Tag: ಸುಹಾಸ್ ಶೆಟ್ಟಿ ಕೇಸ್

  • ಪಹಲ್ಗಾಮ್ ದಾಳಿ, ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ

    ಪಹಲ್ಗಾಮ್ ದಾಳಿ, ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ

    ಚಿಕ್ಕಮಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ (Pahalgam Terror Attack) ಹಾಗೂ ಮಂಗಳೂರು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಖಂಡಿಸಿ ಚಿಕ್ಕಮಗಳೂರು (Chikkamagaluru) ಜಿಲ್ಲೆ ಸ್ವಯಂ ಘೋಷಿತ ಬಂದ್‌ಗೆ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದೆ.

    ದೇಶದ ಬೇರೆಬೇರೆ ಕಡೆಗಳಲ್ಲಿ ಪಾಕಿಸ್ತಾನ ಪ್ರೇರೇಪಿತ ಮುಸ್ಲಿಮರು ಹಾಗೂ ಬಾಂಗ್ಲಾ ನುಸುಳುಕೋರರು ಪಹಲ್ಗಾಮ್, ಪಶ್ಚಿಮ ಬಂಗಾಳ ಸೇರಿದಂತೆ ಹಿಂದೂಗಳನ್ನು ಹತ್ಯೆಗೈಯುತ್ತಿದ್ದಾರೆ. ಇದರ ಮಧ್ಯೆ ಮೂರು ದಿನದ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ಹಿಂದೂ ಎಂಬ ಕಾರಣಕ್ಕೆ ತಿಂಗಳುಗಳಿಂದ ಸಂಚು ರೂಪಿಸಿ ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಚೆನ್ನೈ ಎಡವಟ್ಟಿನಿಂದ ಆರ್‌ಸಿಬಿಗೆ ಗೆಲುವು – ಬಿಸಿ ಬಿಸಿ ಚರ್ಚೆಗೆ ಗ್ರಾಸವಾದ DRS

    ಇಡೀ ದೇಶದಲ್ಲಿ ಹಿಂದೂಗಳನ್ನ ಹತ್ಯೆ ಮಾಡುವ ಕೆಲಸ ನಡೆಯುತ್ತಿದೆ. ಹಾಗಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಚಿಕ್ಕಮಗಳೂರು ಜಿಲ್ಲೆ ಸ್ವಯಂಘೋಷಿತ ಬಂದ್‌ಗೆ ಕರೆ ಕೊಟ್ಟಿದ್ದು, ಜಿಲ್ಲೆಯ ಜನ ಹಿಂದೂಗಳ ಹತ್ಯೆ ಖಂಡಿಸಿ ಕರೆ ನೀಡಿರುವ ಈ ಸ್ವಯಂಘೋಷಿತ ಬಂದ್‌ಗೆ ಸಾರ್ವಜನಿಕರು, ಅಂಗಡಿ-ಮುಂಗಟ್ಟು, ವ್ಯಾಪಾರಿಗಳು ಹಾಗೂ ವರ್ತಕರು ಬೆಂಬಲ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: Tumakuru | ಚಲಿಸುತ್ತಿದ್ದ ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ – ಚಾಲಕ ಪಾರು

  • ಸುಹಾಸ್ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡುವಂತೆ ಕುಟುಂಬಸ್ಥರ ಆಗ್ರಹ

    ಸುಹಾಸ್ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡುವಂತೆ ಕುಟುಂಬಸ್ಥರ ಆಗ್ರಹ

    ಮಂಗಳೂರು: ಕರಾವಳಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ನಡೆದಿದೆ. ಮಗನ ಸಾವಿನಿಂದ ಕಂಗೆಟ್ಟಿರುವ ಕುಟುಂಬಸ್ಥರು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ (NIA) ನೀಡುವಂತೆ ಆಗ್ರಹಿಸಿದ್ದಾರೆ.

    ಮಂಗಳೂರಿನಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಪ್ರಕರಣ ಭೇದಿಸಿರುವ ಮಂಗಳೂರಿನ ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ‌ ಬಳಿಕ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದು

     

     

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ನಡೆಸಿದ ಎಲ್ಲಾ ಆರೋಪಿಗಳಿಗೆ ಮರಣದಂಡನೆ ನೀಡಬೇಕೆಂದು ತಾಯಿ ಸುಲೋಚನ ಶೆಟ್ಟಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ನಮಗೆ ನಂಬಿಕೆ ಇಲ್ಲ. ಹೀಗಾಗಿ ಎನ್‌ಐಎ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಮ್ಮ ಮಗನಿಗೆ ಪೊಲೀಸರು ತೊಂದರೆ ಕೊಟ್ಟಿದ್ದಾರೆ. ಈ ರೀತಿ ಆಗಲು ಬಜ್ಪೆ ಪೊಲೀಸರೇ ಕಾರಣ, ಅವರೂ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ. ಕೆಲ ದಿನಗಳಿಂದ ಪೊಲೀಸರು ಕಿರುಕುಳ ಹೆಚ್ಚಿಸಿದ್ದು, ವಾಹನವನ್ನು ತಪಾಸಣೆ ಮಾಡುತ್ತಿದ್ದರು. ಏನಾದರೂ ನಾವು ಹೇಳಿದಂತೆ ಕೇಳದಿದ್ದರೆ ಕಾಲಿಗೆ ಗುಂಡು ಹಾಕುತ್ತೇವೆ ಎಂದು ಹೆದರಿಸಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸತತ 10ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್‌ – ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ

    ಇನ್ನು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ಮಾತನಾಡಿ, ಕೆಲವರು ನನ್ನ ಮಗನನ್ನು ರೌಡಿ ಶೀಟರ್ ಎಂದು ಬಿಂಬಿಸುತ್ತಿದ್ದಾರೆ. ಅವನು ರೌಡಿಶೀಟರ್ ಆಗಿದ್ದರೆ ನಮ್ಮ ಮನೆ ಹೀಗೆ ಇರುತ್ತಿತ್ತಾ? ನನ್ನ ಪತ್ನಿಗೆ ಕ್ಯಾನ್ಸರ್ ಚಿಕಿತ್ಸೆ ನೀಡಲು ಪರದಾಡುತ್ತಿದ್ದೇವೆ. ನಮ್ಮ ಹೆಸರಿನಲ್ಲಿ ಸಾಲ ಮಾಡಿ ಅವನ ವ್ಯವಹಾರಕ್ಕೆ ಸಹಾಯ ಮಾಡಿದ್ದೆ. ಮಂಗಳೂರಿನಲ್ಲಿ ಮರಳಿನ ವ್ಯವಹಾರ ಮಾಡುತ್ತಿದ್ದ. ಮನೆಗೆ ಆಧಾರ ಸ್ಥಂಭವಾಗಿದ್ದ ಮಗನನ್ನು ಕಳೆದುಕೊಂಡ ನಮಗೆ ನ್ಯಾಯ ಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗಾಯಕ ಸೋನು ನಿಗಮ್ ಮೇಲೆ ಎಫ್‌ಐಆರ್

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದಾಗಿ ಅವರ ಮನೆಯ ಆಧಾರ ಸ್ತಂಭವೇ ಕುಸಿದು ಬಿದ್ದಂತಾಗಿದೆ. ಹಿಂದುತ್ವಕ್ಕಾಗಿ ಕೆಲಸ ಮಾಡುತ್ತಿದ್ದ ಸುಹಾಸ್ ಶೆಟ್ಟಿ ತನ್ನ ಗುಡಿಸಲಿನಂತಿರುವ ಮನೆಯಲ್ಲೇ ತಂದೆ ತಾಯಿಯೊಂದಿಗೆ ಇದ್ದು, ಆದಷ್ಟು ಬೇಗ ಹೊಸ ಮನೆ ಕಟ್ಟಿ ಮದುವೆಯಾಗಬೇಕು ಎಂದುಕೊಂಡಿದ್ದ. ಆದರೆ ವಿಧಿಯಾಟವೇ ಬೇರೆ ಆಗಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬರ್ಬರವಾಗಿ ಹತ್ಯೆ ಆಗಿದ್ದಾನೆ. ಇದನ್ನೂ ಓದಿ: ಶಿವಾನಂದ್ ಪಾಟೀಲ್ ವಿಚಾರ ಹೈಕಮಾಂಡ್ ಗಮನಕ್ಕೆ ತರುತ್ತೇನೆ: ಎಂ.ಬಿ.ಪಾಟೀಲ್

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಮೃತ ಸುಹಾಸ್ ಶೆಟ್ಟಿ ತಾಯಿ ಆಗ್ರಹಿಸಿದ್ದು, ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆ ಪಾಕ್‌ ರೇಂಜರ್‌ನನ್ನ ಬಂಧಿಸಿದ ಬಿಎಸ್‌ಎಫ್‌

  • ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ

    ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ

    ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ (Suhas Shetty Case) ಅನ್ನು ಎನ್‌ಐಎಗೆ ವಹಿಸಬೇಕು ಎಂದು ಮಾಜಿ ಸಿಎಂ ಸದಾನಂದ ಗೌಡ (Sadananda Gowda) ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಟೋಟಲ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿ. ಒಂದೆರೆಡು ಕೇಸ್ ಅಲ್ಲ. ಬ್ಯಾಂಕ್ ದರೋಡೆ ಸೇರಿ ಅನೇಕ ಕೇಸ್ ಆಗಿವೆ. ಸರ್ಕಾರ ಕೊಲೆ ಮಾಡೋ ಇಂತಹವರಿಗೆ ಬೆಂಬಲ ಕೊಡುವ ರಾಜನೀತಿ ಮಾಡುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆ ರೀತಿ ನೋಡುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಯುದ್ಧ ಮಾಡಬೇಡಿ ಎನ್ನುತ್ತಾರೆ. ಇವತ್ತು ಹೋಗಿ ಗೃಹ ಸಚಿವರು ಸಭೆ ಮಾಡುತ್ತಿದ್ದಾರೆ. ಕೇವಲ ಮುಸ್ಲಿಂ ಸಂಘಟನೆಗಳನ್ನು ಕರೆದು ಸಭೆ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರನ್ನು ಕರೆದಿಲ್ಲ. ಇದು ಯಾವ ಸರ್ಕಾರದ ನೀತಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

    ಸುಹಾಸ್ ಕೇಸ್‌ನಲ್ಲಿ 8 ಜನರ ಬಂಧನ ಆಗಿದೆ. ಆದರೆ ಅಶ್ರಫ್ ಕೊಲೆ ಕೇಸ್‌ನಲ್ಲಿ 25 ಜನ ಅರೆಸ್ಟ್ ಮಾಡ್ತಾರೆ. ಆದರೆ ಈ ಕೇಸ್ ನಲ್ಲಿ ಅಲ್ಲೇ 25 ಜನ ಇದ್ದರು,ಬುರ್ಕಾ ಹಾಕಿರೋ ವಿಡಿಯೋ ಇದ್ದರು ಅರೆಸ್ಟ್ ಆಗಿಲ್ಲ. ಈ ಸರ್ಕಾರ ಮೈನಾರಿಟಿ ಪರ ಅಂತ ತೋರಿಸಿಸೋಕೆ ಹೋಗ್ತಿದೆ.ಈ ಸರ್ಕಾರ ಈ ಕೇಸ್ ನಲ್ಲಿ ಏನು ಮಾಡೊಲ್ಲ. ಜನರು ಬೀದಿಗೆ ಇಳಿಯಬೇಕು. ಹೀಗಾಗಿ ಈ ಕೇಸ್ ಎನಐಎಗೆ ತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ – 8 ಆರೋಪಿಗಳ ಬಂಧನ

    ಕರಾವಳಿ ಭಾಗದಲ್ಲಿ ಇಂತಹ ಕೇಸ್ ಹೆಚ್ಚು ಆಗುತ್ತಿದೆ. ಹೀಗಾಗಿ ಎನ್‌ಐಎ (NIA) ಬ್ರ‍್ಯಾಂಚ್ ಈ ಭಾಗದಲ್ಲಿ ಪ್ರಾರಂಭ ಮಾಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿದರು. ಈ ಸರ್ಕಾರ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ಕೇವಲ ಸಚಿವರು ಮೈನಾರಿಟಿ ಅವರನ್ನು ಕರೆದು ಸಭೆ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳನ್ನು ಕರೆದಿಲ್ಲ. ಇಂತಹ ಘಟನೆ ಆದರೆ ಆರ್‌ಎಸ್‌ಎಸ್, ಬಿಜೆಪಿ ಬಿಟ್ಟರೆ ಇವರು ಬೇರೆ ಯಾರ ಮೇಲೂ ಹೇಳಲ್ಲ. ಇಂತಹ ರಾಜನೀತಿ ಸಮಾಜಕ್ಕೆ ದೊಡ್ಡ ಮಾರಕ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಾಕಿಸ್ತಾನದ ಬೇಹುಗಾರಿಕಾ ಏಜೆನ್ಸಿಯಿಂದ ಕದಂಬ ನೌಕಾ ನೆಲೆಯ ಯುದ್ಧ ಹಡಗುಗಳ ಮಾಹಿತಿ ಪಡೆಯಲು ಯತ್ನ!

    ಕೊಲೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಮಾಡುವ ಪೋಸ್ಟರ್ ಹರಿದಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಹಾಸ್ ಶೆಟ್ಟಿಗೆ ರಕ್ಷಣೆ ಕೊಡಬೇಕಿತ್ತು. ಬೇರೆ ಕೇಸ್‌ನಲ್ಲಿ ಆರೋಪಿ ಆಗಿದ್ದ. ಸರ್ಕಾರ ಆತನ ಜೀವ ರಕ್ಷಣೆ ಮಾಡಬೇಕಿತ್ತು. ಇದನ್ನ ಮಾಡದೇ ಇರುವುದರಿಂದ ಇದಕ್ಕೆ ಒಂದು ಹಂತದಲ್ಲಿ ಸರ್ಕಾರದ ಲೋಪ ಇದೆ. ಒಲೈಕೆ ರಾಜಕೀಯ ಜಾಸ್ತಿ ಆಗುತ್ತಿದೆ. ಸರ್ಕಾರ ಇದನ್ನ ಬಿಡಬೇಕು. ಸರ್ಕಾರ ಒಂದು ಸಮುದಾಯಕ್ಕೆ ಬೆಂಬಲ ಕೊಡುತ್ತಿದೆ. ಕರಾವಳಿ ಭಾಗದಲ್ಲಿ ಎಲ್ಲಾ ಹಿಂದೂಗಳು ಬೀದಿಗೆ ಇಳಿದರೆ ಏನು ಆಗಬಹುದು. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಈ ಸರ್ಕಾರ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ರಕ್ಷಣೆ ಕೊಡೋದಲ್ಲ ಬಹುಸಂಖ್ಯಾತರ ರಕ್ಷಣೆಯೂ ಮಾಡಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡಲು ಕೇಂದ್ರದಿಂದ ಜಾತಿಗಣತಿ: ಸದಾನಂದಗೌಡ

    ಅಲ್ಪಸಂಖ್ಯಾತರಿಂದ ಕಾಂಗ್ರೆಸ್ 15 ಸೀಟು ಗೆದ್ದಿರಬಹುದು. ಉಳಿದ ಸೀಟು ಯಾರಿಂದ ಗೆದ್ದಿರಿ. ಜೆಡಿಎಸ್ ಈಗ ಎನ್‌ಡಿಎ ಜೊತೆ ಬಂದಿದೆ. ಅವರ ಜೊತೆ ಇದ್ದ ಅಲ್ಪಸಂಖ್ಯಾತರ ಮತಗಳ ಒಲೈಕೆ ಮಾಡೋಣ ಎಂದು ಹೋಗುತ್ತಿದ್ದಾರೆ. ಕ್ರಿಶ್ಚಿಯನ್ನರು ಕರಾವಳಿ ಭಾಗದಲ್ಲಿ ಇದ್ದಾರೆ. ಅವರು ಹೀಗೆ ಮಾಡುತ್ತಾರೆ. ಕಾಂಗ್ರೆಸ್ ಅವರು ಸತ್ಯ ಹರಿಶ್ಚಂದ್ರರ ರೀತಿ ಮಾತನಾಡುತ್ತಾರೆ. ಆದರೆ ಅವರು ಮಾಡುವುದೆಲ್ಲಾ ದುರ್ಯೋಧನನ ಪಾತ್ರವೇ ಎಂದು ಗುಡುಗಿದರು. ಇದನ್ನೂ ಓದಿ: ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ – ಸದಾನಂದಗೌಡ