Tag: ಸುಮಲತಾ ಅಂಬರೀಶ್

  • ಬಿಎಸ್‌ವೈ ಸಮ್ಮುಖದಲ್ಲಿ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ

    ಬಿಎಸ್‌ವೈ ಸಮ್ಮುಖದಲ್ಲಿ ಸುಮಲತಾ ಅಂಬರೀಶ್‌ ಬಿಜೆಪಿ ಸೇರ್ಪಡೆ

    ಬೆಂಗಳೂರು: ನಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಅವರು ಇಂದು ಭಾರತೀಯ ಜನತಾ ಪಕ್ಷ (BJP)ಕ್ಕೆ ಸೇರ್ಪಡೆಗೊಂಡಿದ್ದಾರೆ.

    ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುಮಲತಾ ಅವರಿಗೆ ಪಕ್ಷದ ಬಾವುಟ ನೀಡಿ ಬಿಜೆಪಿ ನಾಯಕರು ಪಕ್ಷಕ್ಕೆ ಬರಮಾಡಿಕೊಂಡರು. ಬಳಿಕ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ  ರಾಧಾಮೋಹನ್ ದಾಸ್ ಅಗರವಾಲ್ ಅವರು ಸುಮಲತಾರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದ ಪತ್ರ ನೀಡಿದರು.

    ಸುಮಲತಾ ಅಂಬರೀಶ್ ಜೊತೆಗೆ ದೊಡ್ಡ ಗಣೇಶ್, ಕೊಪ್ಪಳ ಮಾಜಿ ಸಂಸದ ಎಸ್ ಶಿವರಾಮೇಗೌಡ (ಕಾಂಗ್ರೆಸ್ ತೊರೆದು ಬಿಜೆಪಿ ಸೆರ್ಪಡೆ), ಸಚಿವ ಶಿವಾನಂದ ಪಾಟೀಲ್ ಸಂಬಂಧಿ ಹರ್ಷಗೌಡ ಪಾಟೀಲ್, ಹಳಿಯಾಳದ ಶ್ರೀನಿವಾಸ್ ಹಾಗೂ ಹಳಿಯಾಳದ ತುಕಾರಾಂ ಗೌಡ ಪಾಟೀಲ್ ಬಿಜೆಪಿಗೆ ಸೇರಿದರು.

    ಬಿ.ಎಸ್‌ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಆರ್‌ ಅಶೋಕ್, ಡಿ.ವಿ ಸದಾನಂದ ಗೌಡ, ಸಿ.ಟಿ ರವಿ, ಕೆ.ಸಿ ನಾರಾಯಣ ಗೌಡ, ಮುನಿರತ್ನ ಹಾಗೂ ಮಂಡ್ಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಪಕ್ಷ ಸೇರ್ಪಡೆಗೂ ಮುನ್ನ ಸುಮಲತಾ ಅವರು ಕಂಠೀರವ ಸ್ಡುಡಿಯೋದ ಆವರಣದಲ್ಲಿರುವ ಅಂಬರೀಶ್ (Ambareesh) ಅವರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ , ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮೈತ್ರಿ ಕಾರಣದಿಂದಾಗಿ ಕೊನೆಯ ಕ್ಷಣದಲ್ಲಿ ಅವರಿಗೆ ಟಿಕೆಟ್ ಮಿಸ್‌ ಆಯ್ತು. ಆದರೂ ಅವರು ಬಿಜೆಪಿ (BJP) ಸೇರುತ್ತಾರೆ ಎಂದೇ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿತ್ತು.

    ಆ ಬಳಿಕ ಸುಮಲತಾ ಅವರೇ ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಲ್ಲಿ ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಸುಮಲತಾ ಅವರು ಬಿಜೆಪಿ ಪಕ್ಷವನ್ನು ಸೇರಿಕೊಂಡಿದ್ದಾರೆ.

  • ನಾಳೆ ಬಿಜೆಪಿ ಸೇರಲಿದ್ದಾರೆ ನಟಿ ಸುಮಲತಾ ಅಂಬರೀಶ್

    ನಾಳೆ ಬಿಜೆಪಿ ಸೇರಲಿದ್ದಾರೆ ನಟಿ ಸುಮಲತಾ ಅಂಬರೀಶ್

    ಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ (Sumalta Ambarish), ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ (BJP) ಸೇರುತ್ತಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

    ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ.

    ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್  2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು  ಅವರು ಬರೆದಿದ್ದಾರೆ.

     

    ನಿನ್ನೆಯಷ್ಟೇ ಮಂಡ್ಯದಲ್ಲಿ ತಮ್ಮ ಚುನಾವಣೆ ನಿಲುವು ಕುರಿತಂತೆ ಪ್ರಕಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿಕೊಂಡು ತಾವು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಅದರಂತೆ ನಾಳೆ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರುತ್ತಿದ್ದಾರೆ.

  • ಅಮ್ಮ ಯಾವುದೇ ನಿರ್ಧಾರ ತಗೆದುಕೊಂಡರೂ ನಾನು ಬದ್ಧ: ನಟ ದರ್ಶನ್

    ಅಮ್ಮ ಯಾವುದೇ ನಿರ್ಧಾರ ತಗೆದುಕೊಂಡರೂ ನಾನು ಬದ್ಧ: ನಟ ದರ್ಶನ್

    ಟಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರ ಗೆಲುವಿನಲ್ಲಿ ನಟ ದರ್ಶನ್ (Darshan) ಪಾತ್ರ ತುಂಬಾ ಇದೆ. ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಅವರ ಬೆನ್ನೆಲುಬಾಗಿ ನಿಂತರವರು ಯಶ್ ಮತ್ತು ದರ್ಶನ್. ಇದೀಗ ಮತ್ತೆ ಸುಮಲತಾ ಅವರ ಬೆಂಬಲಕ್ಕೆ ನಿಂತಿದ್ದಾರೆ.

    ಈ ಬಾರಿ ಸುಮಲತಾ ಅವರಿಗೆ ಬಿಜೆಪಿ ಟಿಕೆಟ್ ನೀಡಲಿದೆ ಎಂದೇ ನಂಬಲಾಗಿತ್ತು. ಆದರೆ, ಮಂಡ್ಯ  (Mandya) ಕ್ಷೇತ್ರಕ್ಕೆ ಈ ಬಾರಿ ಹೆಚ್.ಡಿ. ಕುಮಾರಸ್ವಾಮಿಗೆ ಟಿಕೆಟ್ ಸಿಕ್ಕಿದೆ. ಹಾಗಾಗಿ ಸುಮಲತಾ ಅವರ ನಡೆಯ ಬಗ್ಗೆ ಇಂದು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ದರ್ಶನ್ ಮಾತನಾಡಿದ್ದಾರೆ.

     

    ಅಮ್ಮ ಯಾವತ್ತಿಗೂ ಅಮ್ಮನೆ. ಅವರು ಹಾಳು ಬಾವಿ ಬೀಳು ಅಂದರೆ ಬೀಳ್ತೀನಿ. ಅವರು ಏನೇ ನಿರ್ಧಾರ ತಗೆದುಕೊಂಡರೂ ನಾನು ಅವರ ಪರವಾಗಿ ನಿಲ್ಲುತ್ತೇನೆ ಎಂದು ಮತ್ತೆ ದರ್ಶನ್ ಹೇಳಿದ್ದಾರೆ. ಈ ಮೂಲಕ ಮತ್ತೆ ಸುಮಲತಾ ಅವರ ಬೆನ್ನಿಗೆ ನಿಂತಿದ್ದಾರೆ.

  • ಸಹಕಾರವೋ? ಪಕ್ಷೇತರ ಸ್ಪರ್ಧೆಯೋ? – ಇಂದು ಸುಮಲತಾ ಅಂಬರೀಶ್ ನಿರ್ಧಾರ ಪ್ರಕಟ

    ಸಹಕಾರವೋ? ಪಕ್ಷೇತರ ಸ್ಪರ್ಧೆಯೋ? – ಇಂದು ಸುಮಲತಾ ಅಂಬರೀಶ್ ನಿರ್ಧಾರ ಪ್ರಕಟ

    ಮಂಡ್ಯ: 2019ರ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸುಮಲತಾ ಗೆದ್ದು ಸಂಸದರಾದರೂ ಕೂಡ ಜೆಡಿಎಸ್‌ನವರು ಸಂಸದೆ ಸುಮಲತಾ (Sumalatha Ambareesh) ಅವರಿಗೆ ಯಾವುದೇ ಸಹಕಾರ ನೀಡದೆ ಪ್ರತಿ ಹಂತದಲ್ಲೂ ಸುಮಲತಾ ವರ್ಸಸ್ ದಳಪತಿಗಳ ನಡುವೆ ವಾಕ್ಸಮರ ನಡೆಯುತ್ತಿತ್ತು. ಸದ್ಯ ಮಂಡ್ಯ (Mandya) ರಾಜಕೀಯ ಪಲ್ಲಟಕ್ಕೆ ಸಾಕ್ಷಿಯಾಗಿದ್ದು, ನಿತ್ಯವೂ ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಬೀಸತೊಡಗಿದೆ.

    2019ರ ಲೋಕಸಭಾ ಚುನಾವಣೆಯಲ್ಲಿ ಇಡೀ ಇಂಡಿಯಾವೇ ಮಂಡ್ಯದತ್ತ ತಿರುಗಿ ನೋಡುವಂತೆ ಮಾಡಿತ್ತು. ಕಾರಣ, ಅಂದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಕ್ಷೇತ್ರದಲ್ಲಿ ಸ್ವಾಭಿಮಾನದ ಕಹಳೆ ಮೊಳಗಿಸಿದ್ದರು. ಅಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವೇ ಮಂಡ್ಯದಲ್ಲಿ ಬೀಡುಬಿಟ್ಟರೂ ಸ್ವಾಭಿಮಾನದ ಅಲೆಯಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ. ಸ್ವಾಭಿಮಾನದ ಸೆರಗೊಡ್ಡಿ ಮತ ಭಿಕ್ಷೆ ಬೇಡಿದ ಪರಿಣಾಮ ಸುಮಲತಾ ಅಂಬರೀಶ್ ಗೆದ್ದು, ಅಂದಿನ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋಲಬೇಕಾಯಿತು. ಇದನ್ನೂ ಓದಿ: Taiwan Earthquake – 7.4 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

    ಅತ್ತ ಸುಮಲತಾ ಅಂಬರೀಶ್ ಸಂಸದರಾದ ನಂತರ ಬಿಜೆಪಿ ಪಕ್ಷಕ್ಕೆ ಬಾಹ್ಯ ಬೆಂಬಲ ಘೋಷಿಸಿದರು. ಇತ್ತ ಕಳೆದ ವಿಧಾನಸಭೆ ಚುನಾವಣೆ ಸೋಲಿನ ನಂತರ ಬಿಜೆಪಿ ಜೊತೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ (JDS) ಪಕ್ಷಕ್ಕೆ ಬಿಟ್ಟುಕೊಡಲಾಗಿದೆ. ಇದು ಸಂಸದೆ ಸುಮಲತಾಗೆ ತೀವ್ರ ನಿರಾಸೆ ಉಂಟು ಮಾಡಿದೆ. ಮಂಡ್ಯ ಬಿಜೆಪಿ ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದ ಸುಮಲತಾಗೆ ಟಿಕೆಟ್ ಕೈತಪ್ಪಿದೆ. ಸಾಲದೆಂಬಂತೆ ತನ್ನ ರಾಜಕೀಯ ಎದುರಾಳಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬೆಂಬಲಿಸಬೇಕಾ? ತಟಸ್ಥವಾಗಿ ಉಳಿಯಬೇಕಾ? ಅಥವಾ ಕಳೆದ ಬಾರಿಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಾ ಎಂಬ ಗೊಂದಲ ಸುಮಲತಾ ಹಾಗೂ ಆಪ್ತರದ್ದಾಗಿದೆ. ಇದರ ನಡುವೆಯೇ ಇಂದು ಮಂಡ್ಯದಲ್ಲಿ ಮಹತ್ವದ ಸಭೆ ಕರೆದಿರೋ ಸುಮಲತಾ, ಇಂದು ಮಂಡ್ಯದಲ್ಲೇ ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ. ಇದನ್ನೂ ಓದಿ: ಸೋನು ಗೌಡ ಕೇಸ್ – ಬಾಲಕಿ ಪೋಷಕರಿಗೆ ಕೌನ್ಸಿಲಿಂಗ್‌ಗೆ ಮುಂದಾದ ರಕ್ಷಣಾ ಆಯೋಗ

    ಇಂದು ಬೆಳಗ್ಗೆ 10.30ಕ್ಕೆ ಮಂಡ್ಯದ ಕಾಳಿಕಾಂಬ ದೇಗುಲದ ಬಳಿ ಸುಮಲತಾ ಬೆಂಬಲಿಗರ ಸಭೆ ಕರೆಯಲಾಗಿದೆ. ಈ ಸಂಬಂಧ ತನ್ನ ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿರೋ ಸುಮಲತಾ ಇಂದಿನ ಸಭೆಗೆ ಬೆಂಬಲಿಗರನ್ನು ವಿಶೇಷವಾಗಿಯೇ ಆಹ್ವಾನಿಸಿದ್ದಾರೆ. ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ. ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತಿಲ್ಲ. ಮಂಡ್ಯಕ್ಕಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ. ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ. ಇಂದು ಬೆಳಿಗ್ಗೆ 10 ಗಂಟೆಗೆ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟಪಡಿಸುವ ಹಾಗೂ ಮಂಡ್ಯ ಲೋಕಸಭಾ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ಧಿಪಡಿಸೋಣ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪಾರಿವಾಳಗಳನ್ನೇ ಬೇಹುಗಾರಿಕೆಗೆ ಬಳಸೋದ್ಯಾಕೆ? 

    ಸುಮಲತಾರ ಈ ಒಂದು ಪೋಸ್ಟ್ ಅವರ ನಡೆ ಏನು ಎಂಬ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಇತ್ತೀಚಿಗಷ್ಟೇ ರಾಜಕೀಯ ವೈರತ್ವ ಮರೆತು ಸುಮಲತಾ ಮನೆಗೆ ಭೇಟಿ ನೀಡಿದ್ದ ಹೆಚ್‌ಡಿ ಕುಮಾರಸ್ವಾಮಿ ತಮ್ಮನ್ನು ಬೆಂಬಲಿಸುವಂತೆ ಕೋರಿದ್ದರು. ಹಳೆಯದನ್ನು ಮರೆತು ಬಿಜೆಪಿ-ಜೆಡಿಎಸ್ ಮೈತ್ರಿ ಧರ್ಮ ಪಾಲನೆ ಮಾಡ್ತಾರಾ? ತಟಸ್ಥರಾಗಿದ್ದು ಜೆಡಿಎಸ್ ವಿರುದ್ಧ ಹಗೆ ಸಾಧಿಸುತ್ತಾರಾ? ಅಥವಾ ಕಳೆದ ಬಾರಿಯಂತೆ ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಭಿಮಾನದ ಕಹಳೆ ಮೊಳಗಿಸುತ್ತಾರಾ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಬಿಟ್‌ ಕಾಯಿನ್‌ ಹಗರಣದ ಆರೋಪಿ ಶ್ರೀಕಿಗೆ ಗನ್‌ಮ್ಯಾನ್‌!

  • ನಾಳೆ ಸುಮಲತಾ ಮಹತ್ವದ ಘೋಷಣೆ: ದರ್ಶನ್, ಅಭಿಷೇಕ್ ಸಾಥ್

    ನಾಳೆ ಸುಮಲತಾ ಮಹತ್ವದ ಘೋಷಣೆ: ದರ್ಶನ್, ಅಭಿಷೇಕ್ ಸಾಥ್

    ಮಂಡ್ಯ (Mandya) ಲೋಕಸಭಾ ಕ್ಷೇತ್ರ ರಾಜ್ಯ ಮಟ್ಟದಲ್ಲಿ ಮಾತ್ರವಲ್ಲ, ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು, ದಾಖಲೆ ಸೃಷ್ಟಿ ಮಾಡಿದ್ದ ನಟಿ ಸುಮಲತಾ ಅಂಬರೀಶ್ (Sumalatha Ambarish), ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಹಾಗಾಗಿ ಅವರ ಮುಂದಿನ ನಡೆ ಏನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಂತೆ ಅವರು ನಾಳೆ ತಮ್ಮ ನಿರ್ಧಾರವನ್ನು ಪ್ರಕಟ ಮಾಡಲಿದ್ದಾರಂತೆ. ಈ ಕುರಿತಂತೆ ಅವರು ಫೇಸ್ ಬುಕ್ ನಲ್ಲಿ ಹೀಗೆ ಬರೆದುಕೊಂಡಿದ್ದಾರೆ.

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.

    ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ. ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.

    ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ  ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ  ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ. ಅಂದು ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್ (Darshan), ಅಭಿಷೇಕ್ ಅಂಬರೀಶ್ ಇರಲಿದ್ದಾರೆ.  ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ.

  • ಸಂಸದೆ ಸುಮಲತಾ ಮಹತ್ವದ ನಿರ್ಧಾರ ಪ್ರಕಟಿಸುವಾಗ ದರ್ಶನ್ ಕೂಡ ಹಾಜರ್

    ಸಂಸದೆ ಸುಮಲತಾ ಮಹತ್ವದ ನಿರ್ಧಾರ ಪ್ರಕಟಿಸುವಾಗ ದರ್ಶನ್ ಕೂಡ ಹಾಜರ್

    ಮಂಡ್ಯ (Mandya) ಲೋಕಸಭಾ ಸಂಸದೆ ಸುಮಲತಾ ಅಂಬರೀಶ್ (Sumalatha Ambarish), ಈ ಬಾರಿಯ ಚುನಾವಣೆಯ 9Election) ಕುರಿತಂತೆ ಏಪ್ರಿಲ್ 3ರಂದು ಮಂಡ್ಯದಲ್ಲೇ ಮಹತ್ವದ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಟ ದರ್ಶನ್ ಕೂಡ ಹಾಜರಿರಲಿದ್ದಾರೆ.  ಕಳೆದ ಚುನಾವಣೆಯಲ್ಲೂ ದರ್ಶನ್ ಮತ್ತು ಯಶ್ ಜೊತೆಗಿದ್ದರು. ಈ ಬಾರಿಯೂ ಜೊತೆಗಿರುವುದಾಗಿ ದರ್ಶನ್ (Darshan) ಘೋಷಣೆ ಮಾಡಿದ್ದರು.

    3ನೇ ತಾರೀಖಿನ ಮಹತ್ವದ ಘೋಷಣೆ ಕುರಿತಂತೆ ಸ್ವತಃ ಸುಮಲತಾ ಅವರೇ ತಮ್ಮ ಅಭಿಮಾನಿಗಳನ್ನು ಮತ್ತು ಹಿತೈಷಿಗಳನ್ನು ಉದ್ದೇಶಿಸಿ ಮಾತನಾಡಿದ್ದರು. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ.

    ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು.

    ಏಪ್ರಿಲ್ 3ನೇ ತಾರೀಖು ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ  ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಮಂಡ್ಯದಲ್ಲಿ ಪ್ರಕಟಿಸುತ್ತೇನೆ. ತಮ್ಮ ಸಲಹೆ ಮತ್ತು ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ ಎಂದು ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದರು.

  • ಇಂದು ಸುಮಲತಾರನ್ನು ಭೇಟಿಯಾಗಲಿದ್ದಾರೆ ಹೆಚ್‌ಡಿಕೆ

    ಇಂದು ಸುಮಲತಾರನ್ನು ಭೇಟಿಯಾಗಲಿದ್ದಾರೆ ಹೆಚ್‌ಡಿಕೆ

    ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಮೈತ್ರಿ ಬೆಂಬಲಿಸುವಂತೆ ಇಂದು ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಸುಮಲತಾ (Sumalatha Ambareesh) ಅವರನ್ನು ಭೇಟಿಯಾಗಲಿದ್ದಾರೆ.

    ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರ ನಡೆದಿತ್ತು. ಇದೀಗ ಬದಲಾದ ರಾಜಕೀಯದಲ್ಲಿ ಸುಮಲತಾ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಇಂದು ಕುಮಾರಸ್ವಾಮಿ ಅವರು ಸುಮಲತಾ ಅವರ ಬೆಂಗಳೂರು ನಿವಾಸಕ್ಕೆ ಮಧ್ಯಾಹ್ನ 3 ಗಂಟೆಗೆ ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ. ಇದನ್ನೂ ಓದಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮ ಬಯಲಿಗೆ ಬಾರದೇ ಇರಲು ಸರ್ಕಾರದಿಂದಲೇ ಕಡತ ಕಳ್ಳತನ : ಬಿಜೆಪಿ ಕಿಡಿ

    ಶನಿವಾರವಷ್ಟೇ ಸಂಸದೆ ಸುಮಲತಾ ಅಂಬರೀಶ್ ಬೆಂಗಳೂರಿನ ನಿವಾಸದಲ್ಲಿ ತಮ್ಮ ಬೆಂಬಲಿಗರ ಸಭೆ ಮಾಡಿದ್ದರು. ಸಭೆಯಲ್ಲಿ ಬೆಂಬಲಿಗರು ಪಕ್ಷೇತರವಾಗಿ ಮತ್ತು ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಒತ್ತಾಸೆ ಮಾಡಿದ್ದರು. ಇದಕ್ಕೆ ಸುಮಲತಾ ಅಂಬರೀಶ್ ನಾನು ನಿಮ್ಮ ಆಸೆಗೆ ವಿರುದ್ಧ ಹೋಗಲ್ಲ. ಯೋಚನೆ ಮಾಡಿ ಏ.3ರಂದು ಮಂಡ್ಯದಲ್ಲಿ ಸಭೆ ಮಾಡಿ ನನ್ನ ನಿರ್ಧಾರ ಹೇಳುತ್ತೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇಂದು ಕುಮಾರಸ್ವಾಮಿ ಅವರು ಸುಮಲತಾ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಲಿದ್ದಾರೆ. ಇದನ್ನೂ ಓದಿ: ಎಂ ಚಂದ್ರಪ್ಪ ಜೊತೆಗಿನ ಎಂಎಲ್‌ಸಿ ರವಿಕುಮಾರ್ ಸಂಧಾನ ಸಭೆ ವಿಫಲ

  • ಪಕ್ಷ ಸೇರುವಂತೆ ಬಿವೈವಿ ಆಹ್ವಾನ – ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ಎಂದ ಸುಮಲತಾ

    ಪಕ್ಷ ಸೇರುವಂತೆ ಬಿವೈವಿ ಆಹ್ವಾನ – ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ಎಂದ ಸುಮಲತಾ

    ಬೆಂಗಳೂರು: ಶನಿವಾರ ಬೆಂಬಲಿಗರ ಸಭೆ ಕರೆದು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಹೇಳಿದ್ದಾರೆ.

    ಇಂದು ಬಿಜೆಪಿ ರಾಜ್ಯಾಧಕ್ಷ ವಿಜಯೇಂದ್ರ (BY Vijayendra) ಮತ್ತು ಪ್ರೀತಂ ಗೌಡ (Pretham Gowda) ಸುಮಲತಾ ನಿವಾಸಕ್ಕೆ ಆಗಮಿಸಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಬೇಕು ಎಂದು ಮನವಿ ಮಾಡಿದರು.  ಇದನ್ನೂ ಓದಿ: ದೋಸ್ತಿಗಳ ಮೊದಲ ಸಮ್ಮಿಲನ ಸಭೆ – ದೇಶದಲ್ಲಿ ಮೋದಿಯಂತ ನಾಯಕರು ಮತ್ತೊಬ್ಬರಿಲ್ಲ ಎಂದ ಹೆಚ್‌ಡಿಡಿ

     

    ಭೇಟಿಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ,  ವಿಜಯೇಂದ್ರ, ಪ್ರೀತಂಗೌಡ ಒಂದು ಗಂಟೆಗಳ ಕಾಲ ಬಂದು ಮಾತನಾಡಿ ಅವರ ಭಾವನೆಯನ್ನು ಹೇಳಿ ಪಕ್ಷಕ್ಕೆ ಸೇರ್ಪಡೆಯಾಗಬೇಕು ಎಂದು ಕೇಳಿದರು. ನಾಳೆ ಬೆಂಬಲಿಗರು ಬರುತ್ತಿದ್ದಾರೆ. ಅವರ ಭಾವನೆಯನ್ನು ಕೇಳಬೇಕಾದ ಕರ್ತವ್ಯವಿದೆ. ನಾನು ಕಾರ್ಯಕರ್ತರ ಭಾವನೆ ಕೇಳಿ ಮಂಡ್ಯದಲ್ಲಿ ನಿಲುವನ್ನು ತಿಳಿಸುತ್ತೇನೆ ಎಂದರು.

    ಬಿಜೆಪಿಯನ್ನು ಬೆಂಬಲಿಸಬೇಕು ಎನ್ನುವುದು ಒಂದು ಕಡೆ. ಬೆಂಬಲಿಗರು ಏನು ಹೇಳುತ್ತಾರೆ ಎನ್ನುವುದನ್ನು ಕೇಳಬೇಕು. ಮಂಡ್ಯಗೆ (Mandya) ಹೋಗಿ ಅವರ ಮುಂದೆಯೇ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕೋಲಾರದಲ್ಲಿ ನಾನು ಹೇಳಿದ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಗೆಲ್ಲಿಸುತ್ತೇನೆ: ಸಚಿವ ಮುನಿಯಪ್ಪ

     

    ಸುಲಭವಾಗಿ ಗೆಲ್ಲುವ ಕ್ಷೇತ್ರದ ಆಫರ್ ಇತ್ತು. ಬೇರೆ ಪಕ್ಷದಿಂದಲೂ ಆಫರ್ ಇತ್ತು. ಆದರೆ ನಾನು ಮಂಡ್ಯ ಬಿಟ್ಟರೇ ಮತ್ತೆಲ್ಲೂ ಹೋಗುತ್ತಿಲ್ಲ. ನನ್ನ ಅಸ್ತಿತ್ವ ಅಂದ್ರೆ ಮಂಡ್ಯ. ಅದನ್ನು ಕಳೆದುಕೊಳ್ಳಲು ಇಷ್ಟವಿಲ್ಲ. ಕುಮಾರಸ್ವಾಮಿ ಅವರಿಗೆ ಟಿಕೆಟ್‌ ನೀಡಿದ್ದಕ್ಕೆ ಮಾತನಾಡುವುದಿಲ್ಲ ಎಂದು ತಿಳಿಸಿದರು.

    ಭೇಟಿ ವೇಳೆ ಏನಾದ್ರೂ ಆಫರ್‌ ನೀಡಿದ್ರಾ ಎಂಬ ಪ್ರಶ್ನೆಗೆ, ಬೇರೆ ಏನು ಅಫರ್ ಕೊಟ್ಟಿಲ್ಲ. ಆ ರೀತಿ ಕೇಳಿ ಪಡೆಯುವ ಅಭ್ಯಾಸ ಇಲ್ಲ. ಇದ್ದಿದ್ದರೆ ನಾವು ಮುಂದೆ ಇರುತ್ತಿರಲಿಲ್ಲ ಎಂದು ಸುಮಲತಾ ಹೇಳಿದರು.

  • ಸಂಸದೆ ಸುಮಲತಾರನ್ನ ಭೇಟಿ ಮಾಡಿದ ವಿಜಯೇಂದ್ರ

    ಸಂಸದೆ ಸುಮಲತಾರನ್ನ ಭೇಟಿ ಮಾಡಿದ ವಿಜಯೇಂದ್ರ

    ರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಅವರು ಮಂಡ್ಯದ ಸಂಸದೆ ಸುಮಲತಾರನ್ನು (Sumalatha Ambarish) ಇಂದು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ.

    ಈ ಬಾರಿ ಬಿಜೆಪಿಯಿಂದ ಸುಮಲತಾ ಅವರಿಗೆ ಮಂಡ್ಯ (Mandya) ಟಿಕೆಟ್ (Ticket) ಸಿಗಲಿದೆ ಎಂದು ಹೇಳಲಾಗಿತ್ತು. ಸುಮಲತಾ ಅವರು ಕೂಡ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದರೆ, ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ಸಿಗಲಿಲ್ಲ.

    ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಆಗುತ್ತಿದ್ದಂತೆಯೇ ತಟಸ್ಥ ನಿಲುವನ್ನು ಸುಮಲತಾ ತಾಳಿದರು. ಯಾವುದೇ ಸಭೆಯಲ್ಲೂ ಅವರು ಭಾಗಿಯಾಗಿರಲಿಲ್ಲ. ತಮ್ಮ ಬೆಂಬಲಿಗರ ಸಭೆ ಕರೆದು, ತೀರ್ಮಾನ ತಗೆದುಕೊಳ್ಳೋದಾಗಿ ತಿಳಿಸಿದ್ದರು. ನಾಳೆ ಅವರು ಬೆಂಬಲಿಗರ ಸಭೆ ಕರೆದಿದ್ದಾರೆ. ಅದಕ್ಕೂ ಮುನ್ನ ವಿಜಯೇಂದ್ರ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

     

    ಮಂಡ್ಯ ಟಿಕೆಟ್ ಜೆಡಿಎಸ್ ಪಾಲಾಗಿದ್ದರಿಂದ, ಸುಮಲತಾ ಅವರನ್ನು ಭೇಟಿ ಮಾಡುತ್ತೀರಾ ಎಂದು ವಿಜಯೇಂದ್ರ ಅವರಿಗೆ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಮಾಧ್ಯಮಗಳು ಪದೇ ಪದೇ ಪ್ರಶ್ನೆ ಮಾಡುತ್ತಿದ್ದವು. ಮೊದಲ ಭಾಗಿವಾಗಿ ವಿಜಯೇಂದ್ರ ಭೇಟಿ ಮಾಡಿದ್ದಾರೆ.

  • ಬುಲಾವ್ ಬೆನ್ನಲ್ಲೇ ದಿಢೀರ್ ದೆಹಲಿಗೆ ತೆರಳಿದ ಸಂಸದೆ ಸುಮಲತಾ

    ಬುಲಾವ್ ಬೆನ್ನಲ್ಲೇ ದಿಢೀರ್ ದೆಹಲಿಗೆ ತೆರಳಿದ ಸಂಸದೆ ಸುಮಲತಾ

    ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಅವರನ್ನು ಶನಿವಾರ ಭೇಟಿಯಾದ ಬೆನ್ನಲ್ಲಿಯೇ ಇಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ದೆಹಲಿಗೆ ತೆರಳಿದ್ದಾರೆ.

    ಈ ಬಾರಿಯ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್‍ಗೆ (JDS) ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡುವುದು ಫಿಕ್ಸ್ ಆಗಿದೆ ಎನ್ನಲಾಗುತ್ತಿದೆ. ಹೀಗಾಗಿ ಮಂಡ್ಯದಲ್ಲಿ ಸ್ಪರ್ಧೆಗೆ ದಳಪತಿಗಳ ಸಿದ್ಧತೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಸುಮಲತಾಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.

    ಕೂಡಲೇ ದೆಹಲಿಗೆ ಬರಬೇಕೆಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲಿಯೇ ಇಂದು ಮಧ್ಯಾಹ್ನವೇ ಸುಮಲತಾ ಅವರು ರಾಷ್ಟ್ರರಾಜಧಾನಿಗೆ ಹೋಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (AmitShah) ಹಾಗೂ ಜೆಪಿ ನಡ್ಡಾ (JP Nadda) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

    ಒಂದು ವೇಳೆ ಮಂಡ್ಯ ಟಿಕೆಟ್ ಕೈ ತಪ್ಪಿದ್ರೆ ಸುಮಲತಾ ನಡೆಯೇನು..?, ಪಕ್ಷೇತರರಾಗಿ ಸ್ಪರ್ಧಿಸ್ತಾರಾ…? ಕಣದಿಂದ ಸರಿಯುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಒಟ್ಟಿನಲ್ಲಿ ಸುಮಲತಾ ಅವರ ಮುಂದಿನ ನಡೆ ತೀವ್ರ ಕುತೂಹಲ ಹುಟ್ಟಿಸಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಟಿಕೆಟ್ ಫೈಟ್- ಹೊರಗಿನವರಿಗೆ ಟಿಕೆಟ್ ಬೇಡವೆಂದ್ರು ವಿಶ್ವನಾಥ್