Tag: ಸೇನಾ ವಾಹನ

  • ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ – ಐವರು ಸೈನಿಕರು ಹುತಾತ್ಮ!

    ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ – ಐವರು ಸೈನಿಕರು ಹುತಾತ್ಮ!

    – ಎರಡು ದಿನಗಳಲ್ಲಿ 7 ಮಂದಿ ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and kashmir) ಕಥುವಾ ಜಿಲ್ಲೆಯ ದೂರದ ಮಚೇಡಿ ಪ್ರದೇಶದಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಸೈನಿಕರು (Army Personnel) ಹುತಾತ್ಮರಾಗಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

    ಕಥುವಾ ಪಟ್ಟಣದಿಂದ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಲ ಸೇನಾ ವಾಹನಗಳು ಈ ಪ್ರದೇಶದಲ್ಲಿ ನಿತ್ಯ ಗಸ್ತು ತಿರುಗುತ್ತಿದ್ದವು ಎಂದು ಹೇಳಲಾಗಿದೆ. ಇದನ್ನೂ ಓದಿ: ಅಪಘಾತಕ್ಕೂ ಮುನ್ನ 18,730 ರೂ. ಮದ್ಯ ಕುಡಿದಿದ್ದ ಮಿಹಿರ್‌ ಶಾ – ಮಗ ಮಾಡಿದ ತಪ್ಪಿಗೆ ತಂದೆಗೆ ಜೈಲು!

    ಕತುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜು.8) ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದರು. ಈ ವೇಳೆ ನಮ್ಮ ಸೈನಿಕರು ಸಹ ಪ್ರತಿದಾಳಿ ನಡೆಸಿದ್ದರು. ಆದ್ರೆ ದುರದೃಷ್ಟವಶಾತ್‌ ಐವರು ಯೋಧರು ಹುತಾತ್ಮರಾಗಿದ್ದಾರೆ. ಭಾರತೀಯ ಸೇನೆಯ ಕಾರ್ಪ್ಸ್‌ ಅಡಿಯಲ್ಲಿ ಈ ಪ್ರದೇಶ ಬರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ 2 ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ 2ನೇ ದಾಳಿಯಾಗಿದೆ. ಜೊತೆಗೆ ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ 2ನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 6 ಭಯೋತ್ಪಾದಕರು ಮೃತಪಟ್ಟಿದ್ದರು. ಇದನ್ನೂ ಓದಿ: ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ ನೀಡೋದು ಸರ್ಕಾರದ ನೀತಿಯ ವಿಷಯ- ವಿಚಾರಣೆ ನಡೆಸಲು ಸುಪ್ರೀಂ ನಕಾರ

    ಸೇನೆಯ ವಾಹನ ತೆರಳುವ ಕುರಿತು ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ, ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಸಮೀಪದ ಅರಣ್ಯ ಪ್ರದೇಶದಲ್ಲಿ ಸುಮಾರು ಇಬ್ಬರು-ಮೂವರು ಅಡಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಉಗ್ರರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಹೆಚ್ಚಿನ ಸೈನಿಕರನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

  • ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ದಾಳಿ – 2 ದಿನಗಳಲ್ಲಿ 2ನೇ ಅಟ್ಯಾಕ್‌!

    ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ದಾಳಿ – 2 ದಿನಗಳಲ್ಲಿ 2ನೇ ಅಟ್ಯಾಕ್‌!

    – ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

    ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದಾರೆ. ಕಥುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ (Terrorists Attack) ನಡೆಸಿದ್ದಾರೆ.

    ಕತುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜು.8) ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಕಳೆದ 2 ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ 2ನೇ ದಾಳಿಯಾಗಿದೆ. ಜೊತೆಗೆ ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ 2ನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 6 ಭಯೋತ್ಪಾದಕರು ಮೃತಪಟ್ಟಿದ್ದರು. ಇದನ್ನೂ ಓದಿ: NEET-UG ಮರು ಪರೀಕ್ಷೆ ನಮ್ಮ ಕೊನೆಯ ಆಯ್ಕೆ, ಪೇಪರ್‌ ಸೋರಿಕೆ ಬಗ್ಗೆ ತನಿಖೆ ನಡೆಸಬೇಕು: ಸುಪ್ರೀಂ

    ಸೇನೆಯ ವಾಹನ ತೆರಳುವ ಕುರಿತು ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ, ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ, ಸೈನಿಕರೂ ಪ್ರತಿದಾಳಿ ನಡೆಸಿದ್ದಾರೆ. ಇದನ್ನೂ ಓದಿ: 1.92 ಲಕ್ಷ ಮೌಲ್ಯದ ಸೀರೆಯುಟ್ಟು ಮಿಂಚಿದ ಗರ್ಭಿಣಿ ದೀಪಿಕಾ ಪಡುಕೋಣೆ

    ಸದ್ಯ ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಲೇ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಉಗ್ರರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – ಕಾಜಿರಂಗ ಪಾರ್ಕ್‍ನಲ್ಲಿ 131 ವನ್ಯಜೀವಿಗಳು ಸಾವು

  • ಲಡಾಖ್‌ನಲ್ಲಿ ಕಮರಿಗೆ ಉರುಳಿದ ಸೇನಾ ವಾಹನ – 9 ಮಂದಿ ಯೋಧರು ಹುತಾತ್ಮ

    ಲಡಾಖ್‌ನಲ್ಲಿ ಕಮರಿಗೆ ಉರುಳಿದ ಸೇನಾ ವಾಹನ – 9 ಮಂದಿ ಯೋಧರು ಹುತಾತ್ಮ

    ಲೇಹ್: ದಕ್ಷಿಣ ಲಡಾಖ್‌ನ (Ladakh) ನ್ಯೋಮಾದಲ್ಲಿ ಭಾರತೀಯ ಸೇನಾ ವಾಹನ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಸೈನಿಕರು (Soldiers) ಹುತಾತ್ಮರಾಗಿದ್ದು, ಮತ್ತೊಬ್ಬ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಮೃತರಲ್ಲಿ 8 ಮಂದಿ ಯೋಧರು ಮತ್ತು ಒಬ್ಬರು ಕಮಿಷನ್ಡ್ ಆಫೀಸರ್ (ಜೆಸಿಒ) ಆಗಿದ್ದರು. ಸೇನಾ ಟ್ರಕ್ (Army Vehicle) ಗ್ಯಾರಿಸನ್‌ನಿಂದ ಲೇಹ್ ಬಳಿಯ ಕ್ಯಾರಿಗೆ ಚಲಿಸುತ್ತಿದ್ದ ಸಂದರ್ಭ ಕ್ಯಾರಿ ಪಟ್ಟಣದಿಂದ 7 ಕಿ.ಮೀ. ಮುಂದೆ ಕಮರಿಗೆ ಬಿದ್ದಿದೆ. ಇದನ್ನೂ ಓದಿ: ಕೆಟಿಎಮ್ 390 ಬೈಕ್‌ನಲ್ಲಿ ರಾಹುಲ್ ಗಾಂಧಿ ಲಡಾಖ್ ಪ್ರವಾಸ – ಪ್ಯಾಂಗಾಂಗ್ ಸರೋವರ ಭೇಟಿ

    ಶನಿವಾರ ಸಂಜೆ 6:30ರ ಸುಮಾರಿಗೆ ಘಟನೆ ನಡೆದಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಸಾಮಾಜಿಕ ಜಾಲತಾಣದಲ್ಲಿ ಮೃತ ಯೋಧರಿಗೆ ಸಂತಾಪ ಸೂಚಿಸಿದ್ದಾರೆ. ಲಡಾಖ್‌ನ ಲೇಹ್ ಬಳಿ ಅಪಘಾತದಿಂದಾಗಿ ಭಾರತೀಯ ಸೇನಾ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ಬಹಳ ದುಃಖವನ್ನುಂಟುಮಾಡಿದೆ. ನಮ್ಮ ದೇಶಕ್ಕೆ ಅವರ ಆದರ್ಶ ಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ರಾಜನಾಥ್ ಸಿಂಗ್ ಟ್ವೀಟ್ (Tweet) ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ನಿತಿನ್ ಗಡ್ಕರಿ ಸ್ಪಷ್ಟನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೇನಾ ವಾಹನಕ್ಕೆ ಬೆಂಕಿ ತಗುಲಿ 4 ಯೋಧರು ಸಜೀವದಹನ

    ಸೇನಾ ವಾಹನಕ್ಕೆ ಬೆಂಕಿ ತಗುಲಿ 4 ಯೋಧರು ಸಜೀವದಹನ

    ಶ್ರೀನಗರ: ಸೇನಾ ಟ್ರಕ್‌ಗೆ (Truck) ಬೆಂಕಿ ತಗುಲಿದ ಪರಿಣಾಮ ನಾಲ್ವರು ಯೋಧರು (Soldiers) ಸಜೀವದಹನವಾಗಿರುವ ಭೀಕರ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೂಂಚ್ (Poonch) ಪ್ರದೇಶದಲ್ಲಿ ನಡೆದಿದೆ.

    ಘಟನೆ ಗುರುವಾರ ಭಟ ಧುರಿಯನ್ ಪ್ರದೇಶದ ಬಳಿ ನಡೆದಿರುವುದಾಗಿ ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ ಸಿಡಿಲು ಬಡಿದ ಪರಿಣಾಮ ಯೋಧರನ್ನು ಸಾಗಿಸಲಾಗುತ್ತಿದ್ದ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದರ್ಗಾದಲ್ಲಿ ಗಳಗಳನೆ ಅತ್ತ ರಮೇಶ್ ಕುಮಾರ್

    ಸ್ಥಳಕ್ಕೆ ಸೇನೆ ಹಾಗೂ ಪೊಲೀಸ್ ಸಿಬ್ಬಂದಿ ಆಗಮಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಲಂಡನ್‍ಗೆ ತೆರಳುತ್ತಿದ್ದ ಅಮೃತ್‌ಪಾಲ್ ಪತ್ನಿ ಪೊಲೀಸರ ವಶಕ್ಕೆ

  • ಕುಡಿದ ಅಮಲಿನಲ್ಲಿ ಸೇನಾ ವಾಹನಕ್ಕೆ ಒದ್ದು ಯುವತಿ ರಂಪಾಟ – ವೀಡಿಯೋ ವೈರಲ್

    ಕುಡಿದ ಅಮಲಿನಲ್ಲಿ ಸೇನಾ ವಾಹನಕ್ಕೆ ಒದ್ದು ಯುವತಿ ರಂಪಾಟ – ವೀಡಿಯೋ ವೈರಲ್

    ಗ್ವಾಲಿಯರ್: ಕುಡಿದ ಅಮಲಿನಲ್ಲಿ 22 ವರ್ಷದ ಮಾಡೆಲ್ ಒಬ್ಬಳು ಸೇನಾ ವಾಹನದ ಮೇಲೆ ದಾಳಿ ನಡೆಸಿ ರಂಪಾಟ ಮಾಡಿರುವ ಘಟನೆ ಬುಧವಾರ ರಾತ್ರಿ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.

    delhi model

    ಯುವತಿ ದೆಹಲಿ ಮೂಲದ ಮಾಡೆಲ್ ಆಗಿದ್ದು, ಮದ್ಯದ ಅಮಲಿನಲ್ಲಿ ರಸ್ತೆಯಲ್ಲಿ ಗಲಾಟೆ ಸೃಷ್ಟಿಸಿ, ಸೇನಾ ವಾಹನವನ್ನು ನಿಲ್ಲಿಸಿ ಅದರ ಮೇಲೆ ದಾಳಿ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: 10 ವರ್ಷದಲ್ಲಿ 25 ಬಾರಿ ಅನ್ಯ ಪುರುಷರೊಂದಿಗೆ ಓಡಿಹೋದಳು – ಗಂಡನಿಗೆ ಮಾತ್ರ ಅವಳೇ ಬೇಕಂತೆ

    delhi model

    ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಯುವತಿ ಸೇನೆಯ ವಾಹನವನ್ನು ನಿಲ್ಲಿಸಿ ಹೆಡ್‍ಲೈಟ್‍ಗೆ ಪದೇ, ಪದೇ ಒದ್ದು, ಹಾನಿಗೊಳಿಸಿದ್ದಾಳೆ. ಅಲ್ಲದೇ ಆಕೆಯನ್ನು ತಡೆಯಲು ಬಂದ ಸೇನಾಧಿಕಾರಿಯನ್ನು ಹಿಂದಕ್ಕೆ ತಳ್ಳಿದ್ದಾಳೆ ಮತ್ತು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾಳೆ. ಇನ್ನೂ ಈ ಘಟನೆ ಪಡವ್ ಪೊಲೀಸ್ ಠಾಣೆಗೆ ವರದಿಯಾಗುತ್ತಿದ್ದಂತೆಯೇ, ಮಹಿಳಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವತಿಯನ್ನು ಕರೆದೊಯ್ದಿದ್ದಾರೆ.  ಇದನ್ನೂ ಓದಿ: ‘ಧಾರವಾಡಿ ಎಮ್ಮೆ’ ತಳಿಗೆ ದೊರೆತಿದೆ ರಾಷ್ಟ್ರಮಟ್ಟದ ಮಾನ್ಯತೆ!

    ಈ ಕುರಿತಂತೆ ಪಡವ್ ಪೊಲೀಸ್ ಠಾಣೆಯ ಉಸ್ತುವಾರಿ ವಿವೇಕ್, ಯುವತಿ ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿದ್ದಾಳೆ. ಸೇನೆಯ ಕಡೆಯಿಂದ ಯಾವುದೇ ದೂರುಗಳಿಲ್ಲ. ಇದೀಗ ಯುವತಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಆಕೆಯ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ದೆಹಲಿಯಿಂದ ಗ್ವಾಲಿಯರ್‌ಗೆ ಯುವತಿ ಮತ್ತು ಆಕೆಯ ಇಬ್ಬರು ಸ್ನೇಹಿತೆಯರು ಬಂದಿದ್ದು, ನಗರದ ಹೋಟೆಲ್‍ನಲ್ಲಿ ತಂಗಿರುವುದಾಗಿ ತಿಳಿಸಿದ್ದಾರೆ.

  • ಪುಲ್ವಾಮಾದಲ್ಲಿ ಮತ್ತೆ ಸೈನಿಕರ ವಾಹನದ ಮೇಲೆ ಉಗ್ರರ ದಾಳಿ

    ಪುಲ್ವಾಮಾದಲ್ಲಿ ಮತ್ತೆ ಸೈನಿಕರ ವಾಹನದ ಮೇಲೆ ಉಗ್ರರ ದಾಳಿ

    ಶ್ರೀನಗರ: ಸೇನಾ ವಾಹನವನ್ನು ಟಾರ್ಗೆಟ್ ಮಾಡಿ IED ಸ್ಫೋಟಕಗಳೊಂದಿಗೆ ಉಗ್ರರು ದಾಳಿ ನಡೆಸಿರುವ ಘಟನೆ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ.

    ಕೇಂದ್ರ ಮೀಸಲು ಪಡೆಯ ಪೊಲೀಸರ ಮೇಲೆ ಕಳೆದ ಬಾರಿ ದಾಳಿ ನಡೆಸಿದ್ದ ಪುಲ್ವಾಮಾ ಪ್ರದೇಶದ ಬಳಿಯೇ ಇಂದು ದಾಳಿ ನಡೆಸಲು ಉಗ್ರರು ಯತ್ನಿಸಿದ್ದಾರೆ. ಈ ವೇಳೆ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಸೇನಾ ವಾಹನ ಕ್ಯಾಸ್ಪರ್ ವಾಹನ ಜಖಂ ಗೊಂಡಿದೆ. ಸದ್ಯ ಉಗ್ರರೊಂದಿಗಿನ ಗುಂಡಿನ ಕಾಳಗ ಇಂದಿಗೂ ಮುಂದುವರಿದಿದೆ ಎಂಬ ಮಾಹಿತಿ ಲಭಿಸಿದೆ.

    ರಾಷ್ಟ್ರೀಯ ರೈಫಲ್ಸ್ ಗೆ ಸೇರಿದ ವಾಹನ ಮೇಲೆ ಪುಲ್ವಾಮಾದ ಅರಿಹಲ್ ಗ್ರಾಮದ ಬಳಿ ದಾಳಿ ನಡೆದಿದ್ದು, ದಾಳಿಯ ಬೆನ್ನಲ್ಲೇ ವಾಹನದ ಮೇಲೆ ಕಲ್ಲು ತೂರಾಟ ಹಾಗೂ ಗುಂಡಿನ ದಾಳಿ ನಡೆದಿದೆ. ದಕ್ಷಿಣ ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಎನ್‍ಕೌಂಟರ್ ನಡೆದ ಬೆನ್ನಲ್ಲೇ ಈ ದಾಳಿ ನಡೆದಿದೆ. ಜಿಲ್ಲೆಯ ಅಚ್ಚಲ್‍ಬಾಗ್‍ನ ಬಡೋರ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆ ಓರ್ವ ಉಗ್ರನನ್ನು ಹೊಡೆದುರಳಿಸಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿ ಲಭಿಸಿದೆ.

    ಯೋಧರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಆರ್ಮಿ ಮೇಜರ್ ಹಾಗೂ ಮೂವರು ಯೋಧರು ಹುತಾತ್ಮರಾಗಿದ್ದರು. ಉಗ್ರರು ಅಡಗಿಕೊಂಡು ಕುಳಿತಿರುವ ಮಾಹಿತಿ ಪಡೆದ ಯೋಧರು, ಪೊಲೀಸರೊಂದಿಗೆ ಶೋಧ ಕಾರ್ಯ ನಡೆಸಿದ್ದರು. ಈ ವೇಳೆಯೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮತ್ತೊಬ್ಬ ಆರ್ಮಿ ಮೇಜರ್ ಅವರನ್ನು ಶ್ರೀನಗರ ಆರ್ಮಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ಜೂನ್ 12ರಂದು ಭಾರತೀಯ ಯೋಧರ ಗಸ್ತು ಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು.