Tag: ಸೆಂಗೊಲ್

  • ಸೆಂಗೋಲ್ ಸ್ಥಾಪನೆ: ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ರಜನಿ

    ಸೆಂಗೋಲ್ ಸ್ಥಾಪನೆ: ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ರಜನಿ

    ಇಂದು ನೂತನ ಸಂಸತ್ ಭವನ ಲೋಕಾರ್ಪಣೆ ಆಗುತ್ತಿದ್ದು, ಈ ಭವನದಲ್ಲಿ ಸೆಂಗೋಲ್ (Sengol) ಅನ್ನು ಸ್ಥಾಪಿಸಲಾಗುತ್ತಿದೆ. ಅದಕ್ಕಾಗಿ ಬೆಳಗ್ಗೆಯಿಂದಲೇ ಹಲವು ಕಾರ್ಯಕ್ರಮಗಳ ನಡೆದಿವೆ. ಪೂಜಾ ಪುನಸ್ಕಾರಗಳನ್ನೂ ಮಾಡಲಾಗುತ್ತಿದೆ. ಈಗಾಗಲೇ ಸೆಂಗೋಲ್ ಅನ್ನು ಪ್ರಧಾನಿ ಮೋದಿ ಸ್ಥಾಪಿಸಿದ್ದಾರೆ. ಈ ವಿಚಾರವಾಗಿ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರು ಮೋದಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

    ಸೆಂಗೋಲ್ ಎನ್ನುವುದು ತಮಿಳು (Tamil) ಶಕ್ತಿಯ ಸಂಪ್ರದಾಯಿಕ ಚಿಹ್ನೆ. ಇಂತಹ ರಾಜದಂಡ ಭಾರತದ ಹೊಸ ಸಂಸತ್ತಿನ ಕಟ್ಟಡದಲ್ಲಿ ಇರಲಿದೆ ಎನ್ನುವುದೇ ಹೆಮ್ಮೆ. ತಮಿಳರ ಹೆಮ್ಮೆ ಪಡುವಂತೆ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪ್ರಾಮಾಣಿಕ ಧನ್ಯವಾದಗಳನ್ನು ತಿಳಿಸಿವೆ ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.

    ಏನಿದು ಸೆಂಗೋಲ್ ?: ಭಾರತೀಯರಿಗೆ ಅಧಿಕಾರದ ಹಸ್ತಾಂತರವನ್ನು ಗುರುತಿಸಲು ಈ ರಾಜದಂಡವನ್ನು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಬ್ರಿಟಿಷ್ ಆಡಳಿತ ಹಸ್ತಾಂತರಿಸಿತ್ತು. ಈ ರಾಜದಂಡವನ್ನು ‘ಸೆಂಗೋಲ್’ ಎಂದು ಕರೆಯಲಾಗುತ್ತದೆ. ಇದು ತಮಿಳು ಪದ ‘ಸೆಮ್ಮೈʼನಿಂದ ಬಂದಿದೆ. ಸೆಂಗೋಲ್‌ನ ಇತಿಹಾಸ ಮತ್ತು ಮಹತ್ವ ಅನೇಕರಿಗೆ ತಿಳಿದಿಲ್ಲ. ಹೊಸ ಸಂಸತ್ತಿನಲ್ಲಿ ಇದನ್ನು ಸ್ಥಾಪಿಸುವುದರಿಂದ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ನಮ್ಮ ಆಧುನಿಕತೆಯೊಂದಿಗೆ ಜೋಡಿಸುವ ಪ್ರಯತ್ನವಾಗುತ್ತದೆ. ಹೊಸ ಸಂಸತ್ತಿನಲ್ಲಿ ಸೆಂಗೋಲ್ ಅಳವಡಿಸುವ ಯೋಜನೆಯು ಪ್ರಧಾನಿ ಮೋದಿಯವರ ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತದೆ. ಸೆಂಗೊಲ್ ಈಗ ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿತ್ತು. ಅಲ್ಲಿಂದ ಸಂಸತ್ತಿಗೆ ತಂದು ಪ್ರಧಾನಿ ಮೋದಿಯವರು ಸ್ಪೀಕರ್ ಸ್ಥಾನದ ಬಳಿ ಅದನ್ನು ಸ್ಥಾಪಿಸಿದ್ದಾರೆ.

    ಬ್ರಿಟಿಷ್ ಇಂಡಿಯಾದ ಕೊನೆಯ ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಅವರು ನೆಹರೂ ಅವರ ಜೊತೆ ಯಾವ ರೀತಿ ಹಸ್ತಾಂತರ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸುತ್ತಿದ್ದರು. ಈ ಸಂದರ್ಭದಲ್ಲಿ ಚೋಳರ ಇತಿಹಾಸವನ್ನು ತಿಳಿದಿದ್ದ ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಚಾರಿ ಸೆಂಗೊಲ್ ನೀಡುವ ಮೂಲಕ ಹಸ್ತಾಂತರಿಸಬಹುದು ಎಂದು ಸಲಹೆ ನೀಡಿದ್ದರು. ಈ ಸಲಹೆ ನೆಹರೂ ಅವರಿಗೆ ಇಷ್ಟವಾಯಿತು. ಭಾರತದ ಸ್ವಾತಂತ್ರ‍್ಯವನ್ನು ಗುರುತಿಸುವ ರಾಜದಂಡವನ್ನು ತಯಾರಿಸುವ ಹೊಣೆಯನ್ನು ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಚಾರಿ ವಹಿಸಿದ್ದರು. ಇವರು ತಮಿಳುನಾಡಿನ ಪ್ರಮುಖ ಮಠವಾದ ತಿರುವಾಡುತುರೈ ಅಧೀನಂ ಮಠವನ್ನು ಸಂಪರ್ಕಿಸಿದರು. ಆ ಮಠದ ಶ್ರೀಗಳು ಇದರ ಜವಾಬ್ದಾರಿಯನ್ನು ತೆಗೆದುಕೊಂಡರು. ಮದ್ರಾಸಿನ ಆಭರಣ ವ್ಯಾಪಾರಿಯಾಗಿದ್ದ ವುಮ್ಮಿಡಿ ಬಂಗಾರು ಚೆಟ್ಟಿ ಅವರು ಸೆಂಗಲ್‌ನ್ನು ತಯಾರಿಸಿದ್ದು, ಇದು ಐದು ಅಡಿ ಉದ್ದ ಮತ್ತು ನ್ಯಾಯವನ್ನು ಸಂಕೇತಿಸುವ ‘ನಂದಿ’ಯನ್ನು ಹೊಂದಿದೆ.

    ವರದಿಗಳ ಪ್ರಕಾರ, ಮಠದ ಹಿರಿಯ ಅರ್ಚಕರು ಮೊದಲು ರಾಜದಂಡವನ್ನು ಮೌಂಟ್‌ಬ್ಯಾಟನ್‌ಗೆ ನೀಡಿದ್ದರು. ನಂತರ ರಾಜದಂಡವನ್ನು ಪಡೆದ ಗಂಗಾಜಲವನ್ನು ಸಿಂಪಡಿಸಿದರು. 1947ರ ಆಗಸ್ಟ್ 14 ರಂದು ಪಂಡಿತ್ ಜವಾಹರಲಾಲ್ ನೆಹರು ಅವರು ಹಲವಾರು ನಾಯಕರು ಮತ್ತು ಉನ್ನತ ಗಣ್ಯರ ಸಮ್ಮುಖದಲ್ಲಿ ಸೆಂಗೊಲ್ ಅನ್ನು ಸ್ವೀಕರಿಸಿದರು. ಇದು ಬ್ರಿಟಿಷರಿಂದ ಸ್ವತಂತ್ರ ಭಾರತದ ಜನರಿಗೆ ಅಧಿಕಾರದ ವರ್ಗಾವಣೆಯನ್ನು ಸಂಕೇತಿಸುತ್ತದೆ. ಭಾರತ ಸ್ವಾತಂತ್ರ‍್ಯ ಗಳಿಸಿದ ಮಧ್ಯರಾತ್ರಿಯ 15 ನಿಮಿಷಗಳ ಮೊದಲು ಈ ಸ್ಮರಣೀಯ ಘಟನೆಗಳು ನಡೆದಿತ್ತು. ಪ್ರಧಾನಿ ನೆಹರೂ ರಾಜದಂಡವನ್ನು ಸ್ವೀಕರಿಸುತ್ತಿದ್ದಂತೆ ವಿಶೇಷ ಗೀತೆಯನ್ನು ಮೊಳಗಿಸಲಾಯಿತು.

    ತಮಿಳು ಸಂಸ್ಕೃತಿಯಲ್ಲಿ ಚೋಳ ಸಾಮ್ರಾಜ್ಯದ ಕಾಲದಿಂದಲೂ ಸೆಂಗೋಲ್ ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ನೂತನ ಸಂಸತ್ ಭವನದಲ್ಲಿರುವ ಲೋಕಸಭಾ ಸ್ಪೀಕರ್ ಪೀಠದ ಬಳಿ ರಾಜದಂಡ ಇಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

  • ಬಾಗಲಕೋಟೆಯಲ್ಲಿದೆ ಸೆಂಗೊಲ್ ರಾಜದಂಡ ಹೋಲುವ ಕಲಾಕೃತಿ – ಏನಿದರ ವಿಶೇಷತೆ?

    ಬಾಗಲಕೋಟೆಯಲ್ಲಿದೆ ಸೆಂಗೊಲ್ ರಾಜದಂಡ ಹೋಲುವ ಕಲಾಕೃತಿ – ಏನಿದರ ವಿಶೇಷತೆ?

    ಬಾಗಲಕೋಟೆ: ನೂತನ ಸಂಸತ್ ಭವನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಂಸತ್ ಭವನದ ಆಕರ್ಷಣಾ ಕೆಂದ್ರಬಿಂದುವಾಗಿರುವ ಸೆಂಗೊಲ್ (Sengol) ಪ್ರತಿಷ್ಠಾಪನೆ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ. ಇದರ ಮಧ್ಯೆ ಸೆಂಗೊಲ್ ರಾಜದಂಡದ ನಂಟು ಬಾಗಲಕೋಟೆ (Bagalkote) ಜಿಲ್ಲೆಗೂ ವ್ಯಾಪಿಸಿದೆ. ಐತಿಹಾಸಿಕ ತಾಣವಾದ ಬಾಗಲಕೋಟೆಯಲ್ಲಿ ಸೆಂಗೊಲ್ ಪ್ರತಿರೂಪ ಕಲಾಕೃತಿಯಲ್ಲಿ ಕಂಡು ಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.

    ಬಾದಾಮಿ (Badami) ತಾಲೂಕಿನ ಪಟ್ಟದಕಲ್ಲು (Pattadakal) ಗ್ರಾಮದ ವಿರೂಪಾಕ್ಷ ದೇವಾಲಯದ (Virupaksha Temple) ಬಲ ಗೋಡೆಯ ಮೇಲೆ ಸೆಂಗೋಲ್ ಪ್ರತಿರೂಪದ ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ. ದೇವಾಲಯದ ಗೋಡೆಯ ಮೇಲೆ ಕಲಾವಿದನಿಂದ ಕೆತ್ತಲ್ಪಟ್ಟ ಕಲಾಕೃತಿ ಸೆಂಗೊಲ್‌ಗೆ ಸಾಮ್ಯತೆ ಹೊಂದಿದೆ. ಕಲಾಕೃತಿಯಲ್ಲಿ ನಾಟ್ಯರೂಪದ ಚತುರ್ಭುಜದ ಶಿವನ ಎಡಗೈನಲ್ಲಿ ಸೆಂಗೊಲ್ ಕಾಣಿಸುತ್ತಿದೆ. ಸೆಂಗೊಲ್ ಮೇಲೆ ನಂದಿಯ ಕೆತ್ತನೆಯಾಗಿದೆ. ಅಜ್ಞಾನದ ಸಂಕೇತವಾಗಿರುವ ಮೂರ್ತಿಯನ್ನು ನಾಶಪಡಿಸಿ, ದುಷ್ಟಶಕ್ತಿಯನ್ನು ಕಾಲಿನಿಂದ ನಿರ್ನಾಮ ಮಾಡುವ ರೂಪದಲ್ಲಿ ಶಿವನ ಮೂರ್ತಿಯ ಕಲಾಕೃತಿ ಕೆತ್ತನೆಯಾಗಿದೆ. ಇದನ್ನೂ ಓದಿ: ಹೊಸ ಸಂಸತ್‌ನಲ್ಲಿ `ಸೆಂಗೋಲ್’ ಸಮರ – ಅಧಿಕಾರ ಹಸ್ತಾಂತರದ ರಾಜದಂಡಕ್ಕೆ ಸಾಕ್ಷ್ಯವೇ ಇಲ್ಲ ಅಂತಿದೆ ಕಾಂಗ್ರೆಸ್

    ಚಾಲುಕ್ಯರ ಲೋಕಮಹಾದೇವಿ ಕಟ್ಟಿಸಿದ ದೇವಾಲಯದಲ್ಲಿ ಈ ಕಲಾಕೃತಿ ಕಂಡು ಬಂದಿದ್ದು, ಈ ಒಂದು ರಾಜಮುದ್ರೆ ಸೆಂಗೊಲ್ 7ನೇ ಶತಮಾನದಲ್ಲಿ ಚಾಲನೆಯಲ್ಲಿತ್ತು ಎನ್ನುವುದಕ್ಕೆ ಸಾಕ್ಷಿಯಾಗಿದೆ. ಚಾಲುಕ್ಯ ದೊರೆ ಎರಡನೇ ವಿಕ್ರಮಾದಿತ್ಯ ಕಂಚಿ ಪಲ್ಲವರ ಮೇಲೆ ಯುದ್ಧಸಾರಿ ಜಯ ಸಾಧಿಸಿದ ನೆನಪಿಗಾಗಿ ಕಟ್ಟಿಸಲ್ಪಟ್ಟಿರುವ ವಿರೂಪಾಕ್ಷ ದೇವಾಲಯದ ಗೋಡೆಯ ಮೇಲೆ ಕಂಡುಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?

  • ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?

    ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?

    ನವದೆಹಲಿ: ಮೇ 28ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ (Narendra Modi) ಉದ್ಘಾಟನೆಗೊಳ್ಳಲಿರುವ ಹೊಸ ಸಂಸತ್ತಿನಲ್ಲಿ (Parliment) ಚಿನ್ನದ ರಾಜದಂಡವನ್ನು ಇಡಲಾಗುತ್ತದೆ.

    ಗೃಹ ಸಚಿವ ಅಮಿತ್ ಶಾ (Amit Shah) ಸುದ್ದಿಗೋಷ್ಠಿ ನಡೆಸಿ ಹೊಸ ಸಂಸತ್ತಿನಲ್ಲಿ ಸ್ಪೀಕರ್ ಸ್ಥಾನದ ಬಳಿ ನರೇಂದ್ರ ಮೋದಿಯವರು ಐತಿಹಾಸಿಕ ಚಿನ್ನದ ರಾಜದಂಡ ‘ಸೆಂಗೊಲ್’ (Sengol) ಇರಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯರಿಗೆ ಅಧಿಕಾರದ ಹಸ್ತಾಂತರವನ್ನು ಗುರುತಿಸಲು ಈ ರಾಜದಂಡವನ್ನು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಬ್ರಿಟಿಷ್ ಆಡಳಿತ ಹಸ್ತಾಂತರಿಸಿತ್ತು. ಈ ರಾಜದಂಡವನ್ನು ‘ಸೆಂಗೊಲ್’ ಎಂದು ಕರೆಯಲಾಗುತ್ತದೆ. ಇದು ತಮಿಳು ಪದ ‘ಸೆಮ್ಮೈʼನಿಂದ ಬಂದಿದೆ ಎಂದರು.

    ಸೆಂಗೊಲ್‌ನ ಇತಿಹಾಸ ಮತ್ತು ಮಹತ್ವ ಅನೇಕರಿಗೆ ತಿಳಿದಿಲ್ಲ. ಹೊಸ ಸಂಸತ್ತಿನಲ್ಲಿ ಇದನ್ನು ಸ್ಥಾಪಿಸುವುದರಿಂದ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ನಮ್ಮ ಆಧುನಿಕತೆಯೊಂದಿಗೆ ಜೋಡಿಸುವ ಪ್ರಯತ್ನವಾಗುತ್ತದೆ. ಹೊಸ ಸಂಸತ್ತಿನಲ್ಲಿ ಸೆಂಗೋಲ್ ಅಳವಡಿಸುವ ಯೋಜನೆಯು ಪ್ರಧಾನಿ ಮೋದಿಯವರ ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತದೆ. ಸೆಂಗೊಲ್ ಈಗ ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿದೆ. ಅಲ್ಲಿಂದ ಸಂಸತ್ತಿಗೆ ತಂದು ಪ್ರಧಾನಿ ಮೋದಿಯವರು ಸ್ಪೀಕರ್ ಸ್ಥಾನದ ಬಳಿ ಅದನ್ನು ಸ್ಥಾಪಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಲ್ಲರೆ ವ್ಯಾಪಾರಿಗಳು ಗ್ರಾಹಕರ ಮೊಬೈಲ್ ನಂಬರ್ ಕೇಳುವಂತಿಲ್ಲ – ಕೇಂದ್ರ ಸರ್ಕಾರ

    ಸೆಂಗೊಲ್ ಅನ್ನು ರಾಜಕೀಯಕ್ಕೆ ಜೋಡಿಸಬಾರದು. ಆಡಳಿತವು ಕಾನೂನಿನ ನಿಯಮದಿಂದ ನಡೆಯಬೇಕೆಂದು ನಾವು ಬಯಸುತ್ತೇವೆ. ಇದು ಯಾವಾಗಲೂ ಅದನ್ನು ನಮಗೆ ನೆನಪಿಸುತ್ತದೆ. ಅಲ್ಲದೇ ಸಂಸತ್ತಿನಲ್ಲಿ ರಾಜದಂಡದ ಸ್ಥಾಪನೆಯು ಮರೆತುಹೋದ ಇತಿಹಾಸವನ್ನು ನಮಗೆ ನೆನಪಿಸುವಂತೆ ಮಾಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ರಾತ್ರೋರಾತ್ರಿ ಟ್ರಕ್‌ನಲ್ಲಿ ಪ್ರಯಾಣ – ಚಾಲಕನ ಸಮಸ್ಯೆ ಆಲಿಸಿದ ರಾಗಾ

    ಸೆಂಗೊಲ್ ಮಹತ್ವವೇನು?
    ಬ್ರಿಟಿಷ್ ಇಂಡಿಯಾದ ಕೊನೆಯ ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಅವರು ನೆಹರೂ ಅವರ ಜೊತೆ ಯಾವ ರೀತಿ ಹಸ್ತಾಂತರ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸುತ್ತಿದ್ದರು. ಈ ಸಂದರ್ಭದಲ್ಲಿ ಚೋಳರ ಇತಿಹಾಸವನ್ನು ತಿಳಿದಿದ್ದ ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಚಾರಿ ಸೆಂಗೊಲ್ ನೀಡುವ ಮೂಲಕ ಹಸ್ತಾಂತರಿಸಬಹುದು ಎಂದು ಸಲಹೆ ನೀಡಿದ್ದರು. ಈ ಸಲಹೆ ನೆಹರೂ ಅವರಿಗೆ ಇಷ್ಟವಾಯಿತು. ಇದನ್ನೂ ಓದಿ: ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ – RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

    ಭಾರತದ ಸ್ವಾತಂತ್ರ‍್ಯವನ್ನು ಗುರುತಿಸುವ ರಾಜದಂಡವನ್ನು ತಯಾರಿಸುವ ಹೊಣೆಯನ್ನು ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಚಾರಿ ವಹಿಸಿದ್ದರು. ಇವರು ತಮಿಳುನಾಡಿನ ಪ್ರಮುಖ ಮಠವಾದ ತಿರುವಾಡುತುರೈ ಅಧೀನಂ ಮಠವನ್ನು ಸಂಪರ್ಕಿಸಿದರು. ಆ ಮಠದ ಶ್ರೀಗಳು ಇದರ ಜವಾಬ್ದಾರಿಯನ್ನು ತೆಗೆದುಕೊಂಡರು. ಮದ್ರಾಸಿನ ಆಭರಣ ವ್ಯಾಪಾರಿಯಾಗಿದ್ದ ವುಮ್ಮಿಡಿ ಬಂಗಾರು ಚೆಟ್ಟಿ ಅವರು ಸೆಂಗೋಲನ್ನು ತಯಾರಿಸಿದ್ದು, ಇದು ಐದು ಅಡಿ ಉದ್ದ ಮತ್ತು ನ್ಯಾಯವನ್ನು ಸಂಕೇತಿಸುವ ‘ನಂದಿ’ಯನ್ನು ಹೊಂದಿದೆ. ಇದನ್ನೂ ಓದಿ: ಜನನ, ಮರಣ ಮಾಹಿತಿ ಮತದಾರರ ಪಟ್ಟಿಗೆ ಜೋಡಣೆ – ಶೀಘ್ರವೇ ಮಸೂದೆ ಮಂಡನೆ

    ವರದಿಗಳ ಪ್ರಕಾರ, ಮಠದ ಹಿರಿಯ ಅರ್ಚಕರು ಮೊದಲು ರಾಜದಂಡವನ್ನು ಮೌಂಟ್‌ಬ್ಯಾಟನ್‌ಗೆ ನೀಡಿದ್ದರು. ನಂತರ ರಾಜದಂಡವನ್ನು ಪಡೆದ ಗಂಗಾಜಲವನ್ನು ಸಿಂಪಡಿಸಿದರು. 1947ರ ಆಗಸ್ಟ್ 14 ರಂದು ಪಂಡಿತ್ ಜವಾಹರಲಾಲ್ ನೆಹರು ಅವರು ಹಲವಾರು ನಾಯಕರು ಮತ್ತು ಉನ್ನತ ಗಣ್ಯರ ಸಮ್ಮುಖದಲ್ಲಿ ಸೆಂಗೊಲ್ ಅನ್ನು ಸ್ವೀಕರಿಸಿದರು. ಇದು ಬ್ರಿಟಿಷರಿಂದ ಸ್ವತಂತ್ರ ಭಾರತದ ಜನರಿಗೆ ಅಧಿಕಾರದ ವರ್ಗಾವಣೆಯನ್ನು ಸಂಕೇತಿಸುತ್ತದೆ. ಭಾರತ ಸ್ವಾತಂತ್ರ‍್ಯ ಗಳಿಸಿದ ಮಧ್ಯರಾತ್ರಿಯ 15 ನಿಮಿಷಗಳ ಮೊದಲು ಈ ಸ್ಮರಣೀಯ ಘಟನೆಗಳು ನಡೆದಿತ್ತು. ಪ್ರಧಾನಿ ನೆಹರೂ ರಾಜದಂಡವನ್ನು ಸ್ವೀಕರಿಸುತ್ತಿದ್ದಂತೆ ವಿಶೇಷ ಗೀತೆಯನ್ನು ಮೊಳಗಿಸಲಾಯಿತು. ಇದನ್ನೂ ಓದಿ: ಪಾಕಿಸ್ತಾನದಲ್ಲೂ ಜನ ಮೋದಿಯನ್ನು ಇಷ್ಟಪಡುತ್ತಾರೆ: ಅನೂಪ್ ಜಲೋಟಾ

    ತಮಿಳು ಸಂಸ್ಕೃತಿಯಲ್ಲಿ ಚೋಳ ಸಾಮ್ರಾಜ್ಯದ ಕಾಲದಿಂದಲೂ ಸೆಂಗೊಲ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ನೂತನ ಸಂಸತ್ ಭವನದಲ್ಲಿರುವ ಲೋಕಸಭಾ ಸ್ಪೀಕರ್ ಪೀಠದ ಬಳಿ ರಾಜದಂಡ ಇಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೆಮ್ಮಿನ ಸಿರಪ್ ರಫ್ತಿಗೂ ಮುನ್ನ ಪರೀಕ್ಷೆ ಕಡ್ಡಾಯಗೊಳಿಸಿದ ಕೇಂದ್ರ