Tag: ಸೆಂಥಿಲ್ ಕುಮಾರ್

  • RRR ಸಿನಿಮಾಟೋಗ್ರಾಫರ್ ಸೆಂಥಿಲ್ ಕುಮಾರ್ ರ ಪತ್ನಿ ನಿಧನ

    RRR ಸಿನಿಮಾಟೋಗ್ರಾಫರ್ ಸೆಂಥಿಲ್ ಕುಮಾರ್ ರ ಪತ್ನಿ ನಿಧನ

    ಭಾರತಕ್ಕೆ ಆಸ್ಕರ್ ತಂದು ಕೊಟ್ಟ ಹಾಗೂ ವಿಶ್ವ ಮಟ್ಟದಲ್ಲಿ ಸಖತ್ ಸುದ್ದಿ ಮಾಡಿದ್ದ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ (RRR) ಸಿನಿಮಾದ ಸಿನಿಮಾಟೋಗ್ರಾಫರ್ ಸೆಂಥಿಲ್ ಕುಮಾರ್ (Senthil Kumar) ಅವರ ಪತ್ನಿ ನಿಧನರಾಗಿದ್ದಾರೆ. ಯೋಗ ಕೋಚ್ ಕೂಡ ಆಗಿದ್ದ ಅವರ ಪತ್ನಿ ರೂಹಿ (Ruhi) ಅನಾರೋಗ್ಯದಿಂದಾಗಿ ಇಹಲೋಕ ತ್ಯಜಿಸಿದ್ದಾರೆ.

    ಅನಾರೋಗ್ಯದ ಕಾರಣದಿಂದಾಗಿ ರೂಹಿ ಅವರನ್ನು ಸಿಕಂದರಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರೂಹಿ ನಿಧನರಾಗಿದ್ದಾರೆ (Passed away) ಎಂದು ಸ್ಥಳಿಯ ಮಾಧ್ಯಮಗಳು ವರದಿ ಮಾಡಿವೆ. 2009ರಲ್ಲಿ ಸೆಂಥಿಲ್ ಮತ್ತು ರೂಹಿ ಹೊಸ ಜೀವನಕ್ಕೆ ಕಾಲಿಟ್ಟದ್ದರು. ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ.

     

    ಕೋವಿಡ್ ಗೆ ತುತ್ತಾದ ನಂತರ ರೂಹಿ ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ನಿರಂತರವಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೂ, ಅವರ ಆರೋಗ್ಯ ಸುಧಾರಿಸಲಿಲ್ಲ ಎಂದು ಹೇಳಲಾಗುತ್ತಿದೆ. ಕೊನೆಗೂ ಅಂಗಾಂಗ ವೈಫಲ್ಯದಿಂದಾಗಿ ರೂಹಿ ಸಾವು ಕಂಡಿದ್ದಾರೆ.

  • ಲೋಕಸಭೆ ಕಲಾಪದಲ್ಲಿ ಹಿಜಬ್ ಚರ್ಚೆ – ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಆಗ್ರಹ

    ಲೋಕಸಭೆ ಕಲಾಪದಲ್ಲಿ ಹಿಜಬ್ ಚರ್ಚೆ – ಕೇಂದ್ರ ಸರ್ಕಾರ ಮಧ್ಯಪ್ರವೇಶಕ್ಕೆ ಆಗ್ರಹ

    ನವದೆಹಲಿ: ಕರ್ನಾಟಕದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಹಿಜಾಬ್ ಬಗ್ಗೆ ಲೋಕಸಭೆಯಲ್ಲೂ ಪ್ರಸ್ತಾಪಿಸಲಾಗಿದೆ. ಇಂದು ನಡೆದ ಲೋಕಸಭೆ ಕಲಾಪದ ವೇಳೆ ತಮಿಳುನಾಡಿನ ಡಿಎಂಕೆ ಸಂಸದ ಸೆಂಥಿಲ್ ಕುಮಾರ್ ಹಿಜಬ್ ವಿಷಯ ಪ್ರಸ್ತಾಪಿಸಿದ್ದಾರೆ.

    ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡುತ್ತಿಲ್ಲ, ತರಗತಿಗಳಿಗೆ ಪ್ರವೇಶ ಕೂಡ ನೀಡುತ್ತಿಲ್ಲ ಇದು ಸರಿಯಾದ ಕ್ರಮವಲ್ಲ, ಹಿಜಾಬ್ ಬಗ್ಗೆ ಹೊಸ ನಿಯಮ ಮಾಡಬೇಕಾಗಿದೆ ಇದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟರು.  ಇದನ್ನೂ ಓದಿ: ಹಿಜಬ್ ವಿವಾದ- ಹೈಕೋರ್ಟ್ ತೀರ್ಪಿನ ನಂತರ ಕ್ರಮ: ಬಿಸಿ ನಾಗೇಶ್

    ಕರ್ನಾಟಕದಲ್ಲಿ ಎದ್ದಿರುವ ಹಿಜಬ್ ವಿವಾದದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಾಲೇಜುಗಳಲ್ಲಿ ಮುಂದಿನ ವರ್ಷದಿಂದ ಏಕರೂಪ ಸಮವಸ್ತ್ರ ನಿಯಮ ಜಾರಿ

    ಈ ನಡುವೆ ಇತ್ತ ಹಿಜಬ್ ವಿವಾದ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಂದು ಕೂಡ ಉಡುಪಿಯಲ್ಲಿ ವಿದ್ಯಾರ್ಥಿನಿಯರು ಸರ್ಕಾರಿ ಕಾಲೇಜಿನ ಹೊರಭಾಗ ನಿಂತು ಪ್ರತಿಭಟನೆ ನಡೆಸಿದ್ದಾರೆ. ಕರಾವಳಿ ಹೊರತು ಪಡಿಸಿ ಇದೀಗ ಇತರ ಜಿಲ್ಲೆಗಳಿಗೂ ಹಿಜಬ್ ವಿವಾದ ವ್ಯಾಪಿಸಿದೆ. ಇಂದು ಮೈಸೂರಿನಲ್ಲಿ ಹಿಜಬ್ ಧರಿಸಲು ಅವಕಾಶ ಮಾಡಿಕೊಡುವಂತೆ ಪ್ರತಿಭಟನೆ ನಡೆದಿದೆ. ಇದನ್ನೂ ಓದಿ: ಮುಸ್ಲಿಂ ಮುಖಂಡರ ಅಭಿಪ್ರಾಯ ಪಡೆದು ಸಮವಸ್ತ್ರ ಕಡ್ಡಾಯ ಮಾಡಿ: ಉಮರ್ ಷರೀಫ್

    ಈ ಎಲ್ಲಾ ಘಟನೆಗಳ ನಡುವೆ ಹಿಜಬ್ ವಿವಾದದ ಪ್ರಕರಣವು ಹೈಕೋರ್ಟ್‌ನಲ್ಲಿದೆ. ತೀರ್ಪು ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಫೆ.8 ರಂದು ಹೈಕೋರ್ಟ್‌ನಿಂದ ತೀರ್ಪು ಹೊರಬೀಳುವ ಸಾಧ್ಯತೆ ಇದೆ.