ಕೋಲಾರ: ಸೇತುವೆ (Bridge) ಮೇಲಿಂದ ಕಾರೊಂದು (Car) ಕೆಳಗೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಕೋಲಾರ (Kolar) ಜಿಲ್ಲೆ ಕೆಜಿಎಫ್‌ನ (KGF) ಕೃಷ್ಣಾವರಂ ಬಳಿ ನಡೆದಿದೆ.
ಕರ್ಣ (48) ಮೃತ ವ್ಯಕ್ತಿ. ಫೋರ್ಡ್ ಇಕೋಸ್ಪೋರ್ಟ್ ಕಾರು ಸೇತುವೆ ಮೇಲಿಂದ ಬಿದ್ದು ಘಟನೆ ಸಂಭವಿಸಿದೆ. ಘಟನೆಯಲ್ಲಿ ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: `ಶಕ್ತಿ’ ಚಂಡಮಾರುತ ಎಫೆಕ್ಟ್ – ಗಡಿಜಿಲ್ಲೆ ಬೀದರ್‌ನಲ್ಲಿ ವರುಣನ ಅಬ್ಬರ ಜೋರು
ಮೈಸೂರು: ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಾರಿ (Lorry) ಚಲಿಸುತ್ತಿದ್ದಾಗಲೇ ಸೇತುವೆ ಕುಸಿದುಬಿದ್ದ ಘಟನೆ ಮೈಸೂರು (Mysuru) ಜಿಲ್ಲೆ ಸರಗೂರು ತಾಲೂಕಿನ ಇಟ್ನಾ ಸಮೀಪದ ಕಬಿನಿ ಬಲದಂಡೆ ನಾಲೆ ಬಳಿ ನಡೆದಿದೆ.
ಪುರದಕಟ್ಟೆ ಮಾರ್ಗವಾಗಿ ನಂಜನಗೂಡಿಗೆ ಭತ್ತ (Paddy) ಹೊತ್ತೊಯ್ಯುತ್ತಿದ್ದ ಲಾರಿ ಸೇತುವೆ ಮೇಲೆ ಸಾಗುತ್ತಿದ್ದಾಗಲೇ ಹಠಾತ್ ಆಗಿ ಸೇತುವೆ ಕುಸಿದಿದೆ. ಇದನ್ನೂ ಓದಿ: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ
ಲಾರಿಯಲ್ಲಿದ್ದ ಲೋಡರ್ಸ್ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಬಿನಿ ಬಲದಂಡೆ ನಿರ್ಮಾಣವಾದಾಗ ಕಟ್ಟಿದ್ದ ಸೇತುವೆ ಇದ್ದಾಗಿದ್ದು ಇತ್ತೀಚೆಗೆ ಸುರಿಯುತ್ತಿರುವ ಮಳೆಯಿಂದಾಗಿ ಶಿಥಿಲಗೊಂಡಿತ್ತು. ಇದನ್ನೂ ಓದಿ: ಹಾವೇರಿ | ಕಾಡಿನಿಂದ ನಾಡಿಗೆ ಬಂದು ಮನೆಯಲ್ಲಿ ಅವಿತ ಚಿರತೆ
ಬೆಳಗಾವಿ: ನಿರಂತರ ಮಳೆಯ (Rain) ಹಿನ್ನೆಲೆ ತಾತ್ಕಾಲಿಕ ಸೇತುವೆ ಕೊಚ್ಚಿಹೋಗಿ ಬೆಳಗಾವಿ-ಗೋವಾ (Belagavi-Goa) ರಸ್ತೆ ಸಂಚಾರ ಮತ್ತೆ ಬಂದ್ ಆಗಿದೆ.
ಖಾನಾಪುರ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿದೆ. ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುತ್ತಿರುವ ಹಿನ್ನೆಲೆ ಸೇತುವೆ ಪಕ್ಕ ವಾಹನ ಓಡಾಟಕ್ಕೆ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿತ್ತು. ಧಾರಾಕಾರ ಮಳೆಗೆ ರಸ್ತೆ ಕೊಚ್ಚಿ ಹೋಗಿದೆ. ಇದನ್ನೂ ಓದಿ: ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಭೀಕರ ಹತ್ಯೆ
ರಾಮನಗರ: ಫೆಂಗಲ್ ಚಂಡಮಾರುತದ (Fengal Cyclone) ಎಫೆಕ್ಟ್ ರಾಮನಗರ (Ramanagara) ಜಿಲ್ಲೆಗೂ ತಟ್ಟಿದ್ದು, ಕಳೆದ ಎರಡು ದಿನಗಳಿಂದ ಸುರಿಯುತ್ತಿರೋ ನಿರಂತರ ಮಳೆಗೆ ಮಂಚನಬೆಲೆ ಜಲಾಶಯದ ಸಮೀಪದ ತಾತ್ಕಾಲಿಕ ಸೇತುವೆ (Bridge) ಬಿರುಕು ಬಿಟ್ಟಿದೆ.
ಎರಡು ವರ್ಷಗಳ ಹಿಂದೆ ಭಾರೀ ಮಳೆಗೆ ಸೇತುವೆ ಕೊಚ್ಚಿ ಹೋಗಿದ್ದ ಹಿನ್ನೆಲೆ ಪರ್ಯಾಯವಾಗಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ ನಿರಂತರ ಮಳೆ ಹಿನ್ನೆಲೆ ತಾತ್ಕಾಲಿಕ ಸೇತುವೆ ಕೂಡಾ ಬಿರುಕು ಬಿಟ್ಟಿದೆ. ಅಪಾಯಕಾರಿ ಸೇತುವೆ ಮೇಲೆ ವಾಹನಗಳು ಸಂಚಾರ ಮಾಡುತ್ತಿವೆ. ಇನ್ನೂ ಈ ಬಗ್ಗೆ ‘ಪಬ್ಲಿಕ್ ಟಿವಿ’ಯಲ್ಲಿ ವರದಿ ಬಂದ ಹಿನ್ನೆಲೆ ಎಚ್ಚೆತ್ತ ನೀರಾವರಿ ಇಲಾಖೆ ಅಧಿಕಾರಿಗಳು ಬಿರುಕು ಬಿಟ್ಟ ತಾತ್ಕಾಲಿಕ ಸೇತುವೆಯನ್ನ ದುರಸ್ತಿ ಮಾಡಿದ್ದಾರೆ. ಇದನ್ನೂ ಓದಿ: ತಮಿಳುನಾಡು| ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಬಂದ ಸಚಿವರ ಮೇಲೆ ಕೆಸರೆರಚಿ, ಕಲ್ಲು ತೂರಿ ಜನಾಕ್ರೋಶ
ಕುಸಿದಿದ್ದ ಭಾಗಗಳಿಗೆ ಜೆಸಿಬಿ ಯಂತ್ರದ ಮೂಲಕ ಮಣ್ಣು ಹಾಕಿ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇನ್ನೂ ಈ ಭಾಗದಲ್ಲಿ ಶಾಶ್ವತ ಸೇತುವೆ ನಿರ್ಮಾಣ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಯಚೂರು | ರಸ್ತೆ ದಾಟುವಾಗ ಸರ್ಕಾರಿ ಬಸ್ ಹರಿದು ಪಾದಚಾರಿ ಸಾವು
ತುಮಕೂರು: ಸೇತುವೆ (Bridge) ಬಳಿ ಈಜಲು(Swim) ಹೋಗಿ ಯುವಕನೋರ್ವ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆ ಮಧುಗಿರಿ (Madhugiri) ತಾಲೂಕಿನ ಪುರವರ ಬಳಿಯ ತಗ್ಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಕೆಲ ತಿಂಗಳ ಹಿಂದಷ್ಟೇ ಚೆಕ್ ಡ್ಯಾಂ ನಿರ್ಮಿಸಲಾಗಿತ್ತು. ಚೆಕ್ ಡ್ಯಾಂ ಕಳಪೆ ಎಂದು ಗುತ್ತಿಗೆದಾರನ ವಿರುದ್ಧ ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಯುವಕನ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಸಂಜೆಯಿಂದ ಹುಡುಕಾಟ ನಡೆಸಿದರೂ ಯುವಕನ ಮೃತದೇಹ ಪತ್ತೆಯಾಗಿಲ್ಲ. ಇದನ್ನೂ ಓದಿ: ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದ ಕಾರು ಅಪಘಾತ – ಯುವಕ ಸಾವು
ಕೇರಳ: ವಯನಾಡ್‌ನಲ್ಲಿ (Wayanad Landslide) ಸರಣಿ ಭೂಕುಸಿತಕ್ಕೆ ಅಪಾರ ಪ್ರಮಾಣದ ಜೀವ ಹಾನಿಯಾಗಿದೆ. ಮುಂಡಕ್ಕೈನಲ್ಲಿ ರಕ್ಷಣಾಕಾರ್ಯ ಮುಂದುವರೆದಿದ್ದು, ಮುಂಡಕ್ಕೈ ಮತ್ತು ಚೂರಲ್ಮಾಲಕ್ಕೆ ಭಾರತೀಯ ಸೇನೆಯಿಂದ ತಾತ್ಕಾಲಿಕ ಸೇತುವೆಯನ್ನ ನಿರ್ಮಾಣ ಮಾಡಲಾಗಿದೆ.
ಕ್ಷಿಪ್ರಗತಿಯ ಸೇತುವೆ ನಿರ್ಮಾಣ ಕಾರ್ಯಾಚರಣೆಯಲ್ಲಿ ಮಹಿಳಾ ಸೇನಾಧಿಕಾರಿಯ ಸಾಹಸಗಾಥೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. 20 ಘಂಟೆಯಲ್ಲಿ 190 ಅಡಿ ಬೈಲಿ ಸೇತುವೆಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಿಳಾ ಸೇನಾಧಿಕಾರಿ ಮೇಜರ್ ಸೀತಾ ಅಶೋಕ್ ಶೆಲ್ಕೆ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಸೈನಿಕರಿಗೆ ಸೆಲ್ಯೂಟ್: ಕೇವಲ 16 ಗಂಟೆಯಲ್ಲಿ 24 ಟನ್ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!
ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್, ಬೆಂಗಳೂರಿನಿಂದ ಈ ಸೇತುವೆ ನಿರ್ಮಾಣವಾಗಿತ್ತು. ಭಾರತೀಯ ಸೇನೆ ಕರ್ನಾಟಕ-ಕೇರಳ ಉಪ ವಿಭಾಗದ 200ಕ್ಕೂ ಹೆಚ್ಚು ಸೈನಿಕರು ಸೇತುವೆ ನಿರ್ಮಾಣ ಕಾಮಗಾರಿಯಲ್ಲಿ ಭಾಗಿಯಾಗಿದ್ದರು. ಸೀತಾ ಅಶೋಕ್ ಶೆಲ್ಕೆ, ಬ್ರಿಡ್ಜ್ ಆಪರೇಷನ್‌ನ ನೇತೃತ್ವ ವಹಿಸಿಕೊಂಡಿದ್ದರು.
ಬುದುವಾರ ರಾತ್ರಿ 9:30 ಕ್ಕೆ ಆರಂಭವಾಗಿ ಗುರುವಾರ ಸಂಜೆ 5:30ಕ್ಕೆ ಬ್ರಿಡ್ಜ್ ಕಾಮಗಾರಿ ಮುಗಿದಿತ್ತು. ಕೆಲವೇ ಗಂಟೆಗಳಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ, ಮುಂಡಕ್ಕೈ ಚೂರಾಲ್ಮಾಲ ಗ್ರಾಮಸ್ಥರನ್ನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಯ್ತು. ಇನ್ನೂ ದೆಹಲಿ, ಬೆಂಗಳೂರಿನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ 17 ಟ್ರಕ್‌ಗಳ ಮೂಲಕ ವಯನಾಡ್‌ಗೆ ಸೇತುವೆ ನಿರ್ಮಾಣಕ್ಕೆ ಸಾಮಗ್ರಿಗಳನ್ನ ತರಲಾಗಿತ್ತು. ಇದನ್ನೂ ಓದಿ: Wayanad Landslide | ಸರ್ಕಾರದ ಅನುಮತಿ ಇಲ್ಲದೇ ಅಭಿಪ್ರಾಯ ಹೇಳುವಂತಿಲ್ಲ: ವಿಜ್ಞಾನಿಗಳಿಗೆ ಕೇರಳ ಸರ್ಕಾರ ನಿರ್ಬಂಧ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ನಡುವೆ ಕುಮಾರಧಾರಾ ನದಿ ಮಧ್ಯೆ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ರಕ್ಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳದ ಪುಳಿಕುಕ್ಕು ಬಳಿ ಹರಿಯುತ್ತಿರುವ ಕುಮಾರಧಾರಾ ನದಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ರವಿಕುಮಾರ್ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.
ರವಿಕುಮಾರ್ ಅವರು ನದಿ ಮಧ್ಯೆ ಪೊದೆ ಹಿಡಿದುಕೊಂಡು ನಿಂತಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಈ ವಿಚಾರವನ್ನು ಕೂಡಲೇ ಅವರು ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಕಡಬ ಎಸ್‍ಐ ಅಭಿನಂದನ್ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಪಶ್ಚಿಮ ಬಂಗಾಳ ಮೂಲದ ವಿದ್ಯಾರ್ಥಿನಿ ನೇಣಿಗೆ ಶರಣು
ಕಡಬ ಪೊಲೀಸ್, ಅಗ್ನಿಶಾಮಕ ದಳ, ಶೌರ್ಯ ತಂಡದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ವ್ಯಕ್ತಿಯನ್ನು ರಕ್ಷಣೆ ಮಾಡಿ ಕಡಬ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಕಡಬ ಆಸ್ಪತ್ರೆಗೆ ತಹಶಿಲ್ದಾರ್ ಪ್ರಭಾಕರ್ ಖಜೂರೆ ಭೇಟಿ ನೀಡಿದ್ದಾರೆ.
ಮಂಗಳೂರು: ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಕುಸಿದು ಬಿದ್ದು (Bridge Collapse) 7 ಮಂದಿಗೆ ಗಾಯಗಳಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುಣಚ ಗ್ರಾಮದಲ್ಲಿ ನಡೆದಿದೆ.
ಪುಣಚ ಗ್ರಾಮದ ಬರೆಂಜ-ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಈ ಅವಘಡ ಸಂಭವಿಸಿದೆ. ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರಿಟ್ ಮಿಕ್ಸ್ ಹಾಕುತ್ತಿದ್ದಾಗ ತಳಭಾಗದ ರಾಡ್ ಜಾರಿ ಮೇಲ್ಭಾಗದ ಸಂಪೂರ್ಣ ಕಾಂಕ್ರಿಟ್ ಸ್ಲ್ಯಾಬ್ ಕುಸಿತಗೊಂಡಿದೆ.
ಸೇತುವೆ ಸಾಮಾಗ್ರಿಯ ಮಧ್ಯೆ ಓರ್ವ ಕಾರ್ಮಿಕ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಉಳಿದ ಆರು ಮಂದಿಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ (Puttur Government Hospital) ಕರೆದೊಯ್ದು ಚಿಕಿತ್ಸೆ ನಿಡಲಾಗುತ್ತಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ – ಏ.18 ರಿಂದ ವಿವಿಧೆಡೆ ಮಳೆ
ಸಮುದ್ರ ಅಥವಾ ನದಿಗಳು ಇದ್ದಲ್ಲಿ ಸಾಧಾರಣವಾಗಿ ಸೇತುವೆಗಳು (Bridge) ಇದ್ದೇ ಇರುತ್ತವೆ. ಇದನ್ನು ಜನರನ್ನು ಸುರಕ್ಷಿತವಾಗಿ ಒಂದು ತುದಿಯಿಂದ ಇನ್ನೊಂದು ತುದಿಗೆ ತಲುಪಿಸುವುದರ ಜೊತೆಗೆ ಬೇರೆ ಬೇರೆ ಜಾಗಗಳಿಗೆ ಸಂಪರ್ಕ ಸಾಧಿಸುವ ಸಲುವಾಗಿ ನಿರ್ಮಿಸಲಾಗುತ್ತದೆ. ಅಲ್ಲದೇ ಸರಕು ಸಾಗಣೆಗಳಿಗೂ ಸೇತುವೆ ಸಹಾಯವಾಗುತ್ತದೆ. ಆದರೆ ಇತ್ತೀಚಿಗೆ ಕೆಲವೊಂದು ಸೇತುವೆಗಳು ಕುಸಿದು ಬಿದ್ದು ಅಪಾರ ನಷ್ಟವುಂಟುಮಾಡಿದ್ದಲ್ಲದೇ ಅನೇಕ ಜನರು ಇದರಿಂದ ಜೀವತೆತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಅಮೆರಿಕದ ಬಾಲ್ಟಿಮೋರ್‌ನಲ್ಲಿ ಕಂಟೈನರ್ ಹಡಗೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬೃಹತ್ ಗಾತ್ರದ ಸೇತುವೆ ಕುಸಿದು (Bridge Collapse) ಬಿದ್ದು 6 ಜನರು ಸಾವನ್ನಪ್ಪಿದ್ದಾರೆ. ಅದೇ ರೀತಿ ಈ ಹಿಂದೆ ನಡೆದ ಕೆಲವೊಂದು ಸೇತುವೆ ಕುಸಿತದ ಬಗ್ಗೆ ಇಲ್ಲಿ ವಿವರಿಸಲಾಗಿದೆ.
2024- ಬಾಲ್ಟಿಮೋರ್ ಸೇತುವೆ ಕುಸಿತ: ಇಲ್ಲಿನ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದ ಘಟನೆಯಲ್ಲಿ ನಾಪತ್ತೆಯಾಗಿದ್ದ 8 ಜನರ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು 6 ಜನ ಸಾವನ್ನಪ್ಪಿರುವುದಾಗಿ ಶಂಕೆ ವ್ಯಕ್ತವಾಗಿದೆ.
ಸರಕು ಸಾಗಣೆ ಹಡಗೊಂದು ಮಂಗಳವಾರ ಇಂಜಿನ್ ವೈಫಲ್ಯದಿಂದ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆಗೆ ಡಿಕ್ಕಿ ಹೊಡೆಯಿತು. ಡಿಕ್ಕಿಯ ರಭಸಕ್ಕೆ ಇಡೀ ಸೇತುವೆ ಕುಸಿದು ಪಾಟಾಪ್‌ಸ್ಕೋ ನದಿಗೆ ಬಿತ್ತು. ಸೇತುವೆ ಮೇಲಿದ್ದ 8 ಜನರು ನೀರಿಗೆ ಬಿದ್ದರು. ತಕ್ಷಣ ಇಬ್ಬರನ್ನು ರಕ್ಷಿಸಲಾಗಿತ್ತು. ಉಳಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ರಕ್ಷಣಾ ಸಿಬ್ಬಂದಿ ನಿರಂತರ ಹುಡುಕಾಟ ನಡೆಸಿದರೂ ಯಾರೂ ಪತ್ತೆಯಾಗದ ಕಾರಣ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಈ ಸೇತುವೆಯನ್ನು ಬಾಲ್ಟಿಮೋರ್ ಬಂದರಿನಲ್ಲಿ ಪಟಾಪ್ಸ್ಕೋ ನದಿಯ ಮೇಲೆ ನಿರ್ಮಿಸಲಾಗಿದೆ. ಸುಮಾರು 3 ಕಿಲೋಮೀಟರ್ ಉದ್ದದ ಈ ಸೇತುವೆಯ ನಿರ್ಮಾಣವು 1972 ರಲ್ಲಿ ಪ್ರಾರಂಭವಾಯಿತು ಮತ್ತು ಸೇತುವೆಯನ್ನು 1977 ರಲ್ಲಿ ಸಂಚಾರಕ್ಕೆ ತೆರೆಯಲಾಯಿತು. ಪ್ರತಿ ವರ್ಷ ಸರಾಸರಿ 1.1 ಕೋಟಿ ವಾಹನಗಳು ಈ ಸೇತುವೆಯ ಮೂಲಕ ಹಾದು ಹೋಗುತ್ತವೆ. ಈ ಸೇತುವೆಯನ್ನು ಕೀ ಸೇತುವೆ ಎಂದೂ ಕರೆಯಲಾಗುತ್ತಿತ್ತು.
2022- ಭಾರತದಲ್ಲಿ ಸುಮಾರು 140 ಸಾವು: 2022ರ ಅಕ್ಟೋಬರ್ 30 ರಂದು ಗುಜರಾತ್‌ನ ಮೊರ್ಬಿ ಸೇತುವೆ ಕುಸಿದು 45 ಮಕ್ಕಳು ಸೇರಿದಂತೆ 141 ಮಂದಿ ಬಲಿಯಾಗಿ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇಷ್ಟೊಂದು ಜನರನ್ನು ಬಲಿ ಪಡೆದ ಮೊರ್ಬಿ ತೂಗು ಸೇತುವೆಗೆ ಸುರಕ್ಷತಾ ಪ್ರಮಾಣ ಪತ್ರವೇ ಇರಲಿಲ್ಲ. ಅಲ್ಲದೇ ನಿಗದಿತ ಅವಧಿಗೂ ಮೊದಲೇ ತೂಗು ಸೇತುವೆಯನ್ನು ಪುನಃ ಸಾರ್ವಜನಿಕ ಬಳಕೆಗೆ ತೆರೆಯಲಾಗಿತ್ತು.
ಮೊರ್ಬಿ ಸ್ಥಳೀಯ ಆಡಳಿತ ನೀಡಿರುವ ಮಾಹಿತಿ ಪ್ರಕಾರ, ದುರಸ್ತಿ ಕಾರ್ಯಕ್ಕಾಗಿ ಏಳು ತಿಂಗಳಿಂದ ಮುಚ್ಚಲ್ಪಟ್ಟಿದ್ದ ತೂಗು ಸೇತುವೆಯನ್ನು ಘಟನೆ ನಡೆಯುವ ನಾಲ್ಕು ದಿನಗಳ ಹಿಂದಷ್ಟೇ (ಅ.26 ರಂದು) ಸಾರ್ವಜನಿಕರ ಬಳಕೆಗೆ ಪುನಃ ತೆರೆಯಲಾಗಿತ್ತು. 143 ವರ್ಷಗಳಷ್ಟು ಹಳೆಯದಾದ ಬ್ರಿಟಿಷರ ಕಾಲದ ಈ ತೂಗು ಸೇತುವೆಯ ಸುರಕ್ಷತಾ ಪ್ರಮಾಣ ಪತ್ರವನ್ನು ಇನ್ನೂ ಬಿಡುಗಡೆ ಮಾಡಿರಲಿಲ್ಲ. ಅಷ್ಟರಲ್ಲೇ ಇದರ ಪುನಃ ಬಳಕೆಗೆ ಅವಕಾಶ ನೀಡಿದ್ದು ದುರಂತಕ್ಕೆ ಕಾರಣ ಎನ್ನಲಾಗಿದೆ.
2021 – ಮೆಕ್ಸಿಕೋದಲ್ಲಿ 26 ಸಾವು: ಮೆಕ್ಸಿಕೋ ಸಿಟಿ ಮೆಟ್ರೋ ವ್ಯವಸ್ಥೆಯಲ್ಲಿನ ಎತ್ತರದ ಭಾಗವು ಮೇ ತಿಂಗಳಲ್ಲಿ ಕುಸಿದು ಪ್ರಯಾಣಿಕರ ರೈಲು ಅಪಘಾತಕ್ಕೀಡಾಯಿತು, ಇದರಲ್ಲಿ 26 ಜನರು ಸಾವನ್ನಪ್ಪಿದರು ಮತ್ತು ಡಜನ್‌ಗಟ್ಟಲೆ ಮಂದಿ ಗಾಯಗೊಂಡರು. ರಚನಾತ್ಮಕ ದೋಷಗಳು ಮತ್ತು ನಿರ್ವಹಣೆಯ ಕೊರತೆಯಿಂದ ಅಪಘಾತ ಸಂಭವಿಸಿದೆ ಎಂದು ತನಿಖೆಯು ತೀರ್ಮಾನಿಸಿದೆ.
2018- ಇಟಲಿಯಲ್ಲಿ 43 ಸಾವು: ಇಟಲಿಯ ಜಿನೋವಾ ನಗರದಲ್ಲಿ ಸೇತುವೆ ಕುಸಿದು 43 ಜನರು ಸಾವನ್ನಪ್ಪಿದ್ದಾರೆ. ಫ್ರಾನ್ಸ್ ಮತ್ತು ಇಟಲಿಯನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯ ಭಾಗವಾಗಿರುವ ಮೊರಾಂಡಿ ಸೇತುವೆಯು ಆಗಸ್ಟ್‌ನಲ್ಲಿ ಧಾರಾಕಾರ ಮಳೆಗೆ ಕೊಚ್ಚಿಹೋಗಿತ್ತು. ಹತ್ತಾರು ವಾಹನಗಳು ಪ್ರಪಾತದಡಿ ಸಿಲುಕಿತ್ತು.
2011-2016; ಭಾರತದಲ್ಲಿನ ಮೂರು ವಿಪತ್ತುಗಳು: ಮಾರ್ಚ್ 2016 ರಲ್ಲಿ ಭಾರತದ ಕೋಲ್ಕತ್ತಾ ನಗರದಲ್ಲಿ ಜನನಿಬಿಡ ರಸ್ತೆಯ ಮೇಲೆ ಫ್ಲೈಓವರ್ ಕುಸಿದು ಕನಿಷ್ಠ 26 ಜನರು ಸಾವನ್ನಪ್ಪಿದರು.
ಆ ಸಮಯದಲ್ಲಿ ಸೇತುವೆಯನ್ನು ವೆಲ್ಡಿಂಗ್ ಮಾಡುತ್ತಿದ್ದ ಕಾರ್ಮಿಕರು ಬಿರುಕುಗಳು ಕಾಣಿಸಿಕೊಂಡಿರುವುದನ್ನು ಗಮನಿಸಿದ್ದರು. ಆದರೆ ಜನರಿಗೆ ಎಚ್ಚರಿಕೆ ನೀಡುವ ಬದಲು ಅವರು ಬಿರುಕುಗಳನ್ನು ಒಟ್ಟಿಗೆ ಬೆಸುಗೆ ಹಾಕಲು ಪ್ರಯತ್ನಿಸಿದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
2011 ರ ಕೊನೆಯಲ್ಲಿ, ಎರಡು ಸೇತುವೆಗಳು ಪರಸ್ಪರ ಒಂದು ವಾರದೊಳಗೆ ಕುಸಿದವು. ಒಂದು ಈಶಾನ್ಯದಲ್ಲಿರುವ ಡಾರ್ಜಿಲಿಂಗ್ ಬೆಟ್ಟದ ಪಟ್ಟಣದ ಬಳಿ, ಇನ್ನೊಂದು ಈಶಾನ್ಯ ರಾಜ್ಯವಾದ ಅರುಣಾಚಲ ಪ್ರದೇಶದ ನದಿಯ ಮೇಲೆ. ಈ ಘಟನೆಯಿಂದ ಒಟ್ಟು 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.
2007- ಚೀನಾದಲ್ಲಿ 64 ಸಾವು: ಚೀನಾದಲ್ಲಿ ಆಗಸ್ಟ್‌ನಲ್ಲಿ ಕೇಂದ್ರ ಹುನಾನ್ ಪ್ರಾಂತ್ಯದ ನದಿ ಸೇತುವೆಯೊಂದು ಅದರ ನಿರ್ಮಾಣವನ್ನು ಪೂರ್ಣಗೊಳಿಸುತ್ತಿರುವಾಗ ಕುಸಿದು ಬಿದ್ದು ಕನಿಷ್ಠ 64 ಕಾರ್ಮಿಕರು ಸಾವನ್ನಪ್ಪಿದರು. ನೇಪಾಳದಲ್ಲಿ ಡಿಸೆಂಬರ್‌ನಲ್ಲಿ ದೇಶದ ಪಶ್ಚಿಮದಲ್ಲಿ ಯಾತ್ರಾರ್ಥಿಗಳಿಂದ ತುಂಬಿದ್ದ ಸೇತುವೆ ಕುಸಿದು ಕನಿಷ್ಠ 16 ಜನರು ಸಾವನ್ನಪ್ಪಿದರು ಮತ್ತು 25 ಮಂದಿ ಕಾಣೆಯಾಗಿದ್ದರು.
2006- ಪಾಕಿಸ್ತಾನ ಮತ್ತು ಭಾರತ: ಪಾಕಿಸ್ತಾನದಲ್ಲಿ ಆಗಸ್ಟ್‌ನಲ್ಲಿ ಮಾನ್ಸೂನ್ ಮಳೆಯಿಂದಾಗಿ ದೇಶದ ವಾಯುವ್ಯದಲ್ಲಿರುವ ಪೇಶಾವರದಿಂದ 50 ಕಿಲೋಮೀಟರ್ (30 ಮೈಲಿ) ದೂರದಲ್ಲಿರುವ ಮರ್ದಾನ್‌ನಲ್ಲಿ ಸೇತುವೆ ಕೊಚ್ಚಿಹೋಗಿದ್ದರಿಂದ ಕನಿಷ್ಠ 40 ಜನರು ಸಾವನ್ನಪ್ಪಿದರು.
ಭಾರತದಲ್ಲಿ ಡಿಸೆಂಬರ್‌ನಲ್ಲಿ, ಪೂರ್ವ ರಾಜ್ಯ ಬಿಹಾರದ ರೈಲ್ವೇ ನಿಲ್ದಾಣದಲ್ಲಿ 150 ವರ್ಷಗಳಷ್ಟು ಹಳೆಯದಾದ ಸೇತುವೆಯು ಪ್ಯಾಸೆಂಜರ್ ರೈಲಿನ ಮೇಲೆ ಕುಸಿದು ಕನಿಷ್ಠ 34 ಜನರು ಸಾವನ್ನಪ್ಪಿದರು.
2003- ಭಾರತ ಮತ್ತು ಬೊಲಿವಿಯಾ: ಭಾರತದಲ್ಲಿ ಆಗಸ್ಟ್‌ನಲ್ಲಿ ಮುಂಬೈ ಬಳಿ ಸೇತುವೆಯೊಂದು ಕುಸಿದು, ಶಾಲಾ ಬಸ್ ಮತ್ತು ಇತರ ನಾಲ್ಕು ವಾಹನಗಳು ನದಿಗೆ ಬಿದ್ದಾಗ 19 ಮಕ್ಕಳು ಸೇರಿದಂತೆ 20 ಜನರು ಸಾವನ್ನಪ್ಪಿದರು. ಡಿಸೆಂಬರ್‌ನಲ್ಲಿ ಬೊಲಿವಿಯಾದಲ್ಲಿ ಬಸ್ ಸೇತುವೆಯನ್ನು ದಾಟುತ್ತಿರುವಾಗ ಪ್ರವಾಹಕ್ಕೆ ಸಿಲುಕಿ ಕನಿಷ್ಠ 29 ಜನರು ಸಾವನ್ನಪ್ಪಿದರು.
ಹೀಗೆ ಅನೇಕ ಸಣ್ಣಪುಟ್ಟ ಸೇತುವೆ ಕುಸಿತಗಳು ಆಗಾಗ ನಡೆಯುತ್ತಲೇ ಇರುತ್ತವೆ. ಈ ಘಟನೆಗಳಿಂದ ಅನೇಕ ಮಂದಿ ಜೀವ ಕಳೆದುಕೊಂಡರೆ ಇನ್ನೂ ಅನೇಕರು ಗಾಯಗೊಂಡು ಚೇತರಿಸಿಕೊಂಡಿದ್ದಾರೆ. ಸೇತುವೆಗಳನ್ನು ನಿರ್ಮಿಸುವಾಗ ಈ ರೀತಿಯಾದ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಒಳಿತು.
ವಾಷಿಂಗ್ಟನ್: ಕಾರ್ಗೋ ಹಡಗೊಂದು (Cargo Ship) ಡಿಕ್ಕಿ ಹೊಡೆದ ಪರಿಣಾಮ ಸೇತುವೆ ಮುರಿದು ಬಿದ್ದ ಘಟನೆ ಅಮೆರಿಕದ ಬಾಲ್ಟಿಮೋರ್‌ನಲ್ಲಿ (USA Baltimore) ನಡೆದಿದೆ.
ಸೇತುವೆಗೆ ಕಾರ್ಗೋ ಹಡಗು ಬಂದು ಗುದ್ದುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ. ಅಗ್ನಿಶಾಮಕ ದಳ, ಪೊಲೀಸರು ಈಗ ರಕ್ಷಣೆಯಲ್ಲಿ ತೊಡಗಿದ್ದಾರೆ. ನೀರಿಗೆ ಬಿದ್ದ ಕಾರಿನಲ್ಲಿದ್ದ ಹಲವು ಮಂದಿ ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಪಾಕಿಸ್ತಾನದ 2ನೇ ಅತಿ ದೊಡ್ಡ ನೌಕಾ ವಿಮಾನ ನಿಲ್ದಾಣದ ಮೇಲೆ ದಾಳಿ
ಸಿಂಗಾಪುರ ಮೂಲದ ಸರಕು ಸಾಗಾಣೆ ಹಡಗು ಗುದ್ದಿದ್ದು, 20ಕ್ಕೂ ಹೆಚ್ಚು ಕಾರುಗಳು ನೀರಿಗೆ ಬಿದ್ದಿವೆ ಎಂದು ವರದಿಯಾಗಿದೆ. ತಾಂತ್ರಿಕ ವೈಫಲ್ಯದಿಂದ ಘಟನೆ ನಡೆದಿದ್ಯಾ ಅಥವಾ ಉಗ್ರರ ಕೃತ್ಯ ಇರಬಹುದೇ ಈ ಕೋನದಲ್ಲಿ ಈಗ ಅಮೆರಿಕ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಗೋಡೆ ಮೇಲೆ ಡೆತ್‍ನೋಟ್ ಬರೆದು ಟೆಕ್ಕಿ ಆತ್ಮಹತ್ಯೆ
ಟಾಪ್ಸ್ಕೋ ನದಿಗೆ ಒಟ್ಟು 2.6 ಕಿ.ಮೀ ಉದ್ದದ ಸೇತುವೆಯನ್ನು ಕಟ್ಟಲಾಗಿದೆ. 1977 ರಲ್ಲಿ ಸೇತುವೆ ಉದ್ಘಾಟನೆಯಾಗಿದ್ದು ವಾರ್ಷಿಕ 1.1 ಕೋಟಿಗೂ ಅಧಿಕ ವಾಹನಗಳು ಸಂಚರಿಸುತ್ತಿವೆ. ಬಾಲ್ಟಿಮೋರ್ ಅಮೆರಿಕ ಪ್ರಮುಖ ಕೈಗಾರಿಕಾ ನಗರವಾಗಿದ್ದು ಈ ಸೇತುವೆಯನ್ನು ಒಳಗೊಂಡ ರಸ್ತೆ ಮಾರ್ಗ ಅಮೆರಿಕ ರಾಜಧಾನಿ ವಾಷಿಂಗ್ಟನ್ ಸಂಪರ್ಕಿಸುತ್ತದೆ.