Tag: ಸುಮಲತಾ ಅಂಬರೀಶ್

  • ಸುಮಲತಾ ವಿರುದ್ಧ ಸಾರಾ ಮಹೇಶ್ ವಾಗ್ದಾಳಿ

    ಸುಮಲತಾ ವಿರುದ್ಧ ಸಾರಾ ಮಹೇಶ್ ವಾಗ್ದಾಳಿ

    ಮೈಸೂರು: ಕಾಂಗ್ರೆಸ್‍ಗೆ ಎಚ್ಚರಿಕೆ ನೀಡಿದ ಸಚಿವ ಸಾರಾ ಮಹೇಶ್ ಸುಮಲತಾ ಅಂಬರೀಶ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ನಿಖೀಲ್ ಪರ ಪ್ರಚಾರ ಸಮಾರಂಭ ಉದ್ದೇಶಿಸಿ ಮಾತನಾಡಿದ ಸಚಿವರು, ಅಂಬರೀಶ್ ನನ್ನ ತಲೆಗೆ ರಾಜಕೀಯ ಸಾಕು ಎಂದಿದ್ದರು. ನಿಖಿಲ್ ಮತ್ತು ಅಭಿಷೇಕ್ ಆತ್ಮೀಯ ಸ್ನೇಹಿತರು ಎಂದರು.

    ನಿಖಿಲ್‍ರನ್ನು ಸುಮಲತಾ ತಮ್ಮ ಮಗ ಎಂದು ಹೇಳಿದ್ರು. ಮಗನಿಗೆ ಸುಮಲತಾ ಅವರು ಆಶೀರ್ವಾದ ಮಾಡಬೇಕಿತ್ತು. ಆದರೆ ಸುಮಲತಾ ಅವರು ನಿಖಿಲ್ ವಿರುದ್ಧ ಪ್ರಹಾರ ಮಾಡಲು ನಿಂತಿದ್ದಾರೆ. ಎಲ್ಲರೂ ಅಭಿಷೇಕ್ ಸಿನಿಮಾ ನೋಡಿ, ಬೇಕಾದ್ರೆ ಹೆಚ್ಚಿನ ಹಣ ಕೊಟ್ಟು ಬ್ಲಾಕ್ ಟಿಕೆಟ್ ಪಡೆದು ಸಿನಿಮಾ ನೋಡಿ. ಆದರೆ ಕುಮಾರಣ್ಣನ ಮಗ ರಾಜ್ಯದ ನೇತಾರನಾಗಬೇಕು ಎಂದಿದ್ದಾರೆ.

    ಕಾಂಗ್ರೆಸ್ ಗೆ ಎಚ್ಚರಿಕೆ:
    ಮೈತ್ರಿ ಧರ್ಮದ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡಿಕೊಂಡಿರುವ ದೋಸ್ತಿ ಪಕ್ಷಗಳ ನಡುವೆ ಹೊಂದಾಣಿಕೆ ಕಷ್ಟವಾಗುತ್ತಿದ್ಯಾ ಎಂಬ ಅನುಮಾನ ಮೂಡಿದ್ದು, ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಕೂಡ ಪ್ರತಿಧ್ವನಿಸಲಿದೆ ಎಂದು ಸಾರಾ ಮಹೇಶ್ ಪರೋಕ್ಷವಾಗಿ ಕಾಂಗ್ರೆಸ್ಸಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

    ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ, ನಮ್ಮ ಅಂತರ ಇದ್ದೆ ಇರುತ್ತದೆ. ಮೈತ್ರಿಯಾಗಿ ಸರ್ಕಾರ ನಡೆಸುತ್ತಿದ್ದೇವೆ. ಆದರೆ ಕಾಂಗ್ರೆಸ್ ಸ್ನೇಹಿತರೇ ನೀವು ಮಂಡ್ಯದಲ್ಲಿ ನಮ್ಮನ್ನು ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ನಮ್ಮನ್ನ ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಪ್ರತಿಧ್ವನಿಸಲಿದೆ – ಸಾರಾ ಮಹೇಶ್ ಎಚ್ಚರಿಕೆ

    ಸುಮಲತಾ, ನಿಖಿಲ್ ಪ್ರಚಾರ:
    ಮಂಡ್ಯ ಕುರುಕ್ಷೇತ್ರದಲ್ಲಿ ನಾನಾ ನೀನಾ ಅಂತ ಜಿದ್ದಿಗೆ ಬಿದ್ದಿರುವ ಸುಮಲತಾ ಹಾಗೂ ನಿಖಿಲ್‍ರ ಅಬ್ಬರದ ಪ್ರಚಾರ ಇಂದು ಮುಂದುವರಿಯಲಿದೆ. ಸುಮಲತಾ ಅಂಬರೀಷ್ ಮೈಸೂರು ಜಿಲ್ಲೆ ಕೆಆರ್ ನಗರ ಭಾಗದಲ್ಲಿ ಇಂದು ಪ್ರಚಾರ ನಡೆಸಲಿದ್ದಾರೆ. ಹೀಗಾಗಿ ಬಿಎಸ್‍ವೈ ಭೇಟಿಯನ್ನು ಸುಮಲತಾ ಮುಂದೂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯಲ್ಲಿ ಸಂಚರಿಸಿ ಮತಬೇಟೆಯಾಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುತೂಹಲ ಮೂಡಿಸಿದೆ ಸುಮಲತಾರ ಎಸ್.ಎಂ.ಕೆ ಭೇಟಿ

    ಕುತೂಹಲ ಮೂಡಿಸಿದೆ ಸುಮಲತಾರ ಎಸ್.ಎಂ.ಕೆ ಭೇಟಿ

    ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವೇರುತ್ತಿದೆ. ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆಯೇ ರಾಜಕೀಯ ನಾಯಕರು ಟಿಕೆಟ್ ಹಂಚಿಕೆ, ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಸುಮಲತಾ ಅಂಬರೀಶ್ ಅವರು ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅವರನ್ನು ಭೇಟಿಯಾಗುವ ಮೂಲಕ ಕುತೂಹಲ ಹುಟ್ಟಿಸಿದ್ದಾರೆ.

    ಸುಮಲತಾ ಅವರು ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಎಸ್‍ಎಂಕೆ ನಿವಾಸಕ್ಕೆ ಭೇಟಿ ಮಾಡಿ ಕೃಷ್ಣ ಜೊತೆ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಇದೀಗ ಸುಮಲತಾಗೆ ಮಾಜಿ ಮುಖ್ಯಮಂತ್ರಿ ಬೆಂಬಲ ಕೊಡುತ್ತಾರಾ ಎಂಬ ಪ್ರಶ್ನೆ ಮೂಡಿದೆ.

    ಸುಮಲತಾ, ಮಂಡ್ಯ ಲೋಕಸಭಾ ಕ್ಷೇತ್ರದ ಸಂಭಾವ್ಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಕೃಷ್ಣ ಅವರನ್ನು ಭೇಟಿ ಮಾಡಿ, ಮಂಡ್ಯ ಚುನಾವಣೆಯಲ್ಲಿ ತನಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಅಂಬರೀಶ್ ಅವರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ನಾನು ಕೂಡ ಒಬ್ಬನಾಗಿದ್ದೆ. ಆದ್ರೆ ಆ ಬಳಿಕ ಅವರ ದಾರಿ ಬೇರೆಯಾಗಿತ್ತು ಎಂದು ಈ ಹಿಂದೆ ಕೃಷ್ಣ ಅವರು ಹೇಳಿದ್ದರು. ಹೀಗಾಗಿ ಇಂದಿನ ಭೇಟಿಯಲ್ಲಿ ಸುಮಲತಾ ಅವರನ್ನು ಮನವೊಲಿಸುತ್ತಾರಾ ಅಥವಾ ಪಕ್ಷೇತರವಾಗಿ ನಿಂತಾಗ ಅವರಿಗೆ ಬೆಂಬಲ ಕೊಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

    ಬಿಜೆಪಿ ಸೇರ್ಪಡೆ ಬಗ್ಗೆ ಸುಮಲತಾ ಇನ್ನೂ ಕೂಡ ಯಾವುದೇ ನಿರ್ಧಾರ ಮಾಡಿಲ್ಲ. ಇತ್ತ ಇನ್ನೆರಡು ದಿನಗಳಲ್ಲಿ ಮಂಡ್ಯಕ್ಕೆ ಸಂಬಂಧಿಸಿದಂತೆ ನನ್ನ ನಿಲುವನ್ನು ಹೇಳುತ್ತೇನೆ ಎಂದು ಎಸ್‍ಎಂಕೆ ಹೇಳಿದ್ದು, ಇಂದು ಸಂಜೆ ಅವರ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.

    ಮಂಡ್ಯದ ರಾಜಕೀಯ ತಂತ್ರವನ್ನು ಎಸ್ ಎಂ ಕೃಷ್ಣ ಬಲ್ಲವರಾಗಿದ್ದಾರೆ. ಸುಮಲತಾ ಮಾರ್ಚ್ 18ರಂದು ಪಕ್ಷೇತರವಾಗಿ ಕಣಕ್ಕೆ ಇಳಿಯುತ್ತಾರಾ ಇಲ್ವಾ ಎಂಬುದರ ಬಗ್ಗೆ ತಿಳಿಯಬೇಕಷ್ಟೆ. ಆದ್ರೆ ಈ ಬೆನ್ನಲ್ಲೇ ಇದೀಗ ಎಸ್.ಎಂಕೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು ಕುತೂಹಲಕ್ಕೀಡು ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿಖಿಲ್ ಸ್ಪರ್ಧೆ ಬೆನ್ನಲ್ಲೇ ಮಂಡ್ಯದಲ್ಲಿ ಬೆಟ್ಟಿಂಗ್ ವಾರ್..!

    ನಿಖಿಲ್ ಸ್ಪರ್ಧೆ ಬೆನ್ನಲ್ಲೇ ಮಂಡ್ಯದಲ್ಲಿ ಬೆಟ್ಟಿಂಗ್ ವಾರ್..!

    – ನಿಖಿಲ್ ಗೆಲ್ತಾರೆ 5 ಲಕ್ಷ ಬೆಟ್

    ಮಂಡ್ಯ; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದ್ದು, ಯಾರು ಗೆಲ್ತಾರೆ..? ಯಾರು ಸೋಲ್ತಾರೆ..? ಅನ್ನೋ ಲೆಕ್ಕಾಚಾರದ ಸಮರ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

    ಹೌದು. ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಟ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಫೈನಲ್ ಆಗಿದೆ. ಈ ಬೆನ್ನಲ್ಲೇ ಚೇತನ್ ಗೌಡ ಹಾಗೂ ನಟೇಶ್ ಗೌಡ ಎಂಬಿಬ್ಬರ ಮಧ್ಯೆ 5 ಲಕ್ಷದ ಬೆಟ್ಟಿಂಗ್ ವಾರ್ ಆರಂಭವಾಗಿದೆ.

    ಪೇಸ್ ಬುಕ್ ನಲ್ಲಿ ಚೇತನ್ ಆರ್ .ಗೌಡ, ನಿಖಿಲ್ ಸೋಲ್ತಾರೆ ಎಂದು ಪೋಸ್ಟ್ ಶೇರ್ ಮಾಡಿದ್ದರು. ಈ ಪೋಸ್ಟ್ ಗೆ 5 ಲಕ್ಷ ಬೆಟ್ ಕಟ್ತೀನಿ.. ನಿಖಿಲ್ ಗೆದ್ದೇ ಗೆಲ್ತಾರೆ. ಧಮ್ ಇದ್ದರೆ ಕಳಿಸು ಎಂದು ನಟೇಶ್ ಗೌಡ ಸವಾಲ್ ಹಾಕಿದ್ದಾರೆ.

    ಇತ್ತ ಸುಮಲತಾ ಅಂಬರೀಶ್ ಕೂಡ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. “ಅಂಬರೀಶ್‍ರನ್ನು ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುವ ಮಂಡ್ಯದ ಪ್ರತಿಯೊಬ್ಬರು ಅಂಬರೀಶ್ ಬಂಧುಗಳು. ಏಕೆಂದರೆ ಅಂಬರೀಶ್‍ ಅವರಲ್ಲಿ ಇರುವ ಗುಣವೇ ಮಂಡ್ಯದ ಜನರಲ್ಲಿ ಇದೆ. ಮಂಡ್ಯದ ಮಣ್ಣಿನ ಗುಣದಲ್ಲಿ ಕಪಟವೇ ಇಲ್ಲ. ಸುಳ್ಳುಗಳಿಲ್ಲ. ಸಮಯಕ್ಕೆ ತಕ್ಕ ಹಾಗೆ ಮಾತನಾಡುವ ಜಾಯಮಾನ ಮಂಡ್ಯದ ಮಣ್ಣಿನಲ್ಲಿ ಇಲ್ಲ. ಮಂಡ್ಯದ ಮಣ್ಣು ಬರಿ ಮುಗ್ಧತೆಯಿಂದ ಕೂಡಿಲ್ಲ. ಅದು ಪ್ರಾಮಾಣಿಕತೆಯಿಂದಲೂ ಕೂಡಿದೆ. ಆ ಪ್ರಾಮಾಣಿಕತೆಗೆ ಮೋಸವೆಸಗುವ ರಾಜಕೀಯ ನನಗೆ ಬೇಕಾಗಿಲ್ಲ. ನನ್ನದು ಪ್ರಾಮಾಣಿಕವಾದ, ಅಂಬರೀಶ್ ಪಾಲಿಸುತ್ತಿದ್ದ ರಾಜಕೀಯ ಮಂಡ್ಯದ ಜನರ ರಾಜಕೀಯ” ಎಂದು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

    ಮತ್ತೊಂದು ಪೋಸ್ಟ್ ನಲ್ಲಿ ಸುಮಲತಾ ಅವರು, “ಅಂಬರೀಶ್ ರಾಜಕೀಯ ನಾಟಕವಿಲ್ಲದ, ಸುಳ್ಳು ಭರವಸೆಗಳಿಲ್ಲದ, ಒಳಗೊಂದು ಹೊರಗೊಂದು ಮಾತುಗಳಿಲ್ಲದ, ಜನರಿಂದ ಕೆಲಸವಾಗಬೇಕು ಎಂದಾಗ ಜನರೆದುರು ಕಪಟ ನಾಟಕವಾಡಿ ಮೋಸಗೊಳಿಸದ, ನೇರಾನೇರ ಇದ್ದದ್ದು ಇದ್ದ ಹಾಗೆ ಹೇಳುವ ದಿಟ್ಟ ನಡೆಯ ರಾಜಕೀಯ ಅಂಬರೀಶ್ ರಾಜಕೀಯ. ಆ ರಾಜಕೀಯವೇ ಅತ್ಯುತ್ತಮ. ಅಂಬರೀಶ್ ರಾಜಕೀಯವೇ ನಮ್ಮದಾಗಲಿ ಎಂದು ಸುಮಲತಾ ಜೆಡಿಎಸ್ ವರಿಷ್ಠರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜೆಡಿಎಸ್ ನಾಯಕರಿಗೆ ಸುಮಲತಾ ತಿರುಗೇಟು

    ಜೆಡಿಎಸ್ ನಾಯಕರಿಗೆ ಸುಮಲತಾ ತಿರುಗೇಟು

    ಮಂಡ್ಯ: ಇಲ್ಲಿನ ಮಣ್ಣು ಬರೀ ಮುಗ್ಧತೆಯಿಂದ ಕೂಡಿಲ್ಲ. ಅದು ಪ್ರಾಮಾಣಿಕತೆಯಿಂದಲೂ ಕೂಡಿದೆ ಎಂದು ನಟಿ ಸುಮಲತಾ ಅಂಬರೀಶ್ ಜೆಡಿಎಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.

    ಸುಮಲತಾ ಅಂಬರೀಶ್ ಅವರು ತಮ್ಮ ಫೇಸ್‍ಬುಕ್ ಪೇಜ್‍ನಲ್ಲಿ, “ಅಂಬರೀಶ್‍ರನ್ನು ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುವ ಮಂಡ್ಯದ ಪ್ರತಿಯೊಬ್ಬರು ಅಂಬರೀಶ್ ಬಂಧುಗಳು. ಏಕೆಂದರೆ ಅಂಬರೀಶ್‍ರಲ್ಲಿ ಇರುವ ಗುಣವೇ ಮಂಡ್ಯದ ಜನರಲ್ಲಿ ಇದೆ. ಮಂಡ್ಯದ ಮಣ್ಣಿನ ಗುಣದಲ್ಲಿ ಕಪಟವೇ ಇಲ್ಲ. ಸುಳ್ಳುಗಳಿಲ್ಲ. ಸಮಯಕ್ಕೆ ತಕ್ಕ ಹಾಗೆ ಮಾತನಾಡುವ ಜಾಯಮಾನ ಮಂಡ್ಯದ ಮಣ್ಣಿನಲ್ಲಿ ಇಲ್ಲ. ಮಂಡ್ಯದ ಮಣ್ಣು ಬರಿ ಮುಗ್ಧತೆಯಿಂದ ಕೂಡಿಲ್ಲ. ಅದು ಪ್ರಾಮಾಣಿಕತೆಯಿಂದಲೂ ಕೂಡಿದೆ. ಆ ಪ್ರಾಮಾಣಿಕತೆಗೆ ಮೋಸವೆಸಗುವ ರಾಜಕೀಯ ನನಗೆ ಬೇಕಾಗಿಲ್ಲ. ನನ್ನದು ಪ್ರಾಮಾಣಿಕವಾದ, ಅಂಬರೀಶ್ ಪಾಲಿಸುತ್ತಿದ್ದ ರಾಜಕೀಯ ಮಂಡ್ಯದ ಜನರ ರಾಜಕೀಯ” ಎಂದು ಪೋಸ್ಟ್ ಹಾಕಿದ್ದಾರೆ.

    ಮತ್ತೊಂದು ಪೋಸ್ಟ್ ನಲ್ಲಿ ಸುಮಲತಾ ಅವರು, “ಅಂಬರೀಶ್ ರಾಜಕೀಯ ನಾಟಕವಿಲ್ಲದ, ಸುಳ್ಳು ಭರವಸೆಗಳಿಲ್ಲದ, ಒಳಗೊಂದು ಹೊರಗೊಂದು ಮಾತುಗಳಿಲ್ಲದ, ಜನರಿಂದ ಕೆಲಸವಾಗಬೇಕು ಎಂದಾಗ ಜನರೆದುರು ಕಪಟ ನಾಟಕವಾಡಿ ಮೋಸಗೊಳಿಸದ, ನೇರಾನೇರ ಇದ್ದದ್ದು ಇದ್ದ ಹಾಗೆ ಹೇಳುವ ದಿಟ್ಟ ನಡೆಯ ರಾಜಕೀಯ ಅಂಬರೀಶ್ ರಾಜಕೀಯ. ಆ ರಾಜಕೀಯವೇ ಅತ್ಯುತ್ತಮ. ಅಂಬರೀಶ್ ರಾಜಕೀಯವೇ ನಮ್ಮದಾಗಲಿ ಎಂದು ಸುಮಲತಾ ಜೆಡಿಎಸ್ ವರಿಷ್ಠರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ಯಾಂಡಲ್‍ವುಡ್‍ನ ಯಾರನ್ನೂ ದುರುಪಯೋಗಪಡಿಸಿಕೊಳ್ಳಲ್ಲ: ಸುಮಲತಾಗೆ ನಿಖಿಲ್ ಟಾಂಗ್

    ಸ್ಯಾಂಡಲ್‍ವುಡ್‍ನ ಯಾರನ್ನೂ ದುರುಪಯೋಗಪಡಿಸಿಕೊಳ್ಳಲ್ಲ: ಸುಮಲತಾಗೆ ನಿಖಿಲ್ ಟಾಂಗ್

    – ನಮ್ಮ ಕಾರ್ಯಕರ್ತರೇ ನನ್ನ ಸೈನಿಕರು

    ಮಂಡ್ಯ: ಸುಮಲತಾ ಅಂಬರೀಶ್ ಅವರ ಬೆಂಬಲಕ್ಕೆ ಸ್ಯಾಂಡಲ್‍ವುಡ್‍ನ ಅನೇಕ ನಟ, ನಟಿಯರು, ನಿರ್ಮಾಪಕರು ನಿಂತಿದ್ದಾರೆ. ಹೀಗಾಗಿ ಫಿಲ್ಮಿ ಸ್ಟೈಲ್‍ನಲ್ಲಿಯೇ ನಿಖಿಲ್ ಕುಮಾರಸ್ವಾಮಿ, ಸುಮತಲಾ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ಸ್ಯಾಂಡಲ್‍ವುಡ್‍ನಲ್ಲಿ ಯಾರು ನನ್ನ ಪರ ಪ್ರಚಾರಕ್ಕೆ ಬರಲ್ಲ. ಅಷ್ಟೇ ಅಲ್ಲದೆ ನಾನು ಸ್ಯಾಂಡಲ್‍ವುಡ್‍ನ ಯಾರನ್ನೂ ದುರುಪಯೋಗ ಪಡಿಸಿಕೊಳ್ಳಲ್ಲ. ನಮ್ಮ ಕಾರ್ಯಕರ್ತರೇ ನನ್ನ ಸೈನಿಕರು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

    ಸುಮಲತಾ ಅವರ ಪರ ಪ್ರಚಾರ ಮಾಡುವುದಾಗಿ ನಟ ದರ್ಶನ್ ಬಹಿರಂಗಪಡಿಸಿದ್ದಾರೆ. ಜೊತೆಗೆ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಇಡೀ ಸ್ಯಾಂಡಲ್‍ವುಡ್ ಸುಮಲತಾ ಪರ ಪ್ರಚಾರ ಮಾಡಲು ಸಿದ್ಧವಾಗಿದೆ. ನನಗೆ ಟಿಕೆಟ್ ನೀಡುವ ಕುರಿತು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಮಂಡ್ಯದಲ್ಲಿ ನಾಳೆ ಘೋಷಣೆ ಮಾಡಲಿದ್ದಾರೆ ಎಂದು ನಿಖಿಲ್ ತಿಳಿಸಿದರು.

    ಅಭಿಷೇಕ್ ನನ್ನ ಒಳ್ಳೆಯ ಸ್ನೇಹಿತ. ರಾಜಕಾರಣದಿಂದ ನಮ್ಮಿಬ್ಬರ ಸಂಬಂಧ ಹಾಳಾಗಲು ನಾನು ಅವಕಾಶ ಮಾಡಿಕೊಡುವುದಿಲ್ಲ. ಅಭಿಷೇಕ್ ಹಾಗೂ ನಾನು ಇಬ್ಬರು ಬ್ಯುಸಿ ಇದ್ದೇವೆ. ಇತ್ತೀಚೆಗೆ ಇಬ್ಬರು ಸೇರಿ ಮಾತನಾಡಿಲ್ಲ. ಲೋಕಸಭಾ ಚುನಾವಣೆಯ ನಂತರ ಫ್ರೀ ಮಾಡಿಕೊಂಡು ಮಾತನಾಡುತ್ತೇವೆ ಎಂದು ತಿಳಿಸಿದರು.

    ಮಂಡ್ಯದಿಂದಲೇ ಸ್ಪರ್ಧೆ ಮಾಡುತ್ತೇನೆ. ದೇವರ ಮೇಲೆ ನಮ್ಮ ಕುಟುಂಬಕ್ಕೆ ಹಿಂದಿನಿಂದಲೂ ನಂಬಿಕೆ. ದೇವರ ಅನುಗ್ರಹದಿಂದ ನಮ್ಮ ಕುಟುಂಬಕ್ಕೆ ಒಳ್ಳೆಯದಾಗಿದೆ. ಹೀಗಾಗಿ ದೇವರಿಗೆ ಪೂಜೆ ಮಾಡಿ ಇಂದಿನಿಂದ ಪ್ರಚಾರ ಆರಂಭಿಸಿದ್ದೇನೆ ಎಂದು ಹೇಳಿದರು.

    ಟೆಂಪಲ್ ರನ್: ಮದ್ದೂರು ತಾಲ್ಲೂಕಿನ ಗೊಲ್ಲರದೊಡ್ಡಿ ಗ್ರಾಮದ ಜುಂಜಪ್ಪ ಹಾಗೂ ಚಿಕ್ಕಂಕನಹಳ್ಳಿ ಗ್ರಾಮದ ನಂದಿ ಬಸವೇಶ್ವರ ದೇವಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೊಲ್ಲರದೊಡ್ಡಿ ಗ್ರಾಮದ ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಮದ್ದೂರು ಭಾಗದ ಜನ ಯಾವುದೇ ಕಾರ್ಯ ನೆರವೇರಿಸುವಾಗ ಮೊದಲು ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮರಸ್ವಾಮಿ ಅವರು ಕೂಡ ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮಂಡ್ಯ ಚುನಾವಣೆ – ಸ್ಪಷ್ಟನೆಯೊಂದಿಗೆ ವದಂತಿಗಳಿಗೆ ತೆರೆ ಎಳೆದ ಸುಮಲತಾ

    ಮಂಡ್ಯ ಚುನಾವಣೆ – ಸ್ಪಷ್ಟನೆಯೊಂದಿಗೆ ವದಂತಿಗಳಿಗೆ ತೆರೆ ಎಳೆದ ಸುಮಲತಾ

    ಮಂಡ್ಯ: ಸುಮಲತಾ ಅವರು ಲೋಕಸಭಾ ಚುನವಾಣೆ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ವಂದತಿ ಹಬ್ಬಿತ್ತು. ಇದಕ್ಕೆ ಸ್ವತಃ ಸುಮಲತಾ ಅವರೆ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

    ಸುಮಲತಾ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇನ್ನೂ ಮೂರು-ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆಯ ಬಗ್ಗೆ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೆ ಸಾಮಾಜಿಕ ಜಾಲತಾಣಗಳಲ್ಲಿ ಸುಮಲತಾ ಅವರು ಲೋಕಸಭಾ ಚುನವಣಾ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ವದಂತಿ ಹರಿದಾಡುತಿತ್ತು. ಈ ಹಿನ್ನೆಲೆಯಲ್ಲಿ ಅವರು ಫೇಸ್‍ಬುಕ್ ನಲ್ಲಿ ಒಂದು ಪೋಸ್ಟ್ ಹಾಕಿ ಸ್ಪಷ್ಟನೆ ಕೊಟ್ಟಿದ್ದಾರೆ.

    ಫೇಸ್‍ಬುಕ್ ಪೋಸ್ಟ್:
    ಮಂಡ್ಯ ಜನರಲ್ಲಿ ಒಂದು ಮನವಿ ಇದೆ. ಮಂಡ್ಯ ಜನರ ಋಣ ತೀರಿಸಲು ನಾನು ಬದ್ಧಳಾಗಿರುವೆ. ಆದರೆ ಮಂಡ್ಯ ಜನರ ದಿಕ್ಕು ತಪ್ಪಿಸಲು ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕುತಂತ್ರ ಮಾಡುತ್ತಿದ್ದಾರೆ. ಇಂದು ಮುಂದೆ ಯಾವುದೇ ಊಹಾಪೋಹದ ಗಾಳಿ ಸುದ್ದಿಗಳಿಗೆ ಕಿವಿಕೊಡಬೇಡಿ. ನಿಮ್ಮ ಬೆಂಬಲ ಮತ್ತು ಆಶೀರ್ವಾದ ಸದಾ ನನ್ನೊಂದಿಗಿರಲಿ ಎಂದು ಈ ಮೂಲಕ ನಾನು ನಿಮ್ಮನ್ನು ಕೇಳಿ ಕೊಳ್ಳುತ್ತಿದ್ದೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.

    ನಿಮ್ಮ ಪ್ರೀತಿ, ಕಾಳಜಿ, ಒತ್ತಾಸೆ, ಬೆಂಬಲಗಳೇ ನಮಗೆ ಶ್ರೀರಕ್ಷೆ. ಅಂಬಿ ಅಮರ, ಇಂತಿ ನಿಮ್ಮ ಸುಮಲತಾ ಅಂಬರೀಶ್ ಎಂಬ ಪೋಸ್ಟ್ ಹಾಕುವ ಮೂಲಕ ತಮ್ಮ ಅಧಿಕೃತ ಫೇಸ್‍ಬುಕ್ ಪೇಜ್‍ನಲ್ಲಿ ಸುಮಲತಾ ಅವರು ಅಸಮಧಾನವನ್ನು ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯ ರಾಜಕೀಯಕ್ಕೆ ಎಸ್.ಎಂ ಕೃಷ್ಣ ಎಂಟ್ರಿ..!

    ಮಂಡ್ಯ ರಾಜಕೀಯಕ್ಕೆ ಎಸ್.ಎಂ ಕೃಷ್ಣ ಎಂಟ್ರಿ..!

    ಬೆಂಗಳೂರು: ಈ ಬಾರಿಯ ಲೋಕಸಮರದ ಸೆಂಟರ್ ಆಫ್ ಅಟ್ರಾಕ್ಷನ್ ಆಗಿರುವ ಮಂಡ್ಯ ಕ್ಷೇತ್ರದಲ್ಲಿ ನಟಿ ಸುಮಲತಾ ಅಂಬರೀಶ್ ಅವರನ್ನು ಮನವೊಲಿಸಲು ಬಿಜೆಪಿ ರಣತಂತ್ರ ಹೂಡುತ್ತಿದೆ.

    ಸುಮಲತಾ ವಿರುದ್ಧ ಬಿಜೆಪಿ ಸ್ಪರ್ಧೆ ಮಾಡುವುದು, ಬಿಡುವುದು ಬೇರೆ ವಿಚಾರವಾಗಿದೆ. ಆದ್ರೆ ಬಿಜೆಪಿ ರಾಜ್ಯಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಇಂದು ಮಹತ್ವದ ಸಭೆ ಕರೆದಿದ್ದು, ಮಂಡ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಅವರು ಮಂಡ್ಯ ರಣಕಣದ ಕುರಿತು ಸಲಹೆ ನೀಡಲಿದ್ದಾರೆ ಎನ್ನಲಾಗಿದೆ.

    ಸುಮಲತಾ ಅವರನ್ನು ಮನವೊಲಿಸುವ ಕೆಲಸವನ್ನು ಮಾಜಿ ಡಿಸಿಎಂ ಆಗಿರುವ ಆರ್ ಅಶೋಕ್ ಹೆಗಲಿಗೆ ನೀಡಲಿದ್ದಾರೆ. ಒಂದು ವೇಳೆ ಸುಮಲತಾ ಅವರು ಪಕ್ಷೇತರರಾಗಿ ನಿಂತರೆ ಅವರಿಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡುವ ಪ್ಲಾನ್ ಕೂಡ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ. ಒಟ್ಟಿನಲ್ಲಿ ಬಿಎಸ್‍ವೈ ಇಂದು ನಡೆಸುವ ಸಭೆಯ ಬಗ್ಗೆ ರಾಜ್ಯ ನಾಯಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.

    ಇತ್ತ ಸುಮಲತಾ ಅವರು ಇಂದು ಕೂಡ ಮಂಡ್ಯದಲ್ಲಿ ಕ್ಷೇತ್ರ ಪ್ರವಾಸ ಮಾಡಲಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಕೋಡಿಶೆಟ್ಟಿಪುರದ ಮಾರಮ್ಮನ ದೇವಾಲಯ ಪುನರ್ ಪ್ರತಿಷ್ಠಾಪನೆ ಹಾಗೂ ನವಗ್ರಹ ದೇವಾಲಯ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಳೆದ ಒಂದು ತಿಂಗಳಿಂದ ವಿವಿಧ ದೇವಾಲಯಗಳಿಗೆ ಭೇಟಿ ನೀಡುವ ನೆಪದಲ್ಲಿ ಅವರು ಕೈ ಮುಂಡರನ್ನ ಭೇಟಿ ಮಾಡುತ್ತಿದ್ದಾರೆ.

    ನಾಗಮಂಗಲ ತಾಲೂಕಿನಲ್ಲೂ ಸುಮಲತಾ ಇಂದು ಸಂಚಾರ ಮಾಡಲಿದ್ದು, ಗಂಗವಾಡಿ, ಟಿ.ಚನ್ನಾಪುರ, ತೆಂಗಿನಭಾಗ ಗ್ರಾಮಗಳಿಗೆ ತೆರಳಲಿದ್ದಾರೆ. ಗ್ರಾಮದ ಜಾತ್ರಾ ಮಹೋತ್ಸವದಲ್ಲೂ ಭಾಗಿಯಾಗಲಿದ್ದಾರೆ. ಈ ಮೂಲಕ ಜನರ ಮನ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೇವಣ್ಣ ಹೇಳಿಕೆಗೆ ಕ್ಷಮೆ ಕೋರಿದ ನಿಖಿಲ್

    ರೇವಣ್ಣ ಹೇಳಿಕೆಗೆ ಕ್ಷಮೆ ಕೋರಿದ ನಿಖಿಲ್

    – ಮಗನ ರಾಜಕೀಯ ಹಾದಿ ಸುಗಮಗೊಳಿಸಲು ಮಂಡ್ಯಗೆ ಅನಿತಾ ಕುಮಾರಸ್ವಾಮಿ ಎಂಟ್ರಿ

    ಮಂಡ್ಯ: ಲೊಕಸಭಾ ಚುನಾವಣೆಗೂ ಮುನ್ನವೇ ಮಂಡ್ಯ ರಾಜಕೀಯ ಬೆಳವಣಿಗೆಗಳು ರಾಜ್ಯದ ಗಮನ ಸೆಳೆದಿದ್ದು, ಈ ನಡುವೆ ಸಚಿವ ರೇವಣ್ಣ ಅವರು ಸುಮಲತಾ ಅವರ ಕುರಿತು ನೀಡಿದ್ದ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಕ್ಷಮೆ ಕೋರಿದ್ದಾರೆ.

    ಇಂದು ಕ್ಷೇತ್ರದ ಚಿನಕುರಳಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರೇವಣ್ಣ ಅವರು ಯಾವ ಸಂದರ್ಭದಲ್ಲಿ, ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎಂಬುವುದು ಗೊತ್ತಿಲ್ಲ. ಈ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಅವರು ಕ್ಷಮೆ ಕೇಳಿದ್ದಾರೆ. ಲೋಕಸಭೆ ಚುನಾವಣೆಯ ಅಭ್ಯರ್ಥಿಯಾಗಿ ನಾನೂ ಕೂಡ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದರು. ಅಲ್ಲದೇ ಇನ್ನು ಮುಂದೆ ನಮ್ಮ ಕಾರ್ಯಕರ್ತರೂ ಯಾರೂ ಹಾಗೆ ಮಾತನಾಡುವುದಿಲ್ಲ ಎಂಬ ಭರವಸೆಯನ್ನು ನೀಡಿದರು.

    ರೇವಣ್ಣ ಹೇಳಿಕೆ ಬಗ್ಗೆ ರಾಯಚೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು, ಸುಮಲತಾ ಅವರ ಬಗ್ಗೆ ರೇವಣ್ಣ ಅವರು ನೀಡಿರುವ ಹೇಳಿಕೆಯನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ರಾಜ್ಯ ಸರ್ಕಾರದ ಪ್ರಮುಖ ಮಂತ್ರಿ ಬಾಯಲ್ಲಿ ಈ ರೀತಿಯ ಮಾತು ಹೇಳಬಾರದಿತ್ತು. ಅದ್ದರಿಂದ ಜೆಡಿಎಸ್ ಪಕ್ಷದ ರಾಜ್ಯಾಧಕ್ಷನಾಗಿ ರೇವಣ್ಣನ ಮಾತಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ತಿಳಿಸಿದ್ದರು.

    ಇಂದು ಬೆಳಗ್ಗೆ ಸಿಎಂ ಕುಮಾರಸ್ವಾಮಿ ಅವರು ಕೂಡ ಮಾಧ್ಯಮಗಳೊಂದಿಗೆ ಮಾತನಾಡಿ, ರೇವಣ್ಣ ಅವರು ಸುಮಲತಾ ಅವರ ವಿರುದ್ಧ ಮಾತನಾಡಿಲ್ಲ. ಅವರನ್ನು ಟೀಕಿಸಿಲ್ಲ. ರೇವಣ್ಣ ಬಳಿ ನಾನು ಈ ಬಗ್ಗೆ ಮಾತನಾಡಿ, ಯಾಕೆ ಈ ಹೇಳಿಕೆ ನೀಡಿದಿರಿ ಅಂತ ಕೇಳಿದ್ದೇನೆ. ಸುಮಲತಾ ಅವರು ಅಂಬರೀಶ್ ಅವರು ಅಗಲಿರುವ ನೋವಿನಲ್ಲಿದ್ದಾರೆ. ಈ ನಡುವೆ ರಾಜಕೀಯ ಬೇಡವಾಗಿತ್ತು ಎನ್ನುವ ದೃಷ್ಟಿಯಲ್ಲಿ ಹೇಳಿದ್ದು ಅಷ್ಟೆ. ಆದರೆ ಅವರು ಈ ರೀತಿ ಹೇಳಿಕೆ ನೀಡಬಾರದಿತ್ತು. ರೇವಣ್ಣ ಅವರ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಅವರ ಪರವಾಗಿ ಕ್ಷಮೆ ಕೇಳುತ್ತೇನೆ. ನಮ್ಮದು ಮಹಿಳೆಯರಿಗೆ ಗೌರವ ಕೊಡುವ ಕುಟುಂಬ. ಯಾವ ಹೆಣ್ಣು ಮಕ್ಕಳಿಗೂ ನಾವು ಅವಮಾನ ಮಾಡಿಲ್ಲ ಎಂದು ಕ್ಷಮೆಯಾಚಿಸಿದ್ದರು.

    ಇತ್ತ ಮಗನ ರಾಜಕೀಯ ಪ್ರವೇಶದ ಹಾದಿಯನ್ನು ಸುಗಮಗೊಳಿಸಲು ಮುಂದಾಗಿರುವ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಇಂದು ಪುತ್ರನೊಂದಿಗೆ ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಮಾಜಿ ಶಾಸಕಿ, ರವೀಂದ್ರ ಅವರ ತಾಯಿ ಪಾರ್ವತಮ್ಮ ಶ್ರೀಕಂಠಯ್ಯ ಅವರೊಂದಿಗೆ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರೇವಣ್ಣ ಸತ್ತಿದ್ರೆ ಭವಾನಿ ರೇವಣ್ಣ ಕ್ಯಾಂಡಿಡೇಟ್ ಆಗ್ತಿದ್ರಂತೆ: ಈಶ್ವರಪ್ಪ

    ರೇವಣ್ಣ ಸತ್ತಿದ್ರೆ ಭವಾನಿ ರೇವಣ್ಣ ಕ್ಯಾಂಡಿಡೇಟ್ ಆಗ್ತಿದ್ರಂತೆ: ಈಶ್ವರಪ್ಪ

    ಬಾಗಲಕೋಟೆ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಬೆನ್ನಲ್ಲೇ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸಾವಿನ ವಿಚಾರವಾಗಿ ಮಾತನಾಡಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

    ಮಂಡ್ಯ ಲೋಕಸಭಾ ಕ್ಷೇತ್ರದ ವಿಚಾರವಾಗಿ ಸುಮಲತಾ ಅಂಬರೀಶ್ ಅವರನ್ನು ಟೀಕಿಸಿದ್ದ ಸಚಿವ ರೇವಣ್ಣ ವಿರುದ್ಧ ಕೆ.ಎಸ್.ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಸಚಿವರು ಮಾತನಾಡಿದರು ಎಂದು ನೀವು ಮಾತನಾಡಿದ್ದು ಎಷ್ಟು ಸರಿ. ಅಂತೆ-ಕಂತೆ ಕಟ್ಟಿಕೊಂಡು ಹೇಳಿಕೆ ನೀಡುವುದು ಸರಿಯಲ್ಲ ಎಂದು ಜನರು ಈಶ್ವರಪ್ಪ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

    ಈಶ್ವರಪ್ಪ ಹೇಳಿದ್ದೇನು?:
    ಪತಿ ಅಂಬರೀಶ್ ಸತ್ತು ಎರಡು ತಿಂಗಳಾಗಿಲ್ಲ ಆಗಲೇ ಸುಮಲತಾ ಅವರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ ಎಂದು ಸಚಿವ ರೇವಣ್ಣ ಹೇಳಿದ್ದಾರೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಕೇಳಿದಾಗ ಮಂಡ್ಯದ ವ್ಯಕ್ತಿಯೊಬ್ಬ ಖಡಕ್ ಉತ್ತರ ನೀಡಿದ. ಆ ವ್ಯಕ್ತಿಯ ಮಾತನ್ನು ನಿಮ್ಮ ಮುಂದೆ ಹೇಳಲು ನನಗೆ ಸಂಕೋಚವಾಗುತ್ತದೆ. ಆದರೂ ಹೇಳುತ್ತೇನೆ.

    ಸಚಿವ ರೇವಣ್ಣ ಸತ್ತಿದ್ದರೆ ಮಾರನೇ ದಿನವೇ ಭವಾನಿ ರೇವಣ್ಣ ಕ್ಯಾಂಡಿಡೇಟ್ ಆಗುತ್ತಿದ್ದರು ಎಂದು ಆ ವ್ಯಕ್ತಿ ಹೇಳಿದ. ಹೀಗೆ ಅನಿಸಿಕೊಳ್ಳಲು ರೇವಣ್ಣ ಅವರು ಸುಮಲತಾ ಅವರ ಬಗ್ಗೆ ಮಾತನಾಡಬೇಕಿತ್ತಾ ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಟುಂಬ ರಾಜಕಾರಣಕ್ಕೆ ಸಚಿವ ಜಿಟಿಡಿಯಿಂದ ಹೊಸ ವ್ಯಾಖ್ಯಾನ

    ಕುಟುಂಬ ರಾಜಕಾರಣಕ್ಕೆ ಸಚಿವ ಜಿಟಿಡಿಯಿಂದ ಹೊಸ ವ್ಯಾಖ್ಯಾನ

    ಮೈಸೂರು: ಕುಟುಂಬ ರಾಜಕಾರಣ ಈಗ ವಿಷಯವಲ್ಲ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕುಟುಂಬ ಈಗ ಒಂದಲ್ಲ. ಅವರು ಬೇರೆ ಬೇರೆಯಾಗಿ ಸಾಕಷ್ಟು ವರ್ಷವಾಗಿದೆ ಎಂದು ಸಚಿವ ಜಿ.ಟಿ ದೇವೇಗೌಡ ಕುಟುಂಬ ರಾಜಕಾರಣಕ್ಕೆ ಹೊಸ ವ್ಯಾಖ್ಯಾನ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಮಕ್ಕಳಾದ ಬಾಲಕೃಷ್ಣ ಅವರ ಕುಟುಂಬವೇ ಬೇರೆ. ರೇವಣ್ಣ ಅವರ ಕುಟುಂಬವೆ ಬೇರೆ. ಕುಮಾರಸ್ವಾಮಿ ಅವರ ಕುಟುಂಬವೇ ಬೇರೆ. ಇಲ್ಲಿ ನಾಮ ನಿರ್ದೇಶನ ಮಾಡುತ್ತಿಲ್ಲ ಅಂದ್ರು.

    ಕುಟುಂಬಕ್ಕೂ ಮಿಗಿಲಾಗಿ ಜನರ ಮುಂದೆ ಹೋಗಿ ಅವರು ಆಯ್ಕೆಯಾಗುತ್ತಿದ್ದಾರೆ. ದೇವೇಗೌಡರ ಕುಟುಂಬದಲ್ಲಿ ಮಾತ್ರ ಕುಟುಂಬ ರಾಜಕಾರಣ ಇಲ್ಲ. ದೇಶದ ಸಾಕಷ್ಟು ರಾಜ್ಯಗಳಲ್ಲಿ ಕುಟುಂಬ ರಾಜಕಾರಣ ಇದೆ ಎಂದು ಅವರು ಹೇಳಿದ್ರು.

    ಸುಮಲತಾ ಬಗ್ಗೆ ಸಚಿವ ರೇವಣ್ಣ ಹೇಳಿಕೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಬಾಯಿಗೆ ಬಂದಂತೆ ಮಾತನಾಡುವವರಿಗೆಲ್ಲ ಈಗ ಉತ್ತರ ಕೊಡಲು ಸಾಧ್ಯವಿಲ್ಲ. ಯಾರು ಕೂಡ ಇನ್ನೊಬ್ಬರನ್ನು ನೋವಾಗುವ ರೀತಿ ಮಾತನಾಡಬಾರದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಈ ವಿಚಾರದಲ್ಲಿ ಯಾರು ತುಟಿ ಬಿಚ್ಚಬಾರದು ಎಂದು ಹೇಳಿದ್ದಾರೆ. ಇದರಿಂದ ನನ್ನನ್ನು ಕಟ್ಟಿ ಹಾಕಿದಾಗೆ ಆಗಿದೆ. ಈ ಹಿನ್ನೆಲೆಯಲ್ಲಿ ಈ ವಿಚಾರವಾಗಿ ನಾನು ಯಾವ ಪ್ರತಿಕ್ರಿಯೆ ನೀಡಲ್ಲ ಎಂದು ಜಿಟಿಡಿ ತಿಳಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv