Tag: ಸೆಂಥಿಲ್‌ ಬಾಲಾಜಿ

  • ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಜಾಮೀನು

    ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಜಾಮೀನು

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯಿಂದ ಬಂಧನಕ್ಕೊಳಪಟ್ಟಿದ್ದ ತಮಿಳುನಾಡು ಮಾಜಿ ಸಚಿವ ವಿ ಸೆಂಥಿಲ್ ಬಾಲಾಜಿಗೆ (V Senthil Balaji) ಸುಪ್ರೀಂ ಕೋರ್ಟ್ (Supreme Court) ಷರತ್ತುಬದ್ಧ ಜಾಮೀನು (Bail) ಮಂಜೂರು ಮಾಡಿದೆ. ನ್ಯಾ.ಎಎಸ್ ಓಕಾ ಮತ್ತು ಎಜಿ ಮಸಿಹ್ ಅವರನ್ನೊಳಗೊಂಡ ಪೀಠವು ಜಾಮೀನು ಮಂಜೂರು ಮಾಡಿದೆ.

    ಫೆಬ್ರವರಿ 28 ರಂದು ಮದ್ರಾಸ್ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ನಂತರ ಸೆಂಥಿಲ್ ಬಾಲಾಜಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇ.ಡಿ ಪರವಾಗಿ ಮತ್ತು ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಸಿದ್ಧಾರ್ಥ್ ಲೂತ್ರಾ ಸೆಂಥಿಲ್ ಬಾಲಾಜೀ ಪರ ವಾದ ಮಂಡಿಸಿದ್ದರು. ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಆಗಸ್ಟ್ 12ರಂದು ಕಾಯ್ದಿರಿಸಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು: ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ

    ಬಾಲಾಜಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್, ಈ ರೀತಿಯ ಪ್ರಕರಣದಲ್ಲಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಅದು ತಪ್ಪು ಸಂಕೇತವನ್ನು ನೀಡುತ್ತದೆ. ಸಾರ್ವಜನಿಕ ಹಿತಾಸಕ್ತಿ ವಿರುದ್ಧವಾಗಿರುತ್ತದೆ. ಅರ್ಜಿದಾರರು ಎಂಟು ತಿಂಗಳಿಗೂ ಹೆಚ್ಚು ಕಾಲ ಕಸ್ಟಡಿಯಲ್ಲಿರುವುದರಿಂದ ಕಾಲಮಿತಿಯೊಳಗೆ ಪ್ರಕರಣವನ್ನು ವಿಲೇವಾರಿ ಮಾಡುವಂತೆ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡುವುದು ಸೂಕ್ತ ಎಂದು ಹೇಳಿತ್ತು. ಇದನ್ನೂ ಓದಿ: ‘ಗೋ ಬ್ಯಾಕ್ ಹಿಂದೂ’: ಅಮೆರಿಕದ ಸ್ವಾಮಿನಾರಾಯಣ ದೇವಸ್ಥಾನ ಆವರಣದಲ್ಲಿ ಆಕ್ಷೇಪಾರ್ಯ ಬರವಣಿಗೆ

    ಎಐಎಡಿಎಂಕೆ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದಾಗ ಬಸ್ ಕಂಡಕ್ಟರ್‌ಗಳ ನೇಮಕಾತಿ ಮತ್ತು ಚಾಲಕರು ಮತ್ತು ಜೂನಿಯರ್ ಎಂಜಿನಿಯರ್‌ಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು, ಉದ್ಯೋಗಕ್ಕಾಗಿ ನಗದು ಪಡೆದು ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಬಾಲಾಜಿ ಅವರನ್ನು ಇ.ಡಿ ಬಂಧಿಸಿತ್ತು. ಬಂಧನಕ್ಕೊಳಗಾದ ಎಂಟು ತಿಂಗಳ ನಂತರ ಫೆಬ್ರವರಿ 13ರಂದು ತಮಿಳುನಾಡು ಸಚಿವ ಸಂಪುಟಕ್ಕೆ ಬಾಲಾಜಿ ರಾಜೀನಾಮೆ ನೀಡಿದರು. ಇದನ್ನೂ ಓದಿ: ಬಿಜೆಪಿ ನಾಯಕನ ಪತ್ನಿ ವಿರುದ್ಧ ಮಾನಹಾನಿ ಹೇಳಿಕೆ – ಸಂಜಯ್ ರಾವತ್‍ಗೆ 15 ದಿನಗಳ ಜೈಲು!

    ಉದ್ಯೋಗ ಆಕಾಂಕ್ಷಿಗಳಿಂದ ಲಂಚ ಸ್ವೀಕರಿಸಲು ಮಾಜಿ ಸಚಿವರು ತಮ್ಮ ಸಹೋದರ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಇ.ಡಿ ಸೆಂಥಿಲ್ ಬಾಲಾಜಿ ವಿರುದ್ಧ 3,000 ಪುಟಗಳ ಆರೋಪಪಟ್ಟಿ ಸಲ್ಲಿಸಿತ್ತು. ಇದನ್ನೂ ಓದಿ: MUDA Case; ಪ್ರಕರಣದ ಆದೇಶವನ್ನೇ ರದ್ದು ಮಾಡಿಸುವ ಅವಕಾಶ ಕಾನೂನಿನಲ್ಲಿದೆ: ಹಿರಿಯ ವಕೀಲ ವೇಣುಗೋಪಾಲ್

  • ಅಕ್ರಮ ಹಣ ವರ್ಗಾವಣೆ ಕೇಸ್‌ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ

    ಅಕ್ರಮ ಹಣ ವರ್ಗಾವಣೆ ಕೇಸ್‌ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಜಾಮೀನು ನಿರಾಕರಿಸಿದ ಸುಪ್ರೀಂ

    ನವದೆಹಲಿ: ಉದ್ಯೋಗಕ್ಕಾಗಿ ನಗದು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ED) ಬಂಧನೊಳಕ್ಕಾಗಿದ್ದ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿ (Senthil Balaji) ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ‌.

    ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಹಾಗೂ ಸತೀಶ್‌ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಜಾಮೀನು ನಿರಾಕರಿಸಿದೆ. ಬಾಲಾಜಿ ಅವರು ವೈದ್ಯಕೀಯ ಜಾಮೀನಿನ (Medical Bail) ಮೇಲೆ ಬಿಡುಗಡೆಯಾಗಲು ಅರ್ಹವಾದಷ್ಟು ಗಂಭೀರವಾದ ಆರೋಗ್ಯ ಸ್ಥಿತಿ ಕಾಣುತ್ತಿಲ್ಲ ಎಂದು ಹೇಳಿ, ಕೆಳ ಹಂತದ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಲು ನಿರ್ದೇಶಿಸಿದೆ‌.

    ಅನಾರೋಗ್ಯ, ವೈದ್ಯಕೀಯ ಕಾರಣಗಳನ್ನು ನೀಡಿದ್ದ ಸೆಂಥಿಲ್ ಬಾಲಾಜಿ ಜಾಮೀನು ನೀಡುವಂತೆ ಈ‌ ಮೊದಲು ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು, ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಕೆಗೆ ನೀಡಿದ್ದ ಗಡುವು ಅಂತ್ಯ – ಕೋರ್ಟ್‌ಗೆ ವರದಿ?

    ವಿಚಾರಣೆ ವೇಳೆ ಸೆಂಥಿಲ್ ಬಾಲಾಜಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹ್ಟಗಿ, ಆರೋಪಿ ದೀರ್ಘಕಾಲದ ಲ್ಯಾಕುನಾರ್ ಇನ್ಫೆಕ್ಷನ್‌ನಿಂದ ಬಳಲುತ್ತಿದ್ದಾರೆ ವೈದ್ಯಕೀಯ ನೆರವು ಆಧಾರದ ಮೇಲೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು. ಆದ್ರೆ ವಿಚಾರಣೆ ನಡೆಸಿದ ನ್ಯಾಯಪೀಠವು ಈ ಬಗ್ಗೆ ಗೂಗಲ್‌ನಲ್ಲಿ ಪರಿಶೀಲಿಸಲಾಗಿದೆ. ಇದು ಔಷಧಿಗಳ ಮೂಲಕ ಗುಣಪಡಿಸಬಹುದಾದ ಖಾಯಿಲೆ, ಜಾಮೀನು ನೀಡುವಂತ ಸಮಸ್ಯೆಯಲ್ಲ, ಅಂತಹ ಗಂಭೀರವಾದ ಸಮಸ್ಯೆಯಾಗಿದ್ದರೇ ನಾವು ಪರಿಗಣಿಸುತ್ತೇವೆ ಎಂದು ಹೇಳಿದೆ.

    ಮುಕುಲ್ ರೊಹ್ಟಗಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಕೀಲರು ಪ್ರಸ್ತಾಪಿಸಿದ ವೈದ್ಯಕೀಯ ಜಾಮೀನು ನಿಬಂಧನೆಯ ವ್ಯಾಖ್ಯಾನವನ್ನು ನಾವು ಅನುಸರಿಸಿದರೆ 70% ರಷ್ಟು ಕೈದಿಗಳು ಅನಾರೋಗ್ಯಕ್ಕೀಡಾಗುತ್ತಾರೆ. ಇಂತಹ ಕಾರಣಗಳನ್ನು ಕೋರ್ಟ್ ಪರಿಗಣಿಸಬಾರದು ಎಂದು ಮನವಿ ಮಾಡಿದರು.

    ನಂತರ ನ್ಯಾಯಪೀಠವು, ನೀವು ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಬೇಕು. ವೈದ್ಯಕೀಯ ಜಾಮೀನಿಗೆ ಆಧಾರವಾಗಿ ನಿಮ್ಮ ಅನಾರೋಗ್ಯದಿಂದ ನಮಗೆ ತೃಪ್ತಿ ಇಲ್ಲ ಎಂದು ಹೇಳಿತು. ಅಂತಿಮವಾಗಿ, ಜಾಮೀನು ಅರ್ಜಿಯನ್ನು ಹಿಂಪಡೆಯಲು ಮುಕುಲ್ ರೊಹ್ಟಗಿ ಒಪ್ಪಿಕೊಂಡರು. ಇದನ್ನೂ ಓದಿ: ಒಟ್ಟಿಗೆ ಸುತ್ತಾಡುತ್ತಿದ್ದ ಅನ್ಯಕೋಮಿನ ಯುವಕ-ಯುವತಿ ಮೇಲೆ ನೈತಿಕ ಪೊಲೀಸ್‌ಗಿರಿ; ಮಂಗಳೂರಲ್ಲಿ ಇಬ್ಬರ ಬಂಧನ

    ಕಳೆದ ಜೂನ್‌ ತಿಂಗಳಲ್ಲಿ, ಡಿಎಂಕೆ ನಾಯಕ ವಿ ಸೆಂಥಿಲ್ ಬಾಲಾಜಿ ಮತ್ತು ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರದ ಕ್ಯಾಬಿನೆಟ್ ಸಚಿವರನ್ನು ಜಾರಿ ನಿರ್ದೇಶನಾಲಯವು ರಾಜ್ಯದಲ್ಲಿ ಉದ್ಯೋಗಕ್ಕಾಗಿ ನಗದು ಹಗರಣದಲ್ಲಿ ಅವರ ಪಾತ್ರಕ್ಕಾಗಿ ಬಂಧಿಸಿತ್ತು. ಇದನ್ನೂ ಓದಿ: ಮಹಾತ್ಮ ಗಾಂಧಿ ‘ಮಹಾಪುರುಷ’, ಪ್ರಧಾನಿ ಮೋದಿ ‘ಯುಗಪುರುಷ’: ಉಪ ರಾಷ್ಟ್ರಪತಿ ಬಣ್ಣನೆ

  • ಎನ್‌ ರವಿ Vs ತಮಿಳುನಾಡು ಸರ್ಕಾರ – ಕ್ಯಾಬಿನೆಟ್‌ನಿಂದಲೇ ಸೆಂಥಿಲ್ ಬಾಲಾಜಿ ಔಟ್‌

    ಎನ್‌ ರವಿ Vs ತಮಿಳುನಾಡು ಸರ್ಕಾರ – ಕ್ಯಾಬಿನೆಟ್‌ನಿಂದಲೇ ಸೆಂಥಿಲ್ ಬಾಲಾಜಿ ಔಟ್‌

    ಚೆನ್ನೈ: ಬಹಳ ಅಪರೂಪದ ಎಂಬಂತೆ ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ (Tamil Nadu Governor RN Ravi) ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (Stalin) ಅವರನ್ನು ಸಂಪರ್ಕಿಸದೇ ಸಚಿವ ವಿ ಸೆಂಥಿಲ್ ಬಾಲಾಜಿ (Senthil Balaji) ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ.

    ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಚಿವ ವಿ ಸೆಂಥಿಲ್ ಬಾಲಾಜಿ ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ತಮಿಳುನಾಡು ರಾಜಭವನದ ಪ್ರಕಟಣೆ ತಿಳಿಸಿದೆ.  ಇದನ್ನೂ ಓದಿ: ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ: ಪರಮೇಶ್ವರ್

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ವಿದ್ಯುತ್, ಅಬಕಾರಿ ಖಾತೆಯನ್ನು ಹೊಂದಿದ್ದ ಸೆಂಥಿಲ್‌ ಬಾಲಾಜಿ ಅವರನ್ನು ಬಂಧಿಸಿತ್ತು. ಬಂಧಿಸಿದ ಬಳಿಕ ಸ್ಟಾಲಿನ್‌ ಅವರು ಯಾವುದೇ ಖಾತೆಯನ್ನು ನೀಡದೇ ಸಂಪುಟದಲ್ಲಿ ಉಳಿಸಿದ್ದರು.

    ಯಾವುದೇ ಖಾತೆಯನ್ನು ನೀಡದೇ ಸಂಪುಟದಲ್ಲಿ ಉಳಿಸಿಕೊಂಡಿದ್ದು ಬಹಳ ಚರ್ಚೆಗೆ ಗ್ರಾಸವಾಗಿತ್ತು. ಈಗ ಸ್ಟಾಲಿನ್‌ ಅವರನ್ನು ಸಂಪರ್ಕಿಸದೇ ವಜಾಗೊಳಿಸಿದ್ದು ತಮಿಳುನಾಡಿನಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ತಿಕ್ಕಾಟ ಮತ್ತೊಂದು ಹಂತಕ್ಕೆ ಹೋಗುವ ಸಾಧ್ಯತೆಯಿದೆ.

     

    ರಾಜ್ಯಪಾಲ ರವಿ ನಿರ್ಧಾರ ಪ್ರಶ್ನಿಸಿ ಡಿಎಂಕೆ ಸುಪ್ರೀಂ ಕೋರ್ಟ್‌ ಮೊರೆ ಹೋಗುವ ಸಾಧ್ಯತೆಯಿದೆ. ಎಐಎಡಿಎಂಕೆ ನಾಯಕರಾಗಿದ್ದ ಸೆಂಥಿಲ್‌ ಬಾಲಾಜಿ ಜಯಲಲಿತಾ ಆಪ್ತರಾಗಿದ್ದರು. ಜಯಲಲಿತಾ ನಿಧನದ ಬಳಿಕ ಪಕ್ಷ ತೊರೆದು ಡಿಎಂಕೆ ಸೇರಿದ್ದರು. ಎಐಎಡಿಎಂಕೆಯಲ್ಲಿದ್ದಾಗ ಸ್ಟಾಲಿನ್‌ ಅವರೇ ಸೆಂಥಿಲ್‌ ಬಾಲಾಜಿ ಬಹಳ ಭ್ರಷ್ಟಾಚಾರ ಎಸಗಿದ್ದಾರೆ. ಅವರು ಜೈಲಿನಲ್ಲಿ ಇರಬೇಕು ಎಂದು ಚುನಾವಣಾ ಪ್ರಚಾರದ ಸಮಯದಲ್ಲಿ ವಾಗ್ದಾಳಿ ನಡೆಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಚಿವ ಸೆಂಥಿಲ್‌ ಬಾಲಾಜಿಗೆ ಶೀಘ್ರವೇ ಬೈಪಾಸ್‌ ಸರ್ಜರಿ ಅಗತ್ಯ – ಇಡಿ ಅರೆಸ್ಟ್‌ ಬೆನ್ನಲ್ಲೇ ವೈದ್ಯರ ಸಲಹೆ

    ಸಚಿವ ಸೆಂಥಿಲ್‌ ಬಾಲಾಜಿಗೆ ಶೀಘ್ರವೇ ಬೈಪಾಸ್‌ ಸರ್ಜರಿ ಅಗತ್ಯ – ಇಡಿ ಅರೆಸ್ಟ್‌ ಬೆನ್ನಲ್ಲೇ ವೈದ್ಯರ ಸಲಹೆ

    ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೆ ಒಳಗಾದ ತಮಿಳುನಾಡು ಸಚಿವ ಸೆಂಥಿಲ್‌ ಬಾಲಾಜಿ (Senthil Balaji) ಅವರಿಗೆ ಶೀಘ್ರವೇ ಬೈಪಾಸ್‌ ಸರ್ಜರಿ (Bypass Surgery) ನಡೆಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

    ಇಂದು ಬೆಳಗ್ಗೆ ಅಬಕಾರಿ ಮತ್ತು ಇಂಧನ ಸಚಿವರಾಗಿದ್ದ ಸೆಂಥಿಲ್‌ ಬಾಲಾಜಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಂಧನವಾಗಿ ಕಾರಿನಲ್ಲಿ ಹೋಗುತ್ತಿದ್ದಾಗ ಹೈಡ್ರಾಮವೇ ಸೃಷ್ಟಿಯಾಗಿತ್ತು. ಎದೆಯ ಮೇಲೆ ಕೈಯನ್ನು ಇಟ್ಟು ಸೆಂಥಿಲ್‌ ಬಾಲಾಜಿ ಕಣ್ಣೀರು ಹಾಕಿ ಗೋಳಾಡಿದ್ದರು. ನಂತರ ಅವರನ್ನು ಚೆನ್ನೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಸೆಂಥಿಲ್‌ ಅವರನ್ನು ಪರೀಕ್ಷಿಸಿದ ಬಳಿಕ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕರು ಮೆಡಿಕಲ್‌ ಬುಲೆಟಿನ್‌ ಪ್ರಕಟಿಸಿದ್ದಾರೆ. ಬೆಳಗ್ಗೆ 10:40ಕ್ಕೆ ಕೊರೊನರಿ ಆಂಜಿಯೋಗ್ರಾಮ್ ನಡೆಯಿತು. ಈ ವೇಳೆ ಹೃದಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಬೈಪಾಸ್‌ ಶಸ್ತ್ರಚಿಕಿತ್ಸೆ ಮಾಡಬೇಕೆಂದು ಸಲಹೆ ನೀಡಲಾಗಿದೆ.

    ರಾಜ್ಯ ಸಚಿವ ಶೇಖರ್‌ ಬಾಬು ಪ್ರತಿಕ್ರಿಯಿಸಿ, ಸೆಂಥಿಲ್‌ ಬಾಲಾಜಿ ಈಗ ಐಸಿಯುನಲ್ಲಿದ್ದಾರೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಮತ್ತು ಅವರ ಹೆಸರನ್ನು ಕರೆದಾಗ ಅವರು ಪ್ರತಿಕ್ರಿಯಿಸಲಿಲ್ಲ. ಈಗ ಅವರು ವೈದ್ಯರ ನಿಗಾದಲ್ಲಿದ್ದಾರೆ ಎಂದು ತಿಳಿಸಿದರು.  ಇದನ್ನೂ ಓದಿ: ತಮಿಳುನಾಡು ಅಬಕಾರಿ ಸಚಿವರ ಬಂಧನ; ಇದು BJP ಸೇಡಿನ ರಾಜಕಾರಣ – ಎಂ.ಕೆ ಸ್ಟಾಲಿನ್‌


    ಎಐಎಡಿಎಂಕೆ ನಾಯಕರಾಗಿದ್ದ ಸೆಂಥಿಲ್‌ ಬಾಲಾಜಿ ಜಯಲಲಿತಾ ಆಪ್ತರಾಗಿದ್ದರು. ಜಯಲಲಿತಾ ನಿಧನದ ಬಳಿಕ ಪಕ್ಷ ತೊರೆದು ಡಿಎಂಕೆ ಸೇರಿದ್ದರು.