ಅರಬ್ಬರ ನೆಲದಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಾಲಯವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಕನ್ನಡದ ಹೆಸರಾಂತ ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರು ಪಾಲ್ಗೊಂಡಿದ್ದರು. ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ಬೋಚಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ (Bochasanwasi Akshar Purushottam Swaminarayan Sanstha) ಹಿಂದೂ ದೇವಾಲಯವನ್ನು ನಿರ್ಮಾಣ ಮಾಡಿದೆ.
ದೇವಾಲಯ ಉದ್ಘಾಟನೆಗೂ ಮುನ್ನ ಮಂದಿರದ ಹೊರಗಡೆ ಕಲ್ಯಾಣಿಗೆ ಗಂಗಾ ಪೂಜೆ ಕಾರ್ಯವನ್ನು ಮೋದಿ ನೆರವೇರಿಸಿದರು. ನಂತರ ಪ್ರವೇಶದ್ವಾರದಲ್ಲಿ ಟೇಪ್ ಕತ್ತರಿಸುವ ಮೂಲಕ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸುಮಲತಾ ಅಂಬರೀಶ್ ಅವರು ಆ ಕ್ಷಣವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಸಂಕೇತವಾಗಿರುವ ಅಬುಧಾಬಿಯ (Abudhavi) ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯು (BAPS) ನಿರ್ಮಿಸಿರುವ ಬೃಹತ್ ಹಿಂದೂ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿ ಆಗಲು ಅವಕಾಶ ಸಿಕ್ಕಿದ್ದು ಅತ್ಯಂತ ಹೆಮ್ಮೆ ಮತ್ತು ಭಗವಂತನ ಆಶೀರ್ವಾದವಾಗಿದೆ.
ವಸುದೈವ ಕುಟುಂಬಕಂ ಸಿದ್ಧಾಂತವನ್ನು ಯಾವಾಗಲೂ ಪ್ರತಿಪಾದಿಸುವ, ಜಗತ್ತೇ ಮೆಚ್ಚುವ ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮಂದಿರ ಉದ್ಘಾಟಿಸಿ, ಅಬುಧಾಬಿಯಲ್ಲಿ ಆಡಿದ ಸ್ಪೂರ್ತಿದಾಯಕ ಮಾತುಗಳು ಯುಎಇ ಮತ್ತು ಭಾರತದ ನಡುವಿನ ಬಾಂಧವ್ಯಕ್ಕೆ ಮತ್ತಷ್ಟು ಬಲ ತರುವುದರಲ್ಲಿ ಎರಡು ಮಾತಿಲ್ಲ.ಇಂತಹ ಪ್ರಧಾನಿ ಪಡೆದಿರುವುದು ನಮ್ಮೆಲ್ಲರ ಪುಣ್ಯ.
ಅಬುಧಾಬಿಯ ನೆಲದಲ್ಲಿ ಬೃಹತ್ ಹಿಂದೂ ಮಂದಿರ ನಿರ್ಮಾಣ ಮತ್ತು ಉದ್ಘಾಟನೆಯಂತಹ ಐತಿಹಾಸಿಕ ಕ್ಷಣಕ್ಕೆ ಹಾಗೂ ಆ ದೈವಿಕ ಅನುಭವಕ್ಕೆ ಸಾಕ್ಷಿಯಾಗಲು ನನಗೆ ಅವಕಾಶ ಮಾಡಿಕೊಟ್ಟ BAPS ಸಂಸ್ಥೆಯ ಸರ್ವರಿಗೂ ಮನತುಂಬಿದ ಕೃತಜ್ಞತೆಗಳು ಎಂದು ಬರೆದುಕೊಂಡಿದ್ದಾರೆ.
– ಮೈತ್ರಿ ಧರ್ಮ ಪಾಲಿಸಿ, ಸಂಘಟನೆಗೆ ಒತ್ತು ನೀಡುವಂತೆ ಶಾ ವಾರ್ನಿಂಗ್
ಮಂಡ್ಯ: ಈಗಾಗಲೇ 2024ರ ಲೋಕಸಭಾ ಚುನಾವಣೆಗೆ (Lok Sabha Elections) ಸಿದ್ಧತೆ ನಡೆಸಿರುವ ಬಿಜೆಪಿ ಸತತ 3ನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಭರ್ಜರಿ ತಾಲೀಮು ನಡೆಸಿದೆ.
ಅದರಲ್ಲೂ ಕಾಂಗ್ರೆಸ್ (Congress) ಆಡಳಿತದಲ್ಲಿರುವ ಕರ್ನಾಟಕವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಗೆಲುವಿನೊಂದಿಗೆ ಅತಿಹೆಚ್ಚು ಲೀಡ್ ಗಳಿಸುವತ್ತ ನಿಗಾ ವಹಿಸಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಮೈಸೂರಿಗೆ ಆಗಮಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಹೆಚ್ಚಿನ ಲೀಡ್‌ನೊಂದಿಗೆ ಗೆಲುವು ಸಾಧಿಸುವತ್ತ ಗಮನ ಹರಿಸುವಂತೆ ಪಕ್ಷದ ವರಿಷ್ಠರಿಗೆ ಸೂಚನೆ ನೀಡಿದ್ದಾರೆ.
ಸುಮಲತಾ ಪರ ಬ್ಯಾಟಿಂಗ್:
ಭಾನುವಾರ ಅಮಿತ್ ಶಾ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹೈವೋಲ್ಟೇಜ್ ಕಣವಾಗಿರುವ ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡದಂತೆ ಕೆಲ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ಪ್ರಸಂಗವೂ ಕೇಳಿಬಂದಿದೆ. ಹಾಲಿ ಸಂಸದೆ ಸುಮಲತಾ (umalatha Ambareesh) ಅವರಿಗೆ ಟಿಕೆಟ್ ನೀಡುವುದು ಸೂಕ್ತ ಎಂಬ ಸಲಹೆಗಳೂ ಕೇಳಿಬಂದಿವೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ; ರಾಜ್ಯದ ನಾರಾಯಣ ಕೃಷ್ಣನಾಸ ಭಾಂಡಗೆಗೆ ಬಿಜೆಪಿ ಟಿಕೆಟ್
ಸುಮಲತಾ ಅಂಬರೀಶ್ ಅವರಿಗೆ ಜಿಲ್ಲೆಯಲ್ಲಿ ಒಳ್ಳೆಯ ಹೆಸರು ಇದೆ. ಅವರಿಗೆ ಮೈತ್ರಿ (BJP-JDS Alliance) ಟಿಕೆಟ್ ನೀಡಿದ್ರೆ ಗೆಲುವು ಸುಲಭ. ಹಾಗಾಗಿ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡದಂತೆ ಪಟ್ಟು ಹಿಡಿದಿದ್ದಾರೆ. ಇದೆಲ್ಲವನ್ನು ಸಮಾಧಾನವಾಗಿಯೇ ಕೇಳಿಸಿಕೊಂಡ ಅಮಿತ್ ಶಾ ಅವರು ನೀವು ಕೂತಲ್ಲಿ ನಿಂತಲ್ಲಿ ನಿಮ್ಮ ಅಭಿಪ್ರಾಯ ಹೇಳಬೇಡಿ. ನಿಮ್ಮ ಮಾತಿನಿಂದ ಮೈತ್ರಿ ಧರ್ಮಕ್ಕೆ ಚೂರು ಧಕ್ಕೆಯಾದರೂ ನಾವು ಸಹಿಸಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮೈತ್ರಿ ಧರ್ಮ ಪಾಲಿಸಿ: ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆ (Mandya LokSabha Election) ರಂಗೇರಿದ್ದು ಹಾಲಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದಾರೆ.
ಈ ಭೇಟಿಯ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ (BJP-JDS) ಮಧ್ಯೆ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಇನ್ನೂ ಫೈನಲ್ ಆಗಿಲ್ಲ. ಈ ಹಿಂದೆ ಸುಮಲತಾ ಅಂಬರೀಶ್ ಅವರು ನಾನು ಈ ಬಾರಿ ಕಣಕ್ಕೆ ಇಳಿಯುತ್ತೇನೆ ಎಂದು ಹೇಳಿದ್ದರು. ಮೋದಿ ಭೇಟಿಗೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದರು. ಇದನ್ನೂ ಓದಿ: NDA ಒಕ್ಕೂಟ ಸೇರಲಿರುವ ಆರ್‌ಎಲ್‌ಡಿ- INDIA ಒಕ್ಕೂಟಕ್ಕೆ ಮತ್ತೊಂದು ಶಾಕ್
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ @PMOIndia ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು. @narendramodi ಶ್ರೀ ನರೇಂದ್ರ ಮೋದಿರವರು ವಿಶ್ವದ ಮಹಾನ್… pic.twitter.com/60y9sX7H53
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) February 9, 2024
ಸುಮಲತಾ ಪೋಸ್ಟ್‌ನಲ್ಲಿ ಏನಿದೆ?
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು.
ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸನ್ಮಾನ್ಯ ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಇದನ್ನೂ ಓದಿ: ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಸ್ವಾಮಿನಾಥನ್‌ಗೆ ಭಾರತ ರತ್ನ
ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ.
ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ.
17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ.
ಈ ಬಾರಿಯ ತಮ್ಮ ಭೇಟಿ ಸಂದರ್ಭದಲ್ಲಿ “ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ” ಎಂಬ ನಿಮ್ಮ ಮಾತುಗಳು ನನಗೆ ಸ್ಪೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ.
ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ, ಭಾರತ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ.
ಮಂಡ್ಯ: ಕಳೆದ ಬಾರಿಯ ಲೋಕಸಭಾ ಚುನಾವಣೆಯ (Loksabha Election 2019) ವೇಳೆ ಮಂಡ್ಯ ಕ್ಷೇತ್ರ ಅಕ್ಷರಶಃ ರಣರಂಗವಾಗಿತ್ತು, ಈ ರಣರಂಗದ ಚಕ್ರವ್ಯೂಹ ಭೇದಿಸಲು ನಿಖಿಲ್ ಕುಮಾರಸ್ವಾಮಿ ವಿಫಲಾರಾಗಿದ್ದರು. ಇದೀಗ ಮತ್ತೆ ನಿಖಿಲ್ ಮಂಡ್ಯ ರಣರಂಗಕ್ಕೆ ಪ್ರವೇಶ ಮಾಡಲು ವೇದಿಕೆ ಸಜ್ಜಾಗುತ್ತಿದೆ.
ರಾಜ್ಯ ರಾಜಕೀಯದಲ್ಲಿ ಹೆಚ್ಚು ಸೌಂಡ್ ಮಾಡುವ ಜಿಲ್ಲೆ ಮಂಡ್ಯ. ರಾಜ್ಯ ರಾಜಕಾರಣ ಮಾತ್ರವಲ್ಲ ಮಂಡ್ಯ ದೆಹಲಿ ರಾಜಕೀಯದಲ್ಲೂ ಶಬ್ಧ ಮಾಡುತ್ತೆ ಎಂದು ತೋರಿಸಿಕೊಟ್ಟಿದ್ದು, ಕಳೆದ ಲೋಕಸಭಾ ಚುನಾವಣೆ. ಹೌದು ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ದೇಶದಲ್ಲಿಯೇ ಅತೀ ಹೆಚ್ಚು ಸೌಂಡ್ ಮಾಡಿತ್ತು. ಇದಕ್ಕೆ ಕಾರಣವಾಗಿದ್ದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹಾಗೂ ಸಂಸದೆ ಸುಮಲತಾ ಅಂಬರೀಶ್ ಅವರ ನಡುವಿನ ಸ್ಪರ್ಧೆ. ಇವರಿಬ್ಬರ ನಡುವೆ ನಾಡದ ಲೋಕಸಭಾ ಕುರುಕ್ಷೇತ್ರದಲ್ಲಿ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಗೆದ್ದು ಬೀಗಿದ್ರು. ಇನ್ನೂ ಮಂಡ್ಯ ಲೋಕಸಭಾ ಕುರುಕ್ಷೇತ್ರದ ಚಕ್ರವ್ಯೂಹವನ್ನು ಭೇದಿಸಲಾಗದೆ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದ್ದರು.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ನಿಖಿಲ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ (Vidhanasabha Election) ರಾಮನಗರದಿಂದ ಕಣಕ್ಕಿಳಿದು ಅಲ್ಲೂ ಸೋಲು ಕಂಡಿದ್ರು. ಇದೀಗ ಮೊದಲು ಸೋತ ಜಾಗದಲ್ಲೇ ಗೆಲುವು ಕಾಣಬೇಕೆಂದು ನಿಖಿಲ್ ಮತ್ತೆ ಮಂಡ್ಯದಿಂದ ಲೋಕಸಭಾ ಕ್ಷೇತ್ರದಿಂದ ಅಗ್ನಿ ಪರೀಕ್ಷೆ ಎದುರಿಸಲು ಮುಂದಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ನಿಖಿಲ್ ಕುಮಾರಸ್ವಾಮಿ ಇದೇ ತಿಂಗಳು ಮಂಡ್ಯ ಲೋಕಸಭಾ ಕ್ಷೇತ್ರದ ಪ್ರವಾಸಕ್ಕೆ ಸಜ್ಜಾಗಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳ ರೌಂಡ್‌ಗೆ ನಿಖಿಲ್ ಮುಂದಾಗಿದ್ದಾರೆ. ಇದನ್ನೂ ಓದಿ: ಟೈಮ್ಸ್ ನೌ ಸಮೀಕ್ಷೆ – NDA 366, INDIA 104 ಸೀಟ್: ಕರ್ನಾಟಕದಲ್ಲಿ ಬಿಜೆಪಿ ದಳ ಮೈತ್ರಿಗೆ 23 ಸ್ಥಾನ
ಒಂದೊಂದು ದಿನ ಒಂದೊಂದು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿರುವ ನಿಖಿಲ್, ಇಡೀ ದಿನ ಆ ಕ್ಷೇತ್ರವನ್ನು ಸುತ್ತಲಿದ್ದಾರೆ. ಕಳೆದ ಬಾರಿ ಆದ ತಪ್ಪುಗಳು ಮರುಕಳಿಸಬಾರದೆಂದು ನಿಖಿಲ್ ಎಲ್ಲಾ ಘಟಕದ ಪದಾಧಿಕಾರಿಗಳನ್ನು ಭೇಟಿ ಚರ್ಚೆ ಮಾಡಲಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿಯ ಬಗ್ಗೆಯೂ ಮನವರಿಕೆ ಮಾಡಲಿದ್ದಾರೆ. ನಿಖಿಲ್ ಅವರ ಮಂಡ್ಯ ಲೋಕಸಭಾ ಕ್ಷೇತ್ರದ ಈ ಪ್ರವಾಸದಿಂದ ನಿಖಿಲ್ ಅವರೇ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆಗೋದು ಗ್ಯಾರಂಟಿ ಎಂದು ಮಂಡ್ಯ ರಾಜಕೀಯ ಪಡಸಾಲೆಯಲ್ಲಿ ಈಗಾಗಲೇ ಚರ್ಚೆಗಳು ಆರಂಭವಾಗಿವೆ.
ಒಟ್ಟಾರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅಭಿಮನ್ಯು ರೀತಿ ಚಕ್ರವ್ಯೂಹ ಭೇದಿಸಲಾಗದೇ ಮಂಡ್ಯದಲ್ಲಿ ಸೋಲು ಅನುಭವಿಸಿದ್ದ ನಿಖಿಲ್, ಇದೀಗ ಮತ್ತೆ ಮಂಡ್ಯದ ಚುನಾವಣಾ ರಣರಂಗಕ್ಕೆ ಧುಮುಕುತ್ತಾರಾ ಎಂದು ಕಾದು ನೋಡಬೇಕಿದೆ.
ಮಂಡ್ಯ: ಲೋಕಸಭಾ ಬಿಜೆಪಿ ಟಿಕೆಟ್ (Loksabha Ticket) ಆಕಾಂಕ್ಷಿಯಾಗಿರುವ ಸುಮಲತಾ ಅಂಬರೀಶ್ (Sumalatha Ambareesh) ಅವರಿಗೆ ಇದೀಗ ಆಪ್ತ ಸಚ್ಚಿದಾನಂದ ಅವರೇ ಶಾಕ್ ನೀಡಿದ್ರಾ ಎಂಬ ಪ್ರಶ್ನೆಯೊಂದು ಎದ್ದಿದೆ.
ಇಂದು ಮಂಡ್ಯದಲ್ಲಿ ಬಿಜೆಪಿ ಮುಖಂಡ ಡಾ.ಸಿದ್ದರಾಮಯ್ಯ (Dr. Siddaramaiah) ಬೆಂಬಲಿಗರ ಸಭೆ ನಡೆಯಿತು. ಡಾ.ಸಿದ್ದರಾಮಯ್ಯಗೆ ಬಿಜೆಪಿ ಟಿಕೆಟ್ (Mandya BJP Ticket) ನೀಡುವಂತೆ ಒತ್ತಾಯಿಸಿ ನಡೆದ ಸಭೆಯಲ್ಲಿ ಬಿಜೆಪಿಯ (Loksabha BJP Ticket) ಹಲವು ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಆದರೆ ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಅವರು ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಅಚ್ಚರಿ ಸೃಷ್ಟಿಸಿದರು. ಈ ಮೂಲಕ ಸುಮಲತಾ ಜೊತೆ ಸಚ್ಚಿದಾನಂದ ಅವರು ಅಂತರ ಕಾಯ್ದುಕೊಂಡ್ರಾ ಎಂಬ ಚರ್ಚೆ ಶುರುವಾಗಿದೆ.
ಸಭೆಯ ಬಳಿಕ ಸಚ್ಚಿದಾನಂದ ಮಾತನಾಡಿ, ಸಿದ್ದರಾಮಣ್ಣ ತ್ಯಾಗಿ. ಎಲ್ಲಾ ಪಕ್ಷದಲ್ಲಿ ಅವರಿಗೆ ಸ್ನೇಹಿತರಿದ್ದರು. ನರೇಂದ್ರ ಮೋದಿ ನಾಯಕತ್ವ ಒಪ್ಪಿ ಅವರು ಬಿಜೆಪಿ ಸೇರಿದರು. 6 ತಿಂಗಳ ಅವಧಿಗೆ ನಡೆದ ಎಂಪಿ ಉಪಚುನಾವಣೆಯಲ್ಲಿ ಸ್ಪರ್ಧಿಸಿದರು. ಬಿಜೆಪಿ ಪರವಾಗಿ ಅತಿ ಹೆಚ್ಚು ಮತಗಳಿಸಿದರು. ಕರ್ಣನ ರೀತಿ ಸುಮಲತಾ ಮೇಡಂ ಅವರಿಗೆ ತನ್ನ ಸ್ಥಾನ ತ್ಯಾಗ ಮಾಡಿದರು. ಶ್ರೀರಂಗಪಟ್ಟಣ ಕ್ಷೇತ್ರವನ್ನು ನನಗಾಗಿ ಬಿಟ್ಟುಕೊಟ್ಟರು. ಸಿದ್ದರಾಮಣ್ಣನ ಕೈ ಬಲಪಡಿಸಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ತಾಳ್ಮೆ, ಜಾಣ್ಮೆಯ ನಾಯಕ ಸಿದ್ದರಾಮಯ್ಯ. ಹೀಗಾಗಿ ಸಿದ್ದರಾಮಯ್ಯ ಪರ ನಾವೀರುತ್ತೇವೆ. ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತೇವೆ ಎಂದು ಹೇಳಿದರು.
ಬಿಜೆಪಿ ಟಿಕೆಟ್ ಅಕಾಂಕ್ಷಿ ಡಾ.ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಇಂದು ನನ್ನ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. ನನ್ನ ಜನ ನನ್ನ ಕಾರ್ಯಕರ್ತರು ನನ್ನನ್ನು ಗುರುತಿಸಿದ್ದಾರೆ. ನನಗೆ ಟಿಕೆಟ್ ಕೊಡಲು ಅವರೆಲ್ಲರು ಒತ್ತಾಯಿಸಿದ್ದಾರೆ. ನನಗೆ ಅಧಿಕಾರದ ಆಸೆ ಇಲ್ಲ. ಕಾರ್ಯಕರ್ತರು ತೋರಿದ ಪ್ರೀತಿಯ ಅಭಿಮಾನ ನನಗೆ ಸಂತೋಷ ತಂದಿದೆ. ಬಿಜೆಪಿ ಮಂಡ್ಯ ಜಿಲ್ಲೆಯಲ್ಲಿ ಸದೃಢವಾಗಿದೆ, ಅದ್ಭುತ ಶಕ್ತಿ ಹೊಂದಿದೆ. ಕಳೆದ ವಿಧಾನಸಭೆಯಲ್ಲಿ ಬಿಜೆಪಿ ಹೆಚ್ಚಿನ ಮತ ಪಡೆದಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರ ಗೆಲ್ಲುವ ವಿಶ್ವಾಸ ಇದೆ. ಲೋಕಸಭೆಯಲ್ಲಿ ನಮಗೆ ಟಿಕೆಟ್ ಕೊಟ್ರೆ ಗೆಲ್ಲುವ ವಿಶ್ವಾಸ ಇದೆ. ನಮ್ಮನ್ನು ಕಡೆಗಣಿಸುವ ಕೆಲಸ ಆಗಬಾರದು. ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ಕಾರ್ಯಕರ್ತರೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.
ಸಭೆಯಲ್ಲಿ ಮುಖಂಡರಾದ ಡಾ.ಸಿದ್ದರಾಮಯ್ಯ, ಅಶೋಕ್ ಜಯರಾಂ, ಸ್ವಾಮಿ, ಚಂದಗಾಲು ಶಿವಣ್ಣ ಸೇರಿದಂತೆ ಬಿಜೆಪಿಯ ಹಲವು ಪದಾಧಿಕಾರಿಗಳು ಭಾಗಿಯಾಗಿದ್ದರು. ಸಭೆಯ ಬಳಿಕ ಮಂಡ್ಯ ಬಿಜೆಪಿ ಕಾರ್ಯಕರ್ತರಿಗೆ ಬಾಡೂಟ ಆಯೋಜನೆ ಮಾಡಲಾಯಿತು. ಗೀರೈಸ್, ಮೊಟ್ಟೆ, ಚಿಕನ್ ಚಾಪ್ಸ್, ನಾಟಿ ಕೋಳಿ ಸಾಂಬಾರ್ ಮೆನುವಿನಲ್ಲಿತ್ತು.
ನವದೆಹಲಿ: ಲೋಕಸಭಾ ಚುನಾವಣೆ (Loksabha Election) ಹತ್ತಿರ ಬರುತ್ತಿದ್ದು, ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತವೆ. ಈ ಮಧ್ಯೆ ಲೋಕಸಭಾ ಅಭ್ಯರ್ಥಿಗಳಾಗಿ ಕಣಕ್ಕಿಳಿಸಲು ಕೂಡ ತಯಾರಿ ನಡೆಸಲಾಗುತ್ತದೆ. ಅಂತೆಯೇ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumlatha Ambareesh) ಅವರು ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಚರ್ಚೆ ಆರಂಭವಾಗಿದೆ. ಈ ಸಂಬಂಧ ಸ್ವತಃ ಸುಮಲತಾ ಅವರೇ ಸ್ಪಷ್ಟನೆ ಕೂಡ ನೀಡಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸ್ಪರ್ಧೆ ಮಾಡುವ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಆಗ್ತಿರುವ ಚರ್ಚೆ ಅಷ್ಟೇ. ಆದರೆ ಈ ಬಗ್ಗೆ ನಾನೆಲ್ಲಿಯೂ ಮಾತಾಡಿಲ್ಲ, ನನ್ನ ಬಳಿ ಯಾರು ಸಹ ಕೇಳಿಲ್ಲ. ಉಹಾಪೋಹ ಎಲ್ಲಾ ಕಡೆ ಹರಿದಾಡುತ್ತಿದೆ. ಆದರೆ ನಾನು ಮಂಡ್ಯದಲ್ಲಿ ಸ್ಪರ್ಧಿಸುವ ಬಗ್ಗೆ ಮಾತ್ರ ಗಮನ ಹರಿಸುತ್ತಿದ್ದೇನೆ ಎಂದರು.
ಮಂಡ್ಯಕ್ಕೆ ಬಿಜೆಪಿ ಸಂಸದೆ (BJP MP) ನಾನಾಗಬೇಕು: ನನ್ನ ಆಸೆ ಮಂಡ್ಯಕ್ಕೆ ಬಿಜೆಪಿ ಸಂಸದೆ ನಾನು ಆಗಬೇಕು ಅಂತ, ಇದ್ರಲ್ಲಿ ತಪ್ಪೇನಿದೆ?. 2018 ವಿಧಾನಸಭಾ ಚುನಾವಣೆಯಲ್ಲಿ ನೋಡಿದರೆ ಬಿಜೆಪಿಗೆ ಎಷ್ಟು ಶೇಕಡಾ ಮತ ಬಂದಿದೆ ಅಂತ ಗೊತ್ತಾಗುತ್ತೆ. ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಬೇರೆ ಬೇರೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಶಕ್ತಿ ಹಾಗೂ ಬಿಜೆಪಿ ಇವೆಲ್ಲಾ ಬಳಸಿ ಮತ್ತೆ ಮಂಡ್ಯದಲ್ಲಿ ಬಿಜೆಪಿ ಬಾವುಟ ಹಾರಿಸಬೇಕು ಅನ್ನೋ ಆಸೆ ನನಗಿದೆ. ಹೀಗಾಗಿ ಬಿಜೆಪಿ ಈ ಸೀಟ್ ಅನ್ನು ಉಳಿಸಿಕೊಳ್ಳುತ್ತೆ ಅನ್ನೋ ನಂಬಿಕೆ ನನಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಜಕೀಯವಾಗುತ್ತೆ ಅಂತಾ ನಾನು ಕೆರಗೋಡಿಗೆ ಹೋಗಿಲ್ಲ: ಸುಮಲತಾ ಅಂಬರೀಶ್
ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರು ಮಂಡ್ಯ ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿದ್ದರು. ಈ ವೇಳೆ ಅವರಿಗೆ ಬಿಜೆಪಿಯು ಬಾಹ್ಯ ಬೆಂಬಲ ಘೋಷಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಸಮೀಕರಣಗಳು ಬದಲಾಗಿವೆ. ಬಿಜೆಪಿ – ಜೆಡಿಎಸ್ ಮೈತ್ರಿಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರನ್ನು ಕೇಂದ್ರದಲ್ಲಿ ಮಂತ್ರಿ ಮಾಡಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮಂಡ್ಯ ಕ್ಷೇತ್ರಕ್ಕಾಗಿಯೇ ಪಟ್ಟು ಹಿಡಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
– ನಾನು ಹೋಗಿ ಪರಿಸ್ಥಿತಿ ಕಂಟ್ರೋಲ್ ಮಾಡೋಕೆ ಆಗಲ್ಲ
– ಇದರಲ್ಲಿ ಮಂಡ್ಯ ಶಾಸಕರು ರಾಜಕಾರಣ ಮಾಡಿದ್ದಾರೆ
ನವದೆಹಲಿ: ಮಂಡ್ಯದ ಕೆರಗೋಡಿನಲ್ಲಿ (Keragodu Mandya) ನಡೆದ ಹನುಮ ಧ್ವಜ ಗಲಾಟೆ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ಅವರು ಕೊನೆಗೂ ಮೌನ ಮುರಿದಿದ್ದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ದೆಹಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕೆರಗೋಡಲ್ಲಿ ನಡೆದ ಘಟನೆ ನೋಡಿ ಬೇಸರ ಆಗಿದೆ. ನಾನು ಈಗ ಆ ಸ್ಥಳಕ್ಕೆ ಹೋದ್ರೆ ಅದು ರಾಜಕೀಯ ಆಗುತ್ತೆ. ಹೀಗಾಗಿ ನಾನು ಅಲ್ಲಿ ಹೋಗಿ ಪರಿಸ್ಥಿತಿ ಕಂಟ್ರೋಲ್ ಮಾಡೋಕೆ ಆಗಲ್ಲ. ನಾನು ಬೇಕು ಅಂತಲೇ ಆ ಸ್ಥಳಕ್ಕೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಕೆರಗೋಡು ಜನರೇ ಯಾವ ರೀತಿ ಹೋರಾಟ ಮಾಡ್ತಿದ್ದಾರೆ ಅನ್ನೋದು ನೋವಿನ ವಿಚಾರ. ಇಷ್ಟರ ಮಟ್ಟಿಗೆ ಆಗುವಂತಹ ಅಗತ್ಯವೇ ಇರಲಿಲ್ಲ. ಒಬ್ಬರು ಮಾಡಿದ್ದ ತಪ್ಪಿಗೆ ಇಡೀ ಸರ್ಕಾರ ಬಂದು ಸಮರ್ಥನೆ ಮಾಡುವ ಪರಿಸ್ಥಿತಿಗೆ ಬಂದಿದೆ ಎಂದರು.
ಗ್ರಾಮಸ್ಥರಿಗೆ ಎಲ್ಲರೂ ಸಹಕಾರ ಕೊಟ್ಟಿದ್ದಕ್ಕೆ ಆ ಧ್ವಜವನ್ನ ಹಾರಿಸೋಕೆ ಸಾಧ್ಯ ಆಗಿದೆ. ಆ ಧ್ವಜ ಹಾರಿಸಿ 6 ದಿನಗಳ ಕಾಲ ಯಾರಿಗೂ ಏನು ಸಮಸ್ಯೆ ಇರಲಿಲ್ಲ. ಯಾವ ಅಧಿಕಾರಿ ಬಂದಿಲ್ಲ, ಯಾರಿಗೂ ನೋವಾಗಿಲ್ಲ ಅಥವಾ ಗಲಭೆನೂ ಆಗಿಲ್ಲ. ಹೀಗಿರುವಾಗ ರಾತ್ರಿ 3 ಗಂಟೆ ಹೊತ್ತಲ್ಲಿ ಏಕಾಏಕಿ ಬಂದು ಈ ರೀತಿ ಮಾಡಿದ್ದಾರೆ. ಯಾರ ಸೂಚನೆ ಮೇರೆಗೆ ಬಂದು ಈ ರೀತಿ ಮಾಡಿದ್ದಾರೋ ಅಂತ ಗೊತ್ತಾಗಬೇಕಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹನುಮಧ್ವಜ ತೆರವು ಖಂಡಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್
ಜನರನ್ನ ವಿಶ್ವಾಸಕ್ಕೆ ಪಡೆದು ಮಾಡಿದ್ರೆ ಕೆರಗೋಡಲ್ಲಿ ಈ ರೀತಿ ಬೆಂಕಿ ಉರಿತಾ ಇರಲಿಲ್ಲ. ಅಲ್ಲಿ ನಡೆದಿರೋ ಪ್ರತಿಭಟನೆಯಲ್ಲಿ ಒಬ್ಬರ ಕಣ್ಣು ಹೋಯ್ತು, ಅದನ್ನ ಯಾರು ವಾಪಸ್ ತಂದು ಕೊಡೋಕೆ ಆಗುತ್ತೆ..?. ಈ ಪರಿಸ್ಥಿತಿಯಲ್ಲಿ ಅಲ್ಲಿ ಪೊಲೀಸರು ಬರಬೇಕು. ಬೇರೆಯವರು ಎಲ್ಲಾ ಬರ್ತಿದ್ದಾರೆ ಪ್ರತಿಭಟನೆ ಸಹ ಮಾಡುತ್ತಿದ್ದಾರೆ. ಆದರೆ ನಾನು ಎಂಪಿ ಆಗಿ ಬೇರೆ ಸ್ಟ್ಯಾಂಡ್ ತೆಗೆದುಕೊಳ್ಳಬೇಕಾಗುತ್ತದೆ. ನಾನು ಪ್ರತಿಭಟನೆಯಲ್ಲಿ ಭಾಗವಹಿಸೋಕೇ ಆಗಲ್ಲ, ಆದ್ರೆ ಜನರ ಭಾವನೆ ಜೊತೆ ನಾನು ಇರುತ್ತೇನೆ ಎಂದರು.
ಮಂಡ್ಯ ಶಾಸಕರ ವಿರುದ್ಧ ಕಿಡಿ: ಸರ್ಕಾರ ಈ ರೀತಿ ಮಾಡಿದೆ ಅಂತ ನಾನು ಹೇಳೋಕೆ ಇಷ್ಟ ಪಡಲ್ಲ. ಮಂಡ್ಯ ಶಾಸಕರು ಇದರಲ್ಲಿ ಶಾಮೀಲು ಆಗಿದ್ದಾರೆ ಅನ್ನೋದು ನಿಜ. ಅಲ್ಲಿನ ಗ್ರಾಮಸ್ಥರು ಸಹ ಇದೇ ಮಾತನ್ನು ಹೇಳುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ಮಂಡ್ಯ ಶಾಸಕರು ಕರೆದಿಲ್ಲ ಅಂತ ಈ ರೀತಿ ಮಾಡಿದ್ದಾರೆ. ಒಟ್ಟಿನಲ್ಲಿ ಮಂಡ್ಯ ಶಾಸಕರು ಇದರಲ್ಲಿ ರಾಜಕಾರಣ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಒಬ್ಬರ ಅಹಂ, ಪ್ರತಿಷ್ಠೆಯಿಂದಾಗಿ ಇಷ್ಟೆಲ್ಲ ಆಗಿದೆ. ಸರ್ಕಾರಕ್ಕೂ ಗೊತ್ತಿರಬೇಕು ಯಾರದ್ದು ತಪ್ಪು ಅಂತ. ಇಡೀ ಸರ್ಕಾರವನ್ನ ನಾನು ಬ್ಲೇಮ್ ಮಾಡಲ್ಲ. ಆದ್ರೆ ಸ್ಥಳೀಯ MLA ಇಲ್ಲಿ ಎಡವಿದ್ದಾರೆ ಅನ್ನೋದು ಸ್ಪಷ್ಟ. ಈಗ ಅವರು ಅದನ್ನ ಕವರ್ ಮಾಡೋಕೆ ಪ್ರತ್ಯಾರೋಪ ಮಾಡುತ್ತಿದ್ದಾರೆ. ಈಗ ಶಾಂತಿ ನೆಲೆಸುವತ್ತ ಕೆಲಸ ಮಾಡಬೇಕು ಎಂದು ಸುಮಲತಾ ಹೇಳಿದರು.
– ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು
– ತಾರಕ್ಕೇರುತ್ತಿದೆ ಪ್ರತಿಭಟನೆಯ ಕಿಚ್ಚು
ಮಂಡ್ಯ: ತಾಲೂಕಿನ ಕೆರಗೋಡು ಗ್ರಾಮದಲ್ಲಿ ಪೊಲೀಸರು ಹನುಮಧ್ವಜ (Hanuma Flag) ತೆರವುಗೊಳಿಸಿದ್ದು, ಸಂಘರ್ಷಕ್ಕೆ ಕಾರಣವಾಗಿದೆ. ಕೆರಗೋಡು ಗ್ರಾಮದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದ್ದು, ಪೊಲೀಸರು ಗ್ರಾಮಸ್ಥರ ನಡುವೆ ತಳ್ಳಾಟ ನೂಕಾಟವೂ ನಡೆದಿದೆ.
ಪೊಲೀಸರ (Mandya Police) ವಿರುದ್ಧವೇ ಘರ್ಷಣೆಗೆ ಮುಂದಾಗಿರುವ ಹಿಂದೂ ಕಾರ್ಯಕರ್ತರು ಧ್ವಜಸ್ತಂಬದ ಸುತ್ತಲೂ ನಿಂತು ಮತ್ತೆ ರಾಮನ ಫೋಟೋ ಕಟ್ಟಿದ್ದಾರೆ. ಸದ್ಯ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಹನುಮಧ್ವಜ ತೆರವುಗೊಳಿಸಿದ್ದು, ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಈ ಘಟನೆ ಕುರಿತು ಹಲವು ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮಂಡ್ಯ ಸಂಸದೆ ಸುಮಲತಾ (Sumalatha Ambareesh )ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್‌ಬುಕ್ ಪುಟದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಫೇಸ್ ಬುಕ್ ಪುಟದಲ್ಲಿ ಏನಿದೆ?
ಮಂಡ್ಯ ತಾಲ್ಲೂಕು ಕೆರೆಗೋಡು ಗ್ರಾಮದ ಶ್ರೀ ಗೌರಿ ಶಂಕರ್ ಸೇವಾ ಟ್ರಸ್ಟ್ ಮೂರು ದಶಕಗಳಿಂದ ಧಾರ್ಮಿಕ, ಸಾಮಾಜಿಕ ಸೇವೆಯನ್ನು ಮಾಡುತ್ತಾ ಬಂದಿದೆ. ಈ ಬಾರಿ 108 ಅಡಿ ಧ್ವಜ ಸ್ಥಂಬ ನಿರ್ಮಿಸಿ ಹನುಮಧ್ವಜ ಹಾರಿಸಿದೆ. ಇದೀಗ ವಿವಾದವಾಗಿ ಏರ್ಪಟ್ಟಿರುವುದು ಅತ್ಯಂತ ನೋವು ತಂದಿದೆ. ಸೇವಾ ಟ್ರಸ್ಟ್, ಹಾಗೂ ಊರಿನ ಮುಖಂಡರು ಈವರೆಗೂ ಯಾವುದೇ ಜಾತಿ, ಧರ್ಮ ಲೆಕ್ಕಿಸದೇ ಇಂತಹ ಧಾರ್ಮಿಕ ಆಚರಣೆಗಳನ್ನು ಮಾಡುತ್ತಾ ಬಂದಿದ್ದಾರೆ. ಈ ಬಾರಿ ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆ ಆಗಿರುವುದರಿಂದ ಆ ಸಂಭ್ರಮವನ್ನು ದೊಡ್ಡ ಮಟ್ಟದಲ್ಲಿ ಆಚರಿಸಲು ಹೊರಟಿದ್ದರು. ಆದರೆ, ರಾಜಕೀಯ ಕಾರಣಕ್ಕಾಗಿ ಈ ಸಂಭ್ರಮವನ್ನು ತಡೆಯುವ ಪ್ರಯತ್ನ ನಡೆದಿದೆ ಎನ್ನುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ.
ಏಕಾಏಕಿ ಹನುಮಧ್ವಜ ಕೆಳಗಿಳಿಸಿ, ರಾಮನ ಬ್ಯಾನರ್ ಕಿತ್ತು ಹಾಕಿರುವುದು ಸರಿಯಾದ ಕ್ರಮವಲ್ಲ. ಜಿಲ್ಲಾಡಳಿತ ಅಥವಾ ಸ್ಥಳೀಯ ಅಧಿಕಾರಿಗಳು ಊರಿನ ಮುಖಂಡರೊಂದಿಗೆ ಚರ್ಚಿಸಿ ಸೂಕ್ತ ಸಲಹೆ ನೀಡಬೇಕಿತ್ತು. ಯಾವುದಕ್ಕಾಗಿ ಅನುಮತಿ ನೀಡಲಾಗಿದೆ ಎನ್ನುವ ಅರಿವು ನೀಡಬೇಕಿತ್ತು. ಆದರೆ, ಬಲವಂತದ ಕ್ರಮ ತೆಗೆದುಕೊಂಡು ಜಾತಿ, ಧರ್ಮಗಳ ನಡುವೆ ಕಿತ್ತಾಟ ನಡೆಯುವಂತಹ ವಾತಾವರಣ ಸೃಷ್ಟಿ ಮಾಡಿರುವುದು ಬೇಸರ ತಂದಿದೆ.
ಊರಿನ ಮುಖಂಡರ ಜೊತೆ ಅಧಿಕಾರಿಗಳು ಮಾತನಾಡಿ, ಅಲ್ಲಿ ಜರೂರಾಗಿ ಶಾಂತಿ ನೆಲೆಸುವಂತ ಮಾಡಿ. ಧಾರ್ಮಿಕ ಆಚರಣೆಗೆ ಅನುವು ಮಾಡಿಕೊಟ್ಟು ಸೌಹಾರ್ದಕ್ಕೆ ಹೆಸರಾಗಿರುವ ಮಂಡ್ಯ ಜಿಲ್ಲೆಗೆ ಕಪ್ಪು ಚುಕ್ಕಿ ತರದಂತೆ ಆಡಳಿತ ವ್ಯವಸ್ಥೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡುವೆ. ಈ ಸಮಯದಲ್ಲಿ ಪರಿಸ್ಥಿತಿಯ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು, ಜನರ ಭಾವನೆಗಳಿಗೆ ಧಕ್ಕೆ ತರದಂತೆ, ಅವಮಾನಿಸದಂತೆ ಜಿಲ್ಲಾ ಆಡಳಿತ ಮತ್ತು ಜನಪ್ರತಿನಿಧಿಗಳು ನಡೆದುಕೊಳ್ಳಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದು ಬರೆದುಕೊಂಡಿದ್ದಾರೆ.
ಭಾರತದ ಅತ್ಯುನ್ನತ ನಾಗರೀಕ ಗೌರವ ಪದ್ಮ ಪ್ರಶಸ್ತಿಗಳು ನಿನ್ನೆ ಪ್ರಕಟಗೊಂಡಿವೆ. ತೆಲುಗಿನ ಮೆಗಾಸ್ಟಾರ್ ಚಿರಂಜೀವಿ (Chiranjeevi) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಕಟವಾಗಿದ್ದು ನಟಿ, ಸಂಸದೆ ಸುಮಲತಾ ಅಂಬರೀಶ್ (Sumalatha Ambarish) ಅವರು ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಚಿರಂಜೀವಿ ಅವರನ್ನು ಅಭಿನಂದಿಸಿದ್ದಾರೆ.
ಈ ಗೌರವಕ್ಕೆ ನೀವು ಅರ್ಹವಾದ ವ್ಯಕ್ತಿ. ಪ್ರಶಸ್ತಿ ಪ್ರಕಟಗೊಂಡಿದ್ದು ಕೇಳಿ ಅತ್ಯಂತ ಹೆಮ್ಮೆ ಅನಿಸಿತು. ನಿಮ್ಮೊಂದಿಗೆ ಸುಂದರವಾದ ಚಿತ್ರಗಳಲ್ಲಿ ಅಭಿನಯಿಸಿದ್ದಕ್ಕೆ ಮತ್ತು ಸಾಕಷ್ಟು ಕ್ಷಣಗಳನ್ನು ಒಟ್ಟಿಗೆ ಕಳೆದಿದ್ದಕ್ಕೆ ಹೆಮ್ಮೆ ಅನಿಸುತ್ತದೆ. ಅದೊಂದು ಅದ್ಭುತವಾದ ಜರ್ನಿ. ನಿಮ್ಮ ಮುಂದಿನ ಜೀವನಕ್ಕೆ ಈ ಪ್ರಶಸ್ತಿ ಒಂದು ಗರಿ ಎಂದು ಅವರು ಬರೆದುಕೊಂಡಿದ್ದಾರೆ.
ಗಣರಾಜ್ಯೋತ್ಸವದ ಮುನ್ನಾ ದಿನ 2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Awards 2024) ಪ್ರಕಟಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ದೊರೆತಿದೆ. ಸಾಧಕರಿಗೆ ಪದ್ಮ ವಿಭೂಷಣ, ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಅದರಂತೆ ಹಲವು ವರ್ಷಗಳಿಂದ ಕಲಾ ಸೇವೆ ಮಾಡಿರುವ ಅನೇಕ ಗಣ್ಯರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಅಗಲಿದ ಕನ್ನಡದ ಹಿರಿಯ ನಟಿ ಲೀಲಾವತಿ (Leelavati) ಅವರ ನಿಧನಕ್ಕೆ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ (Sumalatha Ambarish) ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. ಜೊತೆಗೆ ಅವರ ಜೊತೆ ನಟಿಸಿರುವ ಸಿನಿಮಾದ ಕುರಿತು ಹೇಳಿಕೊಂಡಿದ್ದಾರೆ.
ಕನ್ನಡದ ಹೆಸರಾಂತ ಹಿರಿಯ ನಟಿ ಡಾ.ಲೀಲಾವತಿ ಅವರ ನಿಧನದ (Death) ಸುದ್ದಿ ತೀವ್ರ ಆಘಾತ ತಂದಿದೆ. ದಕ್ಷಿಣದ ಸಿನಿಮಾ ರಂಗಕ್ಕೆ ಇದು ತುಂಬಲಾರದ ನಷ್ಟ. ಆರನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಲೀಲಾವತಿ ಅವರು ನಾನಾ ಭಾಷೆಗಳಲ್ಲಿ ನಟಿಸುವ ಮೂಲಕ ದಕ್ಷಿಣ ಯಶಸ್ವಿ ನಟಿಯಾಗಿದ್ದರು. ಅವರೊಂದಿಗೆ ನನಗೂ ಕಥಾನಾಯಕ ಸಿನಿಮಾದಲ್ಲಿ ಪಾತ್ರ ಮಾಡಲು ಅವಕಾಶ ಸಿಕ್ಕಿತ್ತು ಎಂದು ಸುಮಲತಾ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ.
ಅಗಲಿಕೆ ನೋವನ್ನು ಭರಿಸುವಂತಹ ಶಕ್ತಿಯನ್ನು ಲೀಲಾವತಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವೆ ಎಂದು ಅವರು ಹೇಳಿದ್ದಾರೆ. ಲೀಲಾವತಿ ಅವರ ಜೊತೆಗೆ ಆತ್ಮೀಯ ಬಾಂಧವ್ಯ ಹೊಂದಿದ್ದ ಸುಮಲತಾ ಅವರು ವಿಷ್ಣುವರ್ಧನ್ ನಾಯಕನಾಗಿ ನಟಿಸಿದ್ದ ಕಥಾ ನಾಯಕ ಚಿತ್ರದಲ್ಲಿ ಲೀಲಾವತಿ ಅವರ ಜೊತೆ ನಟಿಸಿದ್ದಾರೆ. ಇದು ಪಿ. ವಾಸು ನಿರ್ದೇಶನದ ಸಿನಿಮಾ.
ಉಮಾಶ್ರೀ ಕಂಬನಿ
ಲೀಲಾವತಿ ಅವರು ಬಹಳಷ್ಟು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ನಿರ್ಮಾಪಕಿಯಾಗಿ, ನಟಿಯಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಸಣ್ಣ ವಯಸ್ಸಿನಲ್ಲೇ ಸಿನಿಮಾಗೆ ಬಂದವರು ಲೀಲಾವತಿ ಅವರು. ಆನಂತರ ದೊಡ್ಡ ರೀತಿಯಲ್ಲಿ ನಾಯಕಿ ನಟಿಯಾಗಿ ಬೆಳೆದರು. ಸಾಕಷ್ಟು ಸಿನಿಮಾಗಳನ್ನು ಕೊಟ್ಟವರು. ಅಂತಹ ಕಲಾವಿದರು ನಮ್ಮೊಂದಿಗೆ ಇದ್ದರು ಎನ್ನೋದೇ ಹೆಮ್ಮೆ ಅನಿಸುತ್ತಿದೆ ಎನ್ನುವುದು ನಟಿ ಉಮಾಶ್ರೀ ಮಾತು.
ಲೀಲಾವತಿ ಅವರದ್ದು ಮಾದರಿ ಜೀವನ. ಆ ತಾಯಿ ಸಾಕಷ್ಟು ಕಷ್ಟ ಪಟ್ಟಿದ್ಧಾರೆ. ಸನ್ಮಾನ, ಅವಮಾನ ಎರಡನ್ನೂ ಪಡೆದಿದ್ದಾರೆ. ತಾಯಿ ಮತ್ತು ಮಗನ ಬಾಂಧವ್ಯಕ್ಕೆ ಮಾದರಿ ಆದಂತಹ ಜೀವವದು. ಈಗ ತಾಯಿ ಮಗ ದೂರವಾಗಿದ್ದು ನೋವು ತಂದಿದೆ. ಅವರು ಇಲ್ಲ ಅನ್ನೋದು ನಂಬೋಕೆ ಆಗ್ತಿಲ್ಲ. ಮಹಿಳೆಯಾಗಿ ಸಮಾಜಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ ಲೀಲಮ್ಮ. ಅವರ ಹಾಕಿಟ್ಟ ದಾರಿ ನಮಗೆಲ್ಲ ಮಾದರಿಯಾಗಬೇಕು ಎಂದಿದ್ದಾರೆ ನಟಿ, ಮಾಜಿ ಸಚಿವೆ ಉಮಾಶ್ರೀ.