Tag: ಸೂರ್ಯನ ಅಧ್ಯಯನ

  • ಸೂರ್ಯನ ಪೂರ್ಣ ಚಿತ್ರ ಸೆರೆಹಿಡಿದ ಆದಿತ್ಯ-L1

    ಸೂರ್ಯನ ಪೂರ್ಣ ಚಿತ್ರ ಸೆರೆಹಿಡಿದ ಆದಿತ್ಯ-L1

    ಬೆಂಗಳೂರು: ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಮಿಷನ್ ಆದಿತ್ಯ-ಎಲ್ 1 (Aditya L1) ಬಾಹ್ಯಾಕಾಶ ನೌಕೆಯು ಸೂರ್ಯನ ಪೂರ್ಣ ಚಿತ್ರಣವನ್ನು ಸೆರೆಹಿಡಿದಿದೆ.

    ಆದಿತ್ಯ ಎಲ್‌-1 ಬಾಹ್ಯಾಕಾಶ ನೌಕೆಯಲ್ಲಿರುವ ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್ (ಸೋಲಾರ್ ಅಲ್ಟ್ರಾ ವಯೊಲೆಟ್‌ ಇಮೇಜ್‌ ಟೆಲಿಸ್ಕೋಪ್‌- SUIT) ಸೂರ್ಯನ ಡಿಸ್ಕ್‌ನ ಆರಂಭಿಕ ಸಂಪೂರ್ಣ ಚಿತ್ರಗಳನ್ನು ಸೆರೆಹಿಡಿಯುವ ಶ್ಲಾಘನೀಯ ಸಾಧನೆಯನ್ನು ಮಾಡಿದ್ದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಈ ಮಾಹಿತಿಯನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

    ಸೂರ್ಯನನ್ನು ನೇರಳಾತೀತ ವರ್ಣಪಟಲದೊಳಗೆ ವೀಕ್ಷಿಸಲು ವಿನ್ಯಾಸಗೊಳಿಸಲಾದ ಮಹತ್ವದ ಸಾಧನವಾಗಿರುವ SUIT ಪೇಲೋಡ್ ಅನ್ನು ಕಳೆದ ತಿಂಗಳು ನವೆಂಬರ್ 20 ರಂದು ಸಕ್ರಿಯಗೊಳಿಸಲಾಗಿದೆ. ಇದು ಸೂರ್ಯನ ಕ್ರೋಮೋಸ್ಪಿಯರ್ ಮತ್ತು ಪರಿವರ್ತನೆಯ ಪ್ರದೇಶದ ಪರೀಕ್ಷೆಯಲ್ಲಿ ಸಹಾಯ ಮಾಡುತ್ತದೆ.

    ಸೂರ್ಯಶಿಕಾರಿಗೆ ಹೊರಟಿರುವ ಆದಿತ್ಯ-ಎಲ್1 ಮಿಷನ್ ಮೂಲಕ ಸೂರ್ಯನ ಮೊದಲ ಪೂರ್ಣ-ಡಿಸ್ಕ್ ಚಿತ್ರಗಳನ್ನು ಸೆರೆಹಿಡಿಯಲಾಗಿದೆ ಎಂದು ಇಸ್ರೋ ತಿಳಿಸಿದೆ. ಫೋಟೋಗಳು – ಸಮೀಪದ ನೇರಳಾತೀತ ತರಂಗಾಂತರಗಳಲ್ಲಿ – ಸೂರ್ಯನ ದ್ಯುತಿಗೋಳ ಮತ್ತು ವರ್ಣಗೋಳದ ಸಂಕೀರ್ಣ ವಿವರಗಳಿಗೆ ಪ್ರವರ್ತಕ ಒಳನೋಟಗಳನ್ನು ಒದಗಿಸುತ್ತವೆ ಎಂದು ಇಸ್ರೋ ಎಕ್ಸ್‌ ಖಾತೆಯಲ್ಲಿ ತಿಳಿಸಿದೆ.

    ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯಲ್ಲಿರುವ ಸೌರ ನೇರಳಾತೀತ ಇಮೇಜಿಂಗ್ ಟೆಲಿಸ್ಕೋಪ್ ಅಥವಾ SUIT ಉಪಕರಣವು 200-400 nm (ನ್ಯಾನೋಮೀಟರ್) ತರಂಗಾಂತರ ವ್ಯಾಪ್ತಿಯಲ್ಲಿ ಚಿತ್ರಗಳನ್ನು ಸೆರೆಹಿಡಿದಿದೆ. ವಿವಿಧ ವೈಜ್ಞಾನಿಕ ಶೋಧಕಗಳನ್ನು ಬಳಸಿಕೊಂಡು ಈ ತರಂಗಾಂತರ ವ್ಯಾಪ್ತಿಯಲ್ಲಿ ಸೂರ್ಯನ ದ್ಯುತಿಗೋಳ ಮತ್ತು ವರ್ಣಗೋಳದ ಚಿತ್ರಗಳನ್ನು SUIT ಸೆರೆಹಿಡಿಯುತ್ತದೆ ಎಂದು ಇಸ್ರೋ ಹೇಳಿಕೆಯಲ್ಲಿ ತಿಳಿಸಿದೆ.

    ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC-SHAR) ಆದಿತ್ಯ-L1 ಏಳು ಪೇಲೋಡ್‌ಗಳೊಂದಿಗೆ ಉಡಾವಣೆಗೊಂಡಿತ್ತು. TL1I ಭೂಮಿಯಿಂದ ಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ L1 ಪಾಯಿಂಟ್‌ ಕಡೆಗೆ ಭೂ ಕಕ್ಷೆಯಿಂದ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿತ್ತು.

  • ಗಣೇಶ ಹಬ್ಬದಂದೇ ಇಸ್ರೋ ಗುಡ್‌ನ್ಯೂಸ್ – ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1

    ಗಣೇಶ ಹಬ್ಬದಂದೇ ಇಸ್ರೋ ಗುಡ್‌ನ್ಯೂಸ್ – ಡೇಟಾ ಸಂಗ್ರಹಿಸಲು ಆರಂಭಿಸಿದ ಆದಿತ್ಯ L1

    ಬೆಂಗಳೂರು: ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ ಹಬ್ಬದಂದೇ ಗುಡ್‌ನ್ಯೂಸ್‌ ಕೊಟ್ಟಿದೆ. ಸೂರ್ಯ ಶಿಕಾರಿಗೆ ಭೂಮಿಯಿಂದ ಹೊರಟ ಆದಿತ್ಯ ಎಲ್‌-1 (Aditya-L1 Mission) ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.

    ಇದೀಗ ನಿಗದಿತ ಕಕ್ಷೆ (L1 ಪಾಯಿಂಟ್‌) ಸೇರುವುದಕ್ಕೂ ಮುನ್ನವೇ ವೈಜ್ಞಾನಿಕ ದತ್ತಾಂಶ (Scientific Data) ಕಳುಹಿಸಲು ಪ್ರಾರಂಭಿಸಿದೆ. ಈ ಕುರಿತು ಇಸ್ರೋ ತನ್ನ ಟ್ವಿಟ್ಟರ್‌ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: Aditya L1: ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಆದಿತ್ಯ ನೌಕೆ – ಸೂರ್ಯನತ್ತ ಮತ್ತೊಂದು ಹೆಜ್ಜೆ

    ಸೂರ್ಯನ ಬಾಹ್ಯ ವಾತಾವರಣ ಅಧ್ಯಯನಕ್ಕೆ ಕಳುಹಿಸಿರುವ ಆದಿತ್ಯ-ಎಲ್‌1 ವೈಜ್ಞಾನಿಕ ದತ್ತಾಂಶಗಳನ್ನ ಸಂಗ್ರಹಿಸಲು ಪ್ರಾರಂಭಿಸಿದೆ. STEPS ಉಪಕರಣದ ಸಂವೇದಕಗಳು (ಸೆನ್ಸಾರ್‌ಗಳು) ಭೂಮಿಯಿಂದ 50,000 ಕಿಮೀಗಿಂತ ಹೆಚ್ಚಿನ ದೂರದಲ್ಲಿ ಸೂಪರ್-ಥರ್ಮಲ್ ಮತ್ತು ಶಕ್ತಿಯುತ ಅಯಾನುಗಳು (Energetic Ions) ಮತ್ತು ಎಲೆಕ್ಟ್ರಾನ್‌ಗಳನ್ನು ಅಳೆಯಲು ಪ್ರಾರಂಭಿಸಿದೆ. ಈ ಡೇಟಾವು ವಿಜ್ಞಾನಿಗಳಿಗೆ ಭೂಮಿಯ ಸುತ್ತಲಿನ ಕಣಗಳ ನಡವಳಿಕೆಯನ್ನ ವಿಶ್ಲೇಷಿಸಲು ಸಹಾಯ ಮಾಡುತ್ತದೆ. ಜೊತೆಗೆ ಅಂಕಿ ಅಂಶವು ಒಂದು ಘಟಕದಿಂದ ಸಂಗ್ರಹಿಸಲಾದ ಶಕ್ತಿಯುತ ಕಣ ಪರಿಸರದಲ್ಲಿ ವ್ಯತ್ಯಾಸಗಳನ್ನೂ ತೋರಿಸುತ್ತದೆ ಎಂದು ತಿಳಿಸಿದೆ.

    ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್‌1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್‌ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು. ಇದನ್ನೂ ಓದಿ: Aditya-L1: ಆದಿತ್ಯ ನೌಕೆ 4ನೇ ಕಕ್ಷೆ ಬದಲಾವಣೆ ಪ್ರಕ್ರಿಯೆ ಯಶಸ್ವಿ – ಮುಂದಿನ ಹಂತ ‘ಭೂಮಿಯಿಂದ ಬೀಳ್ಕೊಡುಗೆ’

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]