Tag: ಸೆಕ್ಷನ್ 144

  • ಹೊನ್ನಾವರದಲ್ಲಿ 144 ಸೆಕ್ಷನ್‌ ಜಾರಿ – ಪೊಲೀಸ್ ಬಿಗಿ ಬಂದೋಬಸ್ತ್

    ಹೊನ್ನಾವರದಲ್ಲಿ 144 ಸೆಕ್ಷನ್‌ ಜಾರಿ – ಪೊಲೀಸ್ ಬಿಗಿ ಬಂದೋಬಸ್ತ್

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ (Honnavara) ಕಾಸರಕೋಡ ಟೊಂಕಾ ಬಂದರು (Tonka Port) ಪ್ರದೇಶದಲ್ಲಿ144 ಸೆಕ್ಷನ್ ಜಾರಿ ಮಾಡಿ ಜಿಲ್ಲಾ ದಂಡಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶ ಪ್ರಕಟಿಸಿದ್ದಾರೆ.

    ಖಾಸಗಿ ಬಂದರು ಕಾಮಗಾರಿಗೆ ಸ್ಥಳೀಯ ಮೀನುಗಾರರು (Local Fishermen) ತಡೆಯೊಡ್ಡಿದ ಹಿನ್ನಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: ಮುಲಾಯಂ ಸರ್ಕಾರದಿಂದ ರಕ್ಷಣೆ – ಅನ್ಸಾರಿಯನ್ನು ಬಂಧಿಸಿದ್ದಕ್ಕೆ ಡಿಎಸ್‌ಪಿಗೆ ರಾಜೀನಾಮೆ ಶಿಕ್ಷೆ!

     

    ಬಂದರು ಕಾಮಗಾರಿಗೆ ಬಂದ ಕಾರ್ಮಿಕರ ಮೇಲೆ ಕಲ್ಲು ತೂರಾಟ ಮಾಡಿ ಕೆಲಸಗಾರರಿಗೆ ಅಡ್ಡಿ ಪಡಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಆದೇಶ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

    ಕಳೆದ ಮೂರು ವರ್ಷದಿಂದ ಖಾಸಗಿ ಬಂದರು ಕಾಮಗಾರಿ ನಡೆಸದಂತೆ ಪ್ರತಿಭಟನೆ (Protest) ನಡೆಸುತ್ತಿರುವ ಸ್ಥಳೀಯ ಮೀನುಗಾರರು ಪೊಲೀಸರಿಂದ ಏಟು ತಿಂದು ಜೈಲುವಾಸ ಸಹ ಅನುಭವಿಸಿದ್ದರು.  ಇದನ್ನೂ ಓದಿ: ವಿಘ್ನೇಶ್‌, ಸುಮೀತ್‌ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್‌ – ರಾಮೇಶ್ವರಂ ಕೆಫೆ ಆರೋಪಿಗಳ ಮಾಹಿತಿ ನೀಡಿದ್ರೆ 10 ಲಕ್ಷ ಬಹುಮಾನ

     

    ಡೊಂಕಾದಲ್ಲಿ ಅವೈಜ್ಞಾನಿಕ ಖಾಸಗಿ ಬಂದರು ಕಾಮಗಾರಿ ನಡೆಸಬಾರದು ಎಂದು ಸ್ಥಳೀಯ ಮೀನುಗಾರರು ಹೋರಾಟ ನಿರಂತರ ನಡೆಯುತ್ತಲೇ ಇದೆ. ಈ ಭಾಗದಲ್ಲಿ ಆಮೆಗಳು ಮೊಟ್ಟೆ ಇಟ್ಟು ಮರಿ ಮಾಡುತ್ತವೆ. ಆಮೆಗಳ ಮೊಟ್ಟೆ ಇಡುವ ಸ್ಥಳವಾಗಿದೆ. ಇದಲ್ಲದೇ ಸಂಪ್ರದಾಯಿಕ ಮೀನುಗಾರರು ಇಲ್ಲಿ ಜೀವನ ಕಂಡುಕೊಂಡಿದ್ದು ಒಕ್ಕಲೆಬ್ಬಿಸಿ ಖಾಸಗಿಯವರಿಗೆ ನೀಡಿರುವುದು ಸರಿಯಲ್ಲ ಎಂದು ನಿರಂತರ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ.

    ಹಲವು ಸುತ್ತಿನ ಸಂಧಾನ ಮಾತುಕತೆ ನಂತರ ಇದೀಗ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು ಇದರ ಮುಂದುವರೆದ ಭಾಗವಾಗಿ ಮಾರ್ಚ್‌ 29 ರಿಂದ ಎಪ್ರಿಲ್ 5ರ ವರೆಗೆ 144 ಸೆಕ್ಷನ್‌ ಜಾರಿ ಮಾಡಲಾಗಿದೆ.

  • ಫೆ.13ರಂದು ದೆಹಲಿಯಲ್ಲಿ ರೈತರ ಪ್ರತಿಭಟನೆ- ಹರಿಯಾಣದ ಕೆಲವೆಡೆ ಇಂಟರ್ನೆಟ್ ಬ್ಯಾನ್, ಸೆಕ್ಷನ್ 144 ಜಾರಿ

    ಫೆ.13ರಂದು ದೆಹಲಿಯಲ್ಲಿ ರೈತರ ಪ್ರತಿಭಟನೆ- ಹರಿಯಾಣದ ಕೆಲವೆಡೆ ಇಂಟರ್ನೆಟ್ ಬ್ಯಾನ್, ಸೆಕ್ಷನ್ 144 ಜಾರಿ

    ನವದೆಹಲಿ: ಫೆಬ್ರವರಿ 13ರಂದು ದೆಹಲಿಯಲ್ಲಿ (New Delhi) ರೈತರ ಪ್ರತಿಭಟನೆ (Farmer’s Protest) ಹಿನ್ನೆಲೆ ಹರಿಯಾಣ (Haryana) ಸರ್ಕಾರವು ರಾಜ್ಯದ ಏಳು ಜಿಲ್ಲೆಗಳಾದ ಅಂಬಾಲಾ, ಜಿಂದ್, ಕುರುಕ್ಷೇತ್ರ, ಹಿಸಾರ್, ಕೈತಾಲ್, ಫತೇಹಾಬಾದ್ ಮತ್ತು ಸಿರ್ಸಾದಲ್ಲಿ ಇಂಟರ್ನೆಟ್ ಸೇವೆಗಳನ್ನು (Internet Service) ನಿಷೇಧಿಸಿದೆ. ಅಲ್ಲದೇ ಚಂಡೀಗಢಕ್ಕೆ ಸಮೀಪವಿರುವ ಪಂಚಕುಲದಲ್ಲಿ ಸೆಕ್ಷನ್ 144ನ್ನು (Section 144) ಜಾರಿಗೊಳಿಸಿದೆ.

    ಈ ಕುರಿತು ಮಾತನಾಡಿದ ಪಂಚಕುಲ (Panchakula) ಡಿಸಿಪಿ ಸುಮೇರ್ ಸಿಂಗ್ ಪ್ರತಾಪ್, ಪಾದಚಾರಿಗಳು ಅಥವಾ ಟ್ರ‍್ಯಾಕ್ಟರ್ ಟ್ರಾಲಿಗಳು ಮತ್ತು ಇತರ ವಾಹನಗಳಲ್ಲಿ ಯಾವುದೇ ರಾಡ್‌ಗಳು, ಆಯುಧಗಳನ್ನು ಸಾಗಿಸುವಂತಿಲ್ಲ. ಮತ್ತು ರ‍್ಯಾಲಿ, ಪ್ರತಿಭಟನೆಗಳು ಅಥವಾ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಮಲಲ್ಲಾ ದರ್ಶನಕ್ಕೆ ಅಯೋಧ್ಯೆಗೆ ಬಸ್‌ನಲ್ಲಿ ತೆರಳಿದ ಯುಪಿ ಶಾಸಕರು

    ಫೆಬ್ರವರಿ 13 ರಂದು ರೈತ ಸಂಘಟನೆಗಳು ದೆಹಲಿಗೆ ತಮ್ಮ ಮೆರವಣಿಗೆಯನ್ನು ಘೋಷಿಸಿದ ನಂತರ, ರಾಷ್ಟ್ರ ರಾಜಧಾನಿಯನ್ನು ತಲುಪುವುದನ್ನು ತಡೆಯಲು ಪಂಜಾಬ್-ಹರಿಯಾಣ ಗಡಿ (Punjab-Haryana Border) ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪಂಜಾಬ್-ಹರಿಯಾಣ ಗಡಿಯನ್ನು ಮುಚ್ಚಲಾಗಿದೆ. ಬ್ಯಾರಿಕೇಡ್‌ಗಳು, ಬಂಡೆಗಳು, ಮರಳು ತುಂಬಿದ ಟಿಪ್ಪರ್‌ಗಳು ಮತ್ತು ಮುಳ್ಳುತಂತಿಗಳಿಂದ ಗಡಿಗಳನ್ನು ಮುಚ್ಚಲಾಗಿದೆ. ಇದನ್ನೂ ಓದಿ: ಮದುವೆಯಲ್ಲಿ ಡಿಜೆಗಾಗಿ ಜಗಳ, ಠಾಣೆ ಮೆಟ್ಟಿಲೇರಿದ ಕುಟುಂಬಸ್ಥರು

    ಇಂಟರ್ನೆಟ್ ನಿಷೇಧ: ಅಧಿಕೃತ ಆದೇಶದ ಪ್ರಕಾರ, ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 11 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 13 ರಂದು ರಾತ್ರಿ 11.30 ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ. ಇದನ್ನೂ ಓದಿ: ನಿಮ್ಮ ಪೋಷಕರು ನನಗೆ ಮತ ಹಾಕದಿದ್ರೆ 2 ದಿನ ಊಟ ಮಾಡ್ಬೇಡಿ- ಶಾಸಕರ ವಿವಾದಾತ್ಮಕ ಹೇಳಿಕೆ

    ಇನ್ನು ಗಡಿಯನ್ನು ಮುಚ್ಚುವುದರ ಜೊತೆಗೆ ಸಂಚಾರ ಸಲಹೆಯನ್ನು ಸಹ ಬಿಡುಗಡೆ ಮಾಡಲಾಗಿದೆ. ಪಂಜಾಬ್ ಮತ್ತು ಹರಿಯಾಣದ ಪ್ರಮುಖ ಮಾರ್ಗಗಳಲ್ಲಿ ಸಂಭವನೀಯ ಟ್ರಾಫಿಕ್ ಅಡೆತಡೆಗಳನ್ನು ನಿರೀಕ್ಷಿಸುವ ಮೂಲಕ ಹರಿಯಾಣ ಪೊಲೀಸರು ಸಂಚಾರ ಸಲಹೆಯನ್ನು ನೀಡಿದ್ದಾರೆ. ಆದರೆ ರಾಜ್ಯದ ಇತರ ಎಲ್ಲ ಮಾರ್ಗಗಳಲ್ಲಿ ಸಂಚಾರ ಮುಂದುವರಿಯಲಿದೆ. ಈ ಸಮಯದಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗದಂತೆ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸುವಂತೆ ಆಡಳಿತ ಮಂಡಳಿ ಜನರಿಗೆ ಮನವಿ ಮಾಡಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಆಚಾರ್ಯ ಪ್ರಮೋದ್ ಕೃಷ್ಣಂ ಉಚ್ಛಾಟನೆ- ಕೈ ನಾಯಕ ಹೇಳಿದ್ದೇನು?

    ಹರಿಯಾಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ), ಮಮತಾ ಸಿಂಗ್ ಈ ಕುರಿತು ಮಾತನಾಡಿದ್ದು, ಪ್ರಸ್ತುತ ಟ್ರಾಫಿಕ್ ಪರಿಸ್ಥಿತಿಯನ್ನು ತಿಳಿಯಲು, ಹರಿಯಾಣ ಪೊಲೀಸರ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಅನುಸರಿಸಿ. ಅಥವಾ ಹರಿಯಾಣ ಪೊಲೀಸ್ ಫೇಸ್‌ಬುಕ್ ಖಾತೆಯಲ್ಲಿ ತಿಳಿದುಕೊಳ್ಳಬಹುದು. ಯಾವುದೇ ಸಂದರ್ಭದಲ್ಲಾದರೂ 112 ನಂಬರ್ ಅನ್ನು ಸಂಪರ್ಕಿಸಿ ಸಹಾಯ ಪಡೆದುಕೊಳ್ಳಬಹುದು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: 1 ವರ್ಷದಲ್ಲಿ ಚುನಾವಣಾ ಬಾಂಡ್‌ಗಳಿಂದ BJPಗೆ 1,300 ಕೋಟಿ ರೂ. ಗಳಿಕೆ – ಹೆಲಿಕಾಪ್ಟರ್‌ ಬಳಕೆಗೆ 78.2 ಕೋಟಿ ರೂ. ಖರ್ಚು

    ಕುರುಕ್ಷೇತ್ರದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಅಲ್ಲದೇ ಆಡಳಿತ ಮಂಡಳಿ ಹರಿಯಾಣ ಪಂಜಾಬ್ ಗಡಿಯನ್ನು ಪೆಹೋವಾ ಗ್ರಾಮದ ತ್ಯುಕರ್‌ನಲ್ಲಿ ಮುಚ್ಚಿದೆ. ಫೆಬ್ರವರಿ 13 ರಂದು ದೆಹಲಿಗೆ ರೈತರ ಮೆರವಣಿಗೆಯಿಂದಾಗಿ ಹರಿಯಾಣ ಆಡಳಿತ ಫುಲ್ ಅಲರ್ಟ್ ಆಗಿದೆ. ಇದನ್ನೂ ಓದಿ: 17ನೇ ಲೋಕಸಭೆಯಲ್ಲಿ 221 ಮಸೂದೆ ಅಂಗೀಕಾರ: ಪ್ರಹ್ಲಾದ್ ಜೋಶಿ

    ರೈತರ ಬೇಡಿಕೆಗಳೇನು?: ಎಂಎಸ್‌ಪಿಗೆ ಕಾನೂನು ಖಾತರಿ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ಕೃಷಿ ಸಾಲ ಮನ್ನಾ, ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವುದು, ಲಖೀಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಕೊಡಿಸುವುದು ರೈತರ ಪ್ರಮುಖ ಬೇಡಿಕೆಯಾಗಿದೆ. ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ಹಲವು ರೈತ ಸಂಘಟನೆಗಳು ಈ ವಿಷಯವಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿವೆ. ಇದನ್ನೂ ಓದಿ: ಮುಂದಿನ 25 ವರ್ಷಗಳಲ್ಲಿ ‘ವಿಕಸಿತ ಭಾರತ’ ಕನಸು ನನಸಾಗುತ್ತೆ: ಮೋದಿ ಭರವಸೆ

  • ಭಾನುವಾರದಿಂದ 15 ದಿನಗಳ ಕಾಲ ಮಾಲ್ ಆಫ್ ಏಷ್ಯಾ ಬಂದ್ – ಸೆಕ್ಷನ್ 144 ಜಾರಿ

    ಭಾನುವಾರದಿಂದ 15 ದಿನಗಳ ಕಾಲ ಮಾಲ್ ಆಫ್ ಏಷ್ಯಾ ಬಂದ್ – ಸೆಕ್ಷನ್ 144 ಜಾರಿ

    ಬೆಂಗಳೂರು: ಬೆಂಗಳೂರಿನ (Bengaluru) ಪ್ರತಿಷ್ಠಿತ ಮಾಲ್‌ಗಳಲ್ಲಿ ಒಂದಾದ ಮಾಲ್ ಆಫ್ ಏಷ್ಯಾ (Mall Of Asia) ಮುಂದಿನ 15 ದಿನಗಳ ಕಾಲ ಬಂದ್ ಆಗಲಿದೆ. ಅಲ್ಲದೇ ಮಾಲ್ ಆಫ್ ಏಷ್ಯಾ ಬಳಿ ಸೆಕ್ಷನ್ 144 (Section 144) ಜಾರಿಗೊಳಿಸಲಾಗಿದೆ.

    ಮಾಲ್ ಆಫ್ ಏಷ್ಯಾ ಮೇಲೆ ಕರವೇ (Karnataka Rakshana Vedike) ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆ ಭಾನುವಾರದಿಂದ 15 ದಿನಗಳವರೆಗೆ ಮಾಲ್ ಅನ್ನು ಮುಚ್ಚಲಾಗುತ್ತದೆ. ಮಾತ್ರವಲ್ಲದೇ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಅನ್ನು ಜಾರಿ ಮಾಡಿ ಆದೇಶ ನೀಡಲಾಗಿದೆ. ಇತ್ತೀಚಿಗಷ್ಟೆ ಬೆಂಗಳೂರಿನಾದ್ಯಂತ ಕರವೇ ಕಾರ್ಯಕರ್ತರು ಕನ್ನಡ ನಾಮಫಲಕ (Kannada Nameboard) ಹಾಕುವಂತೆ ಹೋರಾಟ ಮಾಡಿದ್ದರು. ಇದನ್ನೂ ಓದಿ: ವಿಕ್ರಂ ಸಿಂಹ ಬಂಧನದಿಂದ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ – ಕಾಂಗ್ರೆಸ್ ಟ್ವೀಟ್

    ನಾಮಫಲಕದಲ್ಲಿ ಕನ್ನಡ ಬಳಕೆಗೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಮಾಲ್ ಆಫ್ ಏಷ್ಯಾಕ್ಕೆ ದಾಳಿ ನಡೆಸಿದ್ದರು. ಈ ವೇಳೆ ನಾಮಫಲಕ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮುಂಜಾಗ್ರತೆ ಹಿನ್ನೆಲೆ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಆದೇಶದ ಪ್ರಕಾರ 5ಕ್ಕಿಂತ ಹೆಚ್ಚು ಜನ ಸೇರೋ ಹಾಗಿಲ್ಲ. ಮಾಲ್ ಆಫ್ ಏಷ್ಯಾ ಅಕ್ಟೋಬರ್‌ನಲ್ಲಿ ಓಪನ್ ಆಗಿತ್ತು. ಇದನ್ನೂ ಓದಿ: ನಿಗಮ ಮಂಡಳಿ ನೇಮಕದಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆಶಿ

  • ಮಹಿಷಾ ದಸರಾ ಪರ, ವಿರೋಧ – ಮೈಸೂರಿನಲ್ಲಿ ಸೆಕ್ಷನ್ 144 ಜಾರಿ

    ಮಹಿಷಾ ದಸರಾ ಪರ, ವಿರೋಧ – ಮೈಸೂರಿನಲ್ಲಿ ಸೆಕ್ಷನ್ 144 ಜಾರಿ

    ಮೈಸೂರು: ಮಹಿಷಾ ದಸರಾ (Mahisha Dasara) ಆಚರಣೆ ವಿಚಾರವಾಗಿ ಪರ ವಿರೋಧಗಳು ವ್ಯಕ್ತವಾಗುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೈಸೂರು (Mysuru) ನಗರ ಪೊಲೀಸ್ ಆಯುಕ್ತರು ಸೆಕ್ಷನ್ 144 ಜಾರಿ ಮಾಡಿದ್ದಾರೆ.

    ಚಾಮುಂಡಿ ಬೆಟ್ಟ (Chamundi Hill) ಸೇರಿ (ಟೌನ್ ಹಾಲ್ ಹೊರತುಪಡಿಸಿ) ಮೈಸೂರು ನಗರದ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಪೊಲೀಸ್ ಕಮೀಷನರ್ ರಮೇಶ್.ಬಿ ಆದೇಶಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಅ.12ರಂದು ಮಧ್ಯರಾತ್ರಿ 12 ಗಂಟೆಯಿಂದ ಅ.14ರ ಬೆಳಗ್ಗೆ 06 ಗಂಟೆಯವರೆಗೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆ ಯಾವುದೇ ಸಭೆ-ಸಮಾರಂಭ, ರ‍್ಯಾಲಿ ನಡೆಸುವುದನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಭಾಷಣದ ವೇಳೆ Emergency Alert Message- ಬಿಜೆಪಿಯವ್ರೂ ಅಲರ್ಟ್ ಆಗ್ಲಿ ಅಂತಾ ನಕ್ಕ ಡಿಕೆಶಿ

    ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿ ಸಭೆ-ಸಮಾರಂಭ ಮೆರವಣಿಗೆ, ಪ್ರತಿಭಟನೆ, ರ‍್ಯಾಲಿ ನಡೆಸಲು ಪ್ರಯತ್ನಿಸಿದಲ್ಲಿ ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಮದುವೆ ಸಮಾರಂಭಗಳಿಗೆ ಮತ್ತು ಶವಸಂಸ್ಕಾರಗಳಿಗೆ ಹಾಗೂ ಶಾಲಾ, ಕಾಲೇಜು ಮತ್ತು ಪರೀಕ್ಷೆಗಳಿಗೆ ತೆರಳುವವರಿಗೆ ಅನ್ವಯಿಸುವುದಿಲ್ಲ. ಇದನ್ನೂ ಓದಿ: ನಗರಸಭೆ ಕಚೇರಿಯಲ್ಲೇ ಕೈ ಕೈ ಮಿಲಾಯಿಸಿದ ಸದಸ್ಯರು

    ಯಾವುದೆಲ್ಲಾ ನಿಷೇಧ?
    1) ಯಾವುದೇ ಮೆರವಣಿಗೆ, ಪ್ರತಿಭಟನೆ, ಬೈಕ್ ರ‍್ಯಾಲಿ  ನಡೆಸುವುದು.
    2) ಪರ ವಿರೋಧ ಘೋಷಣೆ ಕೂಗುವುದು.
    3) ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು.
    4) 5 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು.
    5) ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು.
    6) ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಚಾರ, ಧ್ವನಿವರ್ಧಕ ಬಳಸುವುದು, ಫ್ಲೆಕ್ಸ್ ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದು. ಇದನ್ನೂ ಓದಿ: ಕೆಲಸ ಮಾಡ್ಬೇಕು ಅಂದ್ರೆ ವೋಟ್ ಹಾಕ್ಬೇಕು ಅನ್ನೋದರಲ್ಲಿ ತಪ್ಪೇನಿದೆ?: ಬಾಲಕೃಷ್ಣ ಸಮರ್ಥನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ

    ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ

    ಬೆಂಗಳೂರು: ಕರ್ನಾಟಕ ಬಂದ್ (Karnataka Bandh) ಕರೆ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ (Section 144) ಜಾರಿ ಮಾಡಲಾಗಿದೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು (Bengaluru) ನಗರ ಪೊಲೀಸ್ ಆಯುಕ್ತ ದಯಾನಂದ್, ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

    144 ಸೆಕ್ಷನ್ ಜಾರಿ ವೇಳೆ ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಗುಂಪು ಸೇರುವಂತೆ ಇಲ್ಲ. ಬಂದ್‌ಗಳನ್ನು ಕರೆಯುವುದು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಬಂದ್ ವೇಳೆ ಆಸ್ತಿ ಪಾಸ್ತಿ ನಾಶ ಮತ್ತು ಸಾವು ನೋವಿಗೆ ಸಂಘಟಕರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

    ವಾಹನಗಳನ್ನು ತಡೆಯುವುದು, ಡ್ಯಾಮೇಜ್ ಮಾಡುವುದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ನಗರದಲ್ಲಿ ವ್ಯಾಪಕ ರಕ್ಷಣಾ ಕ್ರಮ ಜರುಗಿಸಲಾಗುತ್ತದೆ. ಪ್ರತಿಭಟನೆ, ಮೆರವಣಿಗೆಗೆ ಯಾವುದೇ ಅವಕಾಶವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ನಾಳಿನ ಬಂದ್‌ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ: ಬೊಮ್ಮಾಯಿ

    ಬಲವಂತವಾಗಿ ಬಂದ್ ಮಾಡಿದರೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ನ ಆದೇಶ ಉಲ್ಲಂಘನೆಯಾಗುತ್ತದೆ. ಈ ಹಿನ್ನೆಲೆ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿಯವರೆಗೆ ಬಂದೋಬಸ್ತ್ ಇರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳರ ಮೇಲೆ ಹಲ್ಲೆ ಎಂದು ಫೇಕ್ ವೀಡಿಯೋ ಹಂಚಿಕೆ – ಇಬ್ಬರ ವಿರುದ್ಧ ಎಫ್‍ಐಆರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಾದಗಿರಿಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ – 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ

    ಯಾದಗಿರಿಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ – 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ

    ಯಾದಗಿರಿ: ಯಾದಗಿರಿ (Yadgiri) ಜಿಲ್ಲೆಯಲ್ಲಿ ಮತದಾನ ಪೂರ್ಣಗೊಳ್ಳುವ ವೇಳೆ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೆಂಭಾವಿ ಮತ್ತು ಸುರಪುರ ಪಟ್ಟಣಗಳಲ್ಲಿ 2 ದಿನಗಳ ಕಾಲ ಸೆಕ್ಷನ್ 144 ಜಾರಿ ಮಾಡಲಾಗಿದೆ.

    ಜಿಲ್ಲೆಯಲ್ಲಿ ಮೇ 10ರಂದು ಬೆಳಗ್ಗೆಯಿಂದ ಸಂಜೆಯವರೆಗೆ ಶಾಂತಿಯುತವಾಗಿ ಮತದಾನ (Voting) ಪ್ರಕ್ರಿಯೆ ನಡೆದಿತ್ತು. ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವ ವೇಳೆ ಕೆಂಭಾವಿ (Kembhavi) ಮತ್ತು ಸುರಪುರ (Surapura) ಪಟ್ಟಣಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ಗಲಾಟೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಒಂದೇ ಅವಧಿಯಲ್ಲಿ ಒಬ್ಬ 2 ಅಸೆಂಬ್ಲಿ, 2 ಎಂಪಿ ಚುನಾವಣೆ ಎದುರಿಸಿದ್ರೆ ಅದು ನಾನೊಬ್ಬನೇ: ಪುಟ್ಟರಾಜು

    ಘಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಪರಿಸ್ಥಿತಿಯನ್ನು ಅವಲೋಕಿಸಿ 2 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ. ಮೇ 10ರ ಸಂಜೆ 6 ಗಂಟೆಯಿಂದ ಮೇ 12ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಎರಡು ದಿನಗಳ ಕಾಲ ಪಟ್ರೋಲಿಂಗ್ ಮತ್ತು ಗಸ್ತು ಪಡೆ ಇಲ್ಲೇ ಠಿಕಾಣಿ ಹೂಡಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನನಗಿಂತ ಗಟ್ಟಿ ಅಲ್ಲವೇ ಅಲ್ಲ: ಜಿಟಿಡಿ

    ನಿಷೇಧಾಜ್ಞೆ ಜಾರಿಯಿಂದಾಗಿ ಎರಡೂ ಪಟ್ಟಣಗಳಲ್ಲಿ 5ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ. ಎಲ್ಲರೂ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಖಡಕ್ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: Maharashtra political crisis: ಉದ್ಧವ್‌ ಠಾಕ್ರೆ ಸರ್ಕಾರ ಮರುಸ್ಥಾಪಿಸಲು ಸಾಧ್ಯವಿಲ್ಲ – ಶಿಂಧೆ ಬಣಕ್ಕೆ ಸುಪ್ರೀಂ ರಿಲೀಫ್‌

  • ಯಾದಗಿರಿಯಲ್ಲಿ ಟಿಪ್ಪು ಸರ್ಕಲ್ ವಿವಾದ- ಕೋಮು ಪ್ರಚೋದನೆ ನೀಡಿದವರ ಮೇಲೆ ಕೇಸ್, ಅರೆಸ್ಟ್

    ಯಾದಗಿರಿಯಲ್ಲಿ ಟಿಪ್ಪು ಸರ್ಕಲ್ ವಿವಾದ- ಕೋಮು ಪ್ರಚೋದನೆ ನೀಡಿದವರ ಮೇಲೆ ಕೇಸ್, ಅರೆಸ್ಟ್

    ಯಾದಗಿರಿ: ನಗರದಲ್ಲಿ ಎರಡು ಕೋಮುಗಳ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದ ಟಿಪ್ಪು ಸರ್ಕಲ್ (Tippu Circle) ವಿವಾದ ಸದ್ಯ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಅಹಿತಕರ ಘಟನೆ ಮುನ್ಸೂಚನೆ ಅರಿತಿದ್ದ ಯಾದಗಿರಿ ಪೊಲೀಸರ (Yadgir Police) ಬುದ್ಧಿವಂತಿಕೆ ನಡೆಯಿಂದ ಪ್ರತಿಭಟನೆಗೂ ಅವಕಾಶ ಸಿಗಲಿಲ್ಲ. ಶಾಂತಿ ಭಂಗಕ್ಕೆ ಮುಂದಾದವರನ್ನು ಬಂಧಿಸಿದ ಪೊಲೀಸರು, ಜನರ ಆತಂಕ ದೂರ ಮಾಡಿದ್ದಾರೆ.

    ಕಳೆದೊಂದು ವಾರದಿಂದ ಇಡೀ ಯಾದಗಿರಿ (Yadgir) ನಗರದ ಸಾಮರಸ್ಯಕ್ಕೆ ಕೊಳ್ಳಿ ಇಟ್ಟು, ಎರಡು ಕೋಮುಗಳ ನಡುವೆ ಪರಸ್ಪರ ತಿಕ್ಕಾಟಕ್ಕೆ ಕಾರಣವಾಗಿದ್ದ ವಿವಾದಿತ ಟಿಪ್ಪು ಸರ್ಕಲ್ ವಿಚಾರ ಇದೀಗ ತಾತ್ಕಾಲಿಕ ಸುಖಾಂತ್ಯ ಕಂಡಿದೆ. ಸರ್ಕಲ್ ತೆರವಿಗೆ ಗಡುವು ನೀಡಿ, ಜೈ ಶಿವಾಜಿ ಸಂಘಟನೆಯ (Jai Shivaji Organisation) ಪರಶುರಾಮ್ ಶೇಗೂರಕರ್ (Parashuram Shegoorkar) ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿತ್ತು. ಸ್ವತಃ ತಾವೇ ಪ್ರತಿಭಟನೆ ಮೂಲಕ ವಿವಾದಿತ ಸರ್ಕಲ್‌ನಲ್ಲಿ ಹಾಕಿರುವ ಟಿಪ್ಪು ಭಾವಚಿತ್ರ ಕಿತ್ತೆಸೆಯುವುದಾಗಿ ಹೇಳಿಕೆ ನೀಡಿದ್ದರು.

    ಪರಶುರಾಮ್ ಶೇಗೂರಕರ್ ಈ ಹೇಳಿಕೆಯಿಂದ ಕೆರಳಿ ಕೆಂಡವಾಗಿದ್ದ ಟಿಪ್ಪು ಸಂಘಟನೆ ಅಬ್ದುಲ್ ಕರೀಂ ನೇತೃತ್ವದ ತಂಡ ಪ್ರಾಣ ಹೋದರೂ ತೆರವಿಗೆ ಅವಕಾಶ ಕೊಡಲ್ಲ ಎಂದು ಪ್ರತಿ ಸವಾಲು ಹಾಕಿದ್ದರು. ಇಬ್ಬರ ಹೇಳಿಕೆಗಳಿಂದ ಜನರ ನೆಮ್ಮದಿ ಹಾಳಾಗಿತ್ತು. ಭಾನುವಾರವೇ ಅಲರ್ಟ್ ಆಗಿದ್ದ ಯಾದಗಿರಿ ಪೊಲೀಸರು ಇಬ್ಬರ ಮೇಲೆ ಕೋಮು ಪ್ರಚೋದನೆ, ಸಾಮರಸ್ಯ ಹಾಳು ಮಾಡಿದ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು, ಪ್ರತಿಭಟನೆ ಮಾಡದಂತೆ ಎಚ್ಚರಿಕೆ ನೀಡಿದ್ದರು. ಹೀಗಾಗಿ ಸ್ಥಳದಲ್ಲಿ ಬಿಗಿ ಭದ್ರತೆಯನ್ನೂ ಕೈಗೊಳ್ಳಲಾಗಿತ್ತು. ಆದರೆ ಪೊಲೀಸರ ಎಚ್ಚರಿಕೆಯ ನಡುವೆಯೂ ಪ್ರತಿಭಟನೆಗೆ ಮುಂದಾಗಿದ್ದ ಪರಶುರಾಮ್ ಶೇಗೂರಕರ್ ಹಾಗೂ ಶಂಕರ್‌ನನ್ನು ಬಂಧಿಸಿ ಕರೆದೊಯ್ದಿದ್ದಾರೆ.

    ನಗರದ ಹತ್ತಿಕುಣಿ ಕ್ರಾಸ್ ಬಳಿ ಕಳೆದ 2 ದಿನಗಳಿಂದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿತ್ತು. ಸ್ವಲ್ಪ ಯಾಮಾರಿದರೂ 2 ಸಮುದಾಯಗಳ ನಡುವಿನ ಸಂಘರ್ಷಕ್ಕೆ ಹಾದಿ ಮಾಡಿಕೊಟ್ಟಂತಾಗುತ್ತಿತ್ತು. ಹೀಗಾಗಿಯೇ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡದಂತೆ 144 ಸೆಕ್ಷನ್ ಜಾರಿಗೊಳಿಸಿ, ಆದೇಶ ನೀಡಿದ್ದರು. ಪೊಲೀಸರ ಎಚ್ಚರಿಕೆಯ ನಂತರ ಟಿಪ್ಪು ಸಂಘಟನೆಯ ಅಬ್ದುಲ್ ಕರೀಂ ಭಾನುವಾರ ಮುಂಬೈಗೆ ಹೋಗಿದ್ದಾರೆ. ಆದರೆ ಜೈ ಶಿವಾಜಿ ಸಂಘಟನೆಯ ಪರಶುರಾಮ್ ಶೇಗೂರಕರ್ ಮಾತ್ರ ಪೊಲೀಸರ ನೋಟಿಸ್ ಗೂ ಕ್ಯಾರೇ ಎನ್ನದೇ, ಗುಂಪು ಕಟ್ಟಿಕೊಂಡು ಪ್ರತಿಭಟನೆಗೆ ಮುಂದಾಗಿ, ಬಂಧಿತರಾಗಿದ್ದಾರೆ. ಇದನ್ನೂ ಓದಿ: ಕೋಮು ಸಂಘರ್ಷದ ಉದ್ದೇಶಕ್ಕಾಗಿ ಹಿಂದೂ ಧರ್ಮವನ್ನು ಬಳಸಬೇಡಿ – ಬಿಜೆಪಿ ನಾಯಕನಿಗೆ ಸುಪ್ರೀಂ ಚಾಟಿ

    ಭಾನುವಾರವೇ ಯಾದಗಿರಿಯ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದ ಕಾರಣ ಪರಶುರಾಮ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ವೇಳೆ ಪರಶುರಾಮ್ ಶೇಗೂರಕರ್ ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಬಂಧನದ ವೇಳೆ ಯಾದಗಿರಿ ಸಿಪಿಐ ಸುನೀಲ್ ಮೂಲಿಮನಿ ಅವರ ಹಣೆ ಹಾಗೂ ಕೈಗೆ ಗಾಯಗಳಾಗಿದ್ದು, ನೂಕಾಟ, ತಳ್ಳಾಟದ ನಡುವೆಯೇ ಪೊಲೀಸರು ಪರಶುರಾಮ್ ಶೇಗೂರಕರ್‌ನನ್ನು ಬಂಧಿಸಿ ಕರೆದೊಯ್ದಿದ್ದಾರೆ.

    1996ರಲ್ಲಿ ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ನಾಮಕರಣದ ವೃತ್ತಕ್ಕೆ 2010ರಲ್ಲಿ ಟಿಪ್ಪು ಸರ್ಕಲ್ ಎಂದು ಮರುನಾಮರಣ ಮಾಡಿದ್ದೇ ವಿವಾದಕ್ಕೆ ಕಾರಣ ಎನ್ನಲಾಗಿದೆ. ಸದ್ಯ ಶಾಂತ ಎನಿಸಿದರೂ, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಚುನಾವಣೆ ಬಂದಾಗ ಮಾತ್ರ ನಾಯಕರು ಕಾಣಿಸುತ್ತಾರೆ- ಅಣ್ಣಾಮಲೈ ವಾಗ್ದಾಳಿ

  • ಬೆಂಗಳೂರಿನಲ್ಲಿ ಜಿ20 ಶೃಂಗಸಭೆ – ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ No Fly Zone ಜಾರಿ

    ಬೆಂಗಳೂರಿನಲ್ಲಿ ಜಿ20 ಶೃಂಗಸಭೆ – ತಾಜ್ ವೆಸ್ಟ್ ಎಂಡ್ ಆವರಣದ ಮೇಲೆ No Fly Zone ಜಾರಿ

    ಬೆಂಗಳೂರು: ಫೆಬ್ರವರಿ 5 ರಿಂದ 7ರ ವರೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ಜಿ20 ಶೃಂಗಸಭೆ (G20 Summit) ಹಿನ್ನೆಲೆ ತಾಜ್ ವೆಸ್ಟ್ ಎಂಡ್ (Taj West End) ಆವರಣದ ಮೇಲೆ ತಾತ್ಕಾಲಿಕ ನೋ ಫ್ಲೈಝೋನ್ (No Fly Zone) ಜಾರಿ ಮಾಡಲಾಗಿದೆ.

    ಈ ಬಾರಿ ಜಿ20 ರಾಷ್ಟ್ರಗಳ ಸಭೆಗಳು ಭಾರತದ ವಿವಿಧೆಡೆ ನಡೆಯಲಿದ್ದು, ಅದರಲ್ಲಿ ಒಂದು ಬೆಂಗಳೂರಿನಲ್ಲಿ ಆಗುತ್ತಿದೆ. ಫೆಬ್ರವರಿ 5 ರಿಂದ 7ರ ವರೆಗೆ ಜಿ20ಯ ಇಂಧನ ಪರಿವರ್ತನಾ ಕಾರ್ಯಕಾರಿ ಗುಂಪಿನ (Energy Transition Working Group) ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಸಭೆಗೆ ಹಲವು ದೇಶಗಳ ಗಣ್ಯರು, ವಿವಿಐಪಿಗಳು ಭಾಗವಹಿಸಲಿದ್ದಾರೆ. ಹೀಗಾಗಿ ಗಣ್ಯರು ಆಗಮಿಸಲಿರುವ ನಗರದ ತಾಜ್ ವೆಸ್ಟ್ ಎಂಡ್‌ನ ಸುತ್ತ ತಾತ್ಕಾಲಿಕ ನೋ ಫ್ಲೈಝೋನ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಟ್ರಾಫಿಕ್‌ ನಿಯಮ ಉಲ್ಲಂಘನೆ – ದಂಡ ಪಾವತಿಗೆ 50% ಡಿಸ್ಕೌಂಟ್‌

    ಫೆಬ್ರವರಿ 5ರಿಂದ 11ರ ವರೆಗೆ ನೋ ಫ್ಲೈಝೋನ್ ಜಾರಿ ಮಾಡಲಾಗಿದ್ದು, ತಾಜ್ ವೆಸ್ಟ್ ಎಂಡ್‌ನ ಸುತ್ತ 1 ಕಿಮೀ ವ್ಯಾಪ್ತಿಯಲ್ಲಿ ಇದು ಜಾರಿಯಿರಲಿದೆ. ಈ ಪ್ರದೇಶದಲ್ಲಿ ಯಾವುದೇ ಡ್ರೋನ್, ಗ್ಲೈಡರ್ ಏರ್‌ಕ್ರಾಫ್ಟ್ ಹಾರಾಡುವಂತಿಲ್ಲ.

    ನೋ ಫ್ಲೈಝೋನ್‌ನೊಂದಿಗೆ ತಾಜ್ ವೆಸ್ಟ್ ಎಂಡ್ ಸುತ್ತ 144 ಸೆಕ್ಷನ್ ಸಹ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ಸಿದ್ದು-ಡಿಕೆಶಿ `ಪ್ರಜಾಧ್ವನಿ’ ಬಸ್ ಯಾತ್ರೆ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ – ಜಾಮೀಯಾ ಮಸೀದಿ ಸುತ್ತ 144 ನಿಷೇಧಾಜ್ಞೆ ಜಾರಿ

    ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ – ಜಾಮೀಯಾ ಮಸೀದಿ ಸುತ್ತ 144 ನಿಷೇಧಾಜ್ಞೆ ಜಾರಿ

    ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗದ ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಕಾರ್ಯಪ್ರೌವೃತ್ತವಾಗಿವೆ. ಇನ್ನೊಂದು ಕಡೆ ವಿಶ್ವ ಹಿಂದೂ ಪರಿಷತ್ ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದೆ.

    ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು, ಟಿಪ್ಪು ಸುಲ್ತಾನ್ ದೇವಸ್ಥಾನದ ಮೇಲೆ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಇಂದಿಗೂ ಜಾಮಿಯಾ ಮಸೀದಿಯಲ್ಲಿ ದೇವಸ್ಥಾನದ ಹಲವು ಕುರುಹುಗಳು ಇವೆ. ಇಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದ ಗರ್ಭಗುಡಿ ಇದೆ ಈ ನಿಟ್ಟಿನಲ್ಲಿ ನಮಗೆ ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಜಿಲ್ಲಾಧಿಕಾರಿಗೆ ವಿಹೆಚ್‌ಪಿ ಮನವಿ ಸಲ್ಲಿಸಿತ್ತು.

    ಜಿಲ್ಲಾಧಿಕಾರಿಗಳು ಈ ಮನವಿಗೆ ಪೂರಕವಾಗಿ ಸ್ಪಂದಿಸದ ಕಾರಣ ವಿಹೆಚ್‌ಪಿ ಹಾಗೂ ಭಜರಂಗ ದಳದ ಪದಾಧಿಕಾರಿಗಳು ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿದ್ದಾರೆ. ಈ ಚಲೋದಲ್ಲಿ ಸಾವಿರಾರು ಮಂದಿ ಹನುಮನ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಅಂದು ಹನುಮ ಭಕ್ತರು ಮಸೀದಿಯ ಒಳಗಡೆ ಪ್ರವೇಶ ಮಾಡಿ ಆಂಜನೇಯಸ್ವಾಮಿ ಪೂಜೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    Aswathi

    ಜೂನ್ 4 ರಂದು ಶ್ರೀರಂಗಪಟ್ಟಣ ಚಲೋ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಜಾಮಿಯಾ ಮಸೀದಿ ಸುತ್ತಲೂ ಪೊಲೀಸರ ಕಣ್ಗಾವಲು ಇರಿಸಲಾಗಿದ್ದು, ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮಸೀದಿಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದು ಜೂನ್ 3 ಮತ್ತು 4ರಂದು ಜಾಮಿಯಾ ಮಸೀದಿ ಸುತ್ತ 144 ಸೆಕ್ಷನ್ ಜಾರಿಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

  • ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಖಭಂಗ, ಬಿಜೆಪಿಯಿಂದ ಸ್ಪರ್ಧಿಸಿದ ಗಂಡ-ಹೆಂಡತಿ ಜಯಭೇರಿ

    ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮುಖಭಂಗ, ಬಿಜೆಪಿಯಿಂದ ಸ್ಪರ್ಧಿಸಿದ ಗಂಡ-ಹೆಂಡತಿ ಜಯಭೇರಿ

    ದಾವಣಗೆರೆ: ಮಹಾನಗರ ಪಾಲಿಕೆ ಉಪ ಚುನಾವಣೆಯ 28 ಹಾಗೂ 37ನೇ ವಾರ್ಡ್‌ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ.

    ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಪಟ್ಟು ಪ್ರಚಾರ ಮಾಡಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನಗೆ ತೀವ್ರ ಮುಖಭಂಗ ಆಗಿದೆ. ಜೆ.ಎನ್.ಶ್ರೀನಿವಾಸ್ ಹಾಗೂ ಅವರ ಪತ್ನಿ ಶ್ವೇತ ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಸಲಾಗಿತ್ತು. 28ನೇ ವಾರ್ಡಿನಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಹುಲ್ಲುಮನಿ ಗಣೇಶ್ ಅವರು 1,884 ಮತಗಳನ್ನು ಪಡೆದರೆ, ಬಿಜೆಪಿಯ ಶ್ರೀನಿವಾಸ್ 2,565 ಮತ ಪಡೆದು 681 ಮತಗಳ ಅಂತರದಿಂದ ಜಯಭೇರಿ ಬಾರಿಸಿದರು. ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    37ನೇ ವಾರ್ಡ್‌ನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಶ್ವೇತಾ ಶ್ರೀನಿವಾಸ್ 2,096 ಮತ ಪಡೆದರೆ, ಕಾಂಗ್ರೆಸ್ ರೇಖಾರಾಣಿ 1,303 ಮತಗಳನ್ನಷ್ಟೇ ಪಡೆದು ಸೋಲೊಪ್ಪಿಕೊಂಡರು. ಶ್ವೇತಾ ಶ್ರೀನಿವಾಸ್ 793 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದು, ನಗರಪಾಲಿಕೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯಾಬಲವೂ ಹೆಚ್ಚಾಗಿದೆ. ಇದನ್ನೂ ಓದಿ: ಶೀಲ ಶಂಕಿಸಿ ತಲೆ ಹಿಡಿದು ನೆಲಕ್ಕೆ ಜಜ್ಜಿದ ಪತಿ – ಸ್ಥಳದಲ್ಲೇ ಪತ್ನಿ ಸಾವು

    ಸೆಕ್ಷನ್ 144 ಉಲ್ಲಂಘನೆ: ನಗರಪಾಲಿಕೆ ಉಪಚುನಾವಣೆ ಹಿನ್ನೆಲೆಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಿದ್ದರೂ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಮತ ಎಣಿಕೆ ಕೇಂದ್ರದ ಮುಂಭಾಗವೇ ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿದರು. ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣಾದರು.