Tag: ಸುವೇಂದು ಅಧಿಕಾರಿ

  • ಬಂಗಾಳ ವಿಧಾನಸಭೆಯಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಮಂಡನೆ

    ಬಂಗಾಳ ವಿಧಾನಸಭೆಯಲ್ಲಿ ಅತ್ಯಾಚಾರ ವಿರೋಧಿ ಮಸೂದೆ ಮಂಡನೆ

    ಕೋಲ್ಕತ್ತಾ: ಆರ್‌ಜಿಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶದ್ಯಾಂತ ಕಿಚ್ಚು ಹೊತ್ತಿಸಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ಸರ್ಕಾರ ಎರಡು ದಿನಗಳ ವಿಶೇಷ ಅಧಿವೇಶನ ಕರೆದಿದ್ದು ಸದನದಲ್ಲಿ ಅತ್ಯಾಚಾರ ವಿರೋಧಿ ಮಸೂದೆಯನ್ನು (Anti-Rape Bill ) ಮಂಡಿಸಿದೆ.

    ಅತ್ಯಾಚಾರ ವಿರೋಧಿ ಮಸೂದೆಯನ್ನು ರಾಜ್ಯ ಕಾನೂನು ಸಚಿವ ಮೊಲೊಯ್ ಘಾಟಕ್ ಮಂಡಿಸಿದರು. ಪ್ರಸ್ತಾವಿತ ಮಸೂದೆಯಲ್ಲಿ, ಅತ್ಯಾಚಾರ ಮತ್ತು ಬಲಿಪಶುವಿನ ಮರಣದ ತಪ್ಪಿತಸ್ಥರಿಗೆ ಮರಣ ದಂಡನೆಯನ್ನು ನೀಡಲು ಅವಕಾಶವಿದೆ. ಇದಲ್ಲದೆ, ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ತಪ್ಪಿತಸ್ಥರಿಗೆ ಜಾಮೀನು ರಹಿತ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಆಂಧ್ರ, ತೆಲಂಗಾಣದಲ್ಲಿ ಭಾರಿ ಮಳೆ ಪ್ರವಾಹ; 35 ಮಂದಿ ಸಾವು

    ಮಸೂದೆಯ ಮೇಲಿನ ಚರ್ಚೆಯ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ಈ ಮಸೂದೆಯನ್ನು ಐತಿಹಾಸಿಕ ಎಂದು ಬಣ್ಣಿಸಿದರು. ಅತ್ಯಾಚಾರ ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದರು. ಮಸೂದೆಗೆ ಒಪ್ಪಿಗೆ ನೀಡುವಂತೆ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಒತ್ತಾಯಿಸುವಂತೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ (Suvendu Adhikari) ಹೇಳಿದರು. ಇದನ್ನೂ ಓದಿ: ಫಿಲಿಪೈನ್ಸ್‌ನಲ್ಲಿ ಭಾರೀ ಮಳೆಯಿಂದ ಭೂಕುಸಿತ – 14 ಮಂದಿ ದುರ್ಮರಣ

    ಮಸೂದೆಯನ್ನು ಬಿಜೆಪಿ ಸ್ವಾಗತಿಸಿದೆ. ಆದರೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸಹ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧವನ್ನು ಎದುರಿಸಲು ಎಲ್ಲಾ ಕಠಿಣ ನಿಬಂಧನೆಗಳನ್ನು ಹೊಂದಿದೆ ಎಂದು ಉಲ್ಲೇಖಿಸಿದೆ. ಪಕ್ಷದ ನಾಯಕ ಮತ್ತು ರಾಜ್ಯ ಅಸೆಂಬ್ಲಿಯಲ್ಲಿ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮಸೂದೆಗೆ ಏಳು ತಿದ್ದುಪಡಿಗಳನ್ನು ಕೋರುವ ಪ್ರಸ್ತಾಪವನ್ನು ಮಂಡಿಸಿದರು. ಇದನ್ನೂ ಓದಿ: ಸಂಸದ ಡಾ.ಸುಧಾಕರ್ ಸತ್ಯ ಹರಿಶ್ಚಂದ್ರ ಅಲ್ಲ: ಪ್ರದೀಪ್ ಈಶ್ವರ್

    ನಾವು ಈ ಮಸೂದೆ ಕಾನೂನಾಗಿ ತಕ್ಷಣವೇ ಜಾರಿಗೊಳಿಸಬೇಕೆಂದು ಬಯಸುತ್ತೇವೆ. ಇದು ನಿಮ್ಮ ಜವಾಬ್ದಾರಿಯಾಗಿದೆ. ನಮಗೆ ಫಲಿತಾಂಶಗಳು ಬೇಕು. ನಾವು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಮುಖ್ಯಮಂತ್ರಿಗಳು ಏನು ಬೇಕಾದರೂ ಹೇಳಬಹುದು ಆದರೆ ಈ ಮಸೂದೆಯನ್ನು ತಕ್ಷಣವೇ ಜಾರಿಗೆ ತರಲಾಗುವುದು ಎಂದು ನೀವು ಗ್ಯಾರಂಟಿ ನೀಡಬೇಕು ಎಂದು ಸುವೇಂದು ಅಧಿಕಾರಿ ಹೇಳಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು – ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಜಮೆಯಾಗದ ಸಂಬಳ

  • ಪಕ್ಷದಲ್ಲಿರುವ ಅಲ್ಪಸಂಖ್ಯಾತ ವಿಭಾಗವನ್ನು ವಿಸರ್ಜಿಸಬೇಕು – ಬಿಜೆಪಿ ನಾಯಕ ಸುವೆಂದು ಅಧಿಕಾರಿ

    ಪಕ್ಷದಲ್ಲಿರುವ ಅಲ್ಪಸಂಖ್ಯಾತ ವಿಭಾಗವನ್ನು ವಿಸರ್ಜಿಸಬೇಕು – ಬಿಜೆಪಿ ನಾಯಕ ಸುವೆಂದು ಅಧಿಕಾರಿ

    – ಮೋದಿಯವರ ʻʻಸಬ್ಕಾ ಸಾಥ್, ಸಬ್ಕಾ ವಿಕಾಸ್ʼʼ ಘೋಷಣೆ ನಿಲ್ಲಿಸುವ ಸಮಯ ಬಂದಿದೆ

    ಕೋಲ್ಕತ್ತಾ: ಪಕ್ಷದಲ್ಲಿರುವ ಅಲ್ಪಸಂಖ್ಯಾತ ವಿಭಾಗವನ್ನು ವಿಸರ್ಜಿಸಬೇಕು, ಪ್ರಧಾನಿ ನರೇಂದ್ರ ಮೋದಿ (PM Modi) ಅವರು ನೀಡಿದ ʻʻಸಬ್ಕಾ ಸಾಥ್, ಸಬ್ಕಾ ವಿಕಾಸ್ʼʼ (Stop Sabka Saath, Sabka Vikas) ಘೋಷಣೆ ನಿಲ್ಲಿಸುವ ಸಮಯ ಬಂದಿದೆ ಎಂದು ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ (Suvendu Adhikari) ಹೇಳಿದ್ದಾರೆ.

    ಕೋಲ್ಕತ್ತಾದಲ್ಲಿ ನಡೆದ ರಾಜ್ಯ ಬಿಜೆಪಿ (BJP) ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಬಹುಮತ ಕಳೆದುಕೊಂಡ ನಂತರ ಪಕ್ಷವು ಮುನ್ನಡೆಯಲು ‘ಜೋ ಹಮಾರೆ ಸಾಥ್, ಹಮ್ ಉಂಕೆ ಸಾಥ್’ (ಯಾರು ನಮ್ಮೊಂದಿಗಿದ್ದಾರೆ, ಅವರೊಂದಿಗೆ ನಾವಿದ್ದೇವೆ) (Jo Hamare Saath, Hum Unke Saath) ಎಂಬ ಹೊಸ ಘೋಷಣೆ ನೀಡಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ: ಮಸೂದೆಯಲ್ಲಿ ಏನಿದೆ? ಕನ್ನಡಿಗರಿಗೆ ಅರ್ಹತೆ ಹೇಗೆ? ಯಾವ ಹುದ್ದೆಯಲ್ಲಿ ಎಷ್ಟು?

    ʻಸಬ್ಕಾ ಸಾಥ್, ಸಬ್ಕಾ ವಿಕಾಸ್ʼ ಎಂದು ನಮ್ಮ ನಾಯಕರು ಹೇಳುತ್ತಾರೆ. ಆದರೆ ನಾನು ಇನ್ಮುಂದೆ ಇದನ್ನ ಹೇಳಲ್ಲ. ಬದಲಿಗೆ ʻಜೋ ಹಮಾರೆ ಸಾಥ್, ಹಮ್ ಉಂಕೆ ಸಾಥ್ʼ ಎಂದು ಹೇಳುತ್ತೇವೆ. ʻಸಬ್ಕಾ ಸಾಥ್, ಸಬ್ಕಾ ವಿಕಾಸ್ʼ ಮತ್ತು ಅಲ್ಪಸಂಖ್ಯಾತ ಮೋರ್ಚಾ ಅಗತ್ಯವಿಲ್ಲ, ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ‌. ಇದನ್ನೂ ಓದಿ: ಪಂಚೆಯುಟ್ಟ ಬಂದಿದ್ದ ರೈತನಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ್ದ ಸಿಬ್ಬಂದಿಯಿಂದ ಕ್ಷಮೆಯಾಚನೆ

    ಬಂಗಾಳದ 42 ಲೋಕಸಭಾ ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಗೆಲ್ಲುವ ಬಿಜೆಪಿಯ ಗುರಿಗೆ ಅಲ್ಪಸಂಖ್ಯಾತ ಸಮುದಾಯವು ಪ್ರಮುಖ ಅಡ್ಡಿಯಾಗಿ ಹೊರಹೊಮ್ಮಿದೆ ಎಂದು ಮತದಾನದ ವಿಶ್ಲೇಷಣೆ ಬೆನ್ನಲ್ಲೇ ಸುವೇಂದು ಅವರಿಂದ ಈ ಹೇಳಿಕೆ ಬಂದಿದೆ. ಹಿಂದಿನ ಚುನಾವಣೆಯಲ್ಲಿ 18 ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಕೇವಲ 12 ಸ್ಥಾನಗಳನ್ನು ಗೆದ್ದುಕೊಂಡಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿಯಿಂದ ಶಿರೂರಿನಲ್ಲಿ ಗುಡ್ಡ ಕುಸಿತ : ಕೃಷ್ಣಭೈರೇಗೌಡ

  • ಪಶ್ಚಿಮ ಬಂಗಾಳದಲ್ಲಿ ಹೆಣ್ಮಕ್ಕಳ ರಕ್ಷಣೆಗಾಗಿ ಎನ್‍ಕೌಂಟರ್‌ನ ಅಗತ್ಯವಿದೆ: ಸುವೇಂದು ಅಧಿಕಾರಿ

    ಪಶ್ಚಿಮ ಬಂಗಾಳದಲ್ಲಿ ಹೆಣ್ಮಕ್ಕಳ ರಕ್ಷಣೆಗಾಗಿ ಎನ್‍ಕೌಂಟರ್‌ನ ಅಗತ್ಯವಿದೆ: ಸುವೇಂದು ಅಧಿಕಾರಿ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹೆಣ್ಣುಮಕ್ಕಳ ಸುರಕ್ಷತೆಗಾಗಿ ಪೊಲೀಸರು ಅಗತ್ಯಬಿದ್ದರೆ ಎನ್‍ಕೌಂಟರ್ ವಿಧಾನ ಅನುಸರಿಸಬೇಕು ಎಂದು ಬಿಜೆಪಿ ನಾಯಕ ಸುವೆಂದು ಅಧಿಕಾರಿ (Suvendu Adhikari) ಹೇಳಿದ್ದಾರೆ.

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರಂತಹ ವ್ಯಕ್ತಿಯಿಂದ ಮಾತ್ರ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಹೇಳಿದರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಇದೇ ವೇಳೆ ಅಧಿಕಾರಿ ಗಂಭೀರ ಆರೋಪ ಮಾಡಿದರು.

    ಇನ್ನೂ ಕಾಲೇಜು ಮೆಟ್ಟಿಲು ಹತ್ತದ ಹೆಣ್ಣು ಮಕ್ಕಳು ಇಂದು ಅನೇಕ ರೀತಿಯಲ್ಲಿ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ಪಶ್ಚಿಮ ಬಂಗಾಳ ಇಂದು ಹಂತಕರ ತಾಣವಾಗಿ ಮಾರ್ಪಟ್ಟಿದೆ. ಹೀಗಾಗಿ ಯುಪಿ ಸಿಎಂ ಅವರಂತಹ ಒಬ್ಬರಿಂದ ಮಾತ್ರ ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯ ಎಂದು ತಿಳಿಸಿದ್ದಾರೆ. ಇಂತಹ ಕಿಡಿಗೇಡಿಗಳನ್ನು ಎನ್‍ಕೌಂಟರ್ ಮಾಡಬೇಕು. ಇವರುಗಳಿಗೆ ಮನುಷ್ಯರೊಂದಿಗೆ ವಾಸಿಸುವ ಯಾವುದೇ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಸುವೆಂದು ಅಧಿಕಾರಿ ಹೇಳಿಕೆಗೆ ಟಿಎಂಸಿ ಶಾಸಕ ತಪಸ್ ರಾಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸುವೆಂದು ಅವರು ಬಂಗಾಳವನ್ನು ಯೋಗಿ ರಾಜ್ ಆಗಿ ಪರಿವರ್ತಿಸಲು ಬಯಸಿದರೂ ಅದಲ್ಲೆಂದಿಗೂ ಸಾಧ್ಯವಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಪಾಕಿಸ್ತಾನದ ಪತ್ರಿಕೆ, ವೆಬ್‌ಸೈಟ್‌, ಟಿವಿ ಸ್ಕ್ರೀನ್‌ಗಳಲ್ಲಿ ರಾರಾಜಿಸಿದ ಚಂದ್ರಯಾನ-3 ಸಕ್ಸಸ್‌ ಸುದ್ದಿ

    ಅತ್ಯಾಚಾರ ಪ್ರಕರಣಗಳ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂಬುದನ್ನು ನಾವು ಕೂಡ ಬಯಸುತ್ತೇವೆ. ಕಾನೂನಿನ ಮೂಲಕವೇ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಆದರೆ ಸುವೆಂದು ಅವರ ಹೇಳಿಕೆಯ ಎನ್‍ಕೌಂಟರ್‍ಗಳ ಅರ್ಥವೇನು? ಪಶ್ಚಿಮ ಬಂಗಾಳದ ಜನರು ಸುವೆಂದು ಹೇಳಿಕೆಗೆ ಬೆಂಬಲ ನೀಡಲ್ಲ ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • TMC ನಾಯಕನ ಮನೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ – ರಾಜಕೀಯ ಕೆಸರೆರಚಾಟಕ್ಕೆ ಗ್ರಾಸವಾದ ಘಟನೆ

    TMC ನಾಯಕನ ಮನೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ – ರಾಜಕೀಯ ಕೆಸರೆರಚಾಟಕ್ಕೆ ಗ್ರಾಸವಾದ ಘಟನೆ

    ಕೊಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಪೂರ್ವ ಮೇದಿನಿಪುರ ಜಿಲ್ಲೆಯ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು (Bomb Blast) ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ (Suvendu Adhikari) ಪೂರ್ವಜರ ನಿವಾಸದ ಬಳಿಯೇ ಈ ಸ್ಫೋಟ ಸಂಭವಿಸಿದ್ದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದೆ.

    ಟಿಎಂಸಿ (TMC) ನಾಯಕ ರಾಜ್‍ಕುಮಾರ್ ಮನ್ನಾ ಅವರ ಮನೆಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದ್ದು, ಸ್ಫೋಟದಲ್ಲಿ ಮೃತಪಟ್ಟ ಮೂವರಲ್ಲಿ ರಾಜ್‍ಕುಮಾರ್ ಮನ್ನಾ ಕೂಡ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಫೋಟದ ಹಿಂದೆ ಟಿಎಂಸಿಯ ಕೈವಾಡವಿದೆ ಎಂದು ಸುವೇಂದು ಅಧಿಕಾರಿ ಆರೋಪಿಸಿದ್ದಾರೆ. ಇದನ್ನೂ ಓದಿ: ಊರು ಬಿಡುವಂತೆ ರೌಡಿಗಳಿಗೆ ಸಿಸಿಬಿ ಖಡಕ್ ಸೂಚನೆ – ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ರೆ ಕ್ರಮದ ಎಚ್ಚರಿಕೆ

    ಸ್ಫೋಟದಲ್ಲಿ ಸಾವನ್ನಪ್ಪಿದ ಇತರ ಇಬ್ಬರನ್ನು ಬಿಸ್ವಜಿತ್ ಗಯೆನ್, ದೇಬ್‍ಕುಮಾರ್ ಮನ್ನಾ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸ್ ಮೂಲಗಳ ಪ್ರಕಾರ, ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಪಕ್ಕದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಭೂಮಿ ಫಲವತ್ತಾಗಿದ್ರೆ ಉತ್ತಮ ಬೆಳೆ – ಚಿಕ್ಕವಯಸ್ಸಿಗೆ ಮದುವೆ ಮಾಡುವಂತೆ ಹಿಂದೂಗಳಿಗೆ ಬದ್ರುದ್ದೀನ್ ಸಲಹೆ

    ಘಟನೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸುವೇಂದು ಅಧಿಕಾರಿ ಬಂಗಾಳದಲ್ಲಿ ಟಿಎಂಸಿ ನಾಯಕರ ಮನೆಗಳಲ್ಲಿ ವ್ಯಾಪಕವಾಗಿ ಬಾಂಬ್ ಉತ್ಪಾದಿಸಲ್ಪಡುತ್ತವೆ ಎಂದು ವ್ಯಂಗ್ಯವಾಡಿದ್ದಾರೆ. ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಬಾಂಬ್ ತಯಾರಿಕೆಯು ಬಂಗಾಳದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಏಕೈಕ ಗುಡಿ ಕೈಗಾರಿಕೆಯಾಗಿದೆ ಎಂದು ಹೇಳಿದ್ದಾರೆ.

    ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರ ಮೇಲ್ವಿಚಾರಣೆಯಲ್ಲಿ ಇದೆಲ್ಲವೂ ನಿರ್ಭಯದಿಂದ ನಡೆಯುತ್ತದೆ. ಈ ಬಾಂಬ್‍ಗಳನ್ನು ಯಾವುದಕ್ಕೆ ಬಳಸುತ್ತಾರೆ? ಟಾರ್ಗೆಟ್ ಯಾರು ಎಂಬುದು ಪ್ರಶ್ನೆ ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

    ತೃಣಮೂಲ ಕಾಂಗ್ರೆಸ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ವಕ್ತಾರ ಕುನಾಲ್ ಘೋಷ್ ಅವರು ಆರೋಪಗಳನ್ನು ನಿರಾಕರಿಸಿದ್ದು, ಅಭಿಷೇಕ್ ಬ್ಯಾನರ್ಜಿ ಅವರ ರ‍್ಯಾಲಿಗಿಂತ ಮೊದಲು ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ನಡೆಸಿದ ಈ ಸ್ಫೋಟಕ್ಕೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹೊಣೆಗಾರರು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರುತ್ತೆ.. ಧೈರ್ಯವಿದ್ರೆ ನಿಲ್ಲಿಸಿ – ದೀದಿಗೆ ಬಿಜೆಪಿ ಸವಾಲು

    ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬರುತ್ತೆ.. ಧೈರ್ಯವಿದ್ರೆ ನಿಲ್ಲಿಸಿ – ದೀದಿಗೆ ಬಿಜೆಪಿ ಸವಾಲು

    ಕೋಲ್ಕತ್ತಾ: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act) (ಸಿಎಎ) ಜಾರಿಗೆ ಬರಲಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇದನ್ನು ತಡೆಯುವ ಧೈರ್ಯವಿದೆಯಾ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ (West Bengal Assembly) ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ (Suvendu Adhikari) ಪ್ರಶ್ನಿಸಿದ್ದಾರೆ.

    ಉತ್ತರ 24 ಪರಗಣ ಜಿಲ್ಲೆಯ ಠಾಕೂರ್‌ನಗರದಲ್ಲಿ (Thakurnagar) ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು, ಒಬ್ಬ ಕಾನೂನು ದಾಖಲೆಗಳೊಂದಿಗೆ ವಿಶ್ವಾಸಾರ್ಹ ನಿವಾಸಿಯಾಗಿದ್ದರೆ, ಯಾರು ಕೂಡ ಪೌರತ್ವವನ್ನು ಕಸಿದುಕೊಳ್ಳಲಾಗುವುದಿಲ್ಲ. ಸಿಎಎ ಬಗ್ಗೆ ನಾವು ಹಲವಾರು ಬಾರಿ ಚರ್ಚಿಸಿದ್ದೇವೆ. ಇದು ರಾಜ್ಯದಲ್ಲಿ ಜಾರಿಯಾಗಲಿದೆ. ನಿಮಗೆ ಧೈರ್ಯವಿದ್ದರೆ, ಅದನ್ನು ಜಾರಿಗೊಳಿಸುವುದನ್ನು ನಿಲ್ಲಿಸಿ ಎಂದು ಸವಾಲೊಡ್ಡಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಟ್ರಕ್‌ನಿಂದ ಎಳೆಯಲ್ಪಟ್ಟು ಭಾರತ ಮೂಲದ ವಿದ್ಯಾರ್ಥಿ ಸಾವು

    ಸಿಎಎ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ ಪೌರತ್ವವನ್ನು ನೀಡಲು ಅನುಕೂಲ ಮಾಡಿಕೊಡುತ್ತದೆ. ಆದರೆ ಕಾಯ್ದೆಯಡಿ ನಿಯಮಗಳನ್ನು ಸರ್ಕಾರವು ಇನ್ನೂ ರೂಪಿಸದ ಕಾರಣ, ಇದುವರೆಗೆ ಯಾರಿಗೂ ಅದರ ಅಡಿಯಲ್ಲಿ ಪೌರತ್ವ ನೀಡಲು ಸಾಧ್ಯವಾಗಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಡೌನ್‌ ವಿತ್‌ ಕ್ಸಿ ಜಿನ್‌ಪಿಂಗ್‌.. ಲಾಕ್‌ಡೌನ್‌ ತೆಗೆಯಿರಿ – ಚೀನಾದಲ್ಲಿ ಭುಗಿಲೆದ್ದ ಜನಾಕ್ರೋಶ

    Live Tv
    [brid partner=56869869 player=32851 video=960834 autoplay=true]

  • `ರಾಷ್ಟ್ರಪತಿಗಳು ಸುಂದರವಾಗಿಲ್ಲ’ ಎಂದ TMC ನಾಯಕನ ಪರವಾಗಿ ಕ್ಷಮೆ ಕೋರಿದ ಮಮತಾ ಬ್ಯಾನರ್ಜಿ

    `ರಾಷ್ಟ್ರಪತಿಗಳು ಸುಂದರವಾಗಿಲ್ಲ’ ಎಂದ TMC ನಾಯಕನ ಪರವಾಗಿ ಕ್ಷಮೆ ಕೋರಿದ ಮಮತಾ ಬ್ಯಾನರ್ಜಿ

    ಕೋಲ್ಕತ್ತಾ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಕುರಿತು ಟಿಎಂಸಿ (TMC) ಸಚಿವರು ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ರಾಷ್ಟ್ರಪತಿಯವರಲ್ಲಿ (President Of India) ಕ್ಷಮೆಯಾಚಿಸಿದ್ದಾರೆ. ಅಲ್ಲದೆ, ವೈಯಕ್ತಿಕವಾಗಿ ಟೀಕಿಸುವುದು ಪಕ್ಷದ ಸಂಸ್ಕೃತಿಯಲ್ಲ ಎಂದಿದ್ದು, ಸಚಿವರಿಗೂ ಎಚ್ಚರಿಕೆ ನೀಡಿದ್ದಾರೆ.

    ನಾವು ರಾಷ್ಟ್ರಪತಿಗಳನ್ನು ತುಂಬಾ ಗೌರವಿಸುತ್ತೇವೆ. ಅವರು ತುಂಬಾ ಒಳ್ಳೆಯವರು ಅಂಥವರನ್ನು ಟೀಕಿಸಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಸೌಂದರ್ಯವು ನಾವು ಬಾಹ್ಯವಾಗಿ ಹೇಗೆ ಕಾಣುತ್ತೇವೆ ಎಂಬುದಲ್ಲ, ಆಂತರಿಕವಾಗಿ ಹೇಗಿದ್ದೀವಿ ಎಂಬುದರ ಮೇಲೆ ಇದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ದೆಹಲಿಯ ಭಯಾನಕ ಕೃತ್ಯಕ್ಕೆ ಅಮೆರಿಕದ ಥ್ರಿಲ್ಲರ್ `ಡೆಕ್ಸ್ಟರ್‌’ ಸ್ಫೂರ್ತಿ – ರೋಚಕ ಸತ್ಯ ಬಯಲು

    ಟಿಎಂಸಿ (TMC) ಸಚಿವ ಅಖಿಲ್ ಗಿರಿ, ನಂದಿಗ್ರಾಮ್‌ನ ಹಳ್ಳಿಯೊಂದರಲ್ಲಿ ನಡೆದ ರ‍್ಯಾಲಿಯಲ್ಲಿ ರಾಷ್ಟ್ರಪತಿಗಳ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಅವರು ಮಾತನಾಡಿದ ಅವರ 17 ಸೆಕೆಂಡ್‌ಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿತ್ತು. ಈ ವೀಡಿಯೋನಲ್ಲಿ `ನಾವು ಯಾರನ್ನು ನೋಟದಿಂದ ನಿರ್ಣಯಿಸುವುದಿಲ್ಲ. ಆದರೆ ನಮ್ಮ ರಾಷ್ಟ್ರಪತಿಗಳು ನೋಡಲು ಹೇಗೆ ಕಾಣುತ್ತಾರೆ? ಅವರು ಸುಂದರವಾಗಿಲ್ಲ’ ಎಂದು ಹೇಳಿದ್ದರು. ಇದನ್ನೂ ಓದಿ: ಕಾಮೋತ್ತೇಜಕ ಮಾತ್ರೆ ಸೇವಿಸಿ ರೇಪ್ – ವಿಪರೀತ ರಕ್ತಸ್ರಾವದಿಂದ ಗೆಳತಿ ಸಾವು

    ಟಿಎಂಸಿ ಸಚಿವರ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ರಾಜಭವನಕ್ಕೆ ಮೆರವಣಿಗೆ ನಡೆಸಿದ್ದರು. ಸಚಿವ ಅಖಿಲ್ ಗಿರಿ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಾನು ಪುರುಷ ED, CBI ನನ್ನನ್ನು ಮುಟ್ಟುವಂತಿಲ್ಲ – ಸುವೇಂದು ಅಧಿಕಾರಿಗೆ ಇದ್ರಿಸ್ ಅಲಿ ಟಾಂಗ್

    ನಾನು ಪುರುಷ ED, CBI ನನ್ನನ್ನು ಮುಟ್ಟುವಂತಿಲ್ಲ – ಸುವೇಂದು ಅಧಿಕಾರಿಗೆ ಇದ್ರಿಸ್ ಅಲಿ ಟಾಂಗ್

    ಕೋಲ್ಕತ್ತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸುವೇಂದು ಅಧಿಕಾರಿಯನ್ನು (Suvendu Adhikari) ಮಹಿಳಾ ಪೊಲೀಸರು ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ನಾನು ಪುರುಷ, ನನ್ನನ್ನು ಮುಟ್ಟಬೇಡಿ ಎಂದು ಕಿರುಚಾಡಿದ್ದರು. ಇದೀಗ ಇದಕ್ಕೆ ಟಾಂಗ್ ನೀಡಲು ಮುಂದಾಗಿರುವ ಟಿಎಂಸಿ ಎಮ್‍ಎಲ್‍ಎ ಇದ್ರಿಸ್ ಅಲಿ (Idris Ali) ನಾನು ಪುರುಷ ಇಡಿ (ED), ಸಿಬಿಐ (CBI) ನನ್ನನ್ನು ಮುಟ್ಟುವಂತಿಲ್ಲ ಎಂದು ತಮ್ಮ ಕುರ್ತಾದಲ್ಲಿ ಬರೆದುಕೊಂಡು ವ್ಯಂಗ್ಯವಾಡಿದ್ದಾರೆ.

    ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕೆಲದಿನಗಳ ಹಿಂದೆ ಬೃಹತ್ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ಮೆರವಣಿಗೆ ಮೂಲಕ ಕೋಲ್ಕತ್ತಾದ ರಾಜ್ಯ ಕಾರ್ಯಾಲಯ ನಬನ್ನಾಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಮುಂದಾಗಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಈ ವೇಳೆ ಮಹಿಳಾ ಪೊಲೀಸರು ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ಸುವೇಂದು ಅಧಿಕಾರಿ, ನನ್ನನ್ನು ಮುಟ್ಟಬೇಡಿ, ನೀವು ಮಹಿಳೆಯರು, ಪುರುಷ ಪೊಲೀಸರನ್ನು ಕರೆಯಿರಿ ಎಂದು ಕಿರುಚಾಡಿದ್ದರು. ಇದನ್ನೂ ಓದಿ: 2026ಕ್ಕೆ ಭಾರತದಲ್ಲಿ ಕೋಟ್ಯಧಿಪತಿಗಳ ಸಂಖ್ಯೆ ಹೆಚ್ಚಳ!

    ಬಳಿಕ ಈ ಬಗ್ಗೆ ಮಹಿಳಾ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದ ನಮ್ಮ ಮೇಲೆ ಹಲ್ಲೆಗೆ ಮುಂದಾಗಿದ್ದರು ಎಂದು ಸುವೇಂದು ಅಧಿಕಾರಿ ಟೀಕಿಸಿದ್ದರು. ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ಈ ಬಗ್ಗೆ ಪೋಸ್ಟ್ ಮಾಡಿಕೊಂಡಿದ್ದರು. ಇದನ್ನೂ ಓದಿ: ಮಸೀದಿಯಲ್ಲಿ ಮುಸ್ಲಿಂ ಮುಖಂಡರನ್ನು ಭೇಟಿಯಾದ RSS ಮುಖ್ಯಸ್ಥ ಮೋಹನ್ ಭಾಗವತ್

    ಇದೀಗ ಈ ಬಗ್ಗೆ ಕಿಚಾಯಿಸಿರುವ ಇದ್ರಿಸ್ ಅಲಿ, ಬಂಗಾಳದ ಅಧಿವೇಶನಕ್ಕೆ ಆಗಮಿಸಿದಾಗ ತಾವು ಧರಿಸಿದ್ದ ಕುರ್ತಾದಲ್ಲಿ ನಾನು ಪುರುಷ ಇಡಿ, ಸಿಬಿಐ ನನ್ನನ್ನು ಮುಟ್ಟುವಂತಿಲ್ಲ ಎನ್ನುವಂತಹ ಕೆಲ ಬಿಜೆಪಿ ನಾಯಕರಿದ್ದಾರೆ ಎಂದು ಬರೆದುಕೊಂಡು ವ್ಯಂಗ್ಯವಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸದನದಲ್ಲೇ ಅಶಿಸ್ತಿನ ವರ್ತನೆ ತೋರಿದ್ದ 7 ಬಿಜೆಪಿ ಶಾಸಕರ ಅಮಾನತು ವಾಪಸ್

    ಸದನದಲ್ಲೇ ಅಶಿಸ್ತಿನ ವರ್ತನೆ ತೋರಿದ್ದ 7 ಬಿಜೆಪಿ ಶಾಸಕರ ಅಮಾನತು ವಾಪಸ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಅಮಾನತುಗೊಂಡಿದ್ದ 7 ಬಿಜೆಪಿ ಶಾಸಕರ ಅಮಾನತನ್ನು ವಾಪಸ್ ಪಡೆಯಲಾಗಿದೆ.

    ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮತ್ತು ಮುಖ್ಯ ಸಚೇತಕ ಮನೋಜ್ ತಿಗ್ಗಾ ಸೇರಿದಂತೆ 7 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಮಾರ್ಚ್ 9ರಂದು ಸುದೀಪ್ ಮುಖೋಪಾಧ್ಯಾಯ, ಮಿಹಿರ್ ಗೋಸ್ವಾಮಿ ಹಾಗೂ ಮಾರ್ಚ್ 28ರಂದು ಸುವೆಂದು ಅಧಿಕಾರಿ, ಮನೋಜ್ ತಿಗ್ಗಾ, ನರಹರಿ ಮಹತೋ, ಮಿಹಿರ್ ಗೋಸ್ವಾಮಿ ಮತ್ತು ಶಂಕರ್ ಘೋಷ್ ಅಮಾನತುಗೊಳಿಸಲಾಗಿತ್ತು. ಇದನ್ನೂ ಓದಿ: ಸೋನಿಯಾ ಗಾಂಧಿಗೆ ಮನೆ ಬೇಕಿದ್ರೆ ಇಂದೇ ಅರ್ಜಿ ಸಲ್ಲಿಸಿ: ಡಿಕೆಶಿಗೆ ಬಿಜೆಪಿ ಟಾಂಗ್

    bjP

    ಬಿಜೆಪಿ ಶಾಸಕರು ತಮ್ಮ ಅಮಾನತು ಹಿಂಪಡೆಯಲು ಸ್ಪೀಕರ್ ಬಿಮನ್ ಬಂಧೋಪಾಧ್ಯಾಯ ಅವರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ತಾಂತ್ರಿಕ ದೋಷದ ಕಾರಣ ಉಲ್ಲೇಖಿಸಿ ಸ್ಪೀಕರ್ ಅವರು ಮನವಿಯನ್ನು ಮರುಸಲ್ಲಿಸುವಂತೆ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಶಾಸಕರು ವಿಧಾನಸಭೆಯ ಮುಂಭಾಗವೇ ಪ್ರತಿಭಟನೆ ನಡೆಸಿದ್ದರು. ಮಂಗಳವಾರ ಸುವೇಂದು ಅಧಿಕಾರಿ ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ವಿಷಯವನ್ನು ಪರಿಶೀಲಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಮಾತನ್ನು ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಜೆಡಿಎಸ್‌ ಸೋಲಿನಿಂದ ಸಂತಸವಾಗಿದೆ: ತಮ್ಮ ಪಕ್ಷದ ವಿರುದ್ಧವೇ ಮರಿತಿಬ್ಬೇಗೌಡ ಹೇಳಿಕೆ 

    ಏನಿದು ಘಟನೆ?
    ವಿಧಾನಸಭಾ ಅಧಿವೇಶನದಲ್ಲಿ ಪಶ್ಚಿಮ ಬಂಗಾಳದ ಬಿರ್ಭುಮ್ ಹಿಂಸಾಚಾರದ ಬಗ್ಗೆ ಚರ್ಚಿಸುವ ವೇಳೆ ಪ್ರತಿಪಕ್ಷಗಳ ಬೇಡಿಕೆಯ ನಂತರ ಉಂಟಾದ ಗದ್ದಲದಲ್ಲಿ ಭಾಗಿಯಾಗಿದ್ದಾರೆ ಶಾಸಕರು ಭಾಗಿಯಾಗಿದ್ದರು. ಹಾಗಾಗಿ ಅಶಿಸ್ತಿನ ಆರೋಪದ ಮೇಲೆ ಅವರನ್ನು ಅಮಾನತುಗೊಳಿಸಲಾಗಿತ್ತು.

    Live Tv

  • ದಿದಿ ನಾಡಿನಲ್ಲೇ ಹಿಂಸಾಚಾರ – ಹೆದರಿ ಮನೆ ತೊರೆಯುತ್ತಿರುವ ಜನರು

    ದಿದಿ ನಾಡಿನಲ್ಲೇ ಹಿಂಸಾಚಾರ – ಹೆದರಿ ಮನೆ ತೊರೆಯುತ್ತಿರುವ ಜನರು

    ಕೊಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್‌ಭುಮ್‌ನಲ್ಲಿ ನೆನ್ನೆಯಷ್ಟೇ ನಡೆದ ಹಿಂಸಾಚಾರದಿಂದಾಗಿ 8 ಮಂದಿ ಸಜೀವ ದಹನವಾಗಿದ್ದಾರೆ. ಈ ಸಂಬಂಧ ಕೋಲ್ಕತ್ತಾ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಇಂದು ಮಧ್ಯಾಹ್ನದಿಂದಲೇ ವಿಚಾರಣೆ ಪ್ರಾರಂಭಿಸಿದೆ.

    ಏನಿದು ಪ್ರಕರಣ?
    ಇಲ್ಲಿನ ಬಗುಟಿ ಗ್ರಾಮ ಪಂಚಾಯಿತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು. ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬಿರ್‌ಬುಮ್ ಎಸ್‌ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿದೆ. ಇದನ್ನೂ ಓದಿ: ಯುಎಇಯಿಂದ ಜಮ್ಮು- ಕಾಶ್ಮೀರದಲ್ಲಿ 70 ಸಾವಿರ ಕೋಟಿ ಹೂಡಿಕೆ; 7 ಲಕ್ಷ ಉದ್ಯೋಗ ಸೃಷ್ಟಿಯ ಗುರಿ

    ಮನೆಗೆ ಬೆಂಕಿಯಿಟ್ಟ ಗುಂಪಿನ ಬಗ್ಗೆ ರಾಜ್ಯ ಸರ್ಕಾರವು ಎಡಿಜಿ (ಸಿಐಡಿ) ಜ್ಞಾನವಂತ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. ಘಟನೆಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಮಧ್ಯೆ ಕೇಂದ್ರ ಸರ್ಕಾರವೂ ಘಟನೆ ಬಗ್ಗೆ ಸಮಗ್ರ ವರದಿ ನೀಡುವಂತೆ ಪಶ್ಚಿಮ ಬಂಗಾಳ ರಾಜ್ಯ ಗೃಹ ಸಚಿವಾಲಯಕ್ಕೆ ಸೂಚಿಸಿದೆ.

    ಮನೆ ತೊರೆಯುತ್ತಿರುವ ಜನರು
    ಜಿಲ್ಲೆಯ ಜನರು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದು ಹೋಗುತ್ತಿದ್ದಾರೆ. ನಮ್ಮ ಭದ್ರತೆ ದೃಷ್ಟಿಯಿಂದ ಇಲ್ಲಿಂದ ಹೊರಡುತ್ತಿದ್ದೇವೆ. ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ ಎಂದು ವಲಸೆ ಹೊರಡುತ್ತಿದ್ದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

    ಈ ನಡುವೆ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್‌ಕರ್ ಸಹ ವೀಡಿಯೋ ಸಂದೇಶದ ಮೂಲಕ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತ ಬ್ಯಾನರ್ಜಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಜ್ಯಪಾಲರ ಹೇಳಿಕೆಗೆ ತಿರುಗೇಟು ನೀಡಿದ್ದು, ಅನಗತ್ಯ ಹೇಳಿಕೆಗಳನ್ನ ನೀಡಬೇಡಿ ಎಂದಿದ್ದಾರೆ. ಇದನ್ನೂ ಓದಿ: ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ಇನ್ನು ಈ ಘಟನೆ ರಾಜಕೀಯ ಕಾದಾಟಕ್ಕೂ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಸಿಎಂ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿಗರು ಆಗ್ರಹಿಸುತ್ತಿದ್ದಾರೆ. ಹಿಂಸಾಚಾರದಲ್ಲಿ 20ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಆದರೆ ನೈಜ ಸಂಖ್ಯೆಯನ್ನು ಮುಚ್ಚಿಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಕಾಲಿಡಲು ಯಾರಿಗೂ ಬಿಡುತ್ತಿಲ್ಲ ಎಂದು ಬಿಜೆಪಿ ಎಂಪಿ ಆರೋಪಿಸಿದ್ದಾರೆ.

    ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಸುವೇಂದು ಅಧಿಕಾರಿ, ಬಿರ್‌ಭುವ್ ಜಿಲ್ಲೆಯ ಘಟನೆಯ ಉದ್ವಿಗ್ನತೆ ಭಯೋತ್ಪಾದನೆಯನ್ನು ಆವರಿಸಿದೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ವ್ಯವಸ್ಥೆ ಪತನಗೊಂಡಿದೆ ಎಂಬುದು ಇದರಿಂದ ತಿಳಿಯುತ್ತದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

  • ಶೇ.60-65 ಮತದಾನದ ನಡೆದರೆ ಪ್ರಿಯಾಂಕಾಗೆ ಗೆಲುವು: ಸುವೇಂದು

    ಶೇ.60-65 ಮತದಾನದ ನಡೆದರೆ ಪ್ರಿಯಾಂಕಾಗೆ ಗೆಲುವು: ಸುವೇಂದು

    ಕೋಲ್ಕತ್ತಾ: ನಾವು ಪೊಲೀಸ್, ಮಾಫಿಯಾಗಳು ಮತ್ತು ಹಣದ ಶಕ್ತಿಯ ವಿರುದ್ಧ ಹೋರಾಡಬೇಕಾಗಿದೆ ಎಂದು ಬಂಗಾಳದ ಬಿಜೆಪಿ ಪಕ್ಷದ ನಾಯಕ ಸುವೇಂದು ಅಧಿಕಾರಿ ಹೇಳಿದ್ದಾರೆ.

    ಬಂಗಾಳ ಉಪಚುನಾವಣೆಗೆ ಬಗ್ಗೆ ಸುವೇಂದು ಅಧಿಕಾರಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಭವಾನಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ನಾವು ಆಡಳಿತ, ಪೊಲೀಸ್, ಮಾಫಿಯಾಗಳು ಮತ್ತು ಹಣದ ಶಕ್ತಿಯ ವಿರುದ್ಧ ಹೋರಾಡಬೇಕಾಗಿದೆ. ಒಂದು ವೇಳೆ ಈ ಚುನಾವಣೆಯಲ್ಲಿ ಶೇ.60-65ರಷ್ಟು ಮತದಾನ ನಡೆದರೆ ‘ಬಂಗಾಳದ ಮಗಳು’ ಪ್ರಿಯಾಂಕಾ ಟಿಬ್ರೆವಾಲ್ ವಿಜಯಶಾಲಿಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:  ಕೃಷಿಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

    ಬಿಜೆಪಿ ಅಭ್ಯರ್ಥಿ, ವಕೀಲೆ ಪ್ರಿಯಾಂಕಾ ಟಿಬ್ರೆವಾಲ್ ಇಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸೆಪ್ಟೆಂಬರ್ 30 ರಂದು ಭವಾನಿಪುರದಲ್ಲಿ ಉಪಚುನಾವಣೆ ನಡೆಯಲಿದ್ದು, ಅಕ್ಟೋಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ:  ಶ್ರೀಮಂತ ಪಾಟೀಲ್ ಹೇಳಿದ್ದು ಸತ್ಯ, ಎಸಿಬಿ ಸ್ವಯಂ ಪ್ರೇರಿತ ಕೇಸ್ ದಾಖಲಿಸಲಿ :ಡಿಕೆಶಿ

    ಹೊಸದಾಗಿ ನೇಮಕಗೊಂಡ ಗುಜರಾತ್ ಮುಖ್ಯಮಂತ್ರಿ ಕುರಿತು ಮಾತನಾಡಿದ ಅವರು, ಭೂಪೇಂದ್ರ ಪಟೇಲ್ ಅವರು ಗುಜರಾತ್‍ನ ಮುಖ್ಯಮಂತ್ರಿಯಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಶುಭಕೋರಿದ್ದಾರೆ.