇವಸ್ಥಾನದ ಪೂಜೆ ಬಳಿಕ ಬ್ರಾಹ್ಮಣ ಸಮುದಾಯಕ್ಕೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದ್ದು, ಅವರು ಊಟ ಮಾಡಿದ ನಂತರ ಉಳಿದ ಜಾತಿಯ ಭಕ್ತರಿಗೆ ಊಟ ನೀಡಲಾಗಿದೆ.

    ಸಹಪಂಕ್ತಿ ಭೋಜನದ ವ್ಯವಸ್ಥೆ ಆಗಬೇಕೆಂದು ಪೇಜಾವರ ಶ್ರೀಗಳು ಸೇರಿದಂತೆ ಎಲ್ಲರೂ ಒತ್ತಾಯ ಮಾಡುತ್ತಿದ್ದರೂ ಈ ಕ್ಷೇತ್ರದಲ್ಲಿ ಇಂತಹ ಜಾತಿ ಆಧಾರದಲ್ಲಿ ಭೋಜನ ವ್ಯವಸ್ಥೆ ಮಾಡೋದು ಇಂದಿಗೂ ಜೀವಂತವಾಗಿ ಉಳಿದಿದೆ. ಮಾತ್ರವಲ್ಲದೆ ದೇವಳಕ್ಕೆ ಬರುವ ಭಕ್ತರನ್ನು ಇಲ್ಲಿನ ಅರ್ಚಕ ವೃಂದ ಜಾತಿ ಆಧಾರದಲ್ಲಿ ಗುರುತಿಸಿ ಸದಾ ಹೀಯಾಳಿಸುತ್ತಿರುವುದು ಭಕ್ತರ ಆಕ್ರೋಶವನ್ನು ಇನ್ನಷ್ಟು ಹೆಚ್ಚಿಸಿದೆ. ಭಕ್ತರು ನೀಡುವ ಕಾಣಿಕೆ ಹಣಕ್ಕೆ ಯಾವುದೇ ಜಾತಿಯನ್ನು ನೋಡದೆ ಕಾಣಿಕೆ ಸಂಗ್ರಹಿಸುವ ಅರ್ಚಕರು, ಕ್ಷೇತ್ರ ಪ್ರವೇಶ, ಭೋಜನ ವ್ಯವಸ್ಥೆಗೆ ಜಾತಿ ಆಧಾರದಲ್ಲಿ ನೋಡುವುದು ಸರಿಯಲ್ಲ ಎಂದು ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹೋಟೇಲಿನಲ್ಲಿ ಪೊಲೀಸರ ಊಟ
    ಷಷ್ಠಿ ಮಹೋತ್ಸವದ ಸಂದರ್ಭ ಸುವ್ಯವಸ್ಥೆಗೆ ನಿಯೋಜನೆಗೊಂಡ ತಮ್ಮ ಸಹದ್ಯೋಗಿ ದಲಿತ ಮಹಿಳಾ ಸಿಬ್ಬಂದಿಗೆ ಅವಮಾನ ಮಾಡಿದ ದೇವಸ್ಥಾನದ ಅರ್ಚಕ ವೃಂದದ ನಡೆಯಿಂದ ಹಾಗೂ ಭೋಜನದಲ್ಲೂ ಪಂಕ್ತಿ ಭೇದ ಮಾಡಿದ ಅರ್ಚಕರ ವರ್ತನೆಯಿಂದ ಕರ್ತವ್ಯನಿರತ ಎಲ್ಲ ಪೊಲೀಸರು ಸ್ಥಳೀಯ ಹೋಟೇಲ್‍ನಲ್ಲಿ ಮಧ್ಯಾಹ್ನದ ಊಟ ಮಾಡಿದ್ದರು. ದೇವಸ್ಥಾನದಲ್ಲಿ 10 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಿದ್ದರೂ ಈ ಘಟನೆಯಿಂದ ಆಕ್ರೋಶಗೊಂಡ ಸ್ವಾಭಿಮಾನಿ ಭಕ್ತರೂ ಕ್ಷೇತ್ರದ ಭೋಜನ ಸ್ವೀಕರಿಸದೇ ಅವರವರ ಮನೆಯಲ್ಲಿ ಊಟ ಮಾಡಿದ್ದು, ಅರ್ಚಕ ವೃಂದದ ಕೃತ್ಯಕ್ಕೆ ಹಿಡಿಶಾಪ ಹಾಕಿದ್ದಾರೆ.

  • ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಬ್ರಹ್ಮರಥೋತ್ಸವ – ರಾಜಮಾರ್ಗದಲ್ಲಿ ಭಕ್ತ ಸಾಗರ

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಬ್ರಹ್ಮರಥೋತ್ಸವ – ರಾಜಮಾರ್ಗದಲ್ಲಿ ಭಕ್ತ ಸಾಗರ

    ಮಂಗಳೂರು: ದಕ್ಷಿಣ ಕನ್ನಡದ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ. ದೇವಳದ ರಾಜಮಾರ್ಗದಲ್ಲಿ ಯಶಸ್ವಿನಿ ಆನೆಯೊಂದಿಗೆ ರಥೋತ್ಸವ ಸಂಭ್ರಮ ನಡೆಯಿತು.

    ಕೋಟ್ಯಂತರ ಭಕ್ತರ ಆರಾಧ್ಯದೈವ ಸುಬ್ರಹ್ಮಣ್ಯ ಕೊನೆಯ ಬಾರಿಗೆ 400 ವರ್ಷಗಳ ಹಿಂದಿನ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದಾನೆ. ಈ ಅಪರೂಪದ ಕ್ಷಣಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಿದ್ದಾರೆ. ಮುಂಜಾನೆ 6.41 ರ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು.

    ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಮೊದಲು ಉಮಾಮಹೇಶ್ವರ ದೇವರ ಸಣ್ಣ ರಥ ಮುಂದೆ ಸಾಗಿದರೆ, ಅದರ ಹಿಂದೆ ಸುಬ್ರಹ್ಮಣ್ಯ ಬ್ರಹ್ಮರಥ ದಲ್ಲಿ ಸಾಗಿ ಅಸಂಖ್ಯಾತ ಭಕ್ತರಿಗೆ ದರ್ಶನ ನೀಡಿದ್ದಾನೆ. 400 ವರ್ಷಕ್ಕೂ ಹಳೆಯ ಬ್ರಹ್ಮರಥದಲ್ಲಿ ಕೊನೆಯ ಬಾರಿ ರಥೋತ್ಸವ ನಡೆದಿದ್ದು, ಮುಂದಿನ ಏಪ್ರಿಲ್ ತಿಂಗಳಿನಲ್ಲಿ ಉದ್ಯಮಿ ಮುತ್ತಪ್ಪ ರೈ ಎರಡು ಕೋಟಿ ವೆಚ್ಚದಲ್ಲಿ ನೂತನ ಬ್ರಹ್ಮರಥ ದೇವಸ್ಥಾನಕ್ಕೆ ಕೊಡುಗೆಯಾಗಿ ನೀಡಲಿದ್ದಾರೆ.

    ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.


    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv