Tag: ಸುರಾನಾ ಕಾಲೇಜು

  • ಎಐ ಸವಾಲುಗಳನ್ನು ಎದುರಿಸಲು ಕನ್ನಡಿಗರು ಸಜ್ಜಾಗಬೇಕಿದೆ : ಟಿ.ಜಿ.ಶ್ರೀನಿಧಿ

    ಎಐ ಸವಾಲುಗಳನ್ನು ಎದುರಿಸಲು ಕನ್ನಡಿಗರು ಸಜ್ಜಾಗಬೇಕಿದೆ : ಟಿ.ಜಿ.ಶ್ರೀನಿಧಿ

    – ಸುರಾನಾ ಕಾಲೇಜಿನಲ್ಲಿ `ಎಐ ಕಾಲದಲ್ಲಿ ಕನ್ನಡ’ ಕಾರ್ಯಾಗಾರ

    ಬೆಂಗಳೂರು: ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಗೆ ಬರುತ್ತಿರುವ ಆರ್ಟಿಫಿಶಿಯಲ್ ಇಂಟಲಿಜೆನ್ಸ್ (AI) ತಂತ್ರಜ್ಞಾನ ನಮ್ಮ ಭಾಷೆಯನ್ನೂ ಪ್ರಭಾವಿಸುತ್ತಿದೆ. ಈ ಸವಾಲುಗಳನ್ನು ಎದುರಿಸಲು, ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ಕನ್ನಡಿಗರು ಸಜ್ಜಾಗಬೇಕಿದೆ ಎಂದು ವಿಜ್ಞಾನ ಲೇಖಕ ಟಿ.ಜಿ ಶ್ರೀನಿಧಿ ಹೇಳಿದರು.

    ಸುರಾನಾ ಕಾಲೇಜಿನಲ್ಲಿ (Surana College) ನಡೆದ `ಎಐ ಕಾಲದಲ್ಲಿ ಕನ್ನಡ’ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಕ್ಷೇತ್ರದ ಹೊಸ ಬೆಳವಣಿಗೆಗಳಿಂದಾಗಿ ನಮ್ಮ ಭಾಷೆಗೆ ಹೊಸ ಅವಕಾಶಗಳು ದೊರಕುತ್ತಿವೆ. ಹಾಗೆಯೇ ಹೊಸ ಸವಾಲುಗಳೂ ಎದುರಾಗುತ್ತಿವೆ. ಆತಂಕಗಳು ಇರುವಂತೆಯೇ ಹೊಸ ಸಾಧ್ಯತೆಗಳೂ ಸೃಷ್ಟಿಯಾಗಿವೆ ಎಂದರು. ಇದನ್ನೂ ಓದಿ: ದಯವಿಟ್ಟು ಗಂಡಸರ ಬಗ್ಗೆ ಯೋಚಿಸಿ: ಪತ್ನಿ ದೌರ್ಜನ್ಯಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ

    ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ವತ್ಸಲಾ ಮೋಹನ್ ಮಾತನಾಡಿ, ತಂತ್ರಜ್ಞಾನದ ಅರಿವು ಆ ವಿಷಯದ ವಿದ್ಯಾರ್ಥಿಗಳಿಗಷ್ಟೇ ಇದ್ದರೆ ಸಾಲದು. ಎಲ್ಲಾ ವಿಷಯಗಳ, ಎಲ್ಲಾ ಭಾಷೆಗಳ ವಿದ್ಯಾರ್ಥಿಗಳೂ ತಂತ್ರಜ್ಞಾನದ ಬೆಳವಣಿಗೆಗಳ ಜೊತೆಯಲ್ಲಿ ಹೆಜ್ಜೆ ಹಾಕಬೇಕಿರುವುದು ಇಂದಿನ ಅಗತ್ಯ. ಈ ಕಾರ್ಯಾಗಾರವನ್ನು ಅದೇ ಆಲೋಚನೆಯೊಂದಿಗೆ ಆಯೋಜಿಸಲಾಗಿದೆ. ಇಂತಹ ಕಾರ್ಯಾಗಾರಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಡೆಯಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: ಗುಡ್ ನ್ಯೂಸ್ ಕೊಟ್ಟ ನಟಿ- ಮೊದಲ ಮಗುವಿನ ನಿರೀಕ್ಷೆಯಲ್ಲಿ ಕಿಯಾರಾ ಅಡ್ವಾಣಿ

    ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಇಜ್ಞಾನ ಟ್ರಸ್ಟ್ ಸಹಯೋಗದಲ್ಲಿ ಈ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಎಐ ತಂತ್ರಜ್ಞಾನದ ಪರಿಚಯ, ನಮ್ಮ ಬದುಕಿನ ಮೇಲೆ ಅದರ ಪ್ರಭಾವ, ಸಂವಹನದಲ್ಲಿ ಎಐ ಬಳಕೆಯ ಸಾಧ್ಯತೆಗಳು ಹಾಗೂ ನಾವು ಬಳಸಬಹುದಾದ ಎಐ ಸಾಧನಗಳ ಕುರಿತು ಈ ಕಾರ್ಯಾಗಾರದಲ್ಲಿ ಪ್ರಾತ್ಯಕ್ಷಿಕೆಗಳು ನಡೆಯಿತು. ಇದನ್ನೂ ಓದಿ: ಬೆಳಗಾವಿ | ಸಿಮ್ ಕಾರ್ಡ್‌ಗಾಗಿ ವ್ಯಕ್ತಿಗೆ ಚಾಕು ಇರಿತ

    ಹಿರಿಯ ಲೇಖಕ ಕೊಳ್ಳೇಗಾಲ ಶರ್ಮಾ, ಅಭಿಷೇಕ್ ಜಿ.ಎಸ್, ಪ್ರಸನ್ನ ರಾಮಚಂದ್ರ, ಕಾಲೇಜು ಪ್ರಾಂಶುಪಾಲರಾದ ಡಾ.ವೀಣಾ.ಕೆ.ಎನ್, ಡಾ.ಸುಷ್ಮಾ, ಇಜ್ಞಾನ ಟ್ರಸ್ಟ್‌ನ ಚೇತನ್ ಗುಪ್ತ, ಟಿ.ಎಸ್.ಗೋಪಾಲ್, ಬಿ.ಎಸ್.ವಿಶ್ವನಾಥ ಉಪಸ್ಥಿತರಿದ್ದರು.

  • ರಾಜಕಾರಣಿಗಳಷ್ಟೇ ಅಲ್ಲ ಅಧಿಕಾರಿಗಳೂ ಜನರೊಂದಿಗೆ ಬೆರೆಯುವ ಪರಿಪಾಠ ಬೆಳೆಸಿಕೊಳ್ಬೇಕು: ಕಿರಣ್ ಬೇಡಿ

    ರಾಜಕಾರಣಿಗಳಷ್ಟೇ ಅಲ್ಲ ಅಧಿಕಾರಿಗಳೂ ಜನರೊಂದಿಗೆ ಬೆರೆಯುವ ಪರಿಪಾಠ ಬೆಳೆಸಿಕೊಳ್ಬೇಕು: ಕಿರಣ್ ಬೇಡಿ

    ಬೆಂಗಳೂರು: ಜನರ ಸಮಸ್ಯೆಗಳ ಪರಿಹಾರಕ್ಕೆ ಕೇವಲ ರಾಜಕಾರಣಿಗಳಷ್ಟೇ ಅಲ್ಲ ಪ್ರಮುಖ ಅಧಿಕಾರಿಗಳೂ ಕೂಡಾ ಜನರೊಂದಿಗೆ ಬೆರೆಯುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಜನರ ಹಲವಾರು ಸಮಸ್ಯೆಗಳು ಸುಲಭವಾಗಿ ಪರಿಹಾರವಾಗಲು ಸಾಧ್ಯ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಮತ್ತು ಪಾಂಡಿಚೇರಿಯ ಮಾಜಿ ಲೆಫ್ಟೆನೆಂಟ್ ಗವರ್ನರ್ ಕಿರಣ್ ಬೇಡಿ ಅಭಿಪ್ರಾಯಪಟ್ಟರು.

    ಇಂದು ಬೆಂಗಳೂರಿನಲ್ಲಿ ಸುರಾನಾ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ 3ನೇ ಆವೃತ್ತಿಯ ಸಿಜಿಎಸ್ ಕಾನ್ ಕ್ಲೇವ್ ನಲ್ಲಿ ದೇಶ ಮತ್ತು ಸಮುದಾಯಕ್ಕಾಗಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರಿಗೆ ನೀಡಲಾದ, ಜಿಸಿ ಸುರಾನಾ ಲೀಡರ್‌ಶೀಪ್ ಅವಾರ್ಡ್ 2022 ಅನ್ನು ಸ್ವೀಕರಿಸಿ ಮಾತನಾಡಿದರು. ಇದನ್ನೂ ಓದಿ: ಪ್ಯಾನ್ ಇಂಡಿಯಾ’ – ಸಿನಿಮಾಗಳಿಗೆ ಅಗೌರವ ತೋರುವ ಪದ, ಇದನ್ನು ತೆಗೆದುಹಾಕಬೇಕು: ಸಿದ್ಧಾರ್ಥ್ 

    ಸರ್ಕಾರದ ಪ್ರಮುಖ ಸ್ಥಾನಗಳಲ್ಲಿರುವ ಅಧಿಕಾರಿಗಳು ತಮ್ಮ ನಾಯಕತ್ವದ ಸರಿಯಾದ ಉಪಯೋಗ ಮಾಡಿಕೊಳ್ಳುವುದು ಬಹಳ ಅಗತ್ಯ. ನಾನು ಐಪಿಎಸ್ ಅಧಿಕಾರಿಯಾಗಿ ಕೆಲಸ ಪ್ರಾರಂಭಿಸಿದ ಸಂಧರ್ಭದಲ್ಲಿ ಅಧಿಕಾರಿಗಳ ಮಧ್ಯೆ ಸಂವಹನವೇ ಇರುತ್ತಿರಲಿಲ್ಲ. ಇದು ಪಾಂಡಿಚೇರಿಯಲ್ಲೂ ಕಂಡುಬಂದಿತು. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ನನ್ನ ಆಡಳಿತದಲ್ಲಿ 6 ‘ಪಿ’ ಗಳನ್ನು ಅಳವಡಿಸಿಕೊಂಡೆ. ಜನರಲ್ಲಿ ನಮ್ಮ ಆಡಳಿತದ ಬಗ್ಗೆ ನಂಬಿಕೆ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು ಎಂದರು.

    ಅಧಿಕಾರಿಗಳು ಮತ್ತು ಪ್ರತಿ ಇಲಾಖೆಯ ಪ್ರಮುಖರು ಜನರ ಮಧ್ಯೆ ಬೆರೆಯುವ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸ್ವತಃ ಪರಿಶೀಲಿಸುವ ಪರಿಪಾಠವನ್ನು ಬೆಳೆಸಲಾಯಿತು. ಇದರಿಂದ ಅಭಿವೃದ್ಧಿ ಕೆಲಸಗಳು ಬಹಳ ವೇಗ ಪಡೆದುಕೊಂಡವು. ಯಾರೋ ಗುರುತಿಸಲಿ ಎನ್ನುವ ಮನೋಭಾವನೆಯಿಂದ ಕೆಲಸಗಳನ್ನು ಮಾಡಬಾರದು. ನಮ್ಮ ಕೆಲಸಗಳೇ ನಮ್ಮನ್ನು ಗುರುತಿಸುವಂತಾಗಬೇಕು. ಶಿಕ್ಷಣ ನೀಡಿರುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡುವಂತೆ ಕರೆ ನೀಡಿದರು. ಇದನ್ನೂ ಓದಿ: ಸೌತ್‌ ಸಿನಿಮಾದಿಂದ ಬಾಲಿವುಡ್‌ನಲ್ಲಿ ಅಭದ್ರತೆ – ಖಡಕ್‌ ಉತ್ತರ ಕೊಟ್ಟ ನವಾಜುದ್ದೀನ್ ಸಿದ್ದಿಕಿ

    ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ ಮಾತನಾಡಿ, ಇಂದು ಶೈಕ್ಷಣಿಕ ಅಂಕಗಳು ಮಾತ್ರ ಉದ್ಯೋಗ ಪಡೆಯುವ ಮಾನದಂಡ ಅಲ್ಲ. ಕ್ರೀಡೆ, ವ್ಯಕ್ತಿತ್ವ ಬೆಳವಣಿಗೆ ಮತ್ತು ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ನಮ್ಮ ಶೈಕ್ಷಣಿಕ ಪರಿಕ್ಷಾ ಪದ್ಧತಿಯ ಮಾನದಂಡಗಳೇ ಬದಲಾಗಿವೆ. ಮೊದಲೆಲ್ಲಾ ಪುಸ್ತಕಗಳನ್ನು ಬಾಯಿಪಾಠ ಮಾಡಿ ಹೆಚ್ಚು ಅಂಕಗಳನ್ನು ಪಡೆದುಕೊಳ್ಳಬಹುದಿತ್ತು. ಆದರೆ ಈಗ ವಿಷಯವನ್ನು ಸಮರ್ಥವಾಗಿ ತಿಳಿದುಕೊಂಡರೆ ಮಾತ್ರ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ. ಬೆಂಗಳೂರು ಎಲ್ಲಾ ಕ್ಷೇತ್ರಗಳಲ್ಲೂ ಬಹಳ ಕ್ಷಿಪ್ರವಾಗಿ ಬೆಳೆಯುತ್ತಿದೆ. ಎಲ್ಲಾ ರಂಗಗಳಲ್ಲೂ ಕೂಡಾ ವಿಫುಲ ಅವಕಾಶಗಳು ಇವೆ. ಸುರಾನಾ ಶೈಕ್ಷಣಿಕ ಸಂಸ್ಥೆಗಳು ನಗರದ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ. ಸುರಾನಾ ಕಾಲೇಜು ಸ್ವಾಯತ್ತ ಸ್ಥಾನಮಾನ ಪಡೆದುಕೊಂಡಿದ್ದು ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯವನ್ನೂ ಪ್ರಾರಂಭಿಸಲಿ. ಇದಕ್ಕೆ ಬೇಕಾದ ಎಲ್ಲಾ ಸಹಕಾರ ನೀಡಲಾಗುವುದು ಎಂದು ಹೇಳಿದರು.

    ಪದ್ಮಶ್ರೀ ಪುರಸ್ಕೃತ ಡಾ. ರಮಣರಾವ್ ಮಾತನಾಡಿ, ಮೈಕ್ರೋಲ್ಯಾಬ್ಸ್ ಸಂಸ್ಥೆಯ ವತಿಯಿಂದ ಸುರಾನಾ ಕುಟುಂಬ ದೇಶದ ಆರೋಗ್ಯ ಕ್ಷೇತ್ರಕ್ಕೆ ಬಹಳ ಕೊಡುಗೆ ನೀಡಿದೆ. ನಾನು ಪ್ರತಿ ಭಾನುವಾರ ನಡೆಸುತ್ತಿದ್ದ ಉಚಿತ ಆರೋಗ್ಯ ಶಿಬಿರಕ್ಕೆ ಉಚಿತವಾಗಿ ಮಾತ್ರೆಗಳನ್ನು ನೀಡಿ ಸಹಕರಿಸುತ್ತಿದ್ದನ್ನು ನೆನಪಿಸಿಕೊಂಡರು.

    ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸುರಾನಾ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸುರಾನಾ ಟ್ರಸ್ಟ್‍ನ ವ್ಯವಸ್ಥಾಪಕ ಟ್ರಸ್ಟಿ ಡಾ. ಅರ್ಚನಾ ಸುರಾನಾ, ಮೈಕ್ರೋಲ್ಯಾಬ್ಸ್‍ನ ಎಂ.ಡಿ ದಿಲೀಪ್ ಸುರಾನಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

    ಸುರಾನಾ ಕಾಲೇಜಿನ ವತಿಯಿಂದ ಆಯೋಜಿಸಿದ್ದ 3ನೇ ಆವೃತ್ತಿಯ ಸಿಜಿಎಸ್ ಕಾನ್ ಕ್ಲೇವ್ ನಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಮತ್ತು ಪಾಂಡಿಚೇರಿಯ ಮಾಜಿ ಲೆಪ್ಟಿನೆಂಟ್ ಗೌರ್ನರ್ ಕಿರಣ್ ಬೇಡಿ, ಸಮರ್ಥನಂ ಸಂಸ್ಥೆಯ ಡಾ. ಜಿ.ಕೆ ಮಹಾಂತೇಶ್, ಶಿಕ್ಷಣ ತಜ್ಞ ಡಾ. ಹೆಚ್. ಆರ್ ಅಪ್ಪನ್ನಯ್ಯ, ಪದ್ಮಶ್ರೀ ಪುರಸ್ಕೃತ ಡಾ. ಬಿ ರಮಣರಾವ್ ಅವರಿಗೆ ಜಿಸಿ ಸುರಾನಾ ಲೀಡರ್‌ಶೀಪ್ ಅವಾರ್ಡ್ 2022 ನೀಡಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಸಚಿವರಾದ ಡಾ. ಸಿ ಎನ್ ಅಶ್ವಥ್ ನಾರಾಯಣ, ಸುರಾನಾ ಟ್ರಸ್ಟ್‍ನ ವ್ಯವಸ್ಥಾಪಕ ಟ್ರಸ್ಟಿ ಡಾ. ಅರ್ಚನಾ ಸುರಾನಾ, ಮೈಕ್ರೋಲ್ಯಾಬ್ಸ್‌ನ ಎಂ.ಡಿ ದಿಲೀಪ್ ಸುರಾನಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

  • ತಂತ್ರಜ್ಞಾನ, ಸಾಮಾಜಿಕ ಜವಾಬ್ದಾರಿ ಎರಡೂ ಕೈಹಿಡಿದು ಸಾಗಬೇಕು: ಡಾ.ಆರ್.ಪೂರ್ಣಿಮಾ

    ತಂತ್ರಜ್ಞಾನ, ಸಾಮಾಜಿಕ ಜವಾಬ್ದಾರಿ ಎರಡೂ ಕೈಹಿಡಿದು ಸಾಗಬೇಕು: ಡಾ.ಆರ್.ಪೂರ್ಣಿಮಾ

    ಬೆಂಗಳೂರು: ತಂತ್ರಜ್ಞಾನ ಮತ್ತು ಸಾಮಾಜಿಕ ಜವಾಬ್ದಾರಿ ಎರಡೂ ಕೈಹಿಡಿದು ಸಾಗಬೇಕು ಎಂದು ಹಿರಿಯ ಪತ್ರಕರ್ತೆ, ಲೇಖಕಿ ಮತ್ತು ಪ್ರಕಾಶಕಿ ಡಾ.ಆರ್.ಪೂರ್ಣಿಮಾ ಅಭಿಪ್ರಾಯಪಟ್ಟರು.

    ಸುರಾನಾ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ತಾಯ್ನುಡಿ ದಿನ- 2021 ಹಾಗೂ ತಂತ್ರಜ್ಞಾನ ಲೇಖಕ ಟಿ.ಜಿ.ಶ್ರೀನಿಧಿ ಬರೆದಿರುವ ‘ಬೆರಳ ತುದಿಯ ಬೆರಗು’ ಕೃತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲದ ಜೊತೆ ನಾವೆಲ್ಲರೂ ಹೆಜ್ಜೆ ಹಾಕಲೇ ಬೇಕು. ಅದಕ್ಕೆ ತಂತ್ರಜ್ಞಾನದ ನೆರವು ಅತ್ಯಗತ್ಯ. ನಮ್ಮ ಜೀವನದ ಭಾಗವಾಗಿರುವ ತಂತ್ರಜ್ಞಾನ, ನಮ್ಮ ಚಿಂತನೆಯ ಕೀಲಿಕೈ ಕೂಡ ಆಗಿರುತ್ತದೆ. ಸಮಾಜದ ಜೊತೆ ಸಂವಾದಕ್ಕೆ ಸಾಧನವೂ ಆಗಿರುತ್ತದೆ. ಅದನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು ಎಂದರು.

    ಲೇಖಕ ಶ್ರೀನಿಧಿ ಮಾತನಾಡಿ, 2023ರ ವೇಳೆಗೆ ಭಾರತದ ಒಟ್ಟು ಜನಸಂಖ್ಯೆಯ ಶೇ.68ರಷ್ಟು ಜನ ಮೊಬೈಲ್ ಬಳಕೆದಾರರಾಗಲಿದ್ದಾರೆ ಎಂದು ಸಮೀಕ್ಷೆಗಳು ಹೇಳಿವೆ. ಮೊಬೈಲ್ ಹಾಗೂ ಅಂತರ್‍ಜಾಲದ ಸಂಪರ್ಕಕ್ಕೆ ಬರುವ ಇಷ್ಟೆಲ್ಲ ಹೊಸ ಬಳಕೆದಾರರಲ್ಲಿ ಬಹಳಷ್ಟು ಜನ ಸಣ್ಣ ನಗರಗಳು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿರಲಿದ್ದಾರೆ. ತಮ್ಮ ಮಾತೃಭಾಷೆಯಲ್ಲೇ ಅಂತರಜಾಲ-ವಿಶ್ವವ್ಯಾಪಿ ಜಾಲಗಳನ್ನು ಬಳಸಲಿದ್ದಾರೆ. ಹೀಗಾಗಿಯೇ ಐಟಿ ಕ್ಷೇತ್ರದ ಭವಿಷ್ಯ ಸ್ಥಳೀಯ ಭಾಷೆಗಳಲ್ಲಿದೆ ಎಂದು ತಿಳಿಸಿದರು.

    ಸುರಾನಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಇಜ್ಞಾನ ಟ್ರಸ್ಟ್ ಸಹಯೋಗದೊಡನೆ ಆಯೋಜಿಸಲಾಗಿದ್ದ ‘ಮಾಹಿತಿ ತಂತ್ರಜ್ಞಾನ ಮತ್ತು ಕನ್ನಡ’ ಕಾರ್ಯಾಗಾರವನ್ನೂ ಅತಿಥಿಗಳು ಉದ್ಘಾಟಿಸಿದರು. ಭಾಷೆಗೆ ಸಂಬಂಧಿಸಿದ ತಂತ್ರಜ್ಞಾನಗಳು, ಕನ್ನಡದ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿರುವ ಅವಕಾಶಗಳು ಸೇರಿದಂತೆ ಹಲವು ವಿಷಯಗಳ ಸ್ಥೂಲ ಪರಿಚಯ ಮಾಡಿಕೊಡುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಮಾಹಿತಿ ತಂತ್ರಜ್ಞಾನ ನಮ್ಮ ಜೀವನದ ಎಲ್ಲ ಕ್ಷೇತ್ರಗಳನ್ನೂ ಪ್ರಭಾವಿಸುತ್ತಿರುವ ಈ ಹೊತ್ತಿನಲ್ಲಿ ಕನ್ನಡದ ವಿದ್ಯಾರ್ಥಿಗಳಿಗೂ ಮಾಹಿತಿ ತಂತ್ರಜ್ಞಾನ ಜಗತ್ತಿನ ಪರಿಚಯ ಇರಬೇಕಾದ್ದು ಅತ್ಯಗತ್ಯ. ಆ ಉದ್ದೇಶದಿಂದಲೇ ಸುರಾನಾ ಕಾಲೇಜಿನ ಕನ್ನಡ ವಿಭಾಗ ಕಳೆದ ಹಲವು ವರ್ಷಗಳಿಂದ ಇಂತಹ ಕಾರ್ಯಾಗಾರಗಳನ್ನು ಆಯೋಜಿಸುತ್ತಿದೆ ಎಂದು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ವತ್ಸಲಾ ಮೋಹನ್ ಹೇಳಿದರು.

    ಸುರಾನಾ ಕಾಲೇಜಿನ ಪ್ರಾಂಶುಪಾಲೆ ಡಾ.ಭವಾನಿ ಎಂ.ಆರ್., ಕನ್ನಡ ವಿಭಾಗದ ಡಾ.ವಿಶಾಲಾ ವಾರಣಾಶಿ, ಡಾ.ಸುಷ್ಮಾ ಎಂ., ಡಾ.ಕೃಪ ಎ., ಇಜ್ಞಾನ ಟ್ರಸ್ಟ್‍ನ ಟಿ.ಎಸ್.ಗೋಪಾಲ್, ಡಾ. ಎಚ್.ಆರ್.ಅಪ್ಪಣ್ಣಯ್ಯ, ಬಿ.ಎಸ್.ವಿಶ್ವನಾಥ, ಎನ್.ಜಿ.ಚೇತನ್, ಅಭಿಷೇಕ್ ಜಿ.ಎಸ್.ಉಪಸ್ಥಿತರಿದ್ದರು. ತಂತ್ರಜ್ಞಾನ ಜಗತ್ತು ಕುರಿತ ಮೂವತ್ತು ಬರಹಗಳ ಸಂಕಲನವಾದ ‘ಬೆರಳ ತುದಿಯ ಬೆರಗು’ ಕೃತಿಯನ್ನು ವಿಕಾಸ ಪ್ರಕಾಶನ ಪ್ರಕಟಿಸಿದೆ. 128 ಪುಟಗಳ ಈ ಕೃತಿಯ ಬೆಲೆ 120 ರೂ. ಆಗಿದೆ.

  • ವರದಿಗಾರ ಹನುಮಂತು ಕುಟುಂಬಕ್ಕೆ ವೆಬಿನಾರ್ ಹಣ – ಸುರಾನಾ ಕಾಲೇಜು ತೀರ್ಮಾನ

    ವರದಿಗಾರ ಹನುಮಂತು ಕುಟುಂಬಕ್ಕೆ ವೆಬಿನಾರ್ ಹಣ – ಸುರಾನಾ ಕಾಲೇಜು ತೀರ್ಮಾನ

    ಬೆಂಗಳೂರು: ಸುರಾನಾ ಪೀಣ್ಯಾ ಕ್ಯಾಂಪಸ್ ಅಲ್ಲಿ ವೆಬಿನಾರ್ ಅನ್ನು ಆಯೋಜನೆ ಮಾಡಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್‍ಲೈನ್ ಕ್ಲಾಸ್ ಮಾಡಲು ತೀರ್ಮಾನಿಸಿ ಇದನ್ನು ಶುರು ಮಾಡಿದ್ದೇವೆ ಎಂದು ಕಾಲೇಜಿನ ಪ್ರಾಂಶುಪಾಲೆ ರಮ್ಯಾ ಅವರು ಹೇಳಿದ್ದಾರೆ.

    ಕೇವಲ ಉಪನ್ಯಾಸಕರಿಂದ ಕ್ಲಾಸ್ ಮಾಡುವುದಕ್ಕಿಂತ ಅತಿಥಿ ಉಪನ್ಯಾಸಕರಿಂದ ಆನ್‍ಲೈನ್ ಕ್ಲಾಸ್ ಮಾಡಿಸಲು ಶುರು ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ಕ್ಲಾಸಿನ ಬಗ್ಗೆ ಗಂಭೀರತೆ ಇರಲಿ ಎಂದು 100, 200 ರೂಪಾಯಿ ಎಂದು ಫೀಸ್ ಕೂಡ ಮಾಡಿದ್ದೇವೆ. ಈ ಹಣವನ್ನು ಈ ಕೊರೊನಾ ಲಾಕ್‍ಡೌನ್ ಇದರೂ ತಮ್ಮ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ಹೇಲ್ತ್ ವಾರಿಯರ್ಸ್, ಮೀಡಿಯಾ, ಸಿಎಂ ರಿಲೀಫ್ ಫಂಡಿಗೆ ಕೊಡಲು ಕಾಲೇಜಿನ ಆಡಳಿತ ಮಂಡಳಿ ತೀರ್ಮಾನಿಸಿದೆ.

    ಇಂದಿನ ವೆಬಿನಾರ್ ಕ್ಲಾಸ್ ಮಾಧ್ಯಮಕ್ಕೆ ಸಂಬಂಧಪಟ್ಟಿತ್ತು, ಹೀಗಾಗಿ ಕೊರೊನಾ ಲಾಕ್‍ಡೌನ್‍ನಲ್ಲಿ ವರದಿ ಮಾಡುತ್ತಿದ್ದ ಸಂದರ್ಭದಲ್ಲೇ ಪಬ್ಲಿಕ್ ಟಿವಿ ರಾಮನಗರ ವರದಿಗಾರ ಹನುಮಂತು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ಇಂದಿನ ಹಣವನ್ನು ನೇರವಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ರಮ್ಯಾ ಅವರು ತಿಳಿಸಿದ್ದಾರೆ.