Tag: ಸೇನಾ ಟ್ರಕ್

  • ಅಪಘಾತದಲ್ಲಿ ಗಾಯಗೊಂಡ ಯೋಧರಿಗೆ ಕಾಶ್ಮೀರದ ಜನರ ಸಹಾಯ- ವಿಡಿಯೋ ವೈರಲ್

    ಅಪಘಾತದಲ್ಲಿ ಗಾಯಗೊಂಡ ಯೋಧರಿಗೆ ಕಾಶ್ಮೀರದ ಜನರ ಸಹಾಯ- ವಿಡಿಯೋ ವೈರಲ್

     

    ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧರಿಗೆ ಸ್ಥಳಿಯರು ಸಹಾಯ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಇಲ್ಲಿನ ಬುದ್ಗಾಮ್ ಜಿಲ್ಲೆಯಲ್ಲಿ ಸೇನಾ ಟ್ರಕ್‍ವೊಂದು ಅಪಘಾತಕ್ಕೆ ಸಿಲುಕಿತ್ತು. ಇದನ್ನ ಕಂಡ ಸ್ಥಳೀಯರು ಕೂಡಲೇ ಸೈನಿಕರ ನೆರವಿಗೆ ಧಾವಿಸಿದ್ದಾರೆ. ಭಾನುವಾರದಂದು ಈ ಅಪಘಾತ ನಡೆದಿದೆ.

    ಇಲ್ಲಿನ ಚಾದೂರಾ ಪ್ರದೇಶದ ಮಾರ್ಗವಾಗಿ ವಾಹನ ಚಲಿಸುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ರಸ್ತೆಯಿಂದ ಪಕ್ಕಕ್ಕೆ ಹೋಗಿತ್ತು. ಅಪಘಾತದಿಂದಾಗಿ ಹಲವು ಸೈನಿಕರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಕೂಡಲೇ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದು, ಗಾಯಗೊಂಡ ಸೈನಿಕರಿಗೆ ನೆರವಾದ್ರು ಎಂದು ಪೊಲೀಸರು ಹೇಳಿದ್ದಾರೆ. ಸೈನಿಕರಿಗೆ ಕುಡಿಯಲು ನೀರು ಹಾಗೂ ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯರು ಮಾನವೀಯತೆ ಮೆರೆದಿದ್ದಾರೆ.

    ಕಳೆದ ವರ್ಷವೂ ಕೂಡ ಇಲ್ಲಿನ ಪರಿಂಪೋರಾ – ಪಂತ ಚೌಕ್ ಬೈಪಾಸ್‍ನ ಲಸ್ಜನ್ ಬಳಿ ಟ್ರಕ್ ಅಪಘಾತಕ್ಕೆ ಸಿಲುಕಿದ್ದಾಗ ಗಾಯಗೊಂಡ ಸೈನಿಕರು ಹೊರಬರಲು ಸ್ಥಳೀಯರು ಸಹಾಯ ಮಾಡಿದ್ದರು.