Tag: ಸೆಕ್ಷನ್ 144

  • ಹಾಸನದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಕಂದಾಯ ಇಲಾಖೆ ಅಸ್ತು

    ಹಾಸನದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಕಂದಾಯ ಇಲಾಖೆ ಅಸ್ತು

    ಹಾಸನ: ಹಾಸನದಲ್ಲಿ ಟ್ರಕ್‌ಟರ್ಮಿನಲ್ ನಿರ್ಮಾಣ ವಿಚಾರವಾಗಿ ಮಾಜಿ ಸಚಿವ ಹೆಚ್‌ಡಿ.ರೇವಣ್ಣ ವರ್ಸಸ್ ಶಾಸಕ ಪ್ರೀತಂಗೌಡರ ನಡುವೆ ಜಟಾಪಟಿ ಜೋರಾಗಿರುವ ಹೊತ್ತಿನಲ್ಲೇ ಈ ಬಗ್ಗೆ, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಿಂದ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ.

    Preetam Gowda, Hassan, JDS, BJP, Revanna, (3)

    ಪತ್ರದಲ್ಲಿ ಹಾಸನದ ಕೆಂಚಟ್ಟಳ್ಳಿ ಗ್ರಾಮದ ಸರ್ವೆ ನಂಬರ್ 31 ರಲ್ಲಿ, 3 ಎಕರೆ 24 ಗುಂಟೆ ಸರ್ಕಾರಿ ಗೋಮಾಳವನ್ನು ಟ್ರಕ್‌ಟರ್ಮಿನಲ್ ಉದ್ದೇಶಕ್ಕೆ ಕಾಯ್ದಿರಿಸಿರುವ ಬಗ್ಗೆ ಸರ್ಕಾರ ಈಗಾಗಲೇ ಪೂರ್ವಾನುನತಿ ನೀಡಿರುವ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಕಲಂ 71 ರಡಿ ಟ್ರಕ್ ಟರ್ಮಿನಲ್ ಉದ್ದೇಶಕ್ಕೆ ಕಾಯ್ದಿರಿಸಲು ಸರ್ಕಾರ ಪೂರ್ವಾನುಮತಿ ನೀಡಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ನಾನು ಧರಣಿ ಕುಳಿತರು ಸ್ಥಳಕ್ಕೆ ಡಿಸಿ ಬರಲಿಲ್ಲ, ನಾನೇನು ದನಕಾಯೋನ: ಹೆಚ್‍ಡಿ.ರೇವಣ್ಣ

    ಜಿಲ್ಲಾಧಿಕಾರಿಗಳು ಸರ್ಕಾರದ ಆದೇಶದಂತೆ ಸದರಿ ಜಮೀನನ್ನು ಕಂದಾಯ ವ್ಯಾಪ್ತಿಯ ಸುಪರ್ದಿಯಲ್ಲೇ ಇರಿಸಿಕೊಳ್ಳತಕ್ಕದ್ದು. ಈ ಜಮೀನನ್ನು ಮುಂದೆ ಯಾವುದಾದರೂ ಸಂಸ್ಥೆ, ಇಲಾಖೆಗೆ ನೀಡಬೇಕಾದಲ್ಲಿ ಸರ್ಕಾರದ ಅನುಮತಿಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಪತ್ರದಲ್ಲಿ ಸೂಚಿಸಲಾಗಿದೆ.

    Preetam Gowda, Hassan, JDS, BJP, Revanna, (2)

    ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಮುಂದೆ ನಡೆಯುತ್ತಿರುವ ಟ್ರಕ್‌ಟರ್ಮಿನಲ್ ಕಾಮಗಾರಿಗೆ ಹೆಚ್.ಡಿ.ರೇವಣ್ಣ, ಸ್ಥಳೀಯರು, ವಿದ್ಯಾರ್ಥಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಟ್ರಕ್‌ಟರ್ಮಿನಲ್ ಕಾಮಗಾರಿ ಮಾಡಿಯೇ ಸಿದ್ಧ ಎಂದು ಶಾಸಕ ಪ್ರೀತಂಗೌಡ ಪಣತೊಟ್ಟಿದ್ದರು. ಹೀಗಾಗಿ ಸ್ಥಳೀಯರೊಂದಿಗೆ ಸ್ವತಃ ಹೋರಾಟಕ್ಕಿಳಿದಿದ್ದ ಹೆಚ್‌ಡಿ.ರೇವಣ್ಣ, ತಾತ್ಕಾಲಿಕವಾಗಿ ಕಾಮಗಾರಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಇದನ್ನೂ ಓದಿ: ಹಾಸನದಲ್ಲಿ ನಿಲ್ಲದ ಪ್ರೀತಂ ಗೌಡ Vs ಎಚ್‍.ಡಿ.ರೇವಣ್ಣ ಜಟಾಪಟಿ – ರಾತ್ರೋ ರಾತ್ರಿ ತಾಲೂಕು ಕಚೇರಿ ಡೆಮಾಲಿಶ್ 

    HD REVANNA

    ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಗೊಳಿಸಲಾಗಿತ್ತು. ಇದರಿಂದ ಟ್ರಕ್‌ಟರ್ಮಿನಲ್ ನಿರ್ಮಾಣದಿಂದ ಸ್ಥಳವನ್ನು ಕಂದಾಯ ಸಚಿವರು ಖುದ್ದು ಪರಿಶೀಲನೆ ನಡೆಸಲಿ ಎಂದು ಪಟ್ಟು ಹಿಡಿದಿದ್ದ ರೇವಣ್ಣ, ಅಧಿಕಾರಿಗಳು ಒಪ್ಪಿದರೆ ಅಲ್ಲಿಯೇ ಟ್ರಕ್‌ಟರ್ಮಿನಲ್ ಕಾಮಗಾರಿ ನಡೆಸಲಿ ಎಂದು ಆಕ್ರೋಶ ಹೊರಹಾಕಿದ್ದರು. ಇದೀಗ ಕಂದಾಯ ಇಲಾಖೆಯಿಂದಲೇ ಕೆಂಚಟ್ಟಳ್ಳಿ ಗ್ರಾಮದ ಸರ್ವೆ ನಂಬರ್ 31 ರಲ್ಲಿ, 3 ಎಕರೆ 24 ಗುಂಟೆ ಸರ್ಕಾರಿ ಗೋಮಾಳವನ್ನು ಟ್ರಕ್‌ಟರ್ಮಿನಲ್ ಉದ್ದೇಶಕ್ಕೆ ಕಾಯ್ದಿರಿಸಿರುವ ಬಗ್ಗೆ ಸ್ಪಷ್ಟನೆ ನೀಡಲಾಗಿದೆ.

  • ಮದುವೆ, ಪಾರ್ಟಿ ಸಮಾರಂಭಕ್ಕೆ ಗನ್ ನಿಷೇಧ

    ಮದುವೆ, ಪಾರ್ಟಿ ಸಮಾರಂಭಕ್ಕೆ ಗನ್ ನಿಷೇಧ

    ಭೋಪಾಲ್: ಸೆಕ್ಷನ್ 144 ರ ಅಡಿಯಲ್ಲಿ ಮದುವೆ ಕಾರ್ಯಕ್ರಮಗಳು, ಪಾರ್ಟಿಗಳಲ್ಲಿ ಗನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಮಧ್ಯಪ್ರದೇಶದಲ್ಲಿ ಘೋಷಣೆ ಮಾಡಲಾಗಿದೆ.

    ಇತ್ತೀಚಿನ ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಮಾರಣಾಂತಿಕ ಘಟನೆಗಳು ಹೆಚ್ಚಾಗುತ್ತಿದೆ. ಈ ದೃಷ್ಟಿಯಿಂದ, ಮೊರೆನಾದ ಸೆಕ್ಷನ್ 144 ರ ಅಡಿಯಲ್ಲಿ ಮದುವೆಗಳು, ಪಾರ್ಟಿಗಳು ಇತ್ಯಾದಿ ಸಮಾರಂಭಗಳಿಗೆ ಬಂದೂಕು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ನಾಲ್ಕೆನೇ ಅಲೆ ತಡೆಯೋದು ನಮ್ಮ ಕೈಯಲ್ಲಿಯೇ ಇದೆ: ತಜ್ಞ ವೈದ್ಯರು 

    ಮೊರೆನಾ ಎಸ್‍ಪಿ ಅಶುತೋಷ್ ಬಗ್ರಿ ಅವರು ಈ ಕುರಿತು ಮಾತನಾಡಿದ್ದು, ಮೊರೆನಾ ಸೇರಿದಂತೆ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಇತ್ತೀಚೆಗೆ ಮಾರಣಾಂತಿಕ ಘಟನೆಗಳು ಹೆಚ್ಚಾಗುತ್ತಿದೆ. ಇದಕ್ಕೆ ಮುಖ್ಯಕಾರಣ ಸಮಾರಂಭಗಳಿಗೂ ಜನರು ಗನ್ ಮತ್ತು ಮಾರಣಾಂತಿಕ ಆಯುಧಗಳನ್ನು ತೆಗೆದುಕೊಂಡು ಹೋಗುತ್ತಿರುವುದು. ಈ ಹಿನ್ನೆಲೆ ಇದನ್ನು ತಡೆಯಬೇಕು ಎಂದು, ಯಾವುದೇ ರೀತಿಯ ಸಮಾರಂಭಗಳಿಗೆ ಗನ್ ತೆಗೆದುಕೊಂಡು ಹೋಗದಂತೆ ನಿಷೇಧ ಏರಲಾಗಿದೆ ಎಂದು ವಿವರಿಸಿದರು.

    ಇನ್ನೂ ಮುಂದೆ ಈ ರೀತಿಯ ಪ್ರಕರಣಗಳು ನಡೆದ್ರೆ, ಗನ್ ಪರವಾನಗಿ ರದ್ದಾಗುತ್ತೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ:  ಸಾಮೂಹಿಕ ಅತ್ಯಾಚಾರ ಮಾಡಿ ಮಹಿಳೆಯನ್ನು ಕೊಲೆಗೈದ ಪಾಪಿಗಳು

  • ಮುಂಬೈಯಲ್ಲಿ ಜ.15ರವರೆಗೆ 144 ಸೆಕ್ಷನ್ ಜಾರಿ – ಸಂಜೆ 5 ರಿಂದ ಬೆಳಗ್ಗೆ 5ರವರೆಗೆ ನಿರ್ಬಂಧ

    ಮುಂಬೈಯಲ್ಲಿ ಜ.15ರವರೆಗೆ 144 ಸೆಕ್ಷನ್ ಜಾರಿ – ಸಂಜೆ 5 ರಿಂದ ಬೆಳಗ್ಗೆ 5ರವರೆಗೆ ನಿರ್ಬಂಧ

    ಮುಂಬೈ: ಓಮಿಕ್ರಾನ್ ಪ್ರಕರಣಗಳು ದಿಢೀರ್ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಜ.15ರವರೆಗೆ 144 ಸೆಕ್ಷನ್ ವಿಸ್ತರಿಸಲಾಗಿದೆ.

    ಮುಂಬೈ ಪೊಲೀಸರು ಈ ಹಿಂದೆ ಡಿಸೆಂಬರ್ 30 ರಿಂದ ಜನವರಿ 7 ರವರೆಗೆ ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದರು. ಆದರೆ ಪ್ರತಿದಿನವೂ ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಕೇಸ್‍ಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಿದೆ.  ಇದನ್ನೂ ಓದಿ: ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ

    ಈ ಆದೇಶದ ಹಿನ್ನೆಲೆಯಲ್ಲಿ 5 ಅಥವಾ 5ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಆದೇಶ ಉಲ್ಲಂಘಿಸಿದರ ಮೇಲೆ ಕೇಸ್ ಹಾಕಲಾಗುತ್ತದೆ.

    ಮುಂಬೈ ಪೊಲೀಸರು ಈಗಾಗಲೇ ತೆರೆದ ಮೈದಾನಗಳು, ಬಿಚ್‍ಗಳು, ವಾಯುವಿಹಾರಗಳು, ಉದ್ಯಾನವನಗಳಿಗೆ ಸಂಬಧಪಟ್ಟಂತೆ ಯಾವುದೇ ಸಾರ್ವಜನಿಕ ಸ್ಥಳಗಳಿಗೆ ಸಂಜೆ 5 ರಿಂದ ಬೆಳಿಗ್ಗೆ 5 ರವರೆಗೆ ಭೇಟಿ ನೀಡುವುದನ್ನು ಸಹ ನಿಷೇಧಿಸಿದ್ದಾರೆ.

    ಬೃಹತ್ ಮುಂಬೈ ನಿಗಮ (ಬಿಎಮ್‍ಸಿ)ಯು ಇದೇ ಡಿಸೆಂಬರ್ 30 ರಿಂದ ಜನವರಿ 7 ರವರೆಗೆ ರೆಸ್ಟೋರೆಂಟ್, ಹೋಟೆಲ್, ಬಾರ್, ಪಬ್, ರೆಸಾರ್ಟ್, ಕ್ಲಬ್‍ಗಳಲ್ಲಿ ಹೊಸ ವರ್ಷದ ಆಚರಣೆಗಳು ಮತ್ತು ಯಾವುದೇ ಖಾಸಗಿ ಪಾರ್ಟಿ ಆಯೋಜನೆಗೆ ಸಂಪೂರ್ಣ ನಿಷೇಧವನ್ನು ವಿಧಿಸಿದೆ. ಇದನ್ನೂ ಓದಿ: ಚಿಟ್ ಫಂಡ್ ಹೆಸರಿನಲ್ಲಿ 6 ಕೋಟಿಗೂ ಹೆಚ್ಚು ಹಣ ದೋಖಾ – ಆರೋಪಿ ಅರೆಸ್ಟ್

    ಗುರುವಾರ 190 ಮಂದಿಯಲ್ಲಿ ಓಮಿಕ್ರಾನ್ ಪತ್ತೆಯಾಗಿತ್ತು. ಈ ಮೂಲಕ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 3,671 ಏರಿಕೆಯಾಗಿದೆ. ಕೋವಿಡ್ -19 ಪ್ರಕರಣಗಳಲ್ಲಿ ಶೇ.46% ಜಿಗಿತವನ್ನು ಕಂಡ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

    ಈಗಾಗಲೇ ಮಹಾರಾಷ್ಟ್ರ ಸರ್ಕಾರವು ಮದುವೆ, ಸಾಮಾಜಿಕ, ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳು ಮತ್ತು ಅಂತ್ಯಕ್ರಿಯೆಗಳಲ್ಲಿ ಜನರು ಭಾಗವಹಿಸುವುದಕ್ಕೆ  ನಿರ್ಬಂಧಗಳನ್ನು  ಹೇರಿದೆ.

    ಮದುವೆಗಳು ಅಥವಾ ಇತರ ಯಾವುದೇ ಸಾಮಾಜಿಕ, ರಾಜಕೀಯ ಅಥವಾ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ, ಪಾಲ್ಗೊಳ್ಳುವವರ ಗರಿಷ್ಠ ಸಂಖ್ಯೆಯನ್ನು 50 ವ್ಯಕ್ತಿಗಳಿಗೆ ಸೀಮಿತಗೊಳಿಸಲಾಗಿದೆ. ಅಂತ್ಯಕ್ರಿಯೆಯಲ್ಲಿ ಗರಿಷ್ಠ 20 ಜನರು ಭಾಗವಹಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

  • ಕೊರೊನಾ ಮಹಾಸ್ಫೋಟ- ಮುಂಬೈನಲ್ಲಿ ಮತ್ತೆ ಸೆಕ್ಷನ್ 144 ಜಾರಿ

    ಕೊರೊನಾ ಮಹಾಸ್ಫೋಟ- ಮುಂಬೈನಲ್ಲಿ ಮತ್ತೆ ಸೆಕ್ಷನ್ 144 ಜಾರಿ

    – ಸೆ.30ರ ವರೆಗೂ ನಿಷೇಧಾಜ್ಞೆ ಅನ್ವಯ

    ಮುಂಬೈ: ಮಹಾನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ಪೊಲೀಸರು ನಗರದಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಜಾರಿ ಮಾಡಿದ್ದು, ಇಂದು ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೆ ಬರಲಿದೆ.

    ಸೆ.30ರ ವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರದೇಶ, ಧಾರ್ಮಿಕ ಸ್ಥಗಳಲ್ಲಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಸದ್ಯ ಮಹಾರಾಷ್ಟ್ರದಲ್ಲಿ 2,97,506 ಕೊರೊನಾ ಪಾಸಿಟಿವ್ ಸಕ್ರಿಯ ಪ್ರಕರಣಗಳಿವೆ.

    ಮುಂಬೈ ಪೊಲೀಸ್ ಉಪ ಆಯುಕ್ತರು ಆದೇಶವನ್ನು ಜಾರಿ ಮಾಡಿದ್ದು, ಮಹಾ ನಗರ ಪಾಲಿಕೆ ಘೋಷಣೆ ಮಾಡಿರುವ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸಂಚಾರವನ್ನು ನಿಷೇಧ ಮಾಡಲಾಗಿದೆ. ಸೆಕ್ಷನ್ 144 ಜಾರಿ ಆಗಿರುವುದರಿಂದ ಹೊಸ ಲಾಕ್‍ಡೌನ್ ನಿಯಮಗಳು ಜಾರಿ ಆಗುವುದಿಲ್ಲ. ವಾಡಿಕೆಯಂತೆ ಇದನ್ನು ಜಾರಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಆದೇಶದಂತೆ ಅನ್‍ಲಾಕ್ 4.0 ಮಾರ್ಗಸೂಚಿಗಳು ಮುಂದುವರಿಯುತ್ತಿವೆ ಮುಂಬೈ ಪೊಲೀಸರು ತಿಳಿಸಿದ್ದಾರೆ.

    ಆದರೆ ಈಗಾಗಲೇ ಕಂಟೈನ್ಮೆಂಟ್ ಜಾರಿಯಲ್ಲಿರುವ ನಿರ್ಬಂಧಗಳು ಮುಂದುವರಿಯಲಿದ್ದು, ಅಗತ್ಯ ಚಟುವಟಿಕೆಗಳು, ಅಗತ್ಯ ಆಹಾರಗಳ ಪೂರೈಕೆ ಮತ್ತು ವೈದ್ಯಕೀಯ ಸೇವೆಗಳು ಲಭ್ಯವಿರಲಿದೆ. ಉಳಿದಂತೆ ಕಂಟೈನ್ಮೆಂಟ್ ಹೊರಗಿನ ಪ್ರದೇಶಗಳಲ್ಲಿ ತುರ್ತು ಕರ್ತವ್ಯಗಳು, ಅಗತ್ಯ ಸೇವೆ ಒದಗಿಸುವ ಸಂಸ್ಥೆಗಳು, ದಿನಸಿ ಅಂಗಡಿಗಳು, ಆಸ್ಪತ್ರೆ, ಫಾರ್ಮಾ ಸಂಬಂಧಿತ ಸಂಸ್ಥೆಗಳು, ದೂರವಾಣಿ ಮತ್ತು ಇಂಟರ್ ನೆಟ್ ಸೇವೆ, ವಿದ್ಯುತ್, ಪೆಟ್ರೋಲಿಯಂ, ಬ್ಯಾಂಕಿಂಗ್, ಐಟಿ, ಆಹಾರ ಸರಕು ಸಾಗಾಣೆ ವಾಹನ ಮತ್ತು ಮಾಧ್ಯಮಗಳಿಗೆ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗಿದೆ.

    ಕೋವಿಡ್ ನಿಯಂತ್ರಣಕ್ಕಾಗಿ ಮಹಾರಾಷ್ಟ್ರದ ಹಲವು ನಗರ ಮತ್ತು ಪಟ್ಟಣಗಳಲ್ಲಿ ಜನರು ಸ್ವಯಂ ಪ್ರೇರಿತ ಜನತಾ ಕಫ್ರ್ಯೂ ಜಾರಿ ಮಾಡುತ್ತಿದ್ದಾರೆ. ನಾಗಪುರದಲ್ಲೂ ವಾರಾಂತ್ಯಗಳಲ್ಲಿ ಜನತಾ ಕಫ್ರ್ಯೂ ವಿಧಿಸಲಾಗಿದೆ. ನಗರದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಪ್ರಕರಣ ಹಾಗೂ ಸಾವುಗಳನ್ನು ಗಮನದಲ್ಲಿಟ್ಟುಕೊಂಡು ಜನ ಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಬೇಡಿಕೆ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನಾಗ್ಪುರ ಮೇಯರ್ ಸಂದೀಪ್ ಜೋಶಿ ತಿಳಿಸಿದ್ದರು.

    ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 97,894 ಹೊಸ ಪ್ರಕರಣಗಳು ಮತ್ತು 1,132 ಸಾವುಗಳು ಸಂಭವಿಸಿವೆ. ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗುರುವಾರಕ್ಕೆ 51 ಲಕ್ಷವನ್ನು ದಾಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 51,18,253ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು 10,09,976 ಸಕ್ರಿಯ ಪ್ರಕರಣಗಳಿದ್ದು, 40,25,080 ಮಂದಿ ಮಾರಣಾಂತಿಕ ವೈರಸ್‍ನಿಂದ ಚೇತರಿಸಿಕೊಂಡಿದ್ದಾರೆ. ಸೋಂಕಿಗೆ ಇದುವರೆಗೂ 83,198 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿಯನ್ನು ಬಿಡುಗಡೆ ಮಾಡಿದೆ.

  • ರಾಮ ಮಂದಿರ ಶಿಲನ್ಯಾಸ- ನಾಳೆ ಬೆಂಗಳೂರು, ಮಂಗಳೂರಿನಲ್ಲಿ ಹೈ ಅಲರ್ಟ್

    ರಾಮ ಮಂದಿರ ಶಿಲನ್ಯಾಸ- ನಾಳೆ ಬೆಂಗಳೂರು, ಮಂಗಳೂರಿನಲ್ಲಿ ಹೈ ಅಲರ್ಟ್

    – ಸೆಕ್ಷನ್ 144 ಜಾರಿ, ಸಂಘಟನೆಗಳ ಮೇಲೆ ನಿಗಾ

    ಬೆಂಗಳೂರು/ಮಂಗಳೂರು: ಆಗಸ್ಟ್ 5ರಂದು ಅಂದರೆ ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯುತ್ತಿದ್ದು, ಪ್ರಧಾನಿ ಮೋದಿ ಸಹ ಭಾಗವಹಿಸುತ್ತೊದ್ದಾರೆ. ಹೀಗಾಗಿ ದೇಶದ ಪ್ರಮುಖ ನಗರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅದೇ ರೀತಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ.

    ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಕಟ್ಟೆಚ್ಚರವಹಿಸಲಾಗಿದ್ದು, ಇಂದು ರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ. ಅಲ್ಲದೆ ಕೆಲ ಸಂಘಟನೆ, ಹೋರಾಟಗಾರರ ಮೇಲೆ ನಿಗಾ ವಹಿಸಲಾಗಿದೆ. ಮೆರವಣಿಗೆ, ವಿಜಯೋತ್ಸವ, ಪ್ರತಿಭಟನೆಗೆ ಅನುಮತಿ ಇಲ್ಲ. ಕೋಮು ಸೌಹಾರ್ಧತೆಗೆ ಧಕ್ಕೆ ತರುವವರು ಕಂಡುಬಂದರೆ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಯಾವುದೇ ದೇವಸ್ಥಾನ, ಮಸೀದಿಗಳಲ್ಲಿ ಬಾವುಟ ಕಟ್ಟುವಂತಿಲ್ಲ. ಅಲ್ಲದೆ ಜನನಿಬಿಡ ಪ್ರದೇಶ, ಮಾಲ್, ದೇವಸ್ಥಾನ, ಮೆಜೆಸ್ಟಿಕ್, ಮಾರ್ಕೆಟ್ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ.

    ಹಿಂದೂಪರ ಸಂಘಟನೆ, ಹಿಂದೂಯೇತರ ಸಂಘಟನೆಗಳ ಮೇಲೆ ನಿಗಾ ವಹಿಸಲಾಗಿದೆ. ಸಿಎಆರ್ ಮತ್ತು ಕೆಎಸ್‍ಆರ್‍ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಒಟ್ಟಾರೆಯಾಗಿ ಸಿಲಿಕಾನ್ ಸಿಟಿಯಲ್ಲಿ ನಾಳೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

    ಇತ್ತ ಮಂಗಳೂರಿನಲ್ಲೂ ನಾಳೆ 144 ಸೆಕ್ಷನ್ ಜಾರಿಯಾಗಲಿದೆ. ಒಂದು ಸಂಘಟನೆಯಿಂದ ಸಂಭ್ರಮಾಚರಣೆಗೆ ಸಿದ್ಧತೆ ನಡೆದಿದ್ದು, ಇದಕ್ಕೆ ವಿರುದ್ಧವಾಗಿ ಮತ್ತೊಂದು ಸಂಘಟನೆಯಿಂದ ಪ್ರತಿಭಟನೆಗೆ ಪ್ಲ್ಯಾನ್ ನಡೆದಿದೆ. ಈ ಹಿನ್ನೆಲೆ ಮುಂದಾಗುನ ಅನಾಹುತ ತಡೆಗೆ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

  • ಕೊರೊನಾ ಭೀತಿ- ಕೋಲಾರದಲ್ಲಿ ಸೆಕ್ಷನ್ 144 ಜಾರಿ

    ಕೊರೊನಾ ಭೀತಿ- ಕೋಲಾರದಲ್ಲಿ ಸೆಕ್ಷನ್ 144 ಜಾರಿ

    – ಚಿಕನ್, ಮಟನ್, ಬಾರ್ ಬಂದ್
    – ಹೋಟೆಲ್, ದಿನಸಿ ಅಂಗಡಿ ಎಂದಿನಂತೆ

    ಕೋಲಾರ: ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೋಲಾರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಜಿಲ್ಲೆಯ ಗಡಿಯಲ್ಲಿ ಕೊರೊನಾ ಚೆಕ್ ಪೋಸ್ಟ್ ತೆರೆಯಲು ಸೂಚಿಸಿದ್ದಾರೆ.

    ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ, ಆದರೂ ಸೋಂಕು ಹರಡದಂತೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಜಿಲ್ಲಾಡಳಿತ ತೆಗೆದುಕೊಂಡಿದೆ. ಹೀಗಾಗಿ ಮುಂದಿನ ಆದೇಶದ ವರೆಗೆ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಹೀಗಾಗಿ ಜನರು ಒಟ್ಟಿಗೆ ಸೇರುವಂತಿಲ್ಲ, ಯಾವುದೇ ಸಂತೆ, ಜಾತ್ರೆ, ರಥೋತ್ಸವಗಳನ್ನು ಮಾಡುವಂತಿಲ್ಲ, ಸಭೆ ಸಮಾರಂಭಗಳನ್ನು ಕೂಡಾ ಮಾಡುವಂತಿಲ್ಲ, ಮಾಡಿದರೂ ಹೆಚ್ಚು ಜನ ಸೇರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಕೋಲಾರ ಆಂಧ್ರ ಮತ್ತು ತಮಿಳುನಾಡಿನ ಗಡಿ ಜಿಲ್ಲೆಯಾಗಿರುವ ಹಿನ್ನೆಲೆ ಆಂಧ್ರ ಮತ್ತು ತಮಿಳುನಾಡಿನ ಗಡಿ ಸಂಪರ್ಕ ಮಾಡುವ ಜಿಲ್ಲೆಯ 6 ಕಡೆಗಳಲ್ಲಿ ಕೊರೊನಾ ಚೆಕ್ ಪೋಸ್ಟ್‍ಗಳನ್ನು ಹಾಕಲಾಗಿದ್ದು, ಅಲ್ಲಿ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ. ಜೊತೆಗೆ ಈ ವರೆಗೆ ಜಿಲ್ಲೆಯಲ್ಲಿ ಹೊರ ದೇಶಗಳಿಂದ ಬಂದಿರುವ ಒಟ್ಟು 36 ಜನರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ. ಪ್ರತಿನಿತ್ಯ ಕೊರೊನಾಗೆ ಸಂಬಂದಿಸಿದಂತೆ ಸಭೆ ಕರೆಯಲಾಗುತ್ತಿದ್ದು, ನಿತ್ಯ ಜಿಲ್ಲೆಗೆ ಬರುವ, ಹೋಗುವವರ ಮೇಲೆ ನಿಗಾ ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

    ಕೋಲಾರ ಉಪ ಕಾರಾಗೃಹದಲ್ಲೂ ಖೈದಿಗಳ ಸಂದರ್ಶನ ರದ್ದು ಮಾಡಲಾಗಿದೆ. ಕೊರೊನಾ ಸೋಂಕು ಹರಡದಂತೆ ಜಿಲ್ಲೆಯಲ್ಲಿ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಈಗಾಗಲೇ ಜಿಲ್ಲೆಯ ಎಲ್ಲ ಪುರಸಭೆ ಹಾಗೂ ನಗರಸಭೆಗಳು ಮಾಂಸದಂಗಡಿಗಳು ಹಾಗೂ ಬೀದಿ ಬದಿ ವ್ಯಾಪಾರಿಗಳ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ.

    ಜನರಿಗೆ ತೊಂದರೆಯಾಗದಂತೆ ಹೋಟೆಲ್, ದಿನಸಿ ಅಂಗಡಿ, ಬೇಕರಿಗಳು ಸೇರಿದಂತೆ ದಿನ ಬಳಕೆ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಒಂದೆಡೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದೇ ರೀತಿ ಬೇಸಿಗೆಯ ತಾಪಮಾನ ಕೂಡಾ ಹೆಚ್ಚಾಗುತ್ತಿದ್ದು, ಜನ ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ. ಮನೆಯಲ್ಲೂ ಇರಲಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಕನಸು, ಮನಸಲ್ಲೂ ಕೊರೊನಾ ಕೊರೊನಾ ಎನ್ನುವಂತಾಗಿದೆ.

  • ಕುರಿ ಸಂತೆಗೆ ಸೆಕ್ಷನ್ 144 ಜಾರಿ

    ಕುರಿ ಸಂತೆಗೆ ಸೆಕ್ಷನ್ 144 ಜಾರಿ

    ಕೊಪ್ಪಳ: ಕುರಿ ಸಂತೆಗೂ ಸೆಕ್ಷನ್ 144 ಜಾರಿ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ಕೃಷಿ ಮಾರುಕಟ್ಟೆ ನಡೆಯುತ್ತಿದ್ದ ಕುರಿ ಸಂತೆಯನ್ನು ಈಗ ಶಿಫ್ಟ್ ಮಾಡಲಾಗಿದೆ. ಈ ಹಿಂದೆ 2014ರ ಲೋಕಸಭಾ ಚುನಾವಣೆ ವೇಳೆ ಕೂಕನಪಳ್ಳಿಯಿಂದ ಬೂದಗುಂಪಾ ಗ್ರಾಮಕ್ಕೆ ಶಿಫ್ಟ್ ಆಗಿದ್ದ ಕುರಿ ಸಂತೆಯನ್ನು ಇದೀಗ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಕೂಕನಪಳ್ಳಿಗೆ ಗ್ರಾಮಕ್ಕೆ ಶಿಫ್ಟ್ ಮಾಡಲಾಗಿದೆ.

    ಸಂಸದ ಸಂಗಣ್ಣ ಕರಡಿ ಸ್ವಗ್ರಾಮ ಕೂಕನಪಳ್ಳಿಗೆ ಶಿಫ್ಟ್ ಮಾಡಿದ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೊಪ್ಪಳ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಸೆಕ್ಷನ್ 144 ಜಾರಿಗೆ ಆದೇಶ ಹೊರಡಿಸಿದ್ದಾರೆ.

    ಈ ಹಿಂದೆ ಬೂದಗುಂಪ ಮತ್ತು ಕುಕನಪಳ್ಳಿ ಎರಡು ಕಡೆ ಕುರಿ ಸಂತೆ ನಡೆಯುತ್ತಿತ್ತು. ಆದರೆ ಇಂದಿನಿಂದ ಕುಕನಪಳ್ಳಿಯಲ್ಲಿ ಮಾತ್ರ ಪ್ರತಿ ಶುಕ್ರವಾರ ಕುರಿ ಸಂತೆ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

  • ನಿಷೇಧಾಜ್ಞೆ ಮಧ್ಯೆಯೂ ಪ್ರತಿಭಟನೆ: ರಾಯಚೂರಿನಲ್ಲಿ 50 ಕ್ಕೂ ಹೆಚ್ಚು ಜನರ ಬಂಧನ

    ನಿಷೇಧಾಜ್ಞೆ ಮಧ್ಯೆಯೂ ಪ್ರತಿಭಟನೆ: ರಾಯಚೂರಿನಲ್ಲಿ 50 ಕ್ಕೂ ಹೆಚ್ಚು ಜನರ ಬಂಧನ

    ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

    ರಾಯಚೂರಿನ ಭಗತ್ ಸಿಂಗ್ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಎಸ್ ಯುಸಿಐ ನ ನೂರಾರು ಜನ ಕಾರ್ಯಕರ್ತರು ಭಾಗವಹಿಸಿದ್ದರು. ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ಮಾಡಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿ ಪ್ರತಿಭಟನೆ ಮುಂದುವರಿಸಿದ್ದರು. ಪ್ರತಿಭಟನೆ ಮಾಡ್ತಿದ್ದ ಸುಮಾರು 50ಕ್ಕೂ ಅಧಿಕ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲೇ ಬೀಡುಬಿಟ್ಟಿದ್ದ ಪ್ರತಿಭಟನಾಕಾರರನ್ನ ಪೊಲೀಸರು ಚದುರಿಸಿದ್ದಾರೆ. ಬಂಧನಕ್ಕೊಳಗಾದ ಪ್ರತಿಭಟನಾಕಾರರನ್ನ ಸದರ್ ಬಜಾರ್ ಠಾಣಾ ಪೋಲಿಸರು ವಶಕ್ಕೆ ಪಡೆದಿದ್ದಾರೆ.

    ಪ್ರತಿಭಟನೆ ಮುನ್ಸೂಚನೆ ಹಿನ್ನೆಲೆ ಜಿಲ್ಲೆಯಲ್ಲಿ ಡಿಸೆಂಬರ್ 21ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ಹತ್ತು ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನ ತೆರೆಯಲಾಗಿದೆ. ಎಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

  • ಇಂದು ಸಹ ಸೆಕ್ಷನ್ 144 ಜಾರಿ – 244 ಜನರ ವಶಕ್ಕೆ ಪಡೆದ ಪೊಲೀಸ್

    ಇಂದು ಸಹ ಸೆಕ್ಷನ್ 144 ಜಾರಿ – 244 ಜನರ ವಶಕ್ಕೆ ಪಡೆದ ಪೊಲೀಸ್

    ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡುವ ಹಿನ್ನೆಲೆಯಲ್ಲಿ ಇಂದು ಸಹ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಮುಂದುವರಿಯಲಿದೆ. ಗುರುವಾರ ನಗರದಲ್ಲಿ ನಿಷೇಧಾಜ್ಞೆ ಇದ್ದರೂ ಹಲವಾರು ಮಂದಿ ಪ್ರತಿಭಟನೆ ನಡೆಸಿದರು.

    ಗುರುವಾರ 244 ಜನರನ್ನು ವಶಕ್ಕೆ ಪಡೆದಿದ್ದ ಪೊಲೀಸರು 8 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆ. ನಗರದಲ್ಲಿ ಇಂದು ಸಹ ಕೆಲವರು ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಳ ಮಾಡುಕೊಂಡಿರುವ ಪೊಲೀಸರು ಪ್ರತಿಭಟನೆ ಮಾಡದಂತೆ ಕರೆ ನೀಡಿದ್ದಾರೆ.

    ಪೊಲೀಸರ ಜೊತೆಗೆ ಕೆಎಸ್‍ಆರ್‍ಪಿ ಹಾಗೂ ಸಿಎಆರ್ ತುಕಡಿಗಳ ನಿಯೋಜನೆ ಮಾಡಿಕೊಂಡಿದ್ದು, ಟೌನ್ ಹಾಲ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಹೆಚ್ಚು ಪೊಲೀಸರನ್ನು ಭದ್ರತೆಗೆ ಬಳಸಿಕೊಂಡಿದ್ದಾರೆ.

    ಗುರುವಾರ ಬೆಳಗ್ಗೆ 10 ಗಂಟೆವರೆಗೆ ಸಹಜವಾಗಿದ್ದ ಸಿಲಿಕಾನ್ ಸಿಟಿ 10 ಗಂಟೆಯ ನಂತರ ನಿಷೇಧಜ್ಞೆಯ ನಡುವೆಯೂ ಸಾವಿರಾರು ಮಂದಿ ಟೌನ್‍ಹಾಲ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್‍ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ ಮಾಡಿದ್ದರು.

  • ಯಾದಗಿರಿ ನಗರದಲ್ಲಿ ಸೆಕ್ಷನ್ 144 ಜಾರಿ- ಪ್ರತಿಭಟನೆಗೆ ಕೈಜೋಡಿಸಲಿರುವ ಮಾಜಿ ಪ್ರಧಾನಿ ಎಚ್‍ಡಿಡಿ

    ಯಾದಗಿರಿ ನಗರದಲ್ಲಿ ಸೆಕ್ಷನ್ 144 ಜಾರಿ- ಪ್ರತಿಭಟನೆಗೆ ಕೈಜೋಡಿಸಲಿರುವ ಮಾಜಿ ಪ್ರಧಾನಿ ಎಚ್‍ಡಿಡಿ

    ಯಾದಗಿರಿ: ನಗರ ಪಿಎಸ್‍ಐ ಬಾಪುಗೌಡರನ್ನು ಅಮಾನತು ಮಾಡುವಂತೆ, ಕಳೆದ ಎರಡು ದಿನಗಳ ಜೆಡಿಎಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾರ್ಯಕರ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬುಧವಾರ ಕೈಜೋಡಿಸಲಿದ್ದಾರೆ.

    ಯಾದಗಿರಿ ನಗರ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಯಲಿದ್ದು, ಆದರೆ ಭದ್ರತಾ ದೃಷ್ಟಿಯಿಂದ ದೇವೇಗೌಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಸೂಕ್ತವಲ್ಲ ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲಾಡಳಿತ ಮನವಿಗೆ ಸೊಪ್ಪು ಹಾಕದ ದೇವೇಗೌಡರು ಪ್ರತಿಭಟನೆಯಲ್ಲಿ ಭಾಗವಹಿಸುವುದು ಶತಸಿದ್ಧ ಎಂದು ಕಾರ್ಯಕರ್ತರ ಮುಖಾಂತರ ಜಿಲ್ಲಾಡಳಿತಕ್ಕೆ ಸಂದೇಶ ಕಳುಹಿಸಿದ್ದಾರೆ.

    ರೈಲಿನ ಮುಖಾಂತರ ಬುಧವಾರ ಬೆಳಿಗ್ಗೆ 6:40ಕ್ಕೆ ಯಾದಗಿರಿಗೆ ಆಗಮಿಸಲಿರುವ ದೇವೇಗೌಡರು, ಕೆಲ ಹೊತ್ತು ಸರ್ಕಿಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಅಪಾರ ಜೆಡಿಎಸ್ ಕಾರ್ಯಕರ್ತರೊಂದಿಗೆ ನಗರ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಲಿದ್ದಾರೆ. ಇನ್ನೂ ನಾಳೆ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಿ 144 ಸೆಕ್ಷನ್ (ನಿಷೇಧಾಜ್ಞೆ) ಜಾರಿ ಮಾಡಿದ್ದಾರೆ.

    ಎಚ್‍ಡಿಡಿ ಹೇಳಿದ್ದೇನು?:  ಸಿಎಂ ಬಿಎಸ್‍ವೈ ಅವರ ಕಾರಿಗೆ ತಡೆಯೊಡ್ಡಿ ಪ್ರತಿಭಟನೆ ನಡೆಸಿದ ಯಾದಗಿರಿ ಪಕ್ಷದ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಹಿಂಸೆ ನೀಡಲಾಗುತ್ತಿದೆ. ಸಿಎಂ ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ನೀಡಿದ ಅನುದಾನವನ್ನು ಕಡಿತ ಮಾಡಿದ್ದ ಪರಿಣಾಮ ಕಾರ್ಯಕರ್ತರು ಸಿಎಂ ಅವರನ್ನು ಪ್ರಶ್ನೆ ಮಾಡಲು ತೆರಳಿದ್ದರು. ಈ ವೇಳೆ ಸಿಎಂ ಅವರ ಕಾರನ್ನು ತಡೆದಿದ್ದಾರೆ. ಈ ಕಾರಣಕ್ಕೆ ಪ್ರಕರಣ ದಾಖಲಿಸಿ ಅವರಿಗೆ ಕಾರ್ಯಕರ್ತರಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಆದ್ದರಿಂದ ಕಾರ್ಯರ್ಕತರಿಗೆ ಧೈರ್ಯ ಹೇಳುವ ಸಾಲುವಾಗಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಎಚ್‍ಡಿ ದೇವೇಗೌಡ ಅವರು ಹೇಳಿದರು.