Tag: ಸೇನಾ ಮಿಲಿಟರಿ ಪೊಲೀಸ್ ಪಡೆ

  • ಐತಿಹಾಸಿಕ ನಿರ್ಧಾರ – ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳೆಯರಿಗೆ ಅವಕಾಶ

    ಐತಿಹಾಸಿಕ ನಿರ್ಧಾರ – ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳೆಯರಿಗೆ ಅವಕಾಶ

    ನವದೆಹಲಿ: ಮಹಿಳೆಯರಿಗೆ ಭಾರತೀಯ ಸೇನೆಯ ಮಿಲಿಟರಿ ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸಲು ರಕ್ಷಣಾ ಸಚಿವಾಲಯವು ಅನುಮತಿ ನೀಡಿವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ.

    ಶುಕ್ರವಾರದಂದು ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಈ ಐತಿಹಾಸಿಕ ನಿರ್ಧಾರವನ್ನು ಜಾರಿಗೆ ತಂದಿದ್ದಾರೆ. ಈ ಹಿಂದೆ ಮಹಿಳೆಯರನ್ನು ಕೇವಲ ಸೇನಾ ಅಧಿಕಾರಿಗಳಾಗಿ ಆಯ್ದ ಶಾಖೆಗಳಿಗೆ ಮಾತ್ರ ನೇಮಿಸಿಕೊಳ್ಳಲಾಗುತ್ತಿತ್ತು. ಆದ್ರೆ ಇನ್ಮುಂದೆ ಮಹಿಳೆಯರು ಕೂಡ ಭಾರತೀಯ ಸೇನೆಯ ಮಿಲಿಟರಿ ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ.

    ಸೇನೆಯ ಮಿಲಿಟರಿ ಪೊಲೀಸ್ ಪಡೆಯಲ್ಲಿ ಶೇ.20 ರಷ್ಟು ನೇಮಕಾತಿಯನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಮಹಿಳೆಯರಿಗೆ ಮಿಲಿಟರಿ ಪೊಲೀಸ್ ಪಡೆಯಲ್ಲಿ ಅವಕಾಶ ನೀಡಬೇಕೆಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾಪ ಇಟಿದ್ದರು. ಈ ಪ್ರಸ್ತಾಪದ ಗಂಭೀರತೆಯನ್ನು ಅರಿತ ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವಾಲಯವು ಮಹಿಳೆಯರಿಗೆ ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟಿದೆ.

    ಭಾರತೀಯ ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಪುರುಷರಿಗೆ ಮಾತ್ರ ಅವಕಾಶ ಇತ್ತು. ಕೆಲವೊಂದು ಕಾರ್ಯಚರಣೆ ಮಾಡುವ ಸಮಯದಲ್ಲಿ ಮಹಿಳೆಯರು ಮುಂದೆ ನಿಲ್ಲುತ್ತಿರುತ್ತಾರೆ. ಈ ಸಮಯದಲ್ಲಿ ಇವರನ್ನು ನಿಯಂತ್ರಿಸಿ ಮುಂದೆ ಹೋಗಲು ಸೈನಿಕರಿಗೆ ಸಮಸ್ಯೆ ಆಗುತಿತ್ತು. ಈ ಎಲ್ಲ ಕಾರ್ಯಾಚರಣೆಯಲ್ಲಿ ಮಹಿಳಾ ಸೈನಿಕರಿದ್ದರೆ ಕಾರ್ಯಾಚರಣೆಗೆ ಸಹಾಯವಾಗುತ್ತದೆ. ಹೀಗಾಗಿ ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳೆಯರಿಗೆ ಅವಕಾಶ ನೀಡಿ ಎಂದು ಭಾರತೀಯ ಸೇನೆ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv