Tag: ಸೈಂಧವ್

  • ‘ಸೈಂಧವ್’ ಬಳಗ ಮತ್ತೊಬ್ಬ ಸ್ಟಾರ್ : ತಮಿಳು ನಟ ಆರ್ಯ ಫಸ್ಟ್ ಲುಕ್ ರಿಲೀಸ್

    ‘ಸೈಂಧವ್’ ಬಳಗ ಮತ್ತೊಬ್ಬ ಸ್ಟಾರ್ : ತಮಿಳು ನಟ ಆರ್ಯ ಫಸ್ಟ್ ಲುಕ್ ರಿಲೀಸ್

    ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ (Victory Venkatesh) ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ (Saindhav) ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಇತ್ತೀಚೆಗೆಷ್ಟೇ ಮುಕ್ತಾಯಗೊಂಡಿತ್ತು. 18 ದಿನದ ಕಾಲ ನಡೆದ ಕ್ಲೈಮ್ಯಾಕ್ಸ್ ಶೂಟಿಂಗ್ ನಲ್ಲಿ 8 ಪ್ರಮುಖ ಸ್ಟಾರ್ ಭಾಗಿಯಾಗಿದ್ದು, ದಕ್ಷಿಣ ಚಿತ್ರರಂಗದ ಖ್ಯಾತ ಸ್ಟಂಟ್ ಮಾಸ್ಟರ್ಸ್ ರಾಮ ಲಕ್ಷ್ಮಣ ಸಾಹಸ ನಿರ್ದೇಶನ ಮಾಡಿದ್ದಾರೆ.

    ಸ್ವಾತಂತ್ರ್ಯ ದಿನದ ಅಂಗವಾಗಿ 8 ಸ್ಟಾರ್ಸ್ ಒಳಗೊಂಡ ಸಣ್ಣ ವಿಡಿಯೋ ಝಲಕ್ ನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಇದೀಗ ಸೈಂಧವ್ ಚಿತ್ರತಂಡದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಮತ್ತೊಬ್ಬ ಸ್ಟಾರ್ ನಟ ವಿಕ್ಟರಿ ವೆಂಕಟೇಶ್ ಸಿನಿಮಾ ಬಳಗ ಸೇರಿಕೊಂಡಿದ್ದಾರೆ. ತಮಿಳುನಟ ಆರ್ಯ (Arya) ಸೈಂಧವ್ ಭಾಗವಾಗಿದ್ದಾರೆ. ಅವ್ರ ಫಸ್ಟ್ ಲುಕ್ (First Look) ಅನಾವರಣಗೊಂಡಿದ್ದು, ಉದ್ದವಾದ ಕೂದಲು ಬಿಟ್ಟು ಸ್ಟೈಲೀಶ್ ಲುಕ್ ನಲ್ಲಿ ಮಿಂಚಿರುವ ಆರ್ಯ ಕೈಯಲ್ಲಿ ಗನ್ ಹಿಡಿದು ಹೆಜ್ಜೆ ಹಾಕ್ತಿರುವ ಪೋಸ್ಟರ್ ನೋಡುಗರನ್ನು ಇಂಪ್ರೆಸ್ ಮಾಡುತ್ತಿದೆ. ಇದನ್ನೂ ಓದಿ:ಬಿಗ್ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್- ದೊಡ್ಮನೆ ಆಟಕ್ಕೆ ಮುಹೂರ್ತ ಫಿಕ್ಸ್

    ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಡಾ ರೇಣು ಪಾತ್ರದಲ್ಲಿ ರುಹಾನಿ ಶರ್ಮಾ ಮತ್ತು ಜಾಸ್ಮಿನ್ ಪಾತ್ರದಲ್ಲಿ ಆಂಡ್ರಿಯಾ ಜೆರೆಮಿಯಾ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ.

    ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಪಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಕ್ರಿಸ್ಮಸ್ ವಿಶ್ವಾದ್ಯಂತ ಚಿತ್ರ ಬಿಡುಗಡೆಯಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೈಂಧವ್ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ನವಾಜುದ್ದೀನ್ ಸಿದ್ದಿಕಿ

    ಸೈಂಧವ್ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ನವಾಜುದ್ದೀನ್ ಸಿದ್ದಿಕಿ

    ಬಾಲಿವುಡ್ ಕಂಡ ಅತ್ಯದ್ಭುತ ನಟರಲ್ಲಿ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಕೂಡ ಒಬ್ಬರು. ಯಾವುದೇ ಪಾತ್ರ ಕೊಟ್ಟರು‌ ಲೀಲಾಜಾಲವಾಗಿ ಅಭಿನಯಿಸುವ, ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿರುವ ಸಿದ್ದಿಕಿ ಸೈಂಧವ್ (Saindhav) ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟ್ರೀಯತ್ತ ಹೆಜ್ಜೆ ಇಟ್ಟಿದ್ದಾರೆ.

    ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ (Victory Venkatesh) ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’. ಶೈಲೇಶ್ (Shailesh) ಕೋಲನು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ ವಿಲನ್ ಆಗಿ ಬಣ್ಣ ಹಚ್ಚಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಕ್ಯಾರೆಕ್ಟರ್ ಪೋಸ್ಟರ್ ರಿಲೀಸ್ ಮಾಡಿದೆ. ವಿಕಾಸ್ ಮಲಿಕ್ ಎಂಬ ಪಾತ್ರದಲ್ಲಿ ನವಾಜುದ್ದೀನ್ ಸಿದ್ದಿಕಿ,  ದುಬಾರಿ ಕಾರಿನ ಬಾನೆಟ್ ಮೇಲೆ ಕುಳಿತು ಬೀಡಿ ಸೇದುತ್ತಾ ಸಖತ್ ಕ್ಲಾಸ್ ಆಗಿ ಕಾಣಿಸಿಕೊಂಡಿದ್ದಾರೆ.

    ಶ್ರದ್ಧಾ ಶ್ರೀನಾಥ್ ಮನೋಜ್ಞ ಎಂಬ ಪಾತ್ರದಲ್ಲಿ, ಡಾ ರೇಣು ಪಾತ್ರದಲ್ಲಿ ರುಹಾನಿ ಶರ್ಮಾ ಮತ್ತು ಜಾಸ್ಮಿನ್ ಪಾತ್ರದಲ್ಲಿ ಆಂಡ್ರಿಯಾ ಜೆರೆಮಿಯಾ ಕಾಣಿಸಿಕೊಂಡಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲಾ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ. ಇದನ್ನೂ ಓದಿ:ಕಾಲೆಳೆದ ನಟಿಗೆ ಸ್ನೇಹದ ಹಸ್ತಚಾಚಿದ ರಶ್ಮಿಕಾ ಮಂದಣ್ಣ

    ನಿಹಾರಿಕಾ ಎಂಟರ್ಟೈನ್ಮೆಂಟ್ ಅಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್‌ ಚಿತ್ರಕ್ಕೆ ಕಿಶೋರ್ ತಲ್ಲೂರ್ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಸೈಂಧವ ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು,  ಡಿಸೆಂಬರ್ 22 ರಂದು ಕ್ರಿಸ್ಮಸ್ ವಿಶ್ವಾದ್ಯಂತ ರಿಲೀಸ್ ಆಗಲಿದೆ.‌

  • ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ’ಯೂಟರ್ನ್’ ಬೆಡಗಿ ಶ್ರದ್ಧಾ ಶ್ರೀನಾಥ್

    ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ’ಯೂಟರ್ನ್’ ಬೆಡಗಿ ಶ್ರದ್ಧಾ ಶ್ರೀನಾಥ್

    ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ಧಾ ಶ್ರೀನಾಥ್ (Shraddha Srinath) ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ಧಾ ಕೈ ತುಂಬಾ ಅವಕಾಶಗಳಿವೆ. ಇದೀಗ ಅವರು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ವೈಜಾಗ್ ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಗೆ ಕನ್ನಡತಿ ಶ್ರದ್ಧಾ ಶ್ರೀನಾಥ್ ಎಂಟ್ರಿ ಕೊಟ್ಟಿದ್ದಾರೆ. ವಿಕ್ಟರಿಗೆ ವೆಂಕಟೇಶ್ ಗೆ ಜೋಡಿಯಾಗಿ ನಟಿಸ್ತಿರುವ ಮೂಗುತಿ ಸುಂದರಿಯ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ.

    ಸೈಂಧವ್ ಸಿನಿಮಾದಲ್ಲಿ ಶ್ರದ್ಧಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಅವರ ಫಸ್ಟ್ ಲುಕ್ ನೋಡುಗರ ಗಮನಸೆಳೆಯುತ್ತಿದೆ. ಸೀರೆಯುಟ್ಟು ಹೋಮ್ಲಿ ಲುಕ್ ಕಾಣಿಸಿಕೊಂಡಿರುವ ಶ್ರದ್ದಾ, ಕೈಯಲ್ಲಿ ಟಿಫನ್ ಬಾಕ್ಸ್ ಹಿಡಿದು ಗಂಭೀರ ಆಲೋಚನೆಯಲ್ಲಿ ತೊಡಗಿದ್ದಾರೆ. ಜೆರ್ಸಿ ಸಿನಿಮಾದಲ್ಲಿ ಅದ್ಭುತ ಅಭಿಯನದ ಪ್ರದರ್ಶಿಸಿದ್ದ ಶ್ರದ್ದಾ ಶ್ರೀನಾಥ್, ಸೈಂಧವ್ ಸಿನಿಮಾದಲ್ಲಿ ಮತ್ತೊಮ್ಮೆ ಎಲ್ಲರ ಗಮನಸೆಳೆಯಲಿದ್ದಾರೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್ ಎದುರು ಅಬ್ಬರಿಸಲಿದ್ದಾರೆ ಸೈಫ್ ಅಲಿ ಖಾನ್

    ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ. ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಪಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ಇತರ ಪಾತ್ರವರ್ಗ ರಿವೀಲ್ ಮಾಡಲಿರುವ ಚಿತ್ರತಂಡ, ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಕ್ರಿಸ್ಮಸ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.