Tag: ಸುಹಾಸ್

  • ಆರತಕ್ಷತೆ ಪಾರ್ಟಿಯಲ್ಲಿ ಮಿಂಚಿದ ಗೇಬ್ರಿಯೆಲ್ಲಾ -ನಟ ಸುಹಾಸ್

    ಆರತಕ್ಷತೆ ಪಾರ್ಟಿಯಲ್ಲಿ ಮಿಂಚಿದ ಗೇಬ್ರಿಯೆಲ್ಲಾ -ನಟ ಸುಹಾಸ್

    `ಕಮಲಿ'(Kamali Serial) ಧಾರಾವಾಹಿ ಮೂಲಕ ಖಳನಾಯಕಿಯಾಗಿ ಮಿಂಚಿದ ಅನಿಕಾ ಅಲಿಯಾಸ್ ಗೇಬ್ರಿಯೆಲ್ಲಾ (Gabriella) ಮತ್ತು ನಟ ಸುಹಾಸ್(Suhas) ಇದೀಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಇದೇ ಖುಷಿಯಲ್ಲಿ ಸ್ನೇಹಿತರ ಜೊತೆ ಅದ್ದೂರಿ ಆರತಕ್ಷತೆ ನೆರವೇರಿಸಿಕೊಂಡಿದ್ದಾರೆ. ಸದ್ಯ ರಿಸೆಪ್ಷನ್‌(Reception) ಫೋಟೋ ಸಖತ್ ವೈರಲ್ ಆಗುತ್ತಿದೆ.

    ಕಿರುತೆರೆ ಜನಪ್ರಿಯ ಸೀರಿಯಲ್ `ಕಮಲಿ’ ಕಲಾವಿದರಾದ ಅನಿಕಾ ಮತ್ತು ಸುಹಾಸ್ ಇದೀಗ ರಿಯಲ್ ಲೈಫ್‌ನಲ್ಲಿ ಒಂದಾಗಿದ್ದಾರೆ. ಈ ಸೀರಿಯಲ್ ಮೂಲಕ ಪರಿಚಿತರಾದ ಗೇಬ್ರಿಯೆಲ್ಲಾ, ಸುಹಾಸ್ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು.

     

    View this post on Instagram

     

    A post shared by Suhas Athreyas (@suhas_athreyas)

    ಇದೀಗ ಗುರು ಹಿರಿಯರ ಸಮ್ಮತಿಯ ಮೇರೆಗೆ ಸರಳವಾಗಿ ರಿಜಿಸ್ಟರ್‌ ಮ್ಯಾರೇಜ್(Wedding) ಆಗಿದ್ದಾರೆ. ಇದೀಗ ಕುಟುಂಬಸ್ಥರು, ಚಿತ್ರರಂಗದ ಸ್ನೇಹಿತರಿಗಾಗಿ ಆರತಕ್ಷತೆ ಆಯೋಜಿಸಿದ್ದಾರೆ. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಟಿ ಕೀರ್ತಿ ಸುರೇಶ್

    ನವಜೋಡಿಗೆ ಶುಭಹಾರೈಸಲು `ಕಮಲಿ’ ಸೀರಿಯಲ್ ತಂಡ ಮತ್ತು ವಾಹಿನಿಯ ಇತರೆ ಸೀರಿಯಲ್‌ನ ಕಲಾವಿದರು ಆರತಕ್ಷತೆಗೆ ಆಗಮಿಸಿ ಶುಭಹಾರೈಸಿದ್ದಾರೆ. ಇನ್ನೂ ನೆಚ್ಚಿನ ಜೋಡಿಗೆ ಸಾಮಾಜಿಕ ಜಾಲತಾಣದ ಮೂಲಕ ಫ್ಯಾನ್ಸ್ ವಿಶ್ಸ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರೀ ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಮಿಂಚಿದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ- ಸುಹಾಸ್

    ಪ್ರೀ ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಮಿಂಚಿದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ- ಸುಹಾಸ್

    ಕಿರುತೆರೆಯ ಜನಪ್ರಿಯ ಧಾರಾವಾಹಿ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ ಮತ್ತು ಸುಹಾಸ್ ಇದೀಗ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ. ಸದ್ಯ ತಮ್ಮ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದ್ದಾರೆ.

     

    View this post on Instagram

     

    A post shared by Gabriella Smith (@gabby_ella_smith)

    ತೆರೆಯ ಮೇಲಿನ ಕಥೆಯೇ ಬೇರೆ, ತೆರೆಹಿಂದಿನ ಅಸಲಿ ವಿಚಾರವೇ ಬೇರೆ ಅನ್ನೋದಕ್ಕೆ ಈ ಜೋಡಿ ತಾಜಾ ಉದಾಹರಣೆ. ಕಮಲಿ ಧಾರಾವಾಹಿಯಲ್ಲಿ ಶತ್ರುಗಳಾಗಿ ಕಾಣಿಸಿಕೊಂಡಿರುವ ಅನಿಕಾ ಮತ್ತು ಶಂಭು ಇದೀಗ ರಿಯಲ್ ಲೈಫ್‌ನಲ್ಲಿ ಪ್ರೇಮಿಗಳಾಗಿದ್ದಾರೆ. ಇದೀಗ ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಸದ್ಯ ಕಪಲ್ ಫೋಟೋಶೂಟ್ ಮೂಲಕ ಮೋಡಿ ಮಾಡ್ತಿದ್ದಾರೆ. ಇದನ್ನೂ ಓದಿ:ವಿಜಯ್ ಸೇತುಪತಿ ಅಭಿಮಾನಿಗಳಿಗೆ ಡಬಲ್ ಧಮಾಕಾ: ‘ವಿಡುದಲೈ’ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್

     

    View this post on Instagram

     

    A post shared by Suhas Athreyas (@suhas_athreyas)

    ಅನಿಕಾ ಅಲಿಯಾಸ್ ಗೇಬ್ರಿಯೆಲಾ ಕಮಲಿ ಧಾರಾವಾಹಿಯಲ್ಲಿ ಖಡಕ್ ವಿಲನ್ ಆಗಿ ಮಿಂಚಿದ್ದಾರೆ. ಇನ್ನು ಶುಂಭು ಅಲಿಯಾಸ್ ಸುಹಾಸ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸೀರಿಯಲ್ ಮೂಲಕ ಗೆಳೆತನ ಶುರುವಾಗಿ, ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುವ ಮಟ್ಟಿಗೆ ಬಂದು ನಿಂತಿದೆ. ಇನ್ನು ಫೋಟೋದಲ್ಲಿ ಗೇಬ್ರಿಯೆಲಾ ಬಿಳಿ ಬಣ್ಣದ ಗೌನ್‌ನಲ್ಲಿ ಮಿಂಚಿದ್ದಾರೆ. ಥೇಟ್ ಸಿಂಡ್ರೆಲ್ಲಾ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸುಹಾಸ್ ಕೂಡ ವೈಟ್ ಶರ್ಟ್ ಮತ್ತು ನೀಲಿನಲ್ಲಿ ಸ್ಮಾರ್ಟ್ ಆಗಿ ಕಾಣಿಸಿಕೊಂಡಿದ್ದಾರೆ.

     

    View this post on Instagram

     

    A post shared by Gabriella Smith (@gabby_ella_smith)

    ಇತ್ತೀಚೆಗಷ್ಟೇ ಏಂಗೇಜ್‌ಮೆಂಟ್ ಮಾಡಿಕೊಂಡಿರುವ ಈ ಜೋಡಿ, ಸದ್ಯದಲ್ಲೇ ಹೊಸ ಬಾಳಿಗೆ ಕಾಲಿಡಲಿದ್ದಾರೆ. ಇನ್ನು ಅಭಿಮಾನಿಗಳು ಕೂಡ ನೆಚ್ಚಿನ ಜೋಡಿಗೆ ಶುಭಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ-ಸುಹಾಸ್

    ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ-ಸುಹಾಸ್

    ತ್ತಿಚೆಗಷ್ಟೇ `ಕಮಲಿ’ ಖ್ಯಾತಿಯ ನಿಂಗಿ ಅಲಿಯಾಸ್ ಅಂಕಿತಾ ಹಸೆಮಣೆ ಏರಿದ ಬೆನ್ನಲ್ಲೇ ಇದೇ ಧಾರಾವಾಹಿಯ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅನಿಕಾ ಅಲಿಯಾಸ್ ಗೇಬ್ರಿಯೆಲಾ ಮತ್ತು ಸುಹಾಸ್ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿದ್ದಾರೆ.

     

    View this post on Instagram

     

    A post shared by Gabriella Smith (@gabby_ella_smith)

    `ಕಮಲಿ’ ಖ್ಯಾತಿಯ ಗೇಬ್ರಿಯೆಲಾ ಅಲಿಯಾಸ್ ರಚನಾ ಹಾಗೂ ಸುಹಾಸ್ ಅವರ ಮಧ್ಯೆ ರಿಯಲ್ ಆಗಿ ಪ್ರೀತಿ ಅರಳಿದೆ. ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಟ್ರೈಯಾಂಗಲ್‌ ಲವ್ ಸ್ಟೋರಿ: ರಾಕೇಶ್ ಅಡಿಗ ಪ್ರೇಮ ಪುರಾಣ

    ಈ ಜೋಡಿ `ಕಮಲಿ’ ಸೀರಿಯಲ್‌ನಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಅನಿಕಾ ಪಾತ್ರಧಾರಿಯಾಗಿ ಗೇಬ್ರಿಯೆಲಾ ಕಾಣಿಸಿಕೊಂಡ್ರೆ, ಸುಹಾಸ್ ಅವರು ಶಂಭು ಪಾತ್ರ ಮಾಡುತ್ತಿದ್ದಾರೆ. ಆರಂಭದಲ್ಲಿ ಇಬ್ಬರೂ ಸ್ನೇಹಿತರಾಗಿದ್ದರು ನಂತರ ಔಟ್‌ಡೋರ್ ಶೂಟಿಂಗ್ ವೇಳೆಯಲ್ಲಿ ಸುಹಾಸ್ ಮತ್ತು ಅನಿಕಾ ಮಧ್ಯೆ ಮಾತು ಹೆಚ್ಚಾಗಿ ಸ್ನೇಹ ಬೆಳೆದು, ಪ್ರೀತಿಯಾಗಿ ತಿರುಗಿತು. ಕಳೆದ ೩ ವರ್ಷಗಳಿಂದ ರಿಲೇಶನ್‌ಶಿಪ್‌ನಲ್ಲಿದ್ದ ಈ ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

     

    View this post on Instagram

     

    A post shared by Gabriella Smith (@gabby_ella_smith)

    ಇನ್ನು ನಟ ಸುಹಾಸ್ ಅವರೇ ಗೇಬ್ರಿಯೆಲಾ ಪ್ರೇಮ ನಿವೇದನೆ ಮಾಡಿದ್ದರು. ನಟಿ ಕೂಡ ಒಪ್ಪಿ, ಪರಸ್ಪರ ಮೂರು ವರ್ಷಗಳ ಕಾಲ ಪ್ರೀತಿ ಮಾಡಿ ಈಗ ಗುರುಹಿರಿಯರ ಸಮ್ಮತಿಯ ಮೇರೆ ಹೊಸ ಬಾಳಿಗೆ ಕಾಲಿಡುತ್ತಿಡುತ್ತಿದ್ದಾರೆ. ಇದೀಗ ಸುಹಾಸ್ ಪ್ರಪೋಸ್ ಮಾಡಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ನಟಿ ಶೇರ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ಯಾರಾಲಂಪಿಕ್ಸ್​ನಲ್ಲಿ ಸುಹಾಸ್‌ಗೆ ಬೆಳ್ಳಿ ಪದಕ – ಹೆಚ್​ಡಿಡಿ, ಗೋಪಾಲಯ್ಯ ಅಭಿನಂದನೆ

    ಪ್ಯಾರಾಲಂಪಿಕ್ಸ್​ನಲ್ಲಿ ಸುಹಾಸ್‌ಗೆ ಬೆಳ್ಳಿ ಪದಕ – ಹೆಚ್​ಡಿಡಿ, ಗೋಪಾಲಯ್ಯ ಅಭಿನಂದನೆ

    ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ಲಾಳನಕೆರೆ ಗ್ರಾಮದ ಹಾಗೂ ಉತ್ತರ ಪ್ರದೇಶದಲ್ಲಿ ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸುಹಾಸ್ ಟೋಕಿಯೋದಲ್ಲಿ ನಡೆದ ಪ್ಯಾರಾಲಂಪಿಕ್ಸ್ ಕೂಟದಲ್ಲಿ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಈ ಮೂಲಕ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಹಿರಿಮೆಯನ್ನು ಹೆಚ್ಚಿಸುವುದರ ಮೂಲಕ ಹಾಸನ ಜಿಲ್ಲೆಯ ಘನತೆಯನ್ನು ಹೆಚ್ಚಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಬಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ: ಸುಹಾಸ್

    ಸಚಿವ ಗೋಪಾಲಯ್ಯನವರು, ಜಪಾನ್ ರಾಜಧಾನಿ ಟೋಕಿಯೋದಲ್ಲಿ ವಿಶೇಷ ಚೇತನ ಕ್ರೀಡಾಪಟುಗಳಿಗಾಗಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್​ನಲ್ಲಿ ಉತ್ತರ ಪ್ರದೇಶದ ಜಿಲ್ಲಾಧಿಕಾರಿಯಾಗಿರುವ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಎಲ್.ಯತಿರಾಜ್‍ರವರು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಪ್ಯಾರಾಲಂಪಿಕ್ಸ್​ನಲ್ಲಿ ಪದಕ ಜಯಿಸಿದ ಭಾರತದ ಮೊದಲ ಐಎಎಸ್ ಅಧಿಕಾರಿ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸುಹಾಸ್ ಒಬ್ಬ ಕನ್ನಡಿಗ ಎಂಬುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದಿದ್ದಾರೆ. ಇದನ್ನೂ ಓದಿ:ಬೆಳ್ಳಿ ಹುಡುಗ ಸುಹಾಸ್‍ಗೆ ಕುಟುಂಬಸ್ಥರ ಅಭಿನಂದನೆ

    ಸುಹಾಸ್ ಹಾಸನದ ಲಾಳನಕೆರೆಯಲ್ಲಿ ಜನಿಸಿ, ಶಿವಮೊಗ್ಗದಲ್ಲಿ ಬೆಳೆದು, ದಕ್ಷಿಣ ಕನ್ನಡದ ಸುರತ್ಕಲ್‍ನಲ್ಲಿ ಎನ್‍ಐಟಿಯಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಕಲಿತು, ಉತ್ತರ ಪ್ರದೇಶದ ಐಎಎಸ್ ಅಧಿಕಾರಿಯಾಗಿ, ಮಥುರಾದ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿದ್ದ ಇವರು, ಆರು ಜಿಲ್ಲೆಗಳ ಡಿಎಂ ಆಗಿ ಸೇವೆ ಸಲ್ಲಿಸಿದ ನಂತರ, ಈಗ ಗೌತಮ್ ಬುದ್ಧ ನಗರದ ಜಿಲ್ಲೆಯ ದಂಡಾಧಿಕಾರಿಯಾದ್ದಾರೆ. ಇವರು ಅಂತರಾಷ್ಟ್ರೀಯ ಮಟ್ಟದಲ್ಲಿ ನಡೆದ ಹಲವು ಕ್ರೀಡಾಕೂಟದಲ್ಲಿ ಭಾಗವಹಿಸಿ ನಾಲ್ಕು ಚಿನ್ನದ ಪದಕ, ಐದು ಬೆಳ್ಳಿ, ಎಂಟು ಕಂಚಿನ ಪದಕ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸುಹಾಸ್ ನಮ್ಮ ಕನ್ನಡಿಗ ಎಂದು ಹೇಳಲು ನಮಗೆ ಹೆಮ್ಮೆಯ ವಿಷಯವಾಗಿದೆ. ಸುಹಾಸ್ ಎಲ್.ಯತಿರಾಜ್ ರವರಿಗೆ ನಮ್ಮ ಹೃದಯ ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.