Tag: ಸೇರ್ಪಡೆ

  • ಬಿಜೆಪಿ ಸೇರಿಕೊಂಡ ನಟಿ ರೂಪಾ ಗಂಗೂಲಿ

    ಬಿಜೆಪಿ ಸೇರಿಕೊಂಡ ನಟಿ ರೂಪಾ ಗಂಗೂಲಿ

    ಖ್ಯಾತ ಕಿರುತೆರೆಯ ನಟಿ, ಸಿನಿಮಾ ನಿರ್ದೇಶಕ ಅನಿಲ್ ಗಂಗೂಲಿ ಅವರ ಪುತ್ರಿ ರೂಪಾ ಗಂಗಾಲಿ (Roopa Ganguly) ಬಿಜೆಪಿ  (BJP)ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಮುಖಂಡರಾದ ಅನಿಲ್ ಬಲುನಿ ಹಾಗೂ ವಿನೋದ್ ತಾವ್ಡೆ ಸಮ್ಮುಖದಲ್ಲಿ ಅವರು ಇಂದು ಪಕ್ಷದ ಕಚೇರಿಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕೃತವಾಗಿ ಸೇರಿದ್ದಾರೆ.

    ಇದೇ ಮಾರ್ಚ್ ನಲ್ಲಿ ರೂಪಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ಸಂದರ್ಭದಲ್ಲೇ ಬಿಜೆಪಿಯನ್ನು ಸೇರುವ ಒಲವನ್ನೂ ಅವರು ವ್ಯಕ್ತ ಪಡಿಸಿದ್ದರು. ಅದರಂತೆ ಬಿಜೆಪಿಗೆ ಸೇರಿದ್ದಾರೆ. ಮೋದಿ (, Narendra Modi) ಅವರ ಕಾರ್ಯವೈಖರಿಯನ್ನು ಮೆಚ್ಚಿ ಬಂದಿದ್ದೇನೆ ಅಂದಿದ್ದಾರೆ.

     

    ಜನರಿಗೆ, ದೇಶಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ನನ್ನ ಕನಸು. ಅದನ್ನು ಆಗಲೇ ಮೋದಿ ಅವರು ಮಾಡುತ್ತಿದ್ದಾರೆ. ಅದನ್ನು ಗಮನಿಸಿಯೇ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ನನಗೆ ಇರಲಿ ಎಂದಿದ್ದಾರೆ ಗಂಗೂಲಿ.

  • ಮೋದಿ ನಾಯಕತ್ವ, ಪರಿಕಲ್ಪನೆಯ ಆಕರ್ಷಣೆಯೇ ಬಿಜೆಪಿ ಸೇರಲು ಕಾರಣ: ಸುಮಲತಾ

    ಮೋದಿ ನಾಯಕತ್ವ, ಪರಿಕಲ್ಪನೆಯ ಆಕರ್ಷಣೆಯೇ ಬಿಜೆಪಿ ಸೇರಲು ಕಾರಣ: ಸುಮಲತಾ

    ಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವ ಹಾಗೂ ಅವರ ಪರಿಕಲ್ಪನೆ ಮತ್ತು ಕನಸುಗಳ ಕಾರಣದಿಂದಾಗಿ ನಾನು ಭಾರತೀಯ ಜನತಾ ಪಕ್ಷವನ್ನು (BJP)  ಸೇರುತ್ತಿದ್ದೇನೆ ಎಂದಿದ್ದಾರೆ ನಟಿ, ಸಂಸದೆ ಸುಮಲತಾ ಅಂಬರೀಶ್ (Sumalta Ambarish). ಇಂದು ಅವರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಸೇರಿದ್ದಾರೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಪತ್ರ ನೀಡಿ ಸುಮಲತಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

    ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಡಿ.ವಿ ಸದಾನಂದಗೌಡ , ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕರಾದ ಮುನಿರತ್ನ, ಮಾಜಿ ಮಂತ್ರಿ ಕೆ.ಸಿ.ನಾರಾಯಣ ಗೌಡ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಸುಮಲತಾ ಅಂಬರೀಶ್ ಅವರ ಜೊತೆಗೆ ಕ್ರಿಕೆಟಿಗ ದೊಡ್ಡಗಣೇಶ್ ಸೇರಿದಂತೆ ಸಾಕಷ್ಟು ಮುಖಂಡರುಗಳು ಇಂದು ಬಿಜೆಪಿಗೆ ಸೇರ್ಪಡೆಯಾದರು.

    ಬಿಜೆಪಿ ಸೇರಿದ ನಂತರ ಮಾತನಾಡಿದ ಸುಮಲತಾ ಅಂಬರೀಶ್, ಇವತ್ತಿನ ದಿನ ನನ್ನ ರಾಜಕೀಯ ಜೀವನದಲ್ಲಿ ಮಹತ್ವ ಪಡೆದುಕೊಂಡ ಸುದಿನ. ಐದು ವರ್ಷಗಳ ಹಿಂದೆ ಐತಿಹಾಸಿಕ ಗೆಲುವು ಸಿಕ್ಕಿತ್ತು. ಆ ಚುನಾವಣೆ ಎಂದೆಂದೂ ಮರೆಯಲ್ಲ. ಆ ಚುನಾವಣೆ ದೊಡ್ಡ ಶಕ್ತಿ ಕೊಡ್ತು, ಸಾಕಷ್ಟು ಜನ ಬೆಂಬಲಿಸಿದರು. ಬಿಜೆಪಿಯವರೂ ಬಾಹ್ಯ ಬೆಂಬಲ‌ ಕೊಟ್ಟಿದ್ರು. ಐದು ವರ್ಷದ ಹಿಂದೆ‌ ಮೋದಿಯವ್ರು ಮಂಡ್ಯಕ್ಕೆ ಬಂದಿದ್ರು. ಅವರೂ ನನ್ನ ಪರ ಮತ ಕೇಳಿ ಜನರ ಸಹಕಾರ ಕೇಳಿದ್ರು, ಇದನ್ನ ನಾನು ಎಂದೆಂದೂ ಮರೆಯಲ್ಲ ಎಂದರು.

    ಮುಂದುವರೆದು ಮಾತನಾಡಿದ ಸುಮಲತಾ, ಈ ಐದು ವರ್ಷಗಳ ಪ್ರಯಾಣದಲ್ಲಿ ಸಾಕಷ್ಟು ಪಾಠ ಕಲಿತಿದ್ದೇನೆ. ಬಿಜೆಪಿಯ ಸಾಕಷ್ಟು ಹಿರಿಯರ ಬೆಂಬಲ, ಸಹಕಾರ ಸಿಕ್ಕಿದೆ, ಎಲ್ಲರಿಗೂ ಧನ್ಯವಾದ. ರಾಜ್ಯದಲ್ಲಿ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಸಾಕಷ್ಟು ಸಹಕಾರ ಕೊಟ್ರು. ಯಡಿಯೂರಪ್ಪ ಅವರು ಮಂಡ್ಯ ಜಿಲ್ಲೆಯ ಸಮಸ್ಯೆ ಏನಿದೆ ಹೇಳಿ, ಸರಿಪಡಿಸೋಣ ಅಂದ್ರು. ಮಂಡ್ಯ ಮೈಶುಗರ್ ಕಾರ್ಖಾನೆ ಪುನಶ್ಚೇತನ ಕೆಲಸ ಆಯ್ತು. ಬೊಮ್ಮಾಯಿ ಐವತ್ತು ಕೋಟಿ ಕೊಟ್ರು. ಇವತ್ತು ಮೈಶುಗರ್ ಪುನಶ್ಚೇತನಕ್ಕೆ ಯಾರ್ಯಾರೋ ಕ್ರೆಡಿಟ್ ತಗೊಳ್ತಿದ್ದಾರೆ ಮೈಶುಗರ್ ಮರುಚಾಲನೆ ಕ್ರೆಡಿಟ್ ಬಿಜೆಪಿಗೆ ಸೇರುತ್ತೆ ಎಂದರು.

     

    ನನಗೆ ನನ್ನ ಭವಿಷ್ಯದ ಬಗ್ಗ ಚಿಂತೆ ಇಲ್ಲ. ನನ್ನ ಭವಿಷ್ಯಕ್ಕಿಂತ ನನ್ನ ಜಿಲ್ಲೆ, ರಾಜ್ಯ ಹಾಗೂ ದೇಶ ಮುಖ್ಯ. ಬಿಜೆಪಿ ಸೇರಿದ್ದಕ್ಕೆ ಅತ್ಯಂತ ಹೆಮ್ಮೆ, ಸಂತೋಷ ಆಗಿದೆ ಎಂದು ತಮ್ಮ ಮಾತು ಮುಗಿಸಿದರು ಸುಮಲತಾ ಅಂಬರೀಶ್.

  • ನಾಳೆ ಬಿಜೆಪಿ ಸೇರಲಿದ್ದಾರೆ ನಟಿ ಸುಮಲತಾ ಅಂಬರೀಶ್

    ನಾಳೆ ಬಿಜೆಪಿ ಸೇರಲಿದ್ದಾರೆ ನಟಿ ಸುಮಲತಾ ಅಂಬರೀಶ್

    ಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ (Sumalta Ambarish), ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ (BJP) ಸೇರುತ್ತಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

    ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ.

    ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್  2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು  ಅವರು ಬರೆದಿದ್ದಾರೆ.

     

    ನಿನ್ನೆಯಷ್ಟೇ ಮಂಡ್ಯದಲ್ಲಿ ತಮ್ಮ ಚುನಾವಣೆ ನಿಲುವು ಕುರಿತಂತೆ ಪ್ರಕಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿಕೊಂಡು ತಾವು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಅದರಂತೆ ನಾಳೆ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರುತ್ತಿದ್ದಾರೆ.

  • ಅಧಿಕೃತವಾಗಿ ಕಾಂಗ್ರೆಸ್ ಸೇರಿದ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್

    ಅಧಿಕೃತವಾಗಿ ಕಾಂಗ್ರೆಸ್ ಸೇರಿದ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್

    ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivraj Kumar) ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ (Congress) ಅಧಿಕೃತವಾಗಿ ಸೇರ್ಪಡೆಗೊಂಡರು. ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ (D.K. Shivakumar) ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅವರನ್ನು ಸ್ವಾಗತಿಸಿದರು. ಮಧು ಬಂಗಾರಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ‘ಇಂದು ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತ್ತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ

    ಮುಂದುವರೆದು ಮಾತನಾಡಿದ ಶಿವರಾಜ್ ಕುಮಾರ್, ‘ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೇಳಿಕೊಡೋದು ಬೇಡ. ತಾಯಿ ಹೋದ ಬಳಿಕ ಎರಡು ವರ್ಷದಿಂದ ಶಕ್ತಿ ಧಾಮದ ಪ್ರೆಸಿಡೆಂಟ್ ಆಗಿದ್ದಾರೆ ಗೀತೆ. ಮಕ್ಕಳಿಗೆ ಸ್ಕಿಲ್ ಡೆವಲಪ್ಮೆಂಟ್ ಮಾಡುತ್ತಿದ್ದಾರೆ. ಸುತ್ತಮುತ್ತ ಫ್ರೀ ಬೇಕಿಂಗ್ ಕ್ಯಾಂಪ್ ಮಾಡಿ ಅವೇರ್‌ನೆಸ್ ಕೂಡ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ’ ಎಂದು ಹೇಳಿದರು.

    ಗೀತಾ ಶಿವರಾಜ್ ಕುಮಾರ್‌ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ಅವರ ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

  • ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ : ಬಿಜೆಪಿ ವಿರುದ್ಧ ಪ್ರಕಾಶ್ ರೈ ಕಿಡಿ

    ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ : ಬಿಜೆಪಿ ವಿರುದ್ಧ ಪ್ರಕಾಶ್ ರೈ ಕಿಡಿ

    ಕಿಚ್ಚ (Kiccha) ಸುದೀಪ್ (Sudeep) ಬಿಜೆಪಿಗೆ (BJP) ಸೇರಲಿದ್ದಾರೆ ಎನ್ನುವ ಸುದ್ದಿ ಹರಡುತ್ತಿದ್ದಂತೆಯೇ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಸ್ಟಾರ್ ನಟರಾಗಿ ಅಸಂಖ್ಯಾತ ಅಭಿಮಾನಿಗಳ ಹೃದಯದಲ್ಲಿರುವ ಸುದೀಪ್ ರಾಜಕೀಯ ಕ್ಷೇತ್ರಕ್ಕೆ ಬಂದು ಮತ್ತಷ್ಟು ಸೇವೆ ಮಾಡಲಿ ಎಂದು ಹಾರೈಸುತ್ತಿದ್ದಾರೆ. ನಟ ಪ್ರಕಾಶ್ ರಾಜ್ (Prakash Raj) ಈ ನಡೆಗೆ ಬಿಜೆಪಿಯನ್ನು ದೂರಿದ್ದಾರೆ. ಮತ್ತು ಈ ಸುದ್ದಿ ಸುಳ್ಳಾಗಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

    ಸುದೀಪ್ ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಕಾಶ್ ರೈ ‘ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ ಗೆ ಅಸಂಖ್ಯಾತ ಜನರು ಪ್ರತಿಕ್ರಿಯಿಸಿದ್ದಾರೆ.

    ನಟ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅವರು ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸುದೀಪ್ ಅವರ ಆಪ್ತರ ಪ್ರಕಾರ ಅಧಿಕೃತವಾಗಿ ಬಿಜೆಪಿಗೆ ಸೇರದೆ ಸ್ಟಾರ್ ಪ್ರಚಾರಕರಾಗಿ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

    ಈಗಾಗಲೇ ಸುದೀಪ್ ತಾವು ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲ ಪಕ್ಷಗಳಲ್ಲೂ ಅವರ ಆಪ್ತರು ಇರುವುದರಿಂದ ಒಂದು ಪಕ್ಷವನ್ನು ಬೆಂಬಲಿಸುವುದಿಲ್ಲ ಎನ್ನುವ ಮಾತನ್ನು ಪದೇ ಪದೇ ಆಡುತ್ತಾ ಬಂದಿದ್ದಾರೆ. ಆ ಮಾತನ್ನು ಅವರು ಉಳಿಸಿಕೊಳ್ಳುತ್ತಾರೆ ಎನ್ನುವುದು ಆಪ್ತರ ಮಾತು. ಬಿಜೆಪಿ ಪಕ್ಷದಲ್ಲಿ ಸುದೀಪ್ ಅವರ ಹಲವಾರು ಸ್ನೇಹಿತರು ಇದ್ದಾರೆ. ಈ ಕಾರಣಕ್ಕಾಗಿ ಬೆಂಬಲಿಸಬಹುದು ಎನ್ನುವುದು ಆಪ್ತರ ಅನಿಸಿಕೆ.

  • ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

    ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ

    ನ್ನಡದ ಹಿರಿಯ ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತ ಸರಕಾರದ ಕಾರ್ಯಗಳನ್ನು ಈವರೆಗೂ ಬೆಂಬಲಿಸುತ್ತಾ ಬಂದಿದ್ದ ಅನಂತ್ ನಾಗ್, ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಅದು ಈಗ ನಿಜವಾಗಿದೆ.

    ಇಂದು ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅವರು ಪಕ್ಷವನ್ನು ಸೇರುತ್ತಿದ್ದಾರೆ. ಈ ಸಂದರ್ಭದಲ್ಲಿ ನಿರ್ಮಾಪಕ, ಸಚಿವ ಮುನಿರತ್ನ ಸೇರಿದಂತೆ ಹಲವು ಗಣ್ಯರು ಉಪಸ್ಥಿತಿ ಇರಲಿದ್ದಾರೆ.  ಇದನ್ನೂ ಓದಿ: ಸಿಂಬು ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದ ನಟಿ ಹನ್ಸಿಕಾ ಮೋಟ್ವಾನಿ

    ಅನಂತ್ ನಾಗ್ ರಾಜಕಾರಣಕ್ಕೆ ಬರುತ್ತಿರುವುದು ಹೊಸದೇನೂ ಅಲ್ಲ. ಈಗಾಗಲೇ ಅವರು ಜೆ.ಎಚ್. ಪಟೇಲ್ ನೇತೃತ್ವದ ಸರಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದವರು. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಸೋತಿದ್ದರು. ಅಲ್ಲದೇ, ಶಾಸಕರಾಗಿ, ಪರಿಷತ್ ಸದಸ್ಯರಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನರೇಂದ್ರ ಮೋದಿ ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾದ ನಟ ಶಶಿಕುಮಾರ್

    ನರೇಂದ್ರ ಮೋದಿ ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾದ ನಟ ಶಶಿಕುಮಾರ್

    ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು, ಅಲ್ಲಿಂದ ಹೊರ ಬಂದಿದ್ದ ನಟ ಶಶಿಕುಮಾರ್ (Shashikumar), ಇಂದು ಬೆಂಗಳೂರಿನಲ್ಲಿ ಬಿಜೆಪಿ ಪಕ್ಷ ಸೇರಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai), ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಸಮ್ಮುಖದಲ್ಲಿ ಬಿಜೆಪಿ ಸೇರಿಕೊಂಡಿರುವ ಶಶಿಕುಮಾರ್, ತಾವು ನರೇಂದ್ರ ಮೋದಿ (Narendra Modi) ಅವರ ಕಾರ್ಯವೈಖರಿ ಮೆಚ್ಚಿ ಈ ಪಕ್ಷವನ್ನು ಸೇರಿರುವುದಾಗಿ ಹೇಳಿದ್ದಾರೆ.

    ಸಿನಿಮಾ ರಂಗದ ಜೊತೆ ಜೊತೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಶಶಿಕುಮಾರ್, ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲು ಮತ್ತು ಗೆಲುವನ್ನೂ ಕಂಡಿದ್ದಾರೆ. ಇದೀಗ ಮತ್ತೆ ಸಕ್ರೀಯವಾಗಿ ರಾಜಕಾರಣದಲ್ಲೇ ಉಳಿಯುವ ಇಂಗಿತವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಇಂದು ಬಿಜೆಪಿ ಪಕ್ಷ ಸೇರ್ಪಡೆಗೊಂಡ ನಂತರ ತಮ್ಮ ರಾಜಕೀಯ ನಿಲುವುಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ. ಇದನ್ನೂ ಓದಿ:ಡಯಟ್ ಕಾರಣದಿಂದಾಗಿ ಖ್ಯಾತ ನಟ ಕಲ್ಯಾಣ್ ಕುಮಾರ್ ಸೊಸೆ ನಿಧನ?

    ಬಿಜೆಪಿ (BJP) ಸೇರ್ಪಡೆಗೊಂಡ  ನಂತರ ಮಾಧ್ಯಮಗಳ ಜೊತೆ ಮಾತನಾಡಿರುವ ಶಶಿಕುಮಾರ್, ‘ನಾನು ಇಲ್ಲಿ ಟಿಕೆಟ್ ಕೇಳಿಲ್ಲ. ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿ ಬಗ್ಗೆ ಮೆಚ್ಚಿ ಬಂದಿದ್ದೇನೆ. ಸಿಎಂ ಕೂಡ SC, ST ಸಮುದಾಯಕ್ಕೆ ನೀಡಿದ ಕೊಡುಗೆ ನೋಡಿ ಬಂದೆ. ಮೀಸಲಾತಿ ವಿಚಾರವಾಗಿ ಬಹು ವರ್ಷದ ಬೇಡಿಕೆ ಈಡೇರಿಸಿದ್ದಾರೆ ಮುಖ್ಯಮಂತ್ರಿಗಳು ಎಂದಿದ್ದಾರೆ.

    ಅಲ್ಲದೇ ಶಶಿಕುಮಾರ್ ಚಳ್ಳಕೆರೆ ವಿಧಾನಸಭೆ ಟಿಕೆಟ್ ಆಕಾಂಕ್ಷಿ ಎಂದು ಹೇಳಲಾಗುತ್ತಿದ್ದು, ಈ ಕುರಿತೂ ಅವರು ಪ್ರತಿಕ್ರಿಯೆ ನೀಡಿದ್ದು, ‘ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಾನು ಸನ್ಯಾಸಿಯಲ್ಲ, ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ಟಿಕೆಟ್ ಕೊಟ್ರೆ ಸ್ಪರ್ಧಿಸುವ ಉತ್ಸಾಹ ಇದೆ’ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ. ತಾವು ಚಳ್ಳಕೆರೆ ಟಿಕೆಟ್ ಆಕಾಂಕ್ಷಿ ಎನ್ನುವುದನ್ನೂ ಪರೋಕ್ಷವಾಗಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನನ್ನನ್ನು ಸೋಲಿಸಿದ್ದು ಕಾಂಗ್ರೆಸ್: ಬಿಜೆಪಿಗೆ ಮಾಜಿ ಸಚಿವ ಚಿಂಚನಸೂರು ಸೇರ್ಪಡೆ

    ನನ್ನನ್ನು ಸೋಲಿಸಿದ್ದು ಕಾಂಗ್ರೆಸ್: ಬಿಜೆಪಿಗೆ ಮಾಜಿ ಸಚಿವ ಚಿಂಚನಸೂರು ಸೇರ್ಪಡೆ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ವಿರೋಧ ಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪನವರ ಸಮ್ಮುಖದಲ್ಲಿ ಕಾಂಗ್ರೆಸ್ಸಿನ ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

    ಬುಧವಾರ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಬುರಾವ್ ಚಿಂಚನಸೂರುರವರು ಬಿಜೆಪಿಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಅವರು, ಕಳೆದ ಬಾರಿ ನಡೆದ ಚುನಾವಣೆಯಲ್ಲಿ ನನ್ನ ಸೋಲಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾರಣವಲ್ಲ. ನನ್ನ ಸೋಲಿಗೆ ಕಾಂಗ್ರೆಸ್‍ನವರೇ ಮೂಲ ಕಾರಣ. ನನ್ನ ಏಳಿಗೆಯನ್ನು ಸಹಿಸದೇ, ಕುತಂತ್ರದಿಂದ ನನ್ನನ್ನು ಸೋಲಿಸಿದ್ದಾರೆ. ಕಾಂಗ್ರೆಸ್ ಕೋಲಿ ಸಮಾಜವನ್ನು ನಿರ್ಲಕ್ಷ್ಯ ಮಾಡಿದೆ. ಆದರೆ ಬಿಜೆಪಿಯು ಕೋಲಿ ಸಮುದಾಯದ ರಾಮನಾಥ್ ಕೋವಿಂದ್ ರವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

    ಯಡಿಯೂರಪ್ಪನವರ ಮೇಲೆ ನನಗೆ ಬಹಳ ವರ್ಷಗಳಿಂದಲೂ ಅಪಾರ ಗೌರವವಿದೆ. ಹೈದರಾಬಾದ್ ಕರ್ನಾಟಕದಲ್ಲಿ 46% ರಷ್ಟು ಕೋಲಿ ಸಮಾಜವೇ ಇದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಹಾಗೂ ಮಾಲೀಕಯ್ಯ ಗುತ್ತೇದಾರ್ ಜೊತೆಗೂಡಿ ಕೆಲಸ ಮಾಡುತ್ತೇವೆ. ಮುಂದಿನ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ನೀವೇ ನೋಡುತ್ತಿರಿ, ನಾನು ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

    ಈ ವೇಳೆ ಮಾತನಾಡಿದ ಯಡಿಯೂರಪ್ಪನವರು, ಬಾಬುರಾವ್ ಚಿಂಚನಸೂರು ಸೇರ್ಪಡೆಯಿಂದಾಗಿ ಬಿಜೆಪಿಗೆ ಆನೆ ಬಲ ಬಂದಿದ್ದು, ಕಲಬುರಗಿ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ನಮಗೆ ಬಲ ಸಿಕ್ಕಿದೆ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಬದಲಾವಣೆಗೆ ನಾಂದಿಯಾಗುತ್ತದೆ. ನಾವು ಬಹಳ ವರ್ಷಗಳಿಂದ ಬಿಜೆಪಿಗೆ ಸೇರುವಂತೆ ಪ್ರಯತ್ನಿಸುತ್ತಿದ್ದೇವು. ಆದರೆ  ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳನ್ನು ಮೆಚ್ಚಿ ಅವರೇ ಪಕ್ಷಕ್ಕೆ ಬಂದಿದ್ದಾರೆ. ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಿ, ರಾಜ್ಯ ಮಟ್ಟದಲ್ಲಿ ಅವರಿಗೆ ದೊಡ್ಡ ಜವಾಬ್ದಾರಿ ಕೊಡುತ್ತೇವೆ ಎಂದು ತಿಳಿಸಿದರು.

    ಸಮ್ಮಿಶ್ರ ಸರ್ಕಾರ ವಿರುದ್ಧ ಹರಿಹಾಯ್ದ ಅವರು, ಸರ್ಕಾರ ಇದೇ ಎಂದೇ ಅನ್ನಿಸುತ್ತಿಲ್ಲ. ವಿಧಾನಸೌಧದಲ್ಲಿ ಯಾವ ಸಚಿವರು ಸಹ ಕೈಗೇ ಸಿಗುತ್ತಿಲ್ಲ. ಜಿಲ್ಲೆಗಳಿಗೂ ಹೋಗಿ ಜನರ ಕಷ್ಟ ಕೂಡ ಕೇಳುತ್ತಿಲ್ಲ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರ ಗುದ್ದಾಟದಿಂದ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ. ನಾವು ಯಾರೂ ಸಹ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಬಾರದು. ಸಮ್ಮಿಶ್ರ ಸರ್ಕಾರದ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು. ಅವರೇ ಬಡಿದಾಕೊಂಡು ಕುಸಿದರೆ, ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳಿದರು.

    ಸೇರ್ಪಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸಾದ್ವಿ ನಿರಂಜನ್ ಜ್ಯೋತಿ, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್, ಚಿಂಚನಸೂರ್ ಪತ್ನಿ ಅಮರೇಶ್ವರಿಯವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮುನ್ನ ನಂದಮೂರಿ ಹರಿಕೃಷ್ಣ ನಿಧನಕ್ಕೆ ಮೌನ ಆಚರಣೆ ಮಾಡುವ ಮೂಲಕ ಸಂತಾಪ ಸೂಚಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಮಲ ಹಿಡಿದ ಯತ್ನಾಳ್, ಖೂಬಾ: ಶೀಘ್ರವೇ ನಾಲ್ವರು ಕೈ ಶಾಸಕರು ಬಿಜೆಪಿಗೆ

    ಕಮಲ ಹಿಡಿದ ಯತ್ನಾಳ್, ಖೂಬಾ: ಶೀಘ್ರವೇ ನಾಲ್ವರು ಕೈ ಶಾಸಕರು ಬಿಜೆಪಿಗೆ

    ಬೆಂಗಳೂರು: ಬಿಜೆಪಿ ಕಾರ್ಯಕರ್ತರ ತೀವ್ರ ವಿರೋಧದ ನಡುವೆಯೂ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಲ್ಲಿಕಾರ್ಜುನ ಖೂಬಾ ಇಂದು ಬಿಎಸ್‍ವೈ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

    ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕಮಲ ಬಾವುಟ ನೀಡುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ಬಸವಕಲ್ಯಾಣ ಜೆಡಿಎಸ್ ಶಾಸಕರಾಗಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ್ ಅನ್ವರಿ, ಮಾಜಿ ಸಚಿವ ನಾಗಪ್ಪ ಸಾಲೋಣಿ ಕೂಡ ಪಕ್ಷಕ್ಕೆ ಸೇರ್ಪಡೆಯಾದರು.

    ಈ ವೇಳೆ ಮಾತನಾಡಿದ ಬಿಎಸ್‍ವೈ, ನಾಲ್ವರನ್ನು ಬಿಜೆಪಿಗೆ ಸ್ವಾಗತ ಮಾಡುತ್ತೇನೆ. ಇಂದು ಪಕ್ಷಕ್ಕೆ ಒಳ್ಳೆಯ ದಿನ, ಮತ್ತಷ್ಟು ಬಲ ಪಕ್ಷಕ್ಕೆ ಸೇರ್ಪಡೆಯಾಗಿದೆ. ಇದೇ ಏಪ್ರಿಲ್ 8ಕ್ಕೆ ವಿಜಯಪುರ, ಬಸವಕಲ್ಯಾಣದಲ್ಲಿ ಬೃಹತ್ ಸಮಾವೇಶಗಳನ್ನು ನಡೆಸುತ್ತೇವೆ. ಈ ವೇಳೆ ಅನೇಕ ಮಾಲೀಕಯ್ಯ ಗುತ್ತೇದಾರ್ ಕೂಡ ಬಿಜೆಪಿ ಸೇರ್ಪಡೆಯಾಗುತ್ತಾರೆ. ಮಾಲೀಕಯ್ಯ ಗುತ್ತೇದಾರ್ ಅವರು ತಮ್ಮೊಂದಿಗೆ ಇನ್ನು ನಾಲ್ಕು ಜನ ಕಾಂಗ್ರೆಸ್ ಶಾಸಕರನ್ನ ಕರೆದುಕೊಂಡು ಬರುತ್ತಾರೆ. ಕಾಂಗ್ರೆಸ್, ಜೆಡಿಎಸ್ ನ ಮತ್ತಷ್ಟು ಶಾಸಕರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ವಿವರಿಸಿದರು.

    ಪಬ್ಲಿಕ್ ಟಿವಿ ಯೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖೂಬಾ, ನನ್ನ ಪಕ್ಷ ಸೇರ್ಪಡೆಗೆ ವಿರೋಧ ಮಾಡುವವರು ಕಾಂಗ್ರೆಸ್ ಏಜೆಂಟ್ ಗಳು. ನಾನು ಎಲ್ಲರ ಸಮ್ಮತಿ ಪಡೆದೆ ಪಕ್ಷ ಸೇರ್ಪಡೆಯಾಗಿದ್ದೇನೆ. ಇಬ್ಬರು ಮೂವರು ಸುಮ್ಮನೆ ವಿರೋಧ ಮಾಡುತ್ತಿದ್ದಾರೆ ಅಷ್ಟೇ. ಯಡಿಯೂರಪ್ಪ ಅವರಿಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ.

    ಕಾರ್ಯಕರ್ತರ ಪ್ರತಿಭಟನೆ: ಮತ್ತೊಂದೆಡೆ ಖೂಬಾ ಸೇರ್ಪಡೆ ವಿರೋಧಿಸಿ ಬೀದರ್‍ನ ಬಸವಕಲ್ಯಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ವಿಜಯಪುರದಲ್ಲಿ ಯತ್ನಾಳ್ ಬಿಜೆಪಿ ಸೇರ್ಪಡೆ ವಿರುದ್ಧ ಕಾರ್ಯಕರ್ತ ಬಾಬು ಜಗದಾಳೆ ಎನ್ನುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆಯಿತು.

  • ಮಾಜಿ ಶಾಸಕ ನೆಲ ನರೇಂದ್ರ ಬಾಬು, ಕಿರುತೆರೆ ನಟಿಯರು ಬಿಜೆಪಿಗೆ ಸೇರ್ಪಡೆ

    ಮಾಜಿ ಶಾಸಕ ನೆಲ ನರೇಂದ್ರ ಬಾಬು, ಕಿರುತೆರೆ ನಟಿಯರು ಬಿಜೆಪಿಗೆ ಸೇರ್ಪಡೆ

    ಬೆಂಗಳೂರು: ಮಾಜಿ ಶಾಸಕ ನೆಲ ನರೇಂದ್ರ ಬಾಬು ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.

    ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನರೇಂದ್ರ ಬಾಬು ಅವರಿಗೆ ಬಾವುಟ ನೀಡಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಅವರ ಜೊತೆಯಲ್ಲಿ ಕಿರುತೆರೆ ನಟಿಯರಾದ ಜ್ಯೋತಿ, ಆಶಾಲತಾ, ಸಂಗೀತಾ ಅವರೂ ಬಿಜೆಪಿ ಸೇರಿಕೊಂಡರು.

    ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನರೇಂದ್ರ ಬಾಬು ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್ ಪಕ್ಷ ನನ್ನನ್ನು ನಿರ್ಲಕ್ಷಿಸಿದೆ. ಕಾಂಗ್ರೆಸ್ ನಿರ್ಲಕ್ಷ್ಯ ಧೋರಣೆಯಿಂದ ನನಗೆ ನೋವಾಗಿದೆ. ಕುತಂತ್ರ ಬುದ್ದಿ ಹಾಗೂ ಪಕ್ಷ ದ್ರೋಹಿಗಳಿಗೆ ಬೆಲೆಯಿದೆ ಹೊರತು ನನ್ನಂತಹ ನಿಷ್ಠಾವಂತ, ಪ್ರಾಮಾಣಿಕರಿಗೆ ಬೆಲೆಯಿಲ್ಲ. ಹೀಗಾಗಿ ಮುಂಬರುವ ದಿನಗಳಲ್ಲಿ ಅಧಿಕೃತವಾಗಿ ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆಂದು ತಿಳಿಸಿದ್ದರು.

    ಪಕ್ಷದಲ್ಲಿ 35 ವರ್ಷಗಳಿಂದ ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದೇನೆ. ಮೂರು ಬಾರಿ ಕಾರ್ಪೊರೇಟರ್, ಎರಡು ಬಾರಿ ಶಾಸಕನಾಗಿ ಕೆಲಸ ಮಾಡಿರುವ ನನ್ನನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ ಎಂದು ಹೇಳಿದರು.

    ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮಾಜಿ ಡಿಸಿಎಂ ಆರ್ ಅಶೋಕ್, ಬಿಜೆಪಿ ಉಪಾಧ್ಯಕ್ಷ ಕೆಪಿ ನಂಜುಂಡಿ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಉಪಸ್ಥಿತರಿದ್ದರು.

    ಈ ವೇಳೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿಯ ಗಾಳಿ ಕರ್ನಾಟಕದ ಉದ್ದಗಲಕ್ಕೆ ಬೀಸುತ್ತಿದೆ. ರಾಮಕೃಷ್ಣ ಹೆಗ್ಡೆಯವರ ಕಾಲದಲ್ಲಿ ಪಕ್ಷದಲ್ಲಿದ್ದ ನರೇಂದ್ರ ಬಾಬು ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರು. ಆದರೆ ಮರಳಿ ಬಿಜೆಪಿಗೆ ಪಕ್ಷಕ್ಕೆ ಆಗಮಿಸಿರುವುದಕ್ಕೆ ಸ್ವಾಗತ ಕೋರುತ್ತೇನೆ. ಅವರಿಗೆ ಸೂಕ್ತ ಸ್ಥಾನಮಾನವನ್ನು ನೀಡಿ ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

    ಪ್ರಧಾನಿ ಕಾರ್ಯಕ್ರಮದ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಪರ್ಯಾಯವಾಗಿ, ಸಿಎಂ ಸಿದ್ದರಾಮಯ್ಯ ಕಾಮ್ ಕಿ ಬಾತ್ ಮಾಡ್ತಿರುವುದು ಮೂರ್ಖತನದ ಪರಮಾವಧಿ ಎಂದು ವಗ್ವಾದ ನಡೆಸಿದರು.

    ಸಚಿವ ಹೆಚ್ ಆಂಜನೇಯ ಆಯುಧ ಪೂಜೆ ಬಗ್ಗೆ ಕೆಟ್ಟದಾಗಿ ಮಾತನಾಡುವ ಮೂಲಕ ಸಂಪ್ರದಾಯ, ಧರ್ಮಾಚರಣೆಗೆ ಅಪಮಾನ ಮಾಡಿದ್ದಾರೆ. ದುರಂಹಕಾರ ದರ್ಪದಿಂದ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆದು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ತರುತ್ತೇವೆಂದು ಯಡಿಯೂರಪ್ಪ ತಿಳಿಸಿದರು.

    ನರೇಂದ್ರ ಬಾಬು ಮಾತನಾಡಿ, ಕೇಂದ್ರ ಸರ್ಕಾರ ಗಾಂಧಿ ತತ್ವಗಳನ್ನು ಜಾರಿಗೊಳಿಸುತ್ತಿದೆ. ನನ್ನನ್ನು ಕಾಯ ವಾಚ ಮನಸ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆಂದು ತಿಳಿಸಿದರು.

    ಬೈಕ್ ರ್ಯಾಲಿ: ನವೆಂಬರ್ 2 ರಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆಯನ್ನು ಬೆಂಗಳೂರು ಮತ್ತು ಹುಬ್ಬಳ್ಳಿಗೆ ಬೃಹತ್ ಬೈಕ್ ರ್ಯಾಲಿ ನಡೆಸಲು ತೀರ್ಮಾನಿಸಲಾಯಿತು. ನವಕರ್ನಾಟಕ ಪರಿವರ್ತನಾ ಯಾತ್ರೆ ಬಗ್ಗೆ ಪ್ರಚಾರ ಕಾರ್ಯ ಕೈಗೊಳ್ಳುವ ರೀತಿ ಬಗ್ಗೆಯೂ ಚರ್ಚಿಸಲಾಯಿತು ಎಂದು ಯಡಿಯೂರಪ್ಪ ತಿಳಿಸಿದರು.

    ನವ ಕರ್ನಾಟಕ ಪರಿವರ್ತನಾ ಯಾತ್ರೆ: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ ವಿಚಾರವಾಗಿ, ಬಿಜೆಪಿ ಕಚೇರಿಯಲ್ಲಿ ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕ ಪ್ರಚಾರ ತಂಡಗಳ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಉಸ್ತುವಾರಿ ಮುರುಳೀಧರ ರಾವ್, ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಅರವಿಂದ ಲಿಂಬಾವಳಿ,  ಬಿ.ಸೋಮಶೇಖರ್, ಕುಮಾರ್ ಬಂಗಾರಪ್ಪ, ಪ್ರತಾಪ್ ಸಿಂಹ ಭಾಗಿಯಾಗಿದ್ದರು.