Tag: ಸೂರತ್

  • ಕೂಡಿಬಾಳಲು ಒಪ್ಪಿಕೊಳ್ಳದ ಮಾಜಿ ಪತ್ನಿಗೆ HIV ರೋಗಿಯ ರಕ್ತ ಇಂಜೆಕ್ಟ್ ಮಾಡಿದ ಭೂಪ

    ಕೂಡಿಬಾಳಲು ಒಪ್ಪಿಕೊಳ್ಳದ ಮಾಜಿ ಪತ್ನಿಗೆ HIV ರೋಗಿಯ ರಕ್ತ ಇಂಜೆಕ್ಟ್ ಮಾಡಿದ ಭೂಪ

    – ಕ್ರೈಂ ಥ್ರಿಲರ್ ಟಿವಿ ಶೋ ನಿಂದ ಪ್ರೇರಣೆ
    – ತನಿಖೆ ವೇಳೆ ರೋಚಕ ರಹಸ್ಯ ಬಯಲು

    ನವದೆಹಲಿ: ಪ್ರತಿಷ್ಠಿತ ಟಿ.ವಿ ಕಾರ್ಯಕ್ರಮವೊಂದರಿಂದ (TV Show) ಪ್ರೇರಣೆ ಪಡೆದ ವ್ಯಕ್ತಿಯೊಬ್ಬ ತನ್ನೊಂದಿಗೆ ಕೂಡಿಬಾಳಲು ಒಪ್ಪಿಕೊಳ್ಳದ ಮಾಜಿ ಪತ್ನಿಗೆ ಹೆಚ್‌ಐವಿ ರೋಗಿಯ ರಕ್ತವನ್ನು ಇಂಜೆಕ್ಟ್ ಮಾಡಿರುವ ಘಟನೆ ಗುಜರಾತ್‌ನ (Gujarat) ಸೂರತ್‌ನಲ್ಲಿ  ನಡೆದಿದೆ.

    ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನ ಸೂರತ್ ಪೊಲೀಸರು (Surat Police) ಬಂಧಿಸಿದ್ದಾರೆ. ಬಳಿಕ ತನಿಖೆಯಲ್ಲಿ ಆತ ಕ್ರೈಂ (Crime) ಥ್ರಿಲ್ಲಿಂಗ್ ಟಿವಿ ಶೋ ನಿಂದ ಪ್ರೇರಿತನಾಗಿದ್ದಾನೆ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಪೆರೋಲ್ ಪಡೆದು ಪರಾರಿಯಾದಾತ ತನ್ನದೇ ಸಾವಿನ ಕತೆ ಕಟ್ಟಿದ – 15 ವರ್ಷಗಳ ಬಳಿಕ ಮತ್ತೆ ಅಂದರ್

    ಸಂತ್ರಸ್ತ ಮಹಿಳೆ ಹಾಗೂ ಆರೋಪಿ (Accused) ಕಳೆದ 15 ವರ್ಷಗಳ ಹಿಂದೆ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಆದ್ರೆ ಕಳೆದ 2 ತಿಂಗಳಿನಿಂದ ನಿರಂತರ ಜಗಳದಿಂದಾಗಿ ವಿಚ್ಛೇದನ ಪಡೆದು ಇಬ್ಬರೂ ದೂರವಾಗಿದ್ದರು. ಒಂಟಿ ಜೀವನದಿಂದ ಬೇಸತ್ತಿದ್ದ ಆರೋಪಿ ಪತಿ ಮತ್ತೆ ತನ್ನ ಸಂಗಾತಿಯೊಂದಿಗೆ ಕೂಡಿಬಾಳಲು ನಿರ್ಧರಿಸಿದ್ದನು. ಆದ್ರೆ ಇದಕ್ಕೆ ಮಹಿಳೆ ಒಪ್ಪಿಕೊಳ್ಳಲಿಲ್ಲ. ಹಾಗಾಗಿ ಆಕೆ ವಿರುದ್ಧ ಸೇಡು ತೀರಿಸಿಕೊಳ್ಳಲು ಕಳೆದ ಒಂದು ತಿಂಗಳಿನಿಂದ ಸ್ಕೆಚ್ ಹಾಕಿ ಭೇಟಿಯಾಗಲು ಕಾಯುತ್ತಿದ್ದನು. ಇದನ್ನೂ ಓದಿ: ರಚನಾ ದಶರಥ್ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡ ಲೋಕೇಶ್ ಬಸವಟ್ಟಿ

    ಬಹುದಿನಗಳ ನಂತರ ಭಾನುವಾರ (ಡಿ.25) ಇಬ್ಬರೂ ಭೇಟಿಯಾಗಿದ್ದರು. ಇಬ್ಬರೂ ರೆಸ್ಟೋರೆಂಟ್ ಹೋಗಿ ಊಟ ಮಾಡಿ, ಶಾಪಿಂಗ್ ಸಹ ಮುಗಿಸಿದ್ದರು. ಸಂಜೆ ಸ್ವಲ್ಪ ಖಾಸಗಿ ಸಮಯ ಕಳೆಯೋದಕ್ಕಾಗಿ ಮೋರಾ ಭಾಗಲ್ ಪ್ರದೇಶದಲ್ಲಿ ಪ್ರತ್ಯೇಕ ಸ್ಥಳಕ್ಕೆ ತೆರಳಿದ್ದರು. ಈ ಸಮಯದಲ್ಲಿ ಮಾಜಿ ಪತಿ ಆಕೆಯ ಮನವೊಲಿಸಲು ಶತಾಯಗತಾಯ ಪ್ರಯತ್ನಿಸಿದ್ದಾನೆ. ಆದರೂ ಆಕೆ ಒಪ್ಪಿಕೊಳ್ಳದ ಮೇಲೆ, ತಬ್ಬಿಕೊಳ್ಳುವ ನೆಪದಲ್ಲಿ ಪೃಷ್ಠ ಭಾಗಕ್ಕೆ (ಹಿಂಬದಿಯ ಪಕ್ಕೆಯಿಂದ ಕೆಳಭಾಗ) ಹೆಚ್‌ಐವಿ ರೋಗಿಯ ರಕ್ತವನ್ನು ಇಂಜೆಕ್ಟ್ ಮಾಡಿದ್ದಾನೆ. ಸ್ವಲ್ಪ ಸಮಯದಲ್ಲೇ ಮಹಿಳೆ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ಮರಳಿ ಪ್ರಜ್ಞೆ ಬಂದೊಡನೆ ವೈದ್ಯರಿಂದ ಮಾಹಿತಿ ಪಡೆದು ನಂತರ ಪೊಲೀಸರಿಗೆ ದೂರು ನೀಡಿದ್ದಾಳೆ. ಆರೋಪಿಯನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ ಆತನ ಪ್ಯಾಂಟ್ ಜೇಬಿನಲ್ಲಿ ರಕ್ತದ ಕಲೆ ಪತ್ತೆಯಾಗಿದೆ.

    ಥ್ರಿಲ್ಲರ್ ಟಿವಿ ಶೋ ಪ್ರೇರಣೆ: ಮಹಿಳೆಗೆ ಇಂಜೆಕ್ಟ್ ಮಾಡಲು ಒಂದು ತಿಂಗಳ ಹಿಂದೆಯೇ ಯೋಜಿಸಿದ್ದನು. ಒಂದು ಟಿವಿ ಶೋನಿಂದ ಪ್ರೇರಣೆ ಪಡೆದಿದ್ದನು. ಆ ಟಿವಿ ಶೋನಲ್ಲಿ `ವ್ಯಕ್ತಿಯೊಬ್ಬ ಹೆಣ್ಣು ನಾಯಿಗೆ ರಕ್ತವನ್ನು ಇಂಜೆಕ್ಟ್ ಮಾಡುತ್ತಾನೆ’ ಅದನ್ನು ನಾನೂ ನೋಡಿದ್ದೆ ಎಂದು ಆರೋಪಿ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ರಕ್ತ ಹೇಗೆ ಪಡೆದುಕೊಂಡನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ನೂಪುರ್ ಶರ್ಮಾ ಫೋಟೋ ಅಪ್ಲೋಡ್ ಮಾಡಿದ್ದ ಉದ್ಯಮಿಗೆ ಕೊಲೆ ಬೆದರಿಕೆ – ಮೂವರ ಬಂಧನ

    ನೂಪುರ್ ಶರ್ಮಾ ಫೋಟೋ ಅಪ್ಲೋಡ್ ಮಾಡಿದ್ದ ಉದ್ಯಮಿಗೆ ಕೊಲೆ ಬೆದರಿಕೆ – ಮೂವರ ಬಂಧನ

    ಗಾಂಧೀನಗರ: ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಕ್ಕಾಗಿ ಸೂರತ್ ಮೂಲದ ಉದ್ಯಮಿಗೆ ಶುಕ್ರವಾರ ಕೆಲವು ಅಪರಿಚಿತ ವ್ಯಕ್ತಿಗಳಿಂದ ಕೊಲೆ ಬೆದರಿಕೆ ಬಂದಿದೆ. ಉದ್ಯಮಿಗೆ ಬೆದರಿಕೆ ಹಾಕಿದ್ದ ಮೂವರನ್ನು ಸೂರತ್ ಪೊಲೀಸರು ಬಂಧಿಸಿದ್ದಾರೆ.

    ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನ ಮಾಡಿದ್ದ ನೂಪುರ್ ಶರ್ಮಾ ಅವರ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದರಿಂದ ಉದ್ಯಮಿಗೆ 7 ವ್ಯಕ್ತಿಗಳಿಂದ ಕೊಲೆ ಬೆದರಿಕೆಗಳು ಬಂದಿವೆ ಎಂದು ಸೂರತ್ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ವಿವಾದ – ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ

    ಸೂರತ್ ಪೊಲೀಸರು ಬಂಧಿಸಿರುವ ಮೂವರು ಆರೋಪಿಗಳು ಮೊಹಮ್ಮದ್ ಅಯಾನ್ ಅತಶ್ಬಾಜಿವಾಲಾ, ರಶೀದ್ ಭುರಾ ಹಾಗೂ ಮಹಿಳಾ ಆರೋಪಿ ಆಲಿಯಾ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಬಂಧಿತ ಎಲ್ಲಾ ಆರೋಪಿಗಳು ಸೂರತ್ ಮೂಲದವರಾಗಿದ್ದು, ಇನ್ನುಳಿದ ನಾಲ್ವರು ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭಗತ್‌ ಸಿಂಗ್‌ ಒಬ್ಬ ಭಯೋತ್ಪಾದಕ: ಶಿರೋಮಣಿ ಅಕಾಲಿ ದಳ ಸಂಸದ ವಿವಾದಾತ್ಮಕ ಹೇಳಿಕೆ

    ಬಿಜೆಪಿಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಟಿವಿ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಗದ್ದಲಕ್ಕೆ ಕಾರಣರಾದರು. ನೂಪುರ್ ಅವರನ್ನು ಬೆಂಬಲಿಸಿದ್ದಕ್ಕೆ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರ ಹತ್ಯೆಯೂ ನಡೆಯಿತು. ಅಂದಿನಿಂದ ನೂಪುರ್ ಅವರನ್ನು ಬೆಂಬಲಿಸಿದ ಹಲವರಿಗೆ ಬೆದರಿಕೆ ಕರೆಗಳು ಬಂದಿರುವುದಾಗಿ ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನನ್ನನ್ನು ಕಿಡ್ನಾಪ್ ಮಾಡಿದ್ರು, ಸೂರತ್‌ನಿಂದ ತಪ್ಪಿಸಿಕೊಂಡು ಬಂದೆ: ಶಿವಸೇನೆ ಶಾಸಕನ ಸ್ಫೋಟಕ ಹೇಳಿಕೆ

    ನನ್ನನ್ನು ಕಿಡ್ನಾಪ್ ಮಾಡಿದ್ರು, ಸೂರತ್‌ನಿಂದ ತಪ್ಪಿಸಿಕೊಂಡು ಬಂದೆ: ಶಿವಸೇನೆ ಶಾಸಕನ ಸ್ಫೋಟಕ ಹೇಳಿಕೆ

    ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿಗೆ ಹೊಸದೊಂದು ಟ್ವಿಸ್ಟ್‌ ಸಿಕ್ಕಿದೆ. ಬಂಡಾಯ ನಾಯಕ ಏಕನಾಥ ಶಿಂಧೆ ಅವರನ್ನು ಸೇರಿದ್ದಾರೆ ಎನ್ನಲಾಗಿದ್ದ ಶಿವಸೇನೆ ಶಾಸಕ ನಿತಿನ್‌ ದೇಶ್‌ಮುಖ್‌ ಮತ್ತೆ ಉದ್ಧವ್‌ ಠಾಕ್ರೆ ಅವರಿಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

    ನನ್ನನ್ನು ಅಪಹರಿಸಿ ಗುಜರಾತ್‌ನ ಸೂರತ್‌ಗೆ ಕರೆದೊಯ್ದಿದ್ದರು. ನಾನು ಅಲ್ಲಿಂದ ತಪ್ಪಿಸಿಕೊಂಡು ಬಂದೆ. ಯಾವಾಗಲೂ ನನ್ನ ಬೆಂಬಲ ಉದ್ಧವ್‌ ಠಾಕ್ರೆ ಅವರಿಗಿದೆ ಎಂದು ನಿತಿನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ನಿನ್ನ ಅಹಂಕಾರ ನಾಲ್ಕೇ ದಿನ – ಸಂಜಯ್ ರಾವತ್ ಮನೆ ಎದುರು ಬ್ಯಾನರ್

    ನಾನು ತಪ್ಪಿಸಿಕೊಂಡು ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಸ್ತೆಯಲ್ಲಿ ನಿಂತಿದ್ದಾಗ ನೂರಕ್ಕೂ ಹೆಚ್ಚು ಪೊಲೀಸರು ಬಂದು ನನ್ನನ್ನು ಆಸ್ಪತ್ರೆಗೆ ಕರೆದೊಯ್ದರು. ಅವರು ನನಗೆ ಹೃದಯಾಘಾತವಾಗಿದೆ ಎಂದು ನಟಿಸಿದರು. ನನಗೆ ಆರೋಗ್ಯ ತೊಂದರೆ ಇಲ್ಲದಿದ್ದರೂ ಬಲವಂತವಾಗಿ ನನಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ ಎಂದು ನಿತಿನ್‌ ಗಂಭೀರ ಆರೋಪ ಮಾಡಿದ್ದಾರೆ.

    ನನಗೆ ಆಸ್ಪತ್ರೆಯಲ್ಲಿ ಬಲವಂತವಾಗಿ ಕೆಲವು ಇಂಜೆಕ್ಷನ್‌ಗಳನ್ನು ನೀಡಲಾಯಿತು. ನನ್ನ ರಕ್ತದೊತ್ತಡ ಹೆಚ್ಚಾಗಿರಲಿಲ್ಲ. ನನಗೆ ಬಲವಂತವಾಗಿ ಕೆಲವು ಚುಚ್ಚುಮದ್ದು ನೀಡಲಾಯಿತು ಎಂದು ದೂರಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ರಾಜ್ಯಪಾಲ, ಸಿಎಂಗೆ ಕೊರೊನಾ

    ನಿತಿನ್‌ ದೇಶ್‌ಮುಖ್ ಪತ್ನಿ ಪ್ರಾಂಜಲಿ ಅವರು ನನ್ನ ಪತಿ ಕಾಣೆಯಾಗಿದ್ದಾರೆ ಎಂದು ಅಕೋಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜೂನ್ 20 ರಂದು ಸಂಜೆ 7 ಗಂಟೆಗೆ ತನ್ನ ಪತಿಯೊಂದಿಗೆ ಫೋನ್ ಕರೆಯಲ್ಲಿ ಕೊನೆಯದಾಗಿ ಮಾತನಾಡಿದ್ದೇನೆ. ಅವರ ಫೋನ್ ಸ್ವಿಚ್ ಆಗಿರುವುದರಿಂದ ಅವರೊಂದಿಗೆ ಸಂವಹನ ನಡೆಸಲು ಸಾಧ್ಯವಾಗಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದರು.

    Live Tv

  • ಇಬ್ಭಾಗದತ್ತ ಶಿವಸೇನೆ – ಮಹಾರಾಷ್ಟ್ರದಲ್ಲಿ ಮುಂದೇನಾಗಬಹುದು? ಅಂಕಿ ಸಂಖ್ಯೆ ಲೆಕ್ಕಾಚಾರ ಏನು?

    ಇಬ್ಭಾಗದತ್ತ ಶಿವಸೇನೆ – ಮಹಾರಾಷ್ಟ್ರದಲ್ಲಿ ಮುಂದೇನಾಗಬಹುದು? ಅಂಕಿ ಸಂಖ್ಯೆ ಲೆಕ್ಕಾಚಾರ ಏನು?

    ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ರಾಜಕೀಯ ಬಿಕ್ಕಟ್ಟು ತಲೆದೂರಿದೆ. ಆಪರೇಷನ್ ಕಮಲದ ಪರಿಣಾಮ ಉದ್ಧವ್ ಸರ್ಕಾರ ಪತನದ ಅಂಚು ತಲುಪಿದೆ. ಒಂದು ಕಾಲದಲ್ಲಿ ಎಲ್ಲರನ್ನು ನಡುಗಿಸುತ್ತಿದ್ದ ಶಿವಸೇನೆ ಈಗ ಪ್ರಭಾವಿ ಸಚಿವ ಏಕನಾಥ್ ಶಿಂಧೆ ಹಾರಿಸಿದ ಬಂಡಾಯದ ಬಾವುಟಕ್ಕೆ ತತ್ತರಿಸಿ ಇಬ್ಭಾಗವಾಗುವತ್ತಾ ಸಾಗಿದೆ.

    ಮುಖ್ಯಮಂತ್ರಿ ಕಾರ್ಯವೈಖರಿ ಮತ್ತು ಪುತ್ರ ಪ್ರೇಮದ ಬಗ್ಗೆ ತೀವ್ರ ಅತೃಪ್ತಿ ಹೊಂದಿರುವ ಶಿಂಧೆ ಮತ್ತು ಶಾಸಕರು ಈಗ ಸೂರತ್‌ನಿಂದ ಬಿಜೆಪಿ ಆಡಳಿತ ಇರುವ ಅಸ್ಸಾಂ ಗುವಹಾಟಿಗೆ ಶಿಫ್ಟ್‌ ಆಗಿದ್ದಾರೆ. ಅರ್ಧಕ್ಕೂ ಹೆಚ್ಚಿನ ಶಾಸಕರು ಶಿಂಧೆಯ ಜೊತೆ ಇರುವ ಕಾರಣ ಮಹಾರಾಷ್ಟ್ರದಲ್ಲಿರುವ ಮಹಾ ವಿಕಾಸ್‌ ಅಘಾಡಿ ಸರ್ಕಾರ ಪತನವಾಗುವ ಸಾಧ್ಯತೆ ಹೆಚ್ಚಿದೆ.

    ಸಂಖ್ಯಾ ಬಲ ಹೇಗಿದೆ?
    288 ಬಲದ ವಿಧಾನಸಭೆಯಲ್ಲಿ ಒಬ್ಬ ಶಾಸಕ ನಿಧನ ಆಗಿರುವ ಕಾರಣ, ಸದಸ್ಯ ಬಲ 287ಕ್ಕೆ ಕುಸಿದಿದೆ. ಹೀಗಾಗಿ ಬಹುಮತಕ್ಕೆ 144 ಸದಸ್ಯರ ಮತ ಬೇಕು. ಇಲ್ಲಿಯರೆಗೆ ಮಹಾ ವಿಕಾಸ್‌ ಅಘಾಡಿ(ಎಂವಿಎ) ಸರ್ಕಾರದ ಸಂಖ್ಯಾಬಲ 152(ಶಿವಸೇನೆ 55+ಎನ್‍ಸಿಪಿ 53+ಕಾಂಗ್ರೆಸ್ 44) ಹಾಗೂ ವಿಪಕ್ಷ ಬಿಜೆಪಿ ಕೊಟ 135 ಸದಸ್ಯ ಬಲ ಹೊಂದಿವೆ. ಇದನ್ನೂ ಓದಿ: ಬಾಳಾ ಠಾಕ್ರೆಯ ಹಿಂದುತ್ವ ಪಾಲಿಸುತ್ತೇವೆ: 40 ಶಾಸಕರ ಜೊತೆ ಸೂರತ್‌ನಿಂದ ಗುವಾಹಟಿಗೆ ಹಾರಿದ ಶಿಂಧೆ

    ಸಾಧ್ಯತೆ 1
    ಶಿಂಧೆ ನೇತೃತ್ವದ 33 ಶಾಸಕರು ವಿರುದ್ಧ ಮತ ಚಲಾಯಿಸಿದರೆ ಎಂವಿಎ ಸರ್ಕಾರಕ್ಕೆ 119 ಮತ ಮಾತ್ರ ಬಿದ್ದಂತಾಗುತ್ತದೆ. 144ರ ಮ್ಯಾಜಿಕ್‌ ಸಂಖ್ಯೆ ದಾಟದೇ ಅಲ್ಪ ಮತಕ್ಕೆ ಕುಸಿದು ಉದ್ಧವ್‌ ಠಾಕ್ರೆ ನೇತೃತ್ವದ ಸರ್ಕಾರ ಪತನ ಹೊಂದುತ್ತದೆ. ಆದರೆ ಶಿಂಧೆ ಈಗಾಗಲೇ ನಮ್ಮ ಜೊತೆ 40 ಶಾಸಕರಿದ್ದಾರೆ ಎಂದು ಹೇಳಿದ್ದಾರೆ.

    ಸಾಧ್ಯತೆ 2
    ಸರ್ಕಾರದ ವಿರುದ್ಧ ಮತ ಹಾಕಿದರೆ ಶಿಂಧೆ ಬಣದ 33 ಶಾಸಕರಿಗೆ ಅನರ್ಹತೆ ಭೀತಿ ಇರುತ್ತದೆ. ಈ ರೀತಿ ಆಗದೇ ಇರಲು ಅವರು ರಾಜೀನಾಮೆ ನೀಡಬಹುದು. ರಾಜೀನಾಮೆ ನೀಡಿದರೆ ಸದನದ ಬಲ 287ರಿಂದ 254ಕ್ಕೆ ಇಳಿಯುತ್ತದೆ. ಬಹುಮತಕ್ಕೆ 127 ಮತ ಬೇಕಾಗುತ್ತದೆ. ಹೀಗಾದಾಗ ಸರ್ಕಾರದ ಬಲ 119ಕ್ಕೆ ಕುಸಿಯುತ್ತದೆ. ಈ ಸನ್ನಿವೇಶ ಸೃಷ್ಟಿಯಾದಲ್ಲಿ 135 ಸದಸ್ಯ ಬಲ ಹೊಂದಿರುವ ಬಿಜೆಪಿಗೆ ಅಧಿಕಾರ ಸಿಗಲಿದೆ.

    ಸಾಧ್ಯತೆ 3
    ಶಿವಸೇನೆ ಶಾಸಕರು ರಾಜೀನಾಮೆ ನೀಡಿದರೆ ಮತ್ತೆ ಚುನಾವಣೆ ನಡೆಯಬೇಕಾಗುತ್ತದೆ. ಆದರೆ ಶಿಂಧೆ ಮತ್ತು ಬಣ ಪಕ್ಷಾಂತರ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ 55 ಶಿವಸೇನೆ ಸದಸ್ಯರ ಪೈಕಿ 37 ಶಾಸಕರ ಬೆಂಬಲ ಬೇಕಾಗುತ್ತದೆ. ಈ ಕಾರಣಕ್ಕೆ ಉಳಿದ ಶಿವಸೇನೆ ಶಾಸಕರ ಜೊತೆ ಮಾತುಕತೆ ನಡೆಯುತ್ತಿದೆ. 37 ಶಾಸಕರು ಪಕ್ಷ ತೊರೆದಲ್ಲಿ ಶಿವಸೇನೆ ಬಲ 18ಕ್ಕೆ ಕುಸಿಯಲಿದೆ. 37 ಶಾಸಕರು ಬೆಂಬಲ ನೀಡಿದರೆ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯವಾಗುವುದಿಲ್ಲ. ರಾಜೀನಾಮೆ ನೀಡುವ ಅಗತ್ಯ ಬರುವುದಿಲ್ಲ. ಈ ಶಾಸಕರು ಸುಲಭವಾಗಿ ಬಿಜೆಪಿ ಸೇರಬಹುದು.

    ಸಂವಿಧಾನದ 10ನೇ ಷೆಡ್ಯೂಲ್ ಪ್ರಕಾರ ಪಕ್ಷದ 3ನೇ ಎರಡು ಭಾಗದಷ್ಟು ಶಾಸಕರು ಪಕ್ಷ ತೊರೆದಲ್ಲಿ ಯಾವುದೇ ಕ್ರಮ ಆಗುವುದಿಲ್ಲ. ಪಕ್ಷಾಂತರ ನಿಷೇಧ ಕಾಯ್ಡೆಯಿಂದ ಸುಲಭವಾಗಿ ಪಾರಾಗಬಹುದು.

    Live Tv

  • ಬಾಳಾ ಠಾಕ್ರೆಯ ಹಿಂದುತ್ವ ಪಾಲಿಸುತ್ತೇವೆ: 40 ಶಾಸಕರ ಜೊತೆ ಸೂರತ್‌ನಿಂದ ಗುವಾಹಟಿಗೆ ಹಾರಿದ ಶಿಂಧೆ

    ಬಾಳಾ ಠಾಕ್ರೆಯ ಹಿಂದುತ್ವ ಪಾಲಿಸುತ್ತೇವೆ: 40 ಶಾಸಕರ ಜೊತೆ ಸೂರತ್‌ನಿಂದ ಗುವಾಹಟಿಗೆ ಹಾರಿದ ಶಿಂಧೆ

    ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಡ್ರಾಮಾ ಮುಂದುವರಿದಿದೆ. ಶಿವಸೇನೆ ಹಿರಿಯ ನಾಯಕ, ನಗರಾಭಿವೃದ್ಧಿ ಸಚಿವ ಏಕನಾಥ್ ಶಿಂಧೆ 40 ಶಾಸಕರೊಂದಿಗೆ ಸೂರತ್‍ನಿಂದ ಗುಜರಾತ್ ಪೊಲೀಸರ ಭದ್ರತೆಯೊಂದಿಗೆ ಅಸ್ಸಾಂನ ಗುವಾಹಟಿಗೆ ಆಗಮಿಸಿದ್ದಾರೆ.

    ಬೆಳಗಿನ ಜಾವ ಅಸ್ಸಾಂಗೆ ಬಂದಿಳಿದ ಇವರು ಬಿಜೆಪಿ ಅಧಿಕಾರದಲ್ಲಿರುವ ಮತ್ತೊಂದು ರಾಜ್ಯದಲ್ಲಿ ಆಶ್ರಯ ಪಡೆದಿದ್ದಾರೆ. ಶಿಂಧೆ ಜೊತೆ 33 ಶಿವಸೇನೆ ಶಾಸಕರು ಮತ್ತು 7 ಮಂದಿ ಪಕ್ಷೇತರ ಶಾಸಕರು ಜೊತೆಗಿದ್ದಾರೆ.

    ಸೂರತ್‌ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಿಂಧೆ, ನಾವು ಬಾಳಾ ಸಾಹೇಬ್‌ ಅವರ ಅನುಯಾಯಿಗಳು. ಬಾಳಾ ಠಾಕ್ರೆ ಅವರು ನಮಗೆ ಹಿಂದುತ್ವದ ಪಾಠ ಮಾಡಿದ್ದಾರೆ. ಆ ಸಿದ್ಧಾಂತಕ್ಕೆ ಅನುಗುಣವಾಗಿ ಈಗಿನ ಸರ್ಕಾರ ನಡೆದುಕೊಳ್ಳುತ್ತಿಲ್ಲ. ಆದರೆ ನಾವು ಶಿವಸೇನೆಯನ್ನು ತೊರೆಯುವುದಿಲ್ಲ ಎಂದು ಹೇಳಿದ್ದಾರೆ.

    ಏಕನಾಥ್ ಶಿಂಧೆ ಮತ್ತು ಬಂಡಾಯ ಶಾಸಕರ ಜೊತೆ ನಡೆಸಿದ ಸಂಧಾನ ವಿಫಲವಾಗಿದ್ದು, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಸಿದ್ಧವಾಗಿದ್ದಾರೆ ಅಂತಲೂ ತಿಳಿದು ಬಂದಿದೆ. ಶಾಸಕರು ವಾಪಸ್ ಬಾರದಿದ್ದಲ್ಲಿ ರಾಜೀನಾಮೆ ಕೊಡುತ್ತೇನೆ ಎಂದು ಮಂಗಳವಾರ ನಡೆದ ಮಹಾವಿಕಾಸ್ ಅಘಾಡಿ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ಹೇಳಲಾಗಿದೆ.

    ಸೂರತ್‍ನ ರೆಸಾರ್ಟ್‍ಗೆ ಉದ್ದವ್ ಠಾಕ್ರೆ ಪ್ರತಿನಿಧಿಯಾಗಿ ಮಿಲಿಂದ್ ನಾರ್ವೇಕರ್ ಏಕನಾಥ್ ಶಿಂಧೆ ಭೇಟಿಯಾಗಿದ್ದು ಸಿಎಂ ಸಂದೇಶವನ್ನು ರವಾನೆ ಮಾಡಿದ್ದಾರೆ. ಈ ಭೇಟಿ ಬಳಿಕ ಮಾತನಾಡಿರುವ ಏಕನಾಥ್ ಶಿಂಧೆ, ನಾನು ಹಿಂದುತ್ವದ ಜೊತೆಗಿದ್ದು, ಶಿವಸೇನೆಗೆ ಮರಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಶಿವಸೇನೆ ಹಿಂದುತ್ವವನ್ನು ಮರೆತಿದೆ ಎಂದು ಆಕ್ರೋಶವನ್ನು ಹೊರ ಹಾಕಿದ್ದಾರೆ. ‌

    ಶಿವಸೇನೆ ರಾಜ್ಯಸಭೆ ಸದಸ್ಯ ಸಂಜಯ್ ರಾವತ್, ಏಕನಾಥ್ ಶಿಂಧೆ ಅವರೊಂದಿಗೆ ಮಾತುಕತೆ ನಡೆದಿದೆ. ಅವರು ನಮ್ಮ ಹಳೆಯ ಗೆಳೆಯ ನಾವು ಬಿಜೆಪಿಯನ್ನು ಏಕೆ ತೊರೆದಿದ್ದೇವೆ ಎಂಬುದು ಎಲ್ಲರಿಗೂ ತಿಳಿದಿದೆ. ಏಕನಾಥ್ ಶಿಂಧೆಯೂ ಸಾಕ್ಷಿಯಾಗಿದ್ದಾರೆ ಅವರು ಮರಳುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

    ಈ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ರಕ್ಷಿಸಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಉಸ್ತುವಾರಿ ಹೆಚ್.ಕೆ ಪಾಟೀಲ್, 44 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದ್ದಾರೆ.

    Live Tv

  • ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿ 350  ಕಿಮೀ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆ

    ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿ 350 ಕಿಮೀ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆ

    ಗಾಂಧಿನಗರ: ಗಂಟೆಗೆ 350 ಕಿಲೋಮೀಟರ್ ವೇಗದಲ್ಲಿ ಬುಲೆಟ್ ರೈಲು ಪ್ರಾಯೋಗಿಕ ಪರೀಕ್ಷೆಗೆ ಸೂರತ್‍ನಲ್ಲಿ ಸಿದ್ಧತೆ ನಡೆಸಲಾಗುತ್ತಿದ್ದು, ಇದು ವಿಮಾನಗಳ ಟೇಕ್ ಆಫ್ ವೇಗಕ್ಕೆ ಸಮನಾಗಿರುತ್ತದೆ ಎಂದು ವರದಿಯಾಗಿದೆ.

    2026ರಲ್ಲಿ ಗುಜರಾತ್‍ನ ಬಿಲಿಮೋರಾ ಮತ್ತು ಸೂರತ್ ನಡುವೆ ಗಂಟೆಗೆ 350 ಕಿಮೀ ವೇಗದಲ್ಲಿ ಬುಲೆಟ್ ರೈಲಿನ ಮೊದಲ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮೊದಲು ಬಿಲಿಮೋರಾ ಮತ್ತು ಸೂರತ್ ನಡುವೆ ಪ್ರಾಯೋಗಿಕ ಪರೀಕ್ಷೆ ನಂತರ ಇತರ ಭಾಗಗಳಲ್ಲಿ ಪ್ರಾಯೋಗಿಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: 10 ಕೋಟಿ ಭಾರತೀಯ ಬಳಕೆದಾರರಿಗೆ ಯುಪಿಐ ಸೇವೆ ನೀಡಲಿದೆ ವಾಟ್ಸಪ್

    ಇದು ಪ್ರಯಾಣಿಕರಿಗೆ ಗೇಮ್ ಚೇಂಜರ್ ಆಗಿರುತ್ತದೆ ಮತ್ತು ವಿಮಾನ ಪ್ರಯಾಣಕ್ಕೆ ಪೈಪೋಟಿ ನೀಡುವ ಸಾಮರ್ಥ್ಯ ಹೊಂದಿದೆ. ಬುಲೆಟ್ ರೈಲುಗಳು ಕಡಿಮೆ ಚೆಕ್ ಇನ್ ಸಮಯದಲ್ಲಿ ಹೆಚ್ಚು ಸ್ಥಳಗಳ ಸಂಪರ್ಕ ಸಾಧಿಸಲು ಪ್ಲಾನ್ ರೂಪಿಸಲಾಗಿದೆ. ಪ್ರಸ್ತುತ ಗಂಟೆಗೆ 350 ಕಿಮೀ ವೇಗದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆದರೂ ಈ ವೇಗದಲ್ಲಿ ರೈಲುಗಳು ಸಂಚರಿಸುವುದಿಲ್ಲ. ಕಾರ್ಯಾಚರಣೆಯ ವೇಗ ಗಂಟೆಗೆ 320 ಕಿಮೀ ಆಗಿರುತ್ತದೆ. ಬುಲೆಟ್ ರೈಲು ಸ್ಲ್ಯಾಬ್ ಟ್ರ್ಯಾಕ್ ಸಿಸ್ಟಮ್ ಎಂಬ ವಿಶೇಷ ಟ್ರ್ಯಾಕ್‍ಗಳಲ್ಲಿ ಚಲಿಸುತ್ತವೆ. ಜಪಾನ್ ತಂತ್ರಜ್ಞಾನದ ನೆರವಿನಿಂದ ಇದನ್ನು ರೂಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸಲಿಂಗಿಗಳ ಮದುವೆ ಮಾನ್ಯತೆ ಮನವಿ ತಿರಸ್ಕರಿಸಿದ ಹೈಕೋರ್ಟ್

    ಈಗಾಗಲೇ ಬುಲೆಟ್ ರೈಲು ಹಳಿಗಾಗಿ ಗುಜರಾತ್‍ನಲ್ಲಿ ಸ್ಥಳಗಳನ್ನು ಖರೀದಿಸಿರುವ ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ತಿಂಗಳಲ್ಲಿ ಬಿಲಿಮೋರಾ ಮತ್ತು ಸೂರತ್ ನಡುವೆ 200 ರಿಂದ 250 ಪಿಲ್ಲರ್‌ಗಳ ರಚನೆಗೆ ಪ್ಲಾನ್ ಹಾಕಿದೆ. ಈಗಾಗಲೇ 237 ಕಿಮೀ ಬುಲೆಟ್ ರೈಲು ಹಳಿ ತಯಾರಾಗಿದ್ದು, ಇನ್ನುಳಿದ 115 ಕಿಮೀ ಕಾಮಗಾರಿ ನಡೆಯುತ್ತಿದೆ. ಬುಲೆಟ್ ರೈಲು ಪ್ರಯಾಣಕ್ಕೆ ಸಿದ್ಧವಾದರೆ 2 ಗಂಟೆ 58 ನಿಮಿಷಗಳ ಅಂತರದಲ್ಲಿ ಅಹಮದಾಬಾದ್‍ನಿಂದ ಮುಂಬೈಗೆ ಸಂಚರಿಸಬಹುದಾಗಿದೆ.

  • ಮೋದಿ, ಯೋಗಿ ಜೋಡಿಯನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ: ಯುಪಿ ರಾಜ್ಯಪಾಲ

    ಮೋದಿ, ಯೋಗಿ ಜೋಡಿಯನ್ನು ಯಾರಿಂದಲೂ ಬೇರ್ಪಡಿಸಲು ಸಾಧ್ಯವಿಲ್ಲ: ಯುಪಿ ರಾಜ್ಯಪಾಲ

    ಗಾಂಧಿನಗರ: ಯಾರಿಂದಲೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿಆದಿತ್ಯನಾಥ್‌ ಅವರ ಜೋಡಿಯನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಉತ್ತರಪ್ರದೇಶದ ರಾಜ್ಯಪಾಲ ಆನಂದಬೆನ್ ಪಟೇಲ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‍ನ ಸೂರತ್‍ನಲ್ಲಿ ನೆಲೆಸಿರುವ ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಭಾರತೀಯರು ನೆಲೆಸಿದ್ದಾರೆ. ಇವರೆಲ್ಲರ ಬೆಂಬಲದಿಂದಾಗಿ ಉತ್ತರಪ್ರದೇಶದಲ್ಲಿ ಬಿಜೆಪಿಯೂ ಅಧಿಕಾರವನ್ನು ಉಳಿಸಿಕೊಂಡಿದೆ ಎಂದರು.

    ಈ ತಿಂಗಳ ಆರಂಭದಲ್ಲಿ ನಡೆದ ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 403 ಸ್ಥಾನಗಳಲ್ಲಿ 255 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಜೊತೆಗೆ ಮಿತ್ರ ಪಕ್ಷಗಳಾದ ನಿಶಾದ್ ಪಕ್ಷ ಮತ್ತು ಅಪ್ನಾ ದಳ 14 ಕ್ಷೇತ್ರಗಳಲ್ಲಿ ಗೆದ್ದಿದೆ. ಇದರಿಂದಾಗಿ ಬಿಜೆಪಿ ಪುನಃ ಸರ್ಕಾರವನ್ನು ರಚಿಸುವ ಮೂಲಕ 2ನೇ ಬಾರಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಮೂರು ದಶಕಗಳಲ್ಲಿ ಒಂದೇ ಪಕ್ಷವು ಸತತ 2 ಬಾರಿ ಗೆದ್ದಿರುವುದು ಇದೇ ಮೊದಲ ಬಾರಿಗೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಈ ಅಕ್ಟೋಬರ್‌ನಲ್ಲಿ ಬೆಂಗಳೂರು-ಮೈಸೂರು ಹೈವೇ ಪೂರ್ಣ: ಗಡ್ಕರಿ

    ಉತ್ತರಪ್ರದೇಶದಲ್ಲಿ ನಾವು ಸರ್ಕಾರ ರಚಿಸಿದ್ದೇವೆ. ಮೋದಿ, ಯೋಗಿ ಜೋಡಿಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ. ಸೂರತ್‍ನಿಂದ ಹಲವಾರು ಜನರು ಪ್ರಚಾರಕ್ಕಾಗಿ ಉತ್ತರಪ್ರದೇಶಕ್ಕೆ ಹೋಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸ್ಟಾಲಿನ್ ಸಿಎಂ ಆದ ಬಳಿಕ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದೆ: ಎಡಪಾಡಿ ಕೆ.ಪಳನಿಸ್ವಾಮಿ

  • ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

    ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

    ಗಾಂಧೀನಗರ: 11 ವರ್ಷದ ಬಾಲಕಿಯ ಮೇಲೆ ಭಾನುವಾರ ಸಂಜೆ ಅತ್ಯಾಚಾರ ಎಸಗಿ ಹತ್ಯೆಗೈದಿರುವ ಘಟನೆ ಸೂರತ್ ಜಿಲ್ಲೆಯಲ್ಲಿ ನಡೆದಿದೆ.

    ಸೂರತ್ ಜಿಲ್ಲೆಯ ಜೋಲ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ತಾಯಿ ಅನುಮಾನಗೊಂಡಿದ್ದ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹಿಜಬ್‌ ವಿವಾದ – ಶೀರೂರು ಮಠ, ಶಬರಿ ಮಲೆ, ತ್ರಿವಳಿ ತಲಾಖ್‌ ಪ್ರಕರಣ ಪ್ರಸ್ತಾಪಿಸಿ ಎಜಿ ವಾದ

    ಬಾಲಕಿಯರ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದು, ತಮ್ಮ ಮಗಳು ಕಾಣೆಯಾಗಿರುವುದನ್ನು ತಿಳಿದು ಹುಡುಕಾಟ ನಡೆಸಿದ್ದಾರೆ. ಈ ವೇಳೆ ತಮ್ಮ ಮನೆಯ ಸಮೀಪದಲ್ಲಿರುವ ಕಟ್ಟಡದ ಕೊಠಡಿಯಲ್ಲಿ ಬಾಲಕಿಯ ಶವ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಪತ್ತೆ ಆಗಿದೆ. ನಂತರ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದರು. ಆದರೆ ಬಾಲಕಿ ಚಿಕಿತ್ಸೆ ಫಲಾಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೂರತ್‍ನ ಹೊಸ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಹಿಜಬ್ ವಿವಾದದ ನಡುವೆ ಮೈಸೂರು ಪ್ಯಾಲೇಸ್‍ನಲ್ಲಿ ನಮಾಜ್

    ಇದೀಗ ಈ ಪ್ರಕರಣ ಕುರಿತಂತೆ ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೋಮವಾರ ಮಧ್ಯಾಹ್ನ ಸೂರತ್ ರೇಂಜ್ ಐಜಿ ರಾಜ್‍ಕುಮಾರ್ ಪಾಂಡಿಯನ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಪ್ರಕರಣ ಕುರಿರತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತ್ರಸ್ತೆಯ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿಕೊಡುವುದಾಗಿ ತಿಳಿಸಿದ್ದಾರೆ.

  • ಹೆಲಿಕಾಪ್ಟರ್‌ನ್ನು ವೈದ್ಯಕೀಯ ಸೇವೆಗೆ ದಾನ ಮಾಡಿದ ಪದ್ಮಶ್ರೀ ಪುರಸ್ಕೃತ

    ಹೆಲಿಕಾಪ್ಟರ್‌ನ್ನು ವೈದ್ಯಕೀಯ ಸೇವೆಗೆ ದಾನ ಮಾಡಿದ ಪದ್ಮಶ್ರೀ ಪುರಸ್ಕೃತ

    ಅಹಮದಾಬಾದ್: ಪದ್ಮಶ್ರೀ ಪುರಸ್ಕೃತರಾದ ಸಾವ್ಜಿ ಧೋಲಾಕಿಯಾ (Savji Dholakia) ಅವರಿಗೆ, ಕುಟುಂಬ ಗಿಫ್ಟ್ ಆಗಿ ನೀಡಿದ ಹೆಲಿಕಾಪ್ಟರ್‌ನ್ನು(Helicopter) ವೈದ್ಯಕೀಯ ತುರ್ತುಸ್ಥಿತಿಗಾಗಿ ದಾನ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಐವತ್ತೊಂಬತ್ತು ವರ್ಷದ ಸಾವ್ಜಿ ಧೋಲಾಕಿಯಾ ಅವರು ಹರಿಕೃಷ್ಣ ಡೈಮಂಡ್ ಕಂಪನಿಯ ಮಾಲೀಕರಾಗಿದ್ದಾರೆ. ಸೂರತ್ ನಿವಾಸಿಯಾಗಿರುವ ಸಾವ್ಜಿ ಧೋಲಾಕಿಯಾ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪಡೆದಿದ್ದಾರೆ. ಕುಟುಂಬ ಸದಸ್ಯರು ಹೆಲಿಕಾಪ್ಟರ್ ಅನ್ನು ಉಡುಗೊರೆಯಾಗಿ ನೀಡಿದ್ದರು. 50 ಕೋಟಿ ರೂ.ಬೆಲೆಯ ಹೊಚ್ಚಹೊಸ ಹೆಲಿಕಾಪ್ಟರ್‌ನ್ನು ಅವರು, ಸೂರತ್‍ನ ವೈದ್ಯಕೀಯ ಮತ್ತು ಇತರ ತುರ್ತು ಪರಿಸ್ಥಿತಿಗಳಿಗಾಗಿ ಕೊಡುಗೆಯಾಗಿ ನೀಡುವ ಮೂಲಕವಾಗಿ ಎಲ್ಲಡೆ ಸುದ್ದಿಯಾಗಿದ್ದಾರೆ.  ಇದನ್ನೂ ಓದಿ: ಚೀನಾ ಒಲಿಂಪಿಕ್ಸ್‌ಗೆ ಭಾರತ ಬಹಿಷ್ಕಾರ – ದಿಟ್ಟ ನಿರ್ಧಾರ ತೆಗೆದುಕೊಂಡ ಭಾರತೀಯ ವಿದೇಶಾಂಗ ಇಲಾಖೆ

    ಧೋಲಾಕಿಯಾ ಅವರು ಕೆಲವು ದಿನಗಳಿಂದ ಸೂರತ್‍ನ ಜನರಿಗೆ ಹೆಲಿಕಾಪ್ಟರ್ ಉಡುಗೊರೆಯಾಗಿ ನೀಡಲು ಯೋಜಿಸಿದ್ದರು. ಆದರೆ ಆಶ್ಚರ್ಯಕರ ರೀತಿಯಲ್ಲಿ ಹೆಲಿಕಾಪ್ಟರ್‌ನ್ನೇ ಉಡುಗೊರೆಯನ್ನು ಸ್ವೀಕರಿಸಿದ ನಂತರ ಅವರು ಅದನ್ನೇ ಸೂರತ್ ಜನತೆಗೆ ಕೊಡುಗೆಯಾಗಿ ನೀಡಿದ್ದಾರೆ.

    ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೂರತ್ ಗುಜರಾತ್‍ನ ಆರ್ಥಿಕ ರಾಜಧಾನಿಯಾಗಿದೆ. ಆದರೆ ತನ್ನದೇ ಆದ ಹೆಲಿಕಾಪ್ಟರ್ ಹೊಂದಿಲ್ಲ. ಹೀಗಾಗಿ, ನಾನು ಈ ಉಡುಗೊರೆಯನ್ನು ಸೂರತ್‍ನ ಜನರಿಗೆ ಮತ್ತು ಸಾಮಾಜಿಕ ಉದ್ದೇಶಕ್ಕಾಗಿ ಅರ್ಪಿಸುತ್ತಿದ್ದೇನೆ. ನನ್ನ ಕುಟುಂಬವು ಇಷ್ಟು ದೊಡ್ಡ ಆಶ್ಚರ್ಯಕರ ಉಡುಗೊರೆಯನ್ನು ನೀಡುತ್ತಿದೆ ಎಂದು ನನಗೆ ತಿಳಿದಿರಲಿಲ್ಲ. ನನ್ನ ಕುಟುಂಬದಿಂದ ಉಡುಗೊರೆಯನ್ನು ನಾನು ನಿರಾಕರಿಸಲು ಸಾಧ್ಯವಿಲ್ಲ. ಆದರೆ ನಾನು ಅದನ್ನು ಸಾಮಾಜಿಕ ಉದ್ದೇಶಕ್ಕಾಗಿ ಕೊಡುಗೆಯಾಗಿ ನೀಡಲು ನಿರ್ಧರಿಸಿದೆ. ತಮ್ಮ ಜೀವನವನ್ನು ನೀರಿನ ಸಂರಕ್ಷಣೆ ಮತ್ತು ಕೊಳಗಳನ್ನು ನಿರ್ಮಿಸಲು ಮುಡಿಪಾಗಿಟ್ಟ ಧೋಲಾಕಿಯಾ ಹೇಳಿದ್ದಾರೆ.

  • ಆತ್ಮಗಳ ಜೊತೆ ಮಾತಾಡುತ್ತೇನೆಂದು ಮನೆ ಬಿಟ್ಟು ತೆರಳಿದ್ದ ಬಾಲಕಿ ಪತ್ತೆ

    ಆತ್ಮಗಳ ಜೊತೆ ಮಾತಾಡುತ್ತೇನೆಂದು ಮನೆ ಬಿಟ್ಟು ತೆರಳಿದ್ದ ಬಾಲಕಿ ಪತ್ತೆ

    ಬೆಂಗಳೂರು: ಆತ್ಮಗಳ ಜೊತೆ ಮಾತಾಡುತ್ತೇನೆಂದು ಮನೆ ಬಿಟ್ಟು ತೆರಳಿದ್ದ ಬಾಲಕಿ ಗುಜರಾತ್‍ನ ಸೂರತ್‍ನಲ್ಲಿ ಪತ್ತೆಯಾಗಿದ್ದಾಳೆ.

    ಕಳೆದ ಅಕ್ಟೋಬರ್ 31 ರಂದು ಮನೆಬಿಟ್ಟು ತೆರಳಿದ್ದು, 78 ದಿನಗಳ ಬಳಿಕ ಸೂರತ್‍ನಲ್ಲಿ ಜನವರಿ 15 ರಂದು ಪತ್ತೆಯಾಗಿದ್ದಾಳೆ. ಬಾಲಕಿಯು ಆತ್ಮಗಳ ಜೊತೆ ಮಾತನಾಡುವದನ್ನು ಅಭ್ಯಾಸ ಮಾಡುತ್ತೇನೆಂದು ಬೆಂಗಳೂರಿನಿಂದ ಸೂರತ್ ತಲುಪಿದ್ದು, ಸೂರತ್‍ನ ಅನಾಥಾಶ್ರಮವೊಂದರಲ್ಲಿ ಪತ್ತೆಯಾಗಿದ್ದಾಳೆ. ಇದನ್ನೂ ಓದಿ: ಕೊಹ್ಲಿ ನಾಯಕತ್ವ ತ್ಯಜಿಸಲು ಇದೇ ಕಾರಣ!

    ಸದ್ಯ ಸುಬ್ರಹ್ಮಣ್ಯನಗರ ಪೊಲೀಸರು ಅಪ್ರಾಪ್ತ ಬಾಲಕಿಯನ್ನ ಪೋಷಕರಿಗೆ ಒಪ್ಪಿಸಿದ್ದು, ಮನೆಯಿಂದ ತೆರಳುವ ವೇಳೆ 2 ಜೊತೆ ಬಟ್ಟೆ 2500 ರೂ ನಗದು ಕೊಂಡೊಯ್ದಿದ್ದಳು. ಇದನ್ನೂ ಓದಿ:  ಟೆಸ್ಟ್ ನಾಯಕತ್ವಕ್ಕೆ ಗುಡ್‌ಬೈ – ಕೊಹ್ಲಿ ಬ್ರ್ಯಾಂಡ್ ಮೌಲ್ಯ ಇಳಿಕೆ?