Tag: ಸೂತ್ರಧಾರ

  • ‘ಡ್ಯಾಶ್’ ಹಾಡಿನ ಮೂಲಕ ಕೋಟಿ ಹೃದಯ ಗೆದ್ದ ಚಂದನ್ ಶೆಟ್ಟಿ

    ‘ಡ್ಯಾಶ್’ ಹಾಡಿನ ಮೂಲಕ ಕೋಟಿ ಹೃದಯ ಗೆದ್ದ ಚಂದನ್ ಶೆಟ್ಟಿ

    ಹೊಸ ವರ್ಷದ ಸಂಭ್ರಮಕ್ಕಾಗಿ  ಡಿಸೆಂಬರ್ ಕೊನೆಯಲ್ಲಿ  ‘ಸೂತ್ರಧಾರಿ’ (Sutradhari) ಚಿತ್ರದ ಡ್ಯಾಶ್ (Dash) ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ.  ಕಡಿಮೆ ಸಮಯದಲ್ಲೇ   ಈ ಹಾಡು 10 ಮಿಲಿಯನ್ ಗೂ ಅಧಿಕ ಬಾರಿ ವೀಕ್ಷಣೆ ಗೊಂಡು ದಾಖಲೆ ನಿರ್ಮಿಸಿದೆ.

    ಇತ್ತೀಚಿಗೆ ಕೇಕ್ ಕಟ್ ಮಾಡುವ ಮೂಲಕ ಚಿತ್ರತಂಡ ಸಂಭ್ರಮಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ ನವರಸನ್ (Navarasan),  ‘ನನಗೆ ಈ ಸಂಭ್ರಮ ವಿಶೇಷ. ನಾನು ಇಷ್ಟು ದಿನ ಮಾಡಿರುವ ಸಿನಿಮಾಗಳ ಪೈಕಿ ಇಷ್ಟು ಒಳ್ಳೆಯ ರೆಸ್ಪಾನ್ಸ್ ಯಾವ ಹಾಡಿಗೂ ಸಿಕ್ಕಿಲ್ಲ. ನನ್ನ ಚಿತ್ರದಲ್ಲಿ ಹಿಟ್ ಗೀತೆಯೊಂದು ಬರಬೇಕೆಂದು ಆಸೆಯಿತ್ತು.   ಈಗ ಇಡೇರಿದೆ. ಹೊಸ ವರ್ಷಕ್ಕಾಗಿಯೇ ಈ‌‌ ಸಾಂಗ್ ಮಾಡಿದ್ದೆವು.  ಚಿತ್ರದಲ್ಲಿ ಇನ್ನೂ ಮೂರು ಹಾಡುಗಳಿದ್ದು, ಆ ಹಾಡುಗಳು ಅದ್ಭುತವಾಗಿದೆ.  ಫೆಬ್ರವರಿಯಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತೇವೆ.  ಏಪ್ರಿಲ್, ಮೇನಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದೇವೆ. ಈ ಒಂದು ಕೋಟಿ ವೀಕ್ಷಣೆಯ ಸಕ್ಸಸ್ ಚಿತ್ರತಂಡಕ್ಕೆ ಸಲ್ಲುತ್ತದೆ’ ಎಂದರು.

    ಈ ಹಾಡನ್ನು ಬರೆದು,   ಸಂಗೀತ ಸಂಯೋಜಿಸುವ ಜೊತೆಗೆ ನಾಯಕನಾಗೂ ನಟಿಸಿರುವ ಚಂದನ್ ಶೆಟ್ಟಿ (Chandan Shetty) ಮಾತನಾಡಿ,  ‘ಸಾಂಗ್ ರಿಲೀಸ್ ಆದ ಮೂರು ವಾರದಲ್ಲೇ ಒಂದು ಕೋಟಿ ವೀಕ್ಷಣೆ ಆಗಿರುವುದು ಮಾಧ್ಯಮಗಳ ಸಹಕಾರದಿಂದ. ಈ ಗೀತೆಗೆ ನಾನು ಹಾಗೂ  ಚೇತನ್ ಸೇರಿ ಸಾಹಿತ್ಯ ಬರೆದಿದ್ದೇವೆ’ ಎಂದರು. ‘ಪ್ರಾರಂಭದಲ್ಲಿ ನಿರ್ಮಾಪಕರಿಗೆ ಹಾಡು ಚೆನ್ನಾಗಿ ಬರಬೇಕು ಸರ್. ಇದೇ ಮೊದಲಬಾರಿ ನಾನು ಬೇರೆ ಸಿನಿಮಾವೊಂದರ ಹಾಡಿನಲ್ಲಿ ನಟಿಸುತ್ತಿದ್ದೆನೆ ಎಂದಿದ್ದೆ. ಇಂದು ಈ ಗೀತೆಯಲ್ಲಿ ನಾನಿರುವುದು ಖುಷಿಯಾಗಿದೆ ಎನ್ನುತ್ತಾರೆ ನಟಿ ಸಂಜನಾ ಆನಂದ್. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ‘ಈ ಗೀತೆ ನಮ್ಮ ಸಿನಿಮಾಗೆ ಆಮಂತ್ರಣ ಆಗಿದ್ದು, ಹಾಡು  ನೋಡಿ ಬಂದ ಜನರನ್ನು ಇಡೀ ಸಿನಿಮಾವನ್ನು ನೋಡುವ ಹಾಗೆ ಮಾಡುವ ಜವಾಬ್ದಾರಿ ನನ್ನದು  ಎಂದು ನಿರ್ದೇಶಕ ಕಿರಣ್ ಕುಮಾರ್   ತಿಳಿಸಿದರು. ಕೊರಿಯೋಗ್ರಾಫರ್ ಮೋಹನ್ ಮಾಸ್ಟರ್ ಮಾತನಾಡುತ್ತಾ, ಈ ಹಾಡು ಕೇವಲ ಎರಡು ದಿನಗಳಲ್ಲಿ ಆಗಿದೆ.   ನನ್ನ ಮತ್ತು ಚಂದನ್ ಶೆಟ್ಟಿ ಕಾಂಬಿನೇಷನ್ ನ ೨ನೇ ಹಿಟ್  ಗೀತೆ ಇದು ಎಂದರು. ಈ ಸಂತಸದ ಸಮಾರಂಭದಲ್ಲಿ ನಟ ತಬಲಾನಾಣಿ, ಸೆಟ್ ವರ್ಕ್ ಮಾಡಿರುವ ಕಿರಣ್, ನಟಿ ಪಲ್ಲವಿ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಾಹಿತಿ ಕಿನ್ನಾಲ್ ರಾಜ್ ತಮ್ಮ ಅನುಭವ ಹಂಚಿಕೊಂಡರು. ಸಸ್ಪೆನ್ಸ, ಥ್ರಿಲ್ಲರ್ ಕಥಾ ಹಂದರ ಒಳಗೊಂಡ ಈ ಚಿತ್ರದಲ್ಲಿ ಅಪೂರ್ವ ನಾಯಕಿಯಾಗಿ ಅಭಿನಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಂದನ್ ಶೆಟ್ಟಿ ಸೂತ್ರಧಾರಿಯಿಂದ ಹೊಸ ವರ್ಷಕ್ಕೆ ‘ಡ್ಯಾಶ್’ ಸಾಂಗ್

    ಚಂದನ್ ಶೆಟ್ಟಿ ಸೂತ್ರಧಾರಿಯಿಂದ ಹೊಸ ವರ್ಷಕ್ಕೆ ‘ಡ್ಯಾಶ್’ ಸಾಂಗ್

    ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಜನಮನಸೂರೆಗೊಂಡಿರುವ ಚಂದನ್ ಶೆಟ್ಟಿ (Chandan Shetty), ಈಗ ನಾಯಕನಾಗೂ ಜನಪ್ರಿಯ. ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ” ಸೂತ್ರಧಾರಿ” (Sutradhara) ಚಿತ್ರದ “ಡ್ಯಾಶ್” ಸಾಂಗ್  ಬಿಡುಗಡೆಯಾಗಿದೆ. ಕೆಲವೇ ದಿನಗಳಲ್ಲಿ ಹೊಸವರ್ಷ ಆರಂಭವಾಗಲಿದೆ. ಹೊಸವರ್ಷದ ಸಂಭ್ರಮಾಚರಣೆಗೆ ಇದು ಅದ್ಭುತ ಗೀತೆಯಾಗಲಿದೆ.

    “ಸೂತ್ರಧಾರಿ” ಸಿನಿಮಾದ “ಡ್ಯಾಶ್” ಹಾಡು ಇಂದು ಬಿಡುಗಡೆಯಾಗಿದೆ. ಹೊಸವರ್ಷಕ್ಕೆ ನಮ್ಮ ಚಿತ್ರತಂಡದಿಂದ ಈ ಹಾಡು ಉಡುಗೊರೆ. “ಡ್ಯಾಶ್” ಎಂದರೆ ಏನು ಅಂತ ಎಲ್ಲಾ ಕೇಳುತ್ತಿದ್ದಾರೆ? ಡ್ಯಾಶ್ ಎಂದರೆ ಖಾಲಿ ಜಾಗ. ಅಲ್ಲಿ ನೀವು ಏನು ಬೇಕಾದರೂ ಬರೆದುಕೊಳ್ಳಬಹುದು. ಈ ಹಾಡಿಗೆ ಭಜರಂಗಿ ಮೋಹನ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಸಂಜನಾ ಆನಂದ್  (Sanjana Anand)ಈ ಹಾಡಿಗೆ ನನ್ನ ಜೊತೆ ಹೆಜ್ಜೆ ಹಾಕಿದ್ದಾರೆ. ನಿರ್ಮಾಪಕ ನವರಸನ್ ಅದ್ದೂರಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾನು ಹಾಗೂ ಚೇತನ್ ಕುಮಾರ್ ಈ ಹಾಡನ್ನು ಬರೆದಿದ್ದೇವೆ. ನಾನೇ ಸಂಗೀತ ನೀಡಿದ್ದೀನಿ. ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಒಂದುವರೆ ಲಕ್ಷಕ್ಕೂ ಅಧಿಕ ಜನರು ಈ ಹಾಡನ್ನು ವೀಕ್ಷಿಸಿದ್ದಾರೆ ಎಂದರು ಚಂದನ್ ಶೆಟ್ಟಿ. ಇದನ್ನೂ ಓದಿ: ನಡುರಾತ್ರಿಯಲ್ಲಿ ಎಲಿಮಿನೇಷನ್: ಬಿಗ್ ಬಾಸ್ ಮನೆಯಿಂದ ಆರ್ಯವರ್ಧನ್ ಔಟ್

    ನಾನು ಮೊದಲ ಬಾರಿಗೆ ಸ್ಪೆಷಲ್ ಸಾಂಗ್ ಒಂದರಲ್ಲಿ ನಟಿಸಿದ್ದೇನೆ. ಚಂದನ್ ಶೆಟ್ಟಿ ಅವರ ಜೊತೆ ಡ್ಯಾನ್ಸ್ ಮಾಡಿರುವುದು ಖುಷಿಯಾಗಿದೆ. ಹಾಡು ಅದ್ಭುತವಾಗಿದೆ ಎಂದರು ಸಂಜನಾ ಆನಂದ್. ಚಂದನ್ ಶೆಟ್ಟಿ ಅವರು ಹೊಸವರ್ಷಕ್ಕೆ ಹೊಸ ಹಾಡೊಂದನ್ನು ಬಿಡುಗಡೆ ಮಾಡುತ್ತಾರೆ. ಈ ಬಾರಿ ನಮ್ಮ ಚಿತ್ರದ ಹಾಡೊಂದನ್ನು ಹೊಸವರ್ಷಕ್ಕೆ ಬಿಡುಗಡೆ ಮಾಡುವ ಆಸೆಯಿತ್ತು. ಆದರೆ ಸಮಯ ಕಡಿಮೆ ಇತ್ತು. ಚಂದನ್ ಶೆಟ್ಟಿ ಅವರ ಬಳಿ ಈ ವಿಷಯ ಹೇಳಿದೆ. ಕೇವಲ ಎರಡು ದಿನಗಳ ಹಿಂದೆ ಈ ಹಾಡಿನ ಚಿತ್ರೀಕರಣವಾಗಿ ಈಗ ಬಿಡುಗಡೆಯಾಗಿದೆ. ಈ ಚಿತ್ರದ ನಾಯಕಿ ಅಪೂರ್ವ. ಆದರೆ ಈ ವಿಶೇಷ ಹಾಡಿಗೆ ಚಂದನ್ ಶೆಟ್ಟಿ ಅವರ ಜೊತೆ ಸಂಜನಾ ಆನಂದ್ ಹೆಜ್ಜೆ ಹಾಕಿದ್ದಾರೆ. ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಎಂದರು ನಿರ್ಮಾಪಕ ನವರಸನ್.

    ನಿರ್ದೇಶಕ ಕಿರಣ್ ಕುಮಾರ್ ಹಾಡಿನ ಬಗ್ಗೆ ಮಾಹಿತಿ ನೀಡಿದರು. ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು ಹಾಗೂ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್ ಸೇರಿದಂತೆ ಅನೇಕ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕರಾದ ಸಂಜಯ್ ಗೌಡ, ರವಿ ಗೌಡ, ಗೋವಿಂದರಾಜು, ರಾಜೇಶ್ ಮುಂತಾದವರು “ಸೂತ್ರಧಾರಿ” ಹಾಡಿಗೆ ಹಾರೈಸಿದರು. ಕಿರುತೆರೆ ಸೂಪರ್ ಸ್ಟಾರ್ ಎಂದು ಖ್ಯಾತರಾಗಿರುವ ಬೇಬಿ ವಂಶಿಕಾ ಕೆಲವು ಸಮಯ ಕಾರ್ಯಕ್ರಮದ ನಿರೂಪಣೆ ಮಾಡಿದ್ದು ವಿಶೇಷವಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಚಂದನ್ ಶೆಟ್ಟಿ ಹೊಸ ಸಿನಿಮಾಗೆ ಸಲಗ ಖ್ಯಾತಿಯ ಸಂಜನಾ ಆನಂದ್ ನಾಯಕಿ

    ಚಂದನ್ ಶೆಟ್ಟಿ ಹೊಸ ಸಿನಿಮಾಗೆ ಸಲಗ ಖ್ಯಾತಿಯ ಸಂಜನಾ ಆನಂದ್ ನಾಯಕಿ

    ನ್ನಡದ ಹೆಸರಾಂತ ಯುವ ಗಾಯಕ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸುತ್ತಿರುವ ಸೂತ್ರಧಾರ (Sutradhara) ಚಿತ್ರಕ್ಕೆ ನಾಯಕಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ತಮ್ಮ ಹಾಡುಗಳ ಮೂಲಕ ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಸಿನಿಮಾವಿದು.

    ನವರಸನ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೆ ಶೇಕಡಾ 90ರಷ್ಟು ಸಿನೆಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಚಿತ್ರದ ಮೊದಲ ಹಾಡಿನ ಚಿತ್ರೀಕರಣ ಇನೋವೇಟೀವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ಸೆಟ್ಟೆರಿದೆ. ಈ ಚಿತ್ರದ ಹೀರೋ ಇಂಟ್ರೊಡಕ್ಷನ್ ಸಾಂಗ್ ಆಗಿದ್ದು ಸಂಗೀತ ನಿರ್ದೇಶಕ ಮತ್ತು ಗಾಯಕನಾಗಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ನನಗೆ, ನೇಹಾಗೆ ಕಾಂಪಿಟೇಶನ್ ಇತ್ತು: ಅನುಪಮಾ

    ಈ ಹಾಡಿನಲ್ಲಿ ಮೊದಲ ಬಾರಿಗೆ ಚಂದನ್ ಶೆಟ್ಟಿ ಜೋಡಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ (Sanjana Anand) ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಈ ಹಾಡನ್ನು ಇದೇ ಡಿಸೆಂಬರ್ 27ರಂದು ಬೆಳಗ್ಗೆ 10.35ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಈ ಹಾಡು ಹೊಸ ವರ್ಷದ ಸಂಭ್ರಮಾಚರಣೆಗೆ ಹೇಳಿ ಮಾಡಿಸಿದ ಹಾಗಿದೆ ಎಂದಿದ್ದಾರೆ ನಿರ್ಮಾಪಕ ನವರಸನ್.

    Live Tv
    [brid partner=56869869 player=32851 video=960834 autoplay=true]