Tag: ಸುಮ್ಮನಹಳ್ಳಿ

  • ಬೆಂಗಳೂರಿನ ಶ್ರೀಗಂಧಕಾವಲ್‍ನಲ್ಲಿ ಭಾರೀ ಅಗ್ನಿ ಅವಘಡ

    ಬೆಂಗಳೂರಿನ ಶ್ರೀಗಂಧಕಾವಲ್‍ನಲ್ಲಿ ಭಾರೀ ಅಗ್ನಿ ಅವಘಡ

    – 9 ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ

    ಬೆಂಗಳೂರು: ನಗರದ (Bengaluru) ಸುಮ್ಮನಹಳ್ಳಿ (Sumanahalli) ಬ್ರಿಡ್ಜ್ ಬಳಿಯ ಶ್ರೀಗಂಧಕಾವಲ್‍ನ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಮರಗಳು ಹೊತ್ತಿ ಉರಿದಿವೆ.

    ಬಿಬಿಎಂಪಿ (BBMP) ವ್ಯಾಪ್ತಿಗೆ ಸೇರಿದ 3 ಎಕರೆ ಅರಣ್ಯ ಪ್ರದೇಶದಲ್ಲಿ ಸುಮಾರು ಅರ್ಧ ಭಾಗಕ್ಕೆ ಬೆಂಕಿ ಆವರಿಸಿದೆ. ತೀವ್ರ ಬೇಸಿಗೆಯ ಪರಿಣಾಮ ಬೆಂಕಿ ಭಾರೀ ಪ್ರಮಾಣದಲ್ಲಿ ವ್ಯಾಪಿಸಿದೆ. ಒಣ ಕಸಕ್ಕೆ ಹಾಕಿದ ಬೆಂಕಿ ಅರಣ್ಯ ಪ್ರದೇಶಕ್ಕೆ ಹಬ್ಬಿದೆ ಎಂದು ಶಂಕಿಸಲಾಗಿದೆ. ಗುರುವಾರ ರಾತ್ರಿಯೇ ಅರಣ್ಯ ಪ್ರದೇಶಕ್ಕೆ ಬೆಂಕಿ ತಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಾಂಬೋಡಿಯಾದ ಸೇನಾನೆಲೆಯಲ್ಲಿ ಮದ್ದುಗುಂಡುಗಳ ಸ್ಫೋಟ – 20 ಸೈನಿಕರು ಸಾವು

    ನಗರದಲ್ಲಿ ತೆರವುಗೊಳಿಸಿದ ಮರಗಳನ್ನು ಇಲ್ಲಿ ತಂದು ಡಂಪ್ ಮಾಡಲಾಗುತ್ತಿತ್ತು. ಅದೇ ರೀತಿ ಹೊರಗಡೆ ಮಾರಾಟ ಮಾಡುವ ಕಟ್ಟಿಗೆಗಳನ್ನು ಇಲ್ಲಿ ತಂದು ಹಾಕಿ ಹರಾಜು ಮಾಡಲಾಗ್ತಿತ್ತು. ಹರಾಜಾಗದೇ ಉಳಿದಿದ್ದ ಕಟ್ಟಿಗೆಗಳೆಲ್ಲ ಅರಣ್ಯ ವ್ಯಾಪ್ತಿಯಲ್ಲಿ ರಾಶಿ ಬಿದ್ದಿದ್ದವು. ತೀವ್ರ ಬಿಸಿಲಿನ ಕಾರಣ ಸಂಪೂರ್ಣ ಒಣಗಿದ್ದ ಮರದ ತುಂಡುಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಸಾಧ್ಯತೆಯೂ ಇದೆ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.

    ಸತತ 9 ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಪೆÇಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಂಬುಲೆನ್ಸ್‌ನಿಂದ ಸರಣಿ ಅಪಘಾತ – ಚಾಲಕನ ಬಂಧನ

  • ಸುಮನಹಳ್ಳಿ ಫ್ಲೈಓವರ್ 10 ದಿನ ಬಂದ್ – ಅಧಿಕಾರಿಗಳ ತಪ್ಪನ್ನು ಒಪ್ಪಿಕೊಂಡ ಬಿಬಿಎಂಪಿ ಆಯುಕ್ತ

    ಸುಮನಹಳ್ಳಿ ಫ್ಲೈಓವರ್ 10 ದಿನ ಬಂದ್ – ಅಧಿಕಾರಿಗಳ ತಪ್ಪನ್ನು ಒಪ್ಪಿಕೊಂಡ ಬಿಬಿಎಂಪಿ ಆಯುಕ್ತ

    ಬೆಂಗಳೂರು: ನಾಯಂಡಹಳ್ಳಿಯಿಂದ ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಹೊರ ವರ್ತುಲ ರಸ್ತೆಯಲ್ಲಿರುವ ಸುಮನಹಳ್ಳಿ ಫ್ಲೈ ಓವರ್ 10 ದಿನ ಬಂದ್ ಆಗಲಿದೆ. ಮೇಲ್ಸೇತುವೆಯ ರಸ್ತೆಯಲ್ಲಿ ಸುಮಾರು 6 ಅಡಿ ಅಗಲದಷ್ಟು ಗುಂಡಿ ಬಿದ್ದ ಹಿನ್ನೆಲೆಯಲ್ಲಿ ಸಂಚಾರವನ್ನು ನಿಷೇಧಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

    ಈ ಗುಂಡಿ ಅಲ್ಲದೇ ಮೇಲ್ಸೇತುವೆ ಹಲವು ಗುಂಡಿಗಳು ಎದ್ದಿದೆ. ಈ ಹಿನ್ನೆಲೆಯಲ್ಲಿ ದುರಸ್ತಿ ಮಾಡಲು 10 ದಿನಗಳ ಕಾಲ ಮೇಲ್ಸೇತುವೆ ಮೇಲೆ ಒಂದು ಬದಿಯ ಸಂಚಾರವನ್ನು ಬಂದ್ ಮಾಡಲಾಗುತ್ತದೆ. ಗೊರಗುಂಟೆಪಾಳ್ಯದಿಂದ ನಾಯಂಡಹಳ್ಳಿ ಕಡೆ ಹೋಗುವ ವಾಹನಗಳು ಎಂದಿನಂತೆ ಫ್ಲೈಓವರ್ ಮೇಲೆ ಸಂಚರಿಸಬಹುದಾಗಿದೆ.

    ಸುಮನಹಳ್ಳಿ ಸಿಗ್ನಲ್‍ನಲ್ಲಿ ವಿಜಯನಗರ, ಮಾರುಕಟ್ಟೆ ಕಡೆಯಿಂದ ಸುಂಕದಕಟ್ಟೆ, ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆಗೆ ವಾಹನಗಳು ಸಂಚರಿಸುತ್ತವೆ. ಭಾರೀ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ 2007ರಲ್ಲಿ ಬಿಡಿಎ ಫ್ಲೈಓವರ್ ಕಾಮಗಾರಿಯ ಗುತ್ತಿಗೆಯನ್ನು ಚೆನ್ನೈ ಮೂಲದ ಇಸಿಸಿಐ ಕಂಪನಿಗೆ ನೀಡಿತ್ತು. 2010ರಲ್ಲಿ ಉದ್ಘಾಟನೆಯಾದ ಬಳಿಕ 2016ರವರೆಗೆ ಬಿಡಿಎ ನಿರ್ವಹಣೆ ಮಾಡಿ ನಂತರ ಬಿಬಿಎಂಪಿಗೆ ನೀಡಿತ್ತು. ಆದರೆ ಬಿಬಿಎಂಪಿ ಅಧಿಕಾರಿಗಳು ನಿರ್ವಹಣೆ ಸರಿ ಮಾಡದ ಪರಿಣಾಮ ರಸ್ತೆ ಗುಂಡಿ ಬಿದ್ದಿದೆ. ಇದನ್ನು ಓದಿ: ಸುಮನಹಳ್ಳಿ ಬ್ರಿಡ್ಜ್‌ನಲ್ಲಿ ಗುಂಡಿ- ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸ್ವತಃ ಅಧಿಕಾರಿಗಳ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಮೇಲ್ಸೇತುವೆಯನ್ನು ಸರಿಯಾಗಿ ನಿರ್ವಹಣೆ ಮಾಡದೇ ಇರುವುರಿಂದ ಸಮಸ್ಯೆ ಸೃಷ್ಟಿಯಾಗಿದೆ. ಸೇತುವೆ ಮೇಲೆ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದ ಇರುವುದರಿಂದ ಗುಂಡಿ ಬಿದ್ದಿದೆ. ಬಿಬಿಎಂಪಿ ಅಧಿಕಾರಿಗಳು ಕಳೆದ 4 ವರ್ಷಗಳಿಂದ ಸೇತುವೆ ನಿರ್ವಹಣೆ ಮಾಡಿರಲಿಲ್ಲ. ಈ ಬ್ರಿಡ್ಜ್ ನಿರ್ಮಾಣ ಮಾಡಿದ ಚೆನ್ನೈ ಮೂಲದ ಖಾಸಗಿ ಸಂಸ್ಥೆ ಇಸಿಸಿಐ 3 ರಾಜ್ಯಗಳಲ್ಲಿ ಕಪ್ಪು ಪಟ್ಟಿಯಲ್ಲಿದೆ. ಈ ಸೇತುವೆ ಹಾಳಾಗಳು ಅಧಿಕಾರಿಗಳ ಬೇಜಾವಾಬ್ದಾರಿ ಕಾರಣ ಎಂದು ನೇರವಾಗಿ ಹೇಳಿದ್ದಾರೆ.

    ಶುಕ್ರವಾರ ರಾತ್ರಿ ಗುಂಡಿ ಬಿದ್ದಿದ್ದರೂ ವಾಹನ ದಟ್ಟನೆ ಹೆಚ್ಚಿದ್ದ ಕಾರಣ ಬ್ಯಾರಿಕೇಡ್ ಹಾಕಿ ರಸ್ತೆಯ ಒಂದು ಬದಿಯಲ್ಲಿ ಸಂಚಾರ ನಡೆಸಲು ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಅನುಮತಿ ನೀಡಿದ್ದರು. ವಾಹನಗಳ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಫ್ಲೈ ಓವರ್ ಮೇಲಿನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಯಿತು. ಈಗ ವಾಹನಗಳು ಸೇತುವೆಯ ಅಡಿ ಭಾಗದಿಂದ ಸಂಚರಿಸುತ್ತಿವೆ.