Tag: ಸುಮಲತಾ ಅಂಬರೀಶ್

  • ಹುತಾತ್ಮ ಯೋಧನ ಪುಣ್ಯತಿಥಿ ವೆಚ್ಚವನ್ನು ನಾನೇ ಭರಿಸುತ್ತೇನೆ: ಸಚಿವ ಡಿಸಿ ತಮ್ಮಣ್ಣ

    ಹುತಾತ್ಮ ಯೋಧನ ಪುಣ್ಯತಿಥಿ ವೆಚ್ಚವನ್ನು ನಾನೇ ಭರಿಸುತ್ತೇನೆ: ಸಚಿವ ಡಿಸಿ ತಮ್ಮಣ್ಣ

    ಮಂಡ್ಯ: ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧ ಗುರು ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ರಮದ ಖರ್ಚು ವೆಚ್ಚವನ್ನು ನಾನೇ ಭರಿಸುತ್ತೇನೆ ಎಂದು ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.

    ಜಿಲ್ಲೆಯ ಕೆಎಂ ದೊಡ್ಡಿಯಲ್ಲಿ ಮಾತನಾಡಿದ ಸಚಿವರು, ಗುರು ನಮ್ಮ ಊರಿನ ಯೋಧ ಆಗಿರುವುದರಿಂದ ನಾನೇ ಖರ್ಚು ಭರಿಸುತ್ತೇನೆ. ನಮ್ಮ ಬೆಂಬಲಿಗರು ಕೂಡ ಎಲ್ಲ ಕಾರ್ಯದಲ್ಲೂ ಸಹಾಯ ಮಾಡುತ್ತಾರೆ ಎಂದರು.

    ಗುರು ಸ್ಮಾರಕ:
    ಪುಣ್ಯಕಾರ್ಯದಂದು ಸುಮಾರು 4 ರಿಂದ 5 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುವುದು. ಸಂಪ್ರದಾಯದಂತೆ ಏನೆಲ್ಲಾ ಊಟ ಮಾಡಬೇಕೆಂದು ನಿಗದಿ ಆಗಿಂದೆಯೋ ಎಲ್ಲವನ್ನೂ ಮಾಡುತ್ತೇವೆ. ಸದ್ಯದಲ್ಲೇ ಹುತಾತ್ಮ ಯೋಧ ಗುರು ಸ್ಮಾರಕ ಕೂಡ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

    ಜೆಡಿಎಸ್‍ಗೆ ನಷ್ಟವಿಲ್ಲ: ಇದೇ ವೇಳೆ ಸುಮಲತಾ ಅಂಬರೀಶ್ ಅವರ ಲೋಕಸಭಾ ಸ್ಪರ್ಧೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸುಮಲತಾ ಅವರು ನಮ್ಮ ಸಂಬಂಧಿಕರೇ ಆಗಿದ್ದಾರೆ. ಆದರೆ ಸಂಬಂಧ ಅಥವಾ ಪಕ್ಷ ಎಂದು ಬಂದಾಗ ನನಗೇ ಪಕ್ಷವೇ ಮುಖ್ಯವಾಗುತ್ತದೆ ಎಂದರು.

    ದೊಡ್ಡರಸಿನಕೆರೆ ಗ್ರಾಮದಲ್ಲಿರುವ ಸುಮಲತಾ ಅವರ ಸಂಬಂಧಿಕರ ಮೂಲಕ ಸಿಎಂ ಜೊತೆ ಮಾತನಾಡಿ ನಿರ್ಧಾರ ಮಾಡುವ ಬಗ್ಗೆ ಅವರಿಗೆ ತಿಳಿಸಲು ಹೇಳಿದ್ದೆ. ಆದರೆ ಅವರು ಬರಲಿಲ್ಲ. ಯಾರಿಗೆ ಅವಶ್ಯಕವಾಗಿದೆಯೋ ಅವರು ಮಾತುಕತೆಗೆ ಮುಂದಾಗಬೇಕು. ಆದರೆ ಯಾರು ಸ್ಪರ್ಧೆ ಮಾಡಬೇಕು ಎಂಬ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಮಂಡ್ಯ ಲೋಕಸಭೆಗೆ ದೇವೇಗೌಡರೇ ಬಂದರೆ ಯಾವುದೇ ವಿವಾದ ಇಲ್ಲದಂತಾಗುತ್ತದೆ. ನಿಖಿಲ್ ಸ್ಪರ್ಧೆ ಮಾಡಿದರು ಕೂಡ ಸಂತೋಷ. ನನ್ನ ಮಗನಿಗೆ ಟಿಕೆಟ್ ಸಿಗದಿದ್ದಾಗಲೂ ನಾನು ಪಕ್ಷ ನಿಷ್ಠೆ ಮೆರೆದಿದ್ದೇನೆ. ಒಂದು ವೇಳೆ ಸುಮಲತಾ ಅವರು ಪಕ್ಷೇತರವಾಗಿ ಸ್ಪರ್ಧಿಸಿದರೂ ಜೆಡಿಎಸ್ ಗೆ ಏನೂ ಆಗುವುದಿಲ್ಲ ಎಂದು ಡಿಸಿ ತಮ್ಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

    ಅಂಬರೀಶ್ ಹಾಗೂ ಡಿಸಿ ತಮ್ಮಣ್ಣ ಅವರು ಬೇರೆ ಬೇರೆ ಪಕ್ಷದಲ್ಲಿದ್ದರೂ ಕೂಡ ದೊಡ್ಡರಸಿನಕೆರೆ ಗ್ರಾಮದವರಾಗಿದ್ದ ಪರಿಣಾಮ ಹೆಚ್ಚು ಆತ್ಮೀಯರಾಗಿದ್ದರು. ದೊಡ್ಡರಸಿನಕೆರೆ ಗ್ರಾಮಕ್ಕೆ ಬರುವ ಸಮಯದಲ್ಲಿ ಹೆಚ್ಚು ಸಲ ಸಚಿವ ಡಿಸಿ ತಮ್ಮಣ್ಣ ಅವರ ಕಾರಿನಲ್ಲೇ ಅಂಬರೀಶ್ ಆಗಮಿಸುತ್ತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಮಲತಾ ಅಂಬರೀಶ್ ಸ್ಪರ್ಧೆಗೆ ನನ್ನ ಬೆಂಬಲವಿದೆ: ಎಂ.ಬಿ.ಪಾಟೀಲ್

    ಸುಮಲತಾ ಅಂಬರೀಶ್ ಸ್ಪರ್ಧೆಗೆ ನನ್ನ ಬೆಂಬಲವಿದೆ: ಎಂ.ಬಿ.ಪಾಟೀಲ್

    – ಮಂಡ್ಯ ಕ್ಷೇತ್ರ ಕಾಂಗ್ರೆಸ್‍ಗೆ ಹಂಚಿಕೆಯಾದ್ರೆ ಸುಮಲತಾ ನಮ್ಮ ಅಭ್ಯರ್ಥಿ
    – ಹಿಂದೂ, ಮುಸ್ಲಿಂ ಮಧ್ಯೆ ಜಗಳ ಹಚ್ಚೋ ಅನಂತಕುಮಾರ್ ಹೆಗ್ಡೆಗೆ ಜನ ಬುದ್ಧಿ ಕಲಿಸ್ತಾರೆ

    ಬಾಗಲಕೋಟೆ: ನಟಿ ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನನ್ನ ಬೆಂಬಲವಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

    ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಸೀಟು ಹಂಚಿಕೆಯಾಗಬೇಕಿದೆ. ಮಂಡ್ಯ ಕ್ಷೇತ್ರ ಜೆಡಿಎಸ್‍ಗೆ ಹೋಗುತ್ತೋ ಅಥವಾ ಕಾಂಗ್ರೆಸ್‍ಗೆ ಬರುತ್ತೋ ಗೊತ್ತಿಲ್ಲ. ಒಂದು ವೇಳೆ ಮಂಡ್ಯ ಕ್ಷೇತ್ರ ಕಾಂಗ್ರೆಸ್ಸಿಗೆ ಹಂಚಿಕೆಯಾದರೆ ಸುಮಲತಾ ಅವರೇ ನಮ್ಮ ಅಭ್ಯರ್ಥಿ. ಸುಮಲತಾ ಅಂಬರೀಶ್ ಅವರ ಹೆಸರು ಶಿಫಾರಸ್ಸಿಗೆ ನನ್ನ ಮೊದಲ ಬೆಂಬಲವಿದೆ ಎಂದು ಹೇಳಿದರು.

    ದಿವಂಗತ ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಅವರ ನಿಧನದ ಅನುಕಂಪದ ಸಹಕಾರದಿಂದ ಸುಮಲತಾ ಮಂಡ್ಯದಿಂದ ಗೆಲ್ಲುತ್ತಾರೆ. ಹೀಗಾಗಿ ಅವರಿಗೆ ನನ್ನ ಬೆಂಬಲವಿದೆ ಎಂದು ತಿಳಿಸಿದರು.

    ಹಿಂದೂ-ಮುಸ್ಲಿಮರ ಮಧ್ಯೆ ಜಗಳ ಹಚ್ಚುವ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಅವರಿಗೆ ಕಾರವಾರ ಜನ ಬುದ್ಧಿ ಕಲಿಸುತ್ತಾರೆ. ರಾಮಕೃಷ್ಣ ಹೆಗಡೆ ಸೇರಿದಂತೆ ಹೆಗಡೆ ಮನೆತನಗಳ ಹೆಸರಿಗೆ ಅನಂತಕುಮಾರ್ ಹೆಗ್ಡೆ ಮಸಿ ಬಳಿಯುತ್ತಿದ್ದಾರೆ ಎಂದು ಕಿಡಿಕಾರಿದರು.

    ಒಂದು ವೇಳೆ ನಾನು ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವನಾಗಿದ್ದರೆ ಯುವಕರಿಗೆ ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ದೊಡ್ಡ ಆಂದೋಲನವನ್ನೇ ಆರಂಭಿಸುತ್ತಿದ್ದೆ. ಆದರೆ ಸಂವಿಧಾನದ ಅರ್ಹತೆ, ಅವಕಾಶಗಳ ಆಧಾರದ ಮೇಲೆ ಲೋಕಸಭೆ ಸದಸ್ಯರಾಗಿರುವ ಅನಂತಕುಮಾರ್ ಹೆಗ್ಡೆ, ಸಂವಿಧಾನವನ್ನೇ ಬದಲಾವಣೆ ಮಾಡಲು ಹೊಟಿದ್ದಾರೆ ಎಂದು ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇಳಿದಷ್ಟು ಕ್ಷೇತ್ರಗಳು ಸಿಗದೇ ಇದ್ರೆ ಮುಂದೆ ನೋಡೋಣ: ರೇವಣ್ಣ

    ಕೇಳಿದಷ್ಟು ಕ್ಷೇತ್ರಗಳು ಸಿಗದೇ ಇದ್ರೆ ಮುಂದೆ ನೋಡೋಣ: ರೇವಣ್ಣ

    ಬೆಂಗಳೂರು: ಜೆಡಿಎಸ್ ಕೇಳಿರುವಷ್ಟು ಲೋಕಸಭಾ ಕ್ಷೇತ್ರಗಳು ಸಿಗದೇ ಹೋದರೆ ಮುಂದೆ ನೋಡೋಣ ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಹೇಳಿದ್ದಾರೆ.

    ಕಾಂಗ್ರೆಸ್‍ನೊಂದಿಗೆ ಲೋಕಸಭಾ ಸೀಟು ಹಂಚಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಜೆಡಿಎಸ್ ಶಾಸಕರು, ಮುಖಂಡರು ಒನ್ ಥರ್ಡ್ ಅಂದ್ರೆ 10 ರಿಂದ 12 ಸೀಟುಗಳನ್ನು ಕೇಳುತ್ತಿದ್ದಾರೆ. ಈ ವಿಚಾರವಾಗಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಕಾಂಗ್ರೆಸ್ ಹೈಕಮಾಂಡ್ ಚರ್ಚೆ ಮಾಡುತ್ತಿದೆ. ಜೆಡಿಎಸ್ ಕೇಳಿರುವಷ್ಟು ಸೀಟು ಸಿಗದೇ ಹೋದರೆ ಮುಂದೆ ನೋಡೋಣ ಎಂದು ಹೇಳಿದರು.

    ಮಂಡ್ಯ ಜಿಲ್ಲೆಯಲ್ಲಿ ನಮ್ಮ ಪಕ್ಷದ ಒಟ್ಟು 7 ಶಾಸಕರಿದ್ದಾರೆ. ಹೀಗಾಗಿ ಸುಮಲತಾ ಅಂಬರೀಶ್ ಅವರಿಗೆ ನಾವ್ಯಾಕೆ ಲೋಕಸಭಾ ಟಿಕೆಟ್ ಬಿಟ್ಟುಕೊಡಬೇಕು ಎಂದು ತಿಳಿಸಿದರು.

    ಕಾಂಗ್ರೆಸ್‍ನಿಂದ ಸುಮಲತಾ ಸ್ಪರ್ಧಿಸಿದ್ರೆ ನಿಮ್ಮ ಅಭ್ಯರ್ಥಿಯನ್ನು ಹಾಕಲ್ವಾ ಎಂದು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಗುಡುಗಿದ ಸಚಿವರು, ನಾವ್ಯಾಕೆ ಅಭ್ಯರ್ಥಿಯನ್ನು ಹಿಂಪಡೆಯಬೇಕು? ಅವರೇನು ನಮ್ಮ ಪಕ್ಷದವರೇ ಎನ್ನುವ ಮೂಲಕ ಪರೋಕ್ಷವಾಗಿ ಸುಮಲತಾ ಅವರಿಗೆ ಮಂಡ್ಯ ಕ್ಷೇತ್ರ ಬಿಟ್ಟು ಕೊಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

    ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಕೇಳಿದ್ರೆ ಎಂಬ ಪ್ರಶ್ನೆಗೆ ರೇವಣ್ಣ ಉತ್ತರಿಸಿದ ಸಚಿವರು, ಅವರು ಟಿಕೆಟ್ ಕೇಳ್ತಾ ಇರೋದು ಕಾಂಗ್ರೆಸ್‍ನಿಂದ ಎಂದು ಹಾರಿಕೆ ಉತ್ತರ ನೀಡಿ ದೋಸ್ತಿ ನಾಯಕರ ಮೇಲೆ ಸಂಪೂರ್ಣ ಜವಾಬ್ದಾರಿ ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಮಲತಾ ಪಕ್ಷದ ಕಾರ್ಯಕರ್ತರಲ್ಲ- ಜೆಡಿಎಸ್ ಬೆಂಬಲ ಹೇಗೆ ನೀಡುತ್ತೆ : ಸಿಎಂ ಪ್ರಶ್ನೆ

    ಸುಮಲತಾ ಪಕ್ಷದ ಕಾರ್ಯಕರ್ತರಲ್ಲ- ಜೆಡಿಎಸ್ ಬೆಂಬಲ ಹೇಗೆ ನೀಡುತ್ತೆ : ಸಿಎಂ ಪ್ರಶ್ನೆ

    ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯ ವಿಚಾರದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಅಭಿಮಾನಿಗಳು ಚುನಾವಣೆಗೆ ನಿಲ್ಲುವಂತೆ ಒತ್ತಡ ಹಾಕಿದ್ದಾರೆ. ಆದರೆ ಅವರು ನಮ್ಮ ಪಕ್ಷದಲ್ಲಿ ಇಲ್ಲ. ಆದ್ದರಿಂದ ಯಾರಿಗೆ ಬೆಂಬಲ ಕೊಡಲು ಹೇಗೆ ಸಾಧ್ಯ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

    ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಸ್ಪರ್ಧೆ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಸಿಎಂ, ಮಂಡ್ಯದಲ್ಲಿ ಕೆಲ ಅಭಿಮಾನಿಗಳು ಅವರ ಮೇಲೆ ಒತ್ತಡ ಹಾಕಿ ಚುನಾವಣೆಗೆ ನಿಲ್ಲುವಂತೆ ಹೇಳಿದ್ದಾರೆ. ಅವರ ಅಭಿಮಾನಿಗಳು ಆಸೆಯೂ ಆದೇ ಆಗಿದೆ. ಆದರೆ ಅವರಿಗೆ ಬೆಂಬಲ ನೀಡಲು ಅವರು ನನ್ನ ಪಕ್ಷದಲ್ಲಿ ಇಲ್ಲ. ಜೆಡಿಎಸ್ ಪಕ್ಷದಲ್ಲಿ ಇಲ್ಲ ಎಂದರೆ ಬೆಂಬಲ ಕೊಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

    ಮಂಡ್ಯದಲ್ಲಿ ಕೆಲ ಅಭಿಮಾನಿಗಳು ಸ್ಪರ್ಧೆ ಮಾಡಿಸಲೇಬೇಕು ಎನ್ನುವ ನಿರ್ಧಾರ ಮಾಡಿದ್ದಾರೆ. ಅವರು ಸ್ಪರ್ಧೆ ಮಾಡಲು ಸ್ವತಂತ್ರರಾಗಿದ್ದಾರೆ. ಆದ್ದರಿಂದ ಅವರು ತೀರ್ಮಾನ ಕೈಗೊಳ್ಳಬಹುದು ಎಂದರು.

    ಇದೇ ವೇಳೆ ಶಾಸಕ ಕಂಪ್ಲಿ ಗಣೇಶ್ ಬಂಧನ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಕಾನೂನು ಕ್ರಮ ನಡೆಯುತ್ತದೆ ಎಂದರು. ಸಂಧಾನ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಾತ್ರ ನಿರ್ಧಾರ ಮಾಡಬೇಕು. ಕಾನೂನು ಮಾತ್ರ ನಿಯಮದಂತೆ ಕ್ರಮ ಕೈಗೊಳ್ಳುತ್ತದೆ. ಈ ಸಂಧಾನದ ಬಗ್ಗೆ ನಾನು ಹೇಳು ಆಗಲ್ಲ ಎಂದರು. ಬೆಗ್ಗರ್ಸ್ ಕುರಿತ ಪ್ರಶ್ನೆಗೆ ನಗುಮುಖದಲ್ಲಿ ಉತ್ತರಿಸಿದ ಸಿಎಂ, ಈಗ ಎಲ್ಲವೂ ಬದಲಾವಣೆ ಆಗುತ್ತೆ ಬನ್ನಿ ಎಂದು ಹೇಳೀ ಮುಂದೆ ನಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಳ್ಕೊಂಡ ನೋವು ಅನುಭವಿಸಿದವರಿಗಷ್ಟೇ ಗೊತ್ತು- ಸುಮಲತಾ ಅಂಬರೀಶ್

    ಕಳ್ಕೊಂಡ ನೋವು ಅನುಭವಿಸಿದವರಿಗಷ್ಟೇ ಗೊತ್ತು- ಸುಮಲತಾ ಅಂಬರೀಶ್

    ಮಂಡ್ಯ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರನ ಆತ್ಮಾಹುತಿ ದಾಳಿಗೆ ಬಲಿಯಾದ ಯೋಧ ಗುರು ಮನೆಗೆ ನಟಿ ಸುಮಲತಾ ಅಂಬರೀಶ್ ಅವರು ಇಂದು ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕುಟುಂಬ ನೋವು ಏನು ಎಂದು ನನಗೆ ಚೆನ್ನಾಗಿ ಗೊತ್ತಿದೆ. ಒಬ್ಬರನ್ನು ಕಳೆದುಕೊಂಡಿರುವ ನೋವನ್ನು ಮಾತಿನಲ್ಲೇ ತುಂಬಿಸಲು ಸಾಧ್ಯವಿಲ್ಲ. ಆದ್ರೂ ನಿಮ್ಮ ನೋವಿನಲ್ಲಿ ನಾವು ಮಾತ್ರ ಅಲ್ಲ ಇಡೀ ದೇಶವೇ ಜೊತೆ ಇದೆ. ದೇಶದ ಜನ ನಿಂತು ನಿಮಗೆ ಸೆಲ್ಯೂಟ್ ಹೊಡೆಯುತ್ತೇವೆ. ನಿಮ್ಮನ್ನು ಪ್ರೀತಿಸುತ್ತಾ ಇದೆ. ನಿಮ್ಮ ಮಗನಿಂದ ದೊಡ್ಡ ಗೌರವ ನಿಮಗೆಲ್ಲರಿಗೂ ಸಿಕ್ಕಿದೆ. ಧೈರ್ಯವಾಗಿರಿ ಎಂದು ಸಾಂತ್ವನ ಹೇಳಿದ್ದಾರೆ.

    ನಮ್ಮ ನೋವನ್ನು ಇನ್ನೊಬ್ಬರಿಗೆ ಹೇಳಿದ್ರೆ ಅರ್ಥವಾಗಲ್ಲ. ಅದನ್ನು ಅನುಭವಿಸಿದವರಿಗೆ ಆ ನೋವು ಏನೆಂಬುದು ತಿಳಿಯುತ್ತದೆ. ಗುರು ಪತ್ನಿ ತುಂಬಾ ಚಿಕ್ಕ ಹುಡುಗಿ. ಅವಳಿಗೆ ಜೀವನದಲ್ಲಿ ಇನ್ನೂ ತುಂಬಾನೇ ಧೈರ್ಯ ತುಂಬಬೇಕಿದೆ. ಈಗಾಗಲೇ ತುಂಬಾ ಜನ ಅವರ ಪರವಾಗಿ ನಿಂತಿದ್ದಾರೆ. ಜೊತೆಗೆ ನಾವು ಒಂದು ಸಣ್ಣ ಸೇವೆಯನ್ನು ಮಾಡಿದ್ದೇವೆ ಅಂದ್ರು.

    ಜಮೀನು ಹಸ್ತಾಂತರದ ಬಗ್ಗೆ ಅವರಿಗೆ ತಿಳಿಸಿದ್ದೇನೆ. ಇದು ನಮ್ಮ ಕರ್ತವ್ಯ ಅಂತ ಹೇಳಿದ್ದೇನೆ. ನಾವು ಮಾಡಬೇಕಾಗಿರೋ ಕನಿಷ್ಟ ಧರ್ಮ ಇದಾಗಿದೆ. ಒಪ್ಪಿಕೊಂಡರೆ ನಮ್ಮ ಪುಣ್ಯ. ಇದರಿಂದ ಅಂಬರೀಶ್ ಅವರ ಆತ್ಮಕ್ಕೆ ಶಾಂತಿ, ತೃಪ್ತಿ ಸಿಗುತ್ತದೆ ಎಂದು ಹೇಳಿದೆ. ಅವರು ಅದನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪ್ರಕ್ರಿಯೆ ಆರಂಭಿಸುವುದಾಗಿ ಅವರು ಹೇಳಿದ್ರು.

    ಇಂದು ಜಿಲ್ಲೆಯ ಚಿಕ್ಕರಸಿನಕೆರೆ ಗ್ರಾಮದ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಬಳಿಕ ಬಸವನ ಆಶೀರ್ವಾದ ಪಡೆದು, ಕಾಣಿಕೆ ಸಲ್ಲಿಸಿದ ಬಳಿಕ ಅವರು ಗುರು ಮನೆಗೆ ತೆರಳಿ ಸಾಂತ್ವನ ತಿಳಿಸಿದ್ದಾರೆ.

    ಫೆ.14ರಂದು ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಅದಿಲ್ ದರ್ ಎಂಬ ಉಗ್ರ ಸ್ಕಾರ್ಪಿಯೋ ಕಾರಿನಲ್ಲಿ ಸ್ಫೋಟಕ ತುಂಬಿ ಆತ್ಮಾಹುತಿ ದಾಳಿ ಮಾಡಿದ್ದನು. ಈ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ.

    https://www.youtube.com/watch?v=u3eOKo1jwdw

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸುಮಲತಾ- ಸಿದ್ದರಾಮಯ್ಯ ಭೇಟಿಗೆ ಸಚಿವ ಪುಟ್ಟರಾಜು ಟಾಂಗ್

    ಸುಮಲತಾ- ಸಿದ್ದರಾಮಯ್ಯ ಭೇಟಿಗೆ ಸಚಿವ ಪುಟ್ಟರಾಜು ಟಾಂಗ್

    ಮಂಡ್ಯ: ನಟಿ ಸುಮಲತಾ ಅಂಬರೀಶ್ ಅವರು ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು ಅವರು ಟಾಂಗ್ ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯಾರು ಯಾರ ಮನೆಗೂ ಹೋಗಿ ತೀರ್ಮಾನ ಮಾಡಿದ್ರು ಅನ್ನೋದು ಮುಖ್ಯವಲ್ಲ. ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‍ನ ಭದ್ರಕೋಟೆಯಾಗಿದೆ. ಹೀಗಾಗಿ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧೆ ಮಾಡಬೇಕು ಎಂದು ಖಾರವಾಗಿಯೇ ನುಡಿದಿದ್ದಾರೆ.

    ಇಂದು ಎರಡೂ ಪಕ್ಷಗಳು ಸೇರಿ ಇಂದು ಸಮ್ಮಿಶ್ರ ಸರ್ಕಾರ ಮಾಡಿದ್ದೇವೆ. ಆ ಹಿನ್ನೆಲೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿಯೂ ಎರಡೂ ಪಕ್ಷಗಳು ಸೇರಿ ಬಿಜೆಪಿಯನ್ನು ಧೂಳೀಪಟ ಮಾಡುವ ಕೆಲಸ ಮಾಡುತ್ತೇವೆ. ಇಲ್ಲಿ ಯಾರ ಬಗ್ಗೆಯೂ ಲಘುವಾಗಿ ಮಾತನಾಡಲು ನಾನು ಸಿದ್ಧನಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ ಅವನದ್ದೇ ಆದ ಜವಾಬ್ದಾರಿ ನಿರ್ಣಯಗಳನ್ನು ಕೈಗೊಳ್ಳಲು ಅವಕಾಶವಿದೆ. ಹೀಗಾಗಿ ಈ ಬಗ್ಗೆ ಏನೂ ಹೇಳಲು ನಾನು ಇಷ್ಟ ಪಡುವುದಿಲ್ಲ. ಆದ್ರೆ ನಮ್ಮ ಪಕ್ಷ ಏನು ತೀರ್ಮಾನ ಮಾಡುತ್ತದೋ ಆ ಚೌಕಟ್ಟಿನಲ್ಲಿ ಜಿಲ್ಲಾ ಉಸ್ತುವಾರಿಯಾಗಿರುವ ನಾನು ನನ್ನ ಜವಾಬ್ದಾರಿ ರ್ನಿಹಿಸಬೇಕಾಗಿದೆ ಅಂದ್ರು.

    ಈ ಮೂಲಕ ಸುಮಲತಾ ಅವರಿಗೆ ಮಂಡ್ಯದಿಂದ ಟಿಕೆಟ್ ಕೊಡಲು ಕಾಂಗ್ರೆಸ್ ಒಪ್ಪಿದರೂ, ಜೆಡಿಎಸ್ ಮಂಡ್ಯ ಕ್ಷೇತ್ರವನ್ನು ಬಿಟ್ಟು ಕೊಡಲು ಒಪ್ಪುತ್ತಾ ಇಲ್ವಾ ಎಂಬುದು ಸದ್ಯದ ಕುತೂಹಲವಾಗಿದೆ.

    ಸಿದ್ದರಾಮಯ್ಯ ಭೇಟಿ ಮಾಡಿದ ಸುಮಲತಾ ಹೇಳಿದ್ದೇನು..?
    ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಗಮನಕ್ಕೆ ತಂದಿದ್ದೇನೆ. ಮಂಡ್ಯದ ಜನತೆ ಹಾಗೂ ಅಂಬರೀಶ್ ಅವರ ಅಭಿಮಾನಿಗಳ ಆಸೆ, ಅಪೇಕ್ಷೆಯನ್ನು ಸಿದ್ದರಾಮಯ್ಯ ಅವರ ಮುಂದಿಟ್ಟಿದ್ದೇನೆ. ಪಕ್ಷದ ಕಾರ್ಯಕರ್ತರು ಕೂಡ ಸ್ಪರ್ಧೆ ಮಾಡಬೇಕೆಂದು ಇಷ್ಟಪಡುತ್ತಿದ್ದಾರೆ. ಜನರು ಕೂಡ ಅಂಬರೀಶ್ ಅವರ ಮೇಲಿರುವ ಪ್ರೀತಿಯಿಂದ ಪ್ರೀತಿ, ವಿಶ್ವಾಸವನ್ನು ಇಷ್ಟು ವರ್ಷ ಪಡೆದುಕೊಂಡು ಬಂದಿದ್ದೇವೆ. ಅದನ್ನು ಇದೇ ರಿತಿ ಮುಂದುವರಿಸಿಕೊಂಡು ಹೋಗುವ ಆಸೆ ಜನರಲ್ಲಿದೆ. ಹೀಗಾಗಿ ಅವರ ಆಸೆಯನ್ನು ನಾನು ಇಷ್ಟು ದೂರ ಬಂದು ಹೇಳುತ್ತಿದ್ದೇನೆ ಎಂದು ಹೇಳಿದ್ದೇನೆ. ಈ ವೇಳೆ ಅವರು ಕೂಡ ಈ ವಿಚಾರ ನನಗೆ ಗೊತ್ತಾಯಿತು. ಹೀಗಾಗಿ ಈ ಕುರಿತು ನಾವು ಚರ್ಚೆ ಮಾಡಿ ನಿಮಗೆ ತಿಳಿಸುತ್ತೇನೆ ಎಂದು ಸಿದ್ದರಾಮಯ್ಯ ಅವರ ಜೊತೆ ನಡೆಸಿದ ಮಾತುಕತೆಯ ಬಗ್ಗೆ ತಿಳಿಸಿದ್ರು.

    ಸ್ವತಂತ್ರವಾಗಿ ಸ್ಪರ್ಧೆ ಮಾಡುವ ನಿರ್ಧಾರದ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ. ಸದ್ಯ ಅಂಬರೀಶ್ ಅವರು 20, 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಲಾಯಲ್ ಪಾರ್ಟಿ ವರ್ಕರ್ ಆಗಿದ್ದರು. ಅವರು ಯಾವುದೇ ಆಫರ್ ಗಳತ್ತ ಹೋಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅವರ ಸೇವೆ ಇದೆ. ಅದೇ ರೀತಿ ನಾವು ಕೂಡ ಕಾಂಗ್ರೆಸ್ ಪಕ್ಷದಿಂದಲೇ ಗುರುತಿಸಿಕೊಳ್ಳಬೇಕು ಅನ್ನೋ ಭಾವನೆ ಇರುವುದಾಗಿ ಅವರು ಅಭಿಪ್ರಾಯಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅವಕಾಶ ಸಿಕ್ರೆ ಖಂಡಿತಾ ಅಂಬಿ ಪ್ರೀತಿಯ ಋಣ ತೀರಿಸುವೆ- ಸುಮಲತಾ

    ಅವಕಾಶ ಸಿಕ್ರೆ ಖಂಡಿತಾ ಅಂಬಿ ಪ್ರೀತಿಯ ಋಣ ತೀರಿಸುವೆ- ಸುಮಲತಾ

    ಮಂಡ್ಯ: ಇಲ್ಲಿನ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುವ ಇಂಗಿತವನ್ನು ಸಮಲತಾ ಅಂಬರೀಶ್ ಅವರು ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಚಿಕ್ಕರಸಿನಕೆರೆ ಗ್ರಾಮದ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಬಳಿಕ ಬಸವನ ಆಶೀರ್ವಾದ ಪಡೆದು, ಕಾಣಿಕೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರನ್ನು ನೀವು ನೋಡಿಕೊಂಡಿದ್ದೀರಿ, ಸಾಕಿದ್ದೀರಿ, ಬೆಳೆಸಿದ್ದೀರಿ. ಆ ಒಂದು ಪ್ರೀತಿಯ ಋಣ ನಮ್ಮಲ್ಲಂತೂ ಇದ್ದೇ ಇದೆ. ಆ ಋಣ ತೀರಿಸಲು ಅವಕಾಶ ಸಿಕ್ಕರೆ ಖಂಡಿತಾ ನಾನು ಅದನ್ನು ನೆರವೇರಿಸುತ್ತೇನೆ ಎಂದು ಅವರು ಹೇಳಿದ್ರು.

    ಅಭಿಮಾನಿಗಳ ಪ್ರೀತಿ ವಿಶ್ವಾಸದ ಮಾತುಗಳೇ ನನ್ನನ್ನು ಇಷ್ಟು ದೂರ ಕರೆದುಕೊಂಡು ಬಂದಿದೆ. ಆ ದೇವರ ಆಶೀರ್ವಾದ ಇದ್ದರೆ ಖಂಡಿತಾ ನಿಮ್ಮೆಲ್ಲರ ಆಸೆಯಂತೆ ಒಳ್ಳೆಯದಾಗಬೇಕು ಎಂದು ನನಗೂ ಆಸೆ ಇದೆ. ಅದರಂತೆ ಮುಂದೆ ಏನು ಮಾಡಬೇಕು ಅನ್ನೋ ತೀರ್ಮಾನವನ್ನು ನಿಮ್ಮೆಲ್ಲರನ್ನು ಕೇಳಿ, ನಿಮ್ಮ ಆಶೀರ್ವಾದ ತೆಗೆದುಕೊಂಡು ಮುಂದಿನ ಹೆಜ್ಜೆ ಏನಿದ್ದರೂ ನಿಮ್ಮ ಜೊತೆಯಲ್ಲೇ ಇಡುತ್ತೇನೆ ಅಂದ್ರು.

    ಸಿದ್ದರಾಮಯ್ಯ ಭೇಟಿ:
    ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಗಮನಕ್ಕೆ ತಂದಿದ್ದೇನೆ. ಮಂಡ್ಯದ ಜನತೆ ಹಾಗೂ ಅಂಬರೀಶ್ ಅವರ ಅಭಿಮಾನಿಗಳ ಆಸೆ, ಅಪೇಕ್ಷೆಯನ್ನು ಸಿದ್ದರಾಮಯ್ಯ ಅವರ ಮುಂದಿಟ್ಟಿದ್ದೇನೆ. ಪಕ್ಷದ ಕಾರ್ಯಕರ್ತರು ಕೂಡ ಸ್ಪರ್ಧೆ ಮಾಡಬೇಕೆಂದು ಇಷ್ಟಪಡುತ್ತಿದ್ದಾರೆ. ಜನರು ಕೂಡ ಅಂಬರೀಶ್ ಅವರ ಮೇಲಿರುವ ಪ್ರೀತಿಯಿಂದ ಪ್ರೀತಿ, ವಿಶ್ವಾಸವನ್ನು ಇಷ್ಟು ವರ್ಷ ಪಡೆದುಕೊಂಡು ಬಂದಿದ್ದೇವೆ. ಅದನ್ನು ಇದೇ ರಿತಿ ಮುಂದುವರಿಸಿಕೊಂಡು ಹೋಗುವ ಆಸೆ ಜನರಲ್ಲಿದೆ. ಹೀಗಾಗಿ ಅವರ ಆಸೆಯನ್ನು ನಾನು ಇಷ್ಟು ದೂರ ಬಂದು ಹೇಳುತ್ತಿದ್ದೇನೆ ಎಂದು ಹೇಳಿದ್ದೇನೆ. ಈ ವೇಳೆ ಅವರು ಕೂಡ ಈ ವಿಚಾರ ನನಗೆ ಗೊತ್ತಾಯಿತು. ಹೀಗಾಗಿ ಈ ಕುರಿತು ನಾವು ಚರ್ಚೆ ಮಾಡಿ ನಿಮಗೆ ತಿಳಿಸುತ್ತೇನೆ ಎಂದು ಸಿದ್ದರಾಮಯ್ಯ ಅವರ ಜೊತೆ ನಡೆಸಿದ ಮಾತುಕತೆಯ ಬಗ್ಗೆ ತಿಳಿಸಿದ್ರು.

    ಸ್ವತಂತ್ರವಾಗಿ ಸ್ಪರ್ಧೆ ಮಾಡುವ ನಿರ್ಧಾರದ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ. ಸದ್ಯ ಅಂಬರೀಶ್ ಅವರು 20, 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಲಾಯಲ್ ಪಾರ್ಟಿ ವರ್ಕರ್ ಆಗಿದ್ದರು. ಅವರು ಯಾವುದೇ ಆಫರ್ ಗಳತ್ತ ಹೋಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅವರ ಸೇವೆ ಇದೆ. ಅದೇ ರೀತಿ ನಾವು ಕೂಡ ಕಾಂಗ್ರೆಸ್ ಪಕ್ಷದಿಂದಲೇ ಗುರುತಿಸಿಕೊಳ್ಳಬೇಕು ಅನ್ನೋ ಭಾವನೆ ಇರುವುದಾಗಿ ಅವರು ಅಭಿಪ್ರಾಯಿಸಿದ್ರು.

    ಬಿಜೆಪಿಯ ಆಫರ್ ಅಥವಾ ಬೇರೆ ಆಫರ್ ಇನ್ನೂ ತೀರ್ಮಾನಿಸಿಲ್ಲ. ರಾಜಕೀಯವಾಗಿ ಬರಬೇಕು ಎಂದು ತೀರ್ಮಾನಿಸಿರಲಿಲ್ಲ. ಜನರ ಇಷ್ಟ ಆ ನಿಟ್ಟಿನಲ್ಲಿ ಯೋಚನೆ ಮಾಡುವಂತೆ ಮಾಡಿದೆ. ಜೆಡಿಎಸ್ ನಿಂದ ಇದೂವರೆಗೂ ಯಾರು ನನ್ನ ಸಂಪರ್ಕಿಸಿಲ್ಲ. ಒಟ್ಟಿನಲ್ಲಿ ಸಿದ್ದರಾಮಯ್ಯ ಅವರ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದು, ಅವರ ನಿರ್ಧಾರ ಮೇಲೆ ಎಲ್ಲವೂ ಬಿಟ್ಟಿದ್ದೇನೆ ಎಂದು ಅವರು ತಿಳಿಸಿದ್ರು.

    ಒಟ್ಟಿನಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುಮಲತಾ ಅವರು ಇಂದು ಸಲ್ಲಿಸಿದ ಪೂಜೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ದೇವಸ್ಥಾನ ಭೇಟಿ ವೇಳೆ ಸುಮಲತಾ ಅವರಿಗೆ ರಾಕ್‍ಲೈನ್ ವೆಂಕಟೇಶ್, ಸಂಬಂಧಿಕರು, ಚಿಕ್ಕರಸಿನಕೆರೆ ಗ್ರಾಮಸ್ಥರು, ಕಾಂಗ್ರೆಸ್ ಮುಖಂಡರು ಸಾಥ್ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಂದು ಹುತಾತ್ಮ ಯೋಧನ ಕುಟುಂಬಕ್ಕೆ ಸುಮಲತಾ  ಸಾಂತ್ವಾನ- 20 ಗುಂಟೆ ಜಮೀನು ಹಸ್ತಾಂತರ

    ಇಂದು ಹುತಾತ್ಮ ಯೋಧನ ಕುಟುಂಬಕ್ಕೆ ಸುಮಲತಾ ಸಾಂತ್ವಾನ- 20 ಗುಂಟೆ ಜಮೀನು ಹಸ್ತಾಂತರ

    ಮಂಡ್ಯ: ನಟಿ ಸುಮಲತಾ ಅವರು ಇಂದು ಹುತಾತ್ಮ ಯೋಧ ಗುರು ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ. ಅಲ್ಲದೆ ಇದೇ ವೇಳೆ ತಮ್ಮ ಪುತ್ರ ಅಭಿಷೇಕ್ ಹೆಸರಲ್ಲಿರೋ 20 ಗುಂಟೆ ಜಮೀನನ್ನು ಯೋಧನ ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ.

    ಬುಧವಾರವಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಆಗಿದ್ದ ಸುಮಲತಾ ಅಂಬರೀಶ್ ಅವರು ಇಂದು ಮಂಡ್ಯಕ್ಕೆ ಹೋಗ್ತಿದ್ದಾರೆ. ಚಿಕ್ಕರಸಿಕೆರೆಯಲ್ಲಿರೋ ಕಾಲಭೈರವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾಗಿರುವ ಗುಡಿಗೆರೆ ಗುರು ಮನೆಗೆ ಭೇಟಿ ನೀಡ್ತಾರೆ. ಇದನ್ನೂ ಓದಿ: ಮಂಡ್ಯ ಜನರ ಅಭಿಪ್ರಾಯವೇ ಅಂತಿಮ: ಸುಮಲತಾ ಅಂಬರೀಶ್

    ಸಾಂತ್ವನ ಹೇಳೋದರ ಜೊತೆಗೆ ಪುತ್ರ ಅಭಿಷೇಕ್ ಹೆಸರಲ್ಲಿರೋ 20 ಗುಂಟೆ ಜಮೀನನ್ನು ಯೋಧನ ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಈ ನೆಲದ ಮಗಳಾಗಿ ಸೊಸೆಯಾಗಿ ನಾನು ಮಾಡುವ ಪುಟ್ಟ ಸೇವೆ ಅಂತ ಯೋಧನ ಅಂತ್ಯಸಂಸ್ಕಾರ ನಡೆದಿದ್ದ ದಿನ ಸುಲಮತಾ ಹೇಳಿದ್ದರು. ಈ ಹಿಂದೆ ಸಿಎಂ ಕುಮಾರಸ್ವಾಮಿ ಮಂಡ್ಯಕ್ಕೆ ಸುಮಲತಾ ಕೊಡುಗೆ ಏನು ಅಂತ ಪ್ರಶ್ನಿಸಿ ವಿವಾದಕ್ಕೊಳಗಾಗಿದ್ದರು. ಇದನ್ನೂ ಓದಿ:  ಅಂಬರೀಶ್ ಹೆಸರಲ್ಲಿರೋ ಅರ್ಧ ಎಕರೆ ಜಮೀನನ್ನು ಗುರು ಕುಟುಂಬಕ್ಕೆ ಕೊಡುತ್ತೇನೆ: ಸುಮಲತಾ

    https://www.youtube.com/watch?v=8VMxyfP3zjM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯ ಜನರ ಅಭಿಪ್ರಾಯವೇ ಅಂತಿಮ: ಸುಮಲತಾ ಅಂಬರೀಶ್

    ಮಂಡ್ಯ ಜನರ ಅಭಿಪ್ರಾಯವೇ ಅಂತಿಮ: ಸುಮಲತಾ ಅಂಬರೀಶ್

    ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಮಂಡ್ಯ ಜನರು ಒತ್ತಾಯ ಮಾಡಿದ್ದು, ಜನರ ಅಭಿಪ್ರಾಯವನ್ನು ಸಿದ್ದರಾಮ್ಯಯ ಅವರಿಗೆ ಮಾಹಿತಿ ತಿಳಿಸಿದ್ದೇನೆ. ಜನರ ಅಪೇಕ್ಷೆಗಳನ್ನು ಅವರ ಮುಂದಿಟ್ಟಿದ್ದು, ಇದು ನನ್ನ ಕರ್ತವ್ಯ ಆಗಿತ್ತು ಅಷ್ಟೇ. ಅದಕ್ಕೆ ಸರ್ಕಾರದ ಸಮನ್ವಯ ಸಮಿತಿಯ ನಾಯಕರಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದೇನೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.

    ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಮಲತಾ ಅವರು, ಮಂಡ್ಯ ಅಭಿಮಾನಿಗಳು ಸಾಕಷ್ಟು ಒತ್ತಾಯ ಮಾಡಿದ್ದಾರೆ. ನಾನು ಈ ಬಗ್ಗೆ ಯೋಚನೆಯೇ ಮಾಡಿರಲಿಲ್ಲ. ಆದರೆ ಜನರು ತಮಗಾಗಿ ಈ ಕಾರ್ಯ ಮಾಡಿ ಎಂದು ಕೇಳಿದ್ದಾರೆ. ನಮ್ಮ ಇಡೀ ಕುಟುಂಬ ಅವರಿಗೆ ಋಣಿಯಾಗಿದೆ. ಅಂಬರೀಶ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಇದ್ದ ಕಾರಣ ಹಿರಿಯ ನಾಯಕ ಸಿದ್ದರಾಮಯ್ಯ ಅವರ ಅಭಿಪ್ರಾಯ ಕೇಳಿದ್ದೇನೆ. ಅದ್ದರಿಂದಲೇ ನಾನು ಇಲ್ಲಿಯವರೆಗೂ ಬಂದಿದ್ದೇನೆ. ಇದಕ್ಕೆಲ್ಲಾ ಜನರ ಒತ್ತಾಯವೇ ಕಾರಣ. ಪಕ್ಷ ಯಾವ ನಿರ್ಧಾರ ಮಾಡುತ್ತಾರೆ ಎನ್ನುವುದು ನಾನು ತಿಳಿದುಕೊಂಡು ಮುಂದೆ ಬರಬೇಕಿದೆ. ಇಲ್ಲವಾದಲ್ಲಿ ಸುಮ್ಮನೆ ಮುಂದುವರಿದರೆ ಜನರಿಗೆ ಉತ್ತಮ ಸಂದೇಶ ಹೋಗುವುದಿಲ್ಲ. ಆದ್ದರಿಂದ ಈ ಭೇಟಿ ಮಾಡಿದ್ದೇನೆ ಎಂದರು.

    ಸಮ್ಮಿಶ್ರ ಸರ್ಕಾರ ರಚನೆ ಆಗಿರುವ ಕಾರಣ ಜೆಡಿಎಸ್ ಪಕ್ಷಕ್ಕೆ ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟ್ಟರೆ ನಿಮ್ಮ ನಡೆ ಏನು ಪ್ರಶ್ನೆಗೆ ಉತ್ತರಿಸಿದ ಸುಮಲತಾ ಅವರು, ಪಕ್ಷದ ನಿರ್ಧಾರಕ್ಕೆ ಈ ವಿಚಾರವನ್ನು ಬಿಟ್ಟಿದ್ದೇನೆ. ಅವರು ಪಕ್ಷದಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಗಿಲ್ಲ ಎಂದರೆ ಮುಂದಿನ ಹಂತದಲ್ಲಿ ಏನು ಮಾಡಬೇಕು ಎಂದು ಜನರ ಬಳಿಯೇ ಕೇಳುತ್ತೇನೆ. ಅಲ್ಲದೇ ಸ್ವತಂತ್ರ ಅಭ್ಯರ್ಥಿಯಾಗಿ ಆಗುವ ಬಗ್ಗೆಯೂ ಜನರೇ ನಿರ್ಧಾರ ಮಾಡುತ್ತಾರೆ. ಈಗಾಗಲೇ ನಾನು ಈ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ. ಮಂಡ್ಯ ಜನರ ಅಭಿಪ್ರಾಯವೇ ಅಂತಿಮವಾಗುತ್ತದೆ ಎಂದರು.

    ನನ್ನ ಅಭಿಪ್ರಾಯವನ್ನು ಕೇಳಿದ ಸಿದ್ದರಾಮಯ್ಯ ಅವರು ಈ ಬಗ್ಗೆ ಯೋಚನೆ ಮಾಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಅಭಿಪ್ರಾಯ ಏನಿದೆ ಎಂಬುದನ್ನು ತಿಳಿದುಕೊಳ್ಳಬೇಕಿದೆ. ಹೀಗಾಗಿ ನಾನು ಯಾರನ್ನು ಒತ್ತಾಯ ಮಾಡಲ್ಲ. ನಾಳೆ ನಾನು ಮಂಡ್ಯ ಯೋಧ ಗುರು ಅವರ ಕುಟುಂಬವನ್ನು ಭೇಟಿ ಮಾಡುತ್ತಿದ್ದೇನೆ. ಇದು ಯಾವುದೇ ಕಾರಣಕ್ಕೂ ರಾಜಕೀಯ ಅಲ್ಲ. ಈ ಹಿಂದೆ ಮಾತು ಕೊಟ್ಟಿರುವಂತೆ ಅವರಿಗೆ ಸಹಾಯ ಮಾಡುವ ಉದ್ದೇಶ ಮಾತ್ರ ನನ್ನದು. ನಾಳೆ ನಾನು ಹೋಗುವುದು ವೀರ ಯೋಧರ ಮನೆಗೆ ಮಾತ್ರ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv