Tag: ಸೆಲೆಬ್ರೇಷನ್

  • ಇಂದು ಮಧ್ಯರಾತ್ರಿ 12ರವರೆಗೂ ಬಿಎಂಟಿಸಿ ಸಂಚಾರ

    ಇಂದು ಮಧ್ಯರಾತ್ರಿ 12ರವರೆಗೂ ಬಿಎಂಟಿಸಿ ಸಂಚಾರ

    ಬೆಂಗಳೂರು: ಇಡೀ ಬೆಂಗಳೂರು ಹೊಸ ವರ್ಷವನ್ನು ಬರಮಾಡಿಕೊಳ್ಳಲು ತುದಿಗಾಲ ಮೇಲೆ ನಿಂತಿದೆ. ಸಿಲಿಕಾನ್ ಸಿಟಿಯ ಬಹುತೇಕ ಮಂದಿ ಹೊಸ ವರ್ಷ ಆಚರಣೆ ಮಾಡಲು ಪ್ಲಾನ್ ಮಾಡ್ತಿದ್ದಾರೆ. ಆದರೆ ಮಧ್ಯರಾತ್ರಿ ಸೆಲೆಬ್ರೇಷನ್ ಮುಗಿಸಿ ಮನೆ ತಲುಪುವುದು ಹೇಗೆ ಎಂಬ ಚಿಂತೆ ಬಹುತೇಕರಲ್ಲಿ ಕಾಡುತ್ತೆ. ಹೀಗಾಗಿ ಇಂದು ಮಧ್ಯರಾತ್ರಿ 12 ಗಂಟೆವರೆಗೂ ಬಿಎಂಟಿಸಿ ತನ್ನ ಸೇವೆ ವಿಸ್ತರಿಸಿದೆ. ಈಗಾಗಲೇ ಬಿ.ಎಂ.ಆರ್.ಸಿ.ಎಲ್ ತನ್ನ ಸೇವೆಯನ್ನು 12 ಗಂಟೆವರೆಗೂ ವಿಸ್ತರಿಸಿದ್ದು, ಪ್ರಮುಖ ಮೆಟ್ರೋ ನಿಲ್ದಾಣಗಳಿಂದ ವಿವಿಧ ಭಾಗಗಳಿಗೆ ಬಿಎಂಟಿಸಿ ಸಾರಿಗೆ ಸೌಲಭ್ಯ ನೀಡುತ್ತಿದೆ.

    ಹೆಚ್ಚಿನ ಪ್ರಮಾಣದಲ್ಲಿ ಜನ ಸೇರುವ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಕೆಂಪೇಗೌಡ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಸೇವೆ ಒದಗಿಸಲಾಗುವುದೆಂದು ಬಿಎಂಟಿಸಿ ತಿಳಿಸಿದೆ. ಬಿಎಂಟಿಸಿ ಪ್ರಸ್ತುತ ನಗರದ ವಿವಿಧ 143 ಸ್ಥಳಗಳಿಗೆ ರಾತ್ರಿ ವೇಳೆ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನು ಓದಿ: ಡಿ.31ರಂದು ಮಧ್ಯರಾತ್ರಿ 2ರವರೆಗೂ ಮೆಟ್ರೋ ಸೇವೆ ವಿಸ್ತರಣೆ

    ವಿಜಯನಗರ ಮೆಟ್ರೋ ನಿಲ್ದಾಣದಿಂದ ಬನಶಂಕರಿ ಮೆಟ್ರೋ ನಿಲ್ದಾಣ, ಉಲ್ಲಾಳ ಉಪನಗರ, ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿ, ಬಿ.ಎಂ.ಆರ್.ಸಿ.ಎಲ್ 5 ನೇ ಹಂತ, ಬನಶಂಕರಿ ಮೆಟ್ರೋ ನಿಲ್ದಾಣದಿಂದ ಕಗ್ಗಲೀಪುರ, ಜಯನಗರ ಮೆಟ್ರೋ ನಿಲ್ದಾಣದಿಂದ ವಡ್ಡರಹಳ್ಳಿ ಹಾಗೂ ಜಂಬೂ ಸವಾರಿ ದಿಣ್ಣೆ, ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣದಿಂದ ವಿದ್ಯಾರಣ್ಯಪುರ, ಜಾಲಹಳ್ಳಿ ಮೆಟ್ರೋ ನಿಲ್ದಾಣದಿಂದ ವಿದ್ಯಾರಣ್ಯಪುರ, ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಚಿಕ್ಕಬಾಣಾಪುರ, ಎಸ್.ವಿ ಮೆಟ್ರೋ ನಿಲ್ದಾಣದಿಂದ ಕೆ.ಆರ್.ಪುರಂ ಹಾಗೂ ಸೆಂಟ್ರಲ್ ಸಿಲ್ಕ್ ಬೋರ್ಡ್ ವರೆಗೆ ಬಿಎಂಟಿಸಿ ಬಸ್ ಗಳು ಸಂಚಾರ ಮಾಡಲಿವೆ.

  • ನಂದಿಗಿರಿಧಾಮದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಬ್ರೇಕ್…!

    ನಂದಿಗಿರಿಧಾಮದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಬ್ರೇಕ್…!

    ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದ್ದು, ಡಿಸೆಂಬರ್ 31ರ ಸಂಜೆ 4 ಗಂಟೆಯಿಂದ 2019ರ ಹೊಸ ವರ್ಷದ ಜನವರಿ 1ರ ಬೆಳಗ್ಗೆ 8 ಗಂಟೆಯವರೆಗೂ ನಂದಿಗಿರಿಧಾಮ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

    ಪ್ರತಿ ವರ್ಷದಂತೆ ಈ ವರ್ಷವೂ ಪ್ರವಾಸಿಗರ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಈ ಆದೇಶ ಹೊರಡಿಸಿದೆ. 2019ರ ಜನವರಿ 1ರ ಬೆಳಗ್ಗೆ 8 ಗಂಟೆ ತರುವಾಯ ಪ್ರವಾಸಿಗರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಮುಕ್ತ ಅವಕಾಶವಿದೆ. ನಂದಿಗಿರಿಧಾಮದ ಜೊತೆ ಜೊತೆಗೆ ಪ್ರಮುಖ ಪ್ರವಾಸಿ ತಾಣಗಳಾದ ಸ್ಕಂದಗಿರಿ ಬೆಟ್ಟ ಹಾಗೂ ಆವಲಬೆಟ್ಟದಲ್ಲೂ ಸಹ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ತೋಟದ ಮನೆಯಲ್ಲಿ ಗಾಂಜಾ ಗಮ್ಮತ್ತು? ನಶೆಯಲ್ಲಿ ಯುವಕ-ಯುವತಿಯರ ತೇಲಾಟ!

    ಅಂಕು-ಡೊಂಕಿನ ನಂದಿಗಿರಿಧಾಮದ ರಸ್ತೆಯಲ್ಲಿ ಅಪಘಾತಗಳಾಗುವ ಸಂಭವ, ಮದ್ಯ ಸೇವಿಸಿದ ಅಮಲಲ್ಲಿ ಅನಾಹುತಗಳ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಂದಿಗಿರಿಧಾಮದ ಪ್ರವೇಶವನ್ನು ನಿಷೇಧಿಸಲಾಗಿದೆ. ಇದಲ್ಲದೆ ನಂದಿಗಿರಿಧಾಮದಲ್ಲಿನ ವಸತಿ ಗೃಹಗಳ ಬುಕ್ಕಿಂಗ್‍ಗೆ ಸಹ ಅವಕಾಶವಿಲ್ಲವಾಗಿದ್ದು, ಡಿಸೆಂಬರ್ 31ರಂದು ನಂದಿಗಿರಿಧಾಮದ ವಸತಿ ಗೃಹಗಳಲ್ಲೂ ಸಹ ಯಾರೂ ತಂಗುವಂತಿಲ್ಲ. ಇದನ್ನೂ ಓದಿ: ಹಚ್ಚಹಸಿರಿನ ಮಧ್ಯೆ ಹಾಲ್ನೊರೆ ಸೂಸುತ್ತಾ ಜುಳು-ಜುಳು ಹರೀತಿದೆ ಇರ್ಪು ಫಾಲ್ಸ್

    ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಎಸ್‍ಪಿ ಕಾರ್ತಿಕ್ ರೆಡ್ಡಿ, “ಜಿಲ್ಲೆಯಾದ್ಯಾಂತ ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರೆಗೂ ಕಡಿವಾಣ ಹಾಕಿ ದಂಡ ವಿಧಿಸೋಕೆ ಜಿಲ್ಲೆಯ ಪೊಲೀಸರು ಸಜ್ಜಾಗಿರುತ್ತಾರೆ. ನಿಗದಿಪಡಿಸಿದ ಸಮಯದ ನಂತರವೂ ಮದ್ಯ ಮಾರಾಟ ಮಾಡಿದರೆ ಬಾರ್‍ಗಳ ವಿರುದ್ಧವೂ ಕ್ರಮ ಕೈಗೊಳ್ಳುಲಾಗುವುದು” ಎಂದು ಹೇಳಿದರು. ಇದನ್ನೂ ಓದಿ: ಹೊಸ ವರ್ಷದಂದು ಪ್ರವಾಸಿ ತಾಣ ಮುತ್ತತ್ತಿಗೆ ನೋ ಎಂಟ್ರಿ

    ಇದಲ್ಲದೆ ಹೊಸ ವರ್ಷಾಚರಣೆಗೆ ಪಾರ್ಟಿ ಆಯೋಜನೆ ಮಾಡುವಂತವರು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರಿಂದ ಅನುಮತಿ ಪತ್ರ ಪಡೆದು ಪಾರ್ಟಿ ಆಯೋಜನೆ ಮಾಡಬೇಕಿದ್ದು, ಮದ್ಯ ಸರಬರಾಜು ಸಹ ಮಾಡುತ್ತಿದ್ರೆ ಅದಕ್ಕೂ ಸಂಬಂಧಪಟ್ಟ ಅಬಕಾರಿ ಇಲಾಖೆಯಿಂದ ಅನುಮತಿ ಕಡ್ಡಾಯ ಅಂತ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv