Tag: ಸುಮುಖ

  • ‘ಮನದ ಕಡಲು’ ಚಿತ್ರಕ್ಕಾಗಿ ಮತ್ತೆ ‘ಮುಂಗಾರು ಮಳೆ’ ನಿರ್ಮಾಪಕನ ಜೊತೆ ಕೈಜೋಡಿಸಿದ ಯೋಗರಾಜ್‌ ಭಟ್‌

    ‘ಮನದ ಕಡಲು’ ಚಿತ್ರಕ್ಕಾಗಿ ಮತ್ತೆ ‘ಮುಂಗಾರು ಮಳೆ’ ನಿರ್ಮಾಪಕನ ಜೊತೆ ಕೈಜೋಡಿಸಿದ ಯೋಗರಾಜ್‌ ಭಟ್‌

    ‘ಮುಂಗಾರು ಮಳೆ’ (Mungaru Male) ಸಿನಿಮಾ ನಿರ್ಮಿಸಿದ್ದ ಇ. ಕೃಷ್ಣಪ್ಪ ಅವರು ನಿರ್ದೇಶಕ ಯೋಗರಾಜ್ ಭಟ್ (Yogaraj) ಜೊತೆ ಮತ್ತೊಮ್ಮೆ ಕೈಜೋಡಿಸಿದ್ದಾರೆ. ಹಲವು ವರ್ಷಗಳ ಬಳಿಕ ಮತ್ತೆ ಈ ಜೋಡಿ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದ ‘ಮನದ ಕಡಲು’ (Manada Kadalu) ಸಿನಿಮಾಗೆ ಯೋಗರಾಜ್‌ ಭಟ್‌ ಆಕ್ಷನ್‌ ಕಟ್‌ ಹೇಳಿದ್ದಾರೆ. ಇದನ್ನೂ ಓದಿ:ನಿಮ್ಮ ಪ್ರೀತಿಯನ್ನು ಹೃದಯದಲ್ಲಿ ಬಚ್ಚಿಟ್ಟುಕೊಳ್ಳುತ್ತೀನಿ- ರಶ್ಮಿಕಾರನ್ನು ಹೊಗಳಿದ ಅಲ್ಲು ಅರ್ಜುನ್

    ಈ ಸಿನಿಮಾದಲ್ಲಿ ನಟ ಸುಮುಖ (Sumukha) ಈ ಚಿತ್ರದ ನಾಯಕನಾಗಿ, ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಹಾಗೂ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಜಿ.ಗಂಗಾಧರ್ ಈ ಚಿತ್ರದ ಸಹ ನಿರ್ಮಾಪಕರಾಗಿ ಸಾಥ್‌ ನೀಡಿದ್ದಾರೆ. ಬೆಂಗಳೂರಿನ ಅರಮನೆ ಆವರಣದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರತಂಡ ಮಾಧ್ಯಮದ ಮಿತ್ರರನ್ನು ಚಿತ್ರೀಕರಣ ವೀಕ್ಷಣೆ ಹಾಗೂ ಪತ್ರಿಕಾಗೋಷ್ಠಿಗೆ ಆತ್ಮೀಯವಾಗಿ ಆಹ್ವಾನಿಸಿತ್ತು. ಚಿತ್ರದ ಶೀರ್ಷಿಕೆ ಸಹ ಇದೇ ಸಂದರ್ಭದಲ್ಲಿ ಅನಾವರಣವಾಯಿತು ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ‘ಮುಂಗಾರು ಮಳೆ’ ನಂತರ ಇ. ಕೃಷ್ಣಪ್ಪ ರವರ ನಿರ್ಮಾಣದಲ್ಲಿ ಇನ್ನೊಂದು ಚಿತ್ರ ನಿರ್ದೇಶನ ಮಾಡುವ ಯೋಚನೆ ಇತ್ತು ಎಂದು ಮಾತನಾಡಿದ ನಿರ್ದೇಶಕ ಯೋಗರಾಜ್ ಭಟ್ ಅವರು ಕೃಷ್ಣಪ್ಪ ಅವರು ರಾಜಕೀಯದಲ್ಲಿ ಮತ್ತು ನಾನು ಬೇರೆ ಸಿನಿಮಾಗಳಲ್ಲಿ ಬ್ಯುಸಿಯಾದೆ. ಕೊರೋನ ನಂತರ ಮತ್ತೆ ಒಟ್ಟಿಗೆ ಚಿತ್ರ ಮಾಡುವುದು ಎಂದು ನಿರ್ಧಾರವಾಯಿತು. ಹೊಸಬರ ಜೊತೆಗೆ ಸಿನಿಮಾ ಮಾಡೋಣ ಎಂದು ಕೃಷ್ಣಪ್ಪ ಹೇಳಿದರು. ಹೊಸಬರ ಜೊತೆಗೆ ಸಿನಿಮಾ ಮಾಡೋದು ಸುಲಭವಲ್ಲ. ಈ ಚಿತ್ರಕ್ಕಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಅದರಲ್ಲೂ ಕರ್ನಾಟಕದ 12 ಜಿಲ್ಲೆಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಮಹಾರಾಷ್ಟ್ರದ ಮುರುಡ್‍ ಜಂಜೀರ ಎಂಬ ಸಮುದ್ರದ ಮಧ್ಯದ ಕೋಟೆಯಲ್ಲಿ ಚಿತ್ರೀಕರಣ ಮಾಡಿದ್ದೇವೆ. ಅದಕ್ಕೆ 15 ರೀತಿಯ ಪರ್ಮಿಷನ್‍ ಬೇಕು. ಅದೊಂದು ಯುದ್ಧ ಮಾಡಿದ ಅನುಭವ. ಬಿಸಿಲು, ರಣಮಳೆಯ ನಡುವೆ ಚಿತ್ರೀಕರಣ ಸುಲಭವಲ್ಲ. ಆದರೆ, ಬಹಳ ಚೆನ್ನಾಗಿ ಬಂದಿದೆ. ಇಲ್ಲಿ ರಂಗಾಯಣ ರಘು ಆದಿವಾಸಿಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಗಾಗಿ ಹೊಸ ಭಾಷೆ ಸೃಷ್ಟಿ ಮಾಡಿದ್ದೇವೆ. ರಂಗಾಯಣ ರಘು ಸಹ ಬಹಳ ಚೆನ್ನಾಗಿ ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ. ಈಗಾಗಲೇ ಶೇ. 95ರಷ್ಟು ಚಿತ್ರೀಕರಣ ಮುಗಿದಿದೆ ಎಂದರು.

    ಕಥೆ ಚೆನ್ನಾಗಿರಬೇಕು. ಕನ್ನಡಿಗರು ಮೆಚ್ಚುವ ಹಾಗೆ ಮಾಡಬೇಕು. ಇದೊಂದು ಪ್ರಾಮಾಣಿಕ ಪ್ರಯತ್ನ, ಕನ್ನಡದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿವೆ. ಅವರನ್ನು ಸರಿಯಾಗಿ ಗುರುತಿಸುವ ಕೆಲಸವಾಗುತ್ತಿಲ್ಲ. ಹೊಸಬರಿಗೆ ಒಳ್ಳೆಯದಾಗಬೇಕು. ಇದು ಸಹ ‘ಮುಂಗಾರು ಮಳೆ’ ಮಟ್ಟಕ್ಕೆ ಹೋಗಬೇಕು. ಈ ಮಧ್ಯೆ ರಾಜಕಾರಣಕ್ಕೆ ಹೋಗಿದ್ದರಿಂದ ಚಿತ್ರ ಮಾಡಲು ಸಾಧ್ಯವಾಗಿರಲಿಲ್ಲ. ಯೋಗರಾಜ್‍ ಭಟ್‍ ಸಹ ಬ್ಯುಸಿಯಾಗಿದ್ದರು. ಈಗ ಅದು ಸಾಧ್ಯವಾಗಿದೆ ಎಂದರು ನಿರ್ಮಾಪಕ ಇ.ಕೃಷ್ಣಪ್ಪ.

    ‘ಮುಂಗಾರು ಮಳೆ’ ಚಿತ್ರದಿಂದ ಇ.ಕೃಷ್ಣಪ್ಪ ಅವರ ನಿರ್ಮಾಣದ ಎಲ್ಲಾ ಚಿತ್ರಗಳಲ್ಲೂ ಸಹ ನಿರ್ಮಾಪಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಯೋಗರಾಜ್ ಭಟ್ ಅವರ ಜೊತೆಗೆ ಹದಿನೆಂಟು ವರ್ಷಗಳ ನಂತರ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ ಎನ್ನುತ್ತಾರೆ ಸಹ ನಿರ್ಮಾಪಕ ಗಂಗಾಧರ್.

    ನಟ ಎಂದರೆ ಜಿಮ್‍ನಿಂದ ಬರಬೇಕು ಎಂಬಂತಾಗಿದೆ. ಅವರಿಗೆ ಭಾಷೆ-ಭಾವ ಗೊತ್ತಿರುವುದಿಲ್ಲ. ಸಿನಿಮಾಗೆ ಬೇಕಾಗಿದ್ದು ಅಭಿನಯ ಅನ್ನೋದನ್ನೇ ಅವರು ಮರೆಯುತ್ತಾರೆ. ಆದರೆ, ಸುಮುಖನಿಗೆ ಅಂಥ ಯಾವ ರೋಗ ಇಲ್ಲ. ಇವನು ಓದಿಕೊಂಡಿದ್ದಾನೆ. ಸಿನಿಮಾ ಬಗ್ಗೆ ತಿಳಿದುಕೊಂಡಿದ್ದಾನೆ. ಚೆನ್ನಾಗಿ ನಟಿಸುತ್ತಾನೆ, ಯೋಗರಾಜ್‌ ಭಟ್ ಮತ್ತು ಕೃಷ್ಣಪ್ಪ ಹೊಸಬರ ಜೊತೆಗೆ ಕೆಲಸ ಮಾಡಿದ್ದಾರೆ. ಪ್ಯಾನ್‍ ಇಂಡಿಯಾ ಸಿನಿಮಾ ಬೇಡ, ಕನ್ನಡ ಸಿನಿಮಾ ಮಾಡೋಣ ಎಂದರಂತೆ ಕೃಷ್ಣಪ್ಪ. ಹೌದು, ಎಲ್ಲರೂ ಅಲ್ಲಿಗೆ ಹೋದರೆ ಇಲ್ಲಿ ಮನೆ ನೋಡಿಕೊಳ್ಳೋದು ಯಾರು ಎಂದರು ನಟ ರಂಗಾಯಣ ರಘು.

    ಯೋಗರಾಜ್‍ ಭಟ್‍ ಬಹಳ ಮುತ್ತುವರ್ಜಿಯಿಂದ ನನ್ನ ಪಾತ್ರ ಸೃಷ್ಟಿಸಿದ್ದಾರೆ. ಈ ಚಿತ್ರದಲ್ಲಿ ನಾನು 100 ವರ್ಷದ ಮುದುಕನ ಪಾತ್ರ ಮಾಡಿದ್ದೇನೆ. ವಯಸ್ಸಾಯ್ತು ಅಂತ ತಲೆ ಆಡಿಸುವ ಹಾಗಿಲ್ಲ, ಮೈ ಬಗ್ಗಿಸುವ ಹಾಗಿಲ್ಲ. ಸಾತ್ವಿಕವಾಗಿ ತನ್ನ ವಯಸ್ಸನ್ನು ಅಭಿನಯದ ಮೂಲಕ ಹೇಳುವಂತಹ ಪಾತ್ರ. ಬಹಳ ಚೆನ್ನಾಗಿದೆ ಎಂದು ನಟ ದತ್ತಣ್ಣ ತಿಳಿಸಿದರು.

    ಈಗಿನ ಕಾಲದ ನವಯುವಕನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈಗಿನವರು ಜೀವನದಲ್ಲಿ ಏನು ಮಾಡಬೇಕು? ಎಂಬ ಗೊಂದಲದಲ್ಲಿರುತ್ತಾರೆ. ಅದು ಈ ಚಿತ್ರದಲ್ಲಿದೆ. ಇದೊಂದು ದೊಡ್ಡ ಜವಾಬ್ದಾರಿ. ಯೋಗರಾಜ್‍ ಭಟ್‍ ಅವರ ಜೊತೆಗೆ ತುಂಬಾ ಕಲಿಯೋದಿದೆ. ಪ್ರತಿದಿನ ಅವರು ಹೊಸ ಆಲೋಚನೆಯೊಂದಿಗೆ ಬರುತ್ತಾರೆ. ಹೊಸ ಪ್ರಯೋಗ ಮಾಡುತ್ತಾರೆ ಎಂದು ನಾಯಕ ಸುಮುಖ ಹೇಳಿದರು. ನಾಯಕಿಯರಾದ ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ಛಾಯಾಗ್ರಾಹಕ ಸಂತೋಷ್‍ ರೈ ಪಾತಾಜೆ, ಗೀತರಚನೆಕಾರ ಜಯಂತ್‍ ಕಾಯ್ಕಿಣಿ, ಪ್ರತಾಪ್‍ ರಾವ್‍ ಮುಂತಾದವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

  • ಹಿಮಾಲಯದಲ್ಲಿ ಅಪ್ಪು: ನಟ ಸುಮುಖ ಕನಸು ನನಸು

    ಹಿಮಾಲಯದಲ್ಲಿ ಅಪ್ಪು: ನಟ ಸುಮುಖ ಕನಸು ನನಸು

    ನ್ನಡ ಚಿತ್ರರಂಗದ ಯುವ ನಾಯಕ ನಟ ಸುಮುಖ (Sumukh) ಹಿಮಾಲಯದ (Himalaya) ತಪ್ಪಲಿನಲ್ಲಿ ಸಂಚರಿಸುವಾಗ ಅಪ್ಪು ನಗುವಿನ ಸಾಕ್ಷಾತ್ಕಾರವಾಗಿದೆ.  ಎವರೆಸ್ಟ್ ಬೇಸ್ ಕ್ಯಾಂಪಿನಲ್ಲಿ, ಸಮುದ್ರ ಮಟ್ಟದಿಂದ 5364 ಮೀಟರ್ ಎತ್ತರದಲ್ಲಿ ಮಂಜು ಮುಸುಕಿದ ಎತ್ತರೆತ್ತರದ ಶಿಖರಗಳ ನಡುವೆ ಸಂಚರಿಸುವಾಗ ಪವಿತ್ರವಾದ ಹಳದಿ ವಸ್ತ್ರದಿಂದ ಸುತ್ತಲ್ಪಟ್ಟ, ಕೋಟ್ಯಂತರ ಹೃದಯ ಗೆದ್ದಿರುವ ಪವರ್ ಸ್ಟಾರ್ ಅಪ್ಪುವಿನ (Puneeth Rajkumar) ಸ್ನಿಗ್ದ ನಗುವಿರುವ ಫೋಟೊ ದೊರಕಿದೆ.

    ‘ಕಾಗದದ ದೋಣಿಯಲಿ ಚಿತ್ರದ ಎರಡನೇ ಶೆಡ್ಯುಲ್ ಆರಂಭವಾಗುವ ಮೊದಲು ನಾನು ಕೆಲವು ಕಾಲ ಪ್ರಕೃತಿಯ ನಡುವೆ ಕಳೆಯಲು ನಿರ್ಧರಿಸಿದ್ದೆ. ನೇಪಾಳದ ಲುಕ್ಲಾದಿಂದ ಎವರೆಸ್ಟ್ ಬೇಸ್ ಕ್ಯಾಂಪ್‌ಗೆ ಹತ್ತು ದಿನದ ಚಾರಣದ ಕಾರ್ಯಕ್ರಮ ಅದಾಗಿತ್ತು. ಕರ್ನಾಟಕದಿಂದ ನಾನು ಒಬ್ಬನೇ ಹೋಗಿದ್ದು. ಅಲ್ಲಿ ಹಿಮದ ರಾಶಿಯ ನಡುವೆ ಅಪ್ಪುವಿನ ಫೋಟೋ ನೋಡಿದಾಗ ಮೊದಲು ನನಗೆ ಅಚ್ಚರಿ ಆಯ್ತು. ನಿಧಾನವಾಗಿ ಅವರ ಜನಪ್ರಿಯತೆ ಅವರ ಮೇಲಿನ ಗೌರವ ಹಾಗೂ ಆಧರದ ಪ್ರಮಾಣ ಎಷ್ಟಿರಬಹುದು ಎಂದು ಮನಸಿನ ಆಳಕ್ಕೆ ಇಳಿಯಿತು. ಕನ್ನಡದ ನೆಲೆಯಿಂದ ದೂರ ಇರುವಾಗ, ನನ್ನನ್ನು ನಾನು ಆ ಅಗಾಧ ಪ್ರಕೃತಿಯ ನಡುವೆ ಅರ್ಥ ಮಾಡಿಕೊಳ್ಳುವ ಪ್ರಯತ್ನದಲ್ಲಿರುವಾಗ ಎಲ್ಲರಿಗೂ ಪ್ರೇರಣೆಯಾಗಿರುವ ಅವರ ನಗು ನನ್ನ ಮನಸ್ಸನ್ನ ನಿರಾಳಗೊಳಿಸಿತು. ತುಂಬಾ ವರ್ಷಗಳಿಂದ ನಮಗೆ ಗೊತ್ತಿರೋರು ದೂರ ದೇಶದಲ್ಲಿ ಎದುರಾದಾಗ ಆಗುತ್ತಲ್ಲ ಆ ಖುಷಿ ಅದು’ ಎಂದು ತಮಗಾದ ಅನುಭವವನ್ನು ಹಂಚಿಕೊಂಡರು ದ್ವಿಭಾಷ ನಟ ಸುಮುಖ.

    ‘ಪ್ರಕೃತಿ ನಮಗೆ ಅನೇಕ ಬಗೆಯ ಸಂದೇಶಗಳನ್ನು ರವಾನಿಸುತ್ತಾ ಇರುತ್ತದೆ. ಅಂದು ನಮ್ಮ ಚಾರಣದ ಒಂಭತ್ತನೇ ದಿನ. ಅದಾಗಲೇ ನಾಲ್ಕು ಗಂಟೆಯ ನಡಿಗೆ ಪೂರೈಸಿದ್ದೆವು. ಸಹಜವಾಗಿಯೇ ದಣಿದಿದ್ದೆವು. ಆಗ ಎವರೆಸ್ಟ್ ಬೇಸ್ ಕ್ಯಾಂಪಿನಲ್ಲಿ  ಅಪ್ಪುವಿನ ಫೋಟೋ ದೊರಕಿದ್ದು ನನಗೆ ನಿಜಕ್ಕೂ ಒಂದು ಬಗೆಯಲ್ಲಿ ಪ್ರೇರಣೆಯಾಗಿದೆ’ ಎನ್ನುತ್ತಾರೆ, ಕನ್ನಡ ಹಾಗೂ ಮರಾಠಿಯಲ್ಲಿ ತಯಾರಾಗಿರುವ ಚಿತ್ರ ರಾಜಸ್ಥಾನ್ ಡೈರೀಸ್ ನಾಯಕ ನಟ ಸುಮುಖ.

     

    ‘ಈ ಫೋಟೋ ಇಲ್ಲಿಯವರೆಗೂ ಯಾರು  ತಂದಿರಬಹುದು ಎಂದು ಮಾಹಿತಿಗಾಗಿ ಹುಡುಕಿದೆ. ಫೋಟೋ ಮೇಲಾಗಲಿ ಹಿಂಬದಿಯಲ್ಲಾಗಲಿ ಯಾವ ಹೆಸರು ಅಥವಾ ಫೋನ್ ನಂಬರ್ ಇರಲಿಲ್ಲ. ಬಹುಶಃ ಎವರೆಸ್ಟ್ ಏರುವ ಅಪ್ಪುರನ್ನು  ಪರಮಾತ್ಮ ಚಿತ್ರದಲ್ಲಿ ನೋಡಿರುವ ಅಭಿಮಾನಿಯೊಬ್ಬರು ಕರ್ನಾಟಕದಿಂದ ಇಲ್ಲಿಯವರೆಗೂ ಈ ಫೋಟೋ ತಂದು ಹಿಮದಲ್ಲಿ ಹುದುಗಿಟ್ಟಿರಬಹುದು. ಕಾಲ ಹಾಗೂ ಗಾಳಿಯ ತೆಕ್ಕೆಗೆ ಬಂದ ಫೋಟೋ ನನ್ನ ಕಣ್ಣಿಗೆ ಕಂಡದ್ದು ಅದೃಷ್ಟವೇ ಸರಿ’ ಎಂದು ಭಾವುಕರಾದರು ಯುವ ನಾಯಕ ಸುಮುಖ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡದ ಮತ್ತೊಂದು ಚಿತ್ರಕ್ಕೆ ಸಹಿ ಮಾಡಿದ ‘ಫಿಸಿಕ್ಸ್ ಟೀಚರ್’ ಹೀರೋ

    ಕನ್ನಡದ ಮತ್ತೊಂದು ಚಿತ್ರಕ್ಕೆ ಸಹಿ ಮಾಡಿದ ‘ಫಿಸಿಕ್ಸ್ ಟೀಚರ್’ ಹೀರೋ

    ಫಿಸಿಕ್ಸ್ ಟೀಚರ್ ಚಿತ್ರದಲ್ಲಿ ತಮ್ಮ ನಟನೆಯಿಂದ ಅಗಾಧವಾದ ಭರವಸೆ ಮೂಡಿಸಿದ ಬಹು ಭಾಷಾ ನಟ ಸುಮುಖ (Sumuk) ಈಗ ಕನ್ನಡದಲ್ಲಿ ಮತ್ತೊಂದು ಚಿತ್ರದಲ್ಲಿ ನಾಯಕನಟನಾಗಿ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಈ ಚಿತ್ರದಲ್ಲಿ ಶೈನ್ ಶೆಟ್ಟಿ ಹಾಗೂ ನಿಧಿ ಹೆಗಡೆ ಇವರ ಸಹನಟರಾಗಿದ್ದಾರೆ. ಇನ್ನೂ ಹೆಸರಿಡಬೇಕಾದ, ಸ್ನೇಹ ಹಾಗೂ ಸಹೋದರತ್ವದ ಸಂದೇಶ ಹೊತ್ತಿರುವ, ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಸಕಲೇಶಪುರದಲ್ಲಿ ಮುಗಿದಿದೆ.

    ಚಿತ್ರ ಕಥೆಯ ತಿರುಳೇನೆಂದು ಕೇಳಿದಾಗ “ಇದೊಂದು ಸಹೋದರತ್ವ ಅಥವಾ ಸ್ನೇಹದ ಬಾಂಧವ್ಯ ಸಾರುವ ಚಿತ್ರ” ಎನ್ನುತ್ತಾರೆ. ಫಿಸಿಕ್ಸ್ ಟೀಚರ್ ಒಂದು ಗಂಭೀರ ಕಥಾವಸ್ತುವಿರುವ ಚಿತ್ರವಾಗಿತ್ತು. ಹಾಗೆಯೇ ಅವರ ಪಾತ್ರ ಕೂಡ ಅದೇ ಸ್ವರೂಪದ್ದಾಗಿತ್ತು ಹಾಗೂ ಮನೋಜ್ಞವಾಗಿತ್ತು ಕೂಡ. ಆದರೆ ಈ ಚಿತ್ರದಲ್ಲಿ ಉತ್ಸಾಹದ ಬುಗ್ಗೆಯಾಗಿರುವ ಹಾಸ್ಯವನ್ನು ಪ್ರೀತಿಸುವ ಚಾಕೊಲೇಟ್ ಬಾಯ್ ಪಾತ್ರದಲ್ಲಿ ಸುಮುಖ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಅಪ್ಪ ಅಂದು ಬೆನ್ನ ಮೇಲೆ ಕೊಟ್ಟ ಆ ಸಣ್ಣ ಏಟು ನನ್ನನ್ನು ಬದಲಾಯಿಸಿತು: ಪ್ರಭುದೇವ

    ನಿರ್ದೇಶಕ ಉದಯ್ ಶೆಟ್ಟಿ (Uday Shetty) ಸಾರಥ್ಯದಲ್ಲಿ ಎರಡನೇ ಹಂತದ ಚಿತ್ರೀಕರಣ ಇನ್ನೇನು ಪ್ರಾರಂಭವಾಗಬೇಕಿದೆ. ಅಕ್ಷಯ್ ಶೆಟ್ಟಿ ಜೊತೆಗೂಡಿ ಕಥೆ ಹಾಗೂ ಚಿತ್ರಕಥೆ ಹೆಣೆದಿದ್ದಾರೆ ಉದಯ್ ಶೆಟ್ಟಿ.  ಇದಲ್ಲದೇ ಈಗಾಗಲೇ ಚಿತ್ರೀಕರಣ ಮುಗಿಸಿರುವ ಕನ್ನಡ ಹಾಗೂ ಮರಾಠಿಯಲ್ಲಿ ನಿರ್ಮಾಣವಾಗಿರುವ ದ್ವಿಭಾಷೆಯ ಚಿತ್ರ ‘ರಾಜಸ್ಥಾನ ಡೈರೀಸ್’ (Rajasthan Diaries) ತೆರೆಗೆ ಬರಲು ಸಿದ್ಧವಾಗಿದೆ. ಮಾನ್ವಿತ ಕಾಮತ್ ಜೋಡಿಯಾಗಿ ನಟಿಸಿರುವ ಸುಮುಖ “ಇದೊಂದು ಔಟ್ ಅಂಡ್ ಔಟ್ ಲವ್ ಸ್ಟೋರಿ” ಎನ್ನುತ್ತಾರೆ. ಮರಳುಗಾಡಿನ ಸೌಂದರ್ಯದ ಜೊತೆ ಜೊತೆಗೆ ಹೆಣೆದಿರುವ ಪ್ರೇಮಕಥೆಗೆ ಅರ್ಜುನ ಜನ್ಯ ಸಂಗೀತ ನೀಡಿದ್ದಾರೆ. ಸುಮುಖ ಅವರ ತಾಯಿ ನಂದಿತಾ ಯಾದವ್ ಚಿತ್ರಕಥೆ ಹಾಗೂ ನಿರ್ದೇಶನದ ಹೊಣೆ ಹೊತ್ತಿದ್ದಾರೆ.