Tag: ಸೂಚನ್ ಶೆಟ್ಟಿ

  • ಸೂಚನ್‌ ಶೆಟ್ಟಿ ನಟನೆಯ ‘ಒಂದು ತಾತ್ಕಾಲಿಕ ಪಯಣ’ ಚಿತ್ರದ ಟ್ರೈಲರ್‌ ಔಟ್

    ಸೂಚನ್‌ ಶೆಟ್ಟಿ ನಟನೆಯ ‘ಒಂದು ತಾತ್ಕಾಲಿಕ ಪಯಣ’ ಚಿತ್ರದ ಟ್ರೈಲರ್‌ ಔಟ್

    ‘ಒಂದು ತಾತ್ಕಾಲಿಕ ಪಯಣ’ (Ondu Tatkalika Payana) ಚಿತ್ರದ ಟ್ರೈಲರ್ (Trailer) ಈಗ ಒಂದಷ್ಟು ಚರ್ಚೆಗೆ ಗ್ರಾಸವಾಗಿದೆ. ಸಿನಿಮಾ ರಂಗದಲ್ಲಿ ಸಾಧಿಸಬೇಕೆಂಬ ಕನಸು ಹೊತ್ತ ಜೀವಗಳ ನೋವು, ನಿರಾಸೆಗಳ ಕಥನ ನೋಡುಗರಿಗೆಲ್ಲ ನಾಟಿಕೊಂಡಿದೆ. ಒಂದು ವೀಶಿಷ್ಟ ಕಥೆಯ ಸುಳಿವಿನೊಂದಿಗೆ ಗಮನ ಸೆಳೆದಿರುವ ಈ ಚಿತ್ರದ ಪ್ರಧಾನ ಪಾತ್ರದಲ್ಲಿ ಯುವ ನಟ ಸೂಚನ್ ಶೆಟ್ಟಿ ನಟಿಸಿದ್ದಾರೆ.

    ಸ್ಕ್ರೀನ್ ಪ್ಲೇನಲ್ಲಿಯೇ ವೈಶಿಷ್ಟ್ಯ ಹೊಂದಿರೋ ಸದರಿ ಸಿನಿಮಾದ ಆತ್ಮದಂತಿರೋ ಪಾತ್ರಕ್ಕೆ ಸೂಚನ್ ಶೆಟ್ಟಿ ಜೀವ ತುಂಬಿದ್ದಾರೆ. ಅದರ ಒಂದಷ್ಟು ಚಹರೆಗಳು ಈ ಟ್ರೈಲರ್‌ನಲ್ಲಿ ಕಾಣಿಸಿಕೊಂಡಿವೆ. ಮೂಲತಃ ಕುಂದಾಪುರದವರಾದ ಸೂಚನ್ ಶೆಟ್ಟಿ ಸುಮಾರು 12 ವರ್ಷಗಳಿಂದ ಚಿತ್ರರಂಗದ ಭಾಗವಾಗಿದ್ದಾರೆ. ಇದನ್ನೂ ಓದಿ:ಹುಟ್ಟುಹಬ್ಬದ ಆಚರಣೆಗೆ ಬ್ರೇಕ್ ಹಾಕಿದ ವಸಿಷ್ಠ ಸಿಂಹ

    ಸೂಚನ್ ಶೆಟ್ಟಿ ಅವರ ಸ್ನೇಹಿತರೂ ಆಗಿರುವ ಕಾರ್ತಿಕ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇದರ ಲೀಡ್ ಪಾತ್ರಗಳಲ್ಲೊಂದನ್ನು ಆವಾಹಿಸಿಕೊಳ್ಳುವ ಅವಕಾಶವನ್ನು ಸೂಚನ್ ಸವಾಲಾಗಿ ಸ್ವೀಕರಿಸಿ ನಟಿಸಿದ್ದಾರಂತೆ. ಈ ಮೂಲಕ ಒಂದೊಳ್ಳೆಯ ಅನುಭವ ಪಡೆದುಕೊಂಡಿರುವ ಸೂಚನ್, ಓರ್ವ ನಟನಾಗಿ ಬ್ರೇಕ್ ಸಿಗುವ ನಿರೀಕ್ಷೆಗಳಿವೆ.

    ಕುಂದಾಪುರವನ್ನೇ ಕರ್ಮಭೂಮಿಯಾಗಿಸಿಕೊಂಡಿರುವ ರವಿ ಬಸ್ರೂರು (Ravi Basrur) ನಿರ್ಮಾಣ ಮಾಡಿರುವ ಚೊಚ್ಚಲ ಚಿತ್ರವಿದು. ಆರು ವರ್ಷಗಳ ಕಾಲ ಸೂಚನ್ ಶೆಟ್ಟಿ ಅವರು ರವಿ ಬಸ್ರೂರು ಗರಡಿಯಲ್ಲಿ ನಿರ್ದೇಶನ ವಿಭಾಗದಲ್ಲಿ ಪಳಗಿಕೊಂಡಿದ್ದರು. ಅವರು ನಿರ್ದೇಶನ ಮಾಡಿದ್ದ ‘ಕಡಲ್’ ಎಂಬ ಚಿತ್ರದಲ್ಲಿ ಒಂದು ನೆಗೆಟಿವ್ ರೋಲ್ ಮಾಡಿದ್ದರು. ಅದು ಸೂಚನ್ ಪಾಲಿಗೆ ನಟನಾಗಿ ಮೊದಲ ಚಿತ್ರ. ಆ ಪಾತ್ರಕ್ಕೆ ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಸಿಕ್ಕಿತ್ತು. ಅದಾದ ಬಳಿಕ ನಟನೆ ಮತ್ತು ನಿರ್ದೇಶನವನ್ನು ಸರಿದೂಗಿಸಿಕೊಂಡು ಹೋಗುವ ತೀರ್ಮಾನಕ್ಕೆ ಸೂಚನ್ ಬಂದಿದ್ದಾರೆ.

    ಈ ನಡುವೆ ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ ‘ಕಾಂತಾರ’ (Kantara) ಚಿತ್ರದಲ್ಲೊಂದು ಪಾತ್ರವೂ ಸೂಚನ್ ಪಾಲಿಗೆ ಒಲಿದು ಬಂದಿತ್ತು. ಫಾರೆಸ್ಟ್ ಗಾರ್ಡ್ ರವಿ ಪಾತ್ರದಲ್ಲಿ ಅವರು ನಟಿಸಿದ್ದರು. ಬದುಕಿಗಾಗಿ ಬೇರೆ ಕೆಲಸ ನೋಡಿಕೊಳ್ಳುವ ಸಂದರ್ಭ ಬಂದಾಗಲೂ ಸಿನಿಮಾ ಸಂಬಂಧಿತ ರಹದಾರಿಗಳನ್ನು ಹುಡುಕಿಕೊಂಡಿದ್ದವರು ಸೂಚನ್. ಒಂದು ಸೀರಿಯಲ್‌ನಲ್ಲಿಯೂ ನಟಿಸಿದ್ದ ಅವರು, ‘ಒಂದು ತಾತ್ಕಾಲಿಕ ಪಯಣ’ದಲ್ಲಿ ಮಹತ್ವದ ಪಾತ್ರ ಸಿಕ್ಕ ಖುಷಿಯಲ್ಲಿದ್ದಾರೆ. ಎಲ್ಲರನ್ನೂ ಕಾಡಬಲ್ಲ ಆ ಪಾತ್ರಕ್ಕೆ ಒಂದಷ್ಟು ತಯಾರಿ ನಡೆಸಿಯೇ ಅವರು ಜೀವ ತುಂಬಿದ್ದಾರೆ.

  • ‘ಗಾಡ್ ಪ್ರಾಮಿಸ್’ಗೆ ಮುನ್ನುಡಿ- ಕುಂದಾಪುರ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ನೆರವೇರಿತು ಸಿನಿಮಾ ಮುಹೂರ್ತ

    ‘ಗಾಡ್ ಪ್ರಾಮಿಸ್’ಗೆ ಮುನ್ನುಡಿ- ಕುಂದಾಪುರ ಆನೆಗುಡ್ಡೆ ಗಣಪತಿ ದೇಗುಲದಲ್ಲಿ ನೆರವೇರಿತು ಸಿನಿಮಾ ಮುಹೂರ್ತ

    ಯುವ ಪ್ರತಿಭೆ ಸೂಚನ್ ಶೆಟ್ಟಿ (Suchan Shetty) ನಟಿಸಿ, ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ‘ಗಾಡ್ ಪ್ರಾಮಿಸ್’ (God Promise Film) ಸಿನಿಮಾಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿ ಇಂದು (ಮೇ 9) ಮುಹೂರ್ತ ನೆರವೇರಿದಿದ್ದು, ನಟ ಪ್ರಮೋದ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ರವಿ ಬಸ್ರೂರು ಸೂಚನ್ ಕನಸಿಗೆ ಸಾಥ್ ಕೊಟ್ಟಿದ್ದಾರೆ. ಗಾಡ್ ಪ್ರಾಮಿಸ್ ಸಿನಿಮಾಗೆ ರವಿ ಬಸ್ರೂರ್ ಕ್ಲ್ಯಾಪ್ ಮಾಡಿದ್ದು, ಪ್ರಮೋದ್ ಶೆಟ್ಟಿ (Pramod Shetty) ಕ್ಯಾಮೆರಾಗೆ ಚಾಲನೆ ನೀಡಿದರು. ‘ಕಾಂತಾರ’ (Kantara Film) ಸರಣಿ ಸಿನಿಮಾಗಳ ಮುಹೂರ್ತ ಕೂಡ ಇದೇ ದೇಗುಲದಲ್ಲಿ ನಡೆದಿರುವುದು ವಿಶೇಷ.

    ನಿರ್ದೇಶಕ ಸೂಚನ್ ಶೆಟ್ಟಿ ಮಾತನಾಡಿ, ಗಾಡ್ ಪ್ರಾಮಿಸ್ ಸಿನಿಮಾದ ಮುಹೂರ್ತ ನೆರವೇರಿದೆ. ಕಳೆದ ಆರೇಳು ತಿಂಗಳಿನಿಂದ ಈ ಚಿತ್ರಕ್ಕೆ ಪ್ರೀ ಪ್ರೊಡಕ್ಷನ್ ಕೆಲಸ ಶುರು ಮಾಡಿದ್ದೇವೆ. 2015ರಿಂದ ರವಿ ಬಸ್ರೂರು ಜೊತೆ ಕೆಲಸ ಮಾಡುತ್ತಿದ್ದೇನೆ. ಈಗ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದೇನೆ. ಸಿನಿಮಾ ಕುಂದಾಪುರ ಸುತ್ತಮುತ್ತ ನಡೆಯುತ್ತಿದೆ. ಫ್ಯಾಮಿಲಿ ಡ್ರಾಮಾ ಕಥೆಯನ್ನು ಒಳಗೊಂಡಿದೆ. ಆಡಿಷನ್ ನಡೆಸಿದ್ದೇವೆ. ಯಾರು ಆಯ್ಕೆಯಾಗಿದ್ದಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ.

    ಸಂಗೀತ ನಿರ್ದೇಶಕ ರವಿ ಬಸ್ರೂರ್ ಮಾತನಾಡಿ, ಒಂದು ಸಿನಿಮಾ ಮಾಡುವುದರಿಂದ ಎಷ್ಟೋ ಜನ ಕಲಾವಿದರ ಭವಿಷ್ಯ ನಿರ್ಧಾರವಾಗುತ್ತದೆ. ನಮ್ಮ ಕರಾವಳಿಯವರಿಗೆ ಒಳ್ಳೆಯ ಫ್ಲಾಟ್ ಫಾರಂ ಸಿಗುತ್ತಿಲ್ಲ. ಆ ನಿಟ್ಟಿನಲ್ಲಿ ನಮ್ಮ ಜೊತೆ ಬಂದವರಿಗೆ ಎಲ್ಲಾ ಕೆಲಸ ಕಲಿಯಿರಿ ಎಂದು ಹೇಳುತ್ತೇನೆ. ಇದೇ ರೀತಿ ಎಲ್ಲರೂ ಎಲ್ಲಾ ವಿಭಾಗ ಕಲಿರಿ. ಒಂದು ಸಿನಿಮಾದಿಂದ ಎಷ್ಟೋ ಜನರ ಬದುಕು ಹಸನಾಗಲಿ. ಇವರ ರೀತಿ ನಮ್ಮ ಭಾಗದಲ್ಲಿ ನೂರಾರು ಸಿನಿಮಾಗಳು ಆಗಲಿ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ತಿಳಿಸಿದರು.

    ನಟ ಪ್ರಮೋದ್ ಶೆಟ್ಟಿ ಮಾತನಾಡಿ, ಸೂಚನ್ ಯಾವುದೇ ಕೆಲಸ ಮಾಡಿದ್ರೂ ಅಚ್ಚುಕಟ್ಟಾಗಿ ಮಾಡಿ ಮುಗಿಸ್ತಾನೆ. ನಟನೆ, ನಿರ್ದೇಶನ ಎರಡು ಒಟ್ಟಿಗೆ ಮಾಡುತ್ತಿರುವುದರಿಂದ ಎಲ್ಲರೂ ಒಟ್ಟಿಗೆ ಸೇರಿ ಮುಂದುವರೆಯಲಿ. ಒಂದೊಳ್ಳೆ ತಂಡವಾಗಿ ಹೊರಹೊಮ್ಮಲಿ. ನನ್ನ ಪ್ರಕಾರ, ಈ ಸಿನಿಮಾ ತುಂಬಾ ಚೆನ್ನಾಗಿ ಬರಲಿದೆ ಎಂಬ ಭರವಸೆ ಇದೆ. ಒಳ್ಳೆಯ ಬಜೆಟ್ ಕೂಡ ಇದೆ. ಸೂಚನ್ ನಮ್ಮ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ್ದಾನೆ. ಇಡೀ ತಂಡದ ಮೇಲೆ ನಿಮ್ಮ ಬೆಂಬಲ ಇರಲಿದೆ ಎಂದು ಹೇಳಿದರು. ನಿರ್ಮಾಪಕ ಮೈತ್ರಿ ಮಂಜುನಾಥ್ ಮಾತನಾಡಿ, ನಾವು ಈ ಹಿಂದೆ ಹಫ್ತಾ ಸಿನಿಮಾ ಮಾಡಿದ್ದೇವೆ. ಇದು ನನ್ನ ಎರಡನೇ ಸಿನಿಮಾ. ‘ಗಾಡ್ ಪ್ರಾಮಿಸ್’ ಸಿನಿಮಾದ ಸ್ಕ್ರೀಪ್ಟ್ ತುಂಬಾ ಚೆನ್ನಾಗಿದೆ. ಒಳ್ಳೆಯ ಅನುಭವ ತಂಡದೊಂದಿಗೆ ಕೈ ಜೋಡಿಸಿದೆ ಎಂದರು.

    ‘ಗಾಡ್ ಪ್ರಾಮಿಸ್’ ಸಿನಿಮಾ ಮೂಲಕ ಸೂಚನ್ ಶೆಟ್ಟಿ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು, ಅವರ ಹೊಸ ಪಯಣಕ್ಕೆ ಮೈತ್ರಿ ಮಂಜುನಾಥ್ ಬಲ ತುಂಬಿದ್ದಾರೆ. ಚಿತ್ರವನ್ನು ಮೈತ್ರಿ ಪ್ರೊಡಕ್ಷನ್ ನಡಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ಹಫ್ತಾ ಸಿನಿಮಾವನ್ನು ಇದೇ ಸಂಸ್ಥೆ ನಿರ್ಮಾಣ ಮಾಡಿತ್ತು. ನೈಜ ಘಟನೆಯ ಸ್ಫೂರ್ತಿ ಪಡೆದ ಫ್ಯಾಮಿಲಿ ಹಾಗೂ ಕಾಮಿಡಿ ಕಥಾಹಂದರ ಸಿನಿಮಾಗೆ ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ಭರತ್ ಮಧುಸೂದನನ್ ಸಂಗೀತ ನಿರ್ದೇಶನ, ನವೀನ್ ಶೆಟ್ಟಿ ಸಂಕಲನ ಚಿತ್ರಕ್ಕಿದೆ. ಸದ್ಯ ಮುಹೂರ್ತ ಮುಗಿಸಿಕೊಂಡಿರುವ ಚಿತ್ರತಂಡ ಶೀಘ್ರದಲ್ಲೇ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

  • ಮಂಜುನಾಥನ ಸನ್ನಿಧಿಯಲ್ಲಿ ನೆರವೇರಿತು ‘ಗಾಡ್ ಪ್ರಾಮಿಸ್’ ಚಿತ್ರದ ಸ್ಕ್ರೀಪ್ಟ್ ಪೂಜೆ

    ಮಂಜುನಾಥನ ಸನ್ನಿಧಿಯಲ್ಲಿ ನೆರವೇರಿತು ‘ಗಾಡ್ ಪ್ರಾಮಿಸ್’ ಚಿತ್ರದ ಸ್ಕ್ರೀಪ್ಟ್ ಪೂಜೆ

    ‘ಗಾಡ್ ಪ್ರಾಮಿಸ್’ (God Promise) ಸಿನಿಮಾ ಮೂಲಕ ಯುವ ಪ್ರತಿಭೆ ಸೂಚನ್ ಶೆಟ್ಟಿ (Suchan Shetty) ಹೊಸ ಹೆಜ್ಜೆ ಇಟ್ಟಿದ್ದಾರೆ. ನಟನಾಗಿ ಬಣ್ಣ ಹಚ್ಚುವುದರ ಜೊತೆಗೆ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿಯೂ ಹೊಸ ಪಯಣ ಬೆಳೆಸಿದ್ದಾರೆ. ಟೈಟಲ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ‘ಗಾಡ್ ಪ್ರಾಮಿಸ್’ ಸಿನಿಮಾದ ಸ್ಕ್ರೀಪ್ಟ್ ಪೂಜೆ ಸರಳವಾಗಿ ನೆರವೇರಿದೆ.

    ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಇತ್ತೀಚೆಗಷ್ಟೇ ಸೂಚನ್ ಚೊಚ್ಚಲ ನಿರ್ದೇಶನದ ‘ಗಾಡ್ ಪ್ರಾಮಿಸ್’ ಸಿನಿಮಾದ ಸ್ಕ್ರೀಪ್ಟ್ ಪೂಜೆ ನಡೆದಿದೆ. ಪೂಜೆಯಲ್ಲಿ ಸೂಚನ್ ಸೇರಿದಂತೆ ಚಿತ್ರತಂಡ ಭಾಗಿಯಾಗಿತ್ತು. ಮೇ ಮೊದಲ ವಾರದಿಂದ `ಗಾಡ್ ಪ್ರಾಮಿಸ್’ ಶೂಟಿಂಗ್‌ಗೆ ಕಿಕ್ ಸ್ಟಾರ್ಟ್ ಸಿಗಲಿದೆ. ಚಿತ್ರೀಕರಣದ ಅಖಾಡಕ್ಕೆ ಇಳಿಯುವುದಕ್ಕೂ ಮೊದಲೇ ಚಿತ್ರತಂಡ, ಆಡಿಷನ್‌ಗೆ ಅವಕಾಶ ಕಲ್ಪಿಸಿಕೊಟ್ಟಿದೆ.

    ‘ಗಾಡ್ ಪ್ರಾಮಿಸ್’ ಚಿತ್ರತಂಡ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಡಿಷನ್ ಕರೆಯಲಾಗಿದೆ. ಅದರಂತೆ ಆನ್ ಲೈನ್‌ನಲ್ಲಿ ಬರೋಬ್ಬರಿ 3800 ಅರ್ಜಿಗಳು ತಲುಪಿವೆ. ಇದೇ ತಿಂಗಳ 31ರಂದು ಆಡಿಷನ್ ನಡೆಯುತ್ತಿದ್ದು, ಎಲ್ಲಾ ವರ್ಗದ ವಯೋಮಾನದವರು ಭಾಗಿಯಾಗಿ ತಮ್ಮ ಪ್ರತಿಭೆ ಪ್ರದರ್ಶಿಸಬಹುದು. ಇದನ್ನೂ ಓದಿ:ಕಮಲ್ ಹಾಸನ್, ರಜನಿಗೆ ವಾಟಾಳ್ ನಾಗರಾಜ್ ಎಚ್ಚರಿಕೆ

    ಗಾಡ್ ಪ್ರಾಮಿಸ್ ಸಿನಿಮಾವನ್ನು ಮೈತ್ರಿ ಪ್ರೊಡಕ್ಷನ್ ನಡಿ ಮೈತ್ರಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ಹಫ್ತಾ ಸಿನಿಮಾವನ್ನು ನಿರ್ಮಿಸಿದ್ದ ಈ ಪ್ರೊಡಕ್ಷನ್ ಎರಡನೇ ಕಾಣಿಕೆ ಗಾಡ್ ಪ್ರಾಮಿಸ್. ಇದೀಗ ಮೈತ್ರಿ ಪ್ರೊಡಕ್ಷನ್ ಸೂಚನ್ ಶೆಟ್ಟಿ ಮೊದಲ ಕನಸಿಗೆ ಜೊತೆಯಾಗಿದೆ.

    ಗಾಡ್ ಪ್ರಾಮಿಸ್ ನೈಜ ಘಟನೆಯ ಸ್ಫೂರ್ತಿ ಪಡೆದ ಫ್ಯಾಮಿಲಿ ಹಾಗೂ ಕಾಮಿಡಿ ಕಥಾಹಂದರ ಹೊಂದಿದೆ. ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ಭರತ್ ಮಧುಸೂದನನ್ ಸಂಗೀತ ನಿರ್ದೇಶನ, ನವೀನ್ ಶೆಟ್ಟಿ ಸಂಕಲನ ಚಿತ್ರಕ್ಕಿದೆ.

  • ‘ಕಾಂತಾರ’ದ ಫಾರೆಸ್ಟ್ ಗಾರ್ಡ್ ರವಿ ಈಗ ಡೈರೆಕ್ಟರ್

    ‘ಕಾಂತಾರ’ದ ಫಾರೆಸ್ಟ್ ಗಾರ್ಡ್ ರವಿ ಈಗ ಡೈರೆಕ್ಟರ್

    ವಿ ಬಸ್ರೂರ್ ಬಹುಬೇಡಿಕೆ ಸಂಗೀತ ನಿರ್ದೇಶಕರಲ್ಲಿ ಒಬ್ಬರು.. ಕೆಜಿಎಫ್  ಸರಣಿ ಸಿನಿಮಾ ಬಹುದೊಡ್ಡ ಯಶಸ್ಸಿನ ಬಳಿಕ ಬಾಲಿವುಡ್, ಟಾಲಿವುಡ್ ಗಳಿಗೂ ಪಯಣಿಸಿರುವ ಅವರು ಸ್ಟಾರ್ ಹೀರೋ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಇವರ ಗರಡಿಯಿಂದ ಬಂದ ಸಾಕಷ್ಟು ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿ ಒಳ್ಳೆ ಹೆಸರು ಮಾಡುತ್ತಿದ್ದಾರೆ. ಇದೀಗ ರವಿ ಬಸ್ರೂರ್ ಅಖಾಡದಿಂದ ಯುವ ಸಿನಿಮೋತ್ಸಾಹಿಗಳು ಸ್ಯಾಂಡಲ್ ವುಡ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಿರ್ದೇಶಕರಾಗಿ (Director) ಸೂಚನ್ ಶೆಟ್ಟಿ (Suchan Shetty) ಹೊಸ ಪಯಣ ಪ್ರಾರಂಭಿಸಿದ್ದಾರೆ.

    ಸೂಚನ್ ಶೆಟ್ಟಿ ಈಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಸೂಚನ್ ಅವರ ಚೊಚ್ಚಲ ಪ್ರಯತ್ನದ ಸಿನಿಮಾಗೆ ಗಾಡ್ ಪ್ರಾಮಿಸ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ರವಿ ಬಸ್ರೂರ್ ಸಾರಥ್ಯದ ಕಟಕ, ಗಿರ್ಮಿಟ್, ಕಡಲ್ ಸಿನಿಮಾಗಳಿಗೆ ಬಹರಗಾರನಾಗಿ, ಸಹ ನಿರ್ದೇಶಕನಾಗಿ, ನಟನಾಗಿ ಕೆಲಸ ಮಾಡಿರುವ ಸೂಚನ್ ಈ ಅನುಭವದೊಂದಿಗೆ ನಿರ್ದೇಶನದ ಸಾಹಸಕ್ಕೆ ಕೈ ಹಾಕಿದ್ದಾರೆ. ಪ್ಯಾನ್ ಇಂಡಿಯಾ ಕಾಂತಾರ (Kantara) ಸಿನಿಮಾದಲ್ಲಿ ಫಾರೆಸ್ಟ್ ಗಾರ್ಡ್ (Forest Guard) ರವಿ ಪಾತ್ರದಲ್ಲಿ, ರವಿ ಬಸ್ರೂರ್ ಅವರ ಕಡಲ್ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿರುವ ಸೂಚನ್ ಶೆಟ್ಟಿ ಗಾಡ್ ಪ್ರಾಮಿಸ್ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.

    ನಮ್ಮ ರಾಜ್ಯದ ಸಂಸ್ಕೃತಿಯನ್ನು ಬಿಂಬಿಸುವಂತಹ ಸಿನಿಮಾ ಮಾಡುವ ಕನಸಿನೊಂದಿಗೆ 2016ರಲ್ಲಿ ಶುರುವಾದ ಮೈತ್ರಿ ಪ್ರೊಡಕ್ಷನ್ ಸೂಚನ್ ಶೆಟ್ಟಿ ಚೊಚ್ಚಲ ಕನಸಿಗೆ ಜೊತೆಯಾಗಿದೆ. ಗಾಡ್ ಪ್ರಾಮಿಸ್ ಸಿನಿಮಾವನ್ನು ಮೈತ್ರಿ ಪ್ರೊಡಕ್ಷನ್ ನಡಿ ಮೈತ್ರಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ಹಫ್ತಾ ಸಿನಿಮಾವನ್ನು ನಿರ್ಮಿಸಿದ್ದ ಈ ಪ್ರೊಡಕ್ಷನ್ ಎರಡನೇ ಕಾಣಿಕೆ ಗಾಡ್ ಪ್ರಾಮಿಸ್..ಹಳ್ಳಿ ಸೊಗಡನ್ನು ಬಿಂಬಿಸುವ ಟೈಟಲ್ ಪೋಸ್ಟರ್ ಕುತೂಹಲವನ್ನು ಹೆಚ್ಚು ಮಾಡಿದೆ.

     

    ಗಾಡ್ ಪ್ರಾಮಿಸ್ ನೈಜ ಘಟನೆಯ ಸ್ಫೂರ್ತಿ ಪಡೆದ ಫ್ಯಾಮಿಲಿ ಹಾಗೂ ಕಾಮಿಡಿ ಕಥಾಹಂದರ ಹೊಂದಿದೆ. ಕಬ್ಜ-ಸಲಾರ್ ಚಿತ್ರಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಹಾಗೂ ಭುವನ್ ಗೌಡ ಜೊತೆ ಕೆಲಸ ಮಾಡಿರುವ ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ರವಿ ಬಸ್ರೂರ್ ಜೊತೆ ಸಲಾರ್, ಕೆಜಿಎಫ್ ಸರಣಿ ಚಿತ್ರಗಳಿಗೆ ಕೆಲಸ ಮಾಡಿರುವ 400ಕ್ಕೂ ಮ್ಯೂಸಿಕ್ ಪ್ರೊಡ್ಯೂಸರ್ ಆಗಿ ಭರತ್ ಮಧುಸೂದನನ್  ಸಂಗೀತ ನಿರ್ದೇಶನ, ಲವ್ ಮಾಕ್ಟೇಲ್-2, ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ, ವಿಕ್ರಾಂತ್ ರೋಣ ಸೇರಿದಂತೆ  ಐವತ್ತಕ್ಕೂ ಹೆಚ್ಚು ಸಿನಿಮಾಗಳಿಗೆ ಆನ್ ಲೈನ್ ಎಡಿಟರ್ ಆಗಿ ಕೆಲಸ ಮಾಡಿರುವ, ಖ್ಯಾತ ಸಂಕಲನಕಾರರಾದ ಕೆಎಂ ಪ್ರಕಾಶ್, ರುತ್ವಿಕ್. ಪ್ರತಿಕ್ ಶೆಟ್ಟಿ ಬಳಗದಲ್ಲಿ ದುಡಿದಿರುವ ನವೀನ್ ಶೆಟ್ಟಿ ಈ ಚಿತ್ರದ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಯಶಸ್ವಿ ತಂತ್ರಜ್ಞನರ ಸಿನಿಮಾವಾಗಿರುವ ಗಾಡ್ ಪ್ರಾಮಿಸ್ ತಂಡದಲ್ಲಿ ಯಾವೆಲ್ಲಾ ಕಲಾಬಳಗದ ಇರಲಿದೆ ಅನ್ನೋದು ಚಿತ್ರತಂಡ ಶೀಘ್ರದಲ್ಲೇ ರಿವೀಲ್ ಮಾಡಲಿದೆ. ಮಾರ್ಚ್ ನಿಂದ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.